Tag: IIT

  • RE ಸಂಶೋಧನೆ, ನಾವೀನ್ಯತೆ; 1.27 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಅಸ್ತು: ಪ್ರಹ್ಲಾದ್ ಜೋಶಿ

    RE ಸಂಶೋಧನೆ, ನಾವೀನ್ಯತೆ; 1.27 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಅಸ್ತು: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ನವೀಕರಿಸಬಹುದಾದ ಇಂಧನ ವಲಯದಲ್ಲಿ ಸಂಶೋಧನಾ ಅಭಿವೃದ್ಧಿ ಮತ್ತು ನಾವೀನ್ಯತೆ (RDI)ಗಾಗಿ 1.27 ಲಕ್ಷ ಕೋಟಿ ರೂ. ಬಜೆಟ್‌ನ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಹೇಳಿದರು.

    ಮುಂಬೈನ ಐಐಟಿಯಲ್ಲಿರುವ ರಾಷ್ಟ್ರೀಯ ಫೋಟೊವೋಲ್ಟಾಯಿಕ್ ಸಂಶೋಧನೆ ಮತ್ತು ಶಿಕ್ಷಣ ಕೇಂದ್ರ (NCPRE)ಕ್ಕೆ ಬುಧವಾರ ಭೇಟಿ ನೀಡಿದ ಅವರು ಸಲಹಾ ಮಂಡಳಿ ಸದಸ್ಯರೊಂದಿಗೆ ಸಭೆ ನಡೆಸಿ, ಈ ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಆ.4 ರಿಂದ ಅಮೆರಿಕದಲ್ಲಿ ಶಾಸಕಾಂಗ ಶೃಂಗಸಭೆ – ಸಭಾಪತಿ ಹೊರಟ್ಟಿ ನೇತೃತ್ವದಲ್ಲಿ MLCಗಳ ನಿಯೋಗ ಭಾಗಿ

    ಕೇಂದ್ರ ಸಚಿವ ಸಂಪುಟ ಎರಡು ವಾರಗಳ ಹಿಂದೆಯಷ್ಟೇ ಸಂಶೋಧನಾ ಅಭಿವೃದ್ಧಿ ಮತ್ತು ನಾವೀನ್ಯತೆ ಯೋಜನೆಯನ್ನು ಅನುಮೋದಿಸಿದೆ. ಹಾಗೆಯೇ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಒಟ್ಟು 1.27 ಲಕ್ಷ ಕೋಟಿ ರೂ. ಅನುದಾನ ಒದಗಿಸಿದೆ. ಭಾರತ ಶುದ್ಧ ಇಂಧನಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಲು ಬದ್ಧವಾಗಿದೆ ಎಂದರು.

    ಭಾರತ ನವೀಕರಿಸಬಹುದಾದ ಇಂಧನ ಶಕ್ತಿಯನ್ನು ಅಳವಡಿಸಿಕೊಳ್ಳುವ ಜೊತೆಗೆ ಹೊಸ ತಂತ್ರಜ್ಞಾನಗಳ ಅಭಿವೃದ್ಧಿ ಮತ್ತು ಸಂಶೋಧನೆಗೆ ಉತ್ತೇಜನ ನೀಡುತ್ತಿದೆ. ಇದರ ಪ್ರತಿಫಲವಾಗಿ ಬಾಂಬೆ ಐಐಟಿಯು ಇಂಧನ ಪರಿವರ್ತನೆಯಲ್ಲಿ ಹೆಚ್ಚಿನ ದಕ್ಷತೆ ಪ್ರದರ್ಶಿಸುವ 2 ಟರ್ಮಿನಲ್ ಮೊನೊಲಿಥಿಕ್ ಸಿಲಿಕಾನ್/ಸಿಡಿಟಿಇ-ಪೆರೋವ್‌ಸ್ಕೈಟ್ ಟ್ಯಾಂಡೆಮ್ ಸೌರ ಕೋಶವನ್ನು ಅಭಿವೃದ್ಧಿಪಡಿಸಿದೆ. ಇದು ದೇಶದ ಅತ್ಯುನ್ನತ ಕಾರ್ಯಕ್ಷಮತೆ ಉಳ್ಳದ್ದಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ನವೀಕರಿಸಬಹುದಾದ ಇಂಧನದಲ್ಲಿ ಭಾರತ ಅದ್ಭುತ ಸಾಧನೆ – ಪ್ರಧಾನಿ ಮೋದಿ ಶ್ಲಾಘನೆ

    ಹೆಚ್ಚಿನ ದಕ್ಷತೆ ಮತ್ತು ಕಡಿಮೆ ಬೆಲೆಯ ಸಿಲಿಕಾನ್-ಪೆರೋವ್‌ಸ್ಕೈಟ್ ಟ್ಯಾಂಡೆಮ್ ಸೌರಕೋಶಗಳನ್ನು ಅಭಿವೃದ್ಧಿಪಡಿಸುವ ಮೂಲಕ ಬಾಂಬೆ ಐಐಟಿಯ ಎನ್‌ಸಿಆರ್‌ಪಿಇ ಭವಿಷ್ಯದಲ್ಲಿ ಭಾರತದ ಸೌರಶಕ್ತಿ ದಿಕ್ಕನ್ನೇ ಬದಲಾಯಿಸಲಿದೆ. ಸೌರಶಕ್ತಿ ಕಾರ್ಯಾಚರಣೆಗೆ ಸಂಶೋಧನೆ, ಅಭಿವೃದ್ಧಿ ಮತ್ತು ಶಿಕ್ಷಣ ಬೆಂಬಲ ನೀಡುತ್ತಿದೆ ಎಂದು ತಿಳಿಸಿದರು.

    ಬಾಂಬೆ ಐಐಟಿಗೆ 200 ಕೋಟಿ ರೂ. ನೆರವು:
    ಕೇಂದ್ರ ಸರ್ಕಾರ 2010ರಲ್ಲೇ ಬಾಂಬೆ ಐಐಟಿಯಲ್ಲಿ NCPRE ಆರಂಭಿಸಿದ್ದು, ದೇಶದ ಮಹತ್ವಾಕಾಂಕ್ಷೆಯ 100 GW ಸೌರಶಕ್ತಿ ಕಾರ್ಯಾಚರಣೆಗೆ ಸಂಶೋಧನೆ, ಅಭಿವೃದ್ಧಿ ಮತ್ತು ಶಿಕ್ಷಣಕ್ಕೆ ಬೆಂಬಲ ನೀಡುವುದು ಇದರ ಮುಖ್ಯ ಉದ್ದೇಶ. ಇದಕ್ಕಾಗಿ ನವೀಕರಿಸಬಹುದಾದ ಇಂಧನ ಇಲಾಖೆ ಕಳೆದ 15 ವರ್ಷಗಳಲ್ಲಿ NCPRE, IIT ಬಾಂಬೆಗೆ 200 ಕೋಟಿ ರೂ.ಗೂ ಹೆಚ್ಚು ಅನುದಾನ ಒದಗಿಸಿದೆ ಎಂದರು.

    ಐಐಟಿ-ಬಿ ಕ್ಯಾಂಪಸ್‌ನಲ್ಲಿ ಅತ್ಯಾಧುನಿಕ ಪೈಲಟ್ ಉತ್ಪಾದನಾ ಸೌಲಭ್ಯಕ್ಕಾಗಿ ART-PV ಇಂಡಿಯಾಕ್ಕೆ 10 ಮಿಲಿಯನ್ ಡಾಲರ್(83 ಕೋಟಿ ರೂ.) ನೀಡುತ್ತಿದೆ. ಭಾರತದ ನವೀಕರಿಸಬಹುದಾದ ಇಂಧನ ವಲಯದಲ್ಲಿ ನಾವೀನ್ಯತೆ ಮತ್ತು ಸ್ವಾವಲಂಬನೆ ಸಾಧಿಸಲು MNRE ನೀತಿ ಮತ್ತು ಆರ್ಥಿಕ ಬೆಂಬಲವನ್ನು ಮುಂದುವರಿಸುತ್ತದೆ. ನವೀಕರಿಸಬಹುದಾದ ಇಂಧನ ವಲಯದಲ್ಲಿ ಸುಧಾರಿತ ತಂತ್ರಜ್ಞಾನಗಳೊಂದಿಗೆ ದಕ್ಷತೆ ಹೆಚ್ಚಿಸುವುದಲ್ಲದೆ ಬಲವಾದ ನಾವೀನ್ಯತೆ ಪರಿಸರ ವ್ಯವಸ್ಥೆ ನಿರ್ಮಿಸುತ್ತೇವೆ. ಸಂಶೋಧನೆ, ಅಭಿವೃದ್ಧಿ ಮತ್ತು ವಾಣಿಜ್ಯೀಕರಣಕ್ಕೆ MNRE ಕಾರ್ಯತಂತ್ರ ಬೆಂಬಲವಾಗಿದೆ.ಪೆರೋವ್‌ಸ್ಕೈಟ್ ಟ್ಯಾಂಡೆಮ್ ಸೌರಕೋಶಗಳು ಸ್ಕೇಲೆಬಲ್ ಮಾತ್ರವಲ್ಲದೆ ಲಾಭದಾಯಕವೂ ಆಗಿವೆ ಎಂಬುದನ್ನು ವಾಣಿಜ್ಯಿಕವಾಗಿ ಪ್ರದರ್ಶಿಸಬೇಕೆಂದು ಐಐಟಿ ಬಾಂಬೆ-ART PV ತಂಡವನ್ನು ಒತ್ತಾಯಿಸಿದರು.

  • IISC, IIT ಮಾದರಿ ಸಂಸ್ಥೆಗಳಿಂದ ಪರಿಶೀಲನೆ, ಎಲ್ಲ ಕೈಗಾರಿಕೆಗಳ ಮಾಲಿನ್ಯ ಅಧ್ಯಯನಕ್ಕೆ ಸೂಚನೆ: ಎಂ.ಬಿ.ಪಾಟೀಲ್

    IISC, IIT ಮಾದರಿ ಸಂಸ್ಥೆಗಳಿಂದ ಪರಿಶೀಲನೆ, ಎಲ್ಲ ಕೈಗಾರಿಕೆಗಳ ಮಾಲಿನ್ಯ ಅಧ್ಯಯನಕ್ಕೆ ಸೂಚನೆ: ಎಂ.ಬಿ.ಪಾಟೀಲ್

    ಬೆಂಗಳೂರು: ರಾಜ್ಯದ ಎಲ್ಲಾ 215 ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕೆಗಳಿಂದ ಉಂಟಾಗುತ್ತಿರುವ ವಿವಿಧ ರೀತಿಯ ಮಾಲಿನ್ಯ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (IISC), ಐಐಟಿ (IIT) ತರಹದ ಉನ್ನತ ಮಟ್ಟದ ಸಂಸ್ಥೆಗಳಿಂದ ವಿಸ್ತೃತ ಅಧ್ಯಯನ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ಅವರು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದರು.ಇದನ್ನೂ ಓದಿ: ನಾಳೆ ದ್ವಿತೀಯ ಪಿಯುಸಿ ರಿಸಲ್ಟ್

    ಕೈಗಾರಿಕಾ ಪ್ರದೇಶಗಳಲ್ಲಿ ಉದ್ಯಮ ನಡೆಸಲು ಅನುಮತಿ ನೀಡುವಾಗ ಸರ್ಕಾರವು ಹಲವು ಮಾನದಂಡಗಳನ್ನು ನೀಡಿರುತ್ತದೆ. ಆದರೆ ನಂತರದ ದಿನಗಳಲ್ಲಿ ಏನಾಗುತ್ತದೆ ಎನ್ನುವುದರ ಪರಿಶೀಲನೆ ಕೂಡ ಅಗತ್ಯ. ಉದ್ಯಮಗಳನ್ನು ಬೆಳೆಸುವ ಜೊತೆಯಲ್ಲೇ ನಾವು ನೆಲ, ಜಲ, ವಾಯು, ಕೃಷಿ ಮತ್ತು ಮನುಷ್ಯರ ಮೇಲಾಗುತ್ತಿರುವ ಪರಿಣಾಮಗಳನ್ನೂ ಅಧ್ಯಯನ ಮಾಡಿ, ಅವುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ ಎಂದು ತಿಳಿಸಿದರು.

    ಈ ನಿಟ್ಟಿನಲ್ಲಿ ಕೈಗಾರಿಕಾ ಮಾಲಿನ್ಯ ಕುರಿತು ಉನ್ನತ ಮಟ್ಟದ ತಂಡಗಳಿಂದ ಅಧ್ಯಯನ ನಡೆಸಲಾಗುವುದು. ಈ ತಂಡಗಳು ಎಲ್ಲಾ ಕೈಗಾರಿಕಾ ಪ್ರದೇಶಗಳಿಗೂ ಖುದ್ದು ಭೇಟಿ ನೀಡಲಿವೆ. ಜೊತೆಗೆ ಮಾಲಿನ್ಯದ ತೀವ್ರತೆ ಆಧರಿಸಿ, ಆಯಾ ಉದ್ಯಮಗಳು ಯಾವ ಬಗೆಯ ಪರಿಹಾರ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎನ್ನುವುದನ್ನೂ ಈ ಸಮಿತಿ ತಿಳಿಸಲಿದೆ ಎಂದು ವಿವರಿಸಿದರು.

    ಈ ಉದ್ದೇಶಕ್ಕಾಗಿ ಸೂಕ್ತ ಸಂಸ್ಥೆಯನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ತಂಡಗಳು ನಿರ್ದಿಷ್ಟ ಕಾಲಮಿತಿಯಲ್ಲಿ ತಮ್ಮ ವರದಿ ಸಲ್ಲಿಸುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು. ಸಭೆಯಲ್ಲಿ ಸಚಿವರ ತಾಂತ್ರಿಕ ಸಲಹೆಗಾರ ಡಾ.ಅರವಿಂದ ಗಲಗಲಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.ಇದನ್ನೂ ಓದಿ: ಹಾಸ್ಟೆಲ್‌ ಫ್ಯಾನ್‌ಗೆ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

  • ಐಸಿಸ್ ಸೇರಿ ಉಗ್ರನಾಗಲು ಬಯಸಿದ್ದ ಐಐಟಿ ವಿದ್ಯಾರ್ಥಿ ಅರೆಸ್ಟ್ – ಕರ್ನಾಟಕಕ್ಕಿದೆಯಾ ಲಿಂಕ್?

    ಐಸಿಸ್ ಸೇರಿ ಉಗ್ರನಾಗಲು ಬಯಸಿದ್ದ ಐಐಟಿ ವಿದ್ಯಾರ್ಥಿ ಅರೆಸ್ಟ್ – ಕರ್ನಾಟಕಕ್ಕಿದೆಯಾ ಲಿಂಕ್?

    – ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಮಾಹಿತಿ ಸ್ಫೋಟ

    ಗುವಾಹಟಿ: ಭಯೋತ್ಪಾದಕ ಗುಂಪು ಐಸಿಎಸ್ ಸಂಘಟನೆ (ISIS) ಸೇರಿ ಉಗ್ರನಾಗಲು ಮುಂದಾಗಿದ್ದ ಐಐಟಿ ವಿದ್ಯಾರ್ಥಿಯನ್ನು ಅಸ್ಸಾಂ ಪೊಲೀಸರು (Assam Police) ಬಂಧಿಸಿರುವ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ಬಂಧಿಸಿದ ಬಳಿಕ ಗುವಾಹಟಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

    ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಗುವಾಹಟಿಯಲ್ಲಿ ಜೈವಿಕ ತಂತ್ರಜ್ಞಾನ ಓದುತ್ತಿದ್ದ ಅಂತಿಮ ವರ್ಷದ ವಿದ್ಯಾರ್ಥಿ ತೌಸೀಫ್ ಅಲಿ ಫಾರೂಕಿಯನ್ನು (Tauseef Ali Farooqui) ವಿಚಾರಣೆ ನಡೆಸುವ ವೇಳೆ ಬೆಚ್ಚಿ ಬೀಳಿಸುವ ಮಾಹಿತಿಗಳು ಬೆಳಕಿಗೆ ಬಂದಿವೆ.

    ಕರ್ನಾಟಕದಲ್ಲೂ ಮಾಡ್ಯೂಲ್ ಸ್ಥಾಪಿಸಿದ್ದ:
    ಈತ 2019ರಿಂದಲೇ ಐಸಿಸ್ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ. ಅಲ್ಲದೇ ಪಾಣಿಪತ್‌ಗೆ ಸೇರಿದ ಫಾರೂಕಿ ಸಹಚರ ಅನುರಾಗ್ ಸಿಂಗ್ ಅಲಿಯಾಸ್ ರೆಹಾನ್ ಇಸ್ಲಾಂಗೆ ಮತಾಂತರಗೊಂಡಿದ್ದ. ರೆಹಾನ್ ಪತ್ನಿ ಬಾಂಗ್ಲಾದೇಶದ ಪ್ರಜೆ. ಆದ್ದರಿಂದ ಬಾಂಗ್ಲಾದೇಶದಲ್ಲಿ ತಲೆ ಮರೆಸಿಕೊಂಡಿದ್ದು, ಭಾರತೀಯರನ್ನು ಐಸಿಸ್‌ಗೆ ಆಮೂಲಾಗ್ರೀಕರಣಗೊಳಿಸುತ್ತಿದ್ದ ಎಂದು ಶಂಕಿಸಲಾಗಿದೆ. ಅಲ್ಲದೇ ಕರ್ನಾಟಕ, ಜಾರ್ಖಂಡ್, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗೋವಾ, ಪಂಜಾಬ್, ಮಹಾರಾಷ್ಟ್ರ ರಾಜ್ಯಗಳಲ್ಲಿಯೂ ಮಾಡ್ಯೂಲ್‌ಗಳನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಎನ್‌ಐಎ ಮೂಲಗಳು ತಿಳಿಸಿವೆ.

    ಪೊಲೀಸರು ಹೇಳಿದ್ದೇನು?
    ಐಸಿಸ್‌ಗೆ ಸೇರಿರುವುದಾಗಿ ಹೇಳಿದ್ದ ಐಐಟಿ-ಜಿ ವಿದ್ಯಾರ್ಥಿ ತೌಸೀಫ್ ಅಲಿ ಫಾರೂಕಿಯನ್ನು ಅಸ್ಸಾಂ ಎಸ್‌ಟಿಎಫ್ ಬಂಧಿಸಿದೆ. ಶನಿವಾರ ಬೆಳಗ್ಗೆಯಿಂದ ವಿದ್ಯಾರ್ಥಿ ನಾಪತ್ತೆಯಾಗಿದ್ದ. ಐಸಿಸ್ ಸೇರುವ ಬಗ್ಗೆ ಆತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ. ನಾವು ಆತನನ್ನು ಅಸ್ಸಾಂನ ಕಾಮ್ರೂಪ್ ಜಿಲ್ಲೆಯ ಹಾಜೋದಲ್ಲಿ ಪತ್ತೆ ಹಚ್ಚಿದ್ದೇವೆ ಎಂದು ವಿಶೇಷ ಕಾರ್ಯಪಡೆಯ (ಎಸ್‌ಟಿಎಫ್) ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಲ್ಯಾಣ್ ಕುಮಾರ್ ಪಾಠಕ್ ತಿಳಿಸಿದ್ದರು.

    ತೌಸೀಫ್ ಕ್ಯಾಂಪಸ್‌ನಲ್ಲಿ ಹೆಚ್ಚು ಸ್ನೇಹಿತರನ್ನು ಹೊಂದಿರಲಿಲ್ಲ. ಹೆಚ್ಚಿನ ಸಮಯವನ್ನು ಆತ ಹಾಸ್ಟೆಲ್‌ನಲ್ಲೇ ಕಳೆಯುತ್ತಿದ್ದ. ಆತನ ಕೊಠಡಿಯಲ್ಲಿ ಐಸಿಸ್ ಧ್ವಜವನ್ನು ಹೋಲುವ ಕಪ್ಪು ಧ್ವಜ ಮತ್ತು ಧರ್ಮದ ಕೆಲವು ಪ್ರತಿಗಳು ಸಿಕ್ಕಿವೆ. ವಶಪಡಿಸಿಕೊಂಡ ವಸ್ತುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಿದ್ದೇವೆ ಎಂದು ತಿಳಿಸಿದ್ದರು.

    ಫಾರೂಕಿ ಏನಂತ ಬರೆದುಕೊಂಡಿದ್ದ?
    ಸೋಮವಾರ ಲಿಕ್ಡಿಇನ್‌ನಲ್ಲಿ ತೌಸೀಫ್ ಅಲಿ ಬಹಿರಂಗ ಪತ್ರವನ್ನು ಬರೆದಿದ್ದ. ಭಾರತೀಯ ಸಂವಿಧಾನ, ಅದರ ಸಂಸ್ಥೆಗಳು ಮತ್ತು ಮುಂತಾದವುಗಳಿಂದ ನಾನು ಹೊರ ಬಂದಿದ್ದೇನೆ. ಇಸ್ಲಾಮಿಕ್ ಸ್ಟೇಟ್-ಖೊರಾಸನ್ ಪ್ರಾಂತ್ಯ ಎಂದು ಕರೆಯಲ್ಪಡುವ ಪ್ರದೇಶಕ್ಕೆ ನಾನು ವಲಸೆ ಹೋಗುತ್ತಿದ್ದೇನೆ. ಮುಸ್ಲಿಂ-ನಾಯಕತ್ವಕ್ಕೆ ನಾನು ಪ್ರತಿಜ್ಞೆ ಮಾಡಿದ ಮೊದಲ ಹೆಜ್ಜೆ ಇದಾಗಿದೆ. ಇದು ಮುಸ್ಲಿಮರು (ಅಲ್ಲಾಗೆ ಶರಣಾದವರು) ಮತ್ತು ಕಾಫೀರ್ (ನಾಸ್ತಿಕರು) ನಡುವಿನ ಹೋರಾಟ ಎಂದು ಬರೆದುಕೊಂಡಿದ್ದ.

  • ಉಗ್ರನಾಗಲು ಐಸಿಸ್‌ ಸೇರಲು ಮುಂದಾಗಿದ್ದ ಐಐಟಿ ವಿದ್ಯಾರ್ಥಿ ವಶಕ್ಕೆ

    ಉಗ್ರನಾಗಲು ಐಸಿಸ್‌ ಸೇರಲು ಮುಂದಾಗಿದ್ದ ಐಐಟಿ ವಿದ್ಯಾರ್ಥಿ ವಶಕ್ಕೆ

    ಗುವಾಹಟಿ: ಭಯೋತ್ಪಾದಕ ಗುಂಪು ಐಸಿಎಸ್‌ಗೆ (ISIS) ಸೇರಲು ಮುಂದಾಗಿದ್ದ ಐಐಟಿ ವಿದ್ಯಾರ್ಥಿಯನ್ನು (IIT Student) ಅಸ್ಸಾಂ ಪೊಲೀಸರು (Assam Police) ವಶಕ್ಕೆ ಪಡೆದಿದ್ದಾರೆ.

    ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ಗುವಾಹಟಿಯಲ್ಲಿ (IIT) ಜೈವಿಕ ತಂತ್ರಜ್ಞಾನ ಓದುತ್ತಿದ್ದ ಅಂತಿಮ ವರ್ಷದ ವಿದ್ಯಾರ್ಥಿ ತೌಸೀಫ್ ಅಲಿ ಫಾರೂಕಿಯನ್ನು (Tauseef Ali Farooqui) ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ

     ಸುದ್ದಿಗೋಷ್ಠಿ ನಡೆಸಿದ ವಿಶೇಷ ಕಾರ್ಯಪಡೆಯ (ಎಸ್‌ಟಿಎಫ್) ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಲ್ಯಾಣ್ ಕುಮಾರ್ ಪಾಠಕ್ ಅವರು, ಐಸಿಸ್‌ಗೆ ಸೇರಿರುವುದಾಗಿ ಹೇಳಿದ ಐಐಟಿ-ಜಿ ವಿದ್ಯಾರ್ಥಿ ತೌಸೀಫ್ ಅಲಿ ಫಾರೂಕಿಯನ್ನು ಅಸ್ಸಾಂ ಎಸ್‌ಟಿಎಫ್‌ ಬಂಧಿಸಿದೆ. ಶನಿವಾರ ಬೆಳಗ್ಗೆಯಿಂದ ವಿದ್ಯಾರ್ಥಿ ನಾಪತ್ತೆಯಾಗಿದ್ದ. ಐಸಿಸ್ ಸೇರುವ ಬಗ್ಗೆ ಆತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದ. ನಾವು ಆತನನ್ನು ಅಸ್ಸಾಂನ ಕಾಮ್ರೂಪ್ ಜಿಲ್ಲೆಯ ಹಾಜೋದಲ್ಲಿ ಪತ್ತೆ ಹಚ್ಚಿದ್ದೇವೆ ಎಂದು ತಿಳಿಸಿದರು.

    ತೌಸೀಫ್ ಕ್ಯಾಂಪಸ್‌ನಲ್ಲಿ ಹೆಚ್ಚು ಸ್ನೇಹಿತರನ್ನು ಹೊಂದಿರಲಿಲ್ಲ. ಹೆಚ್ಚಿನ ಸಮಯವನ್ನು ಆತ ಹಾಸ್ಟೆಲ್‌ನಲ್ಲೇ ಕಳೆಯುತ್ತಿದ್ದ. ಆತನ ಕೊಠಡಿಯಲ್ಲಿ ಐಸಿಸ್‌ ಧ್ವಜವನ್ನು ಹೋಲುವ ಕಪ್ಪು ಧ್ವಜ ಮತ್ತು ಧರ್ಮದ ಕೆಲವು ಪ್ರತಿಗಳು ಸಿಕ್ಕಿವೆ. ವಶಪಡಿಸಿಕೊಂಡ ವಸ್ತುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಿದ್ದೇವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಕಾವೇರಿ ನೀರಿನಲ್ಲಿ ಕಾರು ವಾಶ್‌: ಮಾಲೀಕರಿಗೆ 5 ಸಾವಿರ ದಂಡ ವಿಧಿಸಿದ ಜಲಮಂಡಳಿ

    ಸೋಮವಾರ ಲಿಕ್ಡಿಇನ್‌ನಲ್ಲಿ ತೌಸೀಫ್ ಅಲಿ ಬಹಿರಂಗ ಪತ್ರವನ್ನು ಬರೆದಿದ್ದ. ಭಾರತೀಯ ಸಂವಿಧಾನ, ಅದರ ಸಂಸ್ಥೆಗಳು ಮತ್ತು ಮುಂತಾದವುಗಳಿಂದ ನಾನು ಹೊರ ಬಂದಿದ್ದೇನೆ. ಇಸ್ಲಾಮಿಕ್ ಸ್ಟೇಟ್-ಖೊರಾಸನ್ ಪ್ರಾಂತ್ಯ ಎಂದು ಕರೆಯಲ್ಪಡುವ ಪ್ರದೇಶಕ್ಕೆ ನಾನು ವಲಸೆ ಹೋಗುತ್ತಿದ್ದೇನೆ. ಮುಸ್ಲಿಂ-ನಾಯಕತ್ವಕ್ಕೆ ನಾನು ಪ್ರತಿಜ್ಞೆ ಮಾಡಿದ ಮೊದಲ ಹೆಜ್ಜೆ ಇದಾಗಿದೆ. ಇದು ಮುಸ್ಲಿಮರು(ಅಲ್ಲಾಗೆ ಶರಣಾದವರು) ಮತ್ತು ಕಾಫೀರ್‌ (ನಾಸ್ತಿಕರು) ನಡುವಿನ ಹೋರಾಟ ಎಂದು ಬರೆದುಕೊಂಡಿದ್ದ.

     

    ಅಸ್ಸಾಂ ಎಸ್‌ಟಿಎಫ್ ಇತ್ತೀಚೆಗೆ ಭಾರತದಲ್ಲಿ ಐಸಿಸ್‌ಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿತ್ತು. ಡೆಹ್ರಾಡೂನ್‌ನ ಚಕ್ರತಾ ಮೂಲದ ಹ್ಯಾರಿಸ್ ಭಾರತದಲ್ಲಿ ಐಸಿಸ್ ಮುಖ್ಯಸ್ಥನಾಗಿದ್ದರೆ ಪಾಣಿಪತ್‌ನ ಅನುರಾಗ್ ಸಿಂಗ್ ಅಲಿಯಾಸ್ ರೆಹಾನ್ ಇಸ್ಲಾಂಗೆ ಮತಾಂತರಗೊಂಡಿದ್ದ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಾಲ್ವರು ಭಯೋತ್ಪಾದಕರ ಬಂಧನ – ಅಪಾರ ಶಸ್ತ್ರಾಸ್ತ್ರ ವಶ

     ಐಸಿಸ್‌ನ ನೇಮಕಾತಿ, ಭಯೋತ್ಪಾದಕ ನಿಧಿ ಮತ್ತು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಬಳಸಿ ಭಾರತದಾದ್ಯಂತ ದಾಳಿಗಳನ್ನು ನಡೆಸುವುದು ಸೇರಿದಂತೆ ವಿವಿಧ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಇಬ್ಬರೂ ತೊಡಗಿಸಿಕೊಂಡಿದ್ದರು. ಹೆಚ್ಚಿನ ತನಿಖೆಗಾಗಿ ಇಬ್ಬರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಲಾಗಿದೆ.

     

  • ಧಾರವಾಡ ಹೈಕೋರ್ಟ್ ಪೀಠಕ್ಕೆ ವಾದ ಮಾಡಲು ಬಂದಿದ್ದೆ: ನೆನಪಿನ ಬುತ್ತಿ ಬಿಚ್ಚಿಟ್ಟ ಉಪರಾಷ್ಟ್ರಪತಿ ಧನಕರ್

    ಧಾರವಾಡ ಹೈಕೋರ್ಟ್ ಪೀಠಕ್ಕೆ ವಾದ ಮಾಡಲು ಬಂದಿದ್ದೆ: ನೆನಪಿನ ಬುತ್ತಿ ಬಿಚ್ಚಿಟ್ಟ ಉಪರಾಷ್ಟ್ರಪತಿ ಧನಕರ್

    ಧಾರವಾಡ: ಇಲ್ಲಿನ ಹೈಕೋರ್ಟ್ ಪೀಠಕ್ಕೆ ಪ್ರಕರಣವೊಂದರ ವಾದ ಮಾಡಲು ಬಂದಿದ್ದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ (Vice-President Jagdeep Dhankhar) ಧಾರವಾಡದೊಂದಿಗಿನ (Dharwad) ಹಳೆಯ ನೆನಪೊಂದನ್ನು ಅವರು ಮೆಲಕು ಹಾಕಿದ್ದಾರೆ.

    ಇಲ್ಲಿನ ಐಐಟಿ (IIT) ಕಾರ್ಯಕ್ರಮದಲ್ಲಿ ಮಾತಾಡಿದ ಅವರು, ನನಗೂ ಧಾರವಾಡ ಹೈಕೋರ್ಟ್ ಪೀಠಕ್ಕೂ (Dharwad bench of the Karnataka High Court) ಸಂಬಂಧವಿದೆ. ನಾನು ಇಲ್ಲಿ ಪ್ರಕರಣವೊಂದನ್ನು ವಾದ ಮಾಡಲು ಬಂದಿದ್ದೆ. ಕರ್ನಾಟಕದ ಜೊತೆ ನನಗೆ ಹಳೆಯ ಸಂಬಂಧವಿದೆ. ನಾನು ರಾಜ್ಯಸಭೆಯ ಸಭಾಪತಿ ಬಲಗಡೆ ನೋಡಿದರೆ ಪ್ರಹ್ಲಾದ್ ಜೋಶಿ ಕಾಣುತ್ತಾರೆ. ಎಡಗಡೆ ನೋಡಿದರೆ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕಾಣುತ್ತಾರೆ. ಮಲ್ಲಿಕಾರ್ಜುನ ಖರ್ಗೆಯವರು ಬಹಳ ಅನುಭವಿ ರಾಜಕಾರಣಿ. ಜೋಶಿಯವರು ಬಹಳ ಅಚ್ಚುಕಟ್ಟಾಗಿ ಕೆಲಸ ಮಾಡುವ ವ್ಯಕ್ತಿ. ಅವರಿಗೆ ಈ ಭಾಗದ ಬಗ್ಗೆ ಬಹಳಷ್ಟು ಕಾಳಜಿ ಇದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಐದನೇ ಬಾರಿಗೆ ಬೆಂಗಳೂರಿನಲ್ಲಿ ಬಾಂಬ್‌ ಸ್ಟೋಟ: ಹಿಂದೆ ಎಲ್ಲೆಲ್ಲಿ ಸಂಭವಿಸಿತ್ತು?

    ಇಂದಿನ ವಿದ್ಯಾರ್ಥಿಗಳಿಂದ ಈ ದೇಶದ ಬದಲಾವಣೆ ಆಗಬೇಕಿದೆ. ದೇಶದ ವಿವಿಧ ಐಐಟಿಗಳಲ್ಲಿ ಯುವಕರು ಕಲಿಯುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲೇ ಮೊದಲ ಐಐಟಿ ಧಾರವಾಡದ್ದು. ಇಡೀ ವಿಶ್ವದಲ್ಲೇ ಧಾರವಾಡ ಐಐಟಿ ಉತ್ತುಂಗಕ್ಕೆ ಏರಬೇಕು. ಇಂದಿನ ಯುವಕರೇ ನಾಳಿನ ಈ ದೇಶದ ಭದ್ರ ಬುನಾದಿ ಎಂದಿದ್ದಾರೆ.

    ಲೋಕಸಭೆಯಲ್ಲಿ 33%ರಷ್ಟು ಮೀಸಲಾತಿ ಮಹಿಳೆಯರಿಗೆ ಸಿಕ್ಕಿದೆ. 2029ಕ್ಕೆ 33%ರಷ್ಟು ಮಹಿಳಾ ಸಂಸದರು ಸಂಸತ್‍ನಲ್ಲಿ ಇರುತ್ತಾರೆ. ಚಂದ್ರಯಾನ ಹಾಗೂ ಆದಿತ್ಯ ಎಲ್-1ರಂತಹ ಅನೇಕ ಸಾಧನೆಗಳನ್ನು ನಾವು ಮಾಡಿದ್ದೇವೆ. ಸಾಧನೆ ಮೂಲಕ ದೇಶದ ವಿರೋಧಿಗಳಿಗೆ ನಾವು ತಕ್ಕ ಉತ್ತರ ಕೊಡಬೇಕಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರೆವೆ ಇಡ್ಲಿ ತಿಂದು ಬಾಂಬ್ ಇಟ್ಟು ಹೋದ ಆರೋಪಿ – ಬಾಂಬ್‌ ಸ್ಫೋಟ ಸ್ಥಳಕ್ಕೆ ಡಿಕೆಶಿ ಭೇಟಿ

  • Karnataka Budget 2024 – ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್‍ಗಳನ್ನು ಐಐಟಿಯಂತೆ ಅಭಿವೃದ್ಧಿ

    Karnataka Budget 2024 – ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್‍ಗಳನ್ನು ಐಐಟಿಯಂತೆ ಅಭಿವೃದ್ಧಿ

    ಬೆಂಗಳೂರು: ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್‍ಗಳನ್ನು ಐಐಟಿಯಂತೆ (IIT) ಅಭಿವೃದ್ಧಿ ಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಬಜೆಟ್‍ನಲ್ಲಿ ಘೋಷಿಸಿದ್ದಾರೆ.

    ರಾಜ್ಯದ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ಗಳ ಉನ್ನತೀಕರಣಕ್ಕೆ ಒಟ್ಟು 30 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಘೋಷಿಸಲಾಗಿದೆ. ಇದನ್ನೂ ಓದಿ: GST ಸಂಗ್ರಹಣೆ 18% ಹೆಚ್ಚಳ – 2.8 ಶತಕೋಟಿ ಡಾಲರ್‌ FDI ಹೂಡಿಕೆ

    ಬಜೆಟ್ ಘೋಷಣೆಗಳು
    ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು (UVCE) 500 ಕೋಟಿ ರೂ. ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಸರ್ಕಾರದಿಂದ 100 ಕೋಟಿ ರೂ. ಅನುದಾನ ಒದಗಿಸಲಾಗುವುದು. ಜೊತೆಗೆ ಸಿ.ಎಸ್.ಆರ್. ನಿಧಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿಗೆಯಿಂದ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲು ನಿರ್ಧರಿಸಲಾಗಿದೆ. 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಕಾಮಗಾರಿಗಳಿಗೆ 250 ಕೋಟಿ ರೂ. ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳ ಕಾಮಗಾರಿಗಳಿಗೆ 120 ಕೋಟಿ ರೂ. ಅನುದಾನ ಒದಗಿಸಲು ಸರ್ಕಾರ ತೀರ್ಮಾನಿಸಿದೆ.

    ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಆಗತ್ಯತೆಗನುಗುಣವಾಗಿ ತುಂಬಲಾಗುವುದು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುವುದು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ/ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು.

    ಹಳೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಸರ್ಕಾರಿ ಉನ್ನತ ಶಿಕ್ಷಣ ವಿನೂತನ ಸಂಸ್ಥೆಗಳನ್ನು ಅಭಿವೃದ್ಧಿಗೊಳಿಸಲು ಬೇರು-ಚಿಗುರು ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಉನ್ನತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ತಮ್ಮ ಆವಿಷ್ಕಾರಗಳಿಗೆ ಪೇಟೆಂಟ್ ಪಡೆದುಕೊಳ್ಳಲು ಅಗತ್ಯವಾದ ತಾಂತ್ರಿಕ ಮತ್ತು ಆರ್ಥಿಕ ನೆರವು ನೀಡಲು 10 ಕೋಟಿ ರೂ.ಗಳ ನಿಧಿ ಸ್ಥಾಪಿಸಲಾಗುತ್ತದೆ. ವಿಷಯ ತಜ್ಞರು, ನಾಗರಿಕ ಸೇವಾ ಅಧಿಕಾರಿಗಳು ಮತ್ತು ಉದ್ಯಮಿಗಳಿಂದ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಎಂಬ ಕಾರ್ಯಕ್ರಮದಡಿ ಮಾರ್ಗದರ್ಶನವನ್ನು ನೀಡಲಾಗುತ್ತದೆ ಎಂದು ಬಜೆಟ್‍ನಲ್ಲಿ ಘೋಷಿಸಲಾಗಿದೆ.

    ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡವನ್ನು 54 ಕೋಟಿ ರೂ. ವೆಚ್ಚದಲ್ಲಿ ಹಾಗೂ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಸ್ಟೆಲ್ ಕಟ್ಟಡ ನಿರ್ಮಾಣವನ್ನು 116 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ. ಇದನ್ನೂ ಓದಿ: Karnataka State Budget 2024- ರಾಜ್ಯ ಬಜೆಟ್ ನಲ್ಲಿ ಬಸವಣ್ಣ: ಸಾಂಸ್ಕೃತಿಕ ನಾಯಕನಿಗೆ ಜೈಕಾರ

  • ದೆಹಲಿ ಐಐಟಿ ವಾಶ್ ರೂಂನಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ – ಸ್ವಚ್ಛತಾ ಸಿಬ್ಬಂದಿ ಬಂಧನ

    ದೆಹಲಿ ಐಐಟಿ ವಾಶ್ ರೂಂನಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ – ಸ್ವಚ್ಛತಾ ಸಿಬ್ಬಂದಿ ಬಂಧನ

    ನವದೆಹಲಿ: ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿನ (IIT) ವಾಶ್ ರೂಂನಲ್ಲಿ (Washroom) ವಿದ್ಯಾರ್ಥಿನಿಯರ ವೀಡಿಯೋ (Video) ಮಾಡಿರುವ ಆರೋಪದ ಮೇಲೆ 20 ವರ್ಷದ ಸ್ವೀಪರ್‌ನನ್ನು ಬಂಧಿಸಲಾಗಿದೆ.

    ದೆಹಲಿ ವಿಶ್ವವಿದ್ಯಾಲಯದ ಭಾರ್ತಿ ಕಾಲೇಜಿನ ಸುಮಾರು 10 ವಿದ್ಯಾರ್ಥಿನಿಯರು ಕಾಲೇಜಿನ ಫೆಸ್ಟ್ ಸಮಯದಲ್ಲಿ ಫ್ಯಾಷನ್ ಶೋಗಾಗಿ ವಾಶ್ ರೂಂನಲ್ಲಿ ಬಟ್ಟೆ ಬದಲಾಯಿಸುತ್ತಿದ್ದ ಸಂದರ್ಭದಲ್ಲಿ ರಹಸ್ಯವಾಗಿ ತಮ್ಮ ವೀಡಿಯೋ ಮಾಡಿರುವುದಾಗಿ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ವಿದ್ಯಾರ್ಥಿನಿಯರು ಕಾಲೇಜು ಆಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡಿದ ಬಳಿಕವೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ನಂತರ ಕಿಶನ್‌ಗಢ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಸಿ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪಟಾಕಿ ದುರಂತ ಸ್ಥಳಕ್ಕೆ ಡಿಕೆಶಿ ಭೇಟಿ- ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

    ಐಐಟಿ ದೆಹಲಿಯ ವಾಶ್ ರೂಂನಲ್ಲಿ ಹುಡುಗನೊಬ್ಬ ವೀಡಿಯೋ ಮಾಡಿರುವ ಬಗ್ಗೆ ಕಿಶನ್‌ಗಢ ಪೊಲೀಸ್ ಠಾಣೆಯಲ್ಲಿ ಎಕ್ಸ್ ಮೂಲಕ ದೂರನ್ನು ಸ್ವೀಕರಿಸಿದ್ದೇವೆ. ಭಾರತೀಯ ದಂಡಸಂಹಿತೆಯ ಸೆಕ್ಷನ್ 354 ಸಿ ಅಡಿಯಲ್ಲಿ ಶನಿವಾರ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಮಂದಿರಕ್ಕೆ ಇಂದು ಕೊನೆಯ ದಿನ – ಬನ್ನಿ ಪಾಲ್ಗೊಳ್ಳಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Rajasthan: ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸಮಿತಿ ರಚಿಸಿದ ರಾಜಸ್ಥಾನ ಸಿಎಂ

    Rajasthan: ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸಮಿತಿ ರಚಿಸಿದ ರಾಜಸ್ಥಾನ ಸಿಎಂ

    – 2021ರಲ್ಲಿ ಕರ್ನಾಟಕದಲ್ಲಿ 855 ವಿದ್ಯಾರ್ಥಿಗಳು ಆತ್ಮಹತ್ಯೆ – ಎನ್‌ಸಿಆರ್‌ಬಿ ವರದಿ ಪ್ರಸ್ತಾಪ

    ಜೈಪುರ: ಕೋಟಾದಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ (Students Suicide Case) ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot), ಸಾವುಗಳ ಪ್ರಮಾಣ ತಡೆಯಲು‌ ಸಮಿತಿ ರಚಿಸಲಾಗಿದೆ ಎಂದು ಹೇಳಿದ್ದಾರೆ.

    ಕೋಚಿಂಗ್ ಹಬ್‌ನಲ್ಲಿ (Coaching Hub) ಐಐಟಿ ಮತ್ತು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ ಪ್ರಕರಣಗಳ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ನಾನು ಸಮಿತಿಯನ್ನ ರಚಿಸುವುದಾಗಿ ಘೋಷಿಸಿದ್ದೇನೆ. ಇದರಲ್ಲಿ ಅಧಿಕಾರಿಗಳು, ಪೋಷಕರು ಹಾಗೂ ಕೋಚಿಂಗ್ ಸಂಸ್ಥೆ ಪ್ರತಿನಿಧಿಸುವ ವ್ಯಕ್ತಿಗಳು ಇರಲಿದ್ದು, 15 ದಿನಗಳಲ್ಲಿ ತನ್ನ ವರದಿಯನ್ನ ಸಲ್ಲಿಸುತ್ತದೆ ಎಂದು ತಿಳಿಸಿದ್ದಾರೆ.

    9 ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ (SSLC Students) ಮೇಲೆಯೂ ಹೊರೆ ಹಾಕಲಾಗುತ್ತಿದೆ. ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳಿಗೆ ಸೇರಿಸುವ ಮೂಲಕ ಪೋಷಕರು ಅಪರಾಧ ಮಾಡುತ್ತಿದ್ದೀರಿ, ಬೋರ್ಡ್ ಪರೀಕ್ಷೆಗಳಲ್ಲಿ (Board Exams) ತೇರ್ಗಡೆಯಾಗುವ ಮತ್ತು ಪ್ರವೇಶ ಪರೀಕ್ಷೆಗಳಿಗೆ ತಯಾರಿ ಮಾಡುವ ಹೊರೆಯನ್ನ ವಿದ್ಯಾರ್ಥಿಗಳು ಎದುರಿಸುತ್ತಾರೆ. ಇದು ಸುಧಾರಣೆಯ ಸಮಯ, ನಾವು ಯುವ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಲಾಗುವುದಿಲ್ಲ. ಒಂದು ಮಗುವಿನ ಸಾವು ಪೋಷಕರಿಗೆ ದೊಡ್ಡ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರದ ಎಲ್ಲ ಸಂಸ್ಥೆಗಳಲ್ಲೂ RSS ತನ್ನ ಜನರನ್ನಿರಿಸಿದೆ – ರಾಹುಲ್ ಗಾಂಧಿ ಆರೋಪ

    ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ 22 ವಿದ್ಯಾರ್ಥಿಗಳು ಈ ವರ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಈ ಸಂಖ್ಯೆ 15 ಆಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿಕ್ಷಣದ ರಾಜ್ಯ ಸಚಿವೆ ಜಾಹಿದಾ ಖಾನ್ ಅವರು ಕೋಚಿಂಗ್ ಸಂಸ್ಥೆಗಳು “ಹಣ ಮಾಡುವ ಯಂತ್ರ”ಗಳಾಗಿ ಬದಲಾಗಬಾರದು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಮಹೀಂದ್ರಾ ಎಕ್ಸ್‌ಯುವಿ ಸ್ಪೋರ್ಟ್ಸ್‌ನಲ್ಲಿ ತಾಂತ್ರಿಕ ಸಮಸ್ಯೆ- ಬಗೆಹರಿಸುವ ಭರವಸೆ ನೀಡಿದ ಸಂಸ್ಥೆ

    ಸಭೆಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಕುರಿತು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದತ್ತಾಂಶಗಳ ಬಗ್ಗೆ ಚರ್ಚಿಸಲಾಯಿತು. ಎನ್‌ಸಿಆರ್‌ಬಿ ಪ್ರಕಾರ, 2021 ರಲ್ಲಿ ಸುಮಾರು 13,000 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರವು 1,834 ಸಾವುಗಳೊಂದಿಗೆ ಗರಿಷ್ಠ ಸಂಖ್ಯೆಯ ಆತ್ಮಹತ್ಯೆಗಳನ್ನು ದಾಖಲಿಸಿದೆ. ಮಧ್ಯಪ್ರದೇಶದಲ್ಲಿ 1,308, ತಮಿಳುನಾಡಿನಲ್ಲಿ 1,246, ಕರ್ನಾಟಕದಲ್ಲಿ 855 ಮತ್ತು ಒಡಿಶಾದಲ್ಲಿ 834 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಕೊಂಡಿರುವುದಾಗಿ ಸಭೆಯಲ್ಲಿ ಪ್ರಸ್ತಾಪಿಸಲಾಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತದ ಹೊರಗೆ ಮೊದಲ ಐಐಟಿ ಸ್ಥಾಪನೆ: MEA

    ಭಾರತದ ಹೊರಗೆ ಮೊದಲ ಐಐಟಿ ಸ್ಥಾಪನೆ: MEA

    ನವದೆಹಲಿ: ಭಾರತೀಯ ತಂತ್ರಜ್ಞಾನ ಸಂಸ್ಥೆ (IIT) ಕ್ಯಾಂಪಸ್‌ ಮೊದಲ ಬಾರಿಗೆ ಭಾರತದ ಹೊರಗಿನ ದೇಶ ತಾಂಜಾನಿಯಾದ ಜಂಜಿಬಾರ್‌ನಲ್ಲಿ ಸ್ಥಾಪನೆಯಾಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಗುರುವಾರ ತಿಳಿಸಿದೆ.

    ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಅವರು ತಾಂಜಾನಿಯಾ ಪ್ರವಾಸದಲ್ಲಿದ್ದಾರೆ. ತಾಂಜಾನಿಯಾದ ಜಾಂಜಿಬಾರ್‌ನಲ್ಲಿ ಐಐಟಿ ಮದ್ರಾಸ್ ಕ್ಯಾಂಪಸ್ ಸ್ಥಾಪನೆಗೆ ತಿಳುವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಒಪ್ಪಂದಕ್ಕೆ ಜಾಂಜಿಬಾರ್ ಅಧ್ಯಕ್ಷ ಹುಸೇನ್ ಅಲಿ ಮ್ವಿನಿ ಮತ್ತು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಸಮ್ಮುಖದಲ್ಲಿ ಇಲಾಖೆಗಳು ಸಹಿ ಹಾಕಿವೆ. ಇದನ್ನೂ ಓದಿ: ಮಣಿಪುರ ಹಿಂಸಾಚಾರ – ಇಂಟರ್ನೆಟ್ ಸೇವೆ ನಿಷೇಧ ಜು.10 ರವರೆಗೆ ವಿಸ್ತರಣೆ

    ಭಾರತದ ಹೊರಗೆ ಜಾಂಜಿಬಾರ್‌ನಲ್ಲಿ ಮೊದಲ ಐಐಟಿ ಕ್ಯಾಂಪಸ್ ಸ್ಥಾಪನೆಯಾಗಲಿದೆ. ಭಾರತದ ಶಿಕ್ಷಣ ಸಚಿವಾಲಯ, ಐಐಟಿ ಮದ್ರಾಸ್ ಮತ್ತು ಜಾಂಜಿಬಾರ್‌ನ ಶಿಕ್ಷಣ ಮತ್ತು ವೃತ್ತಿಪರ ತರಬೇತಿ ಸಚಿವಾಲಯದ ನಡುವೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಎಂಇಎ ಮಾಹಿತಿ ನೀಡಿದೆ.

    ಈ ಕ್ಯಾಂಪಸ್ ಭಾರತ ಮತ್ತು ತಾಂಜಾನಿಯಾ ನಡುವಿನ ದೀರ್ಘಕಾಲದ ಸ್ನೇಹವನ್ನು ಪ್ರತಿಬಿಂಬಿಸುತ್ತದೆ. ಆಫ್ರಿಕಾ ಮತ್ತು ಗ್ಲೋಬಲ್ ಸೌತ್‌ನಾದ್ಯಂತ ಜನರ ಸಂಬಂಧಗಳನ್ನು ಬೆಸೆಯಲು ಭಾರತವು ತನ್ನ ಗಮನ ಕೇಂದ್ರೀಕರಿಸಿದೆ ಎಂದು ತಿಳಿಸಿದೆ. ಇದನ್ನೂ ಓದಿ: NCP vs NCP – ಬಲಾಬಲ ಪ್ರದರ್ಶನದಲ್ಲಿ ಅಜಿತ್‌ ʼಪವರ್‌ʼಫುಲ್‌!

    ರಾಷ್ಟ್ರೀಯ ಶಿಕ್ಷಣ ನೀತಿ 2020 (NEP) ಉನ್ನತ ಕಾರ್ಯಕ್ಷಮತೆ ಹೊಂದಿರುವ ಭಾರತೀಯ ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳನ್ನು ಇತರ ದೇಶಗಳಲ್ಲಿ ಸ್ಥಾಪಿಸಲು ಪ್ರೋತ್ಸಾಹಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

    ತಾಂಜಾನಿಯಾ ಮತ್ತು ಭಾರತದ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಗುರುತಿಸಿ, ಜಾಂಜಿಬಾರ್-ಟಾಂಜಾನಿಯಾದಲ್ಲಿ ಐಐಟಿ ಮದ್ರಾಸ್‌ನ ಕ್ಯಾಂಪಸ್ ಸ್ಥಾಪನೆಗೆ ಸಂಬಂಧಿಸಿದಂತೆ ದಾಖಲೆಗೆ ಸಹಿ ಮಾಡುವ ಮೂಲಕ ಶೈಕ್ಷಣಿಕ ಪಾಲುದಾರಿಕೆಯ ಸಂಬಂಧವನ್ನು ಔಪಚಾರಿಕಗೊಳಿಸಲಾಗಿದೆ. 2023ರ ಅಕ್ಟೋಬರ್‌ನಿಂದ ಕಾರ್ಯ ಆರಂಭವಾಗಲಿದೆ ಎಂದು ಹೇಳಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 9 ಹೊಸ ವಿಶ್ವವಿದ್ಯಾಲಯ ಉದ್ಘಾಟಿಸಿದ ಸಿಎಂ

    9 ಹೊಸ ವಿಶ್ವವಿದ್ಯಾಲಯ ಉದ್ಘಾಟಿಸಿದ ಸಿಎಂ

    – ವಿಶ್ವವಿದ್ಯಾಲಯಗಳು ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು: ಬೊಮ್ಮಾಯಿ

    ಬೆಂಗಳೂರು: ಮಂಗಳವಾರ ಆರಂಭಿಸಿರುವ ಎಲ್ಲ ವಿಶ್ವವಿದ್ಯಾಲಯಗಳು (University) ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ಜ್ಞಾನಜ್ಯೋತಿ ಸಭಾಂಗಣದಲ್ಲಿ ಒಂಭತ್ತು ನೂತನ ವಿಶ್ವವಿದ್ಯಾಲಯಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಶಿಕ್ಷಣ ಬೆಳವಣಿಗೆ ಆಗಬೇಕು. ಈ ರೀತಿಯ ವಿಶ್ವವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ. ಮುಂದಿನ ದಿನಗಳಲ್ಲಿ ಎಲ್ಲರೂ ಕರ್ನಾಟಕದ ಮಾದರಿ ಅಳವಡಿಸಿಕೊಳ್ಳುವಂತಾಗಬೇಕು ಎಂದರು.

    ದೇಶದಲ್ಲಿ ಉನ್ನತ ಶಿಕ್ಷಣ ಅಂದರೆ ಐಐಟಿ. ಅದಕ್ಕೆ ಸಿಇಟಿ ಮೂಲಕ ಆಯ್ಕೆ ಆಗಬೇಕು. ನಮ್ಮ ಮಕ್ಕಳೂ ಐಐಟಿ ಮಾದರಿಯಲ್ಲಿ ಶಿಕ್ಷಣ ಪಡೆಯಬೇಕು ಎಂದು ಕೆಐಟಿ ಸ್ಥಾಪನೆ ಮಾಡಲಾಗಿದೆ. ಮುಂದಿನ 5 ವರ್ಷಗಳಲ್ಲಿ ಎಲ್ಲಾ ಸಂಸ್ಥೆಗಳು ಐಐಟಿ ಮಾದರಿಯಲ್ಲಿ ಇರಲಿವೆ. ಐಐಟಿ ಹುಡುಕಿಕೊಂಡು ಹೋಗುವ ಬದಲು ಇಲ್ಲಿಯೇ ಐಐಟಿ ಸೃಷ್ಟಿಸುತ್ತಿದ್ದೇವೆ. ಜಗತ್ತಿನ ಉನ್ನತ ವಿವಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

    ವಿದ್ಯಾರ್ಥಿಗಳು ನಾಡಿನ ಭವಿಷ್ಯ. ಈಗ 21ನೇ ಶತಮಾನ ಜ್ಞಾನದ ಶತಮಾನ. ಮುಂದಿನ ದಿನಗಳಲ್ಲಿ ಭಾರತ ವಿಶ್ವ ಗುರುವಾಗಲಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಪಾಕಿಸ್ತಾನದ ಪ್ರಜೆಗಳು ಮೋದಿಯಂಥ ಪ್ರಧಾನಿ ಬೇಕು ಅಂತ ಹೇಳುತ್ತಿದ್ದಾರೆ. ಚೀನಾ ಕೂಡ ಭಾರತ ಕೊರೊನಾ ನಿಯಂತ್ರಣ ಮಾಡಿದ್ದನ್ನು ಮೆಚ್ಚಿಕೊಂಡಿದೆ ಎಂದರು. ಶಿಕ್ಷಣ ಸಂಸ್ಥೆ ಅಂದರೆ ಪಾವಿತ್ರ್ಯತೆ. ಸಂಸ್ಥೆಗಳು ಸರಸ್ವತಿಯ ವಾಹನ ಪರಮಹಂಸ ಕೂಡ ಪವಿತ್ರವಾಗಿದ್ದು, ವಿದ್ಯಾರ್ಥಿಗಳು ಅಷ್ಟೇ ಎತ್ತರಕ್ಕೆ ಬೆಳೆಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಆಕ್ರಮಣ ಮತ್ತಷ್ಟು ಕಠಿಣವಾಗಲಿದೆ, ಎದುರಿಸಲು ನಾವು ಸಿದ್ಧವಿರಬೇಕು: ಸಂಸದರಿಗೆ ಮೋದಿ ಕರೆ

    9 ನೂತನ ವಿವಿಗಳು: ಚಾಮರಾಜನಗರ ವಿವಿ, ಹಾಸನ ವಿವಿ, ಮಂಡ್ಯ ವಿವಿ, ಬೀದರ್ ವಿವಿ, ಕೊಡಗು ವಿವಿ, ಕೊಪ್ಪಳ ವಿವಿ, ಬಾಗಲಕೋಟೆ ವಿವಿ, ಹಾವೇರಿ ವಿವಿ, ರಾಯಚೂರು ವಿವಿಗಳಾಗಿವೆ.

    ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವ ಮುರುಗೇಶ್ ನಿರಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಉಪಸ್ಥಿತರಿದ್ದರು. ಇದನ್ನೂ ಓದಿ: ಬಂಜಾರಾ, ಕೊರಚ, ಕೊರಮ, ಬೋವಿ ಶಾಶ್ವತವಾಗಿ ಎಸ್‌ಸಿ ಪಟ್ಟಿಯಲ್ಲಿರುತ್ತದೆ- ಪಿ.ರಾಜೀವ್