Tag: illegal

  • ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ – 2.62 ಲಕ್ಷ ಮೌಲ್ಯದ ಅಕ್ಕಿ ಜಪ್ತಿ, ಓರ್ವ ಅರೆಸ್ಟ್

    ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ – 2.62 ಲಕ್ಷ ಮೌಲ್ಯದ ಅಕ್ಕಿ ಜಪ್ತಿ, ಓರ್ವ ಅರೆಸ್ಟ್

    -ಗುರುಮಠಕಲ್ ಪ್ರಕರಣದ ಬೆನ್ನಲ್ಲೇ ಶಹಾಪುರದಲ್ಲೂ ಅಕ್ರಮ ಮಾರಾಟ ಜಾಲ ಪತ್ತೆ

    ಯಾದಗಿರಿ: ಜಿಲ್ಲೆಯ ಶಹಾಪುರ (Shahapura) ತಾಲೂಕಿನಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆಯೊಂದು ಬೆಳಕಿಗೆ ಬಂದಿದೆ. ಪೊಲೀಸರು 2.62 ಲಕ್ಷ ರೂ. ಮೌಲ್ಯದ ಅಕ್ಕಿ, ಗೂಡ್ಸ್ ವಾಹನವೊಂದನ್ನು ಸೀಜ್ ಮಾಡಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

    ಆರೋಪಿ ರಾಜು ಪವಾರ್ ಎಂಬಾತನನ್ನು ಬಂಧಿಸಿದ್ದು, ಇನ್ನೋರ್ವ ಆರೋಪಿ ದೇವರಾಜ ರಾಠೋಡ್ ಪರಾರಿಯಾಗಿದ್ದಾನೆ.ಇದನ್ನೂ ಓದಿ: ಬಂಗ್ಲೆಗುಡ್ಡದಲ್ಲಿ ಸಿಕ್ಕ ಐದು ತಲೆ ಬುರುಡೆ, ಮೂಳೆಗಳು ಪುರುಷರದ್ದು – ಇಂದು ಎರಡನೇ ದಿನದ ಶೋಧ ಕಾರ್ಯ

    ಯಾದಗಿರಿ (Yadagiri) ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಸ್ವಕ್ಷೇತ್ರದಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಶಹಾಪುರ ತಾಲೂಕಿನ ಗೋಗಿ ಗ್ರಾಮದ ಹೊರವಲಯದಲ್ಲಿ ಪಡಿತರ ಕಾರ್ಡ್‌ದಾರರಿಂದ ಅಕ್ಕಿ ಖರೀದಿಸಿ ಸಾಗಾಟ ಮಾಡಲಾಗ್ತಿತ್ತು. ಈ ವೇಳೆ ಆಹಾರ ನಿರೀಕ್ಷಕ ಬಸವರಾಜ್ ಹಾಗೂ ಪಿಎಸ್‌ಐ ದೇವಿಂದ್ರರೆಡ್ಡಿ ಅವರು ದಾಳಿ ನಡೆಸಿದ್ದಾರೆ. ತೆಲಂಗಾಣ ಪಾಸಿಂಗ್ ಹೊಂದಿರುವ ಗೂಡ್ಸ್ ವಾಹನದಲ್ಲಿ 2.62 ಲಕ್ಷ ರೂ. ಮೌಲ್ಯದ 158 ಚೀಲಗಳಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ.

    ಪೊಲೀಸರು ಅಕ್ಕಿ ಸಹಿತ ಗೂಡ್ಸ್ ವಾಹನವನ್ನು ಜಪ್ತಿ ಮಾಡಿಕೊಂಡಿದ್ದು, ಗೋಗಿ ಠಾಣೆಯಲ್ಲಿ ಈ ಬಗ್ಗೆ ಕೇಸ್ ದಾಖಲಾಗಿದೆ. ಇನ್ನೂ ಚಾಮನಾಳ ತಾಂಡಾದ ವ್ಯಾಪ್ತಿಯ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿರುವ ಪಡಿತರ ಅಕ್ಕಿ ಖರೀದಿ ಮಾಡಿ, ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡಲಾಗ್ತಿತ್ತು ಎಂದು ತಿಳಿದುಬಂದಿದೆ.

    ಇತ್ತೀಚಿಗೆ ಗುರುಮಠಕಲ್‌ನಲ್ಲಿಯೂ ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆಯಾಗಿತ್ತು. ಅಲ್ಲದೇ ವಿದೇಶಕ್ಕೆ ರಫ್ತು ಮಾಡಲಾಗುತ್ತಿದೆ ಎಂದು ತಿಳಿದುಬಂದಿತ್ತು. ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದರೂ ಕೂಡ ಜಿಲ್ಲೆಯಲ್ಲಿ ಅಕ್ಕಿ ಸಾಗಾಟ ದಂಧೆ ನಿಲ್ಲುತ್ತಿಲ್ಲ ಎನ್ನುವ ಪ್ರಶ್ನೆ ಮೂಡಿದೆ.ಇದನ್ನೂ ಓದಿ: ಯಾದಗಿರಿ | ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ – 1.17 ಕೋಟಿ ಮೌಲ್ಯದ 4,108 ಕ್ವಿಂಟಾಲ್ ಸೀಜ್

  • ಕೆಕೆಆರ್‌ಟಿಸಿ ಪರೀಕ್ಷೆಯಲ್ಲೂ ಅಕ್ರಮ – ತೂಕ ಹೆಚ್ಚಳಕ್ಕೆ ಒಳ ಉಡುಪಿನಲ್ಲಿ ಕಬ್ಬಿಣದ ಕಲ್ಲಿಟ್ಟುಕೊಂಡ ಅಭ್ಯರ್ಥಿಗಳು

    ಕೆಕೆಆರ್‌ಟಿಸಿ ಪರೀಕ್ಷೆಯಲ್ಲೂ ಅಕ್ರಮ – ತೂಕ ಹೆಚ್ಚಳಕ್ಕೆ ಒಳ ಉಡುಪಿನಲ್ಲಿ ಕಬ್ಬಿಣದ ಕಲ್ಲಿಟ್ಟುಕೊಂಡ ಅಭ್ಯರ್ಥಿಗಳು

    ಕಲಬುರಗಿ: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮ (PSI Recruitment Scam) ಪ್ರಕರಣ ಮರೆಮಾಚುವ ಮುನ್ನವೇ ಕಲಬುರಗಿಯಲ್ಲಿ (Kalaburagi) ಮತ್ತೊಂದು ನೇಮಕಾತಿಯಲ್ಲಿ ಅಭ್ಯರ್ಥಿಗಳು ಅಕ್ರಮವೆಸಗಿರುವುದು ಪತ್ತೆಯಾಗಿದೆ.

    ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (KKRTC) ಡ್ರೈವರ್ ಕಂ ಕಂಡಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಹುದ್ದೆಗಿಟ್ಟಿಸಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿದ್ದಾರೆ. ತಮ್ಮ ತೂಕ ಹೆಚ್ಚಳಕ್ಕೆ ಒಳ ಉಡುಪುಗಳಲ್ಲಿ ಕಬ್ಬಿಣದ ರಾಡ್, ಕಲ್ಲು ಕಟ್ಟಿಕೊಂಡು ಪರೀಕ್ಷೆಗೆ ಹಾಜರಾಗಿರುವುದು ನೇಮಕಾತಿಯ ಜಾಗೃತ ದಳದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಡಿಕೆಶಿಗೆ ಬಿಗ್ ರಿಲೀಫ್

    ಕೆಕೆಆರ್‌ಟಿಸಿಯಲ್ಲಿ ಚಾಲಕ ಕಂ ಕಂಡಕ್ಟರ್ ಹುದ್ದೆಗೆ ಆಯ್ಕೆಯಾಗಬೇಕಾದರೆ ಅಭ್ಯರ್ಥಿ 55 ಕೆಜಿ ತೂಕ ಇರುವುದು ಕಡ್ಡಾಯವಾಗಿದೆ. ಆದರೆ ಕಡಿಮೆ ತೂಕ ಇರುವ ಅಭ್ಯರ್ಥಿ ತೂಕ ಹೆಚ್ಚಿಸಿಕೊಳ್ಳಲು ವಾಮಮಾರ್ಗ ಅನುಸರಿಸಿ, ಒಳ ಉಡುಪಿನಲ್ಲಿ ಭಾರವಾದ ಕಬ್ಬಿಣದ ರಾಡ್‌ಗಳು, ತಕ್ಕಡಿಯಲ್ಲಿ ಬಳಸುವ ಕಬ್ಬಿಣದ ಕಲ್ಲುಗಳನ್ನು ಕಟ್ಟಿಕೊಂಡು ದೇಹದಾರ್ಢ್ಯ ಪರೀಕ್ಷೆಗೆ ಹಾಜರಾಗಿದ್ದಾರೆ.

    ಇದನ್ನು ದೇಹದಾರ್ಢ್ಯ ಪರೀಕ್ಷೆ ಸಂದರ್ಭದಲ್ಲಿ ಜಾಗೃತ ದಳದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. 5-10 ಕೆಜಿ ತೂಕದ ಕಲ್ಲುಗಳನ್ನು ಅಭ್ಯರ್ಥಿಗಳು ಒಳ ಉಡುಪಿನಲ್ಲಿ ಹಲವು ಗಂಟೆಗಳ ಕಾಲ ಇಟ್ಟುಕೊಂಡಿರುವುದೇ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ಫೆ.14 ಗೋವುಗಳನ್ನು ಅಪ್ಪಿಕೊಳ್ಳುವ ದಿನ ರದ್ದು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟ ರೋಹಿತ್ ವಿರುದ್ಧ ಕೊಲೆ ಬೆದರಿಕೆ ಸೇರಿದಂತೆ ಹಲವು ಆರೋಪ

    ನಟ ರೋಹಿತ್ ವಿರುದ್ಧ ಕೊಲೆ ಬೆದರಿಕೆ ಸೇರಿದಂತೆ ಹಲವು ಆರೋಪ

    ಹಿಂದಿಯ ಯೇ ರಿಶ್ತಾ ಕ್ಯಾ ಕೆಹಲಾತಾ ಹೈ ಧಾರಾವಾಹಿಯ ಖ್ಯಾತ ನಟ ರೋಹಿತ್ ಸೇಠಿಯಾ ಮೇಲೆ ಕೊಲೆ ಬೆದರಿಕೆಗೆ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿದೆ. ಹಿಂದಿ ಧಾರಾವಾಹಿ ಲೋಕದ ಜನಪ್ರಿಯ ನಟರಾಗಿರುವ ರೋಹಿತ್, ಅದೇ ಧಾರಾವಾಹಿಯಲ್ಲಿ ನಟಿಸುತ್ತಿರುವ ನಿಶಾ ರಾವಲ್ ಒಟ್ಟಿಗೆ ಅಕ್ರಮ ಸಂಬಂಧದಲ್ಲಿ ಇದ್ದಾರೆ ಎಂದು ಸ್ವತಃ ನಿಶಾ ಪತಿಯೇ ಆರೋಪ ಮಾಡಿದ್ದಾರೆ. ಅಲ್ಲದೇ ರೋಹಿತ್ ವಿರುದ್ಧ ದೂರು ದಾಖಲಿಸಿದ್ದಾರೆ.

    ತನ್ನ ಪತ್ನಿಯೊಂದಿಗೆ ರೋಹಿತ್ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆ ಎಂದು ಸುದ್ದಿಗೋಷ್ಠಿ ನಡೆಸಿ, ಪತ್ನಿ ಮತ್ತು ರೋಹಿತ್ ವಿರುದ್ಧ ಆರೋಪಗಳ ಮಳೆಯನ್ನೇ ಸುರಿಸಿದ್ದಾರೆ. ಅಲ್ಲದೇ, ತನ್ನ ಸ್ವಂತ ಮನೆಯಲ್ಲೇ ತನ್ನೊಂದಿಗೆ ನಟಿಸುತ್ತಿರುವ ರೋಹಿತ್ ಜೊತೆ ಇರುತ್ತಾಳೆ. ನನ್ನನ್ನೇ ಮನೆ ಒಳಗೆ ಬಿಟ್ಟುಕೊಳ್ಳುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ:ಲಂಡನ್ ಸ್ಟುಡಿಯೋದಲ್ಲಿ ಕನ್ನಡ ಚಿತ್ರಕ್ಕೆ ಹಿನ್ನೆಲೆ ಸಂಗೀತ

    ನನ್ನನ್ನು ನಿಶಾ ಮದುವೆ ಆಗಿದ್ದರೂ, ತಾನು ಸಿಂಗಲ್ ಮದರ್ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಕಳೆದ ಐದಾರು ತಿಂಗಳಿಂದ ನನ್ನನ್ನು ಮನೆಗೆ ಸೇರಿಸಿಕೊಳ್ಳುತ್ತಿಲ್ಲ. ನನ್ನ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ. ನಿಶಾ ಮತ್ತು ರೋಹಿತ್ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಗುಂಡಿಟ್ಟು ಕೊಲ್ಲುವುದಾಗಿ ಪದೇ ಪದೇ ಹೇಳುತ್ತಾರೆ. ಹಾಗಾಗಿ ಸಾಕ್ಷಿ ಸಮೇತ ನಾನು ನ್ಯಾಯಾಲಯಕ್ಕೆ ಹೋಗುವೆ ಎಂದಿದ್ದಾರೆ ನಿಶಾ ಪತಿ.

    Live Tv
    [brid partner=56869869 player=32851 video=960834 autoplay=true]

  • ಪಿಎಸ್‍ಐ ನೇಮಕಾತಿ ಅಕ್ರಮ ವಿಚಾರ – 7ನೇ ರ‍್ಯಾಂಕ್ ಪಡೆದಿದ್ದ ಕಲಬುರಗಿ ಅಭ್ಯರ್ಥಿ ಸಿಐಡಿ ವಶಕ್ಕೆ

    ಪಿಎಸ್‍ಐ ನೇಮಕಾತಿ ಅಕ್ರಮ ವಿಚಾರ – 7ನೇ ರ‍್ಯಾಂಕ್ ಪಡೆದಿದ್ದ ಕಲಬುರಗಿ ಅಭ್ಯರ್ಥಿ ಸಿಐಡಿ ವಶಕ್ಕೆ

    ಕಲಬುರಗಿ: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್‍ಐ) ನೇಮಕಾತಿಯಲ್ಲಿ ಭಾರೀ ಅಕ್ರಮದ ಹಿನ್ನೆಲೆ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು, ಸೇಡಂ ಪಟ್ಟಣದ ಅಭ್ಯರ್ಥಿಯೊಬ್ಬನನ್ನು ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    545 ಪಿಎಸ್‍ಐ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದ ಹಿನ್ನೆಲೆ ಸಿಐಡಿ ತನಿಖೆ ನಡೆದಿದೆ. ಜಿಲ್ಲೆಯ ಠಾಣೆಯೊಂದರ ಎಎಸ್‍ಐ ಪುತ್ರ ವೀರೇಶ್ ಎಂಬಾತನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಮೂರು ಬಾರಿ ಪಿಎಸ್‍ಐ ಎಕ್ಸಾಂ ಬರೆದಿದ್ದ ವಿರೇಶ್, ಮೂರು ಬಾರಿಯೂ ಅರ್ಹತೆ ಪಡೆಯುವಲ್ಲಿ ವಿಫಲನಾಗಿದ್ದ. ವಯಸ್ಸು ಮೀರಿ ಹೋಗುತ್ತೆ ಅನ್ನೋದಕ್ಕೆ ಅಕ್ರಮವಾಗಿ ನೇಮಕಾತಿ ಪಡೆಯಲು ವಿರೇಶ್ ಮುಂದಾಗಿದ್ದ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿಯವರು ಗೊಂದಲ ಮೂಡಿಸುವ ಕೆಲಸ ಮಾಡಬಾರದು: ಬಿಎಸ್‍ವೈ

    ಕಳೆದ ವರ್ಷ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ವಿರೇಶ್, ಕೇವಲ 20 ಪ್ರಶ್ನೆಗಳಿಗೆ ಉತ್ತರ ಬರೆದಿದ್ದ, ನಂತರ ಅಕ್ರಮದಿಂದ ಓಎಮ್‍ಆರ್ (ಆಪ್ಟಿಕಲ್ ಮಾರ್ಕ್ಸ್‌ ರೆಕಗ್ನಿಷನ್) ಸೀಟ್ ತರಸಿಕೊಂಡು ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿ 121 ಮಾರ್ಕ್ ಪಡೆಯುವ ಮೂಲಕ ಕಲ್ಯಾಣ ಕರ್ನಾಟಕ ಮಿಸಲು ಅನ್ವಯ 7 ನೇ ರ‍್ಯಾಂಕ್ ಪಡೆದು ತೇರ್ಗಡೆ ಹೊಂದಿದ್ದ ಎನ್ನಲಾಗಿದೆ. ಅನುಮಾನಗೊಂಡ ಸಿಐಡಿ ಬೆಂಗಳೂರಿನಿಂದ ನೇರವಾಗಿ ಬಂದು ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವಿರೇಶ‌ನನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಶಾಸ್ತ್ರದ ಪ್ರಕಾರ ವಿಶ್ವಕರ್ಮ ಜನಾಂಗದವರೇ ದೇವರ ಪ್ರತಿಮೆ ಕೆತ್ತಬೇಕು: ಡಾ. ಜ್ಞಾನನಂದ

    ವಿರೇಶ್ ಜೊತೆಗೆ ಇನ್ನೂ ಹಲವು ವಿದ್ಯಾರ್ಥಿಗಳು ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆ ಇದೆ. ಸಿಐಡಿ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ಶೋಧ ಕಾರ್ಯ ಆರಂಭಿಸಿದ್ದಾರೆ. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆ ಇದೆ. ಅಕ್ರಮ ನೇಮಕಾತಿಯಲ್ಲಿ ಹಲವು ಪೊಲೀಸ್ ಅಧಿಕಾರಿಗಳು, ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಸೇರಿದಂತೆ ಹಲವರು ಭಾಗಿಯಾಗಿರುವ ಶಂಕೆ ಕೂಡಾ ಇದೆ.

  • ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 34 ಲಕ್ಷ ಮೌಲ್ಯದ ಗಾಂಜಾ ಜಪ್ತಿ

    ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 34 ಲಕ್ಷ ಮೌಲ್ಯದ ಗಾಂಜಾ ಜಪ್ತಿ

    ಬೀದರ್: ಖಚಿತ ಮಾಹಿತಿ ಮೇರೆಗೆ ಸಿನಿಮಿಯಾ ರೀತಿಯಲ್ಲಿ ಕಾರು ಅಡ್ಡಗಟ್ಟಿ, ಬೀದರ್ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ. 34 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಕ್ರಾಸ್ ಬಳಿ ನಡೆದಿದೆ.

    ಬೀದರ್ ಕಡೆಯಿಂದ ಮಹಾರಾಷ್ಟ್ರಕ್ಕೆ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಲಗುತ್ತಿತ್ತು. ಈ ವೇಳೆ 34 ಲಕ್ಷ ಮೌಲ್ಯದ ಬರೋಬ್ಬರಿ 342 ಕೆಜಿ ಗಾಂಜಾವನ್ನು ಬೀದರ್ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪುರುಷರ ಟಾಯ್ಲೆಟ್‍ಗೆ ನುಗ್ಗಿದ್ದ ದೀಪಿಕಾ ಪಡುಕೋಣೆ, ಆಲಿಯಾ ಭಟ್!

    ಒಂದು ಕಾರಿನಲ್ಲಿ ನಾಲ್ಕು ಜನ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಮೂರು ಜನ ಆರೋಪಿ ಪರಾರಿಯಾಗಿದ್ದು ಒಬ್ಬ ಆರೋಪಿಯನ್ನು ಮಾತ್ರ ಬಂಧಿಸುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ. ಎಸ್‍ಪಿ ಡೆಕ್ಕಾ ಕಿಶೋರ್ ಬಾಬು ಮಾರ್ಗದರ್ಶನದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ. ಈ  ಬಗ್ಗೆ ಹುಮ್ನಾಬಾದ್ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಾಲಕಿಗೆ ಲವ್ ಲೆಟರ್ ಕೊಟ್ಟ 6ನೇ ತರಗತಿ ವಿದ್ಯಾರ್ಥಿ- ಬಾಸುಂಡೆ ಬರುವಂತೆ ಬಾರಿಸಿದ ಶಿಕ್ಷಕಿ!

  • ರಾಯಚೂರಿನಲ್ಲಿ ರಾತ್ರೋರಾತ್ರಿ ನಡೆಯುತ್ತೆ ಅಕ್ರಮ ಮರಳು ಸಾಗಾಟ

    ರಾಯಚೂರಿನಲ್ಲಿ ರಾತ್ರೋರಾತ್ರಿ ನಡೆಯುತ್ತೆ ಅಕ್ರಮ ಮರಳು ಸಾಗಾಟ

    ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಿತಿ ಮೀರಿದೆ. ಅಕ್ರಮ ಮರಳು ಸಾಗಾಟ ರಾತ್ರಿ ಹೊತ್ತು ನಡೆಯುತ್ತಿರುವುದು ತಹಶೀಲ್ದಾರ್ ದಾಳಿಯಿಂದ ತಿಳಿದುಬಂದಿದೆ.

    ಟ್ರ್ಯಾಕ್ಟರ್,ಟಿಪ್ಪರ್‌ಗಳಲ್ಲಿ ಎಗ್ಗಿಲ್ಲದೆ ಅಕ್ರಮ ಮರಳುಗಾರಿಕೆ ನಡೆಯುತ್ತದೆ. ಅಕ್ರಮ ಮರಳು ಸಾಗಣೆ ಹಿನ್ನೆಲೆ ಮಸ್ಕಿ ತಹಶೀಲ್ದಾರ್ ಆರ್ ಕವಿತಾ ದಾಳಿ ನಡೆಸಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗಳನ್ನ ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ:  ಬಾಲ್ಯ ವಿವಾಹ- ಬಾಲಕಿಯ ಪತಿ, ಪೋಷಕರ ವಿರುದ್ಧ ದೂರು ದಾಖಲು

    ಮಸ್ಕಿ ತಾಲೂಕಿನ ಗುಡದೂರು, ಹಂಪನಾಳ ಗ್ರಾಮದಲ್ಲಿ ತಹಶೀಲ್ದಾರ್ ನೇತೃತ್ವದ ತಂಡ ರೇಡ್ ಮಾಡಿದೆ. ಅಕ್ರಮವಾಗಿ ಮರಳು ಸಾಗಿಸಲು ಸಿದ್ಧವಿದ್ದ ಟ್ರ್ಯಾಕ್ಟರ್‌ಗಳ ಮೇಲೆ ದಾಳಿ ಮಾಡಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ನಿಷೇಧ ಇದ್ದರು, ಮರಳು ಸಾಗಾಟ ನಡೆದಿದೆ. ತಹಶೀಲ್ದಾರ್ ದಾಳಿ ಹಿನ್ನೆಲೆ ಸ್ಥಳಕ್ಕೆ ತುರುವಿಹಾಳ ಪೊಲೀಸರು ಭೇಟಿ ನೀಡಿದ್ದು, ಟ್ರ್ಯಾಕ್ಟರ್‌ಗಳನ್ನ ವಶಕ್ಕೆ ಪಡೆದಿದ್ದಾರೆ.

  • ಅಕ್ರಮವಾಗಿ  ಅಂಪೋಟೆರಿಸನ್ ಬಿ ಇಂಜೆಕ್ಷನ್ ಮಾರಾಟಕ್ಕೆ ಯತ್ನ- ಮೂವರ ಬಂಧನ

    ಅಕ್ರಮವಾಗಿ ಅಂಪೋಟೆರಿಸನ್ ಬಿ ಇಂಜೆಕ್ಷನ್ ಮಾರಾಟಕ್ಕೆ ಯತ್ನ- ಮೂವರ ಬಂಧನ

    ಹುಬ್ಬಳ್ಳಿ: ಕೊರೊನಾದಿಂದ ನಿತ್ಯ ನೂರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಜೀವ ರಕ್ಷಕ ಔಷಧಿಯನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿರುವ ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.

    ನಾಸೀರ್ ಹುಸೇನ್ ಅಕ್ತಾರ, ರಾಘವೇಂದ್ರ ಉಣಕಲ್, ನಾಗರಾಜ ನಡವಲಕೇರಿ ಬಂಧಿತ ಆರೋಪಿಗಳಾಗಿದ್ದಾರೆ. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸೇರಿದಂತೆ ಮೂವರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶ್ವಸಿಯಾಗಿದ್ದಾರೆ. ಇದನ್ನೂ ಓದಿ: ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಐಪಿಎಸ್ ಅಧಿಕಾರಿ

     

    ಬ್ಲ್ಯಾಕ್ ಫಂಗಸ್‍ಗೆ ಚಿಕಿತ್ಸೆ ನೀಡುವ ಅಂಪೋಟೆರಿಸನ್ ಬಿ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ಮೂವರನ್ನ ಸಿಸಿಬಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಿಮ್ಸ್ ಆಸ್ಪತ್ರೆಯ ವ್ಯಾಪ್ತಿಯ ಔಷಧಿ ಅಂಗಡಿಯಲ್ಲಿ ಅಕ್ರಮವಾಗಿ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 4 ವಯಲ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ:  ಇಂದು, ನಾಳೆ ರಾಜ್ಯಕ್ಕೆ ಭಾರೀ ಮಳೆ- ಹಲವೆಡೆ ಆರೆಂಜ್ ಅಲರ್ಟ್

    ನಾಸೀರ್ ಹುಸೇನ್ 7 ಸಾವಿರಕ್ಕೆ ಇಂಜೆಕ್ಷನ್ ತಂದು ಹೆಚ್ಚಿಗೆ ಹಣಕ್ಕೆ ಮಾರಾಟ ಮಾಡುತ್ತಿದ್ದನು. ಖಚಿತ ಮಾಹಿತಿ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಕ್ರಮವಾಗಿ ಪಡಿತರ ದವಸ,ಧಾನ್ಯ ಮಾರಾಟ- ಸಿಕ್ಕಿಬಿದ್ದ ಖದೀಮರು

    ಅಕ್ರಮವಾಗಿ ಪಡಿತರ ದವಸ,ಧಾನ್ಯ ಮಾರಾಟ- ಸಿಕ್ಕಿಬಿದ್ದ ಖದೀಮರು

    ವಿಜಯಪುರ: ನ್ಯಾಯಬೆಲೆ ಅಂಗಡಿಗೆ ಬಂದ ಅಕ್ಕಿ-ಬೆಳೆ ಕಾಳುಗಳನ್ನ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಕ್ರಮ ದಂಧೆ ಇದೀಗ ಬಯಲಾಗಿದೆ.

    ವಿಜಯಪುರ ಜಿಲ್ಲೆಯ ಅರಕೇರಿ ಗ್ರಾಮದ ಪಿಕೆಪಿಎಸ್ ಸೊಸೈಟಿಯ ನ್ಯಾಯಬೆಲೆ ಅಂಗಡಿಯ ಕ್ಲಾರ್ಕ್ ಹಣಮಂತಪ್ಪ ತಿವಾರಿ ಖುದ್ದು ಕಾಳು ಬೇಳೆಗಳನ್ನ ಅಕ್ರಮ ಸಾಗಾಟ ಮಾಡುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ವಿಜಯಪುರ ಮೂಲದ ಹೊಟೇಲ್ ಮಾಲಿಕನೊಬ್ಬನಿಗೆ ಕಾಳು ಬೇಳೆ, ಅಕ್ಕಿ ಮಾರಾಟ ಮಾಡಿ ಸಾಗಿಸುವಾಗ ರೆಡ್ ಹ್ಯಾಂಡ್ ಆಗಿ ಗ್ರಾಮಸ್ಥರು ಇಬ್ಬರನ್ನು ಹಿಡದಿದ್ದಾರೆ. ಬೆಳೆಕಾಳು – 70 ಕೆ.ಜಿ, ಅಕ್ಕಿ 50 ಕೆ.ಜಿ ಸೇರಿದಂತೆ ದವಸಧಾನ್ಯಗಳನ್ನ ಮಾರಿಕೊಳ್ಳುವಾಗ ಖದೀಮರು ಸಿಕ್ಕಿಬಿದ್ದಾರೆ.

    ಲಾಕ್‍ಡೌನನಿಂದ ಒಪ್ಪತ್ತು ಊಟಕ್ಕೆ ಬಡ ಜನರು ಪರಿತಪಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಬಡವರ ಹೊಟ್ಟೆ ಸೇರಬೇಕಿದ್ದ ಅಕ್ಕಿ-ಬೆಳೆ ಖದೀಮರ ಪಾಲಾಗುತ್ತಿದೆ.

  • ಡಿಸೈನ್ ಮಾಡಲಾದ ಒಳಉಡುಪಿನಲ್ಲಿ ಚಿನ್ನ ಸಾಗಾಟ ಮಾಡ್ತಿದ್ದ ವ್ಯಕ್ತಿ ಅರೆಸ್ಟ್

    ಡಿಸೈನ್ ಮಾಡಲಾದ ಒಳಉಡುಪಿನಲ್ಲಿ ಚಿನ್ನ ಸಾಗಾಟ ಮಾಡ್ತಿದ್ದ ವ್ಯಕ್ತಿ ಅರೆಸ್ಟ್

    – 92 ಲಕ್ಷ ಮೌಲ್ಯದ ಚಿನ್ನ ವಶ

    ಮಂಗಳೂರು: ಒಳ ಉಡುಪಿನಲ್ಲಿ ಚಿನ್ನ ಇಟ್ಟು ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

    ಬಂಧಿತ ಆರೋಪಿಯನ್ನು ಉಳ್ಳಾಲ ಮೂಲದ ಮಹಮ್ಮದ್ ಆಶಿಫ್ ಎಂದು ಗುರುತಿಸಲಾಗಿದೆ. ಆತನಿಂದ ಬರೋಬ್ಬರಿ 92 ಲಕ್ಷದ ಮೌಲ್ಯದ ಚಿನ್ನ ವಶಪಡಿಸಲಾಗಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ವೇಳೆ ಆಶಿಫ್ ಬಲೆಗೆ ಬಿದ್ದಿದ್ದಾನೆ.

    ದುಬೈನಿಂದ ಬಂದ ಏರ್ ಇಂಡಿಯಾ IX384 ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದಿದ್ದಾನೆ. ಆಶಿಫ್ ಡಿಸೈನ್ ಮಾಡಲಾದ ಒಳಉಡುಪು, ಪ್ಯಾಂಟ್ ಮತ್ತು ಮೊಣಕಾಲು ಬ್ಯಾಂಡ್‍ನಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದನು. ಚಿನ್ನದ ಪೌಡರನ್ನು ಗಮ್ ಆಗಿ ಪರಿವರ್ತಿಸಿ ಡಿಸೈನ್ ಮಾಡಿ ತರುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾನೆ. ಈತನಲ್ಲಿ ಒಟ್ಟು 1.993 ಕೆಜಿ ತೂಕದ 92.27 ಲಕ್ಷ ಮೌಲ್ಯದ ಚಿನ್ನ ಪತ್ತೆಯಾಗಿದೆ.

    ಆರೋಪಿಯನ್ನು ಬಜಪೆ ಪೊಲೀಸರು ಕಸ್ಟಮ್ ಅಧಿಕಾರಿಗಳು ಹಸ್ತಾಂತರಿಸಿದ್ದು, ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಕ್ರಮ ಮದ್ಯ ಮಾರಾಟ ನಿಲ್ಲಿಸಿ – ಮಹಿಳೆಯರಿಂದ ಅನಿರ್ಧಿಷ್ಟಾವಧಿ ಹೋರಾಟ

    ಅಕ್ರಮ ಮದ್ಯ ಮಾರಾಟ ನಿಲ್ಲಿಸಿ – ಮಹಿಳೆಯರಿಂದ ಅನಿರ್ಧಿಷ್ಟಾವಧಿ ಹೋರಾಟ

    – ಸಿಎಂ ಜೊತೆ ಚರ್ಚೆಗೆ ಸಮಯ ನಿಗದಿ ಮಾಡಲು ಮಹಿಳೆಯರ ಪಟ್ಟು

    ರಾಯಚೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ನಿಷೇಧಕ್ಕೆ ಆಗ್ರಹಿಸಿ ನಗರದಲ್ಲಿ ಮಹಿಳೆಯರು ನಡೆಸಿರುವ ಅನಿರ್ದಿಷ್ಟಾವಧಿ ಹೋರಾಟ ಮುಂದುವರೆದಿದೆ.

    ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಹೋರಾಟ ನಡೆಸಿರುವ ಮಹಿಳೆಯರು ಜಿಲ್ಲಾ ಕ್ರೀಡಾಂಗಣ ಬಳಿಯ ಗಾಂಧಿ ಪ್ರತಿಮೆ ಮುಂದೆ ಹೋರಾಟ ಮುಂದುವರೆಸಿದ್ದಾರೆ. ಮಹಿಳೆಯರ ಜೊತೆಗೆ ಬಂದ ಅವರ ಚಿಕ್ಕಪುಟ್ಟ ಮಕ್ಕಳು ಸಹ ಹೋರಾಟದಲ್ಲಿ ಜೊತೆಯಾಗಿದ್ದಾರೆ.

    ಮಹಿಳೆಯರ ಹೋರಾಟಕ್ಕೆ ಮಣಿದು ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಈಗಾಗಲೇ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತಿದೆ. ನಿರಂತರವಾಗಿ ದಾಳಿ ನಡೆಸಿ ಅಕ್ರಮ ತಡೆಯಲು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ ಹೋರಾಟಗಾರರು ಜಿಲ್ಲಾಧಿಕಾರಿಗಳ ಭೇಟಿ ಸಮಾಧಾನಗೊಳ್ಳದೆ ಹೋರಾಟ ಮುಂದುವರೆಸಿದ್ದಾರೆ. ಮದ್ಯ ನಿಷೇಧ ಕುರಿತು ಚರ್ಚೆಗೆ ಮುಖ್ಯಮಂತ್ರಿ ಸಮಯ ನಿಗದಿ ಮಾಡಲು ಆಗ್ರಹಿಸಿ ಹೋರಾಟವನ್ನ ಮಹಿಳೆಯರು ಮುಂದುವರೆಸಿದ್ದಾರೆ.

    ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ನೂರಾರು ಮಹಿಳೆಯರು ಭಾಗವಹಿಸಿದ್ದಾರೆ. ಬೇಡಿಕೆಗೆ ಸ್ಪಂದನೆ ಸಿಗುವವರೆಗೂ ಅನಿರ್ಧಿಷ್ಟಾವಧಿ ಹೋರಾಟ ನಡೆಸುವುದಾಗಿ ಮಹಿಳೆಯರು ಎಚ್ಚರಿಸಿದ್ದಾರೆ. ಅಕ್ರಮ ಮದ್ಯ ಮಾರಾಟ ತಡೆದು ಉಚ್ಚ ನ್ಯಾಯಾಲಯದ ತೀರ್ಪನ್ನು ಪಾಲಿಸುವಂತೆ ಆಗ್ರಹಿಸಿದ್ದಾರೆ.

    ನಿನ್ನೆ ಬೆಳಿಗ್ಗೆಯಿಂದ ತಡರಾತ್ರಿವರೆಗೂ ಹೋರಾಟ ನಡೆಸಿದ ಮಹಿಳೆಯರು ರಾತ್ರಿ ವೇಳೆ ಮಲಗಲು ಸ್ಥಳವಿಲ್ಲದೆ ಪರದಾಡಿದ್ದಾರೆ. ಜಿಲ್ಲಾ ಕ್ರೀಡಾಂಗಣ ಬಳಿಯ ಗಾಂಧಿ ಪ್ರತಿಮೆ ಪಕ್ಕದಲ್ಲೇ ಮಲಗಲು ಅವಕಾಶ ಕೊಡುವಂತೆ ಪೊಲೀಸರಿಗೆ ಒತ್ತಾಯಿಸಿದರು. ಪೊಲೀಸರು ಹಾಗೂ ಹೋರಾಟ ನಿರತ ಮಹಿಳೆಯರ ಜೊತೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಕೊನೆಗೆ ಮಹಿಳೆಯರ ಕಷ್ಟಕ್ಕೆ ಸ್ಪಂದಿಸಿದ ಪೊಲೀಸರು ಗಾಂಧಿ ಪ್ರತಿಮೆ ಬಳಿ ಮಲಗಲು ಅವಕಾಶ ನೀಡಿದರು. ಅನಿರ್ಧಿಷ್ಟಾವಧಿ ಹೋರಾಟಕ್ಕೆ ಮುಂದಾಗಿರುವ ಮಹಿಳೆಯರು ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.