Tag: Ice

  • ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

    ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

    ಶ್ರೀನಗರ: ಭಾರೀ ಮಳೆಯಿಂದಾಗಿ ಇಂದು (ಶನಿವಾರ) ಗುಹಾ ದೇಗುಲಕ್ಕೆ ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು (Amarnath Yatra) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶುಕ್ರವಾರ ರಾತ್ರಿಯಿಂದ ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಭಾರೀ ಮಳೆ ಸುರಿದಿದೆ. ಹೀಗಾಗಿ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

    ಇದುವರೆಗೆ 1.50 ಲಕ್ಷಕ್ಕೂ ಹೆಚ್ಚು ಮಂದಿ ಭಕ್ತರು 3,800 ಮೀಟರ್ ಎತ್ತರದ ಗುಹಾಂತರ ದೇಗುಲಕ್ಕೆ ಭೇಟಿ ನೀಡಿ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗದ ದರ್ಶನವನ್ನು ಪಡೆದಿದ್ದಾರೆ. ಸುಮಾರು 4.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಕಳೆದ ವರ್ಷ ಗುಹಾ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು.

    ಆಗಸ್ಟ್ 19 ರವರೆಗೆ ಯಾತ್ರೆ ಮುಂದುವರಿಯಲಿದೆ. ಯಾತ್ರೆಯ ಮೊದಲ ವಾರದಲ್ಲಿ ದಾಖಲೆಯ 1.51 ಲಕ್ಷ ಯಾತ್ರಾರ್ಥಿಗಳು ಭೇಟಿ ನೀಡಿದ್ದರು. ಆದರೆ ಸದ್ಯ ಪವಿತ್ರ ಗುಹೆಯಲ್ಲಿನ ಮಂಜುಗಡ್ಡೆಯ ಶಿವಲಿಂಗವು ಸಂಪೂರ್ಣವಾಗಿ ಕರಗಿದ ಕಾರಣ ಈಗಷ್ಟೇ ಬಂದಿರುವ ಯಾತ್ರಿಕರು ನಿರಾಶೆಗೊಂಡಿದ್ದಾರೆ.

    ಕಳೆದ ಒಂದು ವಾರದಲ್ಲಿ ಅತಿ ಹೆಚ್ಚು ತಾಪಮಾನದಿಂದಾಗಿ ಶಿವಲಿಂಗ ಕರಗುವ ಪ್ರಕ್ರಿಯೆಯು ವೇಗಗೊಂಡಿದೆ. 2008 ರ ನಂತರ ಯಾತ್ರೆಯ ಮೊದಲ 10 ದಿನಗಳಲ್ಲಿ ಮಂಜುಗಡ್ಡೆಯ ಶಿವಲಿಂಗವು ಸಂಪೂರ್ಣವಾಗಿ ಕಣ್ಮರೆಯಾಗಿರುವುದು ಇದೇ ಮೊದಲ ಬಾರಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

  • 2025ರೊಳಗೆ ದೇಶದ ಎಲ್ಲ ರೈಲುಗಳಿಗೂ ಎಲೆಕ್ಟ್ರಿಕ್‌ ಇಂಜಿನ್ – ರೈಲ್ವೆ ಇಲಾಖೆ

    2025ರೊಳಗೆ ದೇಶದ ಎಲ್ಲ ರೈಲುಗಳಿಗೂ ಎಲೆಕ್ಟ್ರಿಕ್‌ ಇಂಜಿನ್ – ರೈಲ್ವೆ ಇಲಾಖೆ

    ನವದೆಹಲಿ: 2025ರ ಒಳಗೆ ಎಲ್ಲ ಡೀಸೆಲ್ ಹಾಗೂ ಬಯೋ ಇಂಧನ ರೈಲು ಇಂಜಿನ್‌ಗಳನ್ನು (Railway Engine) ಹಿಂಪಡೆದು ಸಂಪೂರ್ಣ ಎಲೆಕ್ಟ್ರಿಕ್‌ ಇಂಜಿನ್‌ಗಳನ್ನು (Electric Engine) ಅಳವಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

    ವಿದ್ಯುತ್ ಚಾಲಿತ ವಾಹನಗಳ (Electric Vehicles) ಮೇಲೆ ಈ ನೀತಿಯನ್ನು ಕಳೆದ ವಾರ ಜಾರಿಗೆ ತರಲಾಗಿದೆ. ಇದರೊಂದಿಗೆ ರೈಲ್ವೆಯು ಪ್ರಮುಖ ರೈಲು ನಿಲ್ದಾಣಗಳು (RailwayStations), ಕಚೇರಿ ಕಟ್ಟಡಗಳು, ಪಾರ್ಕಿಂಗ್ ಸ್ಥಳಗಳು ಇತ್ಯಾದಿ ಸ್ಥಳಗಳಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ನಿರ್ಮಿಸುವುದಾಗಿ ಹೇಳಿದೆ. ಇದನ್ನೂ ಓದಿ: ಸಿಪಿಐ(ಎಂ) ಮುಖಂಡನ ಮನೆಯಲ್ಲಿ ಬಾಂಬ್ ಪತ್ತೆ – ತಾಜ್ ಉದ್ದೀನ್ ಮಲ್ಲಿಕ್ ಅರೆಸ್ಟ್

    ಸಾಂದರ್ಭಿಕ ಚಿತ್ರ

    2023ರೊಳಗೆ ಭಾರತವನ್ನು ಸಂಪೂರ್ಣ ಎಲೆಕ್ಟ್ರಿಕ್‌ ವಾಹನಗಳ (Electric Vehicles) ದೇಶವಾಗಿ ಮಾಡಬೇಕೆಂಬ ಸರ್ಕಾರದ ಗುರಿಯ ಹಿನ್ನೆಲೆಯಲ್ಲಿ ರೈಲ್ವೆಯ ಈ ನೀತಿಗೆ ಮಹತ್ವ ಬಂದಿದೆ. ಇದನ್ನೂ ಓದಿ: ರಾಯಚೂರಿಗೆ ಬರಲಿದೆ ಏಮ್ಸ್, ಮಂತ್ರಾಲಯ ಸೇತುವೆಗೆ ಬಿಎಸ್‌ವೈ ಹೆಸರು: ಸಿಎಂ ಬೊಮ್ಮಾಯಿ

    ರೈಲ್ವೆಯಲ್ಲಿ ಸಂಪೂರ್ಣ ಎಲೆಕ್ಟ್ರಿಕ್‌ ಇಂಜಿನ್ ಅನುಷ್ಠಾನಕ್ಕೆ ಬರಲು 46 ಸಾವಿರ ಚಾರ್ಜಿಂಗ್ ಸ್ಟೇಷನ್‌ಗಳು ದೇಶಾದ್ಯಂತ ಬೇಕಾಗುತ್ತವೆ. ಸದ್ಯದ ಗುರಿ ಪ್ರಕಾರ 2023 ರೊಳಗೆ ಶೇ.20, 2024ರೊಳಗೆ ಶೇ.60 ಹಾಗೂ 2025ರ ಅಂತ್ಯದೊಳಗೆ ಶೇ.100ರಷ್ಟು ಎಲೆಕ್ಟ್ರಿಕ್‌ ಇಂಜಿನ್ ಅಳವಡಿಸುವ ಗುರಿ ಇಲಾಖೆ ಹಾಕಿಕೊಂಡಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಂಜುಗಡ್ಡೆಯಲ್ಲಿ ಗಾಂಧಿ ಪ್ರತಿಮೆ ತಯಾರಿಸಿ ವಿಶೇಷ ಗೌರವ

    ಮಂಜುಗಡ್ಡೆಯಲ್ಲಿ ಗಾಂಧಿ ಪ್ರತಿಮೆ ತಯಾರಿಸಿ ವಿಶೇಷ ಗೌರವ

    ಒಟ್ಟಾವಾ: ಮಂಜುಗಡ್ಡೆಯಲ್ಲಿ ಗಾಂಧೀಜಿ ಪ್ರತಿಮೆಯನ್ನು ಮಾಡಿ ಕೆನಡಾದ ಹೋಟೆಲ್‍ವೊಂದು ವಿಭಿನ್ನವಾಗಿ ಗೌರವವನ್ನು ಸಲ್ಲಿಸಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

    ಕೆನಡಾದ ಹೋಟೆಲ್ ಡಿ ಗ್ಲೇಸ್‍ನಲ್ಲಿ ಐಸ್ ನಿಂದ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಮಾಡಿದೆ. ಕ್ವೆಬೆಕ್ ಸಿಟಿಯಲ್ಲಿರುವ ಹೋಟೆಲ್ ಮುಂಭಾಗದಲ್ಲಿ ಗಾಂಧೀಜಿ ಪ್ರತಿಮೆ ಇಡಲಾಗಿದೆ. ಬರೋಬ್ಬರಿ 7 ಅಡಿ ಎತ್ತರವಿದೆ. ಪ್ರತಿಮೆಯ ಕೆಳಭಾಗದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಕುರಿತಾಗಿ ಬರೆಯಲಾಗಿದೆ.

    ಈ ಒಂದು ಸುಂದರವಾದ ಪ್ರತಿಮೆಯನ್ನು ಮಾರ್ಕ್ ಲೆಪೈರೆ ತಯಾರಿಸಿದ್ದಾರೆ. ಮಂಜುಗೆಡ್ಡೆ 9 ತುಂಡುಗಳನ್ನು ತೆಗೆದುಕೊಂಡು ಕೇವಲ 5 ಗಂಟೆಯಲ್ಲಿ ಪ್ರತಿಮೆಯನ್ನು ಮಾಡಲಾಗಿದೆ. ಗಾಂಧಿ ಪ್ರತಿಮೆಯ ಫೋಟೋಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಲ್ಲಿವೆ.

    ಮಂಜುಗಡ್ಡೆಯಲ್ಲಿ ಮಾಡಲಾಗಿರುವ ಗಾಂಧಿ ಪ್ರತಿಮೆಯ ಫೋಟೋಗಳನ್ನು ಟೊರೆಂಟೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.