Tag: IAS officer

  • ಐಎಎಸ್ ಹುದ್ದೆಗೆ ನಕಲಿ ಪ್ರಮಾಣಪತ್ರ: ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು

    ಐಎಎಸ್ ಹುದ್ದೆಗೆ ನಕಲಿ ಪ್ರಮಾಣಪತ್ರ: ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು

    – ಕೊಲೆ ಮಾಡಿಲ್ವಲ್ಲಾ ಎಂದ ಸುಪ್ರೀಂ ಕೋರ್ಟ್ ನ್ಯಾ. ಬಿ.ವಿ.ನಾಗರತ್ನ

    ನವದೆಹಲಿ: 2022ರ ಐಎಎಸ್ ಹುದ್ದೆಗೆ ಅರ್ಹತೆ ಪಡೆಯಲು ನಕಲಿ ದಾಖಲೆಗಳನ್ನು ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ವಿವಾದಿತ ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್‌ಗೆ (Puja Khedkar) ಸುಪ್ರೀಂ ಕೋರ್ಟ್ (Supreme Court) ನಿರೀಕ್ಷಣಾ ಜಾಮೀನು ಮಂಜೂರು (Anticipatory bail) ಮಾಡಿದೆ.

    2022ರ ನಾಗರಿಕ ಸೇವೆಗಳ ಪ್ರವೇಶ ಪರೀಕ್ಷೆಗೆ ಅರ್ಹತೆ ಪಡೆಯಲು ದಾಖಲೆಗಳನ್ನು ನಕಲಿ ಮಾಡಿ ಮತ್ತು ಒಬಿಸಿ ಕೋಟಾವನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಬುಧವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಪೂಜಾ ಖೇಡ್ಕರ್ ಮಾಜಿ ಐಎಎಸ್ ತರಬೇತಿ ಅಧಿಕಾರಿ, ಆಕೆ ಮಾದಕವಸ್ತು ಅಥವಾ ಭಯೋತ್ಪಾದನೆ ಕೇಸ್‌ನಲ್ಲಿ ಸಿಲುಕಿಕೊಂಡಿಲ್ಲ. ಅವರಿಗೆ ಹೈಕೋರ್ಟ್ ಜಾಮೀನು ನೀಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದೆ.ಇದನ್ನೂ ಓದಿ: 50ಕ್ಕೂ ಹೆಚ್ಚು ಕೊಲೆ ಮಾಡಿ ಪರಾರಿಯಾಗಿದ್ದ ಸಿರಿಯಲ್‌ ಕಿಲ್ಲರ್‌ ʻಡಾಕ್ಟರ್‌ ಡೆತ್‌ʼ ಅರೆಸ್ಟ್‌!

    ಆದರೆ ಸುಪ್ರೀಂ ಕೋರ್ಟ್ ನೀಡಿದ ನಿರೀಕ್ಷಣಾ ಜಾಮೀನನ್ನು ದೆಹಲಿ ಪೊಲೀಸರು ತೀವ್ರವಾಗಿ ವಿರೋಧಿಸಿದ್ದು, ಆರೋಪಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ನೀವು ತನಿಖೆಯನ್ನು ಪೂರ್ಣಗೊಳಿಸಿ, ಆರೋಪಿ ಈ ಪ್ರಕರಣದಿಂದಾಗಿ ಎಲ್ಲವನ್ನೂ ಕಳೆದುಕೊಂಡಿದ್ದಾಳೆ. ಆಕೆಗೆ ಎಲ್ಲಿಯೂ ಕೆಲಸ ಸಿಗುವುದಿಲ್ಲ. ಆದರೆ, ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಹೈಕೋರ್ಟ್ ಅರ್ಜಿದಾರರಿಗೆ ಜಾಮೀನು ನೀಡಬೇಕಾಗಿದ್ದ ಸೂಕ್ತ ಪ್ರಕರಣ ಇದು ಎಂದು ತಿಳಿಸಿತು.

    ಏನಿದು ಪ್ರಕರಣ?
    ಕೇಂದ್ರ ಲೋಕಸೇವಾ ಆಯೋಗದ (UPSC) ಪರೀಕ್ಷೆ ಬರೆದಿದ್ದ ಖೇಡ್ಕರ್, ತಮ್ಮ ಕುಟುಂಬದ ಆದಾಯದ ಸ್ಥಿತಿ ಮತ್ತು ಇತರ ವಿವರಗಳನ್ನು ಸುಳ್ಳು ಮತ್ತು ತಪ್ಪಾಗಿ ನೀಡಿದ ಹಿನ್ನೆಲೆ ಆಕೆಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ದಾಖಲೆಗಳನ್ನು ನಕಲಿ ಮಾಡಿದ ಆರೋಪದ ಮೇಲೆ ಯುಪಿಎಸ್‌ಸಿ ಅವರ ಆಯ್ಕೆಯನ್ನು ರದ್ದುಗೊಳಿಸಿತ್ತು. ಇನ್ಮುಂದೆ ಆಕೆಗೆ ಯುಪಿಎಸ್‌ಸಿ ಪರೀಕ್ಷೆಗೆ ಹಾಜರಾಗದಂತೆ ನಿರ್ಬಂಧ ವಿಧಿಸಿತು. ಒಂದು ತಿಂಗಳ ಬಳಿಕ ಕೇಂದ್ರ ಸರ್ಕಾರ ಆಕೆಯನ್ನು ಕರ್ತವ್ಯದಿಂದ ವಜಾ ಮಾಡಿತ್ತು.ಇದನ್ನೂ ಓದಿ: ಸರ್ಕಾರಕ್ಕೆ 2 ವರ್ಷ – ಸಿಎಂಗೆ `ದಿವಾಳಿ ಮಾಡೆಲ್ ಆಫ್ ಕರ್ನಾಟಕ’ ಬಿರುದು ಕೊಟ್ಟ ಬಿಜೆಪಿ

  • 10 ರೂ.ಗಾಗಿ ನಿವೃತ್ತ IAS ಅಧಿಕಾರಿಗೆ ಬಸ್‌ ಕಂಡಕ್ಟರ್‌ನಿಂದ ಹಲ್ಲೆ

    10 ರೂ.ಗಾಗಿ ನಿವೃತ್ತ IAS ಅಧಿಕಾರಿಗೆ ಬಸ್‌ ಕಂಡಕ್ಟರ್‌ನಿಂದ ಹಲ್ಲೆ

    ಜೈಪುರ: 10 ರೂ.ಗಾಗಿ ನಿವೃತ್ತ ಐಎಎಸ್‌ ಅಧಿಕಾರಿಯೊಬ್ಬರ (Retired IAS Officer) ಮೇಲೆ ಬಸ್‌ ಕಂಡಕ್ಟರ್‌ ಹಲ್ಲೆ ನಡೆಸಿರುವ ಘಟನೆ ಜೈಪುರದಲ್ಲಿ ನಡೆದಿದೆ.

    ನಿವೃತ್ತ ಅಧಿಕಾರಿ ಆರ್.ಎಲ್. ಮೀನ ಹಲ್ಲೆಗೆ ಒಳಗಾದ ನಿವೃತ್ತ ಅಧಿಕಾರಿ. ಇವರು ಆಗ್ರಾ ರಸ್ತೆಯ ಕನೋಟಾ ಬಸ್ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ, ಕಂಡಕ್ಟರ್ (Bus Conductor) ನಿಲ್ದಾಣ ಬಂದಿದೆ ಎಂದು ತಿಳಿಸಿಲ್ಲ. ನಂತರ ಬಸ್ ನೈಲಾದಲ್ಲಿ ಮುಂದಿನ ನಿಲ್ದಾಣ ತಲುಪಿತು. ಮುಂದಿನ ನಿಲ್ದಾಣಕ್ಕೆ ಹೆಚ್ಚುವರಿ 10 ರೂ. ಪಾವತಿಸಿ ಎಂದು ಕಂಡಕ್ಟರ್‌ ಕೇಳಿದ್ದಾರೆ. ಈ ವೇಳೆ ಇಬ್ಬರ ನಡುವೆ ಜಗಳವಾಗಿದೆ.

    ಶುಕ್ರವಾರ ಈ ಘಟನೆ ನಡೆದಿದ್ದು, ಆ ಘಟನೆಯ ವೀಡಿಯೋ ವೈರಲ್ ಆಗಿದೆ. ಬಲಿಪಶು ಸರಿಯಾದ ಬಸ್ ನಿಲ್ದಾಣವನ್ನು ತಪ್ಪಿಸಿಕೊಂಡಾಗ, ಮುಂದಿನ ನಿಲ್ದಾಣದವರೆಗೆ ಪ್ರಯಾಣಕ್ಕೆ 10 ರೂ. ಹೆಚ್ಚುವರಿ ಶುಲ್ಕ ಪಾವತಿಸಲು ಕಂಡಕ್ಟರ್‌ ಕೇಳಿದ್ದರು. ಹೆಚ್ಚುವರಿ ಪ್ರಯಾಣ ದರ ನೀಡಲು ನಿರಾಕರಿಸಿದ್ದಕ್ಕೆ, ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಬಂಡೀಪುರದಲ್ಲಿ ರಸ್ತೆಗಿಳಿದ ಗಜರಾಜ – ನಾಲ್ಕು ಕಿಮೀ ಟ್ರಾಫಿಕ್ ಜಾಮ್!

    ಹೆಚ್ಚುವರಿ ಶುಲ್ಕದ ವಿಚಾರಕ್ಕೆ ಕಂಡಕ್ಟರ್ ಮತ್ತು ನಿವೃತ್ತ ಅಧಿಕಾರಿ ಮೀನ ಅವರ ನಡುವೆ ವಾಗ್ವಾದ ನಡೆಯಿತು. ಆದರೆ, ಮೀನ ಹಣ ನೀಡಲು ನಿರಾಕರಿಸಿದ್ದಾರೆ. ಕಂಡಕ್ಟರ್, ಮೀನ ಅವರನ್ನು ತಳ್ಳುತ್ತಿದ್ದಂತೆ, ಇವರು ಕಂಡಕ್ಟರ್‌ಗೆ ಕಪಾಳಮೋಕ್ಷ ಮಾಡಿದ್ದಾರೆ. ನಂತರ ಕಂಡಕ್ಟರ್‌ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ:  ಹೆಲ್ಮೆಟ್ ಹಾಕದಿದ್ರೆ ಪೆಟ್ರೋಲ್ ಇಲ್ಲ; ಸಾವು-ನೋವು ತಡೆಗೆ ಯುಪಿ ಸರ್ಕಾರ ಸಜ್ಜು

  • ಮುಡಾ ಕೇಸ್‌ನಲ್ಲಿ ಬಿಗ್‌ ಅಪ್ಡೇಟ್‌ – ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ಸದ್ದಿಲ್ಲದೇ ತನಿಖೆ ಮುಗಿಸಿದ ಸರ್ಕಾರ

    ಮುಡಾ ಕೇಸ್‌ನಲ್ಲಿ ಬಿಗ್‌ ಅಪ್ಡೇಟ್‌ – ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ಸದ್ದಿಲ್ಲದೇ ತನಿಖೆ ಮುಗಿಸಿದ ಸರ್ಕಾರ

    ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಭ್ರಷ್ಟಾಚಾರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಒಂದೆಡೆ ಲೋಕಾಯುಕ್ತ ತನಿಖೆ (Lokayukta Investigation) ನಡೆಯುತ್ತಿದೆ. ಈ ನಡುವೆ ಬದಲಿ ನಿವೇಶನಗಳ ಹಂಚಿಕೆಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಇಲಾಖಾ ಹಂತದಲ್ಲಿ ತನಿಖೆ ನಡೆಸಲಾಗಿದ್ದು, ಸಲ್ಲಿದ್ದಲದೇ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

    ಐಎಎಸ್ ಅಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಮಿತಿಯ ತನಿಖಾ ವರದಿಯನ್ನಾಧಿರಿ ಸರ್ಕಾರ ಅಧೀನ ಕಾರ್ಯದರ್ಶಿ ಕೆ.ಲತಾ ಅವರು ಮುಡಾದ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರಿಗೆ ನೋಟಿಸ್‌ ನೀಡಿದ್ದಾರೆ.

    ಮುಡಾ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಮಿತಿಯ ನೇತೃತ್ವದಲ್ಲಿ ಇಲಾಖೆ ಮಟ್ಟದಲ್ಲಿ ತನಿಖೆ ನಡೆಸಲಾಗಿತ್ತು. ಬಳಿಕ ಆ ವರದಿಯನ್ನ ಇಲಾಖೆಗೆ ಸಲ್ಲಿಸಲಾಗಿತ್ತು. ಈ ವರದಿಯಲ್ಲಿ 8 ಪ್ರಕರಣಗಳಲ್ಲಿ ಬದಲಿ ನಿವೇಶನ ಹಂಚಿಕೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಎಂಬುದು ಸಾಕ್ಷಿ ಸಮೇತ ಸಾಭೀತಾಗಿದೆ. ಇದರಿಂದ ಮುಡಾಗೆ ಹಾಗೂ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ನಷ್ಟ ಉಂಟಾಗಿದೆ, ದಿನೇಶ್‌ ಕುಮಾರ್‌ ಅವರು ಮುಡಾ ಆಯುಕ್ತರಾಗಿದ್ದ ಸಂದರ್ಭದಲ್ಲಿ ಈ ನಷ್ಟ ಉಂಟಾಗಿದೆ ಎಂಬ ಅಂಶಗಳನ್ನ ಉಲ್ಲೇಖ ಮಾಡಲಾಗಿದೆ. ವರಧಿಯನ್ನಾಧರಿಸಿ ಸರ್ಕಾರದ ಅಧೀನ ಕಾರ್ಯದರ್ಶಿಗಳು ದಿನೇಶ್‌ ಕುಮಾರ್‌ ಅವರಿಗೆ ನೋಟಿಸ್‌ ಜಾರಿಗೊಳಿಸಿದ್ದಾರೆ.

    ನೋಟಿಸ್‌ ಕೊಟ್ಟಿರುವ ಸರ್ಕಾರ ಅಧೀನ ಕಾರ್ಯದರ್ಶಿ ಕೆ.ಲತಾ, ವರದಿಯಲ್ಲಿ ಉಲ್ಲೇಖವಾಗಿರುವ ಎಲ್ಲಾ ಹಂತದ ಅಧಿಕಾರಿಗಳ ಸಂಪೂರ್ಣ ಮಾಹಿತಿ ಕೊಡಬೇಕು. ಸರ್ಕಾರಕ್ಕೆ ಉಂಟಾದ ಆರ್ಥಿಕ ನಷ್ಟದ ಬಗ್ಗೆ ಅಂದಾಜು ವಿವರ ಸಲ್ಲಿಸಬೇಕು. ಆ ಎಲ್ಲಾ ಕಡತಗಳ ದೃಢೀಕೃತ ಆದೇಶ ಪ್ರತಿಗಳನ್ನ ನೀಡಬೇಕೆಂದು ನೋಟೀಸ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಗುಲಾಬ್ ಜಾಮೂನ್ ಅಂತ ನಂಬರ್ ಸೇವ್ ಮಾಡಿಕೊಂಡಿದ್ದ ಶ್ವೇತಾ – ವರ್ತೂರ್‌ ಪ್ರಕಾಶ್‌ಗೆ ಬಂಧನ ಭೀತಿ?

    ಈ ವಿಚಾರದಲ್ಲಿ ಯಾವುದೇ ಒಬ್ಬ ನೌಕರನನ್ನ ಪ್ರಕರಣದಿಂದ ಹೊರಗುಳಿಯಲು ಆಸ್ಪದ ಕೊಟ್ಟಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸುತ್ತೇವೆಂದು ಇಂದಿನ ಆಯುಕ್ತರಿಗೆ ಎಚ್ಚರಿಕೆ ಸಹ ಕೊಟ್ಟಿದ್ದಾರೆ. ಈ ಕುರಿತು ಇಂದಿನ ಆಯುಕ್ತರಿಗೆ ಸರ್ಕಾರದ ಅಧೀನ ಕಾರ್ಯದರ್ಶಿ ಬರೆದಿರುವ ಸುತ್ತೋಲೆ ಪಬ್ಲಿಕ್‌ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಸಿರಿಯಾದಲ್ಲಿ ಬಿಕ್ಕಟ್ಟು – ಅಲ್ಲೋಲ ಕಲ್ಲೋಲ ಎಬ್ಬಿಸಿದೆ ಆಕೆಯ ಒಂದು ವೀಡಿಯೋ; ದೊಡ್ಡಣ್ಣನ ಕುತಂತ್ರದಿಂದ ಹೀಗಾಯ್ತಾ?

  • MUDA Case | ಮುಡಾ ಬ್ರಹ್ಮಾಂಡ ಭ್ರಷ್ಟಾಚಾರಕ್ಕಿತ್ತಾ ಐಎಎಸ್ ಅಧಿಕಾರಿಯ ಶ್ರೀರಕ್ಷೆ?

    MUDA Case | ಮುಡಾ ಬ್ರಹ್ಮಾಂಡ ಭ್ರಷ್ಟಾಚಾರಕ್ಕಿತ್ತಾ ಐಎಎಸ್ ಅಧಿಕಾರಿಯ ಶ್ರೀರಕ್ಷೆ?

    – 144 ಫೈಲ್‌ ತೆಗೆದುಕೊಂಡು ಹೋದದ್ದು ನಿಜವೇ?
    – ಲೋಕಾಯುಕ್ತ ಸರ್ಚ್‌ ವಾರೆಂಟ್‌ನಲ್ಲಿ ಸ್ಫೋಟಕ ಮಾಹಿತಿ

    ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ) ಸೈಟು ಹಂಚಿಕೆ ಅಕ್ರಮದ (MUDA Scam) ತನಿಖೆ ಚುರುಕು ಪಡೆದಿರುವ ಹೊತ್ತಿನಲ್ಲೇ ಮತ್ತೊಂದು ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಇದರಿಂದ ಮುಡಾ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನಗರಾಭಿವೃದ್ಧಿ ಇಲಾಖೆಯ ಐಎಎಸ್ ಅಧಿಕಾರಿಯ ಶ್ರೀರಕ್ಷೆ ಇತ್ತಾ? ಅನ್ನೂ ಅನುಮಾನಕ್ಕೆ ಲೋಕಾಯುಕ್ತದ (Lokayukta) ಅಧಿಕೃತ ದಾಖಲೆ ಎಡೆಮಾಡಿಕೊಟ್ಟಿದೆ.

    ಹೌದು. ಬ್ರಹ್ಮಾಂಡ ಭ್ರಷ್ಟಾಚಾರದ ಹಿನ್ನೆಲೆ ಮುಡಾ ಮೂಡಾದಲ್ಲಿನ ದಾಖಲೆ ಜಪ್ತಿಗೆ ಲೋಕಾಯುಕ್ತ ಸರ್ಚ್ ವಾರೆಂಟ್ (Search Warrant) ಸಿದ್ಧಪಡಿಸಿಕೊಂಡಿತ್ತು. ಜೂನ್ 28ರ ಸಂಜೆ ಸರ್ಚ್ ವಾರೆಂಟ್ ಸಿದ್ಧವಾಗಿತ್ತು. ಸರ್ಚ್ ವಾರೆಂಟ್ ಸಿದ್ಧವಾದ 12 ತಾಸಿನೊಳಗೆ (ಜೂನ್ 29ರ ಬೆಳಗ್ಗೆ ) ಸಿನಿಮೀಯ ರೀತಿಯಲ್ಲಿ ಮೈಸೂರು ಪ್ರಾಧಿಕಾರಕ್ಕೆ ಐಎಎಸ್‌ ಅಧಿಕಾರಿ ಬಂದಿದ್ದರು. ಒಟ್ಟು 144 ಕಡತಗಳನ್ನ ತೆಗೆದುಕೊಂಡು ಹೋಗಿದ್ದರು ಲೋಕಾಯುಕ್ತವೇ ತನ್ನ ರಿಪೋರ್ಟ್‌ನಲ್ಲಿ ಉಲ್ಲೇಖಿಸಿತ್ತು. ಇನ್ನೂ ನಾವು ದಾಳಿ ಮಾಡಿ ಪ್ರಯೋಜನ ಇಲ್ಲ ಎಂದು ಲಿಖಿತವಾಗಿ ಉಲ್ಲೇಖಿಸಿ ಲೋಕಾಯುಕ್ತ ಸರ್ಚ್ ವಾರೆಂಟ್ ರದ್ದು ಪಡಿಸಿಕೊಂಡಿತ್ತು ಎಂದು ದಾಖಲೆಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: MUDA Scam| ನೋಟಿಸ್‌ ಇಲ್ಲದೇ ರಾತ್ರಿ ದಿಢೀರ್‌ ಲೋಕಾ ಎಸ್‌ಪಿ ಕಚೇರಿಗೆ ಭೇಟಿ ನೀಡಿದ ಸಿಎಂ ಬಾಮೈದ!

    ಸರ್ಚ್ ವಾರೆಂಟ್‌ನಲ್ಲಿ ಇದ್ದ ಅಂಶಗಳೇನು?
    ಜೂನ್ 28ರ ಸಂಜೆ ಲೋಕಾಯುಕ್ತ ಸರ್ಚ್‌ ವಾರಂಟ್‌ನಲ್ಲಿ ಹಲವು ಸ್ಫೋಟಕ ಮಾಹಿತಿ ಬೆಳಿಕಿಗೆ ಬಂದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್ ಹಂಚಿಕೆಯಲ್ಲಿ ಗೋಲ್ ಮಾಲ್ ಆಗುತ್ತಿದೆ. ಬದಲಿ ನಿವೇಶ ಕೊಡುವ ವಿಚಾರದಲ್ಲಿ ಎಲ್ಲಾ ಕಾನೂನು ಉಲ್ಲಂಘನೆ ಆಗಿದೆ. ಎಲ್ಲಾ ಅಕ್ರಮ ನೀತಿಗಳ ಅನುಸರಿಸಿ ನಿವೇಶನ ಮಂಜೂರು ಮಾಡಲಾಗುತ್ತಿದೆ, ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ. ಇದರ ಬಗ್ಗೆ ನೋಟಿಸ್ ಕೊಟ್ಟು ದಾಖಲೆ ಕೇಳಿದರೆ ಅಧಿಕಾರಿಗಳು ಯಾವ ದಾಖಲೆ ಕೊಡುವುದಿಲ್ಲ. ದಾಖಲೆ ಕೇಳಿದ ಕೂಡಲೇ ದಾಖಲೆ ನಾಶಮಾಡುತ್ತಾರೆ. ಅಲ್ಲದೇ ದಾಖಲೆಗಳನ್ನು ಸುಟ್ಟು ಹಾಕುತ್ತಾರೆ. ಇದಕ್ಕಾಗಿ ದಿಢೀರ್ ದಾಳಿ ಮಾಡಿ ದಾಖಲೆ ಜಪ್ತಿ ಮಾಡುವ ಅವಶ್ಯಕತೆ ಇದೆ. ನಗರ ಯೋಜನಾ ವಿಭಾಗ, ಮುಡಾ ಸೂಪರಿಂಟೆಂಡೆಂಟ್ ಕಚೇರಿಯಲ್ಲಿನ ಮಹತ್ವದ ದಾಖಲೆ ಜಪ್ತಿ ಮಾಡಲೇ ಬೇಕಾಗಿದೆ. ಹೀಗಾಗಿ ದಿಢೀರ್ ದಾಳಿ ಮಾಡಲು ಸರ್ಚ್ ವಾರೆಂಟ್ ಜಾರಿ ಮಾಡಲಾಗಿತ್ತು. ಇದನ್ನೂ ಓದಿ: ಸಿದ್ದರಾಮಯ್ಯಗೆ 120 ಕೋಟಿ ರೂ. ಪರಿಹಾರ ಕೊಡಬೇಕಿತ್ತು: ಸಿಎಂ ಪರ ಮಾಜಿ ಶಾಸಕ ಬ್ಯಾಟಿಂಗ್‌

    ಟೈಂ ಲೈನ್:
    * ಜೂನ್ 28ರ ಸಂಜೆ ಸರ್ಚ್ ವಾರೆಂಟ್ ಸಿದ್ಧ.
    * ಜೂನ್ 29ರ ಬೆಳಗ್ಗೆ ಐಎಎಸ್ ಅಧಿಕಾರಿ ಪ್ರಾಧಿಕಾರಕ್ಕೆ ಎಂಟ್ರಿ.
    * ಜುಲೈ 1ಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಪ್ರಾಧಿಕಾರಕ್ಕೆ ದಿಢೀರ್ ಆಗಮನ ಸಭೆ.
    * ಜುಲೈ 2ಕ್ಕೆ ಮೈಸೂರು ಲೋಕಾಯುಕ್ತರ ವರ್ಗಾವಣೆ
    * ಈ ಎಲ್ಲಾ ಬೆಳವಣಿಗೆಗಳನ್ನು ಲಿಖಿತವಾಗಿ ಉಲ್ಲೇಖಿಸಿ ಸರ್ಚ್ ವಾರೆಂಟ್ ರದ್ದು.
    * ಐಎಎಸ್ ಅಧಿಕಾರಿ ಬಂದು 144 ಫೈಲ್‌ ತೆಗೆದುಕೊಂಡು ಹೋಗಿದ್ದಾರೆ ಎಂದು ಲೋಕಾಯುಕ್ತ ರೀಪೋರ್ಟ್

  • ಅಕ್ರಮ ಹಣ ವರ್ಗಾವಣೆ ಕೇಸ್‌ – ಹಿರಿಯ ಐಎಎಸ್‌ ಅಧಿಕಾರಿ, ಆರ್‌ಜೆಡಿ ಮಾಜಿ ಶಾಸಕ ಅರೆಸ್ಟ್‌

    ಅಕ್ರಮ ಹಣ ವರ್ಗಾವಣೆ ಕೇಸ್‌ – ಹಿರಿಯ ಐಎಎಸ್‌ ಅಧಿಕಾರಿ, ಆರ್‌ಜೆಡಿ ಮಾಜಿ ಶಾಸಕ ಅರೆಸ್ಟ್‌

    ಪಾಟ್ನಾ: ಬಿಹಾರ ವಿದ್ಯುತ್ ಸಚಿವಾಲಯದಲ್ಲಿ (Bihar Power Ministry) ನಡೆದಿದೆ ಎನ್ನಲಾದ ಟೆಂಡರ್ ಹಗರಣ ಪ್ರಕರಣಕ್ಕೆ ಸಬಂಧಿಸಿದಂತೆ ಬಿಹಾರದ ಹಿರಿಯ ಐಎಎಸ್ ಅಧಿಕಾರಿ ಮತ್ತು ಆರ್‌ಜೆಡಿ ಮಾಜಿ ಶಾಸಕರೊಬ್ಬರನ್ನ ಜಾರಿ ನಿರ್ದೇಶನಾಲಯ (ED) ಬಂಧಿಸಿದೆ.

    ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಸೆಕ್ಷನ್‌ಗಳ ಅಡಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಸಂಜೀವ್‌ ಹನ್ಸ್‌ ಅವರನ್ನ ಪಾಟ್ನಾದಲ್ಲಿ ಮತ್ತು ಗುಲಾಬ್‌ ಯಾದವ್‌ ಅವರನ್ನ ದೆಹಲಿಯಲ್ಲಿ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಬಿಹಾರದ ವಿದ್ಯುತ್ ಸಚಿವಾಲಯದ ಟೆಂಡರ್ ಹಗರಣದಲ್ಲಿ ಭಾಗಿಯಾಗಿದ್ದರು ಎಂಬ ಆರೋಪ ಇವರ ಮೇಲಿದೆ. ಇದನ್ನೂ ಓದಿ: ತಲೆ ಸೀಳಿದ ಬುಲೆಟ್‌, ಬೆರಳು ಕಟ್‌; ಭೀಕರ ಹತ್ಯೆಯಾದ ಹಮಾಸ್‌ ಮುಖ್ಯಸ್ಥನ ದೇಹ ಸ್ಥಿತಿ ಹೇಗಿತ್ತು?

    ಬಿಹಾರ ಕೇಡರ್ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ರಾಜ್ಯ ವಿದ್ಯುತ್ ಇಲಾಖೆಗೆ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಕಾನೂನು ಜಾರಿ ನಿರ್ದೇಶನಾಲಯ ಅವರ ನಿವಾಸದ ಮೇಲೆ ಮೊದಲು ದಾಳಿ ನಡೆಸಿತ್ತು. ಶೋಧ ಕಾರ್ಯಾಚರಣೆ ಬಳಿಕ ಅವರನ್ನು ಸಾಮಾನ್ಯ ಆಡಳಿತ ವಿಭಾಗಕ್ಕೆ ಆಗಸ್ಟ್‌ನಲ್ಲಿ ವರ್ಗಾಯಿಸಲಾಗಿತ್ತು. ಝಂಜಾರ್ಪುರ ಮಾಜಿ ಶಾಸಕ ಗುಲಾಬ್ ಯಾದವ್, ಹನ್ಸ್ ಅವರ ನಿಕಟವರ್ತಿ ಎಂದು ಮೂಲಗಳು ತಿಳಿಸಿವೆ.

    ಹನ್ಸ್ ಹಾಗೂ ಯಾದವ್ ಅವರಿಗೆ ಸೇರಿದ ಹಲವು ಆಸ್ತಿಗಳ ಮೇಲೆ ಗುರುವಾರ ಕೊನೆಯ ಸುತ್ತಿನ ದಾಳಿ ನಡೆಸಿ ಶೋಧ ಕಾರ್ಯ ನಡೆಸಿತ್ತು. ಬಳಿಕ ಶುಕ್ರವಾರ ಪಾಟ್ನಾದಲ್ಲಿ ಹನ್ಸ್ ಅವರನ್ನು ಬಂಧಿಸಿದ್ದರೆ, ಯಾದವ್ ಅವರನ್ನು ಹಣ ದುರ್ಬಳಕೆ ಕಾಯ್ದೆಯಡಿ ದೆಹಲಿಯಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: Chattisgarh | ಅಬುಜ್ಮಾರ್ ಎನ್‌ಕೌಂಟರ್‌ನಲ್ಲಿ 38 ಮಾವೋವಾದಿಗಳ ಹತ್ಯೆ

    ಬಿಹಾರ ಪೊಲೀಸರು ದಾಖಲಿಸಿದ ಎಫ್ಐಆರ್‌ನಲ್ಲಿ ಹಣ ದುರುಪಯೋಗ ಆರೋಪ ಹೊರಿಸಲಾಗಿದೆ. ಸರ್ಕಾರಿ ಉದ್ಯೋಗ ಕೊಡಿಸಲು ನೆರವಾಗುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವೂ ಹನ್ಸ್ ಮೇಲಿತ್ತು. ಆದರೆ ಪಾಟ್ನಾ ಹೈಕೋರ್ಟ್ ಈ ಪ್ರಕರಣವನ್ನು ಕಳೆದ ಆಗಸ್ಟ್‌ನಲ್ಲಿ ವಜಾಗೊಳಿಸಿತ್ತು. ಇದನ್ನೂ ಓದಿ: ಬಿಬಿಎಂಪಿಯಿಂದ ತುರ್ತು ಇ-ಖಾತಾ ಪಡೆಯಲು ಮಾರ್ಗಸೂಚಿ ಬಿಡುಗಡೆ – ಗೈಡ್‌ಲೈನ್‌ನಲ್ಲಿ ಏನಿದೆ?

  • IAS ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ – ಕೇಂದ್ರ ಸರ್ಕಾರ ಆದೇಶ

    IAS ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ – ಕೇಂದ್ರ ಸರ್ಕಾರ ಆದೇಶ

    ಮುಂಬೈ: ಕೇಂದ್ರ ಸರ್ಕಾರವು ಭಾರತೀಯ ಆಡಳಿತ ಸೇವೆಯಿಂದ (IAS) ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ (Puja Khedkar) ಅವರನ್ನ ತಕ್ಷಣದಿಂದಲೇ ಜಾರಿಗೆ ಬರುವಂತೆ ವಜಾಗೊಳಿಸಿದೆ ಎಂದು ವರದಿಯಾಗಿದೆ.

    1954ರ ಐಎಎಸ್ (Exam) ನಿಯಮಗಳ 12ನೇ ನಿಯಮದ ಅಡಿಯಲ್ಲಿ ಕೇಂದ್ರ ಸರ್ಕಾರವು (Central Govt) ಐಎಎಸ್‌ ಸೇವೆಯಿಂದ ವಜಾಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕೋಲ್ಕತ್ತಾ ವೈದ್ಯೆ ಅತ್ಯಾಚಾರಿ ಆರೋಪಿಗೆ ಜಾಮೀನು ನೀಡಬೇಕೆ? – ಸಿಬಿಐ ಪರ ವಕೀಲರ ವಿರುದ್ಧ ಕೋರ್ಟ್‌ ಗರಂ

    ವಿಶೇಷಚೇತನ ಹಾಗೂ ಒಬಿಸಿ ಕೋಟಾ ದುರ್ಬಳಕೆ ಮಾಡಿಕೊಂಡಿದ್ದಾರೆಂಬ ಆರೋಪ ಮೇಲೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ (UPSC) ಈ ಹಿಂದೆ ಎಫ್‌ಐಆರ್‌ ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪೂಜಾ ಅವರ ಆಯ್ಕೆಯನ್ನು ವಜಾಗೊಳಿಸಿದೆ. ಇದನ್ನೂ ಓದಿ: Maharashtra: ಪ್ರೊಬೇಷನರಿ IAS ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ ಎಫ್‌ಐಆರ್‌!

    ತಮ್ಮ ಉದ್ಯೋಗ ಭದ್ರತೆಗಾಗಿ ಪೂಜಾ ಖೇಡ್ಕರ್‌ ನಕಲಿ ದಾಖಲೆ, ಪ್ರಮಾಣ ಪತ್ರಗಳನ್ನ ಸಲ್ಲಿಸಿದ್ದಾರೆ. ಅಲ್ಲದೇ ತಮ್ಮ ಖಾಸಗಿ ಆಡಿ ಕಾರಿಗೆ ರೆಡ್‌ಲೈಟ್‌ ಮತ್ತು ಮಹಾರಾಷ್ಟ್ರ ಸರ್ಕಾರದ (Maharashtra Government) ಲಾಂಛನ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಎಲ್ಲ ಕಾರಣಗಳಿಂದಾಗಿ ಮಹಾರಾಷ್ಟ್ರ ಸರ್ಕಾರ ಅವರ ತರಬೇತಿಯನ್ನು ತಡೆಹಿಡಿದಿತ್ತು. ವಿಚಾರಣೆಗಾಗಿ ಮಸ್ಸೂರಿಯಲ್ಲಿರುವ ಲಾಲ್‌ ಬಹದ್ದೂರ್‌ ಶಾಸ್ತ್ರೀ ನ್ಯಾಷನಲ್‌ ಅಕಾಡೆಮಿ ಆಫ್‌ ಅಡ್ಮಿನಿಸ್ಟ್ರೇಷನ್‌ಗೆ ಬರುವಂತೆ ಸೂಚಿಸಿತ್ತು. ವಿಚಾರಣೆ ಬಳಿಕ ಜು.18 ರಂದು ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದ್ದ ಯುಪಿಎಸ್‌ಸಿ, ಜು.19ರಂದು ಎಫ್‌ಐಆರ್‌ ದಾಖಲಿಸಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಪೂಜಾ ಖೇಡ್ಕರ್‌ ಅವರನ್ನ ಐಎಎಸ್‌ ಸೇವಯಿಂದಲೇ ವಜಾಗೊಳಿಸಿದೆ. ಅಲ್ಲದೇ ಮುಂದಿನ ಎಲ್ಲಾ ಯುಪಿಎಸ್‌ಸಿ ಪರೀಕ್ಷೆಗಳಿಗೆ ಶಾಶ್ವತವಾಗಿ ಡಿಬಾರ್‌ ಮಾಡಿ ಆದೇಶ ಹೊರಡಿಸಿದೆ ಎನ್ನಲಾಗಿದೆ.

    ಪೂಜಾ ಮೇಲಿನ ಆರೋಪ ಏನು?
    2023ನೇ ಸಾಲಿನ ಐಎಎಸ್‌ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್‌ ಅವರು ವಾಶೀಂ ಜಿಲ್ಲೆಯಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿದ್ದರು. ಅವರು ಕೇಂದ್ರ ಲೋಕಸೇವಾ ಆಯೋಗಕ್ಕೆ ಸಲ್ಲಿಸಿದ್ದ ವೈದ್ಯಕೀಯ ಪ್ರಮಾಣ ಪತ್ರದಲ್ಲಿ ತಾವು ಭಾಗಶಃ ಅಂಗವಿಕಲತೆಯಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ಮೂಲಕ ಅಂಗವೈಕಲ್ಯ ಕೋಟಾ ಬಳಸಿಕೊಂಡಿದ್ದರು. ಅಲ್ಲದೇ ಹಿಂದುಳಿದ ವರ್ಗಗಳ ಅಡಿಯಲ್ಲಿ ಮೀಸಲಾತಿ ಕೋಟಾ ದುರ್ಬಳಕೆ ಮಾಡಿಕೊಂಡಿದ್ದಾರೆ. ಜಾತಿ ಮತ್ತು ವೈದ್ಯಕೀಯ ಪ್ರಮಾಣ ಪತ್ರಗಳನ್ನು ನಕಲು ಮಾಡಿದ್ದಾರೆ. ಅಲ್ಲದೇ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಮುನ್ನವೇ ಸವಲತ್ತುಗಳಿಗೆ ಬೇಡಿಕೆಯಿಟ್ಟಿದ್ದರು ಎಂಬ ಆರೋಪ ಅವರ ವಿರುದ್ಧ ಇದೆ.

    ದೆಹಲಿ ಪೊಲೀಸರ ವರದಿಯಲ್ಲೇನಿದೆ?
    ಕಳೆದ ವಾರ ದೆಹಲಿ ಪೊಲೀಸರು ದೆಹಲಿ ಹೈಕೋರ್ಟ್‌ಗೆ 2ನೇ ಹಂತದ ಸ್ಥಿತಿ ವರದಿ ಸಲ್ಲಿಸಿದ್ದರು. ಈ ವರದಿಯಲ್ಲಿ ಪೂಜಾ ಅಂಕವಿಲತೆ‌ ಎಂದು ಸಲ್ಲಿಸಿದ್ದ ವರದಿಗಳು ನಕಲಿ ಎಂದು ಉಲ್ಲೇಖಿಸಿದ್ದರು. ಯುಪಿಎಸ್‌ಸಿ ಪರೀಕ್ಷೆಗಾಗಿ ಆಕೆ 2 ಪ್ರತ್ಯೇಕ ಅಂಗವಿಕಲತೆ ಪ್ರಮಾಣಪತ್ರ ಸಲ್ಲಿಸಿದ್ದರು ಎಂದು ತಿಳಿಸಿದ್ದರು. ಇದನ್ನೂ ಓದಿ: Manipur Violence | ಎರಡು ಸಮುದಾಯಗಳ ಗುಂಪಿನ ನಡುವೆ ಗುಂಡಿನ ಚಕಮಕಿ – ಐವರು ಸಾವು

  • Maharashtra: ಪ್ರೊಬೇಷನರಿ IAS ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ ಎಫ್‌ಐಆರ್‌!

    Maharashtra: ಪ್ರೊಬೇಷನರಿ IAS ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ ಎಫ್‌ಐಆರ್‌!

    ಮುಂಬೈ: ವಿಶೇಷಚೇತನ ಹಾಗೂ ಒಬಿಸಿ ಕೋಟಾ ದುರ್ಬಳಕೆ ಮಾಡಿಕೊಂಡಿದ್ದಾರೆಂಬ ಆರೋಪ ಮೇಲೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ (Puja Khedkar) ವಿರುದ್ಧ ಕೇಂದ್ರ ಲೋಕಸೇವಾ ಆಯೋಗ (UPSC) ಎಫ್‌ಐಆರ್‌ ದಾಖಲಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ತಮ್ಮ ಉದ್ಯೋಗ ಭದ್ರತೆಗಾಗಿ ಪೂಜಾ ಖೇಡ್ಕರ್‌ ನಕಲಿ ದಾಖಲೆ, ಪ್ರಮಾಣ ಪತ್ರಗಳನ್ನ ಸಲ್ಲಿಸಿದ್ದಾರೆ. ಅಲ್ಲದೇ ತಮ್ಮ ಖಾಸಗಿ ಆಡಿ ಕಾರಿಗೆ ರೆಡ್‌ಲೈಟ್‌ ಮತ್ತು ಮಹಾರಾಷ್ಟ್ರ ಸರ್ಕಾರದ (Maharashtra Government) ಲಾಂಛನ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಎಲ್ಲ ಕಾರಣಗಳಿಂದಾಗಿ ಮಹಾರಾಷ್ಟ್ರ ಸರ್ಕಾರ ಅವರ ತರಬೇತಿಯನ್ನು ತಡೆಹಿಡಿದಿತ್ತು. ವಿಚಾರಣೆಗಾಗಿ ಮಸ್ಸೂರಿಯಲ್ಲಿರುವ ಲಾಲ್‌ ಬಹದ್ದೂರ್‌ ಶಾಸ್ತ್ರೀ ನ್ಯಾಷನಲ್‌ ಅಕಾಡೆಮಿ ಆಫ್‌ ಅಡ್ಮಿನಿಸ್ಟ್ರೇಷನ್‌ಗೆ ಬರುವಂತೆ ಸೂಚಿಸಿತ್ತು. ವಿಚಾರಣೆ ಬಳಿಕ ಗುರುವಾರ (ಜು.18) ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದ್ದ ಯುಪಿಎಸ್‌ಸಿ, ಶುಕ್ರವಾರ (ಇಂದು) ಎಫ್‌ಐಆರ್‌ ದಾಖಲಿಸಿದೆ.

    ಪೂಜಾ ಮೇಲಿನ ಆರೋಪ ಏನು?
    2023ನೇ ಸಾಲಿನ ಐಎಎಸ್‌ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್‌ ಅವರು ವಾಶೀಂ ಜಿಲ್ಲೆಯಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿದ್ದರು. ಅವರು ಕೇಂದ್ರ ಲೋಕಸೇವಾ ಆಯೋಗಕ್ಕೆ ಸಲ್ಲಿಸಿದ್ದ ವೈದ್ಯಕೀಯ ಪ್ರಮಾಣ ಪತ್ರದಲ್ಲಿ ತಾವು ಭಾಗಶಃ ಅಂಗವಿಕಲತೆಯಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ಮೂಲಕ ಅಂಗವೈಕಲ್ಯ ಕೋಟಾ ಬಳಸಿಕೊಂಡಿದ್ದರು. ಅಲ್ಲದೇ ಹಿಂದುಳಿದ ವರ್ಗಗಳ ಅಡಿಯಲ್ಲಿ ಮೀಸಲಾತಿ ಕೋಟಾ ದುರ್ಬಳಕೆ ಮಾಡಿಕೊಂಡಿದ್ದಾರೆ. ಜಾತಿ ಮತ್ತು ವೈದ್ಯಕೀಯ ಪ್ರಮಾಣ ಪತ್ರಗಳನ್ನು ನಕಲು ಮಾಡಿದ್ದಾರೆ. ಅಲ್ಲದೇ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಮುನ್ನವೇ ಸವಲತ್ತುಗಳಿಗೆ ಬೇಡಿಕೆಯಿಟ್ಟಿದ್ದರು ಎಂಬ ಆರೋಪ ಅವರ ವಿರುದ್ಧ ಇದೆ ಎಂದು ಸಂಬಂಧಪಟ್ಟ ತನಿಖಾಧಿಕಾರಿಗಳು ತಿಳಿಸಿದ್ದಾರೆ.

    ತಾಯಿ ಅರೆಸ್ಟ್‌ ಬೆನ್ನಲ್ಲೇ ತಂದೆ ನಿರೀಕ್ಷಣಾ ಜಾಮೀನು:
    ರೈತರೊಬ್ಬರಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ಪೂಜಾ ಖೇಡ್ಕರ್‌ ಅವರ ತಾಯಿ ಮನೋರಮಾ ಖೇಡ್ಕರ್‌ ಅವರನ್ನ ಪುಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಬೆನ್ನಲ್ಲೇ ಪೂಜಾ ತಂದೆ ಸೆಷನ್ಸ್ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

  • ಪ್ರೊಬೇಷನರಿ IAS ಅಧಿಕಾರಿ ಪೂಜಾ ಖೇಡ್ಕರ್‌ ತರಬೇತಿಗೆ ತಡೆ – ಅಕಾಡೆಮಿಗೆ ಬುಲಾವ್‌!

    ಪ್ರೊಬೇಷನರಿ IAS ಅಧಿಕಾರಿ ಪೂಜಾ ಖೇಡ್ಕರ್‌ ತರಬೇತಿಗೆ ತಡೆ – ಅಕಾಡೆಮಿಗೆ ಬುಲಾವ್‌!

    ಮುಂಬೈ: ವಿಶೇಷಚೇತನ ಹಾಗೂ ಒಬಿಸಿ ಕೋಟಾವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂಬ ಆರೋಪ ಎದುರಿಸುತ್ತಿರುವ ಪ್ರೊಬೇಷನರಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ (Puja Khedkar) ಅವರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ. ಈ ನಡುವೆಯೇ ಮಹಾರಾಷ್ಟ್ರ ಸರ್ಕಾರ (Maharashtra Government) ಅವರ ತರಬೇತಿಯನ್ನು ತಡೆಹಿಡಿದಿದ್ದು, ಜುಲೈ 23ರ ಒಳಗೆ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ಗೆ ಬರುವಂತೆ ಸೂಚಿಸಿದೆ.

    ನಕಲಿ ಜಾತಿ ಪ್ರಮಾಣಪತ್ರ, ವಿಶೇಷಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ನಕಲಿ ದಾಖಲೆ ಮಾಡಿಸಿರುವ ಆರೋಪ ಎದುರಿಸುತ್ತಿರುವ ಪೂಜಾ ಖೇಡ್ಕರ್‌ ಮಹಾರಾಷ್ಟ್ರದ ವಾಶೀಂ ಜಿಲ್ಲೆಯಲ್ಲಿ ಪ್ರೊಬೇಷನರಿ ಐಎಎಸ್‌ ಅಧಿಕಾರಿಯಾಗಿ (IAS Officer) ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ (ಜು.16) ಅವರ ಜಿಲ್ಲಾ ತರಬೇತಿಯನ್ನು ತಡೆಹಿಡಿಯಲಾಗಿದೆ. ಪೂಜಾ ಖೇಡ್ಕರ್‌ ಅವರ ಪ್ರಕರಣದಲ್ಲಿ ಸರ್ಕಾರದ ಮೊದಲ ಮಹತ್ವದ ಕ್ರಮ ಇದು ಎಂದು ಹೇಳಲಾಗಿದೆ. ಮುಂದಿನ ಕ್ರಮಕ್ಕಾಗಿ ಅವರನ್ನು ತರಬೇತಿ ಅಕಾಡೆಮಿಗೆ ಬರುವಂತೆ ಆದೇಶ ಪ್ರತಿಯಲ್ಲಿ ಸೂಚಿಸಿದೆ. ಇದನ್ನೂ ಓದಿ: NEET: ಪರೀಕ್ಷಾ ಮಂಡಳಿ ಟ್ರಂಕ್‌ನಿಂದ ಪ್ರಶ್ನೆಪತ್ರಿಕೆ ಕದ್ದಿದ್ದ ಎಂಜಿನಿಯರ್‌ ಬಂಧನ

    ಕಳೆದ ವಾರವಷ್ಟೇ ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ ಏಕಸದಸ್ಯ ಸಮಿತಿ ರಚಿಸಿತ್ತು. ಸೋಮವಾರ (ಜು.15) ಸಹ ಪೊಲೀಸರು ತಡರಾತ್ರಿವರೆಗೆ ಮೇಲ್ವಿಚಾರಣೆ ನಡೆಸಿದ್ದರು. ರಾತ್ರಿ 11 ಗಂಟೆಯಿಂದ 1 ಗಂಟೆವರೆಗೆ ಮೂವರು ಮಹಿಳಾ ಅಧಿಕಾರಿಗಳು ವಿಚಾರಣೆ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: Jammu Terrorist Attack: ಜಮ್ಮುವಿನಲ್ಲಿ ದಿಢೀರ್‌ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವುದು ಏಕೆ?

    ಪ್ರಕರಣದ ಬಗ್ಗೆ ಪೂಜಾ ಖೇಡ್ಕರ್‌ ಹೇಳಿದ್ದೇನು?
    ನಕಲಿ ದಾಖಲೆ, ಅಧಿಕಾರ ದುರುಪಯೋಗ ಸೇರಿ ಹಲವು ಆರೋಪಗಳ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ಮೊದಲ ಬಾರಿಗೆ ಅವರು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು. ಯಾರೇ ಆಗಲಿ, ಆರೋಪ ಸಾಬೀತಾಗುವವರೆಗೆ ಅವರು ಆರೋಪಿಯೇ, ಮಾಧ್ಯಮಗಳ ವರದಿಗಳು, ತೀರ್ಪುಗಳು ನಾನು ಏನೆಂಬುದನ್ನು ತೀರ್ಮಾನಿಸುವುದಿಲ್ಲ. ತನಿಖೆಗೆ ರಚನೆಯಾಗಿರುವ ಸಮಿತಿಯ ತೀರ್ಮಾನದ ಬಳಿಕವೇ ಸತ್ಯ ಏನೆಂಬುದು ಗೊತ್ತಾಗುತ್ತದೆ. ಮಾಧ್ಯಮಗಳು ಅಥವಾ ಜನರು ನನ್ನನ್ನು ತೀರ್ಮಾನಿಸಲಾಗುವುದಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ವಿವಾದಿತ ಭೋಜಶಾಲಾ ಮಸೀದಿಯಲ್ಲಿ ಮಂದಿರದ ಕುರುಹು – ಪುರಾತತ್ವ ಇಲಾಖೆಯ 2,000 ಪುಟಗಳ ವರದಿಯಲ್ಲಿ ಏನಿದೆ?

    2023ನೇ ಸಾಲಿನ ಐಎಎಸ್‌ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್‌ ಅವರು ವಾಶೀಂ ಜಿಲ್ಲೆಯಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿದ್ದರು. ಅವರು ಕೇಂದ್ರ ಲೋಕಸೇವಾ ಆಯೋಗಕ್ಕೆ ಸಲ್ಲಿಸಿದ್ದ ವೈದ್ಯಕೀಯ ಪ್ರಮಾಣ ಪತ್ರದಲ್ಲಿ ತಾವು ಭಾಗಶಃ ಅಂಗವಿಕಲತೆಯಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ಮೂಲಕ ಅಂಗವೈಕಲ್ಯ ಕೋಟಾ ಬಳಸಿಕೊಂಡಿದ್ದರು. ಅಲ್ಲದೇ ಹಿಂದುಳಿದ ವರ್ಗಗಳ ಅಡಿಯಲ್ಲಿ ಮೀಸಲಾತಿಯನ್ನೂ ತಪ್ಪಾಗಿ ಪಡೆದುಕೊಂಡಿರುವ ಆರೋಪ ಅವರ ವಿರುದ್ಧ ಇದೆ ಎಂದು ಸಂಬಂಧಪಟ್ಟ ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್‌ಕೌಂಟರ್‌ – ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮ

  • ನಟ, ಐಎಎಸ್ ಅಧಿಕಾರಿ ಕೆ.ಶಿವರಾಮ್ ನಿಧನ

    ನಟ, ಐಎಎಸ್ ಅಧಿಕಾರಿ ಕೆ.ಶಿವರಾಮ್ ನಿಧನ

    ಕನ್ನಡ ಹೆಸರಾಂತ ನಟ, ಐಎಎಸ್ ಅಧಿಕಾರಿ ಕೆ.ಶಿವರಾಜ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅವರಿಗೆ ನಿನ್ನೆಯಷ್ಟೇ ಹೃದಯಾಘಾತವಾಗಿತ್ತು. ಜೊತೆಗೆ ಮೆದುಳು ನಿಷ್ಕ್ರೀಯಗೊಂಡಿತ್ತು ಎಂದು ಹೇಳಲಾಗಿತ್ತು. ‘ಬಾ ನಲ್ಲೆ ಮಧುಚಂದ್ರಕೆ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿರುವ ಕೆ.ಶಿವರಾಮ್ (K.Shivaram), ಕನ್ನಡದಲ್ಲಿ ಐಎಎಸ್ ಪಾಸು ಮಾಡಿ ಉತ್ತಮ ಅಧಿಕಾರಿ ಎನಿಸಿಕೊಂಡಿದ್ದರು.

    ನಿನ್ನೆಯಷ್ಟೇ ಶಿವರಾಮ್ ಅನಾರೋಗ್ಯದಿಂದಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು, ಅಳಿಯ ಪ್ರದೀಪ್ (Actor Pradeep) ನಿನ್ನೆ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ಅವರ ಕಂಡೀಷನ್ ಕ್ರಿಟಿಕಲ್ ಆಗಿದೆ ಎಂದಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕನ್ನಡದಲ್ಲೇ ಐಎಎಸ್ ಬರೆದು, ನಂತರ ಬೆಂಗಳೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ನಂತರ ‘ಬಾ ನಲ್ಲೆ ಮಧುಚಂದ್ರಕೆ’, ವಸಂತ ಕಾವ್ಯದಂತಹ ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಾಂಗ್ಲಿಯಾನ 3 ಚಿತ್ರದಲ್ಲಿ ಇವರದ್ದು ಖಳನಾಯಕನ ಪಾತ್ರ. ಹತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಶಿವರಾಮ್, ತಮ್ಮ ಮಗಳನ್ನು ನಟ ಪ್ರದೀಪ್ ಅವರಿಗೆ ಧಾರೆಯರೆದಿದ್ದರು.

    ಉರಗಳ್ಳಿಯಲ್ಲಿ ಜನನ
    ಕೆ ಶಿವರಾಮ್ 1953ರ ಏಪ್ರಿಲ್ 6ರಂದು ರಾಮನಗರ ಜಿಲ್ಲೆಯ ಉರಗಳ್ಳಿಯಲ್ಲಿ ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ತಮ್ಮ ಹಳ್ಳಿಯಲ್ಲಿ ಮುಗಿಸಿದ ಇವರು, ಬೆಂಗಳೂರಿನ ಮಲ್ಲೇಶ್ವರಂ ಸರ್ಕಾರಿ ಶಾಲೆಯಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದರು. ವಿವಿ ಪುರಂನ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಡಿಗ್ರಿ ಮುಗಿದ ಶಿವರಾಮ್, ನಂತರ 1982ರಲ್ಲಿ ಮೈಸೂರು ಯುನಿವರ್ಸಿಟಿಯಿಂದ ಇತಿಹಾಸ ವಿಷಯದಲ್ಲಿ ಮಾಸ್ಟರ್ ಆಫ್ ಆಟ್ಸ್ ಪದವಿ ಪಡೆದರು. 1985ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದರು. ನಂತರ ಕನ್ನಡ ಭಾಷೆಯಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

    ಸಿನಿಮಾರಂಗ
    1993ರಲ್ಲಿ ತೆರೆಕಂಡ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಮೂಲಕ ಕೆ ಶಿವರಾಮ್ ಕನ್ನಡ ಚಿತ್ರರಂಗ ಪ್ರವೇಶಿಸಿದರು. ನಂತರ ವಸಂತಕಾವ್ಯ, ಸಾಂಗ್ಲಿಯಾನ ಪಾರ್ಟ್ ೩, ಪ್ರತಿಭಟನೆ, ಖಳನಾಯಕ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್, ನಾಗ, ಓ ಪ್ರೇಮ ದೇವತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದರು.

    ರಾಜಕೀಯ ಜೀವನ
    2013ರಲ್ಲಿ ನಿವೃತ್ತಿಯ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದರು. 2014ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ಛಲವಾದಿ ಮಹಸಭಾದ ಅಧ್ಯಕ್ಷರಾಗಿದ್ದರು. ಕೆ ಶಿವರಾಮ್ ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದಾರೆ.

  • ಕರ್ನಾಟಕ ಗೆಜೆಟಿಯರ್‌ಗೆ ರೋಹಿಣಿ ಸಿಂಧೂರಿ ಚೀಫ್ ಎಡಿಟರ್

    ಕರ್ನಾಟಕ ಗೆಜೆಟಿಯರ್‌ಗೆ ರೋಹಿಣಿ ಸಿಂಧೂರಿ ಚೀಫ್ ಎಡಿಟರ್

    ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಕೊನೆಗೂ ಸರ್ಕಾರ ಹುದ್ದೆ ನೀಡಿದೆ. ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರ ಹುದ್ದೆಗೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ.

    ಕಳೆದ ಕೆಲ ತಿಂಗಳ ಹಿಂದೆ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ನಡುವೆ ಕಿತ್ತಾಟ ನಡೆದಿತ್ತು. ಈ ವೇಳೆ ಇಬ್ಬರಿಗೂ ಸರ್ಕಾರ ಹುದ್ದೆಯನ್ನು ನೀಡದೆ ವರ್ಗಾವಣೆ ಮಾಡಿತ್ತು. ಕಳೆದ 6 ತಿಂಗಳಿನಿಂದ ಸರ್ಕಾರ ರೋಹಿಣಿ ಸಿಂಧೂರಿಗೆ ಯಾವುದೇ ಹುದ್ದೆ ನೀಡಿರಲಿಲ್ಲ. ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಬಯಲಾಗ್ತಿದ್ದಂತೆ ಬಿಜೆಪಿ ಟೀಕಿಸಿದ ಕಾಂಗ್ರೆಸ್

    ಈಗಾಗಲೇ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೆ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇದರಲ್ಲಿ ರೋಹಿಣಿ ಸಿಂಧೂರಿಗೂ ಹುದ್ದೆ ನೀಡಿದೆ. ಇದೀಗ ರೋಹಿಣಿ ಸಿಂಧೂರಿಗೆ ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರಾಗಿ ವರ್ಗಾವಣೆ ಮಾಡಿದೆ. ಇದನ್ನೂ ಓದಿ: ಯಾವುದೋ ಫೋನ್ ಬಂತೆಂದು ಕಾರ್ಯಕ್ರಮ ರದ್ದು ಮಾಡಿದ್ದ ಚೈತ್ರಾ ಕುಂದಾಪುರ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]