Tag: I Love Muhammad

  • ʻಐ ಲವ್ ಮಹಮ್ಮದ್ʼ ಮೊದಲು ಉರ್ದುನಲ್ಲಿ ಹಾಕ್ತಿದ್ರು, ಓದೋಕೆ ಬರದೇ ಗಲಾಟೆ ಆಗ್ತಿರಲಿಲ್ಲ: ಯತೀಂದ್ರ ಸಿದ್ದರಾಮಯ್ಯ

    ʻಐ ಲವ್ ಮಹಮ್ಮದ್ʼ ಮೊದಲು ಉರ್ದುನಲ್ಲಿ ಹಾಕ್ತಿದ್ರು, ಓದೋಕೆ ಬರದೇ ಗಲಾಟೆ ಆಗ್ತಿರಲಿಲ್ಲ: ಯತೀಂದ್ರ ಸಿದ್ದರಾಮಯ್ಯ

    • 5 ವರ್ಷ ನಮ್ಮಪ್ಪ ಸಿಎಂ 

    ಗದಗ: ʻಐ ಲವ್ ಮಹಮ್ಮದ್ʼ ಬ್ಯಾನರ್ (I Love Muhammad Banner) ಹೊಸದೇನಲ್ಲ. ಮೊದಲು ಉರ್ದುನಲ್ಲಿ ಹಾಕುತ್ತಿದ್ರೂ, ಉರ್ದು ಓದಲು ಆಗದೇ ಗಲಾಟೆ ಆಗುತ್ತಿರಲಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದ್ದಾರೆ.

    ಗದಗದಲ್ಲಿ (Gadag) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ರಾಜ್ಯದಲ್ಲಿ ನಡೆಯುತ್ತಿರುವ ʻಐ ಲವ್ ಮಹಮ್ಮದ್ʼಬ್ಯಾನರ್ ಗಲಾಟೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಇವೆಲ್ಲವೂ ಅನಗತ್ಯ ವಿವಾದಗಳು. ಈಗ ಇಂಗ್ಲಿಷ್‌ನಲ್ಲಿ ಹಾಕಿದ್ದಕ್ಕೆ ವಿವಾದ ಮಾಡ್ತಿದ್ದಾರೆ. ಪ್ರತಿಯೊಂದು ಧರ್ಮದವರು ತಮ್ಮ ಮಹನೀಯರು, ದೇವರ ಮೆಚ್ಚುಗೆಯ ಬ್ಯಾನರ್ ಹಾಕುವುದರಲ್ಲಿ ತಪ್ಪಿಲ್ಲ ಎಂದರು. ಇದನ್ನೂ ಓದಿ: ದಾವಣಗೆರೆ | `ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆಯಾಗಿದ್ದ ಜಾಗದಲ್ಲೇ ರಾಮನ ಫ್ಲೆಕ್ಸ್ ಹರಿದು ವಿಕೃತಿ

    ವರ್ಷಾಂತ್ಯಕ್ಕೆ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿಯುತ್ತಾರೆ ಎಂಬ ಬಿಜೆಪಿಗರು ಹೇಳಿಕೆ ಕುರಿತು, ಪ್ರತಿವರ್ಷ ಹೀಗೆ ಹೇಳ್ತಾನೇ ಇರುತ್ತಾರೆ. ಆದ್ರೆ ಮುಖ್ಯಮಂತ್ರಿಗಳು ಮುಂದುವರೆಯುತ್ತಾರೆ. ಮುಖ್ಯಮಂತ್ರಿ ಸ್ಥಾನ ಯಾವುದೇ ಚರ್ಚೆ ಆಗಿಲ್ಲ ಅಂತ ಸುರ್ಜೇವಾಲ ಅವರು ಸ್ಪಷ್ಟೀಕರಣ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಸಿಎಂ ಇದ್ದಾರೆ ಅವರೇ ಮುಂದುವರೆಯುತ್ತಾರೆ. ಈ ಬಗ್ಗೆ ಸಿಎಂ ಅವರೇ ಹೇಳಿದ್ದಾರೆ. ಮುಂದಿನ 5 ವರ್ಷ ನಾನೇ ಇರುತ್ತೇನೆ. ದಸರಾ ಉದ್ಘಾಟನೆ ಮಾಡುತ್ತೇನೆ ಎಂದಿದ್ದಾರೆ ಎಂದು ತಿಳಿಸಿದರು.

    ಕೇಂದ್ರ ಜಿಎಸ್‌ಟಿ ವಿಚಾರವಾಗಿ, ಸಿಎಂ ಅವರೇ ಹೇಳಿದ್ದಾರೆ. ಜಿಎಸ್‌ಟಿ ಕಡಿಮೆ‌ ಮಾಡಿರುವುದರಿಂದ ರಾಜ್ಯಕ್ಕೆ ನಷ್ಟ ಆಗುತ್ತಿದೆ. ಅದಕ್ಕೆ ಪರಿಹಾರ ಕೊಡಬೇಕು ಅಂತ ಕೇಳಿಕೊಂಡಿದ್ದಾರೆ. ಕಳೆದ ಬಾರಿ 15ನೇ ಹಣಕಾಸು ಆಯೋಗ ಮಾಡಿದಾಗ ಕರ್ನಾಟಕಕ್ಕೆ ಅನ್ಯಾಯ ಆಗಿತ್ತು. ಆಯೋಗ ಸೂಚಿಸಿದ ಪರಿಹಾರ ಸಹ ಬಂದಿರಲಿಲ್ಲ. ಈ ಬಾರಿ ಮತ್ತೆ ನಷ್ಟವಾಗಿದೆ. ಹಾಗಾಗಿ ಆ ಪರಿಹಾರ ತುಂಬಿಕೊಡಬೇಕು ಎಂದು ಕೇಂದ್ರಕ್ಕೆ ಆಗ್ರಹ ಮಾಡಿದ್ದಾರೆ. ನಾನು ಕೂಡಾ ಆಗ್ರಹ ಮಾಡುತ್ತೇನೆ.

    ಬಜೆಟ್‌ನಲ್ಲಿ ಘೋಷಣೆ ಮಾಡಿದ ಭದ್ರಾ ಮೇಲ್ದಂಡೆ ಯೋಜನೆ 5 ಸಾವಿರ ಕೋಟಿ ರೂ. ಕೊಡಲಿಲ್ಲ. ಬಜೆಟ್‌ನಲ್ಲಿ ಪೆರಪೆರಿ ರಿಂಗ್ ರೋಡ್ ಕೊಡುತ್ತೇನೆ ಅಂದ್ರು ಕೊಡಲಿಲ್ಲ. ಕೇಂದ್ರ ಕೊಡದೇ ಇರುವುದನ್ನು ಸಿಎಂ ಕೇಳಿದ್ದು‌ ನ್ಯಾಯಯುತವಾಗಿದೆ. ನಾವು ಕೂಡಾ ಕೇಳುತ್ತಿದ್ದೇವೆ. ಜಿಎಸ್‌ಟಿ ಕಡಿತದಿಂದ ಆದ ನಷ್ಟ ಭರಿಸಿಕೊಡಿ ಅಂತ ನಾವೂ ಕೇಳ್ತೆವಿ ಎಂದರು. ಇದನ್ನೂ ಓದಿ: ಬೆಳಗಾವಿ | ‘ಐ ಲವ್ ಮುಹಮ್ಮದ್’ ಘೋಷಣೆ ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ – 50 ಮಂದಿ ವಿರುದ್ಧ FIR

  • ಬೆಳಗಾವಿ | ‘ಐ ಲವ್ ಮುಹಮ್ಮದ್’ ಘೋಷಣೆ ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ – 50 ಮಂದಿ ವಿರುದ್ಧ FIR

    ಬೆಳಗಾವಿ | ‘ಐ ಲವ್ ಮುಹಮ್ಮದ್’ ಘೋಷಣೆ ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ – 50 ಮಂದಿ ವಿರುದ್ಧ FIR

    ಬೆಳಗಾವಿ: ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವತ್ತು ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

    ಕಲ್ಲು ತೂರಾಟವಾಗುತ್ತಿದ್ದಂತೆ ಖಡಕ್ ಗಲ್ಲಿ ನಿವಾಸಿಗಳು ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ 10 ಜನರ ಹೆಸರು ಉಲ್ಲೇಖಿಸಿ, ಒಟ್ಟು 50 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಇದನ್ನೂ ಓದಿ: Belagavi | ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ

    ತನಿಖೆಗಿಳಿದ ಪೊಲೀಸರು ಕೈಯಲ್ಲಿ ತಲ್ವಾರ್ ಹಿಡಿದು ಐ ಲವ್ ಮೊಹಮ್ಮದ್ ಸೇರಿ ಧಾರ್ಮಿಕ ಘೋಷಣೆ ಕೂಗಿದ್ದ ಗುಂಪನ್ನು ಹೆಡೆಮುರಿ ಕಟ್ಟಿದ್ದಾರೆ. ಈಗಾಗಲೇ 11 ಜನರನ್ನು ವಶಕ್ಕೆ ಪಡೆದಿದ್ದಾರೆ.

    ಏನಿದು ಪ್ರಕರಣ?
    ಮಾಬುಸುಬಾನಿ ದರ್ಗಾದ ಉರುಸ್ ವೇಳೆ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ ಹಿನ್ನೆಲೆ ಆಕ್ರೋಶ ವ್ಯಕ್ತವಾಗಿದೆ. ಪ್ರಶ್ನೆ ಮಾಡಿದ ಸ್ಥಳೀಯ ಹಿಂದೂ ನಿವಾಸಿಗಳ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿ ವರ್ಷ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮಾರ್ಗದ ಮೂಲಕ ದರ್ಗಾಗೆ ಮೆರವಣಿಗೆ ಹೋಗುತ್ತಿತ್ತು. ಈ ವರ್ಷ ಅನುಮತಿ ಇಲ್ಲದೆಯೂ ಸಹ ಖಡಕ್ ಗಲ್ಲಿಗೆ ಮೆರವಣಿಗೆ ಎಂಟ್ರಿಯಾಗಿದೆ ಎನ್ನಲಾಗಿದೆ. ಮೆರವಣಿಗೆ ವೇಳೆ `ಐ ಲವ್ ಮುಹಮ್ಮದ್’ ಎಂಬ ಘೋಷಣೆ ಕೂಗಿದ್ದಲ್ಲದೇ ಯಾವಾಗಲೂ ಬಾರದ ಮೆರವಣಿಗೆ ಈಗ ಯಾಕೆ ಬಂದಿದೆ? ತಮ್ಮ ಏರಿಯಾಗೆ ಬಂದು ಘೋಷಣೆ ಕೂಗಿದ್ದು ಯಾಕೆ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆದಿದೆ. ಬಳಿಕ ತಲ್ವಾರ್ ಕೂಡ ಪ್ರದರ್ಶನ ಮಾಡಿ ಗೂಂಡಾವರ್ತನೆ ತೋರಲಾಗಿದೆ.

    ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೆರವಣಿಗೆಯನ್ನು ಸ್ಥಳದಿಂದ ಕಳುಹಿಸಿದ್ದಾರೆ. ಏಕಾಏಕಿ ಮೆರವಣಿಗೆ ಬಂದವರು ಮತ್ತು ಕಲ್ಲು ತೂರಿದವರ ವಿರುದ್ಧ ಕ್ರಮಕ್ಕೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮನಿ, ಇಬ್ಬರು ಡಿಸಿಪಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ:ಅಮೆರಿಕ ಧ್ವಜ ಸುಟ್ಟರೆ ತಕ್ಷಣ ಬಂಧನ, 1 ವರ್ಷ ಜೈಲು ಶಿಕ್ಷೆ: ಡೊನಾಲ್ಡ್‌ ಟ್ರಂಪ್‌ ಆದೇಶ

  • Belagavi | ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ

    Belagavi | ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ

    ಬೆಳಗಾವಿ: ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ (I Love Muhammad) ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ (Stone Pelting) ನಡೆಸಿದ ಘಟನೆ ಬೆಳಗಾವಿ (Belagavi) ನಗರದ ಖಡಕ್ ಗಲ್ಲಿಯಲ್ಲಿ (Khadak Galli) ನಡೆದಿದೆ.

    ಮಾಬುಸುಬಾನಿ ದರ್ಗಾದ ಉರುಸ್ ವೇಳೆ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ ಹಿನ್ನೆಲೆ ಆಕ್ರೋಶ ವ್ಯಕ್ತವಾಗಿದೆ. ಪ್ರಶ್ನೆ ಮಾಡಿದ ಸ್ಥಳೀಯ ಹಿಂದೂ ನಿವಾಸಿಗಳ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿ ವರ್ಷ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮಾರ್ಗದ ಮೂಲಕ ದರ್ಗಾಗೆ ಮೆರವಣಿಗೆ ಹೋಗುತ್ತಿತ್ತು. ಈ ವರ್ಷ ಅನುಮತಿ ಇಲ್ಲದೆಯೂ ಸಹ ಖಡಕ್ ಗಲ್ಲಿಗೆ ಮೆರವಣಿಗೆ ಎಂಟ್ರಿಯಾಗಿದೆ ಎನ್ನಲಾಗಿದೆ. ಮೆರವಣಿಗೆ ವೇಳೆ ‘ ಐ ಲವ್ ಮುಹಮ್ಮದ್’ ಎಂಬ ಘೋಷಣೆ ಕೂಗಿದ್ದಲ್ಲದೇ ಯಾವಾಗಲೂ ಬಾರದ ಮೆರವಣಿಗೆ ಈಗ ಯಾಕೆ ಬಂದಿದೆ? ತಮ್ಮ ಏರಿಯಾಗೆ ಬಂದು ಘೋಷಣೆ ಕೂಗಿದ್ದು ಯಾಕೆ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆದಿದೆ. ಬಳಿಕ ತಲ್ವಾರ್ ಕೂಡ ಪ್ರದರ್ಶನ ಮಾಡಿ ಗೂಂಡಾವರ್ತನೆ ತೋರಲಾಗಿದೆ. ಇದನ್ನೂ ಓದಿ: ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ಒಪ್ಪಿಗೆ

    ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೆರವಣಿಗೆಯನ್ನು ಸ್ಥಳದಿಂದ ಕಳುಹಿಸಿದ್ದಾರೆ. ಏಕಾಏಕಿ ಮೆರವಣಿಗೆ ಬಂದವರು ಮತ್ತು ಕಲ್ಲು ತೂರಿದವರ ವಿರುದ್ಧ ಕ್ರಮಕ್ಕೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮನಿ, ಇಬ್ಬರು ಡಿಸಿಪಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಅ.9ರಂದು ಹಾಸನಾಂಬ ದೇಗುಲ ಓಪನ್ – ಭಕ್ತರ ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ

    ಇನ್ನು ಪ್ರಕರಣ ಸಂಬಂಧ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಭೇಟಿ ನೀಡಿ ಸ್ಥಳೀಯರು, ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಡಕ್ ಗಲ್ಲಿಯಲ್ಲಿ ಎರಡು ಕೋಮಿನ ಜನರ ನಡುವೆ ಘರ್ಷಣೆ ನಡೆದಿದೆ. ಒಂದು ಧಾರ್ಮಿಕ ಕಾರ್ಯಕ್ರಮ ಇತ್ತು. ಒಂದು ರೂಟ್ ಫಿಕ್ಸ್ ಇದೆ, ಅದನ್ನ ಬಿಟ್ಟು ಬೇರೆ ರೂಟ್‌ನಲ್ಲಿ ಬಂದಿದ್ದಾರೆ. ಇದನ್ನ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಘರ್ಷಣೆ ಆಗಿದೆ. ಸ್ಥಳೀಯರು ಕಲ್ಲು ತೂರಾಟ ಆಗಿದೆ ಅಂತಾ ಕೇಸ್ ಕೊಟ್ಟಿದ್ದಾರೆ. ಯಾರು ತಪ್ಪು ಮಾಡಿದ್ದಾರೆ ಅವರ ಮೇಲೆ ಕ್ರಮ ಆಗುತ್ತೆ. ಯಾರಿಗೂ ಗಾಯ ಆಗಿಲ್ಲ, ಎರಡು ಕೋಮಿನ ಹಿರಿಯರು ಕೂಡಲೇ ಸರಿಪಡೆಸಿದ್ದಾರೆ. ಓರಿಜನಲ್ ರೂಟ್ ಬಿಟ್ಟು ಬಂದು ತಪ್ಪಾಗಿದೆ. ‘ಐ ಲವ್ ಮುಹಮ್ಮದ್’ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿಂತೆ ಮಹಾನಗರ ಪಾಲಿಕೆ ಅವರಿಗೆ ಹೇಳುತ್ತೇವೆ. ಅನುಮತಿ ಪಡೆದು ಬ್ಯಾನರ್ ಹಾಕಲು ಸೂಚನೆ ನೀಡುತ್ತೇವೆ ಎಂದು ತಿಳಿಸಿದರು. ಘಟನೆ ಸಂಬಂಧ 11 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಕಲಬುರಗಿಗೂ ಕಾಲಿಟ್ಟ ಐ ಲವ್ ಮೊಹಮ್ಮದ್ ಬ್ಯಾನರ್ ವಿವಾದ: ಹಿಂದೂ ಸಂಘಟನೆಗಳಿಂದ ಆಕ್ರೋಶ

  • ಕಲಬುರಗಿಗೂ ಕಾಲಿಟ್ಟ ಐ ಲವ್ ಮೊಹಮ್ಮದ್ ಬ್ಯಾನರ್ ವಿವಾದ: ಹಿಂದೂ ಸಂಘಟನೆಗಳಿಂದ ಆಕ್ರೋಶ

    ಕಲಬುರಗಿಗೂ ಕಾಲಿಟ್ಟ ಐ ಲವ್ ಮೊಹಮ್ಮದ್ ಬ್ಯಾನರ್ ವಿವಾದ: ಹಿಂದೂ ಸಂಘಟನೆಗಳಿಂದ ಆಕ್ರೋಶ

    ಕಲಬುರಗಿ: ಉತ್ತರ ಪ್ರದೇಶದ ಕಾನಪುರನಲ್ಲಿ ಆರಂಭವಾದ ಐ ಲವ್ ಮೊಹಮ್ಮದ್ ಬ್ಯಾನರ್ (I Love Muhammad Banner) ಸಾಕಷ್ಟು ವಿವಾದ ಸೃಷ್ಟಿಸಿದ್ದು, ಇದೀಗ ಈ ಐ ಲವ್ ಮೊಹಮದ್ ಎಂಬ ಬ್ಯಾನರ್ ಕಲಬುರಗಿಗೂ (Kalaburagi) ಕಾಲಿಟ್ಟಿದೆ.

    ವೈದ್ಯಕೀಯ ಶಿಕ್ಷಣ ಸಚಿವರ ತವರು ಕ್ಷೇತ್ರವಾದ ಜಿಲ್ಲೆಯ ಸೇಡಂ (Sedam) ತಾಲೂಕಿನ ಊಡಗಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಐ ಲವ್ ಬ್ಯಾನರ್ ಕಂಡು ಬಂದಿದ್ದು, ವಿವಿಧ ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

    ಜಿಲ್ಲೆಯ ಸೇಡಂ ತಾಲೂಕಿನ ಊಡಗಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಐ ಲವ್ ಮೊಹಮದ್ ಬ್ಯಾನರ್ ಅಳವಡಿಕೆ ಮಾಡಿದ್ದರಿಂದ ಕೆಲ ಹಿಂದೂ ಸಂಘಟನೆಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲೊಂದು ಅಚ್ಚರಿ ಪಕ್ರರಣ – ನವಜಾತ ಗಂಡು ಶಿಶುವಿನೊಳಗೆ ಮತ್ತೊಂದು ಶಿಶು ಪತ್ತೆ

    ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದ್ದು, ಹಿಂದೂ ಸಮಾಜವನ್ನು ಏನು ಮಾಡಲು ಹೊರಟಿದ್ದೀರಾ ಎಂದು ಹಿಂದೂ ಸಂಘಟನೆಗಳು ಕಿಡಿಕಾರಿವೆ. ಬ್ಯಾನರ್ ಅಳವಡಿಕೆ ವಿಚಾರ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸ್ ಇಲಾಖೆ, ತಕ್ಷಣವೇ ಐ ಲವ್ ಮೊಹಮದ್ ಬ್ಯಾನರ್ ಅನ್ನು ತೆರವು ಮಾಡಿದೆ.

  • ಬರೇಲಿಯ ‘ಐ ಲವ್ ಮುಹಮ್ಮದ್’ ಪ್ರತಿಭಟನೆಯಲ್ಲಿ ಹಿಂಸಾಚಾರ – ಮಾಸ್ಟರ್ ಮೈಂಡ್ ನದೀಮ್ ಅರೆಸ್ಟ್

    ಬರೇಲಿಯ ‘ಐ ಲವ್ ಮುಹಮ್ಮದ್’ ಪ್ರತಿಭಟನೆಯಲ್ಲಿ ಹಿಂಸಾಚಾರ – ಮಾಸ್ಟರ್ ಮೈಂಡ್ ನದೀಮ್ ಅರೆಸ್ಟ್

    ಲಕ್ನೋ: ಉತ್ತರ ಪ್ರದೇಶದ (Uttara Pradesh) ಬರೇಲಿಯಲ್ಲಿ ‘ಐ ಲವ್ ಮುಹಮ್ಮದ್’ ಪ್ರತಿಭಟನಾ ಮೆರವಣಿಗೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಮಾಸ್ಟರ್ ಮೈಂಡ್ ನದೀಮ್‌ನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

    ಇತ್ತೇಹಾದ್-ಎ-ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ ತೌಕೀರ್ ರಜಾ ಖಾನ್ ಅವರ ಆಪ್ತ ಸಹಾಯಕನಾಗಿರುವ ನದೀಮ್ ಘಟನೆ ಬಳಿಕ ತಲೆಮರಿಸಿಕೊಂಡಿದ್ದ. ಸದ್ಯ ಆತನನ್ನು ಶಹಜಹಾನ್‌ಪುರದಿಂದ ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ ವಾಟ್ಸಾಪ್ ಗ್ರೂಪ್ ರಚಿಸಿ ನದೀಮ್ ಹಿಂಸೆಗೆ ಪ್ರಚೋದನೆ ನೀಡಿದ್ದ ಎನ್ನಲಾಗಿದೆ. ಇದನ್ನೂ ಓದಿ: ‘ಐ ಲವ್ ಮುಹಮ್ಮದ್’ ಅಭಿಯಾನಕ್ಕೆ 5 ದಿನಗಳ ಪ್ಲ್ಯಾನಿಂಗ್ – ಯುಪಿ ಪೊಲೀಸರ ತನಿಖೆಯಲ್ಲಿ ಬಯಲು

    ಹಿಂಸಾಚಾರವನ್ನು ಪ್ರಚೋದನೆ ಮಾಡಿದ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದಿರುವ 26 ಶಂಕಿತರನ್ನು ವಿಚಾರಣೆ ನಡೆಸುತ್ತಿದ್ದು, ಈಗಾಗಲೇ ಮೌಲಾನಾ ತೌಕೀರ್ ರಜಾ ಸೇರಿದಂತೆ ಒಟ್ಟು 34 ಆರೋಪಿಗಳನ್ನು ಬಂಧಿಸಿ, ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ.

    ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ 5, ಬರದಾರಿಯಲ್ಲಿ 2 ಮತ್ತು ಕಿಲಾ, ಕ್ಯಾಂಟ್ ಮತ್ತು ಪ್ರೇಮ್‌ನಗರ ಪೊಲೀಸ್ ಠಾಣೆಗಳಲ್ಲಿ ತಲಾ 1 ಎಫ್‌ಐಆರ್ ದಾಖಲಿಸಲಾಗಿದ್ದು, 125 ಜನರನ್ನು ಹೆಸರಿಸಲಾಗಿದೆ. ಜೊತೆಗೆ ಮೂರು ಸಾವಿರ ಅಪರಿಚಿತರನ್ನು ಸಹ ಆರೋಪಿಗಳೆಂದು ಹೆಸರಿಸಲಾಗಿದೆ. ಬಂಧಿತ ಆರೋಪಿಗಳು ನ್ಯಾಯಧೀಶರ ಮುಂದೆ ಕ್ಷಮೆಯಾಚಿಸಿದ್ದು, ಆರೋಪಿಗಳಲ್ಲಿ ಹೆಚ್ಚಿನವರು ಯುವಕರು. ಗಲಭೆಗೆ ಕಾರಣವೇನೆಂದು ಕೇಳಿದಾಗ, ಅವರು ದಾರಿ ತಪ್ಪಿದ್ದಾರೆ ಮತ್ತು ಮತ್ತೆಂದೂ ಹಾಗೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

    ನಗರದಲ್ಲಿ ನಿಷೇಧಾಜ್ಞೆ ಹೊರತಾಗಿಯೂ, ಏಳು ಪೊಲೀಸ್ ಠಾಣೆ ಪ್ರದೇಶಗಳ ಐದು ಕೌನ್ಸಿಲರ್‌ಗಳು ಸೇರಿದಂತೆ 77 ಜನರು, ಖಲೀಲ್ ಶಾಲಾ ಮುಂದೆ ಜನಸಮೂಹವನ್ನು ನಿರ್ದೇಶಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ ಒಬ್ಬ ಕೌನ್ಸಿಲರ್‌ನನ್ನು ಬಂಧಿಸಲಾಗಿದ್ದು, ನಾಲ್ವರು ಕೌನ್ಸಿಲರ್‌ಗಳು ಸೇರಿದಂತೆ 76 ಜನರ ಪಾತ್ರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ‘ಐ ಲವ್ ಮುಹಮ್ಮದ್’ಗೆ ಟಕ್ಕರ್ – ಬಿಜೆಪಿ ಯುವ ಮೋರ್ಚಾದಿಂದ `ಐ ಲವ್ ಯೋಗಿ ಆದಿತ್ಯನಾಥ್’, `ಐ ಲವ್ ಬುಲ್ಡೋಜರ್’ ಕ್ಯಾಂಪೇನ್

  • ‘ಐ ಲವ್ ಮುಹಮ್ಮದ್’ ಅಭಿಯಾನಕ್ಕೆ 5 ದಿನಗಳ ಪ್ಲ್ಯಾನಿಂಗ್ – ಯುಪಿ ಪೊಲೀಸರ ತನಿಖೆಯಲ್ಲಿ ಬಯಲು

    ‘ಐ ಲವ್ ಮುಹಮ್ಮದ್’ ಅಭಿಯಾನಕ್ಕೆ 5 ದಿನಗಳ ಪ್ಲ್ಯಾನಿಂಗ್ – ಯುಪಿ ಪೊಲೀಸರ ತನಿಖೆಯಲ್ಲಿ ಬಯಲು

    – ಮೌಲಾನಾ ತೌಕೀರ್ ರಝಾ ಖಾನ್ ಸೇರಿ 50 ಮಂದಿ ವಶಕ್ಕೆ

    ಲಕ್ನೋ: ‘ಐ ಲವ್ ಮುಹಮ್ಮದ್’ (I Love Muhammad) ಪೋಸ್ಟರ್‌ಗಳ ಮೇಲಿನ ಆಡಳಿತಾತ್ಮಕ ಕ್ರಮವನ್ನು ವಿರೋಧಿಸಿ ಶುಕ್ರವಾರದ ಪ್ರಾರ್ಥನೆಯ ನಂತರ ಉತ್ತರ ಪ್ರದೇಶದ ಬರೇಲಿಯಲ್ಲಿ (Bareilly) ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ ಮೌಲಾನಾ ತೌಕೀರ್ ರಝಾ ಖಾನ್ (Maulana Tauqeer Raza) ಸೇರಿದಂತೆ ಐವತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

    ಹಿಂಸಾಚಾರಕ್ಕೆ ಐದು ದಿನ ಮೊದಲೇ ಸಂಚು ನಡೆದಿತ್ತು ಎಂದು ಪೊಲೀಸರ ಆರಂಭಿಕ ತನಿಖೆಯಲ್ಲಿ ತಿಳಿದು ಬಂದಿದೆ. ಪಿತೂರಿಯಲ್ಲಿ ಭಾಗಿಯಾಗಿರುವ ಎಲ್ಲಾ ವ್ಯಕ್ತಿಗಳನ್ನು ಗುರುತಿಸಿರುವ ಪೊಲೀಸರು, ಗಲಭೆಕೋರರು ಮತ್ತು ಅಶಾಂತಿಯಲ್ಲಿ ಭಾಗಿಯಾಗಿರುವ ಸಂಘಟಕರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ‘ಐ ಲವ್ ಮುಹಮ್ಮದ್’ಗೆ ಟಕ್ಕರ್ – ಬಿಜೆಪಿ ಯುವ ಮೋರ್ಚಾದಿಂದ `ಐ ಲವ್ ಯೋಗಿ ಆದಿತ್ಯನಾಥ್’, `ಐ ಲವ್ ಬುಲ್ಡೋಜರ್’ ಕ್ಯಾಂಪೇನ್

    ಹೆಚ್ಚುವರಿಯಾಗಿ ಎಲ್ಲಾ ಶಂಕಿತರ ಕರೆ ವಿವರ ದಾಖಲೆಗಳ ಪರಿಶೀಲನೆಗೆ ಮುಂದಾದ ಪೊಲೀಸರು, ಘರ್ಷಣೆಗಳು ನಡೆದ ಪ್ರದೇಶಗಳಿಂದ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಗಲಭೆಕೋರರನ್ನು ಗುರುತಿಸುತ್ತಿದ್ದಾರೆ. ಅಲ್ಲದೇ ನಗರದ ಮೂರರಿಂದ ನಾಲ್ಕು ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ. ಇದನ್ನೂ ಓದಿ: ಯುಪಿಯಲ್ಲಿ ‘ಐ ಲವ್ ಮುಹಮ್ಮದ್’ ವಿವಾದ ಉಲ್ಬಣ – ಪ್ರತಿಭಟನೆ ವೇಳೆ ಕಲ್ಲೆಸೆತ, ಪೊಲೀಸರಿಂದ ಲಾಠಿಚಾರ್ಜ್‌

    ಘಟನೆಯ ಬಳಿಕ ಬರೇಲಿಯಲ್ಲಿ ಮಾರುಕಟ್ಟೆಗಳು ಮುಚ್ಚಲ್ಪಟ್ಟಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ವದಂತಿಗಳನ್ನು ನಂಬಬೇಡಿ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ದಾವಣಗೆರೆ | ದೇವಸ್ಥಾನದ ಮುಂದೆ ತಲ್ವಾರ್‌ ಹಿಡಿದು ಓಡಾಡಿದ ಅನ್ಯಕೋಮಿನ ಯುವಕ – ವೀಡಿಯೋ ವೈರಲ್

    ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶವನ್ನು ಯಾರು ಆಳುತ್ತಿದ್ದಾರೆ ಎಂದು ಮೌಲಾನ ಮರೆತಿದ್ದಾರೆ. ಅವರು ನಗರವನ್ನು ತಡೆಯುವುದಾಗಿ ಬೆದರಿಕೆ ಹಾಕುತ್ತಿದ್ದರು. 2017ಕ್ಕಿಂತ ಮುಂಚೆ ಇಂತಹ ಘಟನೆಗಳು ಸಜಹವಾಗಿದ್ದವು, ನಾವು ಅಂಥವರಿಗೆ ಪಾಠವನ್ನು ಕಲಿಸಿದ್ದೇವೆ. ಅವರಿಗೆ ಅರ್ಥವಾಗುವ ಭಾಷೆಯಲ್ಲಿ ಉತ್ತರ ನೀಡುತ್ತಿದ್ದೇವೆ ಎಂದು ಖಾರವಾಗಿ ಉತ್ತರಿಸಿದ್ದಾರೆ. ಇದನ್ನೂ ಓದಿ: Madhya Pradesh | ತಾಯಿ ಎದುರೇ 5 ವರ್ಷದ ಮಗುವಿನ ಶಿರಚ್ಛೇದ

  • ‘ಐ ಲವ್ ಮುಹಮ್ಮದ್’ಗೆ ಟಕ್ಕರ್ – ಬಿಜೆಪಿ ಯುವ ಮೋರ್ಚಾದಿಂದ `ಐ ಲವ್ ಯೋಗಿ ಆದಿತ್ಯನಾಥ್’, `ಐ ಲವ್ ಬುಲ್ಡೋಜರ್’ ಕ್ಯಾಂಪೇನ್

    ‘ಐ ಲವ್ ಮುಹಮ್ಮದ್’ಗೆ ಟಕ್ಕರ್ – ಬಿಜೆಪಿ ಯುವ ಮೋರ್ಚಾದಿಂದ `ಐ ಲವ್ ಯೋಗಿ ಆದಿತ್ಯನಾಥ್’, `ಐ ಲವ್ ಬುಲ್ಡೋಜರ್’ ಕ್ಯಾಂಪೇನ್

    – ಬರೇಲಿಯಲ್ಲಿ ಹಿಂಸಾತ್ಮಕ ಪ್ರತಿಭಟನೆ; ಲಾಠಿಚಾರ್ಜ್

    ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) `ಐ ಲವ್ ಮುಹಮ್ಮದ್’ (I Love Muhammad) ಅಭಿಯಾನ ಉಲ್ಬಣಗೊಂಡ ಬೆನ್ನಲ್ಲೇ ಬಿಜೆಪಿ ಯುವ ಮೋರ್ಚಾ (BJP Yuva Morcha) ಟಕ್ಕರ್ ಕೊಡಲು `ಐ ಲವ್ ಯೋಗಿ ಆದಿತ್ಯನಾಥ್’ ಅಭಿಯಾನ ಪ್ರಾರಂಭಿಸಿದೆ.

    `ಐ ಲವ್ ಯೋಗಿ ಆದಿತ್ಯನಾಥ್’ (I Love Yogi Adityanath), ‘ಐ ಲವ್ ಬುಲ್ಡೋಜರ್’ (I Love Bulldozer) ಹೆಸರಿನಲ್ಲಿ ಬಿಜೆಪಿ ಯುವ ಮೋರ್ಚಾ ಅಭಿಯಾನ ಆರಂಭಿಸಿದ್ದು, ಲಕ್ನೋದ (Lucknow) ಪ್ರಮುಖ ರಸ್ತೆಗಳಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಸಿಎಂ ಮತ್ತು ಬುಲ್ಡೋಜರ್ ಕ್ರಮವನ್ನು ಸಮರ್ಥಿಸಿಕೊಂಡು ಬಿಜೆಪಿ ಯುವ ಮೋರ್ಚಾ ನಾಯಕರು ಫ್ಲೆಕ್ಸ್ ಅಳವಡಿಸಿದ್ದಾರೆ. ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಮಿತ್ ತ್ರಿಪಾಠಿ ನೇತೃತ್ವದಲ್ಲಿ ಫ್ಲೆಕ್ಸ್ ಅಳವಡಿಸಲಾಗಿದೆ. ಇದನ್ನೂ ಓದಿ: ಯುಪಿಯಲ್ಲಿ ‘ಐ ಲವ್ ಮುಹಮ್ಮದ್’ ವಿವಾದ ಉಲ್ಬಣ – ಪ್ರತಿಭಟನೆ ವೇಳೆ ಕಲ್ಲೆಸೆತ, ಪೊಲೀಸರಿಂದ ಲಾಠಿಚಾರ್ಜ್‌

    ಬರೇಲಿಯಲ್ಲಿ ಹಿಂಸಾತ್ಮಕ ಪ್ರತಿಭಟನೆ; ಲಾಠಿಚಾರ್ಜ್
    `ಐ ಲವ್ ಮುಹಮ್ಮದ್’ ಫ್ಲೆಕ್ಸ್ ವಿಚಾರವಾಗಿ ಕಾನ್ಪುರದಲ್ಲಿ ಮೊದಲು ವಿವಾದ ಆರಂಭವಾಗಿತ್ತು. ಶುಕ್ರವಾರ ಬರೇಲಿಯಲ್ಲಿ ನಡೆದ ಪ್ರತಿಭಟನೆ ಹಿಂಸತ್ಮಾಕ ಸ್ವರೂಪ ಪಡೆದುಕೊಂಡಿತ್ತು. ಶುಕ್ರವಾರದ ಪ್ರಾರ್ಥನೆ ಬಳಿಕ ಪ್ರತಿಭಟನೆ ಶುರುವಾಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದಾಗ ಲಾಠಿಚಾರ್ಜ್ ಮಾಡಲಾಗಿದೆ. ಪರಿಸ್ಥಿತಿ ಉದ್ವಿಗ್ನವಾದ ಹಿನ್ನೆಲೆ ಭದ್ರತೆ ಆರ್‌ಎಎಫ್ ಮತ್ತು ಪಿಎಸಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಮನೆಯಲ್ಲಿ ಹಣ ಕದಿಯುತ್ತಿದ್ದಳೆಂದು 13 ವರ್ಷದ ಮಗಳನ್ನೇ ಕತ್ತು ಹಿಸುಕಿಕೊಂದ ಕಟುಕ ತಂದೆ

    ಸೆ.4 ರಂದು ‘ಐ ಲವ್ ಮುಹಮ್ಮದ್’ ಪೋಸ್ಟರ್ ಹೊಂದಿರುವ ಟೆಂಟ್ ಅನ್ನು ಪೊಲೀಸರು ತೆಗೆಸಿದ್ದರು. ನಂತರ ಕಾನ್ಪುರದಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಧ್ವನಿ ಎತ್ತಲು ಮತ್ತು ಜ್ಞಾಪಕ ಪತ್ರವನ್ನು ಸಲ್ಲಿಸಲು ಧರ್ಮಗುರುವೊಬ್ಬರು ಕರೆ ನೀಡಿದ್ದರು. ಶುಕ್ರವಾರದ ಪ್ರಾರ್ಥನೆಯ ನಂತರ ಬರೇಲಿಯ ಇಸ್ಲಾಮಿಯಾ ಮೈದಾನದ ಬಳಿ ಭಾರಿ ಜನಸಮೂಹ ಜಮಾಯಿಸಿತ್ತು. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್‌ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 55 ಲಕ್ಷ ವಿತ್‌ಡ್ರಾ ಮಾಡಿದ ಸ್ವಾಮಿ ಚೈತನ್ಯಾನಂದ

    ಕೆಲವರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಿದ್ದಂತೆ ಜನಸಮೂಹ ಹೆಚ್ಚುತ್ತಲೇ ಇತ್ತು. ಕೆಲವು ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ನಂತರ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದರು. ಇದನ್ನೂ ಓದಿ: ರಾಹುಲ್, ಪ್ರಿಯಾಂಕಾ ಬಾಂಧವ್ಯದ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ಕೈಲಾಶ್

    ಸೆ.4 ರಂದು ಕಾನ್ಪುರದಲ್ಲಿ ಈದ್-ಎ-ಮಿಲಾದ್-ಉನ್-ನಬಿ ಮೆರವಣಿಗೆಯ ಸಂದರ್ಭದಲ್ಲಿ, ಮಾರ್ಗದುದ್ದಕ್ಕೂ ಟೆಂಟ್‌ನಲ್ಲಿ ‘ಐ ಲವ್ ಮುಹಮ್ಮದ್’ ಪೋಸ್ಟರ್ ಹಾಕಲಾಗಿತ್ತು. ಇದು ಗಲಾಟೆಗೆ ಕಾರಣವಾಗಿದೆ.

  • ಯುಪಿಯಲ್ಲಿ ‘ಐ ಲವ್ ಮುಹಮ್ಮದ್’ ವಿವಾದ ಉಲ್ಬಣ – ಪ್ರತಿಭಟನೆ ವೇಳೆ ಕಲ್ಲೆಸೆತ, ಪೊಲೀಸರಿಂದ ಲಾಠಿಚಾರ್ಜ್‌

    ಯುಪಿಯಲ್ಲಿ ‘ಐ ಲವ್ ಮುಹಮ್ಮದ್’ ವಿವಾದ ಉಲ್ಬಣ – ಪ್ರತಿಭಟನೆ ವೇಳೆ ಕಲ್ಲೆಸೆತ, ಪೊಲೀಸರಿಂದ ಲಾಠಿಚಾರ್ಜ್‌

    ಲಕ್ನೋ: ಉತ್ತರ ಪ್ರದೇಶದಲ್ಲಿ ‘ಐ ಲವ್‌ ಮುಹಮ್ಮದ್‌’ (I Love Muhammad) ಉಲ್ಬಣಗೊಂಡಿದೆ. ರಾಯಬರೇಲಿಯಲ್ಲಿ (Bareilly) ಪ್ರತಿಭಟನೆ ವೇಳೆ ಕಲ್ಲೆಸೆತವಾಗಿದ್ದು, ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದಾರೆ.

    ಶುಕ್ರವಾರದ ಪ್ರಾರ್ಥನೆ ಬಳಿಕ ಪ್ರತಿಭಟನೆ ಶುರುವಾಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದಾಗ ಲಾಠಿಚಾರ್ಜ್ ಮಾಡಲಾಗಿದೆ. ಪರಿಸ್ಥಿತಿ ಉದ್ವಿಗ್ನವಾದ ಹಿನ್ನೆಲೆ ಭದ್ರತೆ ಆರ್‌ಎಎಫ್ ಮತ್ತು ಪಿಎಸಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಸೆಕ್ಷನ್‌ 498 ಎ ಅತ್ಯಂತ ಕಠಿಣ ಸೆಕ್ಷನ್‌, ಹಲವು ಸುಳ್ಳು ಕೇಸ್‌ಗಳನ್ನು ರದ್ದು ಮಾಡಿದ್ದೇವೆ: ಸುಪ್ರೀಂ

    ಸೆ.4 ರಂದು ‘ಐ ಲವ್ ಮುಹಮ್ಮದ್’ ಪೋಸ್ಟರ್ ಹೊಂದಿರುವ ಟೆಂಟ್ ಅನ್ನು ಪೊಲೀಸರು ತೆಗೆಸಿದ್ದರು. ನಂತರ ಕಾನ್ಪುರದಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಧ್ವನಿ ಎತ್ತಲು ಮತ್ತು ಜ್ಞಾಪಕ ಪತ್ರವನ್ನು ಸಲ್ಲಿಸಲು ಧರ್ಮಗುರುವೊಬ್ಬರು ಕರೆ ನೀಡಿದ್ದರು. ಶುಕ್ರವಾರದ ಪ್ರಾರ್ಥನೆಯ ನಂತರ ಬರೇಲಿಯ ಇಸ್ಲಾಮಿಯಾ ಮೈದಾನದ ಬಳಿ ಭಾರಿ ಜನಸಮೂಹ ಜಮಾಯಿಸಿತ್ತು.

    ಕೆಲವರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಿದ್ದಂತೆ ಜನಸಮೂಹ ಹೆಚ್ಚುತ್ತಲೇ ಇತ್ತು. ಕೆಲವು ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ನಂತರ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದರು.

    ಉನ್ನತ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಬರೇಲಿಯಲ್ಲಿ ಸಾಮಾನ್ಯ ಸ್ಥಿತಿಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬರೇಲಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಭಾರತದ 38 ಬ್ಯಾಂಕುಗಳ ಮೂರು ಲಕ್ಷ ವಹಿವಾಟುಗಳ ದತ್ತಾಂಶ ಲೀಕ್?

    ಸೆ.4 ರಂದು ಕಾನ್ಪುರದಲ್ಲಿ ಈದ್-ಎ-ಮಿಲಾದ್-ಉನ್-ನಬಿ ಮೆರವಣಿಗೆಯ ಸಂದರ್ಭದಲ್ಲಿ, ಮಾರ್ಗದುದ್ದಕ್ಕೂ ಟೆಂಟ್‌ನಲ್ಲಿ ‘ಐ ಲವ್ ಮುಹಮ್ಮದ್’ ಪೋಸ್ಟರ್ ಹಾಕಲಾಗಿತ್ತು. ಇದು ಗಲಾಟೆಗೆ ಕಾರಣವಾಗಿದೆ.