Tag: Hyderabad

  • ಎಸ್‍ಟಿ ಮೀಸಲಾತಿಯನ್ನು ಶೇ.6 ರಿಂದ ಶೇ.10ಕ್ಕೆ ಹೆಚ್ಚಿಸುತ್ತೇವೆ: ಕೆಸಿಆರ್

    ಎಸ್‍ಟಿ ಮೀಸಲಾತಿಯನ್ನು ಶೇ.6 ರಿಂದ ಶೇ.10ಕ್ಕೆ ಹೆಚ್ಚಿಸುತ್ತೇವೆ: ಕೆಸಿಆರ್

    ಹೈದರಾಬಾದ್: ತೆಲಂಗಾಣ (Telangana) ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ (ಕೆಸಿಆರ್) (Chief Minister K Chandrashekar Rao) ಅವರು ಪರಿಶಿಷ್ಟ ಪಂಗಡಗಳ(Scheduled Tribes) ಮೀಸಲಾತಿಯನ್ನು (Reservations)  ಶೇ. 4 ರಿಂದ ಶೇ. 10ಕ್ಕೆ ಏರಿಸುವುದಾಗಿ ಘೋಷಿಸಿದ್ದಾರೆ. ಮುಂದಿನ ವಾರದೊಳಗೆ ಈ ನೀತಿ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

    ಹೈದರಾಬಾದ್‍ನ ಎನ್‍ಟಿಆರ್ (NTR) ಕ್ರೀಡಾಂಗಣದಲ್ಲಿ ಶನಿವಾರ ನಡೆದ ‘ಬುಡಕಟ್ಟು ಆತ್ಮೀಯ ಸಮ್ಮೇಳನ’ದಲ್ಲಿ (Tribal Athmiya Sammelanam) ಮಾತನಾಡಿದ ಅವರು, ನಾನು ಇಂದು ತುಂಬಾ ಸಂತೋಷವಾಗಿದ್ದೇನೆ. ಎಲ್ಲಾ ಬುಡಕಟ್ಟು ಮತ್ತು ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ಆದಿವಾಸಿಗಳು ಮತ್ತು ಆದಿವಾಸಿಗಳಿಗಾಗಿ ಹೈದರಾಬಾದ್ ನಗರದ ಹೃದಯಭಾಗದಲ್ಲಿರುವ ಬಂಜಾರಾ ಹಿಲ್ಸ್‌ನಲ್ಲಿ 60 ಕೋಟಿ ರೂಪಾಯಿ ವೆಚ್ಚದಲ್ಲಿ ಕುಮ್ರಂ ಭೀಮ್ ಆದಿವಾಸಿ (Kumram Bheem Adivasi ) ಮತ್ತು ಸೇವಾಲಾಲ್ ಬಂಜಾರ (Sewalal Banjara Bhavans) ಭವನಗಳನ್ನು ಪ್ರಾರಂಭಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಯುಪಿ ಸಚಿವರಿಗೆ 500 ರೂ. ದಂಡ

    ನಂತರ ಎಸ್‍ಟಿ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ ತೆಲಂಗಾಣ ವಿಧಾನಸಭೆಯಲ್ಲಿ (Telangana assembly) ನಿರ್ಣಯ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ಆದರೆ ಇದನ್ನು ಪ್ರಧಾನಿ ಮೋದಿಯವರೇ (Prime Minister Modi), ನೀವೇಕೆ ಒಪ್ಪಿಕೊಳ್ಳುತ್ತಿಲ್ಲ? ನಾನು ನಿನ್ನನ್ನು ಕೈಮುಗಿದು ಕೇಳುತ್ತಿದ್ದೇನೆ. ನಮ್ಮ ಬುಡಕಟ್ಟು ಮಸೂದೆಯನ್ನು (Tribal Bill) ಅಂಗೀಕರಿಸಿ ಮತ್ತು ರಾಷ್ಟ್ರಪತಿಗಳಿಗೆ ಕಳುಹಿಸಿ. ರಾಷ್ಟ್ರಪತಿಯೂ ಆದಿವಾಸಿಗಳ ಮಗಳು. ಆದ್ದರಿಂದ ಈ ಮಸೂದೆಯನ್ನು ಅವರು ಕಡೆಗಣಿಸುವುದಿಲ್ಲ ಎಂದರು. ಇದನ್ನೂ ಓದಿ: ಮೈಸೂರು ಜಿಲ್ಲೆ ಶಾಲೆಗಳಿಗೆ ಸೆ.26 ರಿಂದ ಅ.9ರವರೆಗೂ ದಸರಾ ರಜೆ ಘೋಷಣೆ

    ಬುಡಕಟ್ಟು ಜನಾಂಗದ ಸಮಸ್ಯೆಗಳ ಬಗ್ಗೆ ಮಾತನಾಡುವ ಅನೇಕ ಬುಡಕಟ್ಟು ಕಾರ್ಮಿಕರು (Tribal Workers), ಬುದ್ಧಿಜೀವಿಗಳು, ಕವಿಗಳು ಮತ್ತು ಬರಹಗಾರರಾಗಿದ್ದಾರೆ. 58 ವರ್ಷಗಳಿಂದ ತೆಲಂಗಾಣಕ್ಕಾಗಿ ಜಾತಿ, ಧರ್ಮ ರಹಿತ ಹೋರಾಟ ನಡೆಸಿ ಪ್ರತ್ಯೇಕ ರಾಜ್ಯವನ್ನು ಪಡೆದಿದ್ದೇವೆ. ಹಿಂದಿನ ರಾಜ್ಯದಲ್ಲಿ ಬುಡಕಟ್ಟು ಜನಸಂಖ್ಯೆಯು ಶೇ. 6 ರಷ್ಟಿತ್ತು ಮತ್ತು ಬುಡಕಟ್ಟು ಜಾತಿಯು ಕೇವಲ ಶೇ. 5 ಮೀಸಲಾತಿಯನ್ನು ಪಡೆದಿದೆ. ಆದರೆ ತೆಲಂಗಾಣದಲ್ಲಿ ಜನಸಂಖ್ಯೆಯ ಆಧಾರದ ಮೇಲೆ ಅವರ ಮೀಸಲಾತಿಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಅಮಿತ್ ಶಾ ಭೇಟಿ ವೇಳೆ TRS ನಾಯಕನ ಕಾರು ಅಡ್ಡ- ಕಾರಿನ ಗಾಜು ಒಡೆದ ಭದ್ರತಾ ಸಿಬ್ಬಂದಿ

    ಅಮಿತ್ ಶಾ ಭೇಟಿ ವೇಳೆ TRS ನಾಯಕನ ಕಾರು ಅಡ್ಡ- ಕಾರಿನ ಗಾಜು ಒಡೆದ ಭದ್ರತಾ ಸಿಬ್ಬಂದಿ

    ಹೈದರಾಬಾದ್: ಕೇಂದ್ರ ಸಚಿವ ಅಮಿತ್ ಶಾ(Amit Shah) ಹೈದರಾಬಾದ್(Hyderabad) ಪ್ರವಾಸ ವೇಳೆ ಭದ್ರತಾ ಲೋಪ ಉಂಟಾಗಿದೆ. ಗೃಹ ಸಚಿವರು ತೆರಳುವಾಗ ಬೆಂಗಾವಲು ಪಡೆಗೆ ಟಿಆರ್‌ಎಸ್ ನಾಯಕನ ಕಾರು ಅಡ್ಡ ಬಂದಿದೆ.

    ಹೈದರಾಬಾದ್ ವಿಮೋಚನಾ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಶ್ವದಳದ ಮುಂದೆ ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್‌ಎಸ್) ಮುಖಂಡ ಗೋಸುಲ ಶ್ರೀನಿವಾಸ್ ಕಾರನ್ನು ನಿಲ್ಲಿಸಿದರು. ಹಾರನ್ ಹೊಡೆದ್ರೂ ಆತ ಕಾರನ್ನು ಪಕ್ಕಕ್ಕೆ ತೆಗೆಯದ ಹಿನ್ನೆಲೆಯಲ್ಲಿ, ಅಮಿತ್ ಷಾ ಭದ್ರತಾ ಸಿಬ್ಬಂದಿ ಹೋಗಿ ಕಾರಿನ ಗಾಜುಗಳನ್ನು ಒಡೆದಿದ್ದಾರೆ. ಟಿಆರ್‌ಎಸ್ ನಾಯಕನ ವರ್ತನೆಗೆ ಬಿಜೆಪಿ ನಾಯಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಉನ್ನತಮಟ್ಟದ ತನಿಖೆಗೆ ಒತ್ತಾಯಿಸಿದೆ.

    ಈ ಬಗ್ಗೆ ಟಿಆರ್‌ಎಸ್(TRS) ಮುಖಂಡ ಮಾತನಾಡಿ, ಕಾರು(Car) ಹಾಗೆಯೇ ನಿಂತಿತು. ನಾನು ಟೆನ್ಷನ್‍ನಲ್ಲಿದ್ದೆ. ನಾನು ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡುತ್ತಿದ್ದೆ. ಆದರೆ ಅವರು ನಾನು ಹೋಗುತ್ತೇನೆ ಎಂದರೂ ಕಾರನ್ನು ಧ್ವಂಸಗೊಳಿಸಿದರು ಎಂದು ಹೇಳಿದರು. ಇದನ್ನೂ ಓದಿ: 8 ಚೀತಾಗಳು ಬಂದವು , ಆದ್ರೆ 16 ಕೋಟಿ ಉದ್ಯೋಗ ಬರಲಿಲ್ಲ – ರಾಹುಲ್‌ ಗಾಂಧಿ ಟೀಕೆ

    ತೆಲಂಗಾಣದಲ್ಲಿ ವಿಮೋಚನಾ ದಿನಾಚರಣೆ ರಾಜಕೀಯ ಜೋರಾಗಿದೆ. 2014ರಿಂದ ಇಲ್ಲಿಯವರೆಗೆ ಸುಮ್ಮನೆ ಇದ್ದ ಕೆಸಿಆರ್, ಇದೇ ಮೊದಲ ಬಾರಿಗೆ ವಿಮೋಚನಾ ದಿನವನ್ನು ಆಚರಿಸಿದ್ದಾರೆ. ಇದಕ್ಕೆ ಕಾರಣವೂ ಇಲ್ಲದಿಲ್ಲ. ಇದೇ ವಿಚಾರ ಇಟ್ಕೊಂಡು, ಬಿಜೆಪಿ ಜನರ ಮುಂದೆ ಹೋಗ್ತಿದೆ. ಇವತ್ತು ಅಮಿತ್ ಷಾ ಹೈದ್ರಾಬಾದ್‍ಗೆ ಬಂದು ಬೃಹತ್ ಸಭೆ ನಡೆಸಿದ್ದಾರೆ. ಹೀಗಾಗಿಯೇ ಬಿಜೆಪಿಗೆ ಕೌಂಟರ್ ಕೊಡಲು ಟಿಆರ್‍ಎಸ್ ಕೂಡ ಅನಿವಾರ್ಯವಾಗಿ ವಿಮೋಚನಾ ದಿನೋತ್ಸವ ಆಚರಿಸಿದೆ. ಕೋಮು ಶಕ್ತಿಗಳು ತೆಲಂಗಾಣದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸ್ತಿವೆ. ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಸಿಎಂ ಕೆಸಿಆರ್ ಹೇಳಿದ್ದಾರೆ. ಇದನ್ನೂ ಓದಿ: ಪತ್ನಿಯನ್ನು ಕೊಲೆ ಮಾಡಿದ್ದ ಪತಿ 10 ದಿನಗಳ ಬಳಿಕ ಶವವಾಗಿ ಪತ್ತೆ

    Live Tv
    [brid partner=56869869 player=32851 video=960834 autoplay=true]

  • ಓಯೋ ರೂಂಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ – ಆರೋಪಿಗಳ ಬಂಧನ

    ಓಯೋ ರೂಂಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ – ಆರೋಪಿಗಳ ಬಂಧನ

    ಹೈದರಾಬಾದ್: ಓಯೋ ರೋಮಿಗೆ ಕರೆದೊಯ್ದು 17 ವರ್ಷದ ಬಾಲಕಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರವೆಸಗಿದ್ದ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಸೆಪ್ಟೆಂಬರ್ 13ರ ಮಂಗಳವಾರದಂದು ಈ ಘಟನೆ ನಡೆದಿದ್ದು, ಸಂತ್ರಸ್ತೆ ಮತ್ತು ಆರೋಪಿಗಳು ಒಂದೇ ಏರಿಯಾದವರಾಗಿದ್ದು, ಪರಸ್ಪರ ಪರಿಚಯ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 5.47 ಕೋಟಿ ಮೌಲ್ಯದ 2.43 ಲಕ್ಷ ಎಣ್ಣೆ ಬಾಟ್ಲಿಗಳ ಮೇಲೆ ಹರಿಯಿತು ರೋಡ್ ರೋಲರ್!

    ಆರೋಪಿಗಳನ್ನು 18 ಮತ್ತು 26 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು, ಸಂತ್ರಸ್ತೆಯನ್ನು ಓಯೋ ರೂಮಿಗೆ ಕರೆದೊಯ್ದು, ಆಕೆಗೆ ಮಾದಕ ವಸ್ತು ನೀಡಿ ಎರಡು ದಿನಗಳ ಕಾಲ ಅತ್ಯಾಚಾರವೆಸಗಿದ್ದಾರೆ. ಇದೀಗ ಈ ಸಂಬಂಧ ಸಂತ್ರಸ್ತೆ ಪೋಷಕರು ದೂರು ದಾಖಲಿಸಿದ್ದು, ದಬೀರ್‍ಪುರ ಪೊಲೀಸರು ಪ್ರಕರಣದ ಕುರಿತಂತೆ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಸೀಟ್ ಬೆಲ್ಟ್ ಕಡ್ಡಾಯ – ಧರಿಸದಿದ್ದರೆ 1,000ರೂ. ದಂಡ

    ಈ ಬಗ್ಗೆ ಪ್ರತಿಕ್ರಿಯಿಸಿದ ದಬೀರಪುರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕೋಟೇಶ್ವರ ರಾವ್ ಅವರು, ಪೋಷಕರು ನೀಡಿದ ದೂರು ಮತ್ತು ಬಾಲಕಿಯ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆ ಮುಂದುವರಿದಿದೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಅವಘಡ – 8 ಮಂದಿ ದುರ್ಮರಣ

    ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಅವಘಡ – 8 ಮಂದಿ ದುರ್ಮರಣ

    ಹೈದರಾಬಾದ್‌: ತೆಲಂಗಾಣದ ಸಿಕಂದರಾಬಾದ್‌ನಲ್ಲಿರುವ (Secunderabad) ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಇಂದು ಮುಂಜಾನೆ ಬೆಂಕಿ ಹೊತ್ತಿಕೊಂಡ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

    ಕಟ್ಟಡದ ನೆಲಮಹಡಿಯಲ್ಲಿರುವ ರೂಬಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಶೀಘ್ರದಲ್ಲೇ ಮೊದಲ ಮತ್ತು ಎರಡನೇ ಮಹಡಿಗೂ ವ್ಯಾಪಿಸಿದೆ. ಪರಿಣಾಮವಾಗಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅವರಲ್ಲಿ ಹೆಚ್ಚಿನವರು ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕಟ್ಟಡದ ಮೇಲಿನ ಮಹಡಿಯಿಂದ ಹಲವರು ಜಿಗಿಯುವ ವೀಡಿಯೋ ದೃಶ್ಯ ವೈರಲ್‌ ಆಗಿದೆ. ಅವಘಡದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬುದನ್ನು ತಿಳಿಯಲು ತನಿಖೆ ಪ್ರಾರಂಭಿಸಲಾಗಿದೆ ಎಂದು ತೆಲಂಗಾಣ ಗೃಹ ಸಚಿವ ಮೊಹಮ್ಮದ್ ಮೆಹಮೂದ್ ಅಲಿ ಹೇಳಿದ್ದಾರೆ.

    ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಗಣೇಶನ ಪ್ರಸಾದಕ್ಕೆ ಫುಲ್ ಡಿಮ್ಯಾಂಡ್ – 12 ಕೆಜಿ ಲಡ್ಡು 60 ಲಕ್ಷಕ್ಕೆ ಹರಾಜು

    ಗಣೇಶನ ಪ್ರಸಾದಕ್ಕೆ ಫುಲ್ ಡಿಮ್ಯಾಂಡ್ – 12 ಕೆಜಿ ಲಡ್ಡು 60 ಲಕ್ಷಕ್ಕೆ ಹರಾಜು

    ಹೈದರಾಬಾದ್: ಗಣೇಶ ಹಬ್ಬ (Ganesha Festival) ಮುಗಿದ ಬಳಿಕವೂ ಶ್ರೀಗಣಪತಿ ದೇವಸ್ಥಾನಗಳಲ್ಲಿ (Laksmi Ganapathy) ಪ್ರಸಾದಕ್ಕೆ (Prasad) ಭಾರೀ ಬೇಡಿಕೆ ಶುರುವಾಗಿದೆ. ನೆಚ್ಚಿನ ವಿಘ್ನೇಶ್ವರನಿಗಾಗಿ ಸಿದ್ಧಪಡಿಸಿದ ನೈವೇದ್ಯ ಪ್ರಸಾದ ದಾಖಲೆಯ ಹರಾಜಿಗೆ ಮಾರಾಟವಾಗುತ್ತಿವೆ. ಹಾಗೆಯೇ ಇಲ್ಲಿನ ಗೇಟೆಡ್ ಸಮುದಾಯವಾದ ರಿಚ್ಮಂಡ್ ವಿಲ್ಲಾಸನ್ ಸಿಟಿಯಲ್ಲಿ 10 ರಿಂದ 12 ಕೆಜಿ ತೂಕದ ಲಡ್ಡು (Ladoo) ಬರೋಬ್ಬರಿ 60.8 ಲಕ್ಷ ರೂ.ಗೆ ಹರಾಜಾಗಿದೆ.

    ಕಳೆದ ಎರಡು ದಿನಗಳ ಹಿಂದೆಯಷ್ಟೇ ಬಾಳಾಪುರದ ಗಣೇಶ ದೇವಸ್ಥಾನದಲ್ಲಿ 24.60 ಲಕ್ಷಕ್ಕೆ ಲಡ್ಡು ಹರಾಜಾಗಿತ್ತು. ನಿನ್ನೆಯೂ ಸಹ ಇದೇ ಶ್ರೀಲಕ್ಷ್ಮೀ ಗಣಪತಿ (Laksmi Ganapathy) ದೇವಸ್ಥಾನದಲ್ಲಿ (Temple) 12 ಕೆಜಿ ಲಡ್ಡು 45 ಲಕ್ಷ ರೂ.ಗಳಿಗೆ ಹರಾಜಾಗಿತ್ತು. ಇಂದು ಅಷ್ಟೇ ತೂಕದ ಲಡ್ಡು ಬರೋಬ್ಬರಿ 60.8 ಲಕ್ಷಕ್ಕೆ ಹರಾಜಾಗಿ ದಾಖಲೆ ನಿರ್ಮಿಸಿದೆ. ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಗೆದ್ದರೆ ಮನೆ ಬಾಗಿಲಿಗೇ RTO ಸೇವೆ – ಕೇಜ್ರಿವಾಲ್

    ಹಿಂದೂ, ಮುಸ್ಲಿಂ, ಕ್ರೈಸ್ತರು ಹಾಗೂ ಸಿಖ್ಖರು ಸೇರಿದಂತೆ ಸುಮಾರು 100 ಮಂದಿ ಒಟ್ಟಾಗಿ ಸೇರಿ ಶ್ರೀ ಲಕ್ಷ್ಮೀ ಗಣಪತಿ ಉತ್ಸವ ಪಂಗಡದ ಗಣೇಶ ಲಡ್ಡು ಪ್ರಸಾದವನ್ನು ಹರಾಜಿನಲ್ಲಿ ಖರೀದಿಸಿದ್ದಾರೆ.

    ಗಣೇಶನಿಗೆ ಮಾಡಿದ ಲಡ್ಡೂಗಳನ್ನು ಪ್ರಸಾದವಾಗಿ ಹರಾಜು ಹಾಕುವುದು ಇಲ್ಲಿನ ಸಂಪ್ರದಾಯವಾಗಿದೆ. ಅಲ್ಲದೇ ಲಡ್ಡು ಪಡೆದವರು ದೇವರ ವಿಶೇಷ ಆಶೀರ್ವಾದಕ್ಕೆ ಪಾತ್ರರಾಗಿರುತ್ತಾರೆ ಎಂದು ನಂಬಲಾಗಿದೆ. ಲಡ್ಡು ಅವರಿಗೆ ಅದೃಷ್ಟ, ಆರೋಗ್ಯ, ಸಂಪತ್ತು ಮತ್ತು ಸಮೃದ್ಧಿಯನ್ನೂ ಶ್ರೀಗಣೇಶ ಕರುಣಿಸುತ್ತಾರೆ ಎಂದು ಜನರ ನಂಬಿಕೆಯಾಗಿದೆ. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ ಪೂಜಾ ಸ್ಥಳಗಳ ಕಾಯ್ದೆಯ ವ್ಯಾಪ್ತಿಗೆ ಒಳಪಡಲ್ಲ: ವಾರಣಾಸಿ ಕೋರ್ಟ್‌ ಹೇಳಿದ್ದೇನು?

    ಹರಾಜಿನಿಂದ ಬಂದ ಹಣವನ್ನು ದೇವಾಲಯಗಳ ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ನಟ ನರೇಶ್ ಮನೆಯಲ್ಲೇ ರಮ್ಯಾ ವಾಸ್ತವ್ಯ: ಪವಿತ್ರಾ ಲೋಕೇಶ್ ನಿಂದ ಪತಿಯ ದೂರ ಮಾಡಲು ತಂತ್ರ

    ನಟ ನರೇಶ್ ಮನೆಯಲ್ಲೇ ರಮ್ಯಾ ವಾಸ್ತವ್ಯ: ಪವಿತ್ರಾ ಲೋಕೇಶ್ ನಿಂದ ಪತಿಯ ದೂರ ಮಾಡಲು ತಂತ್ರ

    ತೆಲುಗಿನ ಖ್ಯಾತ ನಟ ನರೇಶ್ (Naresh) ಮತ್ತು ಬೆಂಗಳೂರಿನ ರಮ್ಯಾ ದಾಂಪತ್ಯ ಜೀವನದ ರಾದ್ಧಾಂತ ಸ್ವಲ್ಪ ತಿಂಗಳ ಮಟ್ಟಿಗೆ ತಣ್ಣಗಾಗಿತ್ತು. ಬೆಂಗಳೂರಿನಲ್ಲಿ ಇಬ್ಬರೂ ಮಾಡಿದ ಆರೋಪ ಪ್ರತ್ಯಾರೋಪದ ನಂತರ ನರೇಶ್ ಮತ್ತು ಪವಿತ್ರಾ ಲೋಕೇಶ್ ಮೈಸೂರಿನ ಲಾಡ್ಜ್ ನಲ್ಲಿ ಒಟ್ಟಿಗೆ ಕಾಣಿಸಿಕೊಂಡರು. ಅಲ್ಲಿಂದ ಪ್ರಕರಣಕ್ಕೆ ಬೇರೆ ತಿರುವು ಸಿಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ನರೇಶ್ ಮತ್ತು ಪವಿತ್ರಾ ಲೋಕೇಶ್ ಹೈದರಾಬಾದ್ಗೆ (Hyderabad) ಶಿಫ್ಟ್ ಆದರು.

    ಇತ್ತ ರಮ್ಯಾ (Ramya) ಅವರ ತಾಯಿಗೆ ಹುಷಾರಿಲ್ಲದ ಕಾರಣಕ್ಕಾಗಿ ಮತ್ತು ನರೇಶ್ ಈ ಎಲ್ಲ ಪ್ರಕರಣವನ್ನು ಕೋರ್ಟಿನಲ್ಲೇ ನೋಡಿಕೊಳ್ಳುತ್ತೇನೆ ಎಂದು ಪರಿಣಾಮ ಇಡೀ ಪ್ರಕರಣ ಕೆಲವು ತಿಂಗಳ ಮಟ್ಟಿಗೆ ತಣ್ಣಗಾಗಿತ್ತು. ಇಬ್ಬರೂ ತಮ್ಮ ಪಾಡಿಗೆ ತಾವು ಇದ್ದುಕೊಂಡು ಕೋರ್ಟ್ ನಲ್ಲಿ ಫೈಟ್ ಮಾಡುತ್ತಾರೆ ಎಂದುಕೊಳ್ಳುವಷ್ಟರಲ್ಲಿ ದಿಢೀರ್ ಅಂತ ನರೇಶ್ ಮನೆಯಲ್ಲಿ ರಮ್ಯಾ ಕಾಣಿಸಿಕೊಂಡಿದ್ದಾರೆ. ಆಗಿದೆಲ್ಲ ಸರಿ ಮಾಡಿ, ಗಂಡನ ಜೊತೆಯೇ ಇರುವುದಾಗಿ ಅವರು ಅಲ್ಲಿಗೆ ಹೋಗಿದ್ದಾರೆ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು

     

    ಇತ್ತ ಪವಿತ್ರಾ ಲೋಕೇಶ್ (Pavithra Lokesh) ಜೊತೆ ತೋಟದ ಮನೆಯಲ್ಲಿ ನರೇಶ್ ಇದ್ದಾರೆ ಎಂದು ಹೇಳಲಾಗುತ್ತಿದೆ. ರಮ್ಯಾ ಮನೆಗೆ ಬಂದ ಹಿನ್ನೆಲೆಯಲ್ಲಿ ನರೇಶ್ ಗೊಂದಲಕ್ಕೀಡಾಗಿದ್ದಾರೆ. ಅಲ್ಲದೇ, ಪವಿತ್ರಾ ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳುವಂತೆ ರಮ್ಯಾ ತಾಕೀತು ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಮತ್ತೆ ಗಂಡನ ಜೊತೆ ಬದುಕು ಮಾಡುತ್ತೇನೆ ಎಂದು ನರೇಶ್ ಕುಟುಂಬಕ್ಕೆ ತಿಳಿಸಿದ್ದಾರೆ ಎನ್ನುವುದು ಸದ್ಯಕ್ಕಿರುವ ವರ್ತಮಾನ. ರಮ್ಯಾ ವಾಪಸ್ಸು ಮನೆಗೆ ಬರುತ್ತಿದ್ದಂತೆಯೇ ಪವಿತ್ರಾ ಕೂಡ ಗಲಿಬಿಲಿಗೊಂಡಿದ್ದಾರಂತೆ.

    Live Tv
    [brid partner=56869869 player=32851 video=960834 autoplay=true]

  • ಗಣೇಶನ 12 ಕೆಜಿಯ ಲಡ್ಡು ಪ್ರಸಾದ ದಾಖಲೆಯ 45 ಲಕ್ಷಕ್ಕೆ ಹರಾಜು

    ಗಣೇಶನ 12 ಕೆಜಿಯ ಲಡ್ಡು ಪ್ರಸಾದ ದಾಖಲೆಯ 45 ಲಕ್ಷಕ್ಕೆ ಹರಾಜು

    ಹೈದರಾಬಾದ್: ಇಲ್ಲಿನ ಗಣೇಶ ದೇವಸ್ಥಾನದ 12 ಕೆಜಿಯ ಲಡ್ಡು ಪ್ರಸಾದ ದಾಖಲೆಯ 45 ಲಕ್ಷ ರೂ.ಗೆ ಹರಾಜಾಗಿದೆ.

    12 ಕೆಜಿ ತೂಕದ ಲಡ್ಡು ಪ್ರಸಿದ್ಧ ಬಾಳಾಪುರ ಗಣೇಶ ಲಡ್ಡುಗಿಂತಲೂ ದುಪ್ಪಟ್ಟು ಬೆಲೆಗೆ ಹರಾಜಾಗಿದೆ. ಕಳೆದ ಒಂದು ದಿನದ ಹಿಂದೆ ಬಳ್ಳಾಪುರದ ಲಡ್ಡು 24.60 ಲಕ್ಷಕ್ಕೆ ಹರಾಜಾಗಿತ್ತು. ಇದನ್ನೂ ಓದಿ: ದಿನಾಂಕದಿಂದಲೂ ಮೆಸೇಜ್‌ಗಳನ್ನು ಹುಡುಕುವ ಫೀಚರ್ ತರಲಿದೆಯಂತೆ ವಾಟ್ಸಪ್

    ಮರಕಥಾ ಶ್ರೀ ಲಕ್ಷ್ಮೀ ಗಣಪತಿ ಉತ್ಸವದ ಲಡ್ಡು 44,99,999ರೂ.ಗೆ ಹರಾಜಾಗಿದೆ. ಇದು ಹೈದರಾಬಾದ್ ಮತ್ತು ಸಿಕಂದರಾಬಾದ್ ಅವಳಿ ನಗರಗಳಲ್ಲಿ ಮಾತ್ರವಲ್ಲದೇ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲೂ ಅತಿಹೆಚ್ಚು ಬಿಡ್ ಮಾಡಲಾಗಿದೆ.

    ಗಣೇಶನಿಗೆ ಮಾಡಿದ ಲಡ್ಡೂಗಳನ್ನು ಪ್ರಸಾದವಾಗಿ ಹರಾಜು ಹಾಕುವುದು ಇಲ್ಲಿನ ಸಂಪ್ರದಾಯವಾಗಿದೆ. ಅಲ್ಲದೇ ಲಡ್ಡು ಪಡೆದವರು ದೇವರ ವಿಶೇಷ ಆಶೀರ್ವಾದಕ್ಕೆ ಪಾತ್ರರಾಗಿರುತ್ತಾರೆ ಎಂದು ನಂಬಲಾಗಿದೆ. ಲಡ್ಡೂ ಅವರಿಗೆ ಅದೃಷ್ಟ, ಆರೋಗ್ಯ, ಸಂಪತ್ತು ಮತ್ತು ಸಮೃದ್ಧಿಯನ್ನೂ ಕರುಣಿಸುತ್ತಾರೆ ಎಂದು ನಂಬುತ್ತಾರೆ. ಇದನ್ನೂ ಓದಿ: ಕ್ರಾಂತಿಕಾರಿ ಸಾಧು ಎಂದೇ ಹೆಸರಾಗಿದ್ದ ಸ್ವಾಮಿ ಸ್ವರೂಪಾನಂದ ಸರಸ್ವತಿ ನಿಧನ

    ಒಂದು ದಿನದ ಹಿಂದೆಯಷ್ಟೇ ಬಾಳಾಪುರದ ಲಡ್ಡೂವನ್ನು ಸ್ಥಳೀಯ ರೈತ ವಿ.ಲಕ್ಷ್ಮರೆಡ್ಡಿ ಅವರು 24.60 ಲಕ್ಷಕ್ಕೆ ಖರೀದಿಸಿದ್ದರು. ಈ ಬೆನ್ನಲ್ಲೇ ಕಣಜಿಗುಡ ಮರಕಟದ ಶ್ರೀ ಲಕ್ಷ್ಮೀ ಗಣಪತಿ ಲಡ್ಡೂವನ್ನು ಗೀತಪ್ರಿಯ ಮತ್ತು ವೆಂಕಟರಾವ್ ದಂಪತಿ 44,99,999 ರೂ.ಗೆ ಬಿಡ್ ಮಾಡಿ ಖರೀದಿಸಿದ್ದಾರೆ.

    ಹರಾಜಿನಿಂದ ಬಂದ ಹಣವನ್ನು ಬಾಲಾಪುರದ ದೇವಾಲಯಗಳ ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ಸಮಿತಿಯ ಸದಸ್ಯರೂ ಆಗಿರುವ ಲಕ್ಷ್ಮರೆಡ್ಡಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಿಮಾಂತ ಬಿಸ್ವಾ ಶರ್ಮಾ ರ‍್ಯಾಲಿಯಲ್ಲಿ ಮೈಕ್ ಕಿತ್ತುಕೊಂಡ ಅಪರಿಚಿತ ವ್ಯಕ್ತಿ – ವೀಡಿಯೋ ವೈರಲ್

    ಹಿಮಾಂತ ಬಿಸ್ವಾ ಶರ್ಮಾ ರ‍್ಯಾಲಿಯಲ್ಲಿ ಮೈಕ್ ಕಿತ್ತುಕೊಂಡ ಅಪರಿಚಿತ ವ್ಯಕ್ತಿ – ವೀಡಿಯೋ ವೈರಲ್

    ಹೈದರಾಬಾದ್: ಅಸ್ಸಾಂ ಮುಖ್ಯಮಂತ್ರಿ (Assam Chief Minister) ಹಿಮಾಂತ ಬಿಸ್ವಾ ಶರ್ಮಾ (Himanta Biswa Sarma) ಅವರ ರ‍್ಯಾಲಿ ವೇಳೆ ವ್ಯಕ್ತಿಯೊಬ್ಬ, ಏಕಾಏಕಿ ವೇದಿಕೆ ಮೇಲೇರಿ ಮೈಕ್‍ನ್ನು ಸ್ಟ್ಯಾಂಡ್ ನಿಂದ ಎಳೆದಾಡಿದ ಘಟನೆ ನಗರದಲ್ಲಿ ನಡೆದಿದೆ.

    ಹಿಮಾಂತ ಬಿಸ್ವಾ ಶರ್ಮಾ ಗಣೇಶ ಹಬ್ಬ ಮತ್ತು ಇತರ ಕಾರ್ಯಕ್ರಮಗಳಿಗೆ ಭಾಗ್ಯನಗರ ಗಣೇಶ ಉತ್ಸವ ಸಮಿತಿಯ ಅತಿಥಿಯಾಗಿ ಹೈದರಾಬಾದ್‍ನಲ್ಲಿದ್ದಾರೆ (Hyderabad). ಮುಂಜಾನೆ ನಗರದ ಪ್ರಮುಖ ದೇವಸ್ಥಾನವೊಂದಕ್ಕೆ ಭೇಟಿ ನೀಡಿದ ಹಿಮಾಂತ ಬಿಸ್ವಾ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ (KCR) ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ರ‍್ಯಾಲಿ ವೇಳೆ ವೇದಿಕೆ ಮೇಲೆ ಬಂದ ಕೆಸಿಆರ್ ಪಕ್ಷದ ಬಣ್ಣ ಹೊಂದಿರುವ ಶಾಲು ಧರಿಸಿದ್ದ ವ್ಯಕ್ತಿ ಏಕಾಏಕಿ ಮೈಕ್ ಎಳೆದಾಡಿದ್ದಾನೆ. ಈ ಅನಿರೀಕ್ಷಿತ ಘಟನೆಯಿಂದ ಹಿಮಾಂತ ಬಿಸ್ವಾ ಶರ್ಮಾ ಗಾಬರಿಗೊಂಡಂತೆ ಕಂಡು ಬಂತು. ಬಳಿಕ ಕೂಡಲೇ ವೇದಿಕೆ ಮೇಲಿದ್ದವರು ಅಪರಿಚಿತ ವ್ಯಕ್ತಿಯನ್ನು ವೇದಿಕೆಯಿಂದ ಕೆಳಗಿಳಿಸಿದರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಧರಿಸಿದ್ದ 41 ಸಾವಿರ ರೂ.ನ ಟೀಶರ್ಟ್ ಕುರಿತು ಬಿಜೆಪಿ ವ್ಯಂಗ್ಯ

    ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯ ಬಳಿಕ ರ‍್ಯಾಲಿಯಲ್ಲಿ ಮಾತನಾಡಿದ ಹಿಮಾಂತ ಬಿಸ್ವಾ, ಮುಖ್ಯಮಂತ್ರಿ ಕೆಸಿಆರ್ ಅವರು ಬಿಜೆಪಿ ಮುಕ್ತ ರಾಜಕೀಯದ ಬಗ್ಗೆ ಮಾತನಾಡುತ್ತಾರೆ. ಆದರೆ ನಾವು ರಾಜವಂಶ ಮುಕ್ತ ರಾಜಕೀಯದ ಬಗ್ಗೆ ಮಾತನಾಡುತ್ತೇವೆ. ಹೈದರಾಬಾದ್‍ನಲ್ಲಿ ಅವರ ಮಗ ಮತ್ತು ಮಗಳ ಚಿತ್ರಗಳನ್ನು ನೋಡುತ್ತೇವೆ. ದೇಶದ ರಾಜಕೀಯವು ರಾಜವಂಶದ ರಾಜಕೀಯದಿಂದ ಮುಕ್ತವಾಗಿರಬೇಕು. ಸರ್ಕಾರವು ದೇಶಕ್ಕಾಗಿ, ಜನರಿಗಾಗಿ ಇರಬೇಕು. ಇದನ್ನು ಹೊರತು ಪಡಿಸಿ ಒಂದು ಕುಟುಂಬಕ್ಕಾಗಿ ಇರಬಾರದು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬ್ರಿಟನ್ ರಾಣಿ ನಿಧನ – ಸೆ.11ಕ್ಕೆ ಭಾರತದಾದ್ಯಂತ ಶೋಕಾಚರಣೆ

    Live Tv
    [brid partner=56869869 player=32851 video=960834 autoplay=true]

  • ಗಣಿಗಾರಿಕೆಯಿಂದ ಭಾರತದ GDPಗೆ ಶೇ.2.5 ರಷ್ಟು ಕೊಡುಗೆ: ಪ್ರಲ್ಹಾದ್ ಜೋಶಿ

    ಗಣಿಗಾರಿಕೆಯಿಂದ ಭಾರತದ GDPಗೆ ಶೇ.2.5 ರಷ್ಟು ಕೊಡುಗೆ: ಪ್ರಲ್ಹಾದ್ ಜೋಶಿ

    ಹೈದರಾಬಾದ್: 2030ರ ವೇಳೆಗೆ ಭಾರತದ ಜಿಡಿಪಿ (GDP)ಯಲ್ಲಿ ಗಣಿ ಮತ್ತು ಖನಿಜಗಳ ಪಾಲು ಶೇ. 2.5ಕ್ಕೆ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲ ರಾಜ್ಯಗಳು ಸಹಕರಿಸುವಂತೆ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕರೆ ನೀಡಿದ್ದಾರೆ.

    ಹೈದರಾಬಾದ್‍ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಗಣಿಗಾರಿಕೆ ಸಚಿವರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ ನಿರ್ದೇಶನದಂತೆ, ಆಯಾ ರಾಜ್ಯ ಗಣಿ ಇಲಾಖೆಯ ಸರ್ಕಾರಿ ಕಂಪನಿಗಳು ಮತ್ತು ಸ್ವಾಯತ್ತ ಸಂಸ್ಥೆಗಳ ಜೊತೆ ಚರ್ಚಿಸಿ ಸಮಾವೇಶ ಆಯೋಜಿಸಲಾಗಿದೆ. ಎಲ್ಲ ರಾಜ್ಯಗಳ ಪಾಲ್ಗೊಳ್ಳುವಿಕೆ ಮುಖ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಶ್ರದ್ದೆಯಿಂದ ಕೆಲಸ ಮಾಡಿದರೆ 2047 ರೊಳಗೆ ಭಾರತ ಅಭಿವೃದ್ದಿ ಹೊಂದಿದ ಭಾರತವಾಗುವುದರಲ್ಲಿ ಅನುಮಾನ ಬೇಡ ಎಂದು ಅಭಿಪ್ರಾಯಪಟ್ಟರು.

    ಕಲ್ಲಿದ್ದಲು ಉತ್ಪಾದನೆಯಲ್ಲಿ ಭಾರತ ಹೊಸ ಮೈಲುಗಲ್ಲು ಸಾಧಿಸುತ್ತಿದೆ. ಕಲ್ಲಿದ್ದಲು ಉತ್ಪಾದನೆಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಶೇ.8 ರಷ್ಟು ಹೆಚ್ಚಳವಾಗಿದ್ದು, ಆಗಸ್ಟ್ 2022ರವರೆಗೆ 58 ಎಂಟಿಯಷ್ಟಾಗಿದೆ ಜೋಶಿ ತಿಳಿಸಿದರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಧರಿಸಿದ್ದ 41 ಸಾವಿರ ರೂ.ನ ಟೀಶರ್ಟ್ ಕುರಿತು ಬಿಜೆಪಿ ವ್ಯಂಗ್ಯ

    ಭಾರತದಲ್ಲಿ ಕಲ್ಲಿದ್ದಲು (Coal) ಗಣಿಗಾರಿಕೆ ಕ್ಷೇತ್ರದಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು ನಮ್ಮ ಪ್ರಯತ್ನ ನಿರಂತರವಾಗಿರುತ್ತದೆ. ಖನಿಜ ಕ್ಷೇತ್ರದಲ್ಲಾದ ಸುಧಾರಣೆ ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಯ ಪಾತ್ರವು ಮುಖ್ಯವಾಗಿದೆ. ಕಳೆದ ವರ್ಷ ಹರಜಾದ ಗಣಿಗಳಿಂದ ಸರ್ಕಾರಕ್ಕೆ ಒಟ್ಟು 25,170 ಕೋಟಿ ಆದಾಯ ಬಂದಿದೆ ಎಂದು ಅವರು ಮಾಹಿತಿ ನಿಡಿದರು.

    Live Tv
    [brid partner=56869869 player=32851 video=960834 autoplay=true]

  • ಸಂತಾನ ಹರಣ ಶಸ್ತ್ರ ಚಿಕಿತ್ಸೆಯಿಂದ ಮಹಿಳೆ ಸಾವು

    ಸಂತಾನ ಹರಣ ಶಸ್ತ್ರ ಚಿಕಿತ್ಸೆಯಿಂದ ಮಹಿಳೆ ಸಾವು

    ಹೈದರಾಬಾದ್: ಸಂತಾನ ಹರಣ ಶಸ್ತ್ರ ಚಿಕಿತ್ಸೆ ನಂತರ ಅನಾರೋಗ್ಯಕ್ಕೀಡಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

    ಹೈದರಾಬಾದ್‍ನ ಪೆಟ್ಲಾ ಬುರ್ಜ್‍ನಲ್ಲಿರುವ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಈ ವೇಳೆ ಕೆಲವು ತೊಡಕುಗಳು ಕಾಣಿಸಿಕೊಂಡಾಗ ಆಕೆಯನ್ನು ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಮಹಿಳೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: KPTCL ಪರೀಕ್ಷೆಯಲ್ಲಿ ಅಕ್ರಮ- N95 ಮಾಸ್ಕ್ ಒಳಗಡೆ ಎಲೆಕ್ಟ್ರಾನಿಕ್‌ ಡಿವೈಸ್ ಸೇಲ್ ಮಾಡಿದ್ದ ಆರೋಪಿ ಅರೆಸ್ಟ್

    ಮಹಿಳೆಯ ಸಾವಿಗೆ ನಿಖರ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಆದರೆ ವೈದ್ಯಕೀಯ ಶಿಕ್ಷಣ ನಿರ್ದೇಶಕ ರಮೇಶ್ ರೆಡ್ಡಿ ಪೆಟ್ಲಾ ಬುರ್ಜ್ ಆಸ್ಪತ್ರೆಗೆ ಧಾವಿಸಿ ಸೂಪರಿಂಟೆಂಡೆಂಟ್ ಮತ್ತು ಇತರ ಅಧಿಕಾರಿಗಳು ಹಾಗೂ ವೈದ್ಯರೊಂದಿಗೆ ಸಭೆ ನಡೆಸಿದರು. ಮಹಿಳೆ ಸಾವಿಗೆ ಕಾರಣವೇನು ಎಂಬುವುದರ ಬಗ್ಗೆ ಅಧಿಕಾರಿಗಳು ಕೂಡ ಇಲ್ಲಿಯವರೆಗೂ ಯಾವುದೇ ಹೇಳಿಕೆ ನೀಡಿಲ್ಲ.

    ರಂಗಾ ರೆಡ್ಡಿ ಜಿಲ್ಲೆಯ ಸಂತಾನ ಹರಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಡಬಲ್ ಪಂಕ್ಚರ್ ಲ್ಯಾಪರೊಸ್ಕೋಪಿ (ಡಿಪಿಎಲ್)ಗೆ ಒಳಗಾಗಿ ನಾಲ್ವರು ಮಹಿಳೆಯರು ಸಾವನ್ನಪ್ಪಿದ ಬೆನ್ನಲ್ಲೇ ಈ ಘಟನೆ ವರದಿಯಾಗಿದೆ. ಇನ್ನೂ ಮೂವತ್ತು ಮಹಿಳೆಯರು ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಒಳ ಉಡುಪು ಖರೀದಿಸಲು ದೆಹಲಿಗೆ ಹೋಗಿದ್ದೆ- ಜಾರ್ಖಂಡ್ ಸಿಎಂ ಸಹೋದರನ ವಿವಾದಾತ್ಮಕ ಹೇಳಿಕೆ

    ರಂಗಾ ರೆಡ್ಡಿ ಜಿಲ್ಲೆಯ ಇಬ್ರಾಹಿಂ ಪಟ್ಟಣಂನಲ್ಲಿರುವ ಸಿವಿಲ್ ಆಸ್ಪತ್ರೆಯಲ್ಲಿ ಆಗಸ್ಟ್ 25 ರಂದು ನಡೆದ ಸ್ತ್ರೀ ಸಂತಾನ ಹರಣ  ಶಿಬಿರದಲ್ಲಿ ಮಹಿಳೆಯರು ಡಿಪಿಎಲ್ ಮಾಡಿಸಿಕೊಂಡಿದ್ದರು. ನಾಲ್ವರು ತೀವ್ರವಾದ ಗ್ಯಾಸ್ಟ್ರೋಎಂಟರೈಟಿಸ್‍ನಿಂದ ಬಳಲುತ್ತಿದ್ದರು ಮತ್ತು ಇದಕ್ಕೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಸಾವನ್ನಪ್ಪಿದ್ದರು.

    ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ಪರವಾನಿಗೆಯನ್ನು ಸರ್ಕಾರ ಅಮಾನತುಗೊಳಿಸಿದೆ. ಇದು ಆಸ್ಪತ್ರೆಯ ಅಧೀಕ್ಷಕರನ್ನು ಜೀವಮಾನದ ಅಮಾನತುಗೊಳಿಸಿದೆ. ಈ ಕುರಿತಂತೆ ಸಾರ್ವಜನಿಕ ಆರೋಗ್ಯ ಇಲಾಖೆಯ ನಿರ್ದೇಶಕ ಡಾ.ಜಿ.ಶ್ರೀನಿವಾಸರಾವ್ ಅವರಿಂದಲೂ ತನಿಖೆಗೆ ಸರ್ಕಾರ ಆದೇಶಿಸಿದೆ. ಗರಿಷ್ಠ ಎಫ್‍ಪಿ ಶಸ್ತ್ರಚಿಕಿತ್ಸೆಗಳನ್ನು ಮಾಡುವ ಮೂಲಕ ದಾಖಲೆ ಸೃಷ್ಟಿಸುವ ಪ್ರಯತ್ನಗಳು ಸಾವಿಗೆ ಕಾರಣವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

    Live Tv
    [brid partner=56869869 player=32851 video=960834 autoplay=true]