ಹೈದರಾಬಾದ್: ಹವಾಲಾ ದಂಧೆಯನ್ನು (Hawala Racket) ಭೇದಿಸಿದ ಹೈದರಾಬಾದ್ (Hyderabad) ಪೊಲೀಸರು, 1.27 ಕೋಟಿ ರೂಪಾಯಿ ಮೌಲ್ಯದ ಹಣವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.
ನಾರಾಯಣಗುಡ ಪೊಲೀಸ್ ಠಾಣಾ (Narayanguda police station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಮನ್ನೆ ಶ್ರೀನಿವಾಸ್ (53), ವಿಶ್ವನಾಥ್ ಚೆಟ್ಟಿ (45) ಮತ್ತು ಕೆ. ಫಣಿಕುಮಾರ್ ರಾಜು (42) ಎಂದು ಗುರುತಿಸಲಾಗಿದ್ದು, ಮೂವರೂ ಹೈದರಾಬಾದ್‍ನವರಾಗಿದ್ದಾರೆ.
ಹವಾಲಾ ದಂಧೆ ಬಗ್ಗೆ ಗೌಪ್ಯ ಮಾಹಿತಿ ದೊರೆತ ಕಮಿಷನರ್ ಕಾರ್ಯಪಡೆ, ಕೇಂದ್ರ ವಲಯ ತಂಡದ ಸಬ್ ಇನ್ಸ್‍ಪೆಕ್ಟರ್ ಸಾಯಿ ಕಿರಣ್ ಮತ್ತು ಅವರ ತಂಡವು ಹಿಮಾಯತ್ ನಗರದ ಲಿಬರ್ಟಿ ಎಕ್ಸ್ ರಸ್ತೆಯ ರೇಮಂಡ್ ಶೋರೂಂ ಎದುರು ಬಿಳಿ ಬಣ್ಣದ ಹೋಂಡಾ ಆಕ್ಟಿವಾದಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಹಾಕಿದ್ದಾರೆ. ಬಳಿಕ ವಿಚಾರಣೆ ನಡೆಸಿದಾಗ ಆರೋಪಿ ಕೆ. ಫಣಿಕುಮಾರ್ ರಾಜು ಸತ್ಯ ಬಾಯ್ಬಿಟ್ಟಿದ್ದಾನೆ. ಇದೇ ವೇಳೆ ವಾಹನವನ್ನು ಪರಿಶೀಲನೆ ನಡೆಸಿದ ವೇಳೆ ಲೆಕ್ಕಕ್ಕೆ ಸಿಗದ 1.27 ಕೋಟಿ ರೂ. ಪತ್ತೆಯಾಗಿದೆ. ಇದನ್ನೂ ಓದಿ: ಡಯಟ್ ಕಾರಣದಿಂದಾಗಿ ಖ್ಯಾತ ನಟ ಕಲ್ಯಾಣ್ ಕುಮಾರ್ ಸೊಸೆ ನಿಧನ?
ಈ ಬಗ್ಗೆ ತನಿಖೆಯನ್ನು ತೀವ್ರಗೊಳಿಸಿದ ಪೊಲೀಸರಿಗೆ, ಬಂಧಿತ ಆರೋಪಿ ಮನ್ನೆ ಶ್ರೀನಿವಾಸ್ ಬಳಿ ಕಲೆಕ್ಷನ್ ಏಜೆಂಟ್ ಆಗಿ ಕೆಲಸ ಮಾಡಿದ್ದು, ಕೆ. ಫಣಿಕುಮಾರ್ ಅವರಿಂದ 70 ಲಕ್ಷ ರೂ. ಹಾಗೂ ಉಳಿದ 57 ಲಕ್ಷ ರೂ.ಗಳನ್ನು ಸಿ. ವಿಶ್ವನಾಥ್ ಚೆಟ್ಟಿ ಎಂಬ ಮತ್ತೊಬ್ಬ ವ್ಯಕ್ತಿಯಿಂದ ವಸೂಲಿ ಮಾಡಿರುವುದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: ಧರ್ಮಸ್ಥಳದ ಧರ್ಮಾಧಿಕಾರಿಗಳ ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ ದಂಪತಿ
ಈ ಆಧಾರಗಳ ಮೇಲೆ ಅಧಿಕಾರಿಗಳು ಮನ್ನೆ ಶ್ರೀನಿವಾಸ್ ಮತ್ತು ವಿಶ್ವನಾಥ್ ಚೆಟ್ಟಿಯನ್ನು ಸಹ ಬಂಧಿಸಿದ್ದು, ಈ ಇಬ್ಬರು ಹಣದ ಲೆಕ್ಕವನ್ನು ನೀಡವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅವರನ್ನು ಮತ್ತು ನಗದನ್ನು ಮುಂದಿನ ಕ್ರಮಕ್ಕಾಗಿ ನಾರಾಯಣಗುಡ ಪೊಲೀಸ್ ಠಾಣೆಯ ಠಾಣಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
ಹೈದರಾಬಾದ್: ತೆಲಂಗಾಣದ (Telangana) ರಾಜಧಾನಿ ಹೈದ್ರಬಾದ್ (Hyderabad) ರಸ್ತೆಗಳಲ್ಲಿ ಶೀಘ್ರದಲ್ಲಿಯೇ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ (Electric Double Decker) ಬಸ್‍ಗಳು ಸಂಚರಿಸಲಿದೆ.
ಹೈದರಾಬಾದ್‍ಗೆ ಡಬಲ್ ಡೆಕ್ಕರ್ ಬಸ್‍ಗಳನ್ನು ತರಬೇಕೆಂದು ಬಹು ದಿನಗಳಿಂದ ಬೇಡಿಕೆ ಇತ್ತು. ಈ ಬಗ್ಗೆ ನಗರಾಭಿವೃದ್ಧಿ ಸಚಿವ (Urban Development Minister) ಕೆ.ಟಿ. ರಾಮರಾವ್ (KTR) (ಕೆಟಿಆರ್)ಗೆ ಡಬಲ್ ಡೆಕ್ಕರ್ ಬಸ್‍ಗಳನ್ನು ಮರಳಿ ತರುವಂತೆ ನೆಟ್ಟಿಗರು ಮನವಿ ಮಾಡುತ್ತಿದ್ದಾರೆ. ಕೆಟಿಆರ್ ಅವರು ಕೂಡ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್‍ಗಳನ್ನು ವಾಪಸ್ ತರುವುದಾಗಿ ಹೇಳಿದ್ದು, ಶೀಘ್ರದಲ್ಲೇ ಭರವಸೆ ಈಡೇರಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಚಿಕ್ಕಮಗಳೂರು, ಉಡುಪಿಯಲ್ಲಿ ಡೇಂಜರ್ ಸೇತುವೆ – ನಿರ್ವಹಣೆ ಇಲ್ಲದೇ ಬೀಳುವ ಸ್ಥಿತಿ
ಇ-ಡಬಲ್ ಡೆಕ್ಕರ್ ಬಸ್‍ಗಳನ್ನು ಯಾವ ಮಾರ್ಗದಲ್ಲಿ ಓಡಿಸಬೇಕು ಎಂಬುದರ ಕುರಿತು ಆರ್‌ಟಿಸಿ ಅಧಿಕಾರಿಗಳು ಈಗಾಗಲೇ ಅಧ್ಯಯನ ನಡೆಸಿದ್ದಾರೆ. ಮೇಲ್ಸೇತುವೆಗಳಿಲ್ಲದ ಮಾರ್ಗಗಳಲ್ಲಿ ಬಸ್‍ಗಳು ಓಡುವ ಸಾಧ್ಯತೆಯಿದೆ. ಸದ್ಯಕ್ಕೆ ಮೂರು ಮಾರ್ಗಗಳಲ್ಲಿ ಓಡಾಡಲು ನಿರ್ಧಾರಗೊಳಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
ಹೈದರಾಬಾದ್: ಭಾರತ್ ಜೋಡೋ ಯಾತ್ರೆ (Bharat Jodo Yatra) ವೇಳೆ ತಳ್ಳಾಟ ನಡೆದಿದ್ದರಿಂದ ಕಾಂಗ್ರೆಸ್ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಇಂಧನ ಸಚಿವ ನಿತಿನ್ ರಾವತ್ (Nitin Raut) ಅವರ ಕಣ್ಣಿಗೆ ಗಂಭೀರವಾಗಿ ಗಾಯವಾಗಿದೆ. ಕಾಂಗ್ರೆಸ್ (Congress) ನಾಯಕನನ್ನು ಚಿಕಿತ್ಸೆಗಾಗಿ ಹೈದರಾಬಾದ್‌ನ (Hyderabad) ವಾಸವಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದಲ್ಲಿ ರಾಹುಲ್ ಗಾಂಧಿ (Rahul Gandhi) ನೇತೃತ್ವದ ರಾಷ್ಟ್ರವ್ಯಾಪಿ ಪಾದಯಾತ್ರೆ ನಡೆಸುತ್ತಿದ್ದ ವೇಳೆ ಪೊಲೀಸರು ತಮ್ಮನ್ನು ತಳ್ಳಿರುವುದಾಗಿ ನಿತಿನ್ ರಾವತ್ ಆರೋಪಿಸಿದ್ದಾರೆ. ಘಟನೆಯಲ್ಲಿ ಅವರ ಬಲಗಣ್ಣು ಮಾತ್ರವಲ್ಲದೇ ಕೈ, ಕಾಲುಗಳಿಗೂ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಹೈದರಾಬಾದ್ ತಲುಪಿ, ಸತತ 2ನೇ ದಿನಯ ಯಾತ್ರೆ ಇಂದು ಮುಂದುವರಿದಿದೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (TPCC) ಮುಖ್ಯಸ್ಥ ಎ. ರೇವಂತ್ ರೆಡ್ಡಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮಲ್ಲು ಭಟ್ಟಿ ವಿಕ್ರಮಾರ್ಕ, ಸಂಸದ ಉತ್ತಮ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಇದನ್ನೂ ಓದಿ:
Live Tv
[brid partner=56869869 player=32851 video=960834 autoplay=true]
ಹೈದರಾಬಾದ್: ಭಾರತ್ ಜೋಡೋ ಯಾತ್ರೆ (Bharat Jodo Yatra) ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಹೆಗಲ ಮೇಲೆ ಮೇಕೆಯನ್ನು ಹೊತ್ತುಕೊಂಡಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಈ ಫೋಟೋವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ (Jairam Ramesh) ಅವರು ತಮ್ಮ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದು, ಕ್ಯಾಪ್ಷನ್‍ನಲ್ಲಿ ‘G.O.A.T’, ಎಂದು ಬರೆದುಕೊಂಡಿದ್ದಾರೆ. ಅಂದರೆ ಎಲ್ಲಾ ಸಮಯದಲ್ಲೂ ಶ್ರೇಷ್ಠ ವ್ಯಕ್ತಿ (ಗ್ರೇಟೆಸ್ಟ್ ಆಫ್ ಆಲ್ ಟೈಂ). ಇದನ್ನೂ ಓದಿ: ಬುಡಕಟ್ಟು ಜನಾಂಗದವರ ಸಾಂಪ್ರದಾಯಿಕ ನೃತ್ಯಕ್ಕೆ ಹೆಜ್ಜೆ ಹಾಕಿದ ರಾಹುಲ್ ಗಾಂಧಿ
ಆಂಧ್ರಪ್ರದೇಶ, ಕರ್ನಾಟಕ ಮತ್ತು ಕೇರಳಕ್ಕೆ ಭೇಟಿ ನೀಡಿದ ನಂತರ ಈ ವಾರ ರಾಹುಲ್ ಗಾಂಧಿ ಅವರು ತೆಲಂಗಾಣದಲ್ಲಿ ಭಾರತ್ ಜೋಡೋ ಯಾತ್ರೆಯನ್ನು ನಡೆಸುತ್ತಿದ್ದಾರೆ. ಇಂದು ಧರ್ಮಪುರದಿಂದ ಭಾರತ್ ಜೋಡೋ ಯಾತ್ರೆಯನ್ನು ಪುನಾರಂಭಿಸಿದ ರಾಹುಲ್ ಬುಡಕಟ್ಟು ಜನಾಂಗದವರೊಂದಿಗೆ ಸಾಂಪ್ರದಾಯಿಕ ನೃತ್ಯವನ್ನು ಮಾಡಿದ್ದಾರೆ.
Our tribals are the repositories of our timeless cultures & diversity.
Enjoyed matching steps with the Kommu Koya tribal dancers. Their art expresses their values, which we must learn from and preserve. pic.twitter.com/CT9AykvyEY
ಈ ನೃತ್ಯದ ವೀಡಿಯೋವನ್ನು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ ಅವರು, ನಮ್ಮ ದೇಶದ ಆದಿವಾಸಿಗಳು, ನಮ್ಮ ಕಾಲಾತೀತ ಸಂಸ್ಕೃತಿಗಳು ಮತ್ತು ವೈವಿಧ್ಯತೆಯ ಭಂಡಾರ. ಕೋಯಾ ಬುಡಕಟ್ಟು ನೃತ್ಯಗಾರರೊಂದಿಗೆ ನೃತ್ಯ ಮಾಡಿ ಸಂತಸವಾಯಿತು. ಅವರ ಕಲೆ ಅವರ ಮೌಲ್ಯಗಳನ್ನು ತೋರಿಸುತ್ತದೆ. ನಾವು ಅದನ್ನು ಕಲಿಯಬೇಕು ಮತ್ತು ಸಂರಕ್ಷಿಸಬೇಕು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದರು.
ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ ಕಾಶ್ಮೀರದವರೆಗೆ ನಡೆಯಲಿದೆ. ಈ 3500 ಕಿಮೀ ಪ್ರಯಾಣವು 12 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ. ಐದು ತಿಂಗಳ ಕಾಲ ಈ ಪಾದಯಾತ್ರೆ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿದೆ.
Live Tv
[brid partner=56869869 player=32851 video=960834 autoplay=true]
ಹೈದಾರಾಬಾದ್: ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ತೆಲಂಗಾಣ (Telangana) ದಲ್ಲಿ ಟಿಆರ್ ಎಸ್ ಶಾಸಕರನ್ನು ಖರೀದಿಸಲು ಯತ್ನಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಆಪರೇಷನ್ ಕಮಲಕ್ಕಾಗಿ 15 ಕೋಟಿ ರೂ. ತಂದ ಆರೋಪದ ಮೇಲೆ ಹಣದ ಸಮೇತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಒಳಗಾದವರನ್ನು ಹರಿಯಾಣದ ಫರಿದಾಬಾದ್‍ನ ಅರ್ಚಕ ಸತೀಶ್ ಶರ್ಮಾ, ಅಲಿಯಾಸ್ ರಾಮಚಂದ್ರ ಭಾರತಿ, ತಿರುಪತಿಯ ಧರ್ಮದರ್ಶಿ ಡಿ ಸಿಂಹಯಾಜಿ ಮತ್ತು ಉದ್ಯಮಿ ನಂದಕುಮಾರ್ ಎಂದು ಗುರುತಿಸಲಾಗಿದೆ.
The ‘Three Agents’ of Amit shah who came to bribe TRS MLAs are now decoded & bursted.
ಪಕ್ಷಗಳನ್ನು ಬದಲಾಯಿಸಲು ಆಮಿಷ ಮತ್ತು ಲಂಚ ನೀಡಲಾಗುತ್ತಿದೆ ಎಂದು ಶಾಸಕರು ಪೊಲೀಸರಿಗೆ ಕರೆ ಮಾಡಿದ್ದರು. ಪಕ್ಷಗಳನ್ನು ಬದಲಾಯಿಸಲು ಅವರಿಗೆ ದೊಡ್ಡ ಮೊತ್ತದ ಹಣ, ಒಪ್ಪಂದಗಳು ಮತ್ತು ಹುದ್ದೆಗಳನ್ನು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
We received information from TRS MLAs that they were being lured, by money, contracts, and posts. We raided the farmhouse and noticed three persons. We will initiate legal action and carry investigation into the luring matter: Cyberabad CP Stephen Ravindra pic.twitter.com/ke6D8SEAzS
ಹೈದರಾಬಾದ್: ದೀಪಾವಳಿ ಹಬ್ಬದ (Diwali Celebrations) ಮೊದಲ ದಿನವೇ ಪಟಾಕಿ ಸಿಡಿತದಿಂದ ಸುಮಾರು 24 ಮಂದಿ ಕಣ್ಣಿಗೆ ಗಾಯವಾಗಿರುವ ಘಟನೆ ಹೈದರಾಬಾದ್‍ನ (Hyderabad) ಮೆಹದಿಪಟ್ನಂನಲ್ಲಿ (Mehdipatnam) ನಡೆದಿದೆ.
ಮೆಹದಿಪಟ್ಟಣಂನಲ್ಲಿರುವ ಸರ್ಕಾರಿ ಸರೋಜಿನಿ ದೇವಿ ಕಣ್ಣಿನ ಆಸ್ಪತ್ರೆಯಲ್ಲಿ (Sarojini Devi Eye Hospital) ಮಕ್ಕಳು ಸೇರಿದಂತೆ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ದೀಪಾವಳಿ ಸಮಯದಲ್ಲಿ ನಿಷೇಧಿತ ಪಟಾಕಿಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ಮತ್ತು ಅಂಗಡಿಗಳ ಮೇಲೆ ತೆಲಂಗಾಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಟಿಎಸ್‍ಪಿಸಿಬಿ) ಇತ್ತೀಚೆಗಷ್ಟೇ ಕಠಿಣ ಕ್ರಮ ಕೈಗೊಂಡಿದೆ.
ಪ್ರತಿ ದೀಪಾವಳಿ ಹಬ್ಬದಲ್ಲೂ ಆಂಧ್ರಪ್ರದೇಶದ ಜನತೆ ಸತ್ಯಭಾಮೆಯ ಮಣ್ಣಿನ ವಿಗ್ಹವನ್ನು ತಯಾರಿಸಿ, ಅದಕ್ಕೆ ಪ್ರಾರ್ಥನೆ ಸಲ್ಲಿಸಿ, ಆಶೀರ್ವಾದ ಪಡೆಯುತ್ತಾರೆ. ಬಳಿಕ ತಮ್ಮ ಪ್ರೀತಿ ಪಾತ್ರರೊಂದಿಗೆ ಸಂತೋಷದಿಂದ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಇದನ್ನೂ ಓದಿ: ಶಿವಮೊಗ್ಗ ಮತ್ತೆ ಉದ್ವಿಗ್ನ – ಹರ್ಷನ ಮನೆ ಮುಂದೆ ಲಾಂಗು, ಮಚ್ಚು ಹಿಡಿದು ಓಡಾಟ
Live Tv
[brid partner=56869869 player=32851 video=960834 autoplay=true]
ಹೈದರಾಬಾದ್: ಕಳೆದೆರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೈದ್ಯ ದಂಪತಿ ಗುರುವಾರ ಹೈದರಾಬಾದ್‍ನಲ್ಲಿರುವ (Hyderabad) ತಮ್ಮ ನಿವಾಸದ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಸ್ನಾನಗೃಹದ ಗೀಸರ್ ವೈಯರ್‌ನ ಕರೆಂಟ್ ಶಾಕ್‍ನಿಂದ ದಂಪತಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮೃತರನ್ನು ಡಾ. ಸೈಯದ್ ನಿಸಾರುದ್ದೀನ್(26) ಮತ್ತು ಅವರ ಪತ್ನಿ ಉಮ್ಮೆ ಮೊಹಿಮೀನ್ ಸೈಮಾ (22) ಎಂದು ಗುರುತಿಸಲಾಗಿದ್ದು, ಈ ದಂಪತಿ ಖಾದರ್‍ಬಾಗ್ ಪ್ರದೇಶದ (Khaderbagh locality) ನಿವಾಸಿಯಾಗಿದ್ದಾರೆ. ಇದನ್ನೂ ಓದಿ: ನಿಮ್ಮ ಬಳಿ ಬಟ್ಟೆ ಹಾವಿದ್ರೆ, ನನ್ನ ಬಳಿ ನಿಜವಾದ ಹಾವಿದೆ: ಬಿಜೆಪಿ ನಾಯಕರಿಗೇ ಯತ್ನಾಳ್ ಟಾಂಗ್
ಮನೆಯೊಳಗೆ ಪ್ರವೇಶಿಸಿದ ನಮಗೆ ಏನೋ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದೆವು. ನಂತರ ಕಿಟಕಿಯ ಮೂಲಕ ನೋಡಿದಾಗ ದಂಪತಿ ಸಾವನ್ನಪ್ಪಿರುವುದು ಕಂಡುಬಂದಿದೆ ಎಂದು ಉಮ್ಮೆ ಮೊಹಿಮೀನ್ ಸೈಮಾ ಅವರ ತಂದೆ ಹೇಳಿದ್ದಾರೆ.
ಬುಧವಾರ ರಾತ್ರಿ ಸೂರ್ಯಪೇಟೆಯಿಂದ ದಂಪತಿ ಮರಳಿದ್ದರು. ಗುರುವಾರ ಬೆಳಗ್ಗೆ ಈ ಘಟನೆ ನಡೆದಿರಬಹುದು. ಆದರೆ ಸಂಜೆವರೆಗೂ ಈ ಬಗ್ಗೆ ಯಾರಿಗೂ ತಿಳಿದುಬಂದಿಲ್ಲ. ಆದರೆ ರಾತ್ರಿ 11:30ಕ್ಕೆ ನಮಗೆ ಈ ಬಗ್ಗೆ ಮಾಹಿತಿ ದೊರೆಯಿತು. ನಂತರ ಘಟನಾ ಸ್ಥಳಕ್ಕೆ ಹೋದಾಗ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಪತಿ ಪತ್ನಿಯನ್ನು ಉಳಿಸಲು ಹೋದಾಗ ಪತಿ ಕೂಡ ಸಾವನ್ನಪ್ಪಿದ್ದಾರೆ ಎಂದು ತನಿಖಾಧಿಕಾರಿ ಸಬ್ ಇನ್ಸ್‌ಪೆಕ್ಟರ್ ಎಸ್ ಶೃತಿ ತಿಳಿಸಿದ್ದಾರೆ. ಇದನ್ನೂ ಓದಿ: ದಲಿತ ಯುವಕನ ಮುಖಕ್ಕೆ ಮಸಿ ಬಳಿದು, ಕಂಬಕ್ಕೆ ಕಟ್ಟಿ ಥಳಿತ – ಇಬ್ಬರು ಅರೆಸ್ಟ್
ಸೈಮಾ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದರೆ, ಆಕೆಯ ಪತಿ ಸೈಯದ್ ನಿಸಾರುದ್ದೀನ್ ಸೂರ್ಯಪೇಟೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ಬೆಳಗ್ಗೆ ತಂದೆ ಜೊತೆಗೆ ಮಾತನಾಡಿದ್ದ ಸೈಮಾ, ಮತ್ತೆ ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಪುನಃ ಯಾವುದೇ ಕರೆ ಮಾಡಲಿಲ್ಲ. ಇಬ್ಬರೂ ಕೆಲಸಕ್ಕೆ ಹೋಗಿರಬೇಕು ಎಂದು ಅವರ ತಂದೆ ಅಂದುಕೊಂಡಿದ್ದರು. ಆದರೆ ಸಂಜೆ ಕರೆ ಮಾಡಿದಾಗ ಕರೆ ಸ್ವೀಕರಿಸದೇ ಇದ್ದಿದ್ದರಿಂದ ಅನುಮಾನಗೊಂಡ ಕುಟುಂಬಸ್ಥರು ಅಪಾರ್ಟ್‍ಮೆಂಟ್‍ಗೆ ಬಂದು ನೋಡಿದ್ದಾರೆ. ಈ ವೇಳೆ ಘಟನೆ ಬಗ್ಗೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
– ಹೈದರಾಬಾದ್ ರೋಡ್ ಶೋ ಯಶಸ್ವಿ – 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ನಿರೀಕ್ಷೆ
ಹೈದರಾಬಾದ್: ನವೆಂಬರ್ 2ರಿಂದ 4ರ ವರೆಗೆ ಬೆಂಗಳೂರಿನಲ್ಲಿ (Bengaluru) ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಭಾಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ಆರ್. ನಿರಾಣಿ (Murugesh Nirani) ಅವರು ಹೈದರಾಬಾದ್‌ನಲ್ಲಿ ಶುಕ್ರವಾರ ನಡೆಸಿದ ರೋಡ್‌ಶೋ (Roadshow) ಯಶಸ್ವಿಯಾಗಿದೆ.
ಹೈದರಾಬಾದ್‌ನ (Hyderabad) ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಸಚಿವ ನಿರಾಣಿ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾಗವಾಗಿ ದೆಹಲಿಯಲ್ಲಿ ಚಾಲನೆ ನೀಡಿದ ದೇಶೀಯ ರೋಡ್ ಶೋ ಯಶಸ್ವಿಯಾಗಿದೆ. ಅದೇ ರೀತಿ, ಹೈದರಾಬಾದ್ ರೋಡ್ ಶೋ ವೇಳೆ ಉದ್ಯಮಿಗಳ ಜತೆ ಇಂದು ನಡೆಸಿದ ಮಾತುಕತೆ ಫಲಪ್ರದವಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳು ನಮ್ಮ ಕೈಗಾರಿಕಾ ನೀತಿ ಕುರಿತು ಆಂಧ್ರ (Andhra Pradesh) ಹಾಗೂ ತೆಲಂಗಾಣದ (Telangana) ಉದ್ಯಮಿಗಳಿಗೆ ಮಾಹಿತಿ ನೀಡಲಾಗಿದೆ. ರಾಜ್ಯದಲ್ಲಿ ಬಂಡವಾಳ ಹೂಡಲು ಹಾಗೂ ಉದ್ಯಮ ವಿಸ್ತರಣೆಗೆ ಹಲವು ಕಂಪನಿಗಳ ಮುಖ್ಯಸ್ಥರು ಒಲವು ತೋರಿದ್ದಾರೆ ಎಂದು ಸಚಿವ ನಿರಾಣಿ ಹೇಳಿದರು.
ಜಾಗತಿ ಹೂಡಿಕೆದಾರರ ಸಮಾವೇಶದ ಅಂತಾರಾಷ್ಟ್ರೀಯ ರೋಡ್‌ಶೋನ ಭಾಗವಾಗಿ ಜಪಾನ್, ದಕ್ಷಿಣ ಕೊರಿಯಾ, ಅಮೆರಿಕ ಹಾಗೂ ಯೂರೋಪ್‌ಗೆ ಭೇಟಿ ನೀಡಲಾಗಿದೆ. ಈ ದೇಶಗಳಿಂದ ದೊಡ್ಡ ಮಟ್ಟದ ವಿದೇಶಿ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ. ದೇಶೀಯ ರೋಡ್ ಶೋ ಮುಂಬೈಯಲ್ಲಿ ಮುಕ್ತವಾಗಲಿದೆ ಎಂದು ಅವರು ತಿಳಿಸಿದರು.
ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದ್ದು, ಇದರಿಂದ 5 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ. ಜಾಗತಿಕ ಹೂಡಿಕೆದಾರರ ಸಮಾವೇಶ ‘ಬಿಲ್ಡ್ ಫಾರ್ ದಿ ವರ್ಲ್ಡ್’ ಎಂಬ ಪರಿಕಲ್ಪನೆಯಡಿ ಅನಾವರಣಗೊಳ್ಳುತ್ತಿದೆ. ಅತ್ಯುತ್ತಮ ಕೈಗಾರಿಕಾ ಪರಿಸರ ವ್ಯವಸ್ಥೆ ಹೊಂದಿರುವ ಕರ್ನಾಟಕ, ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ ಎಂದರು.
ನಮ್ಮ ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮವಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. 2021ರ ಜುಲೈನಿಂದೀಚೆಗೆ ಬರೋಬ್ಬರಿ 3 ಲಕ್ಷ ಕೋಟಿ ರೂ.ಗೂ ಹೆಚ್ಚು ಹೂಡಿಕೆ ಪ್ರಸ್ತಾವನೆಗಳು ರಾಜ್ಯಕ್ಕೆ ಬಂದಿವೆ. ದೇಶದ ಒಟ್ಟಾರೆ ವಿದೇಶಿ ಹೂಡಿಕೆಯಲ್ಲಿ ರಾಜ್ಯದ ಪಾಲು ಶೇ.38 ರಷ್ಟು ಇದೆ. ಬರೋಬ್ಬರಿ 22 ಶತಕೋಟಿ ಡಾಲರ್ ವಿದೇಶಿ ನೇರ ಹೂಡಿಕೆ ರಾಜ್ಯಕ್ಕೆ ಹರಿದು ಬಂದಿದೆ ಎಂದು ಅವರು ವಿವರಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆಗೆ ಕೋವ್ಯಾಕ್ಸಿನ್ ಉತ್ಪಾದಕ ಭಾರತ್ ಬಯೋಟೆಕ್ ಒಲವು
ಸುಲಲಿತ ವ್ಯವಹಾರಕ್ಕೆ ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್ ಯೋಜನೆಯ ಜಾರಿಗೊಳಿಸಿರುವ ಕರ್ನಾಟಕ, ಈಸ್ ಆಫ್ ಡೂಯಿಂಗ್ ಬಿಸಿನೆಸ್‌ಗೆ ಶ್ರೇಯಾಂಕ ಪಟ್ಟಿಯಲ್ಲಿ ‘ಟಾಪ್ ಅಚೀವರ್’ ಆಗಿ ಹೊರಹೊಮ್ಮಿದೆ. ಜೊತೆಗೆ, ಹೂಡಿಕೆದಾರರಿಗೆ ಭೂ ಹಂಚಿಕೆಗೆ ಅನುಕೂಲವಾಗುವಂತೆ ‘ಈಸ್ ಆಫ್ ಲ್ಯಾಂಡ್ ಅಲಾಟ್‌ಮೆಂಟ್’ ಕ್ರಮ ಜಾರಿಗೊಳಿಸಲಾಗಿದೆ ಎಂದರು.
ಜಾಗತಿಕ ಹೂಡಿಕೆದಾರರ ಸಮಾವೇಶದ ಸಂದರ್ಭದಲ್ಲಿ ಭೂ ಹಂಚಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ:
ಹೈದರಾಬಾದ್ ರೋಡ್‌ಶೋನಲ್ಲಿ ಭಾರತ್ ಬಯೋಟೆಕ್, ವಿಮತ ಲ್ಯಾಬ್ಸ್, ಲೌರಸ್ ಲ್ಯಾಬ್ಸ್, ಪೆಂಟಗನ್ ರಗ್ಗಡ್ ಸಿಸ್ಟಮ್, ವೈಬ್ರೆಂಟ್ ಎನರ್ಜಿ ಸೇರಿದಂತೆ ಹಲವು ಕಂಪನಿಗಳ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಲಾಗಿದೆ ಎಂದು ನಿರಾಣಿ ತಿಳಿಸಿದರು. ಇದನ್ನೂ ಓದಿ: ಭೂತಾನ್‍ನಿಂದ 17 ಸಾವಿರ ಟನ್ ಅಡಿಕೆ ಆಮದಿಗೆ ಮುಂದಾದ ಕೇಂದ್ರ – ರೈತರಿಂದ ವಿರೋಧ
ವೈನ್ ಮತ್ತು ಆಹಾರ ಮೇಳ:
ಈ ಸಮಾವೇಶ ಬಂಡವಾಳ ಹೂಡಿಕೆಗಷ್ಟೇ ಸೀಮಿತವಾಗಿಲ್ಲ. ಕರ್ನಾಟಕದ ಸಾಂಸ್ಕೃತಿಕ ಲೋಕ ಅಲ್ಲಿ ಅನಾವರಣಗೊಳ್ಳಲ್ಲಿದೆ. ವೈನ್ ಮತ್ತು ಆಹಾರ ಮೇಳದಲ್ಲಿ ಕರ್ನಾಟಕದ ವಿಶೇಷ ಖಾದ್ಯಗಳನ್ನು ಸವಿಯಬಹುದು ಎಂದು ಸಚಿವರು ಹೇಳಿದರು.
ಅಸೋಚಾಮ್ ತೆಲಂಗಾಣ ರಾಜ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ರವಿ ಕುಮಾರ್ ರೆಡ್ಡಿ, ಅಸೋಚಾಮ್ ಪ್ರಧಾನ ಕಾರ್ಯದರ್ಶಿ ಪೂಜಾ ಅಹ್ಲುವಾಲಿಯಾ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಡಾ.ಇ.ವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Live Tv
[brid partner=56869869 player=32851 video=960834 autoplay=true]
ಹೈದರಾಬಾದ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್. ನಿರಾಣಿ (Murugesh Nirani) ಅವರು ಭಾರತ್ ಬಯೋಟೆಕ್‍ನ (Bharat Biotech) ಅಧ್ಯಕ್ಷ ಡಾ. ಕೃಷ್ಣ ಎಂ. ಎಲ್ಲ (Dr Krishna M Ella) ಅವರನ್ನು ಹೈದರಾಬಾದ್‍ನಲ್ಲಿ ಶುಕ್ರವಾರ ಭೇಟಿಯಾದರು.
ಕರ್ನಾಟಕದಲ್ಲಿ ಹೂಡಿಕೆ ಹಾಗೂ ಉದ್ಯಮ ವಿಸ್ತರಣೆಗೆ ಇರುವ ಅವಕಾಶಗಳ ಮಾಹಿತಿ ನೀಡಿದ ಸಚಿವರು, ನವೆಂಬರ್ 2 ರಿಂದ 4ರವರೆಗೆ ಬೆಂಗಳೂರಿನಲ್ಲಿ (Bengaluru) ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಭೆಗೆ ಕೃಷ್ಣ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದರು. ಈ ವೇಳೆ ಉದ್ಯಮಕ್ಕೆ ಪೂರಕ ವಾತಾವರಣ ಇರುವ ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆ ಮಾಡುವ ಉದ್ದೇಶ ಇದೆ ಎಂದು ಕೃಷ್ಣ ಅವರು ಕೂಡ ತಿಳಿಸಿದರು. ಇದನ್ನೂ ಓದಿ: ಉದ್ಯಮಿಗಳು, ನಿರ್ಮಾಪಕರು, ರಾಜಕಾರಣಿಗಳಿಗೆ ಬೆದರಿಕೆ ಒಡ್ಡಿ ಸುಲಿಗೆ- ಮಹಿಳೆ ಅರೆಸ್ಟ್
ಕೋವ್ಯಾಕ್ಸಿನ್ ಉತ್ಪಾದಿಸುವ ಭಾರತ್ ಬಯೋಟೆಕ್‍ನ ಘಟಕ ಮಾಲೂರಿನಲ್ಲಿದೆ. ಸಮಾವೇಶದ ಪೂರ್ವಭಾವಿಯಾಗಿ ಹೈದರಾಬಾದ್‍ನಲ್ಲಿ ಕೈಗೊಂಡಿರುವ ರೋಡ್‍ಶೋನಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
Live Tv
[brid partner=56869869 player=32851 video=960834 autoplay=true]
ಹೈದರಾಬಾದ್: ಗೋವಾದಿಂದ (Goa) ಬರುತ್ತಿದ್ದ ಸ್ಪೈಸ್‍ಜೆಟ್ ವಿಮಾನದ (SpiceJet plane) ಕ್ಯಾಬಿನ್ (Cabin) ಮತ್ತು ಕಾಕ್‍ಪಿಟ್‍ನಲ್ಲಿ (Cockpit)ಹೊಗೆ ಕಾಣಿಸಿಕೊಂಡ ಹಿನ್ನೆಲೆ ಹೈದರಾಬಾದ್ ವಿಮಾನ (Hyderabad Airport) ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ (Emergency Landing) ಆಗಿದೆ. ಇದೀಗ ಈ ಬಗ್ಗೆ ವಿಮಾನಯಾನ ನಿಯಂತ್ರಕ ಡಿಜಿಸಿಎ ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿಮಾನ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದ್ದು, ಪ್ರಯಾಣಿಕರು ತುರ್ತು ನಿರ್ಗಮನದ ಮೂಲಕ ವಿಮಾನದಿಂದ ಕೆಳಗಿಳಿದಿದ್ದಾರೆ. ಆದರೆ ವಿಮಾನದಿಂದ ಇಳಿಯುವಾಗ ಒಬ್ಬ ಪ್ರಯಾಣಿಕನ ಕಾಲುಗಳ ಮೇಲೆ ಸಣ್ಣ ಗೀರುಗಳು ಉಂಟಾಗಿವೆ. ಕ್ಯೂ400 ವಿಮಾನ ವಿಟಿ-ಎಸ್‍ಕ್ಯೂಬಿಯಲ್ಲಿ 86 ಪ್ರಯಾಣಿಕರಿದ್ದರು ಮತ್ತು ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ವಿಮಾನ ತುರ್ತು ಲ್ಯಾಂಡಿಂಗ್ ಆದ ಬಳಿಕ ಒಂಭತ್ತು ವಿಮಾನಗಳನ್ನು ಬೇರೆಡೆಗೆ ಪ್ರಯಾಣಿಸಿದವು ಎಂದು ಹೈದರಾಬಾದ್ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮೇಲುಗಡೆ ಟೊಮೆಟೊ ಬಾಕ್ಸ್ ಕೆಳಗಡೆ ರಕ್ತಚಂದನ ಸಾಗಾಟ – ಐವರು ಅರೆಸ್ಟ್
It took 20 minutes from there and we all the passengers suffered and blacked out with fear. Luckily we landed alive and safely… But what if something happens and who would be responsible, this happened clearly due to the neglence of the crew and respective department. pic.twitter.com/gwvltHNlHR
ಸ್ಪೈಸ್‍ಜೆಟ್ ವಿಮಾನದಲ್ಲಿ ಹೊಗೆ ತುಂಬಿದ ಕ್ಯಾಬಿನ್‍ನ ಫೋಟೋ ಮತ್ತು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಆದ ವಿಮಾನದ ಎರಡು ದೃಶ್ಯಗಳನ್ನು ಪ್ರಯಾಣಿಕರೊಬ್ಬರು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬಲವಂತವಾಗಿ ಮಂಗಳಮುಖಿಯ ಮುಂದೆಲೆ ಕತ್ತರಿಸಿ ಹಲ್ಲೆ – ಇಬ್ಬರು ಅರೆಸ್ಟ್
ಸ್ಪೈಸ್‍ಜೆಟ್ ಇತ್ತೀಚಿನ ದಿನಗಳಲ್ಲಿ ತನ್ನ ಕಾರ್ಯಾಚರಣೆ ಮತ್ತು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸ್ಪೈಸ್‍ಜೆಟ್ ವಿಮಾನ ಈಗಾಗಲೇ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ವರ್ಧಿತ ಕಣ್ಗಾವಲಿನಲ್ಲಿದೆ. ಒಟ್ಟು ವಿಮಾನಗಳಲ್ಲಿ ಶೇ.50 ರಷ್ಟು ಮಾತ್ರ ಅಕ್ಟೋಬರ್ 29ರವರೆಗೆ ಕಾರ್ಯನಿರ್ವಹಿಸಲು ವಿಮಾನಯಾನಕ್ಕೆ ನಿರ್ದೇಶನ ನೀಡಿದೆ.
Live Tv
[brid partner=56869869 player=32851 video=960834 autoplay=true]
Live Tv
[brid partner=56869869 player=32851 video=960834 autoplay=true]