ರಾಯ್ಪುರ: ಮಾವೋವಾದಿಗಳು ಇಟ್ಟಿದ್ದ ಸುಧಾರಿತ ಸ್ಫೊಟಕ ಸಾಧನ (IED) ಸ್ಫೋಟಗೊಂಡು ಓರ್ವ ಪೊಲೀಸ್ ಜವಾನ್ ಮೃತಪಟ್ಟಿದ್ದು, ಮೂವರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಜಿಲ್ಲಾ ಮೀಸಲು ಪಡೆ (DRJ) ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ತೆರಳಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ
* ದೇಶದ ಪ್ರಮುಖ ನಗರಗಳ ನಕ್ಷೆ, 20 ಕೆಜಿಯ ಸೂಟ್‌ಕೇಸ್ ಬಾಂಬ್
* ಕೋಡಿಂಗ್ ಬುಕ್ಸ್, ಹ್ಯಾಕಿಂಗ್ ಸಾಫ್ಟ್‌ವೇರ್, ಐಇಡಿ ಸ್ಫೋಟಕ ವಸ್ತುಗಳು ಪತ್ತೆ
ಅಮರಾವತಿ (ಕಡಪ): ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಪೊಲೀಸರು (Annamayya Police) ಭಯೋತ್ಪಾದಕ ಚಟುವಟಿಕೆಗಳ (Terror Activities) ವಿರುದ್ಧ ಕೈಗೊಂಡಿದ್ದ ಕಾರ್ಯಾಚರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಇತ್ತೀಚೆಗಷ್ಟೇ ಬಂಧಿಸಿದ ಇಬ್ಬರು ಶಂಕಿತ ಭಯೋತ್ಪಾದಕರ ಮನೆಗಳ ಮೇಲೆ ದಾಳಿ ನಡೆಸಿ ಸ್ಫೋಟಕ, ಐಇಡಿ (IEDs) ಸೇರಿದಂತೆ ಹಲವು ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ.
ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಉಮ್ಮಾ ಜೊತೆ ಸಂಪರ್ಕ ಹೊಂದಿದ್ದಕ್ಕಾಗಿ ಈಬ್ಬರು ಶಂಕಿತ ಭಯೋತ್ಪಾದಕರನ್ನ ರಾಯಚೋಟಿ ಪಟ್ಟಣದಲ್ಲಿ ಬಂಧಿಸಲಾಗಿತ್ತು. ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟ (Bengaluru Blast) ಪ್ರಕರಣದಲ್ಲಿ ಇವರ ಕೈವಾಡವಿತ್ತು ಎನ್ನಲಾಗಿದೆ. ಇದನ್ನೂ ಓದಿ: 30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಬಂಧನ
ಶೋಧದ ಸಮಯದಲ್ಲಿ ಶಂಕಿತ ಉಗ್ರ ಅಬೂಬಕರ್ ಪತ್ನಿ ಸಾಯಿರಾ ಬಾನು, ಮೊಹಮ್ಮದ್ ಅಲಿ ಪತ್ನಿ ಶೇಖ್ ಶಮೀಮ್ ದಾಳಿ ತಡೆಯಲು ಯತ್ನಿಸಿದ್ದಾರಲ್ಲದೇ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸ್ಥಳೀಯ ಮಹಿಳೆಯರನ್ನೇ ಮದ್ವೆಯಾಗಿದ್ದ ಅಬೂಬಕರ್ ಹಾಗೂ ಅಲಿ ಕಳೆದ 20 ವರ್ಷಗಳಿಂದ ನಕಲಿ ದಾಖಲೆಗಳನ್ನಿಟ್ಟುಕೊಂಡೇ ವಾಸಿಸುತ್ತಿದ್ದರು. ಸದ್ಯ ಇಬ್ಬರನ್ನು ಬಂಧಿಸಿರುವ ಪೊಲೀಸರು ಕಡಪ ಕೇಂದ್ರ ಜೈಲಿಗೆ ಕಳಿಸಿದ್ದಾರೆ. ಭಯೋತ್ಪಾದನಾ ಸಂಚಿನಲ್ಲಿ ಅವರ ಸಂಭಾವ್ಯ ಪಾತ್ರದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಈ ಕುರಿತು ಅನ್ನಮಯ್ಯ ಜಿಲ್ಲಾ ಎಸ್ಪಿ ವಿ. ವಿದ್ಯಾ ಸಾಗರ್ ನಾಯ್ಡು ಅವರೊಟ್ಟಿಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕರ್ನೂಲ್ ರೇಂಜ್ ಡಿಐಜಿ ಡಾ. ಕೋಯ ಪ್ರವೀಣ್, ಅಬೂಬಕರ್ ಸಿದ್ದಿಕ್ ಅಲಿಯಾಸ್ ಅಮಾನುಲ್ಲಾ ಮತ್ತು ಮೊಹಮ್ಮದ್ ಅಲಿ ಅಲಿಯಾಸ್ ಮನ್ಸೂರ್ ಎಂಬ ಇಬ್ಬರು ವ್ಯಕ್ತಿಗಳು ಕಳೆದ 20 ವರ್ಷಗಳಿಂದ ರಾಯಚೋಟಿಯಲ್ಲಿ ನಕಲಿ ದಾಖಲೆಗಳನ್ನ ಪಡೆದು ವಾಸಿಸುತ್ತಿದ್ದರು. ಸ್ಥಳೀಯ ಮಹಿಳೆಯರನ್ನೇ ಮದ್ವೆಯಾಗಿದ್ದ ಇವರು, ಸಣ್ಣಪುಟ್ಟ ವ್ಯವಹಾರ ಮಾಡಿಕೊಂಡಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Tamil Nadu Custodial Death | ಕೊಲೆಗಾರರು ಹೀಗೆ ದಾಳಿ ಮಾಡಲ್ಲ – ಹೈಕೋರ್ಟ್ ಛೀಮಾರಿ; ಐವರು ಪೊಲೀಸರು ಅರೆಸ್ಟ್
ಆರೋಪಿಗಳ ವಿರುದ್ಧ ರಾಯಚೋಟಿ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 132, ಸ್ಫೋಟಕ ಕಾಯ್ದೆ (1908 & 1884), ಯುಎಪಿಎ ಕಾಯ್ದೆ (ಸೆಕ್ಷನ್ 13,15,18), ಶಸ್ತ್ರಾಸ್ತ್ರ ಕಾಯ್ದೆ ಮತ್ತು ಯುಎಪಿಎ ಮತ್ತು ಸ್ಫೋಟಕ ಕಾಯ್ದೆಗಳ ಅಡಿಯಲ್ಲಿ ಹೆಚ್ಚುವರಿ ಆರೋಪಗಳಿಗಾಗಿ 2 ಪ್ರಕರಣ ದಾಖಲಿಸಲಾಗಿದೆ. ಇನ್ನೂ ದಾಳಿ ವೇಳೆ ಪತ್ತೆಯಾದ ಅಮೋನಿಯಂ ನೈಟ್ರೇಟ್ (ಸುಧಾರಿತ ಸ್ಫೋಟಕ ಸಾಧನಕ್ಕೆ ಬಳಸುವ ಪೌಡರ್), ಸ್ಲರಿ ಸ್ಫೋಟಕಗಳು (ನೈಟ್ರೋಗ್ಲಿಸರಿನ್ ಅಥವಾ ಟಿಎನ್‌ಟಿ ಎಂದು ಶಂಕಿಸಲಾದ ಲಿಕ್ವಿಡ್), ಪಿಇಟಿಎನ್ ತುಂಬಿದ 20 ಕೆಜಿ ತೂಕದ ಸೂಟ್‌ಕೇಸ್ ಬಾಂಬ್, ಮತ್ತೊಂದು ಸೂಟ್‌ಕೇಸ್ ಮತ್ತು ಐಇಡಿಗಳೆಂದು ಶಂಕಿಸಲಾದ ಪೆಟ್ಟಿಗೆ, ಪೊಟ್ಯಾಸಿಯಮ್ ನೈಟ್ರೇಟ್, ಕ್ಲೋರೇಟ್, ಪರ್ಮಾಂಗನೇಟ್, ಗನ್‌ಪೌಡರ್, ಕಠಾರಿಗಳು, ಕ್ಲೀವರ್‌ಗಳು ಮತ್ತು ಇತರ ಹರಿತವಾದ ಆಯುಧಗಳು ಹಾಗೂ ದೊಡ್ಡ ಪ್ರಮಾಣದಲ್ಲಿ ವಿನಾಶ ಉಂಟುಮಾಡುವ ಸಾಮರ್ಥ್ಯವಿರುವ ಅಪಾಯಕಾರಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಲ್ಲದೇ ಟೈಮರ್‌ಗಳು, ಪುಲ್ ಸ್ವಿಚ್‌ಗಳು, ಪ್ರೆಶರ್ ಸ್ವಿಚ್‌ಗಳು, ಸ್ಪೀಡ್ ಕಂಟ್ರೋಲರ್, ಗ್ಯಾಸ್ ಟ್ಯೂಬ್ ಅರೆಸ್ಟರ್, ಬಾಲ್ ಬೇರಿಂಗ್, ನಟ್‌ಗಳು ಮತ್ತು ಬೋಲ್ಟ್‌ಗಳು, ಬೈನಾಕ್ಯುಲರ್‌ಗಳು, ವಾಕಿ-ಟಾಕಿಗಳು, ರೇಡಿಯೋ ಉಪಕರಣಗಳು, ಮೊಬೈಲ್ ಫೋನ್‌ಗಳು ಮತ್ತು ಚೆಕ್‌ಬುಕ್‌ಗಳು, ಡಿಜಿಟಲ್ ಸಾಧನಗಳು ಹಾಗೂ ಭಾರತದ ಪ್ರಮುಖ ನಗರಗಳ ನಕ್ಷೆಗಳು, ಟೈಮಿಂಗ್ ಸರ್ಕ್ಯೂಟ್ ಕೈಪಿಡಿಗಳು, ಕೋಡಿಂಗ್ ಬುಕ್ಸ್, ಹ್ಯಾಕಿಂಗ್ ಸಾಫ್ಟ್‌ವೇರ್, ಆಸ್ತಿ ಮತ್ತು ಪ್ರಯಾಣ ದಾಖಲೆಗಳು ಹಾಗೂ ಪ್ರಚೋಧನಾಕಾರಿ ಭಾಷಣಗಳನ್ನು ಒಳಗೊಂಡ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶ | ಭಾರೀ ಮಳೆಗೆ 37 ಮಂದಿ ಸಾವು – 400 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹಾನಿ
ಆರೋಪಿಗಳಿಬ್ಬರೂ ಕ್ರಿಮಿನಲ್ ಹಿನ್ನೆಲೆ ಉಳ್ಳವರು
ಇನ್ನೂ ಅಬೂಬಕರ್ ಸಿದ್ದಿಕ್ ಹಾಗೂ ಅಲಿ ಈಗಾಗಲೇ ಕ್ರಿಮಿನಲ್ ಹಿನ್ನೆಲೆಯುಳ್ಳ ಆರೋಪಿಗಳೆಂದು ತಿಳಿದುಬಂದಿದೆ. ತಮಿಳುನಾಡು, ಕರ್ನಾಟಕ ರಾಜ್ಯಗಳಲ್ಲಿ ನಡೆದ ಹಲವು ಪ್ರಕರಣಗಳಲ್ಲಿ ಸಿದ್ದಿಕ್ ಆರೋಪಿಯಾಗಿದ್ದಾನೆ. 1999ರ ಬೆಂಗಳೂರು ಸ್ಫೋಟ, 2013ರ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ, 2011ರಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ ನೇತೃತ್ವದ ರಥಯಾತ್ರೆಯ ಮೇಲೆ ಮಧುರೈಯಲ್ಲಿ ನಡೆದ ಪೈಪ್ ಬಾಂಬ್ ದಾಳಿ, 1991ರ ಚೆನ್ನೈ ಹಿಂದೂ ಮುನ್ನಣಿ ಕಾರ್ಯಾಲಯದ ಮೇಲೆ ನಡೆದ ದಾಳಿಯಲ್ಲೂ ಈತ ಆರೋಪಿಯಾಗಿದ್ದ.
ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ (Pahalgam Terror Attack) ಘಟನೆಗೆ ಸಂಬಂಧಿಸಿದಂತೆ ಐಇಡಿ ಸ್ಫೋಟಿಸಿ ಮತ್ತೊಬ್ಬ ಉಗ್ರನ ಮನೆಯನ್ನು ಭಾರತೀಯ ಸೇನೆ ಉಡೀಸ್ ಮಾಡಿದೆ.
ಪಹಲ್ಗಾಮ್ ದಾಳಿಯ ನಂತರ ಪುಲ್ವಾಮಾ, ಶೋಪಿಯಾನ್, ಅನಂತ್‌ನಾಗ್, ಕುಲ್ಗಾಮ್ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಸ್ಫೋಟಕಗಳನ್ನು ಬಳಸಿ ಆರು ಭಯೋತ್ಪಾದಕರ ಮನೆಗಳನ್ನು ಕೆಡವಲಾಗಿದೆ. ಈ ಎಲ್ಲಾ ಭಯೋತ್ಪಾದಕರು ಲಷ್ಕರ್-ಎ-ತೊಯ್ಬಾಗೆ ಸೇರಿದವರಾಗಿದ್ದು, ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಸಕ್ರಿಯರಾಗಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ತಡೆಯಲು ಸಾಧ್ಯನಾ? – ಜಲತಜ್ಞ ರಾಜಾರಾವ್ ಹೇಳಿದ್ದೇನು?
ಇಸ್ಲಾಮಾಬಾದ್: ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯ ಮಾರುಕಟ್ಟೆಯಲ್ಲಿ ಮೋಟಾರ್‌ಬೈಕಿಗೆ ಹಾಕಲಾಗಿದ್ದ ಐಇಡಿ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ.
ನಾಲ್ ಪೊಲೀಸ್ ಠಾಣೆ ಅಧಿಕಾರಿ (SHO) ಬಹಾವಲ್ ಖಾನ್ ಪಿಂದ್ರಾನಿ ಅವರು ಸಾವು-ನೋವುಗಳ ಬಗ್ಗೆ ದೃಢಪಡಿಸಿದ್ದಾರೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.
ಸ್ಫೋಟಕವನ್ನು ಮೋಟಾರ್‌ಸೈಕಲ್‌ಗೆ ಅಳವಡಿಸಲಾಗಿತ್ತು. ಕಾರಿನ ಪಕ್ಕದಲ್ಲಿ ಬೈಕ್ ನಿಲ್ಲಿಸಿದ ನಂತರ ರಿಮೋಟ್ ಮೂಲಕ ಸ್ಫೋಟಿಸಲಾಗಿದೆ ಎಂದು ವರದಿಯಾಗಿದೆ. ಬಾಂಬ್ ನಿಷ್ಕ್ರಿಯ ದಳ ಸ್ಥಳದಲ್ಲಿದ್ದು, ಪರಿಶೀಲನೆ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖುಜ್ದಾರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜಾವೇದ್ ಜೆಹ್ರಿ, ಮಾರುಕಟ್ಟೆಯ ಸುತ್ತಮುತ್ತಲಿನ ಕಾಲೇಜು ಬಳಿ ಸ್ಫೋಟ ಸಂಭವಿಸಿದೆ. ವಾಹನಗಳು ಕೂಡ ಸುಟ್ಟುಹೋಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಖುಜ್ದಾರ್ ಬೋಧನಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭಯೋತ್ಪಾದಕರು ನಡೆಸಿದ ಐಇಡಿ (IED) ಸ್ಫೋಟದಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.
X ನಲ್ಲಿ ಪೋಸ್ಟ್ ಮಾಡಿರುವ ಸೇನೆ, ವೈಟ್ ನೈಟ್ ಕಾರ್ಪ್ಸ್ ಸಿಬ್ಬಂದಿಯ ಸಾವನ್ನು ದೃಢಪಡಿಸಿದೆ. ಪೋಸ್ಟ್‌ನಲ್ಲಿ, ಇಬ್ಬರು ಧೀರ ಸೈನಿಕರ ತ್ಯಾಗಕ್ಕೆ ವೈಟ್ ನೈಟ್ ಕಾರ್ಪ್ಸ್ ವಂದನೆ ಸಲ್ಲಿಸುತ್ತದೆ ಎಂದು ಸೇನೆ ತಿಳಿಸಿದೆ.
ಸೈನಿಕರು ನಿಯಂತ್ರಣ ರೇಖೆಯಲ್ಲಿ (LoC) ಗಸ್ತು ತಿರುಗುತ್ತಿದ್ದ ವೇಳೆ IED ದಾಳಿ ನಡೆದಿದೆ. ದಾಳಿ ನಡೆದ ಸ್ಥಳದಲ್ಲಿ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಸೇನೆ ತಿಳಿಸಿದೆ.
ರಾಯ್ಪುರ: ನಕ್ಸಲರು ಅಡಗಿಸಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ಇಬ್ಬರು ಭದ್ರತಾ ಪಡೆ (Security Personnel) ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದಲ್ಲಿ (Chhattisgarh) ನಡೆದಿದೆ.
ಬೆಂಗಳೂರು: ಅಸ್ಸಾಂ ಎನ್‌ಐಎ ಅಧಿಕಾರಿಗಳಿಂದ ಬೆಂಗಳೂರು ಗ್ರಾಮಾಂತರದ ಜಿಗಣಿಯಲ್ಲಿ ಬಂಧಿತನಾಗಿದ್ದ ಉಲ್ಫಾ ಉಗ್ರನಿಂದ ಸ್ಫೋಟಕ ರಹಸ್ಯವೊಂದು ಬಯಲಾಗಿದೆ. ಶಂಕಿತ ಉಗ್ರನ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿರುವ ಎನ್‌ಐಎ (NIA) ಅಧಿಕಾರಿಗಳು ಮಂಗಳವಾರ ಅಸ್ಸಾಂನ (Assam) ಉತ್ತರ ಲಖೀಂಪುರದಲ್ಲಿ ಜೀವಂತ ಐಇಡಿಗಳನ್ನ (ಸುಧಾರಿತ ಸ್ಫೋಟಕ ಸಾಧನ) ವಶಕ್ಕೆ ಪಡೆದಿದ್ದಾರೆ.
ಎನ್‌ಐಎ ಅಧಿಕಾರಿಗಳ ವಿಚಾರಣೆ ವೇಳೆ ಶಂಕಿತ (Suspected Terrorist) ಉಗ್ರ ಗಿರಿಸ್ ಬೋರಾ ಅಲಿಯಾಸ್ ಗೌತಮ್, ಅಸ್ಸಾಂನಲ್ಲಿ ಐಇಡಿ ಇಟ್ಟ ಸ್ಫೋಟಕ ವಿಚಾರ ಬಾಯ್ಬಿಟ್ಟಿದ್ದಾನೆ. ಅಲ್ಲದೇ ಉಲ್ಫಾ(I) ಸಂಘಟನೆಯ ನಾಯಕರು ಹೇಳಿದಂತೆ ಐಇಡಿಗಳನ್ನ ಇಟ್ಟಿದ್ದೆ. ಆಗಸ್ಟ್ 15ರಂದು ಸ್ಫೋಟಿಸಲು ಸಂಜು ರೂಪಿಸಲಾಗಿತ್ತು ಎಂದೂ ಸಹ ಒಪ್ಪಿಕೊಂಡಿದ್ದಾನೆ. ಶಂಕಿತ ಉಗ್ರನ ಮಾಹಿತಿ ಮೇರೆಗೆ ತನಿಖೆ ನಡೆಸಿದ ಎನ್‌ಐಎ ಅಧಿಕಾರಿಗಳು ಲಖೀಂಪುರ ಜಿಲ್ಲೆಯಲ್ಲಿ ಇಟ್ಟಿದ್ದ ಕೆಲವು ಜೀವಂತ ಐಇಡಿಗಳನ್ನ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ತನಿಖೆಯನ್ನೂ ಮುಂದುವರಿಸಿದ್ದಾರೆ. ಇದನ್ನೂ ಓದಿ: ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು: ಸುಪ್ರೀಂ
ನಾಲ್ವರು ಪಾಕ್ ಪ್ರಜೆಗಳು ಅರೆಸ್ಟ್; ತನಿಖೆ ತೀವ್ರ
ಪಾಕಿಸ್ತಾನಿ ನ್ಯಾಷನಲಾಟಿ ಗುಮಾನಿ ಮೇಲೆ ನಾಲ್ವರು ಪಾಕ್ ಪ್ರಜೆಗಳು ಅರೆಸ್ಟ್ ಪ್ರಕರಣದ ತನಿಖೆ ದಿನ ಕಳೆದಂತೆ ತೀವ್ರಗೊಳ್ಳುತ್ತಿದೆ. IB, NIA ಮತ್ತು ಆನೇಕಲ್ ಉಪವಿಭಾಗದ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್ ಹಿತೇಂದ್ರ ಭೇಟಿ ನೀಡಿ ತನಿಖೆ ಬಗ್ಗೆ ಚರ್ಚೆ ನಡೆಸಿದ್ದು, ಒಂದಷ್ಟು ಸಲಹೆ ಸೂಚನೆ ನೀಡಿದೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‌ರ ವಿರುದ್ಧ ಅವಹೇಳನಕಾರಿ ಹೇಳಿಕೆ – ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ 67 FIR
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಜಿಗಣಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ರಶೀದ್ ಆಲಿ ಸಿದ್ಧಕಿ ಕುಟುಂಬದ ತನಿಖೆ ಮುಂದುವರಿದಿದೆ. IB, NIA ಮತ್ತು ಆನೇಕಲ್ ಉಪವಿಭಾಗದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಹಿನ್ನೆಲೆ ಭಾರತಕ್ಕೆ ಅಕ್ರಮವಾಗಿ ಎಂಟ್ರಿ ಕೊಟ್ಟ ಉದ್ದೇಶ ಮತ್ತು ಭಾಗ ದಾಖಲೆಗಳ ಸೃಷ್ಟಿ ಬಗ್ಗೆ ತನಿಖೆಯನ್ನು ಕೇಂದ್ರಿಕರಿಸಲಾಗಿದೆ. ಆರೋಪಿಗಳು ಮೆಹದಿ ಫೌಂಡೇಷನ್ ನ ಪರ್ವೇಜ್ ಭಾರತಕ್ಕೆ ಬರುವಂತೆ ಹೇಳಿ ದಾಖಲೆಗಳು ಸೇರಿದಂತೆ ಅಗತ್ಯ ಸೌಲಭ್ಯ ವ್ಯವಸ್ಥೆ ಕಲ್ಲಿಸಿದನು. ಯೂನಸ್ ಅಲ್ಗೋರ್ ಧರ್ಮ ಗುರುಗಳ ಪ್ರವಚನ ಪ್ರಚಾರಕ್ಕೆ ಹಣ ನೀಡುತ್ತಿದ್ದರು. ಜೀವನಕ್ಕಾಗಿ ಬಿರಿಯಾನಿ ಹೊಟೇಲ್ ವ್ಯವಹಾರ ಮಾಡುತ್ತಿದ್ದೆವು ಎನ್ನುತ್ತಿದ್ದಾರೆ. ಆದ್ರೆ ಆರೋಪಿಗಳ ಹೇಳಿಕೆ ನಂಬಲು ಸಾಧ್ಯವಿಲ್ಲ ಎಂಬ ವಿಚಾರಗಳು ಪ್ರಾಥಮಿಕ ತನಿಖೆಯಲ್ಲಿ ಲಭ್ಯವಾಗಿದೆ. ಇದನ್ನೂ ಓದಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ದರ ಏರಿಕೆ ಬಿಸಿ – ಇಂದಿನಿಂದಲೇ ಹೊಸ ದರ ಅನ್ವಯ
ಬಂಧಿತ ಪಾಕ್ ಪ್ರಜೆಗಳಾದ ರಶೀದ್ ಅಲಿ ಸಿದ್ಧಕಿ ಮತ್ತು ಆತನ ಪತ್ನಿ ಆಯೇಷಾ ಹನೀಫ್‌ಳನ್ನು IB ಮತ್ತು NIA ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಬಾಂಗ್ಲಾದೇಶ ದೇಶದ ಗಲಭೆಯಲ್ಲಿ ಜೈಲಿನಿಂದ ಪರಾರಿಯಾದ ಖೈದಿಗಳ ಸಂಪರ್ಕ. ಪಾಕಿಸ್ತಾನಿ ಉಗ್ರ ಸಂಘಟನೆಗಳ ಲಿಂಕ್ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಆರೋಪಿಗಳ ವಾಸವಿದ್ದ ಮನೆಯಲ್ಲಿ ಮೊಬೈಲ್, ಲ್ಯಾಪ್‌ಟಾಪ್, ಕೆಲ ಎಲೆಕ್ಟ್ರಾನಿಕ್ ವಸ್ತುಗಳು ದೊರೆತ್ತಿದ್ದು, ಅವುಗಳನ್ನು FSLಗೆ ರವಾನಿಸಲಾಗಿದೆ. ಧರ್ಮ ಪ್ರಚಾರದ ಜೊತೆ ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗುವ ಉದ್ದೇಶದ ಬಗ್ಗೆ ಯಾವುದೇ ಪುರಾವೆ ಇಲ್ಲಿಯವರೆಗೆ ಸಿಕ್ಕಿಲ್ಲ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಬಂಧಿತ ಮೊಹಮ್ಮದ್ ಹನೀಫ್ ಮಗಳಾದ ಫಾತಿಮಾ ಪತಿ ಅಲ್ತಾಫ್ ದಾವಣಗೆರೆ ಮೂಲದವನಾಗಿದ್ದು, ಚೆನ್ನೈನಲ್ಲಿ ಬಂಧಿಸಲಾಗಿದೆ. ಚೆನ್ನೈ NIA ಅಧಿಕಾರಿಗಳ ಜೊತೆಯು ಸಂಪರ್ಕದಲ್ಲಿದ್ದು, ತನಿಖೆ ಇನ್ನೂ ಪ್ರಗತಿಯಲ್ಲಿದೆ ಎಂದು ಎಡಿಜಿಪಿ ಅರ್. ಹಿತೇಂದ್ರ ತಿಳಿಸಿದ್ದಾರೆ.
ಪಾಕ್ ಪ್ರಜೆಗಳ ಬಂಧನದ ಪ್ರಕರಣದ ಜಾಡು ಮುಂಬೈ ಮತ್ತು ದೆಹಲಿವರೆಗೆ ವ್ಯಾಪಿಸಿದ್ದು, ಬಂಧಿತರ ಜೊತೆ ನೂರಕ್ಕೂ ಅಧಿಕ ಮಂದಿ ನಿರಂತರ ಸಂಪರ್ಕದಲ್ಲಿರುವುದು ತನಿಖೆ ವೇಳೆ ಪತ್ತೆಯಾಗಿದ್ದು, ಅವರೆಲ್ಲರೂ ಪಾಕಿಸ್ತಾನ ಮೂಲದವರ ಎಂಬುದು ಪೊಲೀಸರ ತನಿಖೆಯಿಂದ ದೃಢವಾಗಬೇಕಿದೆ.
ರಾಯ್ಪುರ: ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲೀಯರು ನಡೆಸಿದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಿಮಾರ್ಕಾ ಅರಣ್ಯದಲ್ಲಿ ಕಳೆದ ರಾತ್ರಿ ಐಇಡಿ ಸ್ಫೋಟ ಸಂಭವಿಸಿದೆ. ಭದ್ರತಾ ಪಡೆ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಪೈಪ್ ಬಾಂಬ್ ಸ್ಫೋಟಗೊಂಡಿದೆ.
ಗಾಯಗೊಂಡ ಯೋಧರು ಪುರುಷೋತ್ತಮ್ ನಾಗ್, ಕೋಮಲ್ ಯಾದವ್, ಸಿಯಾರಾಮ್ ಸೋರಿ ಮತ್ತು ಸಂಜಯ್ ಕುಮಾರ್ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತಮ ವೈದ್ಯಕೀಯ ಆರೈಕೆಗಾಗಿ ಅವರನ್ನು ರಾಯ್‌ಪುರಕ್ಕೆ ವಿಮಾನದಲ್ಲಿ ಸಾಗಿಸಲು ಸಿದ್ಧತೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಎನ್‌ಕೌಂಟರ್‌ಗೆ 12 ನಕ್ಸಲರು ಬಲಿ
ರಾಂಚಿ: ಜಾರ್ಖಂಡ್‌ನ (Jharkhand) ಸಿಂಗ್‌ಭೂಮ್ (Singhbhum) ಜಿಲ್ಲೆಯಲ್ಲಿ ಮಾವೋವಾದಿಗಳು (Maoists) ನೆಲದಲ್ಲಿ ಹುದುಗಿಸಿಟ್ಟ 5 ಶಕ್ತಿಶಾಲಿ ಸ್ಫೋಟಕ ಸಾಧನಗಳನ್ನು (IED) ಭದ್ರತಾಪಡೆಗಳು (Security Force) ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಿವೆ.
ಜಿಲ್ಲೆಯಲ್ಲಿ ಸಿಪಿಐ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿ ಸ್ಫೋಟಕಗಳನ್ನು ಇರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ತುಂಬಹಕ ಗ್ರಾಮದ ಬಳಿಯ ಅರಣ್ಯದಿಂದ 20 ಕೆಜಿ ಮತ್ತು 12 ಕೆಜಿ ಸೇರಿದಂತೆ 4 ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಚೋಟಾ ಕುಯಿರಾ ಮತ್ತು ಮರಡಿರಿ ಗ್ರಾಮಗಳ ನಡುವೆ ಅರಣ್ಯ ಪ್ರದೇಶದಲ್ಲಿ ಹುದುಗಿಸಿಟ್ಟಿದ್ದ 5 ಕೆಜಿ ಐಇಡಿಯನ್ನು ಬಾಂಬ್ ನಿಷ್ಕ್ರಿಯ ದಳ ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಿದೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಆಂಟಿ ಮನೆಗೆ ತಲುಪಿದ ಬಳಿಕ ತಂದೆಗೆ ಕರೆ- ಸಾಹಿಲ್ ಸಿಕ್ಕಿಬಿದ್ದಿದ್ದು ಹೇಗೆ?
ಮಿಸಿರ್ ಬೆಸ್ರಾ ಸೇರಿದಂತೆ ಉನ್ನತ ಮಾವೋವಾದಿ ನಾಯಕರು ಈ ಜಾಗದಲ್ಲಿ ಇದ್ದಾರೆ ಎಂಬ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸರು ಮಾಹಿತಿ ಪಡೆದು ಸಿಆರ್‌ಪಿಎಫ್, ಕೋಬ್ರಾ ಮತ್ತು ಜಾರ್ಖಂಡ್ ಜಾಗ್ವಾರ್ ಜೊತೆಗೆ ಜಿಲ್ಲಾ ಬೃಹತ್ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಇದನ್ನೂ ಓದಿ: ಸೇತುವೆ ಮೇಲಿನಿಂದ ಉರುಳಿ ಕಂದಕಕ್ಕೆ ಬಿದ್ದ ಬಸ್ – 10 ಮಂದಿ ಸಾವು, 55 ಮಂದಿಗೆ ಗಾಯ
ಶ್ರೀನಗರ: ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ (Lashkar-e-Taiba) ಇಬ್ಬರು ಸಹಚರರನ್ನು ಭದ್ರತಾ ಪಡೆಗಳು (Indian Army) ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಬಂಧಿಸಿದೆ.
ಓರ್ವ ಉಗ್ರನಿಂದ 1 ಪಿಸ್ತೂಲ್, 1 ಪಿಸ್ತೂಲ್ ಮ್ಯಾಗಜೀನ್, 4 ಪಿಸ್ತೂಲ್ ರೌಂಡ್ಸ್, 1 ರಿವಾಲ್ವಾರ್ ಸೈಲೆನ್ಸರ್, 1 ಐಇಡಿ (IED), 1 ರಿಮೋಟ್ ಕಂಟ್ರೋಲ್, 2 ಬ್ಯಾಟರಿಗಳು, ಎಕೆ 47 ರೈಫಲ್‍ನ 1 ಖಾಲಿ ಮ್ಯಾಗಜೀನ್ ಹಾಗೂ ಇನ್ನಿತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೋರ್ವನಿಂದ 1 ಎಕೆ ಸಿರೀಸ್ ರೈಫಲ್, 1 ಮ್ಯಾಗಜೀನ್ ಮತ್ತು 10 ಸುತ್ತಿನ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏ. 20ರಂದು ಕಾಶ್ಮೀರದ ಪೂಂಚ್ ಸೆಕ್ಟರ್‍ನಲ್ಲಿ ಸೇನಾ ವಾಹಾನದ ಮೇಲೆ ಉಗ್ರರು ದಾಳಿ ನಡೆಸಿ ಐವರು ಯೋಧರನ್ನು ಹತ್ಯೆಗೈದಿದ್ದರು. ಈ ವೇಳೆ ಭದ್ರತಾ ಪಡೆ, ಉಗ್ರರಿಗೆ ಸ್ಥಳೀಯರು ಸಹಕಾರ ನೀಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಸೇನೆ ಕಾರ್ಯಚರಣೆ ಆರಂಭಿಸಿತ್ತು. ಇದನ್ನೂ ಓದಿ: ಉಗ್ರರ ಜೊತೆ ಸ್ಥಳೀಯರ ಶಾಮೀಲು – ಜಮ್ಮು ಕಾಶ್ಮೀರದಲ್ಲಿ 15 ಕಡೆ ಎನ್‍ಐಎ ಶೋಧ