Tag: ICC WorldCup

  • World Cup 2023: ಚೊಚ್ಚಲ ಪಂದ್ಯದಲ್ಲೇ ಸೇಡು ತೀರಿಸಿಕೊಂಡ ಕಿವೀಸ್‌; ಇಂಗ್ಲೆಂಡ್‌ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ

    World Cup 2023: ಚೊಚ್ಚಲ ಪಂದ್ಯದಲ್ಲೇ ಸೇಡು ತೀರಿಸಿಕೊಂಡ ಕಿವೀಸ್‌; ಇಂಗ್ಲೆಂಡ್‌ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ

    ಅಹಮದಾಬಾದ್:‌ ಏಕದಿನ ವಿಶ್ವಕಪ್‌ (ODI World Cup) ಟೂರ್ನಿಯ ಚೊಚ್ಚಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ಸ್‌ ಇಂಗ್ಲೆಂಡ್‌ (England) ತಂಡದ ವಿರುದ್ಧ ಕಿವೀಸ್‌ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 2019ರ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ವಿರೋಚಿತ ಸೋಲನುಭವಿಸಿ, ಟ್ರೋಫಿ ಕಳೆದುಕೊಂಡಿದ್ದ ಕಿವೀಸ್‌ ಪಡೆ ಮೊದಲ ಪಂದ್ಯದಲ್ಲೇ ಆಂಗ್ಲರಿಗೆ ತಿರುಗೇಟು ನೀಡಿದೆ.

    ಗುರುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ‌ ಪಂದ್ಯದಲ್ಲಿ ನ್ಯೂಜಿಲೆಂಡ್ (New Zealand) ತಂಡವು ಹಾಲಿ ಚಾಂಪಿಯನ್ಸ್‌ ಇಂಗ್ಲೆಂಡ್‌ ವಿರುದ್ಧ 9 ವಿಕೆಟ್‌ಗಳ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಇಂಗ್ಲೆಂಡ್‌ 50 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 282 ರನ್‌ ಗಳಿಸಿತ್ತು. 283 ರನ್‌ ಗುರಿ ಪಡೆದ ಕಿವೀಸ್‌ ಕೇವಲ 36.2 ಓವರ್‌ಗಳಲ್ಲೇ 1 ವಿಕೆಟ್‌ ನಷ್ಟಕ್ಕೆ ಗುರಿ ತಲುಪಿತು.

    ಚೇಸಿಂಗ್‌ ಆರಂಭಿಸಿದ ನ್ಯೂಜಿಲೆಂಡ್‌ ಪರ ಆರಂಭಿಕ ಆಟಗಾರ ವಿಲ್‌ ಯಂಗ್‌ ಮೊದಲ ಎಸೆತದಲ್ಲೇ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು. ಇದರಿಂದ ಇಂಗ್ಲೆಂಡ್‌ ತಂಡ ಗೆಲುವಿನ ಕನಸು ಕಂಡಿತ್ತು. ಆದ್ರೆ 2ನೇ ವಿಕೆಟ್‌ಗೆ ಜೊತೆಯಾದ ಡಿವೋನ್‌ ಕಾನ್ವೆ (Devon Conway) ಹಾಗೂ ಆಲ್‌ರೌಂಡರ್‌ ರಚಿನ್ ರವೀಂದ್ರ (Rachin Ravindra) ಜೋಡಿ ಇಂಗ್ಲೆಂಡ್‌ ಬೌಲರ್‌ಗಳನ್ನು ಹಿಗ್ಗಾಮುಗ್ಗ ಚೆಂಡಾಡಿದರು.

    ಮೊದಲ 10 ಓವರ್‌ಗಳಲ್ಲಿ 81 ರನ್‌ಗಳಿಗೆ ಒಂದು ವಿಕೆಟ್‌ ಕಳೆದುಕೊಂಡಿದ್ದ ಕಿವೀಸ್‌ 20 ಓವರ್‌ಗಳಲ್ಲಿ 154 ರನ್‌ ಹಾಗೂ 35‌ ಓವರ್‌ಗಳಲ್ಲಿ 265 ರನ್‌ ಚಚ್ಚಿತ್ತು. ಮುರಿಯದ 2ನೇ ವಿಕೆಟ್‌ಗೆ ಕಾನ್ವೆ ಹಾಗೂ ರವೀಂದ್ರ ಜೋಡಿ ಭರ್ಜರಿ ಶತಕಗಳೊಂದಿಗೆ 211 ಎಸೆತಗಳಲ್ಲಿ 273 ರನ್‌ ಸಿಡಿತ್ತು. ಡಿವೋನ್‌ ಕಾನ್ವೇ 121 ಎಸೆತಗಳಲ್ಲಿ 152 ರನ್‌ ಚಚ್ಚಿದರೆ (19 ಬೌಂಡರಿ, 3 ಸಿಕ್ಸರ್‌), ರಚಿನ್‌ ರವೀಂದ್ರ 96 ಎಸೆತಗಳಲ್ಲಿ 123 ರನ್‌ (11 ಬೌಂಡರಿ, 5 ಸಿಕ್ಸರ್‌) ಸಿಡಿಸಿ ಮಿಂಚಿದರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌, 50 ಓವರ್‌ಗಳ ಅಂತ್ಯಕ್ಕೆ 9 ವಿಕೆಟ್‌ ನಷ್ಟಕ್ಕೆ 282 ರನ್‌ ಗಳಿಸಿತ್ತು. ಇಂಗ್ಲೆಂಡ್ ಪರ ಆರಂಭಿಕರಾಗಿ ಕಣ್ಕಿಳಿದ ಜಾನಿ ಬೈರ್‌ಸ್ಟೋವ್‌ 33 ರನ್‌, ಡೇವಿಡ್‌ ಮಲಾನ್‌ 14 ರನ್‌ ಗಳಿಸಿ ಔಟಾಗುತ್ತಿದ್ದಂತೆ ಕಣಕ್ಕಿಳಿದ ಜೋ ರೂಟ್‌ 86 ಎಸೆತಗಳಲ್ಲಿ 77 ರನ್‌ ಸಿಡಿಸಿದರು.

    ಇದರೊಂದಿಗೆ ಹ್ಯಾರಿ ಬ್ರೂಕ್‌ 25 ರನ್‌, ಮೋಯಿನ್‌ ಅಲಿ 11 ರನ್‌ ಗಳಿಸಿದ್ರೆ, ಜೋಸ್‌ ಬಟ್ಲರ್‌ 42 ಎಸೆತಗಳಲ್ಲಿ 43 ರನ್‌, ಲಿಯಾಮ್‌ ಲಿವಿಂಗ್‌ಸ್ಟೋನ್‌ 22 ಎಸೆತಗಳಲ್ಲಿ 20 ರನ್‌, ಸ್ಯಾಮ್‌ ಕರ್ರನ್‌ 14 ರನ್‌, ಕ್ರಿಸ್ ವೋಕ್ಸ್ 11 ರನ್‌ಗಳ ಕೊಡುಗೆ ನೀಡಿದರು. ಕೊನೆಯಲ್ಲಿ ಆದಿಲ್ ರಶೀದ್ 15 ರನ್‌ ಹಾಗೂ ಮಾರ್ಕ್ ವುಡ್ 13 ರನ್‌ ಗಳಿಸಿ ಅಜೇಯರಾಗುಳಿದರು.

    ನ್ಯೂಜಿಲೆಂಡ್‌ ಪರ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಮ್ಯಾಟ್‌ ಹೆನ್ರಿ 3 ವಿಕೆಟ್‌ ಪಡೆದರೆ, ಗ್ಲೆನ್‌ ಫಿಲಿಪ್ಸ್‌ ಮತ್ತು ಮಿಚೆಲ್‌ ಸ್ಯಾಂಟ್ನರ್‌ ತಲಾ ಎರಡೆರಡು ಹಾಗೂ ಟ್ರೆಂಟ್‌ ಬೌಲ್ಟ್‌ ಮತ್ತು ರಚಿನ್ ರವೀಂದ್ರ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    2019ರಲ್ಲಿ ಏನಾಗಿತ್ತು?
    ಇಂಗ್ಲೆಂಡಿನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಜುಲೈ 14 ರಂದು ನಡೆದ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಮಾಡಿತು. ನಿಗದಿತ 50 ಓವರ್‌ಗಳಲ್ಲಿ ಇಂಗ್ಲೆಂಡ್‍ಗೆ 241 ರನ್‍ಗಳ ಗುರಿ ನೀಡಿತು. ಆದರೆ ಈ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ಪರ ಕೊನೆಯ ಓವರಿನ ಮೂರನೇ ಎಸೆತದಲ್ಲಿ ಬೆನ್‌ ಸ್ಟೋಕ್ಸ್‌ ಸಿಕ್ಸ್‌ ಹೊಡೆದರೆ 4ನೇ ಎಸೆತದಲ್ಲೂ 6ರನ್‌ ಬಂದಿತ್ತು. ಎರಡನೇ ರನ್‌ ಓಡುವ ವೇಳೆ ಚೆಂಡು ಬೆನ್‌ ಸ್ಟೋಕ್ಸ್‌ ಬ್ಯಾಟ್‌ಗೆ ತಾಗಿ ಬೌಂಡರಿಗೆ ಹೋಗಿತ್ತು. ಇದು ಬಹಳ ವಿವಾದಕ್ಕೆ ಕಾರಣವಾಗಿತ್ತು. ಕೊನೆಯ ಎರಡು ಎಸೆತದಲ್ಲಿ ಸಿಂಗಲ್‌ ರನ್‌ ಬಂದ ಕಾರಣ ಪಂದ್ಯ ಟೈ ಆಗಿತ್ತು.

    ಟೈ ಆದ ಕಾರಣ ಐಸಿಸಿ ನಿಯಮದಂತೆ ಸೂಪರ್ ಓವರ್ ಆಡಿಸಲು ತೀರ್ಮಾನ ಮಾಡಲಾಯಿತು. ಸೂಪರ್ ಓವರ್‌ನಲ್ಲಿ ಮೊದಲ ಬ್ಯಾಟ್ ಮಾಡಿದ ಇಂಗ್ಲೆಂಡ್ ಬಟ್ಲರ್ ಮತ್ತು ಸ್ಟೋಕ್ಸ್ ಅವರು ತಲಾ ಒಂದೊಂದು ಬೌಡರಿ ಸಿಡಿಸಿ ನ್ಯೂಜಿಲೆಂಡ್ ತಂಡಕ್ಕೆ 15 ರನ್‍ಗಳ ಗುರಿ ನೀಡಿದರು. ಇದನ್ನು ಬೆನ್ನಟ್ಟಿದ ಕೀವೀಸ್ ಆಟಗಾರರಾದ ಜಿಮ್ಮಿ ನೀಶಮ್ ಮತ್ತು ಮಾರ್ಟಿನ್ ಗುಪ್ಟಿಲ್ ಜೋಫ್ರಾ ಆರ್ಚರ್ ಅವರ ಬೌಲಿಂಗ್‌ ಭರ್ಜರಿ ಬ್ಯಾಟ್ ಬೀಸಿದರು. ನೀಶಮ್ ಅವರು ಒಂದು ಸಿಕ್ಸರ್ ಸಿಡಿಸಿ ಗೆಲ್ಲುವ ಭರವಸೆ ಮೂಡಿಸಿದರು. ಕೊನೆಯ ಎಸೆತದಲ್ಲಿ ಗೆಲ್ಲಲು ನ್ಯೂಜಿಲೆಂಡ್‍ಗೆ 2 ರನ್ ಬೇಕಿತ್ತು. ಆಗ ಸ್ಟ್ರೈಕ್‍ನಲ್ಲಿ ಇದ್ದ ಅನುಭವಿ ಆಟಗಾರ ಮಾರ್ಟಿನ್ ಗುಪ್ಟಿಲ್ ಜೋಫ್ರಾ ಆರ್ಚರ್ ಎಸೆದ ಎಸೆತದಲ್ಲಿ 2 ರನ್ ಕದಿಯಲು ವಿಫಲರಾದರು. ಜೋಫ್ರಾ ಅವರ ಎಸೆತವನ್ನು ಮಿಡ್ ವಿಕೆಟ್ ಕಡೆಗೆ ತಳ್ಳಿದ ಗುಪ್ಟಿಲ್ ಎರಡು ರನ್ ಕದಿಯುವಲ್ಲಿ ಯಶಸ್ವಿಯಾಗಲಿಲ್ಲ. ರಾಯ್ ಅವರು ಎಸೆದ ಉತ್ತಮ ಥ್ರೋವನ್ನು ಬಟ್ಲರ್ ಹಿಡಿದು ರನೌಟ್‌ ಮಾಡಿದರು. ಈ ಮೂಲಕ ಸೂಪರ್ ಓವರ್ ಕೂಡ ಟೈ ಆಯ್ತು.

    ಫೈನಲ್‍ನಲ್ಲಿ ಸೂಪರ್ ಓವರ್ ಕೂಡ ಟೈ ಆದ ಕಾರಣ ಐಸಿಸಿ ನಿಯಮದಂತೆ ಹೆಚ್ಚು ಬೌಂಡರಿ ಸಿಡಿಸಿದ ತಂಡಕ್ಕೆ ಗೆಲುವು ಎಂದು ಘೋಷಣೆ ಮಾಡಲಾಯಿತು. ಪಂದ್ಯದಲ್ಲಿ ಹೆಚ್ಚು ಬೌಂಡರಿ ಹೊಡೆದಿದ್ದ ಇಂಗ್ಲೆಂಡ್ ಗೆಲುವು ಸಾಧಿಸಿತು. ಈ ಮೂಲಕ ಮೊದಲ ಬಾರಿಗೆ ಇಂಗ್ಲೆಂಡ್ ವಿಶ್ವಕಪ್ ಮುತ್ತಿಕ್ಕಿತು. ಸತತ ಎರಡನೇ ಬಾರಿ ಫೈನಲ್‍ನಲ್ಲಿ ಸೋತ ನ್ಯೂಜಿಲೆಂಡ್ ದ್ವಿತೀಯಸ್ಥಾನಿಯಾಗಿ ನಿರ್ಗಮಿಸಿತು. ಈ ಪಂದ್ಯದಲ್ಲಿ ಇಂಗ್ಲೆಂಡ್‌ 26 ಬೌಂಡರಿ ಹೊಡೆದಿದ್ದರೆ ನ್ಯೂಜಿಲೆಂಡ್‌ 17 ಬೌಂಡರಿ ಹೊಡೆದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Cup 2023: ಚೊಚ್ಚಲ ಪಂದ್ಯದಲ್ಲೇ ಮೋದಿ ಕ್ರಿಕೆಟ್‌ ಅಂಗಳದಲ್ಲಿ ಇತಿಹಾಸ ಬರೆದ ಇಂಗ್ಲೆಂಡ್‌

    World Cup 2023: ಚೊಚ್ಚಲ ಪಂದ್ಯದಲ್ಲೇ ಮೋದಿ ಕ್ರಿಕೆಟ್‌ ಅಂಗಳದಲ್ಲಿ ಇತಿಹಾಸ ಬರೆದ ಇಂಗ್ಲೆಂಡ್‌

    ಅಹಮದಾಬಾದ್:‌ 2023ನೇ ಸಾಲಿನ ಐಸಿಸಿ ಏಕದಿನ ವಿಶ್ವಕಪ್‌ (World Cup 2023) ಟೂರ್ನಿಯು ಗುರುವಾರದಿಂದ (ಅ.5) ಆರಂಭಗೊಂಡಿದ್ದು, ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ಸ್‌ ಇಂಗ್ಲೆಂಡ್‌ ತಂಡವು (England Team) ಹೊಸ ಇತಿಹಾಸ ಸೃಷ್ಟಿಸಿದೆ.

    ಆರಂಭಿಕ ಆಟಗಾರನಿಂದ ಹಿಡಿದು ಕೊನೆಯ ಬ್ಯಾಟ್ಸ್‌ಮ್ಯಾನ್‌ ವರೆಗೂ ಪ್ರತಿಯೊಬ್ಬರು ಎರಡಂಕಿಯ ರನ್‌ಗಳನ್ನು ದಾಖಲಿಸುವ ಮೂಲಕ ಇಂಗ್ಲೆಂಡ್‌ ತಂಡವು ವಿಶೇಷ ಸಾಧನೆ ಮಾಡಿದೆ. ಇದನ್ನೂ ಓದಿ: ICC World Cup 2023: ಇಂದಿನಿಂದ ವಿಶ್ವಕಪ್‌ ಮಹಾಸಮರ – ಇಂದು ಇಂಗ್ಲೆಂಡ್‌ ವಿರುದ್ಧ ನ್ಯೂಜಿಲೆಂಡ್ ಸೆಣಸಾಟ

    ಈ ಪಂದ್ಯದಲ್ಲಿ ಟಾಸ್‌ ಸೋತ ಇಂಗ್ಲೆಂಡ್‌ ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆಯಿತು. 50 ಓವರ್‌ಗಳ ಅಂತ್ಯಕ್ಕೆ 9 ವಿಕೆಟ್‌ ನಷ್ಟಕ್ಕೆ 282 ರನ್‌ ಗಳಿಸಿ, ಎದುರಾಳಿ ತಂಡಕ್ಕೆ 283 ರನ್‌ಗಳ ಗುರಿ ನೀಡಿತು. ಇಂಗ್ಲೆಂಡ್ ಪರ ಆರಂಭಿಕರಾಗಿ ಕಣ್ಕಿಳಿದ ಜಾನಿ ಬೈರ್‌ಸ್ಟೋವ್‌ 33 ರನ್‌, ಡೇವಿಡ್‌ ಮಲಾನ್‌ 14 ರನ್‌ ಗಳಿಸಿ ಔಟಾಗುತ್ತಿದ್ದಂತೆ ಕಣಕ್ಕಿಳಿದ ಜೋ ರೂಟ್‌ 86 ಎಸೆತಗಳಲ್ಲಿ 77 ರನ್‌ ಸಿಡಿಸಿದರು.

    ಇದರೊಂದಿಗೆ ಹ್ಯಾರಿ ಬ್ರೂಕ್‌ 25 ರನ್‌, ಮೋಯಿನ್‌ ಅಲಿ 11 ರನ್‌ ಗಳಿಸಿದ್ರೆ, ಜೋಸ್‌ ಬಟ್ಲರ್‌ 42 ಎಸೆತಗಳಲ್ಲಿ 43 ರನ್‌, ಲಿಯಾಮ್‌ ಲಿವಿಂಗ್‌ಸ್ಟೋನ್‌ 22 ಎಸೆತಗಳಲ್ಲಿ 20 ರನ್‌, ಸ್ಯಾಮ್‌ ಕರ್ರನ್‌ 14 ರನ್‌, ಕ್ರಿಸ್ ವೋಕ್ಸ್ 11 ರನ್‌ಗಳ ಕೊಡುಗೆ ನೀಡಿದರು. ಕೊನೆಯಲ್ಲಿ ಆದಿಲ್ ರಶೀದ್ 15 ರನ್‌ ಹಾಗೂ ಮಾರ್ಕ್ ವುಡ್ 13 ರನ್‌ ಗಳಿಸಿ ಅಜೇಯರಾಗುಳಿದರು. ಅಂತಿಮವಾಗಿ ಇಂಗ್ಲೆಂಡ್‌ ತಂಡವು 50 ಓವರ್‌ಗಳಲ್ಲಿ 282 ರನ್‌ ಗಳಿಸಿತು. ಇದನ್ನೂ ಓದಿ: Asian Games 2023- ಗ್ರೀಕೊ ರೋಮನ್ ಕುಸ್ತಿಯಲ್ಲಿ ಭಾರತಕ್ಕೆ 13 ವರ್ಷಗಳ ಬಳಿಕ ಪದಕ

    ನ್ಯೂಜಿಲೆಂಡ್‌ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿದ ಮ್ಯಾಟ್‌ ಹೆನ್ರಿ 3 ವಿಕೆಟ್‌ ಪಡೆದರೆ, ಗ್ಲೆನ್‌ ಫಿಲಿಪ್ಸ್‌ ಮತ್ತು ಮಿಚೆಲ್‌ ಸ್ಯಾಂಟ್ನರ್‌ ತಲಾ ಎರಡೆರಡು ಹಾಗೂ ಟ್ರೆಂಟ್‌ ಬೌಲ್ಟ್‌ ಮತ್ತು ರಚಿನ್ ರವೀಂದ್ರ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಇಂಗ್ಲೆಂಡ್‌ ಪ್ಲೇಯಿಂಗ್‌ 11: ಜಾನಿ ಬೈರ್‌ಸ್ಟೋವ್, ಡಾವಿಡ್ ಮಲಾನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯೀನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್ ಇದನ್ನೂ ಓದಿ: ಹೈದರಾಬಾದ್ ಬಿರಿಯಾನಿಯಿಂದಾಗಿ ಸ್ವಲ್ಪ ಸ್ಲೋ – ಅಭ್ಯಾಸ ಪಂದ್ಯದ ಸೋಲಿಗೆ ಪಾಕ್ ಆಟಗಾರನ ಪ್ರತಿಕ್ರಿಯೆ

    ನ್ಯೂಜಿಲೆಂಡ್‌ ಪ್ಲೇಯಿಂಗ್‌ 11: ಡಿವೋನ್‌ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಟಾಮ್ ಲಾಂಥಮ್‌ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮ್ಯಾಟ್ ಹೆನ್ರಿ, ಮಿಚೆಲ್ ಸ್ಯಾಂಟ್ನರ್, ಜೇಮ್ಸ್ ನೀಶಮ್, ಟ್ರೆಂಟ್ ಬೌಲ್ಟ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತವನ್ನು ಶತ್ರು ರಾಷ್ಟ್ರವೆಂದು ನಾಲಿಗೆ ಹರಿಬಿಟ್ಟ ಪಾಕ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ

    ಭಾರತವನ್ನು ಶತ್ರು ರಾಷ್ಟ್ರವೆಂದು ನಾಲಿಗೆ ಹರಿಬಿಟ್ಟ ಪಾಕ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ

    ಇಸ್ಲಾಮಾಬಾದ್‌: ಇದೇ ಮೊದಲಬಾರಿಗೆ ಭಾರತದ ಸಂಪೂರ್ಣ ಆತಿಥ್ಯದಲ್ಲಿ ಭಾರತದಲ್ಲಿ ವಿಶ್ವಕಪ್‌ ಟೂರ್ನಿ (ICC WorldCup) ಆಯೋಜನೆಗೊಂಡಿದ್ದು, ಪಾಕಿಸ್ತಾನ ಕ್ರಿಕೆಟ್‌ ತಂಡ 7 ವರ್ಷಗಳ ಬಳಿಕ ಭಾರತಕ್ಕೆ ಎಂಟ್ರಿ ಕೊಟ್ಟಿದೆ. ಇಂತಹ ಹೊತ್ತಿನಲ್ಲೇ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಅಧ್ಯಕ್ಷ ಝಾಕಾ ಅಶ್ರಫ್ (Zaka Ashraf) ಭಾರತವನ್ನು ಶತ್ರುಗಳ ದೇಶ ಎಂದು ಹೇಳುವ ಮೂಲಕ ನಾಲಿಗೆ ಹರಿಬಿಟ್ಟಿದ್ದಾರೆ.

    ನಾಯಕ ಬಾಬರ್ ಆಜಂ (Babar Azam) ನೇತೃತ್ವದ ತಂಡ ಸೆಪ್ಟೆಂಬರ್ 27ರ ಬುಧವಾರ ರಾತ್ರಿ ಹೈದರಾಬಾದ್​ಗೆ (Hyderabad) ಬಂದಿಳಿದಿದೆ. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತೀಯ ಕ್ರಿಕೆಟ್ ಉತ್ಸಾಹಿಗಳು ಅವರನ್ನು ಸಾಂಪ್ರದಾಯಿಕವಾಗಿ ಶಾಲು ಹಾಕಿ ಸ್ವಾಗತಿಸಿದ್ದಾರೆ. ಬಾಬರ್ ಮತ್ತು ಶಾಹೀನ್ ಶಾ ಅಫ್ರಿದಿ (Shaheen Afridi) ಇನ್ನೂ ಮೊದಲಾದ ಆಟಗಾರರು ತಮ್ಮ ಜಾಲತಾಣ ಖಾತೆಗಳಲ್ಲಿ ಭಾರತದಲ್ಲಿ ತಮಗೆ ಸಿಕ್ಕ ಸ್ವಾಗತವನ್ನು ಶ್ಲಾಘಿಸಿದ್ದಾರೆ. ಇಂತಹ ಹೊತ್ತಿನಲ್ಲಿ ಪಿಸಿಬಿ ಅಧ್ಯಕ್ಷ ನಾಲಿಗೆ ಹರಿಬಿಟ್ಟಿದ್ದಾರೆ.

    ಪಾಕ್‌ ಆಟಗಾರರು ವಿಶ್ವಕಪ್‌ ಟೂರ್ನಿಯನ್ನಾಡಲು ಭಾರತಕ್ಕೆ ಭೇಟಿ ನೀಡಿದ ದಿನವೇ ಪಿಸಿಬಿ ತನ್ನ ಆಟಗಾರರಿಗೆ ವೇತನ ಹೆಚ್ಚಳ ಘೋಷಣೆ ಮಾಡಿತು. ಈ ಲಾಭದಾಯಕ ಒಪ್ಪಂದದ ಕುರಿತು ಅಶ್ರಫ್‌ ಮಾತನಾಡುತ್ತಿದ್ದ ವೇಳೆ, ʻದುಷ್ಮನ್ ಮುಲ್ಕ್’ ಗೆ (ಶತ್ರುಗಳ ದೇಶಕ್ಕೆ) ನಮ್ಮ ಆಟಗಾರರು ಪ್ರಯಾಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ವೀಡಿಯೋ ತುಣುಕು ಈಗ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಭಾರತಕ್ಕೆ ಬಂದ ಪಾಕ್‌ ತಂಡಕ್ಕೆ ಕೇಸರಿ ಶಾಲು ಹಾಕಿ ಸ್ವಾಗತ – ಬಾಬರ್‌ ಆಜಂ ಬಿಜೆಪಿ ಯುವನಾಯಕ ಎಂದು ಟ್ರೋಲ್‌

    ಈ ವೀಡಿಯೋದಲ್ಲಿ ಅಶ್ರಫ್‌, ನಾವು ಈ ಒಪ್ಪಂದಗಳನ್ನು ನಮ್ಮ ಆಟಗಾರರಿಗೆ ಪ್ರೀತಿ ಮತ್ತು ವಾತ್ಸಲ್ಯದಿಂದ ನೀಡಿದ್ದೇವೆ. ಪಾಕಿಸ್ತಾನದ ಇತಿಹಾಸದಲ್ಲಿ ಆಟಗಾರರಿಗೆ ಇಷ್ಟು ಹಣವನ್ನು ನೀಡಿರಲಿಲ್ಲ. ಪಿಸಿಬಿಯ ಈ ಕ್ರಮದಿಂದಾಗಿ ವಿಶ್ವಕಪ್‌ಗಾಗಿ ಶತ್ರು ದೇಶಕ್ಕೆ (Dushman Mulk) ಹೋಗುವಾಗ ಆಟಗಾರರ ನೈತಿಕ ಸ್ಥೈರ್ಯ ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ. ಅಶ್ರಫ್‌ ಹೇಳಿಕೆಗೆ ಭಾರತ ಮಾತ್ರವಲ್ಲದೇ ಪಾಕಿಸ್ತಾನದ ಕ್ರಿಕೆಟ್‌ ಅಭಿಮಾನಿಗಳಿಂದಲೂ ಸಾಕಷ್ಟು ಟೀಕೆಗಳು‌ ವ್ಯಕ್ತವಾಗಿವೆ.

    ಪಾಕಿಸ್ತಾನ ತಂಡವು (Pakistan Cricket Team) ಕೊನೆಯ ಬಾರಿ 2016ರಲ್ಲಿ ನಡೆದ ಟಿ20 ವಿಶ್ವಕಪ್​ಗಾಗಿ ಭಾರತಕ್ಕೆ ಆಗಮಿಸಿತ್ತು. ಇದಾದ 7 ವರ್ಷಗಳ ಬಳಿಕ ಮತ್ತೆ ಭಾರತದ ನೆಲಕ್ಕೆ ಪಾಕ್​ ತಂಡ ಕಾಲಿಟ್ಟಿದೆ. ಈ ಬಾರಿ ಪಾಕಿಸ್ತಾನ ತಂಡವು ಹೈದರಾಬಾದ್‌, ಬೆಂಗಳೂರು, ಚೆನ್ನೈ, ಅಹಮದಾಬಾದ್‌ ಹಾಗೂ ಕೋಲ್ಕತ್ತಾ ಮೈದಾನಗಳಲ್ಲಿ ತನ್ನ ವಿಶ್ವಕಪ್‌ ಪಂದ್ಯಗಳನ್ನ ಆಡಲಿದೆ. ಅಕ್ಟೋಬರ್‌ 3 ರಂದು ಆಸ್ಟ್ರೇಲಿಯಾ ವಿರುದ್ಧ ಕೊನೆಯ ಅಭ್ಯಾಸ ಪಂದ್ಯಗಳನ್ನಾಡಲಿದೆ.  ಇದನ್ನೂ ಓದಿ: ಹೈದರಾಬಾದ್‌ ಬಿರಿಯಾನಿ, ಬಟರ್‌ ಚಿಕನ್‌, ಲ್ಯಾಂಬ್‌ ಚಾಪ್ಸ್; ಭಾರತದಲ್ಲಿ ಪಾಕ್‌ ಕ್ರಿಕೆಟಿಗರಿಗೆ ಭರ್ಜರಿ ಬಾಡೂಟದ ಆತಿಥ್ಯ

    ಭಾರತದಲ್ಲಿ ಪಾಕ್‌ ತಂಡದ ವೇಳಾಪಟ್ಟಿ ಹೀಗಿದೆ…
    ಪಾಕಿಸ್ತಾನ vs ಕ್ವಾಲಿಫೈಯರ್ 1, ಅಕ್ಟೋಬರ್ 6 – ಹೈದರಾಬಾದ್
    ಪಾಕಿಸ್ತಾನ vs ಕ್ವಾಲಿಫೈಯರ್ 2, ಅಕ್ಟೋಬರ್ 12 – ಹೈದರಾಬಾದ್
    ಪಾಕಿಸ್ತಾನ vs ಭಾರತ, ಅಕ್ಟೋಬರ್ 15 – ಅಹಮದಾಬಾದ್
    ಪಾಕಿಸ್ತಾನ vs ಆಸ್ಟ್ರೇಲಿಯಾ, ಅಕ್ಟೋಬರ್ 20 – ಬೆಂಗಳೂರು
    ಪಾಕಿಸ್ತಾನ vs ಅಫ್ಘಾನಿಸ್ತಾನ, ಅಕ್ಟೋಬರ್ 23- ಚೆನ್ನೈ
    ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಅಕ್ಟೋಬರ್ 27- ಚೆನ್ನೈ
    ಪಾಕಿಸ್ತಾನ vs ಬಾಂಗ್ಲಾದೇಶ, ಅಕ್ಟೋಬರ್ 31 – ಕೋಲ್ಕತ್ತಾ
    ಪಾಕಿಸ್ತಾನ vs ನ್ಯೂಜಿಲೆಂಡ್, ನವೆಂಬರ್ 4 – ಬೆಂಗಳೂರು
    ಪಾಕಿಸ್ತಾನ vs ಇಂಗ್ಲೆಂಡ್, ನವೆಂಬರ್ 12- ಕೋಲ್ಕತ್ತಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬ್ಯಾಕಪ್‌ ಪಟ್ಟಿ ಸೇರಿದ ಟೀಂ ಇಂಡಿಯಾ ಸ್ಟಾರ್‌ – ವಿಶ್ವಕಪ್‌ ಆಡುವ ಸಂಜು ಸ್ಯಾಮ್ಸನ್‌ ಕನಸು ಭಗ್ನ?

    ಬ್ಯಾಕಪ್‌ ಪಟ್ಟಿ ಸೇರಿದ ಟೀಂ ಇಂಡಿಯಾ ಸ್ಟಾರ್‌ – ವಿಶ್ವಕಪ್‌ ಆಡುವ ಸಂಜು ಸ್ಯಾಮ್ಸನ್‌ ಕನಸು ಭಗ್ನ?

    ಮುಂಬೈ: ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಸಂಜು ಸ್ಯಾಮ್ಸನ್‌ (28) (Sanju Samson), ಮುಂಬರುವ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ (Team India) ಪರ ಆಡಲು ಕಂಡಿದ್ದ ಕನಸು ಬಹುತೇಕ ಭಗ್ನವಾದಂತೆ ಕಾಣ್ತಿದೆ.

    ಇದೇ ಆಗಸ್ಟ್‌ 30ರಿಂದ ಶುರುವಾಗಲಿರುವ ಏಕದಿನ ಏಷ್ಯಾ ಕಪ್‌ (Asia Cup 2023) ಕ್ರಿಕೆಟ್‌ ಟೂರ್ನಿ ಸಲುವಾಗಿ ಆಗಸ್ಟ್‌ 21ರಂದು (ಸೋಮವಾರ) ಟೀಂ ಇಂಡಿಯಾ ಆಯ್ಕೆ ಸಮಿತಿ, 17 ಆಟಗಾರರ ಬಲಿಷ್ಠ ತಂಡವನ್ನ ಪ್ರಕಟ ಮಾಡಿದೆ. ಆದ್ರೆ ಸಂಜು ಸ್ಯಾಮ್ಸನ್‌ ಇದರಲ್ಲಿ ಸ್ಥಾನ ಪಡೆಯದೇ ಬ್ಯಾಕಪ್‌ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ರಿಂಕು, ಸಂಜು ಸ್ಫೋಟಕ ಬ್ಯಾಟಿಂಗ್‌ – 33 ರನ್‌ಗಳ ಜಯ, ಸರಣಿ ಗೆದ್ದ ಟೀಂ ಇಂಡಿಯಾ

    ತಂಡ ಪ್ರಕಟ ಮಾಡಿದ ಬೆನ್ನಲ್ಲೇ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್ಕರ್‌, ಮುಂಬರುವ ಐಸಿಸಿ ಒಡಿಐ ವಿಶ್ವಕಪ್‌ ಟೂರ್ನಿಗೂ ಈ ಆಟಗಾರರ ಸುತ್ತಿನ ತಂಡವನ್ನ ಆಯ್ಕೆ ಮಾಡಲಾಗುತ್ತದೆ ಅಂತ ಹೇಳಿದ್ದಾರೆ. ಹಾಗಾಗಿ ಏಷ್ಯಾಕಪ್‌ಗೆ ಏಕೈಕ ಬ್ಯಾಕಪ್‌ ಆಟಗಾರನಾಗಿ ಆಯ್ಕೆ ಆಗಿರುವ ಸಂಜು ಸ್ಯಾಮ್ಸನ್‌ಗೆ, ಒಡಿಐ ವಿಶ್ವಕಪ್‌ಗೆ ತೆಗೆದುಕೊಳ್ಳುವ 15 ಆಟಗಾರರ ಪಟ್ಟಿಯಲ್ಲಿ ಸ್ಥಾನ ಸಿಗುವುದು ಬಹುತೇಕ ಕಷ್ಟವಾಗಿದೆ.

    ಇಬ್ಬರು ಕನ್ನಡಿಗರಿಗೆ ಸ್ಥಾನ:
    ಏಷ್ಯಾ ಕಪ್‌ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಇಬ್ಬರು ಕನ್ನಡಿಗರಿಗೆ ಸ್ಥಾನ ನೀಡಲಾಗಿದೆ. ಕೆ.ಎಲ್‌ ರಾಹುಲ್‌ ಜೊತೆಗೆ ಯುವ ವೇಗಿ ಪ್ರಸಿದ್ಧ್‌ ಕೃಷ್ಣ ಅವರಿಗೂ ಸ್ಥಾನ ಕಲ್ಪಿಸಲಾಗಿದೆ. ಗಾಯದಿಂದ ಸಂಪೂರ್ಣ ಫಿಟ್‌ ಆಗಿರುವ ಪ್ರಸಿಧ್‌ ಪ್ರಸ್ತುತ ಐರ್ಲೆಂಡ್‌ ವಿರುದ್ಧ 3 ಪಂದ್ಯಗಳ ಟಿ20 ಸರಣಿ ಆಡುತ್ತಿದ್ದು, ಉತ್ತಮ ಪ್ರದರ್ಶನ ತೋರಿದ್ದಾರೆ. ಇದರ ಫಲವಾಗಿ ಅವರನ್ನ ಏಷ್ಯಾ ಕಪ್‌ ಟೂರ್ನಿಗೆ ಆಯ್ಕೆ ಮಾಡಲಾಗಿದೆ.

    ಸೂರ್ಯನ ಮೇಲೆ ಭರವಸೆ:
    ಕೆ.ಎಲ್‌ ರಾಹುಲ್ ಮತ್ತು ಶ್ರೇಯಸ್‌ ಅಯ್ಯರ್‌ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿರುವ ಕಾರಣ ಸಂಜು ಸ್ಯಾಮ್ಸನ್‌ಗೆ ಅವಕಾಶ ಕೈತಪ್ಪಿದೆ. ಜೊತೆಗೆ ಸುರ್ಯಕುಮಾರ್‌ ಯಾದವ್‌ ಮೇಲೆ ಸೆಲೆಕ್ಟರ್ಸ್‌ ಭರವಸೆ ಮುಂದುವರಿಸಿದ್ದು, ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಸರಣಿಯಲ್ಲಿ ಅಲ್ಲಿನ ಸ್ಪಿನ್ ಸ್ನೇಹಿ ಪಿಚ್‌ಗಳಲ್ಲಿಯೂ ಅಬ್ಬರಿಸಿದ ಯುವ ಆಟಗಾರ ತಿಲಕ್‌ ವರ್ಮಾಗೆ ಸೆಲೆಕ್ಟರ್ಸ್‌ ಮಣೆಹಾಕಿ ಸ್ಯಾಮ್ಸನ್‌ ಕೈಬಿಟ್ಟಿದ್ದಾರೆ. ಇದನ್ನೂ ಓದಿ: WorldCup 2023: ಬಿಸಿಸಿಐಗೆ ಹೊಸ ತಲೆನೋವು – ವೇಳಾಪಟ್ಟಿ ಬದಲಾವಣೆಗೆ ಹೈದರಾಬಾದ್‌ ಅಧಿಕಾರಿಗಳಿಂದ ಮನವಿ

    ಐಪಿಎಲ್‌ ಟೂರ್ನಿಯಲ್ಲಿ ರಾಜಸ್ಥಾನ್‌ ರಾಯಲ್ಸ್‌ ಕ್ಯಾಪ್ಟನ್‌ ಆಗಿರುವ ಸಂಜು ಸ್ಯಾಮ್ಸನ್‌, ಏಕದಿನ ಕ್ರಿಕೆಟ್‌ನಲ್ಲಿ ಸಿಕ್ಕಿರುವ ಕೆಲವೇ ಅವಕಾಶಗಳಲ್ಲಿ ಮಿಂಚಿ 55ಕ್ಕೂ ಹೆಚ್ಚಿನ ಬ್ಯಾಟಿಂಗ್‌ ಸರಾಸರಿ ಕಾಯ್ದುಕೊಂಡಿದ್ದಾರೆ. ವೆಸ್ಟ್ ಇಂಡೀಸ್‌ ವಿರುದ್ಧದ ಒಡಿಐ ಸರಣಿಯ ಕೊನೇ ಪಂದ್ಯದಲ್ಲಿ ಸಂಜು 40 ಎಸೆತಗಳಲ್ಲಿ 51 ರನ್‌ ಸಿಡಿಸಿದ್ದರು. ಆದರೂ ಒಡಿಐನಲ್ಲಿ ಸತತ ವೈಫಲ್ಯ ಕಂಡಿರುವ ಸೂರ್ಯಕುಮಾರ್‌ ಯಾದವ್‌ ಮತ್ತು ತಿಲಕ್‌ ವರ್ಮಾ ಮೇಲೆ ಸೆಲೆಕ್ಟರ್ಸ್‌ ಭರವಸೆ ಇಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ವಿರಾಟ್‌ – ಕಿಂಗ್‌ ಆದ ಕೊಹ್ಲಿಯ ರೋಚಕ ಜರ್ನಿ

    ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ವಿರಾಟ್‌ – ಕಿಂಗ್‌ ಆದ ಕೊಹ್ಲಿಯ ರೋಚಕ ಜರ್ನಿ

    ಚೇಸ್‌ ಮಾಸ್ಟರ್‌, ಸೂಪರ್‌ ಸ್ಟಾರ್‌ ಕ್ರಿಕೆಟಿಗ, ಕ್ರಿಕೆಟ್‌ ಲೋಕದ ಕಿಂಗ್‌ ಎಂದೇ ಖ್ಯಾತಿ ಗಳಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ಇಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ 15 ವರ್ಷ ಕಳೆದಿದೆ. 2018ರ ಆಗಸ್ಟ್‌ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಎಂಟ್ರಿ ಕೊಟ್ಟ ಇತಿಹಾಸ ಪುಟ ಸೇರಿದ್ದಾರೆ.

    ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿ ಕೋಟ್ಯಂತರ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಾಜಿ ಹಾಗೂ ಹಾಲಿ ಕ್ರಿಕೆಟರ್‌ಗಳು ಶುಭಾಶಯದ ಹೂಮಳೆಗರೆದಿದ್ದಾರೆ. ಪ್ಲೇಯರ್‌ ಆಗಿ, ನಾಯಕನಾಗಿ, ಉಪನಾಯಕನಾಗಿ ಟೀಂ ಇಂಡಿಯಾಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ತನಗಿಂತಲೂ ಕ್ರಿಕೆಟ್‌ ಲೋಕಕ್ಕೆ ಎಂಟ್ರಿಕೊಟ್ಟ ಅನೇಕ ದಿಗ್ಗಜರ ದಾಖಲೆಯನ್ನ ಮುರಿದು ಧೂಳೆಬ್ಬಿಸಿರುವ ವಿರಾಟ್‌ ಕೊಹ್ಲಿ ಇದೀಗ ವೃತ್ತಿ ಜೀವನದ ನಿರ್ಣಾಯಕ ಹಂತದಲ್ಲಿದ್ದಾರೆ. ಅಂದು ಸಾಮಾನ್ಯ ಹುಡುಗನಾಗಿ ಕ್ರಿಕೆಟ್‌ ಅಂಗಳಕ್ಕಿಳಿದ ಕೊಹ್ಲಿ ಇಂದು ಕಿಂಗ್‌ ಆಗಿ ಮೆರೆದಾಡುತ್ತಿದ್ದಾರೆ. ಇದನ್ನೂ ಓದಿ: ಸೋಲುವುದು ಕೂಡ ಒಳ್ಳೆಯದೇ, ಒಂದು ಸರಣಿ ಮ್ಯಾಟರ್‌ ಅಲ್ವೇ ಅಲ್ಲ – ಪಾಂಡ್ಯ ಸಮರ್ಥನೆ

    ಕೊಹ್ಲಿ ಎಂಟ್ರಿ ಕೊಟ್ಟಿದ್ದು ಯಾವಾಗ?

    2008ರ ಆಗಸ್ಟ್ 18ರಂದು ಶ್ರೀಲಂಕಾದ ಡಂಬುಲ್ಲಾ ಮೈದಾನದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಪದಾರ್ಪಣೆ ಮಾಡಿದ ಕೊಹ್ಲಿ, ಇಂದು ನಿರ್ಣಾಯಕ ಹಂತದಲ್ಲಿದ್ದಾರೆ. ಜೊತೆಗೆ 2023ರ ಏಕದಿನ ವಿಶ್ವಕಪ್‌ ಬಳಿಕ ಕೊಹ್ಲಿ ನಿವೃತ್ತಿ ಹೊಂದುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ತಮ್ಮ ಮೊದಲ ಪಂದ್ಯದಲ್ಲಿ ಗೌತಮ್ ಗಂಭೀರ್​ ಅವರೊಂದಿಗೆ ಇನ್ನಿಂಗ್ಸ್​ ಆರಂಭಿಸಿದ್ದ ಕೊಹ್ಲಿ, ಕೇವಲ 12 ರನ್ ಗಳಿಸಿ ನಿರಾಸೆ ಮೂಡಿಸಿದ್ದರು. ಈ ಪಂದ್ಯದಲ್ಲಿ ಭಾರತ 8 ವಿಕೆಟ್​ಗಳ ಸೋಲು ಕಂಡಿತ್ತು. ಅಂದು 12 ರನ್​ಗಳಿಂದ ಆರಂಭವಾದ ಕೊಹ್ಲಿ ಇನ್ನಿಂಗ್ಸ್‌ ಇಂದು 25 ಸಾವಿರಕ್ಕೂ ಹೆಚ್ಚು ರನ್ ಕಲೆ ಹಾಕುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ. ಇದನ್ನೂ ಓದಿ: ಇಂದಿನಿಂದ IND vs IRE ಟಿ20 ಸರಣಿ ಆರಂಭ – 11 ತಿಂಗಳ ಬಳಿಕ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ ಬುಮ್ರಾ

    76 ಅಂತಾರಾಷ್ಟ್ರೀಯ ಶತಕ

    ಅಂತಾರಾಷ್ಟ್ರೀಯ ಕ್ರಿಕೆಟ್​​​ನಲ್ಲಿ ಅತಿ ಹೆಚ್ಚು ಶತಕಗಳ ಸಾಧನೆ ಮಾಡಿದವರ ಪಟ್ಟಿಯಲ್ಲಿ 100 ಶತಕ ಸಿಡಿಸಿರುವ ಸಚಿನ್ ತೆಂಡೂಲ್ಕರ್​ ಅಗ್ರಸ್ಥಾನದಲ್ಲಿದ್ದಾರೆ. ಅವರನ್ನು ಹಿಂದಿಕ್ಕುವ ಸಾಮರ್ಥ್ಯ ಕೊಹ್ಲಿಗಿದೆ ಎಂಬುದು ತಜ್ಞರ ಅಭಿಪ್ರಾಯ. ಏಕೆಂದರೆ 76 ಅಂತಾರಾಷ್ಟ್ರೀಯ ಶತಕ ಸಿಡಿಸಿರುವ ಕೊಹ್ಲಿ 2ನೇ ಸ್ಥಾನದಲ್ಲಿದ್ದು, 24 ಶತಕ ಸಿಡಿಸಿದರೆ ಸಾಕು ಸಚಿನ್​ ಸಾಧನೆ ಸರಿಗಟ್ಟಲಿದ್ದಾರೆ ಎಂಬ ನಿರೀಕ್ಷೆ ಇದೆ. ಏಕದಿನದಲ್ಲಿ 46 ಶತಕ, ಟೆಸ್ಟ್​​​ನಲ್ಲಿ 29 ಶತಕ, ಟಿ20ಯಲ್ಲಿ 1 ಶತಕ ಸಿಡಿಸಿದ್ದಾರೆ.

    ನಾಯಕನಾಗಿ ಕೊಹ್ಲಿ ಸಾಧನೆ

    ಬ್ಯಾಟ್ಸ್‌ಮ್ಯಾನ್‌ ಆಗಿ ದಿಗ್ಗಜರ ದಾಖಲೆಗಳನ್ನ ಉಡೀಸ್‌ ಮಾಡಿರುವ ಕೊಹ್ಲಿ ನಾಯಕನಾಗಿಯೂ ಅಮೋಘ ಸಾಧನೆ ಮಾಡಿದ್ದಾರೆ. ಟೆಸ್ಟ್​​ ಕ್ರಿಕೆಟ್​​ನಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು ಎನಿಸಿದ್ದಾರೆ. ವಿದೇಶಿ ನೆಲದಲ್ಲಿ ಟೆಸ್ಟ್​ ಗೆಲ್ಲುವುದೇ ಕಷ್ಟ ಎನ್ನುವಂತಿದ್ದ ಕಾಲದಲ್ಲಿ ಕೊಹ್ಲಿ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್‌ ನೆಲದಲ್ಲಿ ಅವಿಸ್ಮರಣೀಯ ಟೆಸ್ಟ್​ ಸರಣಿಗಳನ್ನ ಗೆದ್ದು ಟೀಂ ಇಂಡಿಯಾದ ಘನತೆ ಮೆರೆದಿದ್ದಾರೆ.

    68 ಟೆಸ್ಟ್​ ಪಂದ್ಯಗಳನ್ನು ಮುನ್ನಡೆಸಿರುವ ಕೊಹ್ಲಿ, ಬರೋಬ್ಬರಿ 40ರಲ್ಲಿ ಗೆಲುವು ದಾಖಲಿಸಿದ್ದಾರೆ. ಕೇವಲ 17 ಪಂದ್ಯಗಳಲ್ಲಿ ಸೋತಿದ್ದಾರೆ. ಅವರ ನಾಯಕತ್ವದಲ್ಲಿ ಭಾರತ 11 ಪಂದ್ಯಗಳಲ್ಲಿ ಡ್ರಾ ನಲ್ಲಿ ಫಲಿತಾಂಶ ಅಂತ್ಯಕಂಡಿವೆ. ಗೆಲುವಿನ ಪ್ರಮಾಣ ಶೇ.58.82 ರಷ್ಟಿದೆ. ಏಕದಿನ ಕ್ರಿಕೆಟ್​​ನಲ್ಲೂ 95 ಪಂದ್ಯಗಳಿಗೆ ನಾಯಕತ್ವ ವಹಿಸಿದ್ದಾರೆ. 65 ಪಂದ್ಯಗಳಲ್ಲಿ ಗೆಲುವು, ಕೇವಲ 27 ಸೋಲು ಕಂಡಿದ್ದಾರೆ. ಗೆಲುವಿನ ಪ್ರಮಾಣ 68.42ರಷ್ಟಿದೆ. ಇನ್ನೂ 50 ಟಿ20 ಪಂದ್ಯಗಳಿಗೆ ನಾಯಕತ್ವ ವಹಿಸಿದ ಕೊಹ್ಲಿ, 30 ಪಂದ್ಯ ಗೆಲ್ಲಿಸಿಕೊಟ್ಟಿದ್ದಾರೆ. 16 ಪಂದ್ಯಗಳಲ್ಲಿ ಸೋಲು ಕಂಡಿದ್ದು, 60ರಷ್ಟು ಗೆಲುವಿನ ಪ್ರಮಾಣ ಹೊಂದಿದ್ದಾರೆ.

    ಕೊಹ್ಲಿ ವೃತ್ತಿಜೀವನ

    2008ರಿಂದ ಒಟ್ಟು ಈವರೆಗೆ 275 ಏಕದಿನ ಪಂದ್ಯಗಳನ್ನ ಆಡಿರುವ ಕೊಹ್ಲಿ, 57.32ರ ಸರಾಸರಿಯಲ್ಲಿ, 46 ಶತಕ, 65 ಅರ್ಧಶತಕಗಳ ನೆರವಿನಿಂದ 12,898 ರನ್ ಗಳಿಸಿದ್ದಾರೆ. ಟೆಸ್ಟ್​ ಕ್ರಿಕೆಟ್​​ನಲ್ಲಿ 111 ಪಂದ್ಯಗಳಲ್ಲಿ 29 ಶತಕ, 7 ದ್ವಿಶತಕ, 29 ಅರ್ಧಶತಕಗಳ ನೆರವಿನಿಂದ 8,676 ರನ್ ಗಳಿಸಿದ್ದಾರೆ. ಅವರ ಗರಿಷ್ಠ ಸ್ಕೋರ್​ 254 ರನ್. 115 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಿಂದ 4,008 ರನ್ ಬಾರಿಸಿದ್ದಾರೆ. ಇದರಲ್ಲಿ 37 ಅರ್ಧಶತಕ, 1 ಶತಕ ಕೂಡ ಸೇರಿದೆ.

    ಐಸಿಸಿ ಟ್ರೋಫಿ ಗೆದ್ದಿಲ್ಲ ಅನ್ನೋದೆ ಚಿಂತೆ

    ಹಲವು ವಿಶೇಷ ಸಾಧನೆಗಳನ್ನು ಮಾಡಿರುವ ಕೊಹ್ಲಿ ನಾಯಕತ್ವದಲ್ಲಿ ಒಂದೇ ಒಂದು ಐಸಿಸಿ ಟ್ರೋಫಿ ಗೆದ್ದಿಲ್ಲ ಎಂಬ ಕೊರಗು ಕಾಡುತ್ತಿದೆ. ದೇಶ-ವಿದೇಶಗಳಲ್ಲಿ ದ್ವಿಪಕ್ಷೀಯ ಸರಣಿಗಳಲ್ಲಿ ಧೂಳೆಬ್ಬಿಸಿದ ಕಿಂಗ್​ ಕೊಹ್ಲಿ, ಎರಡು ಬಾರಿ ಭಾರತ ತಂಡವನ್ನು ಐಸಿಸಿ ಫೈನಲ್​ಗೇರಿಸಿದ್ದರು. 2017ರ ಚಾಂಪಿಯನ್ಸ್ ಟ್ರೋಫಿ ಮತ್ತು 2021ರ ಐಸಿಸಿ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​​​ನಲ್ಲಿ ಭಾರತ ಮುಗ್ಗರಿಸಿತ್ತು. ಇನ್ನುಳಿದಂತೆ ಸೆಮಿಫೈನಲ್​​​ನಲ್ಲಿ ಹೆಚ್ಚಾಗಿ ಐಸಿಸಿ ಟೂರ್ನಿಗಳಲ್ಲಿ ಸೋಲು ಕಂಡಿದೆ. 2013ರ ಬಳಿಕ ಭಾರತ ಐಸಿಸಿ ಟ್ರೋಫಿ ಗೆದ್ದಿಲ್ಲ. ಈ ಬಾರಿ ವಿಶ್ವಕಪ್‌ ಟೂರ್ನಿ ಕೊಹ್ಲಿಗೆ ಕೊನೆಯ ವಿಶ್ವಕಪ್‌ ಟೂರ್ನಿಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿರುವುದರಿಂದ ಟೀಂ ಇಂಡಿಯಾ ಕೊಹ್ಲಿಗಾಗಿ ಕಪ್‌ ಗೆಲ್ಲಲ್ಲೇಬೇಕೆಂಬುದು ಎಲ್ಲರ ಆಶಯ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಬರ್‌ ಮೇಲಿನ ಗೌರವ ಇಂದಿಗೂ ಬದಲಾಗಿಲ್ಲ – ಪಾಕ್‌ ಆಟಗಾರನನ್ನ ಬಾಯ್ತುಂಬ ಹೊಗಳಿದ ಕೊಹ್ಲಿ

    ಬಾಬರ್‌ ಮೇಲಿನ ಗೌರವ ಇಂದಿಗೂ ಬದಲಾಗಿಲ್ಲ – ಪಾಕ್‌ ಆಟಗಾರನನ್ನ ಬಾಯ್ತುಂಬ ಹೊಗಳಿದ ಕೊಹ್ಲಿ

    ಮುಂಬೈ:‌ 2019ರ ವಿಶ್ವಕಪ್‌ (ICC WorldCup) ಟೂರ್ನಿಯ ನಂತರ ನನ್ನ ಮತ್ತು ಬಾಬರ್‌ ಆಜಂ ನಡುವೆ ಮೊದಲ ಸಂವಾದ ನಡೆದಿತ್ತು. ಅಂದು ಇಬ್ಬರು ಸಾಕಷ್ಟು ವಿಚಾರಗಳನ್ನ ಚರ್ಚೆ ಮಾಡಿದ್ವಿ. ಆದ್ರೆ ಬಾಬರ್‌ ಆಜಂ (Babar Azam) ಮೇಲಿನ ಗೌರವ ಇಂದಿಗೂ ಬದಲಾಗಿಲ್ಲ ಎಂದು ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ಹೇಳಿದ್ದಾರೆ.

    ಸಂದರ್ಶನವೊಂದರಲ್ಲಿ ಮಾತನಾಡಿರುವ ಕೊಹ್ಲಿ, ಪಾಕ್‌ ತಂಡದ (Pakistan Team) ನಾಯಕ ಬಾಬರ್‌ ಆಜಂ ಹಾಗೂ ತಮ್ಮ ನಡುವಿನ ಸಂಬಂಧದ ಕುರಿತು ಹೇಳಿದ್ದಾರೆ. ಅಂಡರ್‌-19 ವಿಶ್ವಕಪ್‌ ಟೂರ್ನಿಯಲ್ಲಿ ವಾಸಿಂ ಪರಿಚಯವಾಗಿದ್ದರು. 2019ರಲ್ಲಿ ಮ್ಯಾಂಚೆಸ್ಟರ್‌ನಲ್ಲಿ ನಡೆದ ವಿಶ್ವಕಪ್‌ ಟೂರ್ನಿ ಬಳಿಕ ಬಾಬರ್‌ ನನ್ನೊಂದಿಗೆ ಮಾತನಾಡಲು ಬಯಸಿದ್ದರು. ಇಬ್ಬರೂ ಕುಳಿತು ಕ್ರಿಕೆಟ್‌ನ (Cricket) ವಿವಿಧ ಆಯಾಮಗಳ ಬಗ್ಗೆ ಸುಧೀರ್ಘವಾಗಿ ಮಾತನಾಡಿದ್ದೆವು. ನಾನು ಬಾಬರ್‌ನನ್ನ ಅತೀ ಗೌರವದಿಂದ ಕಾಣುತ್ತಿದೆ. ಇಂದಿಗೂ ಆ ಗೌರವ ಬದಲಾಗಿಲ್ಲ ಎಂದು ಹೇಳಿದ್ದಾರೆ.

    ಬಾಬರ್‌ ಆಜಂ ಎಲ್ಲಾ ಸ್ವರೂಪದಲ್ಲಿಯೂ ವಿಶ್ವದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ ಆಗಿದ್ದಾರೆ. ಆದ್ದರಿಂದ ಸ್ಥಿರವಾಗಿ ಆಡುತ್ತಾರೆ. ನಾನೂ ಸಹ ಅವರ ಆಟವನ್ನ ತುಂಬಾ ಎಂಜಾಯ್‌ ಮಾಡ್ತೀನಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Asian Championship Trophy Hockey final: ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಭಾರತ; ಮಲೇಷ್ಯಾ ವಿರುದ್ಧ 4-3 ಅಂತರದ ರೋಚಕ ಜಯ

    28 ವರ್ಷದ ಪಾಕಿಸ್ತಾನ ತಂಡದ ನಾಯಕ ಬಾಬರ್‌ ಆಜಂ 104 T20, 100 ಏಕದಿನ ಮತ್ತು 49 ಟೆಸ್ಟ್‌ ಪಂದ್ಯಗಳನ್ನಾಡಿದ್ದಾರೆ. ಇದರಲ್ಲಿ 30 ಶತಕಗಳೂ ಸೇರಿದಂತೆ 12,346 ರನ್‌ ಗಳಿಸಿದ್ದಾರೆ. ಮೂರು ಆವೃತ್ತಿಯಲ್ಲೂ ಸ್ಟಾರ್‌ ಬ್ಯಾಟ್ಸ್‌ಮ್ಯಾನ್‌ ಆಗಿದ್ದಾರೆ.

    ವಿರಾಟ್‌ ಕೊಹ್ಲಿ 111 ಟೆಸ್ಟ್‌ ಪಂದ್ಯಗಳಲ್ಲಿ 29 ಶತಕ, 29 ಅರ್ಧಶತಕಗಳೊಂದಿಗೆ 8,676 ರನ್, 275 ಏಕದಿನ ಪಂದ್ಯಗಳಲ್ಲಿ 46 ಶತಕ ಮತ್ತು 65 ಅರ್ಧಶತಕ ಗಳೊಂದಿಗೆ 12,898 ರನ್ ಮತ್ತು 115 ಟಿ20 ಪಂದ್ಯಗಳಲ್ಲಿ 1 ಶತಕ, 37 ಅರ್ಧಶತಕ ಗಳಿಸಿದ್ದಾರೆ. ಒಟ್ಟಾರೆಯಾಗಿ 76 ಅಂತಾರಾಷ್ಟ್ರೀಯ ಶತಕಗಳೊಂದಿಗೆ 25 ಸಾವಿರ ರನ್‌ ಪೂರೈಸಿ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ ಮ್ಯಾನ್‌ ಎನಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ 100 ಶತಕ ಬಾರಿಸಿ 34,357 ರನ್‌ ಗಳಿಸಿ ಅಗ್ರಸ್ಥಾನದಲ್ಲಿರುವ ಲೆಂಜೆಂಡ್‌ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆ ಮುರಿಯುತ್ತಾರೆ ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.

    ಇದೇ ಆಗಸ್ಟ್‌ 30 ರಿಂದ ಸೆಪ್ಟೆಂಬರ್‌ 17ರ ವರೆಗೆ ಏಕದಿನ ಏಷ್ಯಾಕಪ್‌ ಹಾಗೂ ಅಕ್ಟೋಬರ್‌ 05 ರಿಂದ ನವೆಂಬರ್‌ 19ರ ವರೆಗೆ ಏಕದಿನ ವಿಶ್ವಕಪ್‌ ಟೂರ್ನಿ ನಡೆಯಲಿದ್ದು, ಭಾರತ ಮತ್ತು ಪಾಕ್‌ ತಂಡಗಳು ಮುಖಾಮುಖಿಯಾಗಲಿವೆ. ಇದನ್ನೂ ಓದಿ: ಭಾರತಕ್ಕೆ 9 ವಿಕೆಟ್‌ಗಳ ಯಶಸ್ವಿ ಜಯ ತಂದ ಗಿಲ್‌, ಜೈಸ್ವಾಲ್‌ – ಇಂದು ರೋಚಕ ಹಣಾಹಣಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕಿಸ್ತಾನ ತಂಡದಲ್ಲಿ ಎಲ್ಲರೂ ಉತ್ತಮ ಬೌಲರ್‌ಗಳೇ – ರೋಹಿತ್‌ ಶರ್ಮಾ

    ಪಾಕಿಸ್ತಾನ ತಂಡದಲ್ಲಿ ಎಲ್ಲರೂ ಉತ್ತಮ ಬೌಲರ್‌ಗಳೇ – ರೋಹಿತ್‌ ಶರ್ಮಾ

    ಜಾರ್ಜ್‌ಟೌನ್ (ಗಯಾನಾ): ಪಾಕಿಸ್ತಾನ ತಂಡದಲ್ಲಿ (Pakistan Team) ಎಲ್ಲಾ ಉತ್ತಮ ಬೌಲರ್‌ಗಳೇ ಇದ್ದಾರೆ ಎಂದು ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ (Rohit Sharma) ಶ್ಲಾಘಿಸಿದ್ದಾರೆ.

     

    View this post on Instagram

     

    A post shared by Sameer Karkhanis (@sameer.k.insta)

    USAನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ ರೋಹಿತ್‌, ಪಾಕಿಸ್ತಾನ ತಂಡದಲ್ಲಿ ಎಲ್ಲಾ ಉತ್ತಮ ಬೌಲರ್‌ಗಳೇ ಇದ್ದಾರೆ. ಆದ್ರೆ ಪ್ರತ್ಯೇಕವಾಗಿ ನಾನು ಯಾರ ಹೆಸರನ್ನೂ ತೆಗೆದುಕೊಳ್ಳುವುದಿಲ್ಲ. ಹೆಸರು ತೆಗೆದುಕೊಂಡ್ರೆ ದೊಡ್ಡ ಕಾಂಟ್ರವರ್ಸಿ ಆಗುತ್ತೆ. ಒಬ್ಬ ಪ್ಲೇಯರ್‌ ಹೆಸರು ಹೇಳಿದ್ರೆ ಮತ್ತೊಬ್ಬರು ಸಹಿಸಲ್ಲ. ನನಗನ್ನಿಸುತ್ತೆ ಎಲ್ಲಾ ಬೌಲರ್‌ಗಳು ಉತ್ತಮವಾಗಿಯೇ ಇದ್ದಾರೆ ಎಂದು ಹೊಗಳಿದ್ದಾರೆ.

    ಸದ್ಯ ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್‌ ಪಾಂಡ್ಯ (Hardik Pandya) ಟಿ20 ತಂಡವನ್ನ ಮುನ್ನಡೆಸುತ್ತಿದ್ದಾರೆ. ಈಗಾಗಲೇ ವಿಂಡೀಸ್‌ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯಲ್ಲಿ ಸತತ 2 ಪಂದ್ಯಗಳಲ್ಲಿ ಸೋತಿರುವ ಟೀಂ ಇಂಡಿಯಾ ಮಾಡು ಇಲ್ಲವೇ ಮಡಿ ಹಂತದಲ್ಲಿದ್ದು, ಮುಂದಿನ ಮೂರು ಪಂದ್ಯಗಳಲ್ಲೂ ಗೆಲುವು ಸಾಧಿಸುವ ಅನಿವಾರ್ಯತೆ ಇದೆ. ಇದನ್ನೂ ಓದಿ: WorldCup ಟೂರ್ನಿಗೆ ಆಸೀಸ್‌ ಬಲಿಷ್ಠ ತಂಡ ಪ್ರಕಟ – ಸ್ಟಾರ್‌ ಆಲ್‌ರೌಂಡರ್‌ಗೆ T20 ನಾಯಕತ್ವದ ಹೊಣೆ

    ಇದೇ ಆಗಸ್ಟ್‌ 30 ರಿಂದ ಸೆಪ್ಟೆಂಬರ್‌ 17ರ ವರೆಗೆ ಏಕದಿನ ಏಷ್ಯಾಕಪ್‌ ಟೂರ್ನಿ ನಡೆಯಲಿದ್ದು, ಅದಕ್ಕಾಗಿ ರೋಹಿತ್‌ ಶರ್ಮಾ ಪೂರ್ವ ತಯಾರಿ ನಡೆಸುತ್ತಿದ್ದಾರೆ. ಏಕೆಂದರೆ ಮುಂಬರುವ ಏಷ್ಯಾಕಪ್‌ (AsiaCup) ಹಾಗೂ ವಿಶ್ವಕಪ್‌ (WorldCup) ಟೂರ್ನಿ ರೋಹಿತ್‌ ಶರ್ಮಾ ನಾಯಕತ್ವಕ್ಕೂ ಸವಾಲಾಗಿದೆ. ಏಕೆಂದರೆ ಕಳೆದ 10 ವರ್ಷಗಳಲ್ಲಿ ಟೀಂ ಇಂಡಿಯಾ ಐಸಿಸಿ ಟ್ರೋಫಿಗಳನ್ನು ಗೆಲ್ಲುವಲ್ಲಿ ವಿಫಲವಾಗಿದೆ. 2011ರಲ್ಲಿ ಏಕದಿನ ವಿಶ್ವಕಪ್‌, 2010ರಲ್ಲಿ ಟಿ20 ಏಷ್ಯಾಕಪ್‌ ಹಾಗೂ 2013ರಲ್ಲಿ ಚಾಂಪಿಯನ್‌ ಟ್ರೋಫಿ ಗೆದ್ದಿದ್ದ ಭಾರತ ಆ ನಂತರ ಐಸಿಸಿ ಟೂರ್ನಿಗಳಲ್ಲಿ ಪ್ರಶಸ್ತಿ ಗೆದ್ದಿಲ್ಲ. ಇದನ್ನೂ ಓದಿ: 5 ವರ್ಷದ ಹಿಂದಿನ ಬಾಲ್ ಬಳಸಿ ಇಂಗ್ಲೆಂಡ್ ಗೆದ್ದ ಆರೋಪ – ಆಂತರಿಕ ತನಿಖೆ ಮಾಡ್ತೀನಿ ಎಂದ ಬಾಲ್ ತಯಾರಕ

    2019ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಗೆಲುವಿನ ಹಾದಿಯಲ್ಲಿದ್ದ ಭಾರತ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ ಸೋತು ನಿರಾಸೆ ಅನುಭವಿಸಿತ್ತು. ಕಳೆದ ವರ್ಷ ಟಿ20 ವಿಶ್ವಕಪ್‌ ಟೂರ್ನಿಯಲ್ಲೂ ಸೆಮಿ ಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಸೋತಿತ್ತು. ಈ ವರ್ಷ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲೂ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲನುಭವಿಸಿತು. ಈ ಬಾರಿ ಭಾರತ ಸಂಪೂರ್ಣ ಆತಿಥ್ಯದೊಂದಿಗೆ ವಿಶ್ವಕಪ್‌ ಟೂರ್ನಿ ಆಯೋಜನೆಗೊಂಡಿದೆ. ಹಲವು ದಿಗ್ಗಜರ ಪಾಲಿಗೂ ಇದು ಕೊನೆಯ ವಿಶ್ವಕಪ್‌ ಆಗಿರುವುದರಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಟೀಂ ಇಂಡಿಯಾಕ್ಕೆ ಇದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • MSDಗೆ 42ನೇ ಹುಟ್ಟುಹಬ್ಬದ ಸಂಭ್ರಮ – ಅಭಿಮಾನಿಗಳಿಂದ KGF ರೇಂಜ್‌ನ ಟ್ರೈಲರ್‌ ರಿಲೀಸ್‌!

    MSDಗೆ 42ನೇ ಹುಟ್ಟುಹಬ್ಬದ ಸಂಭ್ರಮ – ಅಭಿಮಾನಿಗಳಿಂದ KGF ರೇಂಜ್‌ನ ಟ್ರೈಲರ್‌ ರಿಲೀಸ್‌!

    – ಭಾರತದ ಕ್ರಿಕೆಟ್‌ ಇತಿಹಾಸದಲ್ಲಿ ಮಹಿ ನಡೆದು ಬಂದ ಹಾದಿ ನಿಮಗೆಷ್ಟು ಗೊತ್ತು.?

    ಮುಂಬೈ: ಭಾರತ ಕ್ರಿಕೆಟ್‌ ತಂಡದ ಮೋಸ್ಟ್​ ಸಕ್ಸಸ್​ ಫುಲ್​ ಕ್ಯಾಪ್ಟನ್ ಎಂ.ಎಸ್‌ ಧೋನಿ (MS Dhoni) ಅವರು 42ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​​ನಿಂದ ನಿವೃತ್ತಿಯಾಗಿರುವ ಧೋನಿ ಅವರ ನಾಯಕತ್ವದಲ್ಲಿ ಟೀಂ ಇಂಡಿಯಾ (Team India) ಮಹತ್ವದ ದಾಖಲೆಗಳನ್ನು ಬರೆದಿದೆ.

    ವಿಶ್ವ ಶ್ರೇಷ್ಠ ನಾಯಕ ʻದಿ ಲೆಜೆಂಡ್‌ʼ (The Legend)ಎಂದೇ ಪರಿಗಣಿತವಾಗಿರುವ ಕ್ಯಾಪ್ಟನ್ ಕೂಲ್​ ಮಹೇಂದ್ರ ಸಿಂಗ್ ಧೋನಿ ಅವರಿಗೆ ಹಾಲಿ-ಮಾಜಿ, ಅಭಿಮಾನಿಗಳು ಸೇರಿದಂತೆ ವಿಶ್ವಾದ್ಯಂತ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಜಾಲತಾಣದಲ್ಲೂ ಟಾಪ್​ ಟ್ರೆಂಡ್​​​ ಮಹಿ ಇದ್ದಾರೆ. ಅಭಿಮಾನಿಗಳು ಕೆಜಿಎಫ್‌ ಟ್ರೇಲರ್‌ ಮ್ಯೂಸಿಕ್‌ ಹಾಗೂ ಡೈಲಾಗ್‌ ಬಳಸಿಕೊಂಡು ಮಹಿಗಾಗಿ ವಿಶೇಷ ಟ್ರೈಲರ್‌ ಸಹ ಬಿಡುಗಡೆ ಮಾಡಿದ್ದಾರೆ. ಇನ್ನೂ ಕೆಲವರು ವಿಶೇಷ ಪೇಯಿಂಟಿಗ್‌ ಮಾಡಿ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಟೀಂ ಇಂಡಿಯಾದಲ್ಲಿ ಮಹಿ ನಡೆದು ಬಂದ ಹಾದಿ:
    ಮಹೇಂದ್ರ ಸಿಂಗ್‌ ಧೋನಿ ನಾಯಕತ್ವದ ಭಾರತ ತಂಡ 2007 ಐಸಿಸಿ ಟಿ20 ವಿಶ್ವಕಪ್‌ ಗೆದ್ದಿತ್ತು. ನಂತರ, 2011ರಲ್ಲಿ ತವರಿನಲ್ಲಿ ನಡೆದಿದ್ದ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿಯೂ ಭಾರತಕ್ಕೆ 2ನೇ ವಿಶ್ವಕಪ್‌ ತಂದುಕೊಟ್ಟಿದ್ದರು. 2013ರಲ್ಲಿ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ ತಂದುಕೊಟ್ಟಿದ್ದರು. ಆ ಮೂಲಕ ಐಸಿಸಿ ಹೆಚ್ಚು ಟ್ರೋಫಿಗಳನ್ನು ಗೆದ್ದ ಭಾರತದ ಏಕೈಕ ನಾಯಕ ಎಂಬ ಖ್ಯಾತಿಗೆ ಧೋನಿ ಭಾಜನರಾಗಿದ್ದರು.

    2004ರ ಡಿಸೆಂಬರ್‌ 24 ರಂದು ಬಾಂಗ್ಲಾದೇಶ ವಿರುದ್ಧ ಎಂ.ಎಸ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಆ ಸರಣಿಯಲ್ಲಿ ವಿಫಲರಾದ ಧೋನಿ, 2005ರ ಪಾಕಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಕ್ಲಿಕ್‌ ಆದರು. ವಿಶಾಖಪಟ್ಟಣಂನಲ್ಲಿ ನಡೆದಿದ್ದ 5ನೇ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿದ್ದರು. ಆನಂತರ ಮಹಿ ಒಂದೊಂದೇ ಮೈಲುಗಲ್ಲು ಸಾಧಿಸುತ್ತಾ ಹೋದರು. ಮಹೇಂದ್ರ ಸಿಂಗ್‌ ಧೋನಿ ಕ್ರಿಕೆಟ್‌ನಲ್ಲಿನ ಸಾಧನೆ ಪರಿಗಣಿಸಿ ಭಾರತ ಸರ್ಕಾರ ರಾಜೀವ್‌ ಗಾಂಧಿ ಖೇಲ್‌ ರತ್ನ (2007), ಪದ್ಮ ಶ್ರೀ (2009) ಹಾಗೂ ಪದ್ಮ ಭೂಷಣ್‌ (2018) ನೀಡಿ ಗೌರವಿಸಿದೆ. ಇದನ್ನೂ ಓದಿ: ಯಾರ ಜೊತೆ, ಎಲ್ಲಿ ಬೇಕಾದ್ರೂ ಆಡೋಕೆ ನಾವ್‌ ರೆಡಿ – ಪಾಕ್‌ ತಂಡ ಭಾರತಕ್ಕೆ ಬರೋದು ಖಚಿತ; ಬಾಬರ್‌ ಆಜಂ

    ಮಹೇಂದ್ರ ಸಿಂಗ್‌ ತಮ್ಮ ವೃತ್ತಿ ಜೀವನದಲ್ಲಿ 90 ಟೆಸ್ಟ್ ಪಂದ್ಯಗಳಿಂದ 38.1 ಸರಾಸರಿಯಲ್ಲಿ 4,876 ರನ್‌ ಗಳಿಸಿದ್ದಾರೆ. ಕ್ಯಾಪ್ಟನ್‌ ಆಗಿ ಪ್ರತಿನಿಧಿಸಿದ 60 ಟೆಸ್ಟ್‌ ಪಂದ್ಯಗಳಲ್ಲಿ 27 ಪಂದ್ಯಗಳಲ್ಲಿ ಗೆಲುವು ತಂದುಕೊಟ್ಟಿದ್ದಾರೆ. 18 ಪಂದ್ಯಗಳಲ್ಲಿ ಸೋಲಾಗಿದ್ದು, 15 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ. ಇದರಲ್ಲಿ 6 ಶತಕಗಳು ಹಾಗೂ 33 ಅರ್ಧಶತಕಗಳನ್ನು ಗಳಿಸಿದ್ದಾರೆ. 350 ಏಕದಿನ ಪಂದ್ಯಗಳಿಂದ 50.6 ಸರಾಸರಿಯಲ್ಲಿ 10,773 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ 10 ಶತಕಗಳು ಹಾಗೂ 73 ಅರ್ಧಶತಕಗಳು ಒಳಗೊಂಡಿವೆ. 98 ಟಿ20 ಪಂದ್ಯಗಳಿಂದ 1617 ರನ್‌ ಗಳಿಸಿದ್ದು, ಎರಡು ಅರ್ಧ ಶತಕ ಬಾರಿಸಿದ್ದಾರೆ. 2010-11 ಮತ್ತು 2012-13ರ ಬಾರ್ಡರ್-ಗವಾಸ್ಕರ್ ಟೆಸ್ಟ್‌ ಟ್ರೋಫಿ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ವೈಟ್‌ವಾಶ್ ಮಾಡಿದ ಏಕೈಕ ಭಾರತೀಯ ನಾಯಕ ಸಹ ಎನಿಸಿಕೊಂಡಿದ್ದಾರೆ.

    ಅಷ್ಟೇ ಅಲ್ಲದೇ 200 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ಮಹಿ ಅದರಲ್ಲಿ 110 ಪಂದ್ಯಗಳಲ್ಲಿ ಜಯ ತಂದುಕೊಟ್ಟಿದ್ದಾರೆ. 74 ಪಂದ್ಯಗಳಲ್ಲಿ ಭಾರತ ಸೋತಿದ್ದು, 5 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ. 11 ಪಂದ್ಯಗಳಲ್ಲಿ ಯಾವುದೇ ಫಲಿತಾಂಶವಿಲ್ಲದೇ ಹೋಯಿತು. 72 ಅಂತಾರಾಷ್ಟ್ರೀಯ ಟಿ20 ಗಳಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಿ 41ರಲ್ಲಿ ಜಯ ತಂದುಕೊಟ್ಟಿದ್ದಾರೆ. 28 ಪಂದ್ಯಗಳಲ್ಲಿ ಭಾರತ ಸೋತಿದೆ. 2 ಪಂದ್ಯಗಳು ಫಲಿತಾಂಶ ನೀಡಲು ವಿಫಲವಾಗಿದ್ದು, ಒಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇದನ್ನೂ ಓದಿ: ICC World Cup 2023: ಟೀಂ ಇಂಡಿಯಾ ಪರಿಷ್ಕೃತ ವೇಳಾಪಟ್ಟಿ ರಿಲೀಸ್‌ – ಇಲ್ಲಿದೆ ಡಿಟೇಲ್ಸ್‌

    IPL ನಲ್ಲಿ 5 ಬಾರಿ ಚಾಂಪಿಯನ್‌:

    ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನ ಮುನ್ನಡೆಸುತ್ತಿರುವ ಎಂ.ಎಸ್‌ ಧೋನಿ 2010, 2011, 2018, 2021 ಮತ್ತು 2023ರಲ್ಲಿ ಚಾಂಪಿಯನ್‌ ಟ್ರೋಫಿ ಗೆದ್ದಿದ್ದಾರೆ. ಈ ಮೂಲಕ ಐಪಿಎಲ್‌ನಲ್ಲೂ ಯಶಸ್ವಿ ನಾಯಕ ಎನಿಸಿಕೊಂಡಿದ್ದು, 250 ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದಾರೆ. 38.79 ಸರಾಸರಿಯಲ್ಲಿ 5,082 ರನ್‌ ಪೂರೈಸಿದ್ದಾರೆ. ಐಪಿಎಲ್‌ನಲ್ಲಿ 24 ಅರ್ಧಶತಕಗಳನ್ನ ಬಾರಿಸಿದ್ದಾರೆ. ಅವರು 142 ಕ್ಯಾಚ್‌ಗಳು, 42 ಸ್ಟಂಪಿಂಗ್‌ಗಳನ್ನು ಸಹ ಹೊಂದಿದ್ದಾರೆ.

    ಧೋನಿ ನಾಯಕತ್ವದಲ್ಲಿ ಗೆದ್ದ ಪ್ರಮುಖ ಟ್ರೋಫಿಗಳು:

    2007ರ ಐಸಿಸಿ ಟಿ20 ವಿಶ್ವಕಪ್‌.
    2008ರ ಸಿಬಿ ಸೀರೀಸ್‌ (ಆಸ್ಟ್ರೇಲಿಯಾ-ಶ್ರೀಲಂಕಾ ವಿರುದ್ಧ)
    2009ರ ಕಾಂಪ್ಯಾಕ್‌ ಕಪ್‌
    2010ರ ಏಷ್ಯಾ ಕಪ್‌
    2011ರ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌
    2013ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ
    2013ರಲ್ಲಿ ವೆಸ್ಟ್‌ ಇಂಡೀಸ್‌ನಲ್ಲಿ ತ್ರಿಕೋನ ಸರಣಿ
    2016ರ ಏಷ್ಯಾಕಪ್‌ ಟೂರ್ನಿ

    ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹಿ ಸಾಧನೆ:

    538 ಪಂದ್ಯಗಳು
    17,266 ರನ್‌ಗಳು
    16 ಶತಕಗಳು
    108 ಅರ್ಧಶತಕಗಳು
    359 ಸಿಕ್ಸರ್ಸ್‌
    634 ಕ್ಯಾಚಸ್‌
    195 ಸ್ಟಂಪಿಂಗ್ಸ್‌
    224 ಟೆಸ್ಟ್‌ನಲ್ಲಿ ಗರಿಷ್ಠ ಸ್ಕೋರ್‌
    183 ಒಡಿಐನಲ್ಲಿ ಗರಿಷ್ಠ ಸ್ಕೋರ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೀಂ ಇಂಡಿಯಾ ಬೌಲಿಂಗ್‌ ಯಾವಾಗ್ಲೂ ಕಳಪೆ, ನಾವ್‌ ತಲೆ ಕೆಡಿಸಿಕೊಳ್ಳಲ್ಲ – ಪಾಕ್‌ ಮಾಜಿ ಕ್ರಿಕೆಟಿಗ ವ್ಯಂಗ್ಯ

    ಟೀಂ ಇಂಡಿಯಾ ಬೌಲಿಂಗ್‌ ಯಾವಾಗ್ಲೂ ಕಳಪೆ, ನಾವ್‌ ತಲೆ ಕೆಡಿಸಿಕೊಳ್ಳಲ್ಲ – ಪಾಕ್‌ ಮಾಜಿ ಕ್ರಿಕೆಟಿಗ ವ್ಯಂಗ್ಯ

    ಇಸ್ಲಾಮಾಬಾದ್‌: ಭಾರತದ ಬೌಲಿಂಗ್‌ (Team India Bowling) ಯಾವಾಗ್ಲೂ ಕಳಪೆಯಾಗಿರುತ್ತೆ. ಟೀಂ ಇಂಡಿಯಾ ಬೌಲಿಂಗ್‌ನಲ್ಲಿ ಅಟ್ಯಾಕ್‌ ಮಾಡುತ್ತೆ ಅಂತಾ ನನಗೆ ಅನ್ನಿಸಲ್ಲ. ಹಾಗಾಗಿ ನಾವು ತಲೆ ಕೆಡಿಸಿಕೊಳ್ಳಲ್ಲ ಎಂದು ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಸಾಯಿದ್‌ ಅಜ್ಮಲ್‌ (Saeed Ajmal) ವ್ಯಂಗ್ಯವಾಡಿದ್ದಾರೆ.

    ಇದೇ ಮೊದಲಬಾರಿಗೆ ಭಾರತ ಪೂರ್ಣ ಆತಿಥ್ಯದಲ್ಲಿ ವಿಶ್ವಕಪ್‌ ಟೂರ್ನಿ (ICC WorldCup) ಆಯೋಜಿಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಅಕ್ಟೋಬರ್‌ 15ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ (Pakistan) ಸೆಣಸಲಿದೆ. ಈಗಾಗಲೇ ವಿಶ್ವಕಪ್‌ ಟೂರ್ನಿ ವೇಳಾಪಟ್ಟಿ ನಿಗದಿಯಾಗಿದ್ದು, ಭಾರತದ 5 ಪ್ರಮುಖ ನಗರಗಳಲ್ಲಿ ಪಾಕ್‌ ತಂಡ 9 ಪಂದ್ಯಗಳನ್ನಾಡಲಿದೆ. ಈ ನಡುವೆ ಟೀಂ ಇಂಡಿಯಾ ಬೌಲಿಂಗ್‌ ಪ್ರದರ್ಶನದ ಬಗ್ಗೆ ಅಜ್ಮಲ್‌ ಮಾತನಾಡಿದ್ದಾರೆ.

    ಪಾಕ್‌ನ ಪಾಡ್‌ಕಾಸ್ಟ್‌ ಸಂದರ್ಶನದಲ್ಲಿ ಮಾತನಾಡಿದ ಅಜ್ಮಲ್‌, ಉನ್ನತ ಮಟ್ಟದ ಪಂದ್ಯಗಳಲ್ಲಿ ಪಾಕಿಸ್ತಾನಿ ಬ್ಯಾಟರ್‌ಗಳಿಗೆ ಸವಾಲು ಹಾಕುವ ಬೌಲಿಂಗ್ ದಾಳಿಯನ್ನು ಭಾರತ ಹೊಂದಿದೆ ಎಂದು ನಿಮಗನ್ನಿಸುತ್ತಾ? ಎಂಬ ಪ್ರಶ್ನೆಗೆ ಹೀಗೆ ಉತ್ತರಿಸಿದ್ದಾರೆ. ಇದನ್ನೂ ಓದಿ: ಕೊಹ್ಲಿ ಮತ್ತು ಬಾಬರ್‌ ಇಬ್ಬರಲ್ಲಿ ಯಾರು ಶ್ರೇಷ್ಠ? – ಭಜ್ಜಿ ಪ್ರಶ್ನೆಗೆ ಶಾಕಿಂಗ್‌ ಉತ್ತರ ಕೊಟ್ಟ ಅಖ್ತರ್‌

    ಟೀಂ ಇಂಡಿಯಾದ ಬೌಲಿಂಗ್‌ ವಿಭಾಗ ಯಾವಾಗಲೂ ದುರ್ಬಲವಾಗಿದೆ. ಇತ್ತೀಚೆಗೆ ಮೊಹಮ್ಮದ್‌ ಸಿರಾಜ್‌, ಶಮಿ ಉತ್ತಮವಾಗಿ ಬೌಲಿಂಗ್‌ ಮಾಡುತ್ತಿದ್ದಾರೆ. ಸ್ಪಿನ್ನರ್‌ಗಳಲ್ಲಿ ರವೀಂದ್ರ ಜಡೇಜಾ ಫಾರ್ಮ್‌ನಲ್ಲಿದ್ದು ವಿಶ್ವಕಪ್‌ನಲ್ಲಿ ನಿರ್ಣಾಯಕರಾಗುತ್ತಾರೆ ಎಂದು ಭಾವಿಸುತ್ತೇನೆ. ಜಸ್ಪ್ರೀತ್‌ ಬುಮ್ರಾ ಪಾಕಿಸ್ತಾನಕ್ಕೆ ಬೆದರಿಕೆಯೊಡ್ಡಬಹುದಿತ್ತು. ಆದ್ರೀಗ ಅವರೂ ಅನ್‌ಫಿಟ್‌ ಆಗಿದ್ದಾರೆ. ಹಾಗಾಗಿ ಭಾರತದ ಬೌಲಿಂಗ್‌ ಪಾಕಿಸ್ತಾನಕ್ಕೆ ಹೆಚ್ಚು ಅಪಾಕಾರಿ ಎಂದು ಭಾವಿಸಬೇಡಿ ಎಂದಿದ್ದಾರೆ.

    ಇನ್ನೂ ವಿಶ್ವಕಪ್‌ನಲ್ಲಿ ಇಂಡೋ-ಪಾಕ್‌ ಕದನದ ಬಗ್ಗೆ ಮಾತನಾಡಿದ ಅಜ್ಮಲ್‌, ಬಾಬರ್‌ ಆಜಂ ನೇತೃತ್ವದ ಪಾಕಿಸ್ತಾನ ತಂಡ 60% ಗೆಲ್ಲುವ ಅವಕಾಶವಿದೆ. ಭಾರತದ ಬ್ಯಾಟಿಂಗ್‌ ಯಾವಾಗಲೂ ಬಲಿಷ್ಠವಾಗಿಯೇ ಇದೆ. ಆದ್ರೆ ನಮ್ಮ ತಂಡದ ಬೌಲಿಂಗ್‌ ಅಪಾಯಕಾರಿ ಆಗಿರೋದ್ರಿಂದ ಇದು ಸರಿಸಮಾನರ ಯುದ್ಧವೆಂದೇ ಭಾವಿಸಬಹುದು. ಪಾಕಿಸ್ತಾನ ಟೀಂ ಇಂಡಿಯಾವನ್ನ ಕಡಿಮೆ ರನ್‌ಗಳಿಗೆ ಕಟ್ಟಿಹಾಕಿದರೆ, ಖಂಡಿತವಾಗಿಯೂ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ವಿಶ್ವಕಪ್‌ ಟೂರ್ನಿಗೆ ಬಾರದಿದ್ರೆ ICC ಬಳಿಯಿದೆ ಮಾಸ್ಟರ್‌ ಪ್ಲ್ಯಾನ್‌ – ಇದರಿಂದ ಯಾರಿಗೆ ನಷ್ಟ?

    ಭಾರತದಲ್ಲಿ ಪಾಕ್‌ ತಂಡದ ವೇಳಾಪಟ್ಟಿ ಹೀಗಿದೆ…

    ಪಾಕಿಸ್ತಾನ vs ಕ್ವಾಲಿಫೈಯರ್ 1, ಅಕ್ಟೋಬರ್ 6 – ಹೈದರಾಬಾದ್
    ಪಾಕಿಸ್ತಾನ vs ಕ್ವಾಲಿಫೈಯರ್ 2, ಅಕ್ಟೋಬರ್ 12 – ಹೈದರಾಬಾದ್
    ಪಾಕಿಸ್ತಾನ vs ಭಾರತ, ಅಕ್ಟೋಬರ್ 15 – ಅಹಮದಾಬಾದ್
    ಪಾಕಿಸ್ತಾನ vs ಆಸ್ಟ್ರೇಲಿಯಾ, ಅಕ್ಟೋಬರ್ 20 – ಬೆಂಗಳೂರು
    ಪಾಕಿಸ್ತಾನ vs ಅಫ್ಘಾನಿಸ್ತಾನ, ಅಕ್ಟೋಬರ್ 23- ಚೆನ್ನೈ
    ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಅಕ್ಟೋಬರ್ 27- ಚೆನ್ನೈ
    ಪಾಕಿಸ್ತಾನ vs ಬಾಂಗ್ಲಾದೇಶ, ಅಕ್ಟೋಬರ್ 31 – ಕೋಲ್ಕತ್ತಾ
    ಪಾಕಿಸ್ತಾನ vs ನ್ಯೂಜಿಲೆಂಡ್, ನವೆಂಬರ್ 4 – ಬೆಂಗಳೂರು
    ಪಾಕಿಸ್ತಾನ vs ಇಂಗ್ಲೆಂಡ್, ನವೆಂಬರ್ 12- ಕೋಲ್ಕತ್ತಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • T20 Blast: ವಿಶ್ವಕಪ್‌ಗೂ ಮುನ್ನ ವಿಶ್ವದಾಖಲೆ ಬರೆದ ಅಫ್ರಿದಿ, ಭಾರತಕ್ಕೆ ಎಚ್ಚರಿಕೆ ಗಂಟೆ ಎಂದ ನೆಟ್ಟಿಗರು

    T20 Blast: ವಿಶ್ವಕಪ್‌ಗೂ ಮುನ್ನ ವಿಶ್ವದಾಖಲೆ ಬರೆದ ಅಫ್ರಿದಿ, ಭಾರತಕ್ಕೆ ಎಚ್ಚರಿಕೆ ಗಂಟೆ ಎಂದ ನೆಟ್ಟಿಗರು

    ಲಂಡನ್‌: ಪಾಕಿಸ್ತಾನ ಕ್ರಿಕೆಟ್‌ ತಂಡದ (Pakistan Cricket) ಯಾರ್ಕರ್‌ ಸ್ಪೆಷಲಿಸ್ಟ್‌ ಶಾಹೀನ್‌ ಅಫ್ರಿದಿ T20 ಬ್ಲಾಸ್ಟ್‌ (T20 Blast) ಟೂರ್ನಿಯಲ್ಲಿ ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್‌ ಪಡೆದು ವಿಶ್ವದಾಖಲೆ ನಿರ್ಮಿಸಿದ್ದಾರೆ. ದುರದೃಷ್ಟವಶಾತ್‌ ಅಫ್ರಿದಿ ಯಾರ್ಕರ್‌ ದಾಳಿಯ ಹೊರತಾಗಿಯೂ ಪಾಕ್‌ ತಂಡ 2 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದೆ.

    ಹೌದು. ಟಿ20 ಬ್ಲಾಸ್ಟ್‌ ಕ್ರಿಕೆಟ್‌ ಟೂರ್ನಿಯ ಪಂದ್ಯದಲ್ಲಿ ನಾಟಿಂಗ್ಹ್ಯಾಮ್ ಶೈರ್ (Nottinghamshire) ಪರ ಪ್ರತಿನಿಧಿಸಿದ್ದ ಎಡಗೈ ಅಫ್ರಿದಿ, ಮೊದಲ ಓವರ್‌ನಲ್ಲೇ ಅಲೆಕ್ಸ್ ಡೇವಿಡ್ಸ್(0), ಕ್ರಿಸ್ ಬೆನ್ಜಮಿನ್‌(0), ಡ್ಯಾನ್ ಮೌಸ್ಲಿ(1) ಹಾಗೂ ಎಡ್ ಬೆರ್ನಾರ್ಡ್‌(0) ಅವರ ವಿಕೆಟ್‌ಗಳನ್ನು ಪಡೆಯುವ ಮೂಲಕ ಟಿ20‌ ಕ್ರಿಕೆಟ್‌ನಲ್ಲಿ ಧೂಳೆಬ್ಬಿಸಿದ್ದಾರೆ. ಇದರೊಂದಿಗೆ ಒಂದೇ ಓವರ್‌ನಲ್ಲಿ 4 ವಿಕೆಟ್‌ ಕಿತ್ತ ಮೊದಲ ವೇಗಿ ಎಂಬ ವಿಶ್ವದಾಖಲೆಯನ್ನೂ ಬರೆದಿದ್ದಾರೆ. ಇದನ್ನೂ ಓದಿ: Byju’sಗೆ ಗುಡ್‌ಬೈ – Dream11 ತೆಕ್ಕೆಗೆ ಟೀಂ ಇಂಡಿಯಾ ಜೆರ್ಸಿ ಪ್ರಾಯೋಜಕತ್ವ

    ಬ್ಯಾಟಿಂಗ್‌ನಲ್ಲಿ ನೀರಸ ಪ್ರದರ್ಶನ ತೋರಿದರೂ ಬೌಲಿಂಗ್‌ನಲ್ಲಿ 4 ಓವರ್‌ಗಳಲ್ಲಿ 29 ರನ್‌ ನೀಡಿ 4 ವಿಕೆಟ್‌ ಕಿತ್ತರು. ಶಾಹೀನ್‌ ವಿಕೆಟ್‌ ಪಡೆದ ವೀಡಿಯೋ ತುಣುಕು ಇದೀಗ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ.

    ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ನಾಟಿಂಗ್ಹ್ಯಾಮ್ ಶೈರ್​ 20 ಓವರ್‌ಗಳಲ್ಲಿ 168ಕ್ಕೆ ಆಲೌಟ್​ ಆಯಿತು. 169 ರನ್‌ಗಳ ಗುರಿ ಬೆನ್ನಟ್ಟಿದ ಬರ್ಮಿಂಗ್‌ಹ್ಯಾಮ್‌ ಬೇರ್ಸ್‌ ತಂಡವು 19.1 ಓವರ್​ಗಳಲ್ಲೇ 8 ವಿಕೆಟ್​ಗೆ 172 ರನ್​ ಗಳಿಸಿ ಗೆಲುವು ಸಾಧಿಸಿತು. ಸೋಲು ಕಂಡ ನಾಟಿಂಗ್‌ಹ್ಯಾಮ್‌ಶೈರ್ ತಂಡವು ಕ್ವಾರ್ಟರ್ವ್‌ ಫೈನಲ್‌ ಪ್ರವೇಶಿಸುವ ಅವಕಾಶ ಕಳೆದುಕೊಂಡಿತು. ಇದನ್ನೂ ಓದಿ: ಪಾಕಿಸ್ತಾನ ವಿಶ್ವಕಪ್‌ ಟೂರ್ನಿಗೆ ಬಾರದಿದ್ರೆ ICC ಬಳಿಯಿದೆ ಮಾಸ್ಟರ್‌ ಪ್ಲ್ಯಾನ್‌ – ಇದರಿಂದ ಯಾರಿಗೆ ನಷ್ಟ?

    ಟೀಂ ಇಂಡಿಯಾಕ್ಕೆ ಎಚ್ಚರಿಕೆ ಗಂಟೆ:
    ಅ.5 ರಿಂದ ನ.19ರ ವೆರೆಗೆ ಭಾರತದಲ್ಲಿ ಆಯೋಜನೆಗೊಂಡಿರುವ ವಿಶ್ವಕಪ್‌ ಟೂರ್ನಿಗೆ (ICC World Cup) ಪಾಕಿಸ್ತಾನ ಬರುವ ನೀರಿಕ್ಷೆಯಲ್ಲಿದೆ. ನಿಗದಿತ ವೇಳಾಪಟ್ಟಿಯಂತೆ ಭಾರತದ 5 ಪ್ರಮುಖ ನಗರಗಳಲ್ಲಿ ಪಾಕಿಸ್ತಾನ 9 ಪಂದ್ಯಗಳನ್ನಾಡಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್​ ಲೀಗ್​ ಪಂದ್ಯ ಅ. 15ರಂದು ಅಹಮದಾಬಾದ್​ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನಡೆಯಲಿದ್ದು, ಈ ಪಂದ್ಯವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

    ಇದೀಗ ಶಾಹೀನ್ ಅಫ್ರಿದಿ ಬೌಲರ್​ ಕಂಡ ಕೆಲವರು ಏಕದಿನ ವಿಶ್ವಕಪ್​ನಲ್ಲಿ ಇದು ಎಚ್ಚರಿಕೆ ಗಂಟೆಯಾಗಿದೆ ಎಂದು ಬಣ್ಣಿಸಿದ್ದಾರೆ. ಏಕೆಂದರೆ 2021ರ ಟಿ20 ವಿಶ್ವಕಪ್‌ ಟೂರ್ನಿಯಲ್ಲೂ‌ ಮೊದಲ ಓವರ್‌ನಲ್ಲೇ ಕೆ.ಎಲ್‌ ರಾಹುಲ್‌ ಹಾಗೂ ರೋಹಿತ್‌ ಶರ್ಮಾ ಅವರ ವಿಕೆಟ್‌ಗಳನ್ನ ಉರುಳಿಸಿ ಟೀಂ ಇಂಡಿಯಾ ಹೀನಾಯ ಸೋಲಿಗೆ ಕಾರಣವಾಗಿದ್ದರು.

    ಭಾರತದಲ್ಲಿ ಪಾಕ್‌ ತಂಡದ ವೇಳಾಪಟ್ಟಿ ಹೀಗಿದೆ…

    ಪಾಕಿಸ್ತಾನ vs ಕ್ವಾಲಿಫೈಯರ್ 1, ಅಕ್ಟೋಬರ್ 6 – ಹೈದರಾಬಾದ್
    ಪಾಕಿಸ್ತಾನ vs ಕ್ವಾಲಿಫೈಯರ್ 2, ಅಕ್ಟೋಬರ್ 12 – ಹೈದರಾಬಾದ್
    ಪಾಕಿಸ್ತಾನ vs ಭಾರತ, ಅಕ್ಟೋಬರ್ 15 – ಅಹಮದಾಬಾದ್
    ಪಾಕಿಸ್ತಾನ vs ಆಸ್ಟ್ರೇಲಿಯಾ, ಅಕ್ಟೋಬರ್ 20 – ಬೆಂಗಳೂರು
    ಪಾಕಿಸ್ತಾನ vs ಅಫ್ಘಾನಿಸ್ತಾನ, ಅಕ್ಟೋಬರ್ 23- ಚೆನ್ನೈ
    ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಅಕ್ಟೋಬರ್ 27- ಚೆನ್ನೈ
    ಪಾಕಿಸ್ತಾನ vs ಬಾಂಗ್ಲಾದೇಶ, ಅಕ್ಟೋಬರ್ 31 – ಕೋಲ್ಕತ್ತಾ
    ಪಾಕಿಸ್ತಾನ vs ನ್ಯೂಜಿಲೆಂಡ್, ನವೆಂಬರ್ 4 – ಬೆಂಗಳೂರು
    ಪಾಕಿಸ್ತಾನ vs ಇಂಗ್ಲೆಂಡ್, ನವೆಂಬರ್ 12- ಕೋಲ್ಕತ್ತಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]