Tag: IAS Officers

  • ಹಿಂದೂ ವಾಟ್ಸಪ್‌ ಗ್ರೂಪ್‌ ರಚನೆ, ಹಿರಿಯ ಅಧಿಕಾರಿ ನಿಂದನೆ ಆರೋಪ – ಇಬ್ಬರು IAS ಅಧಿಕಾರಿಗಳು ಅಮಾನತು

    ಹಿಂದೂ ವಾಟ್ಸಪ್‌ ಗ್ರೂಪ್‌ ರಚನೆ, ಹಿರಿಯ ಅಧಿಕಾರಿ ನಿಂದನೆ ಆರೋಪ – ಇಬ್ಬರು IAS ಅಧಿಕಾರಿಗಳು ಅಮಾನತು

    ತಿರುವನಂತಪುರಂ: ಧರ್ಮ ಆಧಾರಿತ ವಾಟ್ಸಪ್‌ ಗ್ರೂಪ್‌ ರಚನೆ, ಹಿರಿಯ ಅಧಿಕಾರಿ ವಿರುದ್ಧ ಟೀಕೆ ಆರೋಪದ ಮೇಲೆ ಇಬ್ಬರು ಐಎಎಸ್‌ ಅಧಿಕಾರಿಗಳನ್ನು (IAS Officers) ಕೇರಳ ಸರ್ಕಾರ ಅಮಾನತು ಮಾಡಿದೆ.

    ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶಕರಾದ ಕೆ. ಗೋಪಾಲಕೃಷ್ಣನ್ ಅವರು ಸರ್ಕಾರಿ ಅಧಿಕಾರಿಗಳೊಂದಿಗೆ ಧರ್ಮ ಆಧಾರಿತ ವಾಟ್ಸಾಪ್ ಗ್ರೂಪ್‌ ಮಾಡಿದ್ದರು. ಕೃಷಿ ಅಭಿವೃದ್ಧಿ ಮತ್ತು ರೈತರ ಕಲ್ಯಾಣ ಇಲಾಖೆಯ ವಿಶೇಷ ಕಾರ್ಯದರ್ಶಿ ಎನ್.ಪ್ರಶಾಂತ್ ಅವರು ಹಿರಿಯ ಅಧಿಕಾರಿಯ ವಿರುದ್ಧ ಟೀಕೆ ಮತ್ತು ಗಂಭೀರ ಆರೋಪ ಮಾಡಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: ಏರ್ ಇಂಡಿಯಾದೊಂದಿಗೆ ವಿಸ್ತಾರ ವಿಲೀನ – ದೋಹಾದಿಂದ ಮುಂಬೈಗೆ ಮೊದಲ ವಿಮಾನ ಹಾರಾಟ

    ಮುಖ್ಯ ಕಾರ್ಯದರ್ಶಿ ಶಾರದಾ ಮುರಳೀಧರನ್ ಅವರ ವರದಿಯ ಮೇರೆಗೆ ಮುಖ್ಯಮಂತ್ರಿಗಳು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಕಳೆದ ತಿಂಗಳು ‘ಮಲ್ಲು ಹಿಂದೂ ಆಫೀಸರ್ಸ್’ ಎಂಬ ಹೆಸರಿನ ವಾಟ್ಸಪ್ ಗ್ರೂಪ್ ಅನ್ನು ರಚಿಸಿದ್ದಕ್ಕಾಗಿ 2013ರ ಬ್ಯಾಚ್ ಅಧಿಕಾರಿ ಗೋಪಾಲಕೃಷ್ಣನ್ ಅವರನ್ನು ಅಮಾನತುಗೊಳಿಸಲಾಗಿದೆ. ಐಎಎಸ್ ಅಧಿಕಾರಿ ತನ್ನ ಫೋನ್ ಹ್ಯಾಕ್ ಆಗಿದೆ ಎಂದು ಹೇಳಿಕೊಂಡಿದ್ದರು. ಅಧಿಕಾರಿಗಳ ಪ್ರಕಾರ, ಫೋನ್‌ನ ಫೊರೆನ್ಸಿಕ್ ಪರೀಕ್ಷೆಯು ಅದನ್ನು ಹ್ಯಾಕ್ ಮಾಡಲಾಗಿದೆ ಎಂದು ದೃಢಪಡಿಸಲಿಲ್ಲ.

    2007 ರ ಬ್ಯಾಚ್ ಅಧಿಕಾರಿ ಎನ್.ಪ್ರಶಾಂತ್ ಪ್ರಕರಣದಲ್ಲಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎ. ಜಯತಿಲಕ್ ವಿರುದ್ಧ ಫೇಸ್‌ಬುಕ್ ಪೋಸ್ಟ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ನಂತರ ಈ ಕ್ರಮ ತೆಗೆದುಕೊಳ್ಳಲಾಗಿದೆ. ಹಿರಿಯ ಅಧಿಕಾರಿ ತಮ್ಮ ವಿರುದ್ಧ ಆಧಾರ ರಹಿತ ಸುದ್ದಿ ವರದಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜಯತಿಲಕ್ ಅವರು ಆಧಾರರಹಿತ ಆರೋಪಗಳನ್ನು ಹರಡುವ ಮೂಲಕ ತಮ್ಮನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಾಂತ್ ಆರೋಪಿಸಿದ್ದರು. ಹಿರಿಯ ಅಧಿಕಾರಿಯನ್ನು ‘ಸೈಕೋಪಾತ್’ ಎಂದು ಟೀಕಿಸಿದ್ದರು. ಇದನ್ನೂ ಓದಿ: ಉತ್ತರಾಖಂಡ್ ಹೋಟೆಲ್‌ನಲ್ಲಿ ಕತ್ತು ಸೀಳಿ ಜಾದವ್‌ಪುರ ವಿವಿ ಪ್ರೊಫೆಸರ್ ಹತ್ಯೆ

    ಕೇರಳದ ಕಂದಾಯ ಸಚಿವ ಕೆ.ರಾಜನ್, ಸರ್ಕಾರಿ ಅಧಿಕಾರಿಗಳು ಸೇವೆಯಲ್ಲಿದ್ದಾಗ ಶಿಸ್ತನ್ನು ಅನುಸರಿಸಬೇಕು. ಯಾರಾದರೂ ಅದನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಈ ಹಿಂದೆ ಎಚ್ಚರಿಸಿದ್ದರು.

  • ಚಾಮರಾಜನಗರ, ಚಿಕ್ಕಮಗಳೂರು DC ಸೇರಿದಂತೆ 14 IAS ಅಧಿಕಾರಿಗಳ ವರ್ಗಾವಣೆ

    ಚಾಮರಾಜನಗರ, ಚಿಕ್ಕಮಗಳೂರು DC ಸೇರಿದಂತೆ 14 IAS ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಸೇರಿದಂತೆ ರಾಜ್ಯಾದ್ಯಂತ 14 ಐಎಎಸ್ ಅಧಿಕಾರಿಗಳನ್ನು (IAS Officers) ಮಂಗಳವಾರ ತಡರಾತ್ರಿ ವರ್ಗಾವಣೆ (Transfer) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಚಾಮರಾಜನಗರ ಡಿಸಿಯಾಗಿದ್ದ ರಮೇಶ್ ಡಿ.ಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ತೋಟಗಾರಿಕಾ ಇಲಾಖೆ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.

    ಬೆಂಗಳೂರು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ನಿದೇಶಕರಾಗಿದ್ದ ಮೀನಾ ನಾಗರಾಜ್ ಸಿ.ಎನ್ ಅವರನ್ನು ಮುಂದಿನ ಆದೇಶದವರೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

    ಕಾರ್ನಾಟಕ ವಿಪತ್ತು ನಿರ್ವಹಣೆ ಪ್ರಾಧಿಕಾರದ ಆಯುಕ್ತರಾಗಿದ್ದ ಪ್ರಭು ಜಿ ಅವರನ್ನು ತುಮಕೂರು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

    ಐಎಎಸ್ ಅಧಿಕಾರಿ ನವೀನ್ ಸಾಗರ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ಕೊಪ್ಪಳದ ವಿದ್ಯಾರ್ಥಿನಿ ಪತ್ರಕ್ಕೆ ಸಿದ್ದರಾಮಯ್ಯ ಸಂತಸ – ಮರಳಿ ಪತ್ರ ಬರೆದ ಸಿಎಂ

    ಕರ್ನಾಟಕ ಮುನ್ಸಿಪಲ್ ಡಾಟಾ ಸೊಸೈಟಿ ಜಂಟಿ ನಿರ್ದೇಶಕರಾಗಿದ್ದ ಡಾ. ಗೋಪಾಲ ಕೃಷ್ಣ ಹೆಚ್‌.ಎನ್ ಅವರನ್ನು ಬೆಂಗಳೂರು ಕಾರ್ಮಿಕ ಇಲಾಖೆ ಆಯುಕ್ತರಾಗಿ ನಿಯೋಜಿಸಲಾಗಿದೆ.

    ಐಎಎಸ್ ಅಧಿಕಾರಿ ಡಾ. ಆನಂದ್ ಕೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಆಗಿ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ಇನ್ಮುಂದೆ ಖಾಸಗಿ ಶಾಲಾ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ಕೇಂದ್ರ ನಿರ್ಧಾರ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಚಿಲುಮೆ ಡೇಟಾ ಅಕ್ರಮ ಪ್ರಕರಣ – ಆರೋಪಿಗಳಾದ IAS ಅಧಿಕಾರಿಗಳ ಅಮಾನತು ಕ್ರಮ ಹಿಂಪಡೆದ ಸರ್ಕಾರ

    ಚಿಲುಮೆ ಡೇಟಾ ಅಕ್ರಮ ಪ್ರಕರಣ – ಆರೋಪಿಗಳಾದ IAS ಅಧಿಕಾರಿಗಳ ಅಮಾನತು ಕ್ರಮ ಹಿಂಪಡೆದ ಸರ್ಕಾರ

    ಬೆಂಗಳೂರು: ಚಿಲುಮೆ ಡೇಟಾ (Chilume) ಅಕ್ರಮ ಪ್ರಕರಣದಲ್ಲಿ ಆರೋಪಿಗಳಾಗಿರುವ ಇಬ್ಬರು ಐಎಎಸ್ ಅಧಿಕಾರಿಗಳ (IAS Officers) ಅಮಾನತು ಕ್ರಮವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದು, ಇಬ್ಬರಿಗೂ ಸ್ಥಳ ನಿಯೋಜನೆ ಮಾಡಿದೆ.

    ಪ್ರಕರಣದಲ್ಲಿ ಐಎಎಸ್ ಅಧಿಕಾರಿಗಳಾದ ಶ್ರೀನಿವಾಸ್ ಮತ್ತು ರಂಗಪ್ಪ ಅವರ ಹೆಸರು ಕೇಳಿಬಂದಿತ್ತು. ಇಬ್ಬರ ವಿಚಾರಣೆಗೆ ಪೊಲೀಸರು ನೋಟೀಸ್ ಜಾರಿ ಮಾಡಿದ್ದರು. ಆಗ ಸರ್ಕಾರ ಸೇವೆಯಿಂದ ಅಮಾನತು ಮಾಡಿತ್ತು. ಇದನ್ನೂ ಓದಿ: ಫೆಬ್ರವರಿಯಲ್ಲಿ ಬಜೆಟ್ ಮಂಡನೆ: ಬೊಮ್ಮಾಯಿ

    ಬಳಿಕ ಸರ್ಕಾರದ ಕ್ರಮವನ್ನು ಇಬ್ಬರೂ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು. ಇದೀಗ ನ್ಯಾಯಾಲಯ ಇಬ್ಬರಿಗೂ ಜಾಮೀನು ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇಬ್ಬರನ್ನು ಸೇವೆಗೆ ಹೊಸ ಸ್ಥಾನಗಳಿಗೆ ನಿಯೋಜನೆ ಮಾಡಿದೆ.

    ಬೆಂಗಳೂರು ನಗರ ಜಿಲ್ಲಾಧಿಕಾರಿ ಆಗಿದ್ದ ಶ್ರೀನಿವಾಸ್‌ ಅವರನ್ನು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ. ಇನ್ನು ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ ರಂಗಪ್ಪ ಅವರನ್ನು ಕರ್ನಾಟಕ ರಾಜ್ಯ ಮಿನರಲ್ ಕಾರ್ಪೋರೇಷನ್ ಲಿಮಿಟೆಡ್‍ನ ಎಕ್ಸಿಕ್ಯೂಟಿವ್ ನಿರ್ದೇಶಕರನ್ನಾಗಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಖಾಸಗಿ ಬಸ್ ಪಲ್ಟಿ – ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಸಿಬಿಐ ದಾಳಿ ಬೆನ್ನಲ್ಲೇ 12 ಐಎಎಸ್ ಅಧಿಕಾರಿಗಳ ವರ್ಗಾವಣೆ

    ಸಿಬಿಐ ದಾಳಿ ಬೆನ್ನಲ್ಲೇ 12 ಐಎಎಸ್ ಅಧಿಕಾರಿಗಳ ವರ್ಗಾವಣೆ

    ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ ಕೆಲವೇ ಗಂಟೆಗಳ ಬಳಿಕ ದೆಹಲಿ ಸರ್ಕಾರ 12 ಐಎಎಸ್ ಅಧಿಕಾರಿಗಳನ್ನು ಇಲಾಖೆಗಳ ನಡುವೆ ವರ್ಗಾವಣೆ ಮಾಡಿದೆ.

    ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಭಾರತೀಯ ಆಡಳಿತ ಸೇವೆಗಳ(ಐಎಎಸ್) ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಅಧಿಕೃತ ಸೂಚನೆಯಲ್ಲಿ ಲೆಫ್ಟಿನೆಂಟ್ ಗವರ್ನರ್ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೆ ಆದೇಶಿಸಿದ್ದಾರೆ ಎಂದು ಕಚೇರಿ ತಿಳಿಸಿದೆ.

    MANISH SISODIA

    ಜಿತೇಂದ್ರ ನಾರಾಯಣ್, ಅನಿಲ್ ಕುಮಾರ್ ಸಿಂಗ್, ವಿವೇಕ್ ಪಾಂಡೆ, ಶುರ್ಬೀರ್ ಸಿಂಗ್, ಗರಿಮಾ ಗುಪ್ತಾ, ಮಾಧೋರಾವ್ ಮೋರ್, ಉದಿತ್ ಪ್ರಕಾಶ್ ರೈ, ವಿಜೇಂದ್ರ ಸಿಂಗ್ ರಾವತ್, ಕ್ರಿಶನ್ ಕುಮಾರ್, ಕಲ್ಯಾಣ್ ಸಹಾಯ್ ಮೀನಾ, ಸೋನಾಲ್ ಸ್ವರೂಪ ಮತ್ತು ಹೇಮಂತ್ ಕುಮಾರ್ ವರ್ಗಾವಣೆಗೊಂಡ 12 ಅಧಿಕಾರಿಗಳು. ಇದನ್ನೂ ಓದಿ: ಹಿಂದೂಗಳಿಗೂ ಇಲ್ಲಿ ನನ್ನಷ್ಟೇ ಹಕ್ಕಿದೆ – ಬಾಂಗ್ಲಾದೇಶ ಪ್ರಧಾನಿ ಹೇಳಿಕೆ

    ಹೊಸ ಅಬಕಾರಿ ನೀತಿ ಪ್ರಕರಣದಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ಮನೆ ಸೇರಿದಂತೆ ರಾಷ್ಟ್ರ ರಾಜಧಾನಿಯ 22 ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ದಾಳಿ ನಡೆಸಿತ್ತು. ಇದಾದ ಬಳಿಕ ಈ ನಿರ್ದೇಶನ ನೀಡಲಾಗಿದೆ.

    ಸಿಬಿಐ ದೆಹಲಿಯ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಜಾರಿಗೊಳಿಸುವಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್‌ನಲ್ಲಿ ಸಿಸೋಡಿಯಾ ಅವರನ್ನು ಇತರ 14 ಜನರೊಂದಿಗೆ ಪಟ್ಟಿ ಮಾಡಲಾಗಿದೆ. ಇದನ್ನೂ ಓದಿ: ಮಲಗಿದ್ದಾಗ ಐಟಿಬಿಪಿ ಶಿಬಿರದಿಂದ ಯೋಧರ ಎರಡು AK-47 ರೈಫಲ್ ಕಳವು – ವಿಶೇಷ ತಂಡದಿಂದ ತಲಾಶ್

    ನಾವು ತನಿಖೆಗೆ ಸಹಕರಿಸಿದ್ದೇವೆ ಮತ್ತು ಮುಂದೆಯೂ ಸಹಕರಿಸುತ್ತೇವೆ. ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ತನಿಖಾ ಸಂಸ್ಥೆ ಸಿಬಿಐ ದುರ್ಬಳಕೆಯಾಗುತ್ತಿದೆ ಎಂದು ನಮಗೆ ತಿಳಿದಿದೆ ಎಂದು ಮನೀಶ್ ಸಿಸೋಡಿಯಾ ತನ್ನ ನಿವಾಸದಲ್ಲಿ 15 ಗಂಟೆಗಳ ತನಿಖೆ ಮುಗಿದ ಬಳಿಕ ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಪ್ರೀತಿಸಿ ಮದ್ವೆಯಾಗಿದ್ದ ಐಎಎಸ್ ಅಧಿಕಾರಿಗಳು ಒಂದೇ ಜಿಲ್ಲೆಗೆ ವರ್ಗ

    ಪ್ರೀತಿಸಿ ಮದ್ವೆಯಾಗಿದ್ದ ಐಎಎಸ್ ಅಧಿಕಾರಿಗಳು ಒಂದೇ ಜಿಲ್ಲೆಗೆ ವರ್ಗ

    ದಾವಣಗೆರೆ: ಪ್ರೇಮಿಗಳ ದಿನದಂದು ಮದುವೆ ಆಗಿದ್ದ ಐಎಎಸ್ ಅಧಿಕಾರಿಗಳಾದ ಡಾ ಬಗಾದಿ ಗೌತಮ್ ಮತ್ತು ಎಸ್ ಅಶ್ವತಿರನ್ನ ರಾಜ್ಯ ಸರ್ಕಾರ ಒಂದೇ ಜಿಲ್ಲೆಗೆ ವರ್ಗಾಯಿಸಿದೆ.

    ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಗೌತಮ್‍ರನ್ನ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿಯೂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಶ್ವತಿಯನ್ನು ವರ್ಗಾಯಿಸಿದೆ. ನವದಂಪತಿಗಳಾಗಿರುವ ಹಿನ್ನೆಲೆಯಲ್ಲಿ ಒಟ್ಟಿಗೆ ಇರಲಿ ಅನ್ನೋ ಕಾರಣಕ್ಕೆ ಒಂದೇ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

    ಸಿಇಒ ಎಸ್ ಅಶ್ವತಿ ತವರೂರಾದ ಕೇರಳದ ಕೋಯಿಕ್ಕೊಡ್ ನಲ್ಲಿ ಫೆಬ್ರವರಿ 14ರಂದು ಮದುವೆಯಾಗಿದ್ದು, ಹಿಂದೂ ಸಂಪ್ರದಾಯದಂತೆ ಕುಟುಂಬಸ್ಥರ ಜೊತೆ ಸರಳ ವಿವಾಹ ಮಾಡಿಕೊಂಡಿದ್ದರು. ಬಳಿಕ ಫೆಬ್ರವರಿ 17 ಕ್ಕೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‍ರ ಊರಾದ ಆಂಧ್ರದ ವಿಶಾಖಪಟ್ಟಣದ ನಿವಾಸದಲ್ಲಿ ಆರತಕ್ಷತೆ ನಡೆದಿತ್ತು. ಡಾ. ಬಗಾದಿ ಗೌತಮ್ ರಾಯಚೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ ಎಸ್. ಅಶ್ವತಿ ಜೊತೆಗೆ ಮದುವೆಯ ಮಾತುಕತೆ ನಡೆದಿತ್ತು. ರಾಜ್ಯದ ಪ್ರಮುಖ ಐಎಎಸ್ ಅಧಿಕಾರಿ ಮುಂದಾಳತ್ವದಲ್ಲಿ ಎರಡು ಕುಟುಂಬದ ಜೊತೆ ಮದುವೆ ಮಾತುಕತೆ ನಡೆದಿದ್ದು, ಇದೀಗ ಮದುವೆಯಾಗಿದ್ದಾರೆ. ಇದನ್ನೂ ಓದಿ: ಪ್ರೀತಿ ಬಹಿರಂಗವಾಗಿದ್ದು ಹೇಗೆ..?

    ಸದ್ಯ ದಾವಣಗೆರೆ ಡಿಸಿ ಆಗಿ ಜಿ ಎನ್ ಶಿವಮೂರ್ತಿ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಆಗಿ ಹೆಚ್ ಬಸವರಾಜೇಂದ್ರ ನೇಮಿಸಿ ಸರ್ಕಾರ ಆದೇಶಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೇರಳ ವಧು, ಆಂಧ್ರ ವರನಿಗೆ ಕರ್ನಾಟಕದಲ್ಲಿ ಪ್ರೀತಿ – ಹಸೆಮಣೆ ಏರಿದ ಐಎಎಸ್ ಅಧಿಕಾರಿಗಳು!

    ಕೇರಳ ವಧು, ಆಂಧ್ರ ವರನಿಗೆ ಕರ್ನಾಟಕದಲ್ಲಿ ಪ್ರೀತಿ – ಹಸೆಮಣೆ ಏರಿದ ಐಎಎಸ್ ಅಧಿಕಾರಿಗಳು!

    ದಾವಣಗೆರೆ: ಪ್ರೇಮಿಗಳ ದಿನವೇ ದಾವಣಗೆರೆ ಜಿಲ್ಲೆಯ ಇಬ್ಬರು ಐಎಎಸ್ ಅಧಿಕಾರಿಗಳು ಹಸೆಮಣೆ ಏರಿದ್ದಾರೆ. ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಎಸ್ ಅಶ್ವತಿ ಹಾಗೂ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಪ್ರೇಮ ವಿವಾಹವಾಗಿದ್ದಾರೆ.

    ಕೇರಳ ವಧು, ಆಂಧ್ರ ವರನಿಗೆ ಕರ್ನಾಟಕದಲ್ಲಿ ಪ್ರೀತಿ ಮೊಳಕೆಯೊಡೆದು ಪ್ರೇಮಿಗಳ ದಿನದಂದೇ ನವ ಜೋಡಿಗಳು ಸಪ್ತಪದಿ ತುಳಿದಿದ್ದಾರೆ. ಕೇವಲ ಅರ್ಧ ಗಂಟೆಯಲ್ಲಿ ಸರಳ ವಿವಾಹ ಮುಗಿದಿದ್ದು ಹೊಸ ಜೀವನಕ್ಕೆ ಅಧಿಕಾರಿಗಳು ಕಾಲಿಟ್ಟಿದ್ದಾರೆ.

    ಸಿಇಒ ಎಸ್ ಅಶ್ವತಿ ತವರೂರಾದ ಕೇರಳದ ಕೋಯಿಕ್ಕೊಡ್ ನಲ್ಲಿ ಮದುವೆಯಾಗಿದ್ದು, ಹಿಂದೂ ಸಂಪ್ರದಾಯದಂತೆ ಕುಟುಂಬಸ್ಥರ ಜೊತೆ ಸರಳ ವಿವಾಹ ಮಾಡಿಕೊಂಡರು. ಇದೇ ಫೆಬ್ರವರಿ 17 ಕ್ಕೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‍ರ ಊರಾದ ಆಂಧ್ರದ ವಿಶಾಖಪಟ್ಟಣದ ನಿವಾಸದಲ್ಲಿ ಆರತಕ್ಷತೆ ನಡೆಯಲಿದೆ.

    ಡಾ. ಬಗಾದಿ ಗೌತಮ್ ಮತ್ತು ಎಸ್. ಅಶ್ವತಿ ಪರಸ್ಪರ ಪ್ರೀತಿಸುತ್ತಿದ್ದರು. ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಡಾ. ಬಗಾದಿ ಗೌತಮ್ ರಾಯಚೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ ಎಸ್. ಅಶ್ವತಿ ಜೊತೆಗೆ ಮದುವೆಯ ಮಾತುಕತೆ ನಡೆದಿತ್ತು. ರಾಜ್ಯದ ಪ್ರಮುಖ ಐಎಎಸ್ ಅಧಿಕಾರಿ ಮುಂದಾಳತ್ವದಲ್ಲಿ ಎರಡು ಕುಟುಂಬದ ಜೊತೆ ಮದುವೆ ಮಾತುಕತೆ ನಡೆದಿತ್ತು.

    ಪ್ರೀತಿ ಬಹಿರಂಗ ಆಗಿದ್ದು ಹೇಗೆ:
    ಬಗಾದಿ ಹಾಗೂ ಅಶ್ವತಿ ನಾಲ್ಕು ತಿಂಗಳ ಹಿಂದೆ ರಾಯಚೂರಿನಿಂದ ದಾವಣಗೆರೆಗೆ ಬಂದಿದ್ದರು. ಬಳಿಕ ಇಬ್ಬರು ಕೆಲವು ಸಭೆ-ಸಮಾರಂಭಗಳಲ್ಲಿ ಒಟ್ಟಿಗೆ ಭಾಗವಹಿಸುತ್ತಿದ್ದರು. ಆಗ ಅವರು ತಮ್ಮ ಪ್ರೀತಿಯ ಬಗ್ಗೆ ಯಾರಿಗೂ ಹೇಳಲಿಲ್ಲ. ಫೆ.1ರಂದು ಇಬ್ಬರು ನಮ್ಮ ಮದುವೆ ಎಂದು ಆಮಂತ್ರಣ ಪತ್ರಿಕೆ ಕೊಟ್ಟಾಗಲೇ ಇಬ್ಬರು ಪ್ರೀತಿಸುತ್ತಿದ್ದಾರೆ ಎನ್ನುವ ವಿಚಾರ ಬೆಳಕಿಗೆ ಬಂದಿತ್ತು. ಆಗ ಇಬ್ಬರು ತಮ್ಮ ಪ್ರೀತಿ ಶುರುವಾಗಿದ್ದು ಹೇಗೆ ಎಂಬುದು ಎಲ್ಲರ ಬಳಿ ಹಂಚಿಕೊಂಡಿದ್ದರು.

    ಗೌತಮ್ 2009ನೇ ಬ್ಯಾಚ್‍ನ ಹಿರಿಯ ಐಎಎಸ್ ಅಧಿಕಾರಿ ಆದರೆ, ಅಶ್ವತಿ 2013ನೇ ಬ್ಯಾಚ್‍ನ ಐಎಎಸ್ ಅಧಿಕಾರಿ ಆಗಿದ್ದಾರೆ. ನಾಲ್ಕು ವರ್ಷದ ಹಿಂದೆಯೇ ಇವರಿಬ್ಬರ ನಡುವೆ ಪ್ರೀತಿ ಬೆಳೆದಿತ್ತು. ಅಶ್ವತಿ ಕ್ಯಾಲಿಕಟ್‍ನ ಹಿರಿಯ ವಕೀಲರಾದ ಸೆಲ್ವಿರಾಜ್ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಜಿಲ್ಲಾಧಿಕಾರಿ ಪುಷ್ಪಾ ಅವರ ಪುತ್ರಿಯಾಗಿದ್ದು, ಕ್ಯಾಲಿಕಟ್‍ನಲ್ಲಿ ಪ್ರಾಥಮಿಕ ಹಾಗೂ ಕಾಲೇಜು ಶಿಕ್ಷಣವನ್ನು ಮುಗಿಸಿದ್ದಾರೆ. ಬಳಿಕ ಮಣಿಪಾಲ್‍ನಲ್ಲಿ ತಮ್ಮ ಎಂಬಿಎಯನ್ನು ಮುಗಿಸಿದ್ದಾರೆ. ಅಶ್ವತಿ ಅವರಿಗೆ ಸಮಾಜ ಸೇವೆಯಲ್ಲಿ ಆಸಕ್ತಿ ಇರುವುದರಿಂದ ಅವರು ಐಎಎಸ್ ಪರೀಕ್ಷೆ ಬರೆದರು. ಆದರೆ ಮೊದಲೆರಡು ಬಾರಿ ಅವರು ಯಶಸ್ವಿಯಾಗಲಿಲ್ಲ. ಮೂರನೇ ಬಾರಿ ಅವರು ಐಎಎಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದರು.

    ಗೌತಮ್ ಕೃಷ್ಣ ರಾವ್ ಹಾಗೂ ಪಾವತಿಯ ಪುತ್ರನಾಗಿದ್ದು, ಮೊದಲಿನಿಂದಲೂ ಓದಿನಲ್ಲಿ ಮುಂದಿದ್ದರು. ಬಳಿಕ ಆಂಧ್ರದ ರಂಗರಾಯ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿಯನ್ನು ಮುಗಿಸಿದ್ದರು. ಇದಾದ ಬಳಿಕ 2009ರಲ್ಲಿ ಐಎಎಸ್ ಪರೀಕ್ಷೆ ಬರೆದು ಬೆಳಗಾವಿಯಲ್ಲಿ ಸಿಇಒ ಆಗಿದ್ದರು. ಆದಾದ ಬಳಿಕ ಅವರು ರಾಯಚೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಬಳಿಕ ದಾವಣಗೆರೆಗೆ ಬಂದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಐಎಎಸ್ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಕೊಟ್ರು ಶಾಕಿಂಗ್ ನ್ಯೂಸ್!

    ಐಎಎಸ್ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಕೊಟ್ರು ಶಾಕಿಂಗ್ ನ್ಯೂಸ್!

    ಬೆಂಗಳೂರು: ಸರ್ಕಾರಿ ವಾಹನಗಳು ಖಾಸಗಿ ಕಾರ್ಯಕ್ರಮಗಳಿಗೆ ಬಳಕೆ ಆಗುತ್ತಿವೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಶಾಕಿಂಗ್ ನ್ಯೂಸ್ ನೀಡಿದ್ದಾರೆ.

    ಕಚೇರಿಗಳಿಗೆ ಬರುವ ಅಧಿಕಾರಿಗಳು ಓಲಾ, ಊಬರ್‍ನಂತಹ ಆ್ಯಪ್ ಆಧಾರಿತ ಟ್ಯಾಕ್ಸಿಗಳ ಸೇವೆಯನ್ನು ಯಾಕೆ ಬಳಸಬಾರದು. ಇದರ ಸಾಧಕ ಬಾಧಕಗಳ ಬಗ್ಗೆ ವರದಿ ನೀಡಿ ಅಂತ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಒಂದು ವೇಳೆ ಸಾರಿಗೆ ಇಲಾಖೆ ಮುಖ್ಯ ಕಾರ್ಯದರ್ಶಿಯವರ ಈ ನಿರ್ಧಾರವನ್ನ ಒಪ್ಪಿದ್ರೆ ಮುಂದಿನ ತಿಂಗಳನಿಂದಲೇ ಐಎಎಸ್ ಅಧಿಕಾರಿಗಳು ಓಲಾ, ಊಬರ್ ಬುಕ್ ಮಾಡಲು ರೆಡಿಯಾಗಿರಬೇಕು.

    ಮಿತವ್ಯಯ ಸರ್ಕಾರಕ್ಕಾಗಿ ಈ ಕುರಿತು ಆಲೋಚಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಒಂದು ಕಡೆ ಅಧಿಕಾರಿಗಳು ತಮ್ಮ ಖಾಸಗಿ ಕೆಲಸಗಳಿಗೂ ಸರ್ಕಾರಿ ವಾಹನ ಬಳಕೆ ಮಾಡುತ್ತಾರೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಮುಖ್ಯ ಕಾರ್ಯದರ್ಶಿಗಳಿಗೆ ಸಲಹೆ ಕೇಳಿ ಪತ್ರ ಬರೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv