Tag: ICC World Cup

  • ಕನ್ನಡ ಮಾತು ಕೇಳಿ ಇಂಗ್ಲಿಷ್‌ನಲ್ಲಿ ಉತ್ತರ ಕೊಟ್ಟ ರಚಿನ್‌ – ಬೆಂಗ್ಳೂರು ವಿಲ್ಸನ್‌ ಗಾರ್ಡನ್‌ ನೆನಪು ಹಂಚಿಕೊಂಡ ರವೀಂದ್ರ

    ಕನ್ನಡ ಮಾತು ಕೇಳಿ ಇಂಗ್ಲಿಷ್‌ನಲ್ಲಿ ಉತ್ತರ ಕೊಟ್ಟ ರಚಿನ್‌ – ಬೆಂಗ್ಳೂರು ವಿಲ್ಸನ್‌ ಗಾರ್ಡನ್‌ ನೆನಪು ಹಂಚಿಕೊಂಡ ರವೀಂದ್ರ

    ಅಹಮದಾಬಾದ್: ಏಕದಿನ ವಿಶ್ವಕಪ್ (Cricket World Cup) ಟೂರ್ನಿಯ ಚೊಚ್ಚಲ ಪಂದ್ಯದಲ್ಲೇ ಆಂಗ್ಲರ ವಿರುದ್ಧ ಶತಕ ಸಿಡಿಸಿ ಕಿವೀಸ್ ಪಡೆಗೆ ಗೆಲುವು ತಂದುಕೊಟ್ಟ ರಚಿನ್ ರವೀಂದ್ರ (Rachin Ravindra) ನಿನ್ನೆಯಿಂದಲೂ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ರಚಿನ್‌ ಬಗ್ಗೆ ಅನೇಕ ಕುತೂಹಲಕಾರಿ ಸಂಗತಿಗಳು ಹರಿದಾಡುತ್ತಿವೆ. ಇದೀಗ ರಚಿನ್‌ ರವೀಂದ್ರ ಅವರೊಂದಿಗೆ ಕನ್ನಡದಲ್ಲಿ ಮಾಡಿರುವ ಸಂದರ್ಶನದ ವೀಡಿಯೋ ತುಣುಕು ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಇಂಗ್ಲೆಂಡ್‌ (England) ವಿರುದ್ಧ ಗೆಲುವು ಸಾಧಿಸಿದ ಬಳಿಕ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ರಚಿನ್‌ ನಿರೂಪಕರು ಕನ್ನಡದಲ್ಲೇ ಕೇಳುವ ಪ್ರಶ್ನೆಗಳನ್ನು ಸ್ಪಷ್ಟವಾಗಿ ಅರ್ಥಮಾಡಿಕೊಂಡು ಇಂಗ್ಲಿಷ್‌ನಲ್ಲೇ ಉತ್ತರ ಕೊಟ್ಟಿದ್ದಾರೆ. ಈ ಮೂಲಕ ಕನ್ನಡ ಭಾಷೆ ಮೇಲಿನ ಪ್ರೀತಿಯನ್ನು ಅಭಿವ್ಯಕ್ತಪಡಿಸಿದ್ದಾರೆ. ಇದಕ್ಕೆ ಅಭಿಮಾನಿಗಳು ಭೇಷ್‌ ಎಂದಿದ್ದಾರೆ. ಇದನ್ನೂ ಓದಿ: World Cup 2023: ಚೊಚ್ಚಲ ಪಂದ್ಯದಲ್ಲೇ ಸೇಡು ತೀರಿಸಿಕೊಂಡ ಕಿವೀಸ್‌; ಇಂಗ್ಲೆಂಡ್‌ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ

    ನಿರೂಪಕರು ಮೊದಲು ನಿಮ್ಗೆ ರಿಪ್ಲೇ ಮಾಡೋದಕ್ಕೆ ಕಷ್ಟ ಆಗುತ್ತೆ ಅಂತಾ ನಾವು ಕನ್ನಡದಲ್ಲಿ ಪ್ರಶ್ನೆ ಕೇಳುತ್ತೇವೆ ನಡೆಯುತ್ತಲ್ಲಾ? ಎನ್ನುತ್ತಿದ್ದಂತೆ ಹೋ, ತುಂಬಾ ಸಂತೋಷ ಎಂದು ಹೇಳಿದ ರಚಿನ್‌, ಬಳಿಕ ಕನ್ನಡದಲ್ಲಿ ಕೇಳಿದ ಪ್ರತಿಯೊಂದು ಪ್ರಶ್ನೆಯನ್ನು ಸುಲಭವಾಗಿ ಅರ್ಥಮಾಡಿಕೊಂಡು ಇಂಗ್ಲಿಷ್‌ನಲ್ಲಿ ಉತ್ತರ ಕೊಟ್ಟಿದ್ದಾರೆ. ಇದನ್ನೂ ಓದಿ: World Cup 2023: ಚೊಚ್ಚಲ ಪಂದ್ಯದಲ್ಲೇ ಮೋದಿ ಕ್ರಿಕೆಟ್‌ ಅಂಗಳದಲ್ಲಿ ಇತಿಹಾಸ ಬರೆದ ಇಂಗ್ಲೆಂಡ್‌

    ಕನ್ನಡದಲ್ಲಿ ಕೇಳುವ ನಿರೂಪಕರ ಪ್ರಶ್ನೆಗಳಿಗೆ ಸಂತೋಷದಿಂದಲೇ ಉತ್ತರಿಸಿದ ರಚಿನ್‌, ಶತಕ ಸಿಡಿಸುವುದು ಒಬ್ಬ ಕ್ರಿಕೆಟ್ ಆಟಗಾರನಿಗೆ ತುಂಬಾ ವಿಶಿಷ್ಟವಾಗಿರುತ್ತದೆ. ಆದರೆ ಭಾರತದ ಮೈದಾನದಲ್ಲಿ ಇಂತಹ ದೊಡ್ಡ ಇನಿಂಗ್ಸ್ ಆಡಿರುವುದು ನಿಜಕ್ಕೂ ಆಹ್ಲಾದಾಕರವಾಗಿದೆ. ಇಂತಹ ದೊಡ್ಡ ಮೈದಾನದಲ್ಲಿ ಆಡುವುದು ನಿಜಕ್ಕೂ ಮರೆಯಲಾಗದ ಕ್ಷಣವಾಗಿದೆ. ಇದು ಮೊದಲ ಪಂದ್ಯವಾದ್ದರಿಂದ ಆಶಾದಾಯಕವಾಗಿಯೇ ಮುಂದುವರಿಯಬಹುದು ಎಂದು ಹೇಳಿದ್ದಾರೆ.

    ಈ ಸೋಲಿನಿಂದ ಇಂಗ್ಲೆಂಡ್‌ ತಂಡವನ್ನು ಟೂರ್ನಿಯಿಂದ ಸೋಲಿಸಬಹುದು ಎಂದು ನಾನು ಹೇಳುವುದಿಲ್ಲ. ಇಂಗ್ಲೆಂಡ್‌ ಕೂಡ ಒಂದು ಅದ್ಭುತ ಕ್ರಿಕೆಟ್‌ ತಂಡ. ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಇನ್ನೂ ಮುಂದೆ ಸಾಗುತ್ತಾರೆ ಅಂತ ನನಗನ್ನಿಸುತ್ತದೆ. ಕೆಲವೊಮ್ಮೆ ದಿನ ನಿಮ್ಮದಾಗಿರುತ್ತದೆ, ಕೆಲವೊಮ್ಮೆ ಆಗಿರೋದಿಲ್ಲ ಅಷ್ಟೇ. ಆದ್ರೆ ಖಂಡಿತವಾಗಿಯೂ ಇಂಗ್ಲೆಂಡ್‌ ಚಾಂಪಿಯನ್‌ ಟೀಂ ಎಂದು ನಂಬುತ್ತೇನೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಆಂಗ್ಲರ ವಿರುದ್ಧ ಶತಕ ಸಿಡಿಸಿ ಮೆರೆದಾಡಿದ ಬೆಂಗ್ಳೂರು ಮೂಲದ ರಚಿನ್‌ ರವೀಂದ್ರ ಯಾರು ಗೊತ್ತಾ?

    ಇದೇ ವೇಳೆ ಬೆಂಗಳೂರಿಗಿರುವ ನಂಟಿನ ಬಗ್ಗೆ ಮಾತನಾಡಿದ ರಚಿನ್‌, ನಾನು ಬೆಂಗಳೂರಿಗೆ ಹಿಂದಿರುಗುತ್ತಿರುವುದು ಆಹ್ಲಾದಕರವೆನಿಸಿದೆ. ಬೆಂಗಳೂರಿನಲ್ಲಿ ನನ್ನ ಕುಟುಂಬದೊಂದಿಗಿನ ನೆನಪುಗಳಿವೆ. ನನ್ನ ಅಜ್ಜ ಮತ್ತು ಅಜ್ಜಿಯನ್ನು ವಿಲ್ಸನ್‌ ಗಾರ್ಡನ್‌ನಲ್ಲಿ ನೋಡಿದ ನೆನಪು ಈಗಲೂ ನೆನಪಾಗುತ್ತೆ. ನನ್ನ ತಾಯಿ ಸಂಬಂಧಿಕರು ಇಸ್ರೋ ಬಡಾವಣೆಯಲ್ಲಿದ್ದಾರೆ. ನನಗೆ ಸಾಧ್ಯವಾದಾಗಲೆಲ್ಲಾ ಅವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತೇನೆ. ಅದು ನನಗೆ ತುಂಬಾ ಸಂತೋಷ ನೀಡುತ್ತದೆ. ಮುಂದೆ ಪಾಕಿಸ್ತಾನದ ವಿರುದ್ಧ ಬೆಂಗಳೂರಿನಲ್ಲಿ ಆಡುವಾಗಲು ಅಭಿಮಾನಿಗಳಿಂದ ಸಾಕಷ್ಟು ಬೆಂಬಲ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

    ಅಲ್ಲದೇ ನಮ್ಮದು ದೊಡ್ಡ ಪರಿವಾರ, ನನ್ನ ಇಡೀ ಕುಟುಂಬಕ್ಕೆ ಎಷ್ಟು ಟಿಕೆಟ್‌ಗಳನ್ನು ಪಡೆಯಲು ಸಾಧ್ಯವಾಗುತ್ತದೆ, ಅಷ್ಟು ಪಡೆಯಲು ನಾನು ಪ್ರಯತ್ನಿಸುತ್ತೇನೆ. ಆದ್ರೆ ಕುಟುಂಬದಿಂದ ಎಷ್ಟು ಜನ ಬರುತ್ತಾರೆ ಅನ್ನೋದು ಖಚಿತವಿಲ್ಲ. ಒಟ್ಟಿನಲ್ಲಿ ಅವರೆಲ್ಲರಿಗೂ ನಾನು ಕೃತಜ್ಞನನಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: Asian Games 2023- ಗ್ರೀಕೊ ರೋಮನ್ ಕುಸ್ತಿಯಲ್ಲಿ ಭಾರತಕ್ಕೆ 13 ವರ್ಷಗಳ ಬಳಿಕ ಪದಕ

    ರಚಿನ್‌ ರವೀಂದ್ರ ಯಾರು?
    23 ವರ್ಷದ ರಚಿನ್ ರವೀಂದ್ರ ಅವರು ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ ಜನಿಸಿದ್ದರೂ ಅವರ ಅಪ್ಪ-ಅಮ್ಮ ಮೂಲತಃ ಬೆಂಗಳೂರಿನವರು. ತಂದೆ ರವಿ ಕೃಷ್ಣಮೂರ್ತಿ ಹಾಗೂ ತಾಯಿ ದೀಪಾ ಕೃಷ್ಣಮೂರ್ತಿ ಅವರು ಸಾಫ್ಟ್ವೇರ್ ಎಂಜಿನೀಯರ್‌ಗಳಾಗಿದ್ದು, ಉದ್ಯೋಗ ಅರಸಿ 1990ರ ದಶಕದಲ್ಲಿ ಬೆಂಗಳೂರಿನಿಂದ ನ್ಯೂಜಿಲೆಂಡ್‌ಗೆ ತೆರಳಿದ್ದರು. ರಚಿನ್ ರವೀಂದ್ರ ಅವರ ತಂದೆ, ಸಾಫ್ಟ್ವೇರ್ ಎಂಜಿನೀಯರ್ ಆಗಿದ್ದರೂ ಅಪ್ಪಟ ಕ್ರಿಕೆಟ್ ಅಭಿಮಾನಿ. ಅದರಲ್ಲೂ ರವಿ ಕೃಷ್ಣಮೂರ್ತಿ ಅವರು ಭಾರತೀಯ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ಅವರ ಪಕ್ಕಾ ಫ್ಯಾನ್. ಈ ಕಾರಣದಿಂದಾಗಿ ರಾಹುಲ್ ದ್ರಾವಿಡ್ ಹೆಸರಿನಿಂದ ʻರʼ ಮತ್ತು ಸಚಿನ್ ತೆಂಡೂಲ್ಕರ್ ಹೆಸರಿನಿಂದ ʻಚಿನ್ʼ ಅಕ್ಷರಗಳನ್ನು ತೆಗೆದುಕೊಂಡು ತಮ್ಮ ಪುತ್ರನಿಗೆ ರಚಿನ್ ಎಂದು ಹೆಸರಿಟ್ಟಿದ್ದರು.

    ರಚಿನ್ ರವೀಂದ್ರ ಅವರು ನ್ಯೂಜಿಲೆಂಡ್ ಪರ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದಾರೆ. 2016 ಮತ್ತು 2018ರಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಅವರು ನ್ಯೂಜಿಲೆಂಡ್ ದೇಶಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಅಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದರು. ಇದರ ಫಲವಾಗಿ 2021ರಲ್ಲಿ ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಮೊದಲ ಬಾರಿ ಆಯ್ಕೆಯಾಗಿದ್ದರು. ನಂತರ ಇದೇ ವರ್ಷದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಂಗ್ಲರ ವಿರುದ್ಧ ಶತಕ ಸಿಡಿಸಿ ಮೆರೆದಾಡಿದ ಬೆಂಗ್ಳೂರು ಮೂಲದ ರಚಿನ್‌ ರವೀಂದ್ರ ಯಾರು ಗೊತ್ತಾ?

    ಆಂಗ್ಲರ ವಿರುದ್ಧ ಶತಕ ಸಿಡಿಸಿ ಮೆರೆದಾಡಿದ ಬೆಂಗ್ಳೂರು ಮೂಲದ ರಚಿನ್‌ ರವೀಂದ್ರ ಯಾರು ಗೊತ್ತಾ?

    ಅಹಮದಾಬಾದ್‌: ಏಕದಿನ ವಿಶ್ವಕಪ್‌ ಟೂರ್ನಿಯ ಚೊಚ್ಚಲ ಪಂದ್ಯದಲ್ಲೇ ಆಂಗ್ಲರ ವಿರುದ್ಧ ಶತಕ ಸಿಡಿಸಿ ಕಿವೀಸ್‌ ಪಡೆಗೆ ಭರ್ಜರಿ ಗೆಲುವು ತಂದುಕೊಟ್ಟ ರಚಿನ್‌ ರವೀಂದ್ರ (Rachin Ravindra) ಈಗ ಜಾಲತಾಣದಲ್ಲಿ ಸದ್ದು ಮಾಡ್ತಿದ್ದಾರೆ. 23 ವರ್ಷದ ರಚಿನ್‌ ರವೀಂದ್ರ ಅವರಿಗೆ ರಚಿನ್‌ ಎಂಬ ಹೆಸರು ಬಂದಿದ್ದು ಹೇಗೆ? ಎನ್ನುವ ಬಗ್ಗೆ ಸಾಕಷ್ಟು ಕುತೂಹಲ ಹುಟ್ಟಿಕೊಂಡಿದೆ.

    ಹೌದು. ಇಂಗ್ಲೆಂಡ್‌ ವಿರುದ್ಧ ನಡೆದ ಪಂದ್ಯದಲ್ಲಿ 82 ಎಸೆತಗಳಲ್ಲಿಯೇ ಶತಕ (9 ಬೌಂಡರಿ, 4 ಸಿಕ್ಸರ್‌) ಪೂರೈಸಿದ ರಚಿನ್‌ ಒಟ್ಟಾರೆ 96 ಎಸೆತಗಳಲ್ಲಿ 5 ಸಿಕ್ಸರ್‌, 11 ಬೌಂಡರಿಗಳೊಂದಿಗೆ ಅಜೇಯ 123 ರನ್‌ಗಳನ್ನ ಸಿಡಿಸಿದ್ದಾರೆ. ಮುರಿಯದ 2ನೇ ವಿಕೆಟಿಗೆ 273 ರನ್‌ಗಳ ಜೊತೆಯಾಟದೊಂದಿಗೆ ನ್ಯೂಜಿಲೆಂಡ್‌ಗೆ (New Zealand) ಗೆಲುವು ತಂದುಕೊಟ್ಟಿದ್ದಾರೆ. ಇದಕ್ಕೂ ಮುನ್ನ ಹೈದರಾಬಾದ್‌ನಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲೂ ರಚಿನ್‌ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ತೋರಿದ್ದರು. ಇದನ್ನೂ ಓದಿ: World Cup 2023: ಚೊಚ್ಚಲ ಪಂದ್ಯದಲ್ಲೇ ಸೇಡು ತೀರಿಸಿಕೊಂಡ ಕಿವೀಸ್‌; ಇಂಗ್ಲೆಂಡ್‌ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ

    ರಚಿನ್‌ ರವೀಂದ್ರ ಅವರು ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ ಜನಿಸಿದ್ದರೂ ಅವರ ಅಪ್ಪ-ಅಮ್ಮ ಮೂಲತಃ ಬೆಂಗಳೂರಿನವರು. ತಂದೆ ರವಿ ಕೃಷ್ಣಮೂರ್ತಿ ಹಾಗೂ ತಾಯಿ ದೀಪಾ ಕೃಷ್ಣಮೂರ್ತಿ ಅವರು ಸಾಫ್ಟ್‌ವೇರ್‌ ಎಂಜಿನೀಯರ್‌ಗಳಾಗಿದ್ದು, ಉದ್ಯೋಗ ಅರಿಸಿ 1990ರ ದಶಕದಲ್ಲಿ ಬೆಂಗಳೂರಿನಿಂದ ನ್ಯೂಜಿಲೆಂಡ್‌ಗೆ ತೆರಳಿದ್ದರು. ರಚಿನ್‌ ರವೀಂದ್ರ ಅವರ ತಂದೆ, ಸಾಫ್ಟ್‌ವೇರ್‌ ಎಂಜಿನೀಯರ್‌ ಆಗಿದ್ದರೂ ಅಪ್ಪಟ ಕ್ರಿಕೆಟ್‌ ಅಭಿಮಾನಿ. ಅದರಲ್ಲೂ ರವಿ ಕೃಷ್ಣಮೂರ್ತಿ ಅವರು ಭಾರತೀಯ ಕ್ರಿಕೆಟ್‌ ದಿಗ್ಗಜರಾದ ಸಚಿನ್‌ ತೆಂಡೂಲ್ಕರ್‌ ಹಾಗೂ ರಾಹುಲ್‌ ದ್ರಾವಿಡ್‌ ಅವರ ಪಕ್ಕಾ ಫ್ಯಾನ್‌. ಈ ಕಾರಣದಿಂದಾಗಿ ರಾಹುಲ್‌ ದ್ರಾವಿಡ್‌ (Rahul Dravid) ಹೆಸರಿನಿಂದ ʻರʼ ಮತ್ತು ಸಚಿನ್‌ ತೆಂಡೂಲ್ಕರ್‌ (Sachin Tendulkar) ಹೆಸರಿನಿಂದ ʻಚಿನ್‌ʼ ಅಕ್ಷರಗಳನ್ನು ತೆಗೆದುಕೊಂಡು ತಮ್ಮ ಪುತ್ರನಿಗೆ ರಚಿನ್‌ ಎಂದು ಹೆಸರಿಟ್ಟಿದ್ದರು.

    ರಚಿನ್ ರವೀಂದ್ರ ಅವರು ನ್ಯೂಜಿಲೆಂಡ್‌ ಪರ ಅಂಡರ್‌-19 ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದಾರೆ. 2016 ಮತ್ತು 2018ರಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಅವರು ನ್ಯೂಜಿಲೆಂಡ್‌ ದೇಶಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಅಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದರು. ಇದರ ಫಲವಾಗಿ 2021ರಲ್ಲಿ ಭಾರತದ ವಿರುದ್ಧ ಟೆಸ್ಟ್‌ ಸರಣಿಯಲ್ಲಿ ನ್ಯೂಜಿಲೆಂಡ್‌ ತಂಡಕ್ಕೆ ಮೊದಲ ಬಾರಿ ಆಯ್ಕೆಯಾಗಿದ್ದರು. ನಂತರ ಇದೇ ವರ್ಷದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಇದನ್ನೂ ಓದಿ: World Cup 2023: ಚೊಚ್ಚಲ ಪಂದ್ಯದಲ್ಲೇ ಮೋದಿ ಕ್ರಿಕೆಟ್‌ ಅಂಗಳದಲ್ಲಿ ಇತಿಹಾಸ ಬರೆದ ಇಂಗ್ಲೆಂಡ್‌

    ಈ ಕುರಿತು ಮಾತನಾಡಿರುವ ರಚಿನ್‌ ರವೀಂದ್ರ, 2019ರ ವಿಶ್ವಕಪ್‌ ಟೂರ್ನಿ ವೇಳೆ ಅಭಿಮಾನಿಯಾಗಿ ವೀಕ್ಷಿಸುತ್ತಿದ್ದೆ. ಅಂದು ನನ್ನ ತಂದೆ ಭಾರತಕ್ಕೆ ಪ್ರವಾಸ ಕೈಗೊಂಡಿದ್ದರು, ನಾನೂ ಸಹ ಪ್ರವಾಸದಲ್ಲಿ ಬೆಂಗಳೂರಿನಲ್ಲಿದ್ದೆ. ಸಂಪೂರ್ಣ ಫೈನಲ್‌ ಪಂದ್ಯ ವೀಕ್ಷಿಸಿದೆ. ಆಗ ಇಂಗ್ಲೆಂಡ್‌ ವಿರುದ್ಧ ವಿರೋಚಿತ ಸೋಲನುಭವಿಸಿದ್ದನ್ನು ಕಂಡಿದ್ದೆ. ಆಗ ನನಗೆ 19 ವರ್ಷ ವಯಸ್ಸಾಗಿತ್ತು. ಆ ವಿರೋಚಿತ ಸೋಲನ್ನು ನಾನು ಇಂದಿಗೂ ಮರೆತಿಲ್ಲ. ಆ ನಂತರ ನಾನು ತಂಡದಲ್ಲಿ ಪಾಲ್ಗೊಳ್ಳಬೇಕು ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ.

    ಅಂದುಕೊಂಡಂತೆ 2023ರ ವಿಶ್ವಕಪ್‌ನಲ್ಲಿ ಪಾಲ್ಗೊಂಡಿರುವ ರಚಿನ್‌ ಇಂದು ಮೊದಲ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದು ಗೆಲುವು ತಂದುಕೊಟ್ಟಿದ್ದಾರೆ. ಇದನ್ನೂ ಓದಿ: ICC World Cup 2023: ಇಂದಿನಿಂದ ವಿಶ್ವಕಪ್‌ ಮಹಾಸಮರ – ಇಂದು ಇಂಗ್ಲೆಂಡ್‌ ವಿರುದ್ಧ ನ್ಯೂಜಿಲೆಂಡ್ ಸೆಣಸಾಟ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಂಕಾಗೆ ಆಘಾತ – ವಿಶ್ವಕಪ್‌ ಟೂರ್ನಿಯಿಂದ ಸ್ಪಿನ್‌ ಮಾಂತ್ರಿಕ ಹಸರಂಗ ಔಟ್‌?

    ಲಂಕಾಗೆ ಆಘಾತ – ವಿಶ್ವಕಪ್‌ ಟೂರ್ನಿಯಿಂದ ಸ್ಪಿನ್‌ ಮಾಂತ್ರಿಕ ಹಸರಂಗ ಔಟ್‌?

    ಕೊಲಂಬೊ: ಅಕ್ಟೋಬರ್‌ 5 ರಿಂದ ಭಾರತದಲ್ಲಿ ಆರಂಭವಾಗಲಿರುವ ಏಕದಿನ ವಿಶ್ವಕಪ್‌ (World Cup 2023) ಟೂರ್ನಿಗೂ ಮುನ್ನವೇ ಶ್ರೀಲಂಕಾ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಲಂಕಾ ತಂಡದ ಸ್ಪಿನ್‌ ಮಾಂತ್ರಿಕ ವಾನಿಂದು ಹಸರಂಗ ಗಾಯದ ಸಮಸ್ಯೆಗೆ (Wanindu Hasaranga Injury) ತುತ್ತಾಗಿದ್ದು, ವಿಶ್ವಕಪ್‌ ಟೂರ್ನಿಯಿಂದ ಬಹುತೇಕ ಹೊರಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

    ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹಸರಂಗ ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆಯೇ ಇಲ್ಲವೇ ಎಂಬುದನ್ನ ಪರಿಶೀಲಿಸಲು ಶ್ರೀಲಂಕಾ (Sri Lanka) ವಿದೇಶಿ ವೈದ್ಯರೊಂದಿಗೆ (Doctors) ಸಮಾಲೋಚನೆ ನಡೆಸುತ್ತಿದೆ. ಒಂದು ವೇಳೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೇ ಅವರು ವಿಶ್ವಕಪ್‌ ಟೂರ್ನಿಯಿಂದ ಹೊರಗುಳಿಯಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಬಾಬರ್‌ ಆಜಂ ಬಳಿಕ ನವೀನ್ ಉಲ್ ಹಕ್‌ನನ್ನ ಹೊಗಳಿದ ಗಂಭೀರ್‌ – ಕಾಲೆಳೆದ ಕೊಹ್ಲಿ ಫ್ಯಾನ್ಸ್‌

    ಕಳೆದ ಆಗಸ್ಟ್‌ ತಿಂಗಳಲ್ಲಿ ಲಂಕಾ ಪ್ರೀಮಿಯರ್‌ ಲೀಗ್‌ ವೇಳೆ ಹಸರಂಗ ಮಂಡಿರಜ್ಜು ಗಾಯದ ಸಮಸ್ಯೆಗೆ ತುತ್ತಾಗಿದ್ದರು. ಆದ್ದರಿಂದ ಏಷ್ಯಾಕಪ್‌ ವೇಳೆಯೂ ತಂಡದಿಂದ ಹೊರಗುಳಿದಿದ್ದರು. ಇದೀಗ 2023ರ ವಿಶ್ವಕಪ್‌ ಟೂರ್ನಿಗೆ ಸಿದ್ಧತೆ ನಡೆಸುತ್ತಿರುವ ಶ್ರೀಲಂಕಾ ತಂಡ ಅ.7 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ ತನ್ನ ವಿಶ್ವಕಪ್‌ ಅಭಿಯಾನ ಆರಂಭಿಸಲಿದೆ. ಇದನ್ನೂ ಓದಿ: Asian Games 2023: ಕ್ರಿಕೆಟ್‌ನಲ್ಲಿ ಚಿನ್ನ – ಇತಿಹಾಸ ನಿರ್ಮಿಸಿದ ಭಾರತದ ಮಹಿಳೆಯರು

    ಈ ಪಂದ್ಯದಲ್ಲಿ ಪಾಲ್ಗೊಳ್ಳಲು ಹಸರಂಗ ಫಿಟ್‌ನೆಸ್‌ ಸಾಬೀತು ಮಾಡಬೇಕಿದೆ. ಆದ್ದರಿಂದ ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆಯೇ ಇಲ್ಲವೇ ಎಂಬುದನ್ನ ತಿಳಿಯಲು ವಿದೇಶಿ ವೈದ್ಯರನ್ನ ಸಂಪರ್ಕಿಸಲಾಗುತ್ತಿದೆ. ಒಂದು ವೇಳೆ ಅವರಿಗೆ ಶಸ್ತ್ರ ಚಿಕಿತ್ಸೆ ಅಗತ್ಯವಿದ್ದರೆ ಕನಿಷ್ಠ 3 ತಿಂಗಳು ವಿಶ್ರಾಂತಿ ಪಡೆಯಬೇಕಾಗುತ್ತದೆ. ಜೊತೆಗೆ ವಿಶ್ವಕಪ್‌ ಟೂರ್ನಿಯಿಂದಲೂ ಹೊರಗುಳಿಯಬೇಕಾಗುತ್ತದೆ ಎಂದು ಶ್ರೀಲಂಕಾ ವೈದ್ಯಕೀಯ ಸಮಿತಿಯ ಮುಖ್ಯಸ್ಥ ಅರ್ಜುನ ಡಿ ಸಿಲ್ವಾ ತಿಳಿಸಿದ್ದಾರೆ. ಇದನ್ನೂ ಓದಿ: Asian Games : ಶೂಟಿಂಗ್‌ನಲ್ಲಿ ವಿಶ್ವದಾಖಲೆ – ಚಿನ್ನ ಗೆದ್ದ ಭಾರತದ ಪುರುಷರು

    ಇದೇ ಅಕ್ಟೋಬರ್‌ 5 ರಿಂದ ನವೆಂಬರ್‌ 19ರ ವರೆಗೆ ಭಾರತದ ವಿವಿಧ ಸ್ಥಳಗಳಲ್ಲಿ ಏಕದಿನ ವಿಶ್ವಕಪ್‌ ಟೂರ್ನಿ ನಡೆಯಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವಕಪ್‌ ಟೂರ್ನಿಯಲ್ಲಿ ಗೆದ್ದರೂ ಸೋತರೂ ದುಡ್ಡೋ ದುಡ್ಡು – ಬಹುಮಾನದ ಮೊತ್ತ ಪ್ರಕಟಿಸಿದ ICC

    ವಿಶ್ವಕಪ್‌ ಟೂರ್ನಿಯಲ್ಲಿ ಗೆದ್ದರೂ ಸೋತರೂ ದುಡ್ಡೋ ದುಡ್ಡು – ಬಹುಮಾನದ ಮೊತ್ತ ಪ್ರಕಟಿಸಿದ ICC

    ದುಬೈ: ಅಕ್ಟೋಬರ್‌ 5 ರಿಂದ ನವೆಂಬರ್‌ 19ರ ವರೆಗೆ ಭಾರತದ ಸಂಪೂರ್ಣ ಆತಿಥ್ಯದಲ್ಲಿ ಏಕದಿನ ವಿಶ್ವಕಪ್‌ (ODI World Cup) ಟೂರ್ನಿ ನಡೆಯುತ್ತಿದ್ದು, ಟೂರ್ನಿಗೆ ಅಂತಾರಾಷ್ಟ್ರೀ ಕ್ರಿಕೆಟ್‌ ಮಂಡಳಿ (ICC) ನಗದು ಬಹುಮಾನದ ಮೊತ್ತವನ್ನು ಪ್ರಕಟಿಸಿದೆ. ಮುಂದಿನ ತಿಂಗಳು ಆರಂಭವಾಗುವ ಈ ಟೂರ್ನಿಯಲ್ಲಿ ಆಡಲಿರುವ ಎಲ್ಲಾ 48 ಪಂದ್ಯಗಳಿಗೆ ಬಹುಮಾನದ ಮೊತ್ತ (Prize Money) ಮತ್ತು ಪ್ರೋತ್ಸಾಹ ಧನವನ್ನು ಐಸಿಸಿ ಪ್ರಕಟಿಸಿದೆ.

    ಈ ಟೂರ್ನಿಗೆ ಒಟ್ಟು 10 ಮಿಲಿಯನ್‌ ಡಾಲರ್‌ (83.10 ಕೋಟಿ) ಮೊತ್ತವನ್ನ ಘೋಷಿಸಿದೆ. ಏಕದಿನ ವಿಶ್ವಕಪ್‌ ವಿಜೇತ ತಂಡಕ್ಕೆ 4 ಮಿಲಿಯನ್ ಯುಎಸ್‌ ಡಾಲರ್‌ (USD) ಮೊತ್ತವನ್ನು (33.24 ಕೋಟಿ ರೂ.) ಪಡೆಯಲಿದೆ ಹಾಗೂ ರನ್ನರ್‌ ಅಪ್‌ ತಂಡ ಇದರಲ್ಲಿ ಅರ್ಧ ಅಂದರೆ, 16.62 ಕೋಟಿ ರೂ. ಗಳನ್ನು ಪಡೆದುಕೊಳ್ಳಲಿದೆ. ಇದನ್ನೂ ಓದಿ: ಶಮಿ ಮಾರಕ ಬೌಲಿಂಗ್‌ – ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ಜಯ

    ಸೆಮಿಫೈನಲ್‌ನಲ್ಲಿ ಸೋತ ಎರಡೂ ತಂಡಗಳಿಗೆ ತಲಾ 8 ಲಕ್ಷ ಡಾಲರ್ (ಸುಮಾರು 6.64 ಕೋಟಿ ರೂ.) ಸಿಗಲಿದೆ. ಸೆಮಿಫೈನಲ್‌ ತಲುಪುವಲ್ಲಿ ವಿಫಲವಾಗುವ ಎಲ್ಲಾ ತಂಡಗಳಿಗೆ 1 ಲಕ್ಷ ಯುಎಸ್‌ ಡಾಲರ್ (ಅಂದಾಜು 83.10 ಲಕ್ಷ ರೂ.) ನೀಡಲಾಗುತ್ತದೆ.

    ಗುಂಪು ಹಂತದ ಪಂದ್ಯಗಳಲ್ಲಿ ವಿಜೇತ ತಂಡಗಳು 40 ಸಾವಿರ ಯುಎಸ್‌ ಡಾಲರ್‌ ( 33.24 ಲಕ್ಷ ರೂ.) ಬಹುಮಾನ ಪಡೆಯಲಿವೆ. ಈ ಟೂರ್ನಿಯಲ್ಲಿ ವಿಜೇತ ತಂಡಗಳಿಗೆ ನಗದು ಬಹುಮಾನಕ್ಕಾಗಿ ಐಸಿಸಿ 1 ಕೋಟಿ ಡಾಲರ್ (ಸುಮಾರು 82.93 ಕೋಟಿ ರೂ.) ಖರ್ಚು ಮಾಡುತ್ತಿದೆ. ಟೂರ್ನಿಯನ್ನು ಹೆಚ್ಚು ಸ್ಪರ್ಧಾತ್ಮಕವಾಗಿಸಲು ಮತ್ತು ಆಟಗಾರರು ಮತ್ತು ಅಭಿಮಾನಿಗಳಿಗೆ ಮನರಂಜನೆ ನೀಡಲು ಐಸಿಸಿ ಈ ನಿರ್ಧಾರ ತೆಗೆದುಕೊಂಡಿದೆ. ಇದನ್ನೂ ಓದಿ: Asian Games 2023: ಅರುಣಾಚಲ ಪ್ರದೇಶದ ಮೂವರು ಅಥ್ಲೆಟ್‌ಗಳಿಗೆ ಪ್ರವೇಶ ನಿರಾಕರಿಸಿದ ಚೀನಾ

    ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದಲ್ಲಿ ವಿಶ್ವಕಪ್ ನಡೆಯಲಿದೆ. 45 ಲೀಗ್ ಪಂದ್ಯಗಳು ಮತ್ತು 3 ನಾಕೌಟ್ ಪಂದ್ಯಗಳು ನಡೆಯಲಿವೆ. ಭಾರತ, ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಮತ್ತು ನೆದರ್ಲೆಂಡ್‌ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ. ಇದನ್ನೂ ಓದಿ: Asia Cup 2023: ಒಂದೇ ಒಂದು ಕ್ಯಾಚ್‌ ಹಿಡಿದ ಜಡೇಜಾ, 6 ವಿಕೆಟ್‌ ಕಿತ್ತ ಸಿರಾಜ್‌ಗೆ ಲಕ್ಷ ಲಕ್ಷ ಬಹುಮಾನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಕೌಟ್ ಪಂದ್ಯಗಳಲ್ಲೇ ಟೀಂ ಇಂಡಿಯಾ ಕೈ ಕೊಡ್ತಿರೋದೇಕೆ – ಕಾರಣ ತಿಳಿಸಿದ ದಾದಾ

    ನಾಕೌಟ್ ಪಂದ್ಯಗಳಲ್ಲೇ ಟೀಂ ಇಂಡಿಯಾ ಕೈ ಕೊಡ್ತಿರೋದೇಕೆ – ಕಾರಣ ತಿಳಿಸಿದ ದಾದಾ

    ಮುಂಬೈ: ನಾಕೌಟ್ ಪಂದ್ಯಗಳಲ್ಲಿ ಟೀಂ ಇಂಡಿಯಾ (Team India) ಮಾನಸಿಕ ಒತ್ತಡಕ್ಕಿಂತಲೂ ಹೆಚ್ಚಾಗಿ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲವಾದ್ದರಿಂದ ಸೋಲನ್ನು ಎದುರಿಸುತ್ತಿದೆ ಎಂದು ಬಿಸಿಸಿಐ (BCCI) ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ತಿಳಿಸಿದ್ದಾರೆ.

    ಶನಿವಾರವಷ್ಟೇ ತಮ್ಮ 51ನೇ ಹುಟ್ಟುಹಬ್ಬ ಆಚರಿಸಿಕೊಂಡ ಗಂಗೂಲಿ, ನಾಕೌಟ್ ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆಲ್ಲಲು ಏಕೆ ಹೆಣಗಾಡುತ್ತಿದೆ ಎಂಬುದನ್ನ ವಿವರಿಸಿದ್ದಾರೆ. ಇದನ್ನೂ ಓದಿ: ICC World Cup 2023: ಟೀಂ ಇಂಡಿಯಾ ಪರಿಷ್ಕೃತ ವೇಳಾಪಟ್ಟಿ ರಿಲೀಸ್‌ – ಇಲ್ಲಿದೆ ಡಿಟೇಲ್ಸ್‌

    ಹೌದು. 2013ರಲ್ಲಿ ಎಂ.ಎಸ್ ಧೋನಿ (MS Dhoni) ನಾಯಕತ್ವದಲ್ಲಿದ್ದಾಗ ಭಾರತ ತಂಡ ಇಂಗ್ಲೆಂಡ್ ನೆಲದಲ್ಲಿ ಚಾಂಪಿಯನ್ ಟ್ರೋಫಿ ಗೆದ್ದಿತ್ತು. ಆ ನಂತರ ಐಸಿಸಿ (ICC) ಟೂರ್ನಿಗಳಲ್ಲಿ ಯಾವುದೇ ಟ್ರೋಫಿ ಗೆದ್ದಿಲ್ಲ. 2013ರ ನಂತರ ಭಾರತ 4 ಬಾರಿ ಫೈನಲ್ ಹಾಗೂ ಅನೇಕ ಸೆಮಿಫೈನಲ್ ಪಂದ್ಯಗಳಲ್ಲಿ ಸೋತು ಮುಖಭಂಗ ಅನುಭವಿಸಿದೆ. ಇದನ್ನೂ ಓದಿ: ಯಾರ ಜೊತೆ, ಎಲ್ಲಿ ಬೇಕಾದ್ರೂ ಆಡೋಕೆ ನಾವ್‌ ರೆಡಿ – ಪಾಕ್‌ ತಂಡ ಭಾರತಕ್ಕೆ ಬರೋದು ಖಚಿತ; ಬಾಬರ್‌ ಆಜಂ

    ಈ ಕುರಿತು ಸಂದರ್ಶನದಲ್ಲಿ ಮಾತನಾಡಿದ ಗಂಗೂಲಿ, ನಿರ್ಣಾಯಕ ಹಂತಗಳಲ್ಲಿ ನಾವು ಕೆಲವೊಮ್ಮೆ ಉತ್ತಮವಾಗಿ ಕಾರ್ಯನಿರ್ವಹಿಸುವುದಿಲ್ಲ. ಇದು ಮಾನಸಿಕ ಒತ್ತಡ ಮಾತ್ರವೆಂದು ನಾನು ಭಾವಿಸುವುದಿಲ್ಲ. ಮಾನಸಿಕ ಒತ್ತಡಕ್ಕಿಂತ ನಿರೀಕ್ಷಿತ ಪ್ರದರ್ಶನ ನೀಡದಿರುವುದು ಎದ್ದು ಕಾಣುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಈ ಬಾರಿ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದು ಸಾಧನೆಯೇ ಆಗಿದೆ. ಈ ಬಾರಿ ವಿಶ್ವಕಪ್‌ನಲ್ಲೂ ನಮಗೆ ಗೆಲ್ಲುವ ಎಲ್ಲ ಅವಕಾಶಗಳಿವೆ. ಉತ್ತಮ ಆಟಗಾರರೂ ಇದ್ದಾರೆ. ಪ್ರಯತ್ನಪಟ್ಟರೇ ಎಲ್ಲವೂ ಸಾಧ್ಯವಾಗುತ್ತದೆ ಎಂದು ಕಿವಿಮಾತು ಹೇಳಿದ್ದಾರೆ.

    ಕಳೆದ ವರ್ಷ ಟಿ20 ಏಷ್ಯಾಕಪ್‌ನಲ್ಲಿ ಸೂಪರ್ ಫೋರ್ ಹಂತದಲ್ಲಿ ಎಡವಿದ್ದ ಭಾರತ, ನಂತರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯವಾಗಿ ಸೋತಿತ್ತು. ಇನ್ನೂ ಈ ವರ್ಷದ ಆರಂಭದಿಂದ ನಡೆದ ಶ್ರೀಲಂಕಾ, ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ನಡೆದ ಸರಣಿಗಳಲ್ಲಿ ಯಶಸ್ವಿ ಪ್ರದರ್ಶನ ನೀಡಿದ್ದ ಭಾರತ ತಂಡ, ಇತ್ತೀಚೆಗೆ ನಡೆದ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಹೀನಾಯ ಸೋಲನುಭವಿಸಿ, ಸತತ 2ನೇ ಬಾರಿಗೆ ರನ್ನರ್‌ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಮ್ಮ ತಂಡದಲ್ಲಿ ಬೆಸ್ಟ್‌ ಪ್ಲೇಯರ್‌ ಇದ್ದಾನೆ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ: ವಾಸಿಂ ಅಕ್ರಂ

    ನಮ್ಮ ತಂಡದಲ್ಲಿ ಬೆಸ್ಟ್‌ ಪ್ಲೇಯರ್‌ ಇದ್ದಾನೆ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ: ವಾಸಿಂ ಅಕ್ರಂ

    ಇಸ್ಲಾಮಾಬಾದ್‌: ಅಕ್ಟೋಬರ್‌ 5 ರಿಂದ ನವೆಂಬರ್‌ 19ರ ವರೆಗೆ ನಡೆಯಲಿರುವ ಏಕದಿನ ವಿಶ್ವಕಪ್‌ (ICC ODI World Cup) ವೇಳಾಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಭಾರತಕ್ಕೆ ಬರಲು ಪಾಕಿಸ್ತಾನ (Pakistan) ಕ್ರಿಕೆಟ್‌ ಮಂಡಳಿ ಆಕ್ಷೇಪ ವ್ಯಕ್ತಪಡಿಸಿದೆ. ಈ ಬೆನ್ನಲ್ಲೇ ಪಾಕ್‌ ತಂಡದ ಪರ ಬ್ಯಾಟಿಂಗ್‌ ಮಾಡಿರುವ ಮಾಜಿ ನಾಯಕ ವಾಸಿಂ ಅಕ್ರಂ, ಪಾಕಿಸ್ತಾನ 2ನೇ ಬಾರಿಗೆ ವಿಶ್ವಕಪ್ ಟ್ರೋಫಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 1992ರಲ್ಲಿ ಇಮ್ರಾನ್‌ ಖಾನ್‌ (Imran Khan) ನಾಯಕತ್ವದಲ್ಲಿ ಪಾಕಿಸ್ತಾನ ತಂಡ ಮೊದಲಬಾರಿಗೆ ವಿಶ್ವಕಪ್‌ ಕಿರೀಟ ಧರಿಸಿತ್ತು.

    ಈ ಕುರಿತು ಮಾತನಾಡಿರುವ ಅವರು, ನಮ್ಮ ತಂಡದಲ್ಲಿ ಬೆಸ್ಟ್‌ ಪ್ಲೇಯರ್‌ ಇದ್ದಾನೆ ನಾವು, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ. ನಾವು ಉತ್ತಮ ತಂಡ ಹೊಂದಿದ್ದೇವೆ. ಆಧುನಿಕ ಕ್ರಿಕೆಟ್‌ ಯುಗದಲ್ಲಿ ಬಾಬರ್‌ ಆಜಂ (Babar Azam) ಒಬ್ಬ ಶ್ರೇಷ್ಠ ಬ್ಯಾಟ್ಸ್‌ಮ್ಯಾನ್‌ ಅವರು ಪಾಕ್‌ ತಂಡವನ್ನ ಮುನ್ನಡೆಸುತ್ತಿದ್ದಾರೆ. ಭಾರತದಲ್ಲಿ ಎಲ್ಲ ರೀತಿಯ ಪರಿಸ್ಥಿತಿಗಳಲ್ಲೂ ಅವರು ಆಡುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ Vs ಐರ್ಲೆಂಡ್‌ T20 ಸರಣಿಗೆ ವೇಳಾಪಟ್ಟಿ ಪ್ರಕಟ – ಇಲ್ಲಿದೆ ಡಿಟೇಲ್ಸ್‌

    2019ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನ 9 ಪಂದ್ಯಗಳ ಪೈಕಿ 5ರಲ್ಲಿ ಗೆಲುವು ಸಾಧಿಸಿತ್ತು. ಆದ್ರೆ ಸೆಮಿಸ್‌ಗೆ ಸ್ಥಾನ ಪಡೆಯುವಲ್ಲಿ ವಿಫಲವಾಯಿತು. ಆ ನಂತರದಲ್ಲೂ ಬಾಬರ್‌ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದಾರೆ. ಇಂತಹ ಸ್ಫೂರ್ತಿದಾಯಕ ನಾಯಕ ವಿಶ್ವಕಪ್‌ನಲ್ಲಿ ಇನ್ನಷ್ಟು ಬ್ಯಾಟಿಂಗ್‌ ಫಾರ್ಮ್‌ಗೆ ಮರಳುವುದರಲ್ಲಿ ಆಶ್ಚರ್ಯವಿಲ್ಲ ಎಂದು ಹೇಳಿದ್ದಾರೆ.

    ಅಲ್ಲದೇ, ಬಾಬರ್‌ ನಮ್ಮ ತಂಡದಲ್ಲಿರುವ ಅತ್ಯುತ್ತಮ ಆಟಗಾರ. ಇಡೀ ದೇಶ ಅವರನ್ನ ಅನುಸರಿಸುತ್ತದೆ. ಅವರು ತಮ್ಮ ತಂಡವನ್ನು ಕ್ರೀಡಾಂಗಣಕ್ಕೆ ಕರೆದೊಯ್ಯುತ್ತಾರೆ. ಅದು ಟಿ20, ಏಕದಿನ, ಟೆಸ್ಟ್‌ ಕ್ರಿಕೆಟ್‌ ಯಾವುದೇ ಆಗಿರಲಿ ಅವರು ಯಶಸ್ವಿಯಾಗಿ ತಂಡವನ್ನ ಮುನ್ನಡೆಸುತ್ತಾರೆ ಎಂದು ಹೊಗಳಿದ್ದಾರೆ. ಇದನ್ನೂ ಓದಿ: ವಿಶ್ವಕಪ್ ವೇಳಾಪಟ್ಟಿ ಹೊರಬಿದ್ದ ಬೆನ್ನಲ್ಲೇ ಭಾರತಕ್ಕೆ ಬರಲು ಪಾಕ್ ಆಕ್ಷೇಪ

    ಈ ನಡುವೆ ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾಗವಹಿಸಲು ಪಾಕಿಸ್ತಾನ ಭಾಗವಹಿಸುವ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಪಾಕಿಸ್ತಾನಕ್ಕೆ ನೆನಪಿಸಿದೆ.

    ಭಾರತದಲ್ಲಿ ಪಾಕ್‌ ತಂಡದ ವೇಳಾಪಟ್ಟಿ ಹೀಗಿದೆ…

    ಪಾಕಿಸ್ತಾನ vs ಕ್ವಾಲಿಫೈಯರ್ 1, ಅಕ್ಟೋಬರ್ 6 – ಹೈದರಾಬಾದ್
    ಪಾಕಿಸ್ತಾನ vs ಕ್ವಾಲಿಫೈಯರ್ 2, ಅಕ್ಟೋಬರ್ 12 – ಹೈದರಾಬಾದ್
    ಪಾಕಿಸ್ತಾನ vs ಭಾರತ, ಅಕ್ಟೋಬರ್ 15 – ಅಹಮದಾಬಾದ್
    ಪಾಕಿಸ್ತಾನ vs ಆಸ್ಟ್ರೇಲಿಯಾ, ಅಕ್ಟೋಬರ್ 20 – ಬೆಂಗಳೂರು
    ಪಾಕಿಸ್ತಾನ vs ಅಫ್ಘಾನಿಸ್ತಾನ, ಅಕ್ಟೋಬರ್ 23- ಚೆನ್ನೈ
    ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಅಕ್ಟೋಬರ್ 27- ಚೆನ್ನೈ
    ಪಾಕಿಸ್ತಾನ vs ಬಾಂಗ್ಲಾದೇಶ, ಅಕ್ಟೋಬರ್ 31 – ಕೋಲ್ಕತ್ತಾ
    ಪಾಕಿಸ್ತಾನ vs ನ್ಯೂಜಿಲೆಂಡ್, ನವೆಂಬರ್ 4 – ಬೆಂಗಳೂರು
    ಪಾಕಿಸ್ತಾನ vs ಇಂಗ್ಲೆಂಡ್, ನವೆಂಬರ್ 12- ಕೋಲ್ಕತ್ತಾ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಟೀಂ ಇಂಡಿಯಾ ಆಟಗಾರರು ಬಾಳೆಹಣ್ಣಿಗೆ ಬೇಡಿಕೆ ಇಟ್ಟಿದ್ದು ಏಕೆ ಗೊತ್ತಾ?

    ಟೀಂ ಇಂಡಿಯಾ ಆಟಗಾರರು ಬಾಳೆಹಣ್ಣಿಗೆ ಬೇಡಿಕೆ ಇಟ್ಟಿದ್ದು ಏಕೆ ಗೊತ್ತಾ?

    ಮುಂಬೈ: ವಿದೇಶಿ ಕ್ರಿಕೆಟ್ ಟೂರ್ನಿಗಳಿಗೆ ಆಟಗಾರರೊಂದಿಗೆ ಪತ್ನಿಯರು ಆಗಮಿಸಲು ಅವಕಾಶ ನೀಡುವಂತೆ ಬೇಡಿಕೆ ಇಟ್ಟಿದ್ದ ವಿರಾಟ್ ಕೊಹ್ಲಿ ಮಾತಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಮ್ಮತಿ ಸೂಚಿಸಿದ್ದು ಹಳೆಯ ಸುದ್ದಿ. ಆದರೆ ಈಗ ಮುಂದಿನ ವಿಶ್ವಕಪ್ ವೇಳೆ ತಮಗೆ ಬಾಳೆಹಣ್ಣು ಬೇಕೆಂದು ಟೀಂ ಇಂಡಿಯಾ ಆಟಗಾರರು ಹೊಸ ಬೇಡಿಕೆಯನ್ನು ಇಟ್ಟಿದ್ದಾರೆ.

    ಐಸಿಸಿ ವಿಶ್ವಕಪ್ ಕ್ರಿಕೆಟ್ 2019ರ ಟೂರ್ನಿ ಮೇ 30 ರಿಂದ ಜುಲೈ 15ರವರೆಗೂ ಇಂಗ್ಲೆಂಡ್‍ನಲ್ಲಿ ನಡೆಯಲಿದೆ. ಟೀಂ ಇಂಡಿಯಾ ಆಟಗಾರರು ಟೂರ್ನಿಯ ವೇಳೆ ಬಾಳೆಹಣ್ಣಿಗಾಗಿ ಬೇಡಿಕೆ ಇಟ್ಟಿರುವ ಹಿಂದೆ ಪ್ರಮುಖ ಕಾರಣವಿದೆ. ಇಂಗ್ಲೆಂಡ್ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಭಾರತೀಯ ಆಟಗಾರರಿಗೆ ಸರಿಯಾದ ಊಟದ ವ್ಯವಸ್ಥೆ ಮಾಡಲು ಇಂಗ್ಲೆಂಡ್ ಕ್ರಿಕೆಟ್ ಸಂಸ್ಥೆ ವಿಫಲವಾಗಿತ್ತು. ಇದು ಆಟಗಾರರ ದೈಹಿಕ ಸಾಮರ್ಥ್ಯದ ಮೇಲೆ ಪರಿಣಾಮ ಉಂಟುಮಾಡಿತ್ತು. ಅಲ್ಲದೇ ಹಲವು ಆಟಗಾರರು ಟೂರ್ನಿಯ ವೇಳೆ ದೈಹಿಕ ಸಾಮಥ್ರ್ಯವನ್ನು ಕಾಯ್ದುಕೊಳ್ಳಲು ಸಮಸ್ಯೆ ಎದುರಿಸಿದ್ದರು. ಅದ್ದರಿಂದ ಈ ಬಾರಿ ಆಟಗಾರರು ಬಾಳೆಹಣ್ಣುಗಳಿಗೆ ಬೇಡಿಕೆ ಇಟ್ಟಿದ್ದಾರೆ.

    ಈ ಕುರಿತು ಟೀಂ ಇಂಡಿಯಾ ಆಡಳಿತ ಮಂಡಳಿಯ ಹೆಸರು ಹೇಳಲು ಇಚ್ಛಿಸದ ಸದಸ್ಯರೊಬ್ಬರು ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಆಟಗಾರರ ಬೇಡಿಕೆಗೆ ಇದೂವರೆಗೂ ಬಿಸಿಸಿಐ ಆಡಳಿತ ಮಂಡಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಒಂದೊಮ್ಮೆ ಟೂರ್ನಿಯ ಆಯೋಜಕರು ಉತ್ತಮ ಆಹಾರದ ವ್ಯವಸ್ಥೆ ಮಾಡದಿದ್ದರೆ ಬಿಸಿಸಿಐ ತನ್ನ ಹಣದಿಂದಲೇ ಆಟಗಾರರಿಗೆ ಬಾಳೆಹಣ್ಣಿನ ವ್ಯವಸ್ಥೆ ಮಾಡುವ ನಿರೀಕ್ಷೆ ಇದೆ.

    ಉಳಿದಂತೆ ಇಂಗ್ಲೆಂಡ್ ವಿರುದ್ಧದ ವಿಶ್ವಕಪ್ ಟೂರ್ನಿಯ ವೇಳೆ ಅಲ್ಲಿ ಪ್ರಯಾಣ ನಡೆಸಲು ಬಸ್ ಬದಲಾಗಿ ರೈಲಿನಲ್ಲೇ ಪ್ರಯಾಣದ ವ್ಯವಸ್ಥೆ ಮಾಡಲು ಮನವಿ ಮಾಡಿದ್ದಾರೆ. ಇದರ ಹಿಂದೆಯೂ ಕಾರಣವಿದ್ದು, ಬಸ್ ಪ್ರಯಾಣದ ವೇಳೆ ಆಟಗಾರರ ಪತ್ನಿ ಹಾಗೂ ಗೆಳತಿಯರಿಗೆ ಬಸ್ಸಿನಲ್ಲಿ ಬರಲು ಅವಕಾಶವಿಲ್ಲ. ಅದ್ದರಿಂದ ಆಟಗಾರರು ಈ ಬೇಡಿಕೆ ಮುಂದಿಟ್ಟಿದ್ದಾರೆ. ರೈಲಿನಲ್ಲಿ ವ್ಯವಸ್ಥೆ ಮಾಡಿದರೆ ಭದ್ರತೆಯ ಸಮಸ್ಯೆ ಆಗಲಿರುವ ಕಾರಣ ಈ ಬೇಡಿಕೆಗೆ ಸ್ಪಂದಿಸುವುದು ಕಷ್ಟ ಎನ್ನಲಾಗಿದೆ.

    ಕಳೆದ ಕೆಲ ದಿನಗಳ ಹಿಂದೆಯಷ್ಟೇ ವಿದೇಶಿ ಟೂರ್ನಿಗಳ ವೇಳೆ ಟೀಂ ಇಂಡಿಯಾ ಆಟಗಾರರೊಂದಿಗೆ ಅವರ ಪತ್ನಿಯರು ಆಗಮಿಸಲು ಬಿಸಿಸಿಐ ಅನುಮತಿ ನೀಡಿತ್ತು. ಆದರೆ ಟೂರ್ನಿಯ ಆರಂಭದ 10 ದಿನಗಳ ಬಳಿಕ ಪತ್ನಿಯರಿಗೆ ಆಗಮಿಸಲು ನಿಯಮವನ್ನು ವಿಧಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv