Tag: IED attack

  • ಛತ್ತೀಸ್‌ಗಢ| ಮಾವೋವಾದಿಗಳು ಅಳವಡಿಸಿದ್ದ ಐಇಡಿ ಸ್ಫೋಟ – ಇಬ್ಬರು ಯೋಧರು ಹುತಾತ್ಮ

    ಛತ್ತೀಸ್‌ಗಢ| ಮಾವೋವಾದಿಗಳು ಅಳವಡಿಸಿದ್ದ ಐಇಡಿ ಸ್ಫೋಟ – ಇಬ್ಬರು ಯೋಧರು ಹುತಾತ್ಮ

    – ಇಬ್ಬರು ಪೊಲೀಸರಿಗೆ ಗಾಯ

    ಛತ್ತೀಸ್‌ಗಢ: ಮಾವೋವಾದಿಗಳು ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡ ಪರಿಣಾಮ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್‌ನ (ITBP) ಇಬ್ಬರು ಯೋಧರು (Soldiers) ಹುತಾತ್ಮರಾಗಿದ್ದು, ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡ ಘಟನೆ ಛತ್ತೀಸ್‌ಗಢದಲ್ಲಿ (Chhattisgarh) ನಡೆದಿದೆ.

    ಶನಿವಾರ ಮಧ್ಯಾಹ್ನದ ಸುಮಾರಿಗೆ, ಐಟಿಬಿಪಿ, ಗಡಿ ಭದ್ರತಾ ಪಡೆ (BSF) ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ ತಂಡಗಳು ಧುರ್ಬೇಡದಲ್ಲಿ ಕಾರ್ಯಾಚರಣೆ ನಡೆಸಿ ನಾರಾಯಣಪುರಕ್ಕೆ ಹಿಂತಿರುಗುತ್ತಿದ್ದಾಗ ಅಬುಜ್‌ಮಾದ್ ಪ್ರದೇಶದ ಕೊಡ್ಲಿಯಾರ್ ಗ್ರಾಮದ ಬಳಿ ಮಾವೋವಾದಿಗಳು ಅಳವಡಿಸಿದ್ದ ಐಇಡಿ ಸ್ಫೋಟಗೊಂಡಿದೆ. ಇದನ್ನೂ ಓದಿ: ಬಿಜೆಪಿ ಟಿಕೆಟ್‌ ಹೆಸರಲ್ಲಿ ವಂಚನೆ – ಜೋಶಿ ಸಹೋದರ ಗೋಪಾಲ್‌ ಜೋಶಿ ಅರೆಸ್ಟ್‌

    ಐಇಡಿ ಸ್ಫೋಟಗೊಂಡ ಪರಿಣಾಮ ಮಹಾರಾಷ್ಟ್ರದ ಸತಾರಾ ಮೂಲದ ಅಮರ್ ಪನ್ವಾರ್ ಮತ್ತು ಆಂಧ್ರಪ್ರದೇಶದ ಕಡಪಾ ಮೂಲದ ಕೆ ರಾಜೇಶ್ ಎಂಬ ಇಬ್ಬರು ಐಟಿಬಿಪಿ ಯೋಧರು ಮೃತಪಟ್ಟಿದ್ದಾರೆ. ಪನ್ವಾರ್ ಮತ್ತು ರಾಜೇಶ್ ಇಬ್ಬರೂ 36 ವರ್ಷ ವಯಸ್ಸಿನವರಾಗಿದ್ದು, ಐಟಿಬಿಪಿಯ 53ನೇ ಬೆಟಾಲಿಯನ್‌ನ ಭಾಗವಾಗಿದ್ದರು. ಇದನ್ನೂ ಓದಿ: ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ: ಬಸವರಾಜ ಬೊಮ್ಮಾಯಿ

    ಘಟನೆಯಲ್ಲಿ ಗಂಭೀರ ಗಾಯಗೊಂಡ ಇಬ್ಬರು ಪೊಲೀಸ್ ಸಿಬ್ಬಂದಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಈ ಆಸ್ತಿ ಜಮೀರ್ ಅಹ್ಮದ್ ಅಪ್ಪಂದಾ?: ಯತ್ನಾಳ್ ಕಿಡಿ

  • ದಾಂತೇವಾಡ ನಕ್ಸಲ್ ದಾಳಿ- ಮೃತ ಯೋಧನ ಶವಕ್ಕೆ ಹೆಗಲು ಕೊಟ್ಟ ಭೂಪೇಶ್ ಬಘೇಲ್

    ದಾಂತೇವಾಡ ನಕ್ಸಲ್ ದಾಳಿ- ಮೃತ ಯೋಧನ ಶವಕ್ಕೆ ಹೆಗಲು ಕೊಟ್ಟ ಭೂಪೇಶ್ ಬಘೇಲ್

    ರೈಪುರ್: ದಾಂತೇವಾಡದ (Dantewada) ಐಇಡಿ ದಾಳಿಯಲ್ಲಿ  (IED attack) ಪ್ರಾಣ ಕಳೆದುಕೊಂಡ ಜಿಲ್ಲಾ ಮೀಸಲು ಪಡೆ ಸಿಬ್ಬಂದಿಯ ಪಾರ್ಥೀವ ಶರೀರವನ್ನು ಸಾಗಿಸುವಾಗ ಛತ್ತೀಸ್‍ಗಢ ಸಿಎಂ ಭೂಪೇಶ್ ಬಘೇಲ್ (Bhupesh Baghel) ಹೆಗಲು ನೀಡಿದ್ದಾರೆ.

    ಘಟನೆಯಲ್ಲಿ ಹುತಾತ್ಮರಾದ ಯೋಧನ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಿಎಂ ಭೂಪೇಶ್ ಬಘೇಲ್ ತೆರಳಿದ್ದರು. ಈ ವೇಳೆ ಯೋಧನ ಪಾರ್ಥಿವ ಶರಿರವನ್ನು ಸಾಗಿಸಲು ತಮ್ಮ ಹೆಗಲು ನೀಡಿ ಸಹಕರಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾಳಿಯ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಗುಂಡಿನ ದಾಳಿ ನಡೆದಿದ್ದು ಓರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೋರ್ವ ನಕ್ಸಲ್ ಸದಸ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾನೆ ಎಂದು ಅವರು ತಿಳಿಸಿದ್ದಾರೆ.

    ದುಃಖತಪ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ ಅವರು ಸೈನಿಕರ ತ್ಯಾಗ ವ್ಯರ್ಥವಾಗುವುದಿಲ್ಲ. ನಕ್ಸಲ್ ಬೆದರಿಕೆಯನ್ನು ಎದುರಿಸಲು ಸೇನೆ ಸದೃಢವಾಗಿದೆ. ಈ ಘಟನೆಯು ಸರ್ಕಾರ ಮತ್ತು ಸೈನಿಕರ ನೈತಿಕ ಸ್ಥೈರ್ಯವನ್ನು ಕೆಡಿಸುವುದಿಲ್ಲ. ಪ್ರತಿಯಾಗಿ ಹೋರಾಡಲು ಸೇನೆ ಸಜ್ಜಾಗಿದೆ ಎಂದಿದ್ದಾರೆ.

    ಬುಧವಾರ ದಾಂತೇವಾಡದಲ್ಲಿ ನಡೆದ ಐಇಡಿ ದಾಳಿಯಲ್ಲಿ 10 ಡಿಆರ್‍ಜಿ ಸಿಬ್ಬಂದಿ ಮತ್ತು ವಾಹನದ ಚಾಲಕನಾಗಿದ್ದ ಒಬ್ಬ ನಾಗರಿಕ ಮೃತಪಟ್ಟಿದ್ದರು.

    ದಾಳಿಯನ್ನು ಪ್ರಧಾನಿ ಮೋದಿ (Narendra Modi) ಖಂಡಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅವರ ತ್ಯಾಗವನ್ನು ಸದಾ ಸ್ಮರಿಸಲಾಗುವುದು ಎಂದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಇದನ್ನು ಹೇಡಿಗಳ ಕೃತ್ಯ ಎಂದು ಕರೆದಿದ್ದು, ಛತ್ತೀಸ್‍ಗಢ ಸರ್ಕಾರಕ್ಕೆ ಅಗತ್ಯವಾದ ಬೆಂಬಲವನ್ನು ನೀಡುವುದಾಗಿ ಘೋಷಿಸಿದ್ದರು.