Tag: IAS Officer Snehal Lokhande

  • ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ: ಸ್ನೇಹಲ್ ಲೋಖಂಡೆ

    ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ: ಸ್ನೇಹಲ್ ಲೋಖಂಡೆ

    ಕಲಬುರಗಿ: ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ. ನನ್ನ ಮಾನಹಾನಿಯಾಗುತ್ತಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರೂ ಆಗಿರುವ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ಹೇಳಿದ್ದಾರೆ.

    snehal lokhande

    ಮದುವೆಯಾಗುವುದಾಗಿ ನಂಬಿಸಿ ವಂಚಿಸಿರುವುದಾಗಿ ಯುವತಿಯೊಬ್ಬಳು ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ವಿರುದ್ಧ ಗಂಭೀರವಾಗಿ ಆರೋಪಿಸಿದ್ದಳು. ಯುವತಿ ದೆಹಲಿ ಮೂಲದವಳಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿ ಅವರಿಗೆ ಟ್ವಿಟ್ಟರ್ ಮೂಲಕ ಪತ್ರ ಬರೆದು ಲಗತ್ತಿಸಿದ್ದಾಳೆ. ಆ ಪತ್ರದಲ್ಲಿ 2017ರ ಬ್ಯಾಚ್‍ನ ಐಎಎಸ್ ಅಧಿಕಾರಿ ಲೋಖಂಡೆಯು ತನ್ನ ಜೊತೆಗೆ ಹೋಟೆಲ್‍ಗಳಲ್ಲಿ ಕಾಲ ಕಳೆದ, ಹೊರಗಡೆ ಸುತ್ತಾಡಿದ, ವಾಟ್ಸಾಪ್‍ಗಳಲ್ಲಿ ಚಾಟ್ ಮಾಡಿದ್ದ ಬಗ್ಗೆ ದಿನಾಂಕ, ಸ್ಥಳ ಸಮೇತ ವಿವರಿಸಿದ್ದು, ವಾಟ್ಸಾಪ್ ಚಾಟ್ ಅನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಳು. ದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ – ಕಲಬುರಗಿ ಪಾಲಿಕೆ ಆಯುಕ್ತ ಸ್ನೇಹಲ್ ವಿರುದ್ಧ ದೂರು

    ಈ ಕುರಿತಂತೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ. ನನ್ನ ಮಾನಹಾನಿಯಾಗುತ್ತಿದೆ. ನಾನು ಈ ಕುರಿತಂತೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸುತ್ತೇನೆ. ಕಲಬುರಗಿ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ಮಾಹಿತಿ ಕೂಡ ನೀಡಿದ್ದೇನೆ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವತಿ ನನ್ನ ವಿರುದ್ಧ ಮಾಡಿರುವ ಆರೋಪಗಳೆಲ್ಲಾ ಸುಳ್ಳು. ವಾಟ್ಸಾಪ್ ಚಾಟ್, ಫೋಟೋ ಎಲ್ಲವೂ ಕೂಡ ಫೇಕ್. ನನ್ನ ಫೋಟೋ ಅವರಿಗೆ ಹೇಗೆ ಸಿಕ್ಕಿತು ನನಗೆ ಗೊತ್ತಿಲ್ಲ. ಆ ಯುವತಿ ಬರೆದಿರುವ ಪತ್ರವನ್ನು ಓದಿದ್ದೇನೆ. ಅದೆಲ್ಲಾವೂ ಕೂಡ ಸುಳ್ಳು. ಕುಟುಂಬಸ್ಥರಾಗಲಿ, ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮೀಷನರ್ ಯಾರು ಕೂಡ ಸಂಧಾನ ಮಾಡಲು ಪ್ರಯತ್ನಿಸಿಲ್ಲ ಎಂದು ಹೇಳಿದ್ದಾರೆ. ದನ್ನೂ ಓದಿ: ಮದುವೆ ಆಗುವಂತೆ ಯುವತಿಗೆ ಬ್ಲಾಕ್‍ಮೇಲ್- ಠಾಣೆ ಮೆಟ್ಟಿಲೇರಿದ ಪ್ರಕರಣ

    ಮತ್ತೊಂದೆಡೆ ಕಲಬುರಗಿ ಪೊಲೀಸ್ ಆಯುಕ್ತ ರವಿಕುಮಾರ್ ಅವರು, ಯುವತಿ ನಮಗೆ ಲಿಖಿತ ದೂರು ನೀಡಿಲ್ಲ. ಆದರೆ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ದೂರು ನೀಡಿದ್ದಾರೆ. `ಯುವತಿ, ಆಕೆಯ ತಂದೆ-ತಾಯಿ ನಮ್ಮನ್ನು ಭೇಟಿ ಆಗಿದ್ದರು. ಆದರೆ ಈ ಘಟನೆ ದೆಹಲಿಯಲ್ಲಿ ಆಗಿರುವ ಕಾರಣ, ದೆಹಲಿಯಲ್ಲಿಯೇ ದೂರು ನೀಡಬೇಕೆಂದು ಹೇಳಿದ್ದೇವೆ ಎಂದು ಹೇಳಿದ್ದಾರೆ.