Tag: ICC Men’s T20 World Cup

  • ಹಾರ್ದಿಕ್ ಪಾಂಡ್ಯ ಅರ್ಧಶತಕ- ಬಾಂಗ್ಲಾದೇಶಕ್ಕೆ 197 ರನ್‌ಗಳ ಗುರಿ ನೀಡಿದ ಭಾರತ

    ಹಾರ್ದಿಕ್ ಪಾಂಡ್ಯ ಅರ್ಧಶತಕ- ಬಾಂಗ್ಲಾದೇಶಕ್ಕೆ 197 ರನ್‌ಗಳ ಗುರಿ ನೀಡಿದ ಭಾರತ

    ನಾರ್ತ್ ಸೌಂಡ್ (ಆ್ಯಂಟಿಗಾ): 2024ರ ಟಿ20 ವಿಶ್ವಕಪ್‌ನ (T20 World Cup) ಸೂಪರ್-8 ಪಂದ್ಯದಲ್ಲಿ ಭಾರತ (India) ಮತ್ತು ಬಾಂಗ್ಲಾದೇಶ (Bangladesh) ತಂಡಗಳು ಮುಖಾಮುಖಿಯಾಗಿವೆ. ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ 196 ರನ್ ಗಳಿಸುವ ಮೂಲಕ ಬಾಂಗ್ಲಾದೇಶಕ್ಕೆ 197 ರನ್‌ಗಳ ಗುರಿ ನೀಡಿದೆ.

    ಟಾಸ್ ಗೆದ್ದು ಬಾಂಗ್ಲಾದೇಶ ಬೌಲಿಂಗ್ ಆಯ್ದುಕೊಂಡಿತು. ಮೊದಲಿಗೆ ಭಾರತ ತಂಡದಿಂದ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಬ್ಯಾಟ್ ಬೀಸಿ ಉತ್ತಮ ಆರಂಭ ನೀಡಿದರು. 11 ಎಸೆತಗಳಿಗೆ 23 ರನ್ ಸಿಡಿಸಿ ರೋಹಿತ್ ಶರ್ಮಾ ಔಟಾಗುವ ಮೂಲಕ ಟೀಂ ಇಂಡಿಯಾದ ಮೊದಲ ವಿಕೆಟ್ ಪತನಗೊಂಡಿತು. 11 ಬಾಲ್‌ಗಳಲ್ಲಿ ರೋಹಿತ್ ಶರ್ಮಾ 3 ಫೋರ್ ಹಾಗೂ 1 ಸಿಕ್ಸ್ ಸಿಡಿಸಿ ಒಟ್ಟು 23 ಅಂಕಗಳನ್ನು ತಂಡಕ್ಕೆ ಗಳಿಸಿಕೊಟ್ಟರು. ವಿರಾಟ್ ಕೊಹ್ಲಿ 28 ಬಾಲ್‌ಗಳಿಗೆ ಒಟ್ಟು 37 ರನ್ ಸಿಡಿಸಿ 2ನೇ ವಿಕೆಟ್ ಬಿಟ್ಟುಕೊಟ್ಟರು.

    ಬಳಿಕ ಕ್ರೀಸ್‌ಗೆ ಬಂದ ಸೂರ್ಯಕುಮಾರ್ ಯಾದವ್ ಮೊದಲ ಎಸೆತಕ್ಕೆ ಸಿಕ್ಸ್ ಬಾರಿಸಿ ಎರಡನೇ ಬಾಲ್ ಅನ್ನು ವಿಕೆಟ್ ಕೀಪರ್ ಕೈಗೆ ಕ್ಯಾಚ್ ನೀಡುವ ಮೂಲಕ ಒಟ್ಟು 6 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ರಿಷಭ್ ಪಂತ್ 4 ಫೋರ್ ಹಾಗೂ 2 ಸಿಕ್ಸ್ ಸಿಡಿಸಿ 24 ಬಾಲ್‌ಗಳಿಗೆ ಒಟ್ಟು 36 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

    ಬಳಿಕ ಕ್ರೀಸ್‌ಗೆ ಮರಳಿದ ಶಿವಂ ದುಬೆ 24 ಎಸೆತಗಳಿಗೆ 34 ರನ್ ಸಿಡಿಸಿ ಔಟಾದರು. ಶಿವಂ ದುಬೆ ಹಾಗೂ ಹಾರ್ದಿಕ್ ಪಾಂಡ್ಯ ಜೊತೆಯಾಟವಾಡಿ ತಂಡಕ್ಕೆ 54 ರನ್ ಗಳಿಸಿಕೊಟ್ಟರು. ಅಕ್ಷರ್ ಪಟೇಲ್ 5 ಎಸೆತಗಳಿಗೆ 3 ರನ್ ಗಳಿಸಿ ಔಟಾಗದೇ ಆಟವನ್ನು ಕೊನೆಗೊಳಿಸಲು ಸಹಕರಿಸಿದರು. ಹಾರ್ದಿಕ್ ಪಾಂಡ್ಯ ಕೊನೆಯ 1 ಬಾಲ್‌ನಲ್ಲಿ ಫೋರ್ ಸಿಡಿಸಿ 27 ಎಸೆತಗಳಿಗೆ ಅರ್ಧಶತಕ ಪೂರ್ಣಗೊಳಿಸಿ ಔಟಾಗದೇ ಆಟವನ್ನು ಕೊನೆಗೊಳಿಸಿದರು.

  • ಪಾಕ್-ಕಿವೀಸ್ ಸೆಮಿಫೈನಲ್‌ – T20 ವಿಶ್ವಕಪ್ ಕ್ರಿಕೆಟ್‌ನಲ್ಲಿಂದು ಬಿಗ್ ಫೈಟ್

    ಪಾಕ್-ಕಿವೀಸ್ ಸೆಮಿಫೈನಲ್‌ – T20 ವಿಶ್ವಕಪ್ ಕ್ರಿಕೆಟ್‌ನಲ್ಲಿಂದು ಬಿಗ್ ಫೈಟ್

    ಕ್ಯಾನ್ಬೆರಾ: ನ್ಯೂಜಿಲೆಂಡ್ (New Zealand) ಹಾಗೂ ಪಾಕಿಸ್ತಾನ (Pakistan) ತಂಡಗಳು ಇಂದಿನ ಮೊದಲ ಸೆಮಿಫೈನಲ್ (1st Semi Final) ಪಂದ್ಯದಲ್ಲಿ ಸೆಣಸಾಡಲಿವೆ. ಇಂದಿನ ಪಂದ್ಯದಲ್ಲಿ ಗೆದ್ದು ಫೈನಲ್‌ಗೆ ಲಗ್ಗೆ ಹಾಕಲು ಉಭಯ ತಂಡಗಳು ರಣತಂತ್ರ ಹೆಣೆದಿವೆ.

    ಲೀಗ್ ಪಂದ್ಯಗಳಲ್ಲಿ ಬಲಿಷ್ಠ ತಂಡಗಳನ್ನ ಬಗ್ಗು ಬಡಿದಿರೋ ನ್ಯೂಜಿಲೆಂಡ್ (New Zealand), ಕೇವಲ ಒಂದು ಪಂದ್ಯದಲ್ಲಿ ಸೋಲುಂಡಿದೆ. ಇತ್ತ, ಪಾಕ್ ಪಡೆ ಲೀಗ್ ಪಂದ್ಯದಲ್ಲಿ ಆರಂಭಿಕ 2 ಪಂದ್ಯಗಳನ್ನ ಕೈಚೆಲ್ಲಿ ನಂತರ ಫಿನಿಕ್ಸ್‌ನಂತೆ ಎದ್ದು ಸೆಮಿಸ್‌ಗೆ ಎಂಟ್ರಿ ಕೊಟ್ಟಿದೆ. ಇದನ್ನೂ ಓದಿ: ನೆಟ್ ಪ್ರಾಕ್ಟೀಸ್ ವೇಳೆ ರೋಹಿತ್ ಶರ್ಮಾ ಬಲಗೈಗೆ ಪೆಟ್ಟು – ಟೀಂ ಇಂಡಿಯಾಗೆ ಆಘಾತ

    ಇಂದು ಮಧ್ಯಾಹ್ನ 1.30ಕ್ಕೆ ಇತ್ತಂಡಗಳು ಸಿಡ್ನಿಯ ಕ್ರೀಡಾಂಗಣದಲ್ಲಿ ಅಖಾಡಕ್ಕಿಳಿಯಲಿವೆ. ಇತ್ತಂಡಗಳಲ್ಲೂ ಬಲಿಷ್ಠ ಬ್ಯಾಟಿಂಗ್ ಹಾಗೂ ಬೌಲರ್‌ಗಳ ದಂಡೇ ಇದ್ದು ಭಾರೀ ಜಿದ್ದಾ-ಜಿದ್ದಿ ನಿರೀಕ್ಷಿಸಬಹುದಾಗಿದೆ. ಇದನ್ನೂ ಓದಿ: ಮುಂಬೈ ಗಲ್ಲಿಯಲ್ಲಿ ಅಭಿಮಾನಿಗಳ ಜೊತೆ ಕ್ರಿಕೆಟ್ ಆಡಿದ ಎಬಿಡಿ

    ನ್ಯೂಜಿಲೆಂಡ್ ಹಾಗೂ ಪಾಕ್ ತಂಡಗಳ ಟಿ-20 ವಿಶ್ವಕಪ್ (T20 Worldcup) ಮುಖಾಮುಖಿಯ ರೆಕಾರ್ಡ್ ನೋಡೋದಾದ್ರೆ, ಎರಡು ತಂಡಗಳು 6 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಪಾಕಿಸ್ತಾನ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ರೆ, ನ್ಯೂಜಿಲೆಂಡ್ ಕೇವಲ 2 ಜಯ ಸಾಧಿಸಿದೆ. ಇಂದಿನ ಪಂದ್ಯದಲ್ಲಿ ಯಾರು ಗೆಲುವು ಸಾಧಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]