Tag: Ibrahim Sutar

  • ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ  ಇಬ್ರಾಹಿಂ ಸುತಾರ ನಿಧನ

    ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ  ಇಬ್ರಾಹಿಂ ಸುತಾರ ನಿಧನ

    ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ(Ibrahim sutar) ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

    ಇಬ್ರಾಹಿಂ ಸುತಾರ(76) ಬೆಳಗ್ಗೆ 6.30ಕ್ಕೆ ಹೃದಯಾಘಾತದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಸಾವನ್ನಪ್ಪಿದ್ದಾರೆ. ಇಬ್ರಾಹಿಂ ಸುತಾರ ಎದೆ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ. ತಕ್ಷಣಇಬ್ರಾಹಿಂ ಸುತಾರ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಕೊನೆಯುಸಿರೆಳೆದಿದ್ದಾರೆ. ಸುತಾರ್ ಅವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇದನ್ನೂ ಓದಿ:  ಫೇಸ್‍ಬುಕ್ ಒಡೆಯನಿಗಿಂತ ಈಗ ಅದಾನಿ, ಅಂಬಾನಿ ಶ್ರೀಮಂತರು

    ಕನ್ನಡದ ಕಬೀರ ಎಂದೇ ಹೆಸರಾಗಿದ್ದ ಇಬ್ರಾಹಿಂ ಸುತಾರ್ ಅವರು ಭಾವೈಕ್ಯ ಸಂದೇಶ ಸಾರುವ ಸಂತರಾಗಿದ್ದರು. ಕುರಾನ್, ಬೈಬಲ್, ಭಗವದ್ಗೀತೆ, ಶರಣರ ತತ್ವಗಳ ಅಧ್ಯಯನ ಮಾಡಿದವರಗಾಗಿದ್ದರು. ಪ್ರವಚನ, ಗೀತೆಗಳ ಮೂಲಕ ಜನರಲ್ಲಿ ಸಮಾನತೆ ಧರ್ಮ ಸಹಿಷ್ಣುತೆ ಪಾಠ ಮಾಡುತ್ತಿದ್ದರು. ಇದನ್ನೂ ಓದಿ: ಅಂಗನವಾಡಿ ಕೇಂದ್ರಗಳ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ದನಿ ಎತ್ತಿದ ಸುಮಲತಾ

    ಇಬ್ರಾಹಿಂ ಎನ್​. ಸುತಾರ್​ ಮೇ 10, 1940ರಲ್ಲಿ ಜನಿಸಿದರು. ಇವರ ತಂದೆ ಮಹಾಲಿಂಗಪುರದ ನಬಿಸಾಹೇಬ್​, ತಾಯಿ ಅಮೀನಾಬಿ. ಆರ್ಥಿಕವಾಗಿ ಸದೃಢರಾಗಿಲ್ಲದಿದ್ದರಿಂದ ಮೂರನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆದರು. ನಂತರ ನೇಕಾರ ವೃತ್ತಿ ಮೈಗೂಡಿಸಿಕೊಂಡರು. ಅದರ ಜೊತೆಗೆ ಮಸೀದಿಯಲ್ಲಿ ನಮಾಜು, ಕುರಾನ್​ ಅಧ್ಯಯನಮಾಡಿದ್ರಲ್ಲದೇ, ನಂತರದ ದಿನಗಳಲ್ಲಿ ಭಗವದ್ಗೀತೆ ಅಧ್ಯಯನ ಮಾಡಿದರು.

    ಪ್ರವಚನಗಳನ್ನು ಮಾಡುತ್ತಾ ಲೋಕಕ್ಕೆ ಭಾವೈಕ್ಯತೆಯ ಪಾಠವನ್ನು ಸಾರಿದರು. ಕನ್ನಡದ ಕಬೀರ ಎಂದೇ ಇವರು ಖ್ಯಾತ ರಾಗಿದ್ದರು. ಇವರಿಗೆ 1995ರಲ್ಲಿ ಕರ್ನಾಟಕ ಸರ್ಕಾರ ರಾಜೋತ್ಸವ ಪ್ರಶಸ್ತಿಯನ್ನು ನೀಡಿದೆ. ಭಾರತ ಸರ್ಕಾರ 2018ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ಸರ್ವಧರ್ಮ ಸಮನ್ವಯದ ಪ್ರವಚನಕಾರರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನರಾದ ಸುದ್ದಿ ತಿಳಿದು ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ನಾಯಕರು ಸುತಾರ್ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

  • ಪದ್ಮಶ್ರೀ ಪುರಸ್ಕೃತರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ – ಪೊಲೀಸ್ ಠಾಣೆಗೆ ದೂರು

    ಪದ್ಮಶ್ರೀ ಪುರಸ್ಕೃತರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ – ಪೊಲೀಸ್ ಠಾಣೆಗೆ ದೂರು

    ಬಾಗಲಕೋಟೆ: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಕ್ರಿಯೆಟ್ ಮಾಡಿ ಪೋಸ್ಟ್ ಒಂದನ್ನು ಹರಿಬಿಡಲಾಗಿದೆ.

    ಭಾವೈಕ್ಯತೆ ಹರಿಕಾರ ಪ್ರವಚನಕಾರ, ಕನ್ನಡದ ಕಬೀರ ಎಂದೇ ಹೆಸರುವಾಸಿ ಆಗಿರುವ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಮಹಲಿಂಗಪುರ ಪಟ್ಟಣದ ನಿವಾಸಿ ಇಬ್ರಾಹಿಂ ಸುತಾರ್ ಅವ್ರ ಹೆಸರಿನಲ್ಲಿ, ಕೆಲ ಕಿಡಿಗೇಡಿಗಳು ಪೌರತ್ವ ತಿದ್ದುಪಡಿ ಕಾಯ್ದೆ ಪರ ಇರುವ ಪೋಸ್ಟ್ ಮಾಡಿದ್ದಾರೆ.

    “ಯಾವ ಭಾರತೀಯ ಮುಸಲ್ಮಾನರಿಗೂ ಪೌರತ್ವ ತಿದ್ದುಪಡಿಯಿಂದ ತೊಂದರೆಯಿಲ್ಲ. ಸಮಾಜದಲ್ಲಿ ಸುಳ್ಳು ಸುದ್ದಿ ಯಾರೂ ಹಬ್ಬಿಸಬಾರದು. ನಾವೆಲ್ಲ ಭಾರತೀಯರೇ” ಎಂದು ಬರೆದಿರುವ ಪೋಸ್ಟ್ ಹರಿಬಿಡಲಾಗಿದೆ.

    ಫೇಸ್ ಬುಕ್ ನಲ್ಲಿ ಪರ ವಿರೋಧ ಕಮೆಂಟ್ಸ್ ಜೋರಾಗಿ ನಡೆದಿವೆ. ಅಲ್ಲದೇ ಕೆಲವರು ಪೋಸ್ಟ್ ಕರೆ ಮಾಡಿ ಪ್ರವಚನಕಾರ ಇಬ್ರಾಹಿಂ ಸುತಾರ್ ಅವರ ಜೊತೆ ವಾದ ಕೂಡಾ ಮಾಡಿದ್ದಾರೆ.

    ಇಬ್ರಾಹಿಂ ಅವರ ಪುತ್ರ ಹುಮಾಯುನ್ ಅವರು, ಇದು ನಮ್ಮ ತಂದೆ ಖಾತೆಯಲ್ಲ ಎಂದು ಕಮೆಂಟ್ಸ್ ನಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ವಿಷಯ ಅರಿತಿರುವ ಇಬ್ರಾಹಿಂ ಸುತಾರ್ ಅವರು ನಕಲಿ ಫೇಸ್ ಬುಕ್ ಖಾತೆ ಬಗ್ಗೆ ಮಹಲಿಂಗಪುರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಅಲ್ಲದೇ ಈ ಕುರಿತು ಮಾಧ್ಯಮಗಳಿಗೆ ವಿಷಯ ಸ್ಪಷ್ಟಪಡಿಸಿದ್ದಾರೆ.

    ನಾನು ಫೇಸ್ ಬುಕ್ ಖಾತೆಯನ್ನೇ ಹೊಂದಿಲ್ಲ. ಯಾರೋ ಕಿಡಿಗೇಡಿಗಳು ನನ್ನ ಹೆಸರಿನ ನಕಲಿ ಫೇಸ್ ಬುಕ್ ಖಾತೆ ಕ್ರಿಯೆಟ್ ಮಾಡಿ ಈ ರೀತಿಯ ವಿಷಯ ಹರಿಬಿಟ್ಟಿದ್ದಾರೆ. ನನಗೆ ರಾಜಕೀಯ ಗೊತ್ತಿಲ್ಲ, ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ನನಗೆ ಸಂಪೂರ್ಣ ಗೊತ್ತಿಲ್ಲ. ಇದು ನನ್ನ ಫೇಸ್ ಬುಕ್ ಖಾತೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.