Tag: illegal property

  • ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಬೆಳ್ಳಂಬೆಳಗ್ಗೆ ರಾಜ್ಯದ 6 ಕಡೆ ದಾಳಿ

    ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಬೆಳ್ಳಂಬೆಳಗ್ಗೆ ರಾಜ್ಯದ 6 ಕಡೆ ದಾಳಿ

    – ಬೆಂಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ದಾಳಿ

    ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta) ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ 4 ಜಿಲ್ಲೆಗಳಲ್ಲಿ 6 ಕಡೆ ದಾಳಿ ನಡೆಸಿದೆ.

    ಬೆಂಗಳೂರು (Bengaluru), ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ 6 ಕಡೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಂಗಳೂರಿನ ಕಂದಾಯ ಅಧಿಕಾರಿ ವೆಂಕಟೇಶ್, ಬಿಡಿಎ ಕಚೇರಿಯ ಸಿನಿಯರ್ ಅರ್ಟಿಕಲ್ಚರ್ ಡೈರೆಕ್ಟರ್, ಓಂ ಪ್ರಕಾಶ್‌, ರಾಷ್ಟ್ರೀಯ ಹೆದ್ದಾರಿ (NHAI) ಹಾಸನ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ, ಚಿಕ್ಕಬಳ್ಳಾಪುರದ ಜ್ಯೂನಿಯರ್ ಎಂಜಿನಿಯರ್ ಆಂಜನೇಯ ಮೂರ್ತಿ, ಚಿತ್ರದುರ್ಗದ ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಚಿತ್ರದುರ್ಗ:
    ಚಿತ್ರದುರ್ಗದ ಟಿಎಚ್‌ಓ (THO) ಡಾ.ವೆಂಕಟೇಶ್‌ ಮನೆ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಹಿರಿಯೂರು ಪಟ್ಟಣದ ಯರಗುಂಟೇಶ್ವರ ಬಡಾವಣೆಯ ಮನೆ, ಆದಿವಾಲ ಗ್ರಾಮದ ಮನೆ & ಕ್ಲಿನಿಕ್ ಮೇಲೆ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ದಾಳಿ ನಡೆಸಿದ್ದು, ದಾಖಲೆಗಳನ್ನ ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: ಪಹಲ್ಗಾಮ್‍ ದಾಳಿ ಉಗ್ರರು ಪಾಕ್‌ನಿಂದ ಬಂದವರಲ್ಲ: ಚಿದಂಬರಂ ಕ್ಲೀನ್‍ಚಿಟ್

    ಚಿಕ್ಕಬಳ್ಳಾಪುರ:
    ಗೌರಿಬಿದನೂರು ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಜೆಇ ಆಂಜನೇಯಮೂರ್ತಿ ಮನೆ ಮೇಲೆ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಲಹಂಕ ನ್ಯೂ ಟೌನ್‌ನಲ್ಲಿರುವ ಮನೆ ಹಾಗೂ ಸ್ವಗ್ರಾಮ ತುಮಕೂರಿನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ತೀವ್ರ ತಪಾಸಣೆ ಹಿನ್ನೆಲೆ ಗೌರಿಬಿದನೂರು ಕಚೇರಿ ಮೇಲೂ ಲೋಕಾ ಪೊಲೀಸರ ದಾಳಿ ನಡೆದಿದೆ. ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

    ಹಾಸನ:
    ಇನ್ನೂ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್‌ಎಐ) ಹಾಸನ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಸ್ನೇಹಾ ನೇತೃತ್ವದಲ್ಲಿ ಹಾಸನ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ ಹಾಗೂ ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳ ನೇತೃತ್ವದ ತಂಡ ದಾಳಿ ನಡೆಸಿದೆ. ಹಾಸನ ನಗರದ ಚನ್ನಪಟ್ಟಣ ಹೌಸಿಂಗ್ ಬೋರ್ಡ್ನಲ್ಲಿರುವ ಜಯಣ್ಣ ನಿವಾಸ, ಪತ್ನಿ ನಿವಾಸ, ಹಾರ್ಡ್ವೇರ್ ಅಂಗಡಿ, ಇತರೆ ಎರಡು ಕಡೆಗಳಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: ಹಣ ಹೊರಗಡೆ ಸಿಕ್ಕಿದ್ರೆ ಜಡ್ಜ್‌ ದುರ್ವತನೆ ಹೇಗೆ ಆಗುತ್ತೆ: ಸಿಬಲ್‌ ವಾದ

  • ಭ್ರಷ್ಟ ಅಧಿಕಾರಿಗಳಿಗೆ `ಲೋಕಾ’ ಶಾಕ್ – ಬೆಂಗಳೂರು ಸೇರಿ ರಾಜ್ಯದ 7 ಕಡೆ ಏಕಕಾಲಕ್ಕೆ ದಾಳಿ

    ಭ್ರಷ್ಟ ಅಧಿಕಾರಿಗಳಿಗೆ `ಲೋಕಾ’ ಶಾಕ್ – ಬೆಂಗಳೂರು ಸೇರಿ ರಾಜ್ಯದ 7 ಕಡೆ ಏಕಕಾಲಕ್ಕೆ ದಾಳಿ

    – ನಿದ್ದೆ ಮಂಪರಿನಲ್ಲಿದ್ದ ಅಧಿಕಾರಿಗಳಿಗೆ `ಲೋಕಾ’ ರೇಡ್ ಬಿಸಿ

    ಬೆಂಗಳೂರು/ಬೆಳಗಾವಿ/ಚಿತ್ರದುರ್ಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಹಿನ್ನೆಲೆ ಶುಕ್ರವಾರ (ಇಂದು) ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಮನೆ ಬಾಗಿಲು ಬಡಿದಿದ್ದರು. ಇನ್ನೂ ನಿದ್ದೆ ಮಂಪರಿನಲ್ಲಿದ್ದ ಭ್ರಷ್ಟ ಕುಳಗಳಿಗೆ ಶಾಕ್ ಕೊಟ್ಟಿದ್ದರು. ಬೆಂಗಳೂರು ಸೇರಿದಂತೆ ರಾಜ್ಯದ 7 ಕಡೆಗಳಲ್ಲಿ ಲೋಕಾಯುಕ್ತ ದಾಳಿ (Lokayukta Raid) ನಡೆಸಲಾಯ್ತು. ಬೆಂಗಳೂರಿನಲ್ಲಿ (Bengaluru) ಎರಡು ಕಡೆ, ಬೆಳಗಾವಿಯಲ್ಲಿ (Belagavi) ಎರಡು ಕಡೆ, ಚಿತ್ರದುರ್ಗ, ರಾಯಚೂರು ಮತ್ತು ಬಾಗಕೋಟೆಯಲ್ಲಿ ತಲಾ ಒಂದು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದೆ. ಒಟ್ಟು 7 ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ನಡೆಸಿ ಕೆಲ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

    ಎಲ್ಲೆಲ್ಲಿ ದಾಳಿ?
    ಮಾಧವರಾವ್, ಬಿಬಿಎಂಪಿ ಎಇಇ
    ಸ್ಥಳ – ಬೆಂಗಳೂರು
    ಬೆಂಗಳೂರಿನಲ್ಲಿ ಬಿಬಿಎಂಪಿ ಹೆಬ್ಬಾಳ ವ್ಯಾಪ್ತಿಯ ಇಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್‌ಗೆ ಲೋಕಾ ಬಿಸಿ ತಟ್ಟಿದೆ. ವಿದ್ಯಾರಣ್ಯಪುರಂನ ಎಂಎಸ್ ಪಾಳ್ಯದಲ್ಲಿರುವ ಮಾಧವ್ ರಾವ್‌ರ ಐಷಾರಾಮಿ ಮನೆ ನಿವಾಸದ ಮೇಲೆ ದಾಳಿ ನಡೆದಿದ್ದು.. ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇನ್ನು ಮಾಧವ ರಾವ್ ನಿವಾಸದ ಮೇಲಿನ ದಾಳಿ ಬಗ್ಗೆ ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ಕೆಲವೊಂದು ಮಾಹಿತಿ ತಿಳಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಾಧವ ರಾವ್ ಮೇಲೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಇತ್ತು. ಅಲ್ಲದೇ ಬೀದರ್ ವರ್ಕ್ ಆರ್ಡರ್ ಸಂಬಂಧ ಕೆಲವೊಂದು ದಾಖಲೆಗಳು ಸಿಕ್ಕಿವೆ. ಸಂಜೆ ವೇಳೆ ಎಲ್ಲ ದಾಖಲೆಗಳ ಖಚಿತ ಮಾಹಿತಿ ಸಿಗಲಿದೆ ಎಂದ್ರು.

    ರಮೇಶ್, ಜಿ.ಪಂ ಉಪ ಕಾರ್ಯದರ್ಶಿ
    ಸ್ಥಳ – ಬೆಂಗಳೂರು
    ಇನ್ನೂ ಬೆಂಗಳೂರಿನಲ್ಲಿ ಮತ್ತೊಬ್ಬ ಭ್ರಷ್ಟ ಅಧಿಕಾರಿ ಮೇಲೆ ಲೋಕಾ ದಾಳಿ ನಡೆದಿದೆ. ನಾಗರಬಾವಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಅಧಿಕಾರಿ ರಮೇಶ್ ನಿವಾಸದ ಮೇಲಿನ ದಾಳಿ ಬಗ್ಗೆ ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ಮಾಹಿತಿ ಪಡೆದುಕೊಂಡ್ರು. ಬಳಿಕ ಪ್ರತಿಕ್ರಿಯಿಸಿದ ಎಸ್‌ಪಿ ವಂಶಿಕೃಷ್ಣ, ಟಿಕೆ ರಮೇಶ್‌ಗೆ ಸಂಬಂಧಿಸಿದ 4 ಕಡೆ ದಾಳಿಯಾಗಿದೆ. ಹುಲಿಯೂರು ದುರ್ಗ ತೋಟದ ಮನೆ, ಕಚೇರಿ, ಮನೆ, ಸ್ಕೂಲ್‌ನಲ್ಲೂ ಪರಿಶೀಲನೆ ಮಾಡಲಾಗ್ತಿದೆ. ಆದಾಯಕ್ಕಿಂತ ಜಾಸ್ತಿ ಹಣ ಸಂಪಾದನೆ ಸಂಬಂಧ ಎಫ್‌ಐಆರ್ ದಾಖಲಿಸಿ ಶೋಧನೆ ಮಾಡಲಾಗುತ್ತಿದೆ. ಪ್ರತಿಯೊಂದು ಜಾಗದಲ್ಲೂ ಒಂದೊಂದು ಟೀಂ ಪರಿಶೀಲನೆ ಮಾಡ್ತಿದ್ದು, ಒಟ್ಟು 9 ತಂಡಗಳು ಬೇರೆ ಬೇರೆ ಸ್ಥಳದಲ್ಲಿ ಶೋಧ ನಡೆಸುತ್ತಿದೆ ಎಂದ್ರು.

    ಸಚಿನ್ ಮಂಡೇದ್, ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟಾçರ್
    ಸ್ಥಳ – ಬೆಳಗಾವಿ
    ಇನ್ನೂ ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟ್ರಾರ್‌ ಸಚಿನ್ ಮಂಡೇದ್‌ಗೆ ಸೇರಿದ ಬೆಳಗಾವಿ ನಗರದ ಅನಗೋಳದಲ್ಲಿರುವ ನಿವಾಸ, ಕಚೇರಿ ಸೇರಿ ಒಟ್ಟು ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.

    ಸಂಜಯ್, ಹಾರೂಗೇರಿ ಪಶುವೈದ್ಯ
    ಸ್ಥಳ – ಬೆಳಗಾವಿ
    ಮತ್ತೊಂದ್ಕಡೆ ಹಾರೂಗೇರಿ ಪಶುವೈದ್ಯ ಸಂಜಯ್‌ಗೆ ಸೇರಿದ ಮನೆ ಮೇಲೂ ದಾಳಿ ನಡೆಸಲಾಗಿದೆ. ಅದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು.. ಅಗತ್ಯ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

    ಶಶಿಧರ್, ಬಿಸಿಎಂ ವಿಸ್ತರಣಾಧಿಕಾರಿ
    ಸ್ಥಳ – ಚಿತ್ರದುರ್ಗ
    ಇನ್ನು ಚಿತ್ರದುರ್ಗದ ಬಿಸಿಎಂ ಇಲಾಖೆ ವ್ಯವಸ್ಥಾಪಕ ಶಶಿಧರ್ ಮನೆ ಮೇಲೆ ಲೋಕಾಯಕ್ತ ದಿಢೀರ್ ದಾಳಿ ನಡೆಸಿದ್ದಾರೆ. ಅಪಾರ ಆಸ್ತಿ ಗಳಿಕೆ ಮತ್ತು ಲಂಚದ ಆರೋಪ ಕೇಳಿ ಬಂದ ಹಿನ್ನೆಲೆ ಹೊಳಲ್ಕೆರೆ ತಾಲ್ಲೂಕಿನ ಕಡ್ಲೆಪ್ಪನಹಟ್ಟಿ ಗ್ರಾಮದಲ್ಲಿನ ಶಶಿಧರ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ಹಾಗು ಡಿವೈಎಸ್‌ಪಿ ಮೃತ್ಯುಂಜಯ ನೇತೃತ್ವದಲ್ಲಿ ಏಕಕಾಲದಲ್ಲಿ ನಾಲ್ಕು ಕಡೆ ರೇಡ್ ಮಾಡಲಾಗಿದೆ. ಈ ವೇಳೆ ಕಡ್ಲೆಪ್ಪನಹಟ್ಟಿ ಗ್ರಾಮದಲ್ಲಿರುವ ತೋಟದ ಮನೆ, ಹೊಸದುರ್ಗ ಪಟ್ಟಣದಲ್ಲಿನ ಸಹೋದರನಿಗೆ ಸೇರಿದ ಎಸ್ ಆರ್ ಎಂಟರ್‌ಪ್ರೈಸಸ್‌ ಮಳಿಗೆ, ಹೊಸದುರ್ಗದ ವಿದ್ಯಾನಗರದಲ್ಲಿರುವ ಬಾಡಿಗೆ ಮನೆ ಹಾಗು ಶಶಿಧರ್ ಕರ್ತವ್ಯ ನಿರ್ವಹಿಸುವ ಬಿಸಿಎಂ ಕಚೇರಿಯ ಕೊಠಡಿ ಮೇಲೂ ಲೋಕಾಯಕ್ತರು ದಾಳಿ ನಡೆಸಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

    ಹಿರೇಮಠ್, ಹೂಲಗೇರಿ ಗ್ರಾ.ಪಂ ಪಿಡಿಓ
    ಸ್ಥಳ – ಬಾಗಲಕೋಟೆ
    ಅಕ್ರಮ ಆಸ್ತಿ ಗಳಿಕೆ ದೂರು ಹಿನ್ನೆಲೆ ಹೂಲಗೇರಿ ಗ್ರಾಪಂ ಪಿಡಿಓ ಹಿರೇಮಠ್‌ಗೆ ಲೋಕಾ ಬಿಸಿ ಮುಟ್ಟಿಸಿದೆ. ಬಾಗಲಕೋಟೆಯ ವಿದ್ಯಾಗಿರಿಯ 22ನೇ ಕ್ರಾಸ್‌ನಲ್ಲಿರುವ ಮನೆ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಏಕಕಾಲಕ್ಕೆ ಮೂರು ಕಡೆ ದಾಳಿ ನಡೆಸಿದ್ದು.. ದಾಖಲೆಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ.

    ನರಸಿಂಗ್‌ರಾವ್ ಗುಜ್ಜರ್, ಜಿ.ಪಂ ಲೆಕ್ಕಪತ್ರ ಸಹಾಯಕ ಅಧಿಕಾರಿ
    ಸ್ಥಳ – ರಾಯಚೂರು
    ರಾಯಚೂರು ಜಿಲ್ಲಾ ಪಂಚಾಯ್ತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗ್ ರಾವ್ ಗುಜ್ಜರ್ ಮನೆ ಹಾಗೂ ಜಿಲ್ಲಾ ಪಂಚಾಯ್ತಿ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ರಾಯಚೂರು ನಗರದ ದೇವರ ಕಾಲೋನಿಯಲ್ಲಿನ ಮನೆ ಮೇಲೆ ರಾಯಚೂರು ಹಾಗೂ ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ರೇಡ್ ನಡೆದಿದ್ದು.. ದಾಖಲೆಗಳ ಪರಿಶೀಲನೆ ನಡೆದಿದೆ.

  • ಹೆಚ್‌ಡಿಕೆ ಆರೋಪಕ್ಕೆ ಪತ್ರದ ಮೂಲಕ ಕೌಂಟರ್ ಕೊಟ್ಟ ಎಡಿಜಿಪಿ ಚಂದ್ರಶೇಖರ್

    ಹೆಚ್‌ಡಿಕೆ ಆರೋಪಕ್ಕೆ ಪತ್ರದ ಮೂಲಕ ಕೌಂಟರ್ ಕೊಟ್ಟ ಎಡಿಜಿಪಿ ಚಂದ್ರಶೇಖರ್

    ಬೆಂಗಳೂರು: ಐಪಿಎಸ್ ಅಧಿಕಾರಿ ಚಂದ್ರಶೇಖರ್ (ADGP Chandrashekar) ಮೇಲೆ ಅಕ್ರಮ ಆಸ್ತಿ ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಗೆ (HD Kumaraswamy) ಪತ್ರದ ಮೂಲಕ ಸ್ಪಷ್ಟನೆ ಕೊಟ್ಟು ಎಡಿಜಿಪಿ ಚಂದ್ರಶೇಖರ್ ಕೌಂಟರ್ ಕೊಟ್ಟಿದ್ದಾರೆ.

    ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ. ಪ್ರಕರಣ ಒಂದರ ಆರೋಪಿ ಎಂದು ಚಂದ್ರಶೇಖರ್ ಪತ್ರ ಆರಂಭಿಸಿದ್ದಾರೆ. ನನ್ನ ಮೇಲೆ ಹೆಚ್‌ಡಿಕೆ ಸುಳ್ಳು ಆರೋಪದ ಜೊತೆಗೆ ಬೆದರಿಕೆ ಹಾಕಿದ್ದಾರೆ. ಎಸ್‌ಐಟಿ (SIT) ಸಕ್ಷಮ ಪ್ರಾಧಿಕಾರದಿಂದ ಪ್ರಾಸಿಕ್ಯೂಷನ್ ಮಂಜೂರಾತಿ ಕೋರಿದೆ. ಆರೋಪಿ ಹೆಚ್.ಡಿ ಕುಮಾರಸ್ವಾಮಿ ಜಾಮೀನು ಪಡೆದಿದ್ದಾರೆ. ನಮ್ಮನ್ನ ಕುಗ್ಗಿಸುವ ಪ್ರಯತ್ನ ಮಾಡಿದ್ದಾರೆ. ನಮ್ಮಲ್ಲಿ ಭಯ ಹುಟ್ಟಿಸುವ ಉದ್ದೇಶ ಹೊಂದಿದ್ದಾರೆ. ಅವನು ಎಷ್ಟೇ ಉನ್ನತ ಸ್ಥಾನದಲ್ಲಿದಲ್ಲಿದ್ದರೂ ಆತನೊಬ್ಬ ಆರೋಪಿ. ಇಂತಹ ಆರೋಪ ಮತ್ತು ಬೆದರಿಕೆಗಳಿಂದ ನಾವು ನಿರಾಶೆಗೊಳ್ಳಬಾರದು. ಎಸ್‌ಐಟಿ ಮುಖ್ಯಸ್ಥನಾಗಿ ನಾನು ಭಯವಿಲ್ಲದೇ ಕೆಲಸ ಮಾಡುತ್ತೇನೆ. ಪ್ರಕರಣದ ಸತ್ಯಾಸತ್ಯತೆ ಹೊರಗೆ ತರುತ್ತೇನೆ. ಎಲ್ಲಾ ಬಾಹ್ಯ ಪ್ರಭಾವದಿಂದ ನಿಮ್ಮನ್ನ ರಕ್ಷಿಸುತ್ತೇನೆ ಎಂದು ಎಸ್‌ಐಟಿ ಅಧಿಕಾರಿ ಸಿಬ್ಬಂದಿಗಳಿಗೆ ಚಂದ್ರಶೇಖರ್ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ FIR ಪಾಲಿಟಿಕ್ಸ್ | ಚುನಾವಣಾ ಬಾಂಡ್‌ ಹೆಸ್ರಲ್ಲಿ ವಸೂಲಿ ಆರೋಪ – ಬಿಜೆಪಿಗೆ ಶಾಕ್!

    ಪತ್ರದಲ್ಲಿ ಜಾರ್ಜ್ ಬರ್ನಾರ್ಡ್ ಷಾ ಅವರ ಪ್ರಸಿದ್ಧ ಇಂಗ್ಲಿಷ್ ವಾಕ್ಯವನ್ನು ಉಲ್ಲೇಖಿಸಲಾಗಿದೆ. ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ. ಹಂದಿಗಳ ಜೊತೆಗೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೀವಿ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತದೆ. ಆದರೆ ನಮ್ಮ ಕರ್ತವ್ಯವನ್ನು ನಾವು ನಿರ್ವಹಿಸುತ್ತೇವೆ. ಅಪರಾಧಿಗಳು ಮತ್ತು ಆರೋಪಿಗಳನ್ನು ಎದುರಿಸುವುದನ್ನು ನಾವು ತಪ್ಪಿಸಲು ಸಾಧ್ಯವಿಲ್ಲ. ಕೆಲವೊಮ್ಮೆ ನಾವು ಎದುರಿಸುವ ಅಪರಾಧಿಗಳು ಮತ್ತು ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ನಮ್ಮ ಕರ್ತವ್ಯವನ್ನು ನಿರ್ವಹಿಸುವುದರಿಂದ ನಮ್ಮನ್ನು ತಡೆಯಬಾರದು. ಭರವಸೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಏಕೆಂದರೆ ಸತ್ಯವು ಯಾವಾಗಲೂ ಜಯಗಳಿಸುತ್ತದೆ. ಸತ್ಯ, ದೇವರು ಮತ್ತು ನಮ್ಮ ಕಾನೂನಿನಲ್ಲಿ ನಂಬಿಕೆ ಇರಲಿ. ಸತ್ಯಮೇವ ಜಯತೆ ಎಂದು ಪತ್ರದ ಮೂಲಕ ಎಡಿಜಿಪಿ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ರಾಮಮಂದಿರ ಪ್ರಾಣಪ್ರತಿಷ್ಠಾಪನೆ `ನಾಚ್ ಗಾನಾ’ ಕಾರ್ಯಕ್ರಮವಾಗಿತ್ತು – ರಾಗಾ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ

  • ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ತಡೆ – ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಲು ಸುಪ್ರೀಂ ನಿರ್ದೇಶನ

    ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ತಡೆ – ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಲು ಸುಪ್ರೀಂ ನಿರ್ದೇಶನ

    ನವದೆಹಲಿ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ವಿರುದ್ಧದ ತನಿಖೆಗೆ ನೀಡಿರುವ ತಡೆ ರದ್ದು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಇತ್ಯರ್ಥಪಡಿಸಿದೆ. ಇಂದು (ಶುಕ್ರವಾರ) ವಿಚಾರಣೆ ನಡೆಸಿದ ನ್ಯಾ. ಬೇಲಾ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಲು ನಿರ್ದೇಶನ ನೀಡಿದೆ.

    ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ ವಕೀಲರು, ಹೈಕೋರ್ಟ್ ಏಕ ಸದಸ್ಯ ಪೀಠ ತನಿಖೆಗೆ ನೀಡಿರಲಿಲ್ಲ. ಆದರೆ ವಿಭಾಗೀಯ ಪೀಠ ತಡೆ ನೀಡಿತ್ತು. ತಡೆ ರದ್ದು ಕೋರಿ ಈಗಾಗಲೇ ಹೈಕೋರ್ಟ್‌ನಲ್ಲೂ ಅರ್ಜಿ ಸಲ್ಲಿಸಿದೆ. ಪ್ರಕರಣದ ತನಿಖೆಗೆ ಅನುಮತಿ‌ ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಡಿಕೆಶಿಗೆ ಸಿಬಿಐ ಸಂಕಷ್ಟ – ಶುಕ್ರವಾರ ಸುಪ್ರೀಂನಲ್ಲಿ ನಿರ್ಣಾಯಕ ವಿಚಾರಣೆ

    ವಾದ ಆಲಿಸಿದ ಪೀಠ ಈಗಾಗಲೇ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವ ಹಿನ್ನೆಲೆ ವಿಚಾರಣೆ ಅಲ್ಲೇ ಮುಂದುವರಿಸಿ, ಪ್ರಕರಣವನ್ನು ಪ್ರಸ್ತಾಪಿಸಿ ನಾವು ಅರ್ಜಿ ಇತ್ಯರ್ಥಪಡಿಸಲು ಹೈಕೋರ್ಟ್‌ಗೆ ನಿರ್ದೇಶನ ನೀಡುತ್ತಿದ್ದೇವೆ ಎಂದು ಆದೇಶಿಸಿದರು. ಸುಪ್ರೀಂ ಕೋರ್ಟ್ ಈ ಆದೇಶದಿಂದ ಪ್ರಕರಣ ಈಗ ಮತ್ತೆ ಹೈಕೋರ್ಟ್ ಅಂಗಳ ತಲುಪಿದೆ.

    2017 ರಲ್ಲಿ ಡಿ.ಕೆ.ಶಿವಕುಮಾರ್ ವಾಸ್ತವ್ಯವಿದ್ದ ಈಗಲ್‌ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಐಟಿ ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ.ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು. ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದ ಇಡಿ ಪಿಸಿ ಆ್ಯಕ್ಟ್ ನಡಿ ತನಿಖೆ ನಡೆಸಲು ಸಿಬಿಐಗೆ ನೀಡಲು ಶಿಫಾರಸು ಮಾಡಿತ್ತು. ಇದನ್ನೂ ಓದಿ: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ – ಇಡಿ ಬೆನ್ನಲ್ಲೇ ಡಿಕೆಶಿಗೆ ಐಟಿ ಶಾಕ್

    ಶಿಫಾರಸು ಆಧರಿಸಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ಸರ್ಕಾರದ ನಡೆಯನ್ನು ಪ್ರಶ್ನಿಸಿ ಡಿಕೆಶಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು‌. ಅರ್ಜಿ ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠ ಅರ್ಜಿ ವಜಾ‌ ಮಾಡಿತ್ತು. ಇದನ್ನು ಪ್ರಶ್ನೆ ಮಾಡಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ವಿಭಾಗೀಯ ಪೀಠ ತನಿಖೆಗೆ ತಡೆ ನೀಡಿತ್ತು‌. ಪ್ರತ್ಯೇಕ ಪ್ರಕರಣ ಒಂದರಲ್ಲಿ ಸಿಬಿಐ ತನಿಖೆಗೆ ನೀಡಿದ್ದ ತಡೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

  • ಚುನಾವಣೆ ಹೊತ್ತಲ್ಲಿ ಡಿಕೆಶಿಗೆ ಮಾಸ್ಟರ್ ಸ್ಟ್ರೋಕ್!

    ಚುನಾವಣೆ ಹೊತ್ತಲ್ಲಿ ಡಿಕೆಶಿಗೆ ಮಾಸ್ಟರ್ ಸ್ಟ್ರೋಕ್!

    ಬೆಂಗಳೂರು: ಚುನಾವಣೆ ಹತ್ತಿರ ಆಗುತ್ತಿದ್ದಂತೆ ಡಿ.ಕೆ ಶಿವಕುಮಾರ್ (D.K Shivakumar) ಗೆ ಕೇಂದ್ರ ತನಿಖಾ ಸಂಸ್ಥೆಗಳು ಬಿಟ್ಟು ಬಿಡದಂತೆ ಕಾಡುತ್ತಲೇ ಇದ್ದಾವೆ. ಅಕ್ರಮ ಆಸ್ತಿ ತನಿಖೆ ನಡೆಸ್ತಾ ಇರೋ ಸಿಬಿಐ (CBI) ಅಧಿಕಾರಿಗಳು ದೋಷಾರೋಪ ಪಟ್ಟಿ ತಯಾರು ಮಾಡಿದೆ.

    ಮಾರ್ಚ್ ಎರಡನೇ ವಾರದ ಒಳಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡೋ ಸಾಧ್ಯತೆಗಳು ಇದೆ. ಈಗಾಗಲೇ ಸಿಬಿಐ ಅಧಿಕಾರಿಗಳು ಡಿಕೆಶಿಯ ಆಸ್ತಿ ಮೌಲ್ಯಮಾಪನ ಮಾಡಿದ್ದಾರೆ. ಡಿಕೆಶಿ ಐದು ವರ್ಷದಲ್ಲಿ 49%ರಷ್ಟು ಅಕ್ರಮ ಆಸ್ತಿ ಹೊಂದಿದ್ದಾರೆ. ಹಾಗೂ ತಮ್ಮ ಆದಾಯಕ್ಕಿಂತ 79 ಕೋಟಿ ಹೆಚ್ಚುವರಿ ಆಸ್ತಿ ಹೊಂದಿದ್ದಾರೆ ಅಂತ ಸಿಬಿಐ ಎಫ್‍ಐಆರ್ ದಾಖಲು ಮಾಡಿತ್ತು. ಇದನ್ನೂ ಓದಿ: ಟಿಕೆಟ್ ಕೋಲಾಹಲ- ಹಾಸನ ಜೆಡಿಎಸ್‍ನಲ್ಲಿ ಪಕ್ಷಾಂತರ ಪರ್ವ

    ಪ್ರಕರಣ ವಿಚಾರಣೆಯಲ್ಲಿ ನಾನೊಬ್ಬ ಕೃಷಿಕ, ನಾನು ಕೃಷಿಯ ಮೂಲಕವೇ ಆಸ್ತಿ ಸಂಪಾದನೆ ಮಾಡಿದ್ದು, ಊರಲ್ಲಿ ನನ್ನದೇ ಆದ ತೋಟ ಇದೆ. ನಮಗೆ ಅದೇ ಆದಾಯದ ಮೂಲ ಅಂತ ಡಿಕೆಶಿ ಹೇಳಿದ್ರು. ಈಗ ಆ ಮೂಲದಿಂದಲೇ ಆಸ್ತಿ ಸಂಪಾದನೆ ಮಾಡಿದ್ದಾರಾ..? ಇಲ್ವಾ..? ಅನ್ನೋದು ಪತ್ತೆ ಮಾಡಿದ್ದಾರೆ. ಇನ್ನು ಚುನಾವಣೆ ಬೆರಳೆಣಿಕೆಯಷ್ಟು ತಿಂಗಳು ಬಾಕಿ ಉಳಿದಿದ್ದು, ಈ ಸಂದರ್ಭದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ರೆ ಡಿಕೆಶಿ ಜನರ ಮುಂದೆ ಯಾವ ಇಮೇಜ್ ಬದಲಾಗುತ್ತೋ ಗೊತ್ತಿಲ್ಲ. ಆದರೆ ತನಿಖೆ ತರಾತುರಿಯಲ್ಲಿ ನಡೆಸಿರೋ ಸಿಬಿಐ ಮಾರ್ಚ್ ಎರಡನೇ ವಾರದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸೋ ಎಲ್ಲಾ ಸಾಧ್ಯತೆ ಇದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಕ್ರಮ ಆಸ್ತಿ ಪ್ರಕರಣ – ಸರ್ಕಾರಿ ನೌಕರನ ಮನೆಯಲ್ಲಿ ತನಿಖೆ, ಹೆದರಿ ವಿಷ ಸೇವನೆ

    ಅಕ್ರಮ ಆಸ್ತಿ ಪ್ರಕರಣ – ಸರ್ಕಾರಿ ನೌಕರನ ಮನೆಯಲ್ಲಿ ತನಿಖೆ, ಹೆದರಿ ವಿಷ ಸೇವನೆ

    ಭೋಪಾಲ್: ಅಕ್ರಮ ಆಸ್ತಿ ಪ್ರಕರಣದ ಮೇಲೆ ಮಧ್ಯಪ್ರದೇಶದ ಪೊಲೀಸ್ ಆರ್ಥಿಕ ಅಪರಾಧಗಳ ವಿಭಾಗ(ಇಒಡಬ್ಲ್ಯು) ರಾಜ್ಯ ಸರ್ಕಾರದ ಗುಮಾಸ್ತರೊಬ್ಬರ ಮನೆಯಲ್ಲಿ ಹುಡುಕಾಟ ನಡೆಸಿ, 85 ಲಕ್ಷ ರೂ.ಗೂ ಹೆಚ್ಚು ನಗದು ವಶಪಡಿಸಿಕೊಂಡಿದೆ. ಆದರೆ ಈ ವೇಳೆ ಗುಮಾಸ್ತ ವಿಷ ಕುಡಿದಿರುವುದಾಗಿ ವರದಿಯಾಗಿದೆ.

    ತಿಂಗಳಿಗೆ ಸುಮಾರು 50,000 ರೂ. ವೇತನ ಪಡೆಯುತ್ತಿರುವ ಮೇಲ್ ವಿಭಾಗದ ಗುಮಾಸ್ತ ಹೀರೋ ಕೇಸ್ವಾನಿ ಅವರ ನಿವಾಸದಲ್ಲಿ ನಡೆಸಿದ ಶೋಧದ ವೇಳೆ, ಇಒಡಬ್ಲ್ಯು ತಂಡ ಕೋಟ್ಯಂತರ ರೂ. ಮೌಲ್ಯದ ಹಲವಾರು ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿಸಿದೆ. ಇದನ್ನೂ ಓದಿ: ‘ಹರ್ ಘರ್ ತಿರಂಗಾ’ ಆಂದೋಲನಕ್ಕೆ ಯಶ್, ಸುದೀಪ್ ಸೇರಿದಂತೆ ಹಲವು ಗಣ್ಯರು ಸಾಥ್

    ಬೈರಾಗರ್ ಪ್ರದೇಶದಲ್ಲಿನ ಕೇಸ್ವಾನಿ ಅವರ ಮನೆಯಲ್ಲಿ ಬುಧವಾರ ತಡರಾತ್ರಿಯವರೆಗೂ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಪತ್ತೆಯಾದ ಹಣದ ರಾಶಿಯನ್ನು ನಿಖರವಾಗಿ ಲೆಕ್ಕ ಹಾಕಲು ಅಧಿಕಾರಿಗಳು ನೋಟು ಎಣಿಕೆಯ ಯಂತ್ರವನ್ನು ತರಿಸಿದ್ದರು.

    ತನಿಖೆಯ ವೇಳೆ ಕೇಸ್ವಾನಿ ಬಾತ್ರೂಮ್ ಕ್ಲೀನರ್(ಫಿನಾಯಿಲ್) ಕುಡಿದಿರುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಹಾಗೂ ತಮ್ಮ ಮನೆಯಲ್ಲಿ ಹುಡುಕಾಟ ನಡೆಸದಂತೆ ತಡೆಯಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಮಿಶ್ರಾ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದ ಮೂರನೇ ಅತಿ ದೊಡ್ಡ ಕಲ್ಲಿದ್ದಲು ಪೂರೈಕೆದಾರ ರಷ್ಯಾ

    ತಕ್ಷಣ ಅವರನ್ನು ರಾಜ್ಯ ಹಮೀಡಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಸದ್ಯ ಸ್ಥಿರವಾಗಿದೆ. ಅವರಿಗೆ ರಕ್ತದೊತ್ತಡದ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಕ್ರಮ ಆಸ್ತಿಗಳಿಕೆ ಆರೋಪ – ವಿಚಾರಣೆ ನಡೆಸಲು ಹೈಕೋರ್ಟ್‍ಗೆ ಸುಪ್ರೀಂ ಸೂಚನೆ

    ಅಕ್ರಮ ಆಸ್ತಿಗಳಿಕೆ ಆರೋಪ – ವಿಚಾರಣೆ ನಡೆಸಲು ಹೈಕೋರ್ಟ್‍ಗೆ ಸುಪ್ರೀಂ ಸೂಚನೆ

    ನವದೆಹಲಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇಲಿರುವ ಅಕ್ರಮ ಆಸ್ತಿಗಳಿಕೆ ಆರೋಪದ ಬಗ್ಗೆ ವಿಚಾರಣೆ ನಡೆಸುವಂತೆ ರಾಜ್ಯ ಹೈಕೋರ್ಟ್‍ಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಂಜಯ್ ಕಿಶನ್ ಕೌಲ್ ಹಾಗೂ ನ್ಯಾ.ಸುಂದರೇಶ್ ಪೀಠ ಈ ಸೂಚನೆ ನೀಡಿದೆ.

    ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಕೀಲ ದೇವರಾಜೇಗೌಡ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಪ್ರಜ್ವಲ್ ರೇವಣ್ಣ ಅಕ್ರಮ ಆಸ್ತಿಗಳಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸದೇ ತಾಂತ್ರಿಕ ಕಾರಣ ನೀಡಿ ಹೈಕೋರ್ಟ್ ಅರ್ಜಿ ವಜಾ ಮಾಡಿದ್ದು, ಸುಪ್ರೀಂಕೋರ್ಟ್ ವಿಚಾರಣೆ ನಡೆಸುವಂತೆ ಮನವಿ ಮಾಡಿದರು.

    SUPREME COURT

    ವಾದ ಆಲಿಸಿದ ಪೀಠ, ಅರ್ಜಿಯೂ ವಿಚಾರಣೆಗೆ ಅರ್ಹವಾಗಿದೆ ಹೀಗಾಗಿ ಈ ಹಿಂದೆ ನೀಡಿದ ಆದೇಶ ರದ್ದು ಮಾಡಿ ಪ್ರಕರಣ ವಿಚಾರಣೆ ನಡೆಸಬೇಕು ಎಂದು ಪ್ರಕರಣವನ್ನು ಹೈಕೋರ್ಟ್‍ಗೆ ವರ್ಗಾಯಿಸಿತು. ಇದನ್ನೂ ಓದಿ: ಜಮೀರ್ ಅತ್ಯಂತ ಚಿಲ್ಲರೆ, ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ : ಪ್ರಹ್ಲಾದ್ ಜೋಶಿ

    ಪ್ರಜ್ವಲ್ ರೇವಣ್ಣ ತಮ್ಮ ಹದಿನೈದನೇ ವಯಸ್ಸಿನಲ್ಲೆ 23 ಕೋಟಿ ಆಸ್ತಿ ಮಾಡಿದ್ದಾರೆ. ಆದಾಯ ತೆರಿಗೆ ಇಲಾಖೆ ಸಲ್ಲಿಸಿದ ಮಾಹಿತಿಯಲ್ಲಿ ಈ ಅಂಶಗಳಲ್ಲಿಲ್ಲ, ಚುನಾವಣಾ ಆಯೋಗಕ್ಕೂ ಆಸ್ತಿಯ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಬೇನಾಮಿ ಆಸ್ತಿ ಮತ್ತು ಗೋಮಾಳ ಕಬಳಿಕೆ ಮಾಡಿದ್ದಾರೆ. ಈ ಬಗ್ಗೆ ಐಟಿಯಿಂದ ತನಿಖೆ ನಡೆಯಬೇಕು ಮತ್ತು ಅಕ್ರಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅರ್ಜಿದಾರ ದೇವರಾಜೇಗೌಡ ಮನವಿ ಮಾಡಿದ್ದರು.

    ಪ್ರಕರಣ ವಿಚಾರಣೆ ನಡೆಸಿದ್ದ ಹೈಕೋರ್ಟ್ 2019 ರಲ್ಲಿ ಈ ಚುನಾವಣಾ ಅರ್ಜಿಯನ್ನು ಸರಿಯಾದ ರೀತಿಯಲ್ಲಿ ಸಲ್ಲಿಸಿಲ್ಲ, ಇದರಲ್ಲಿ ತಾಂತ್ರಿಕ ದೋಷಗಳಿವೆ ಎಂದು ಅರ್ಜಿ ವಜಾ ಮಾಡಿತ್ತು. ಇದನ್ನು ಪ್ರಶ್ನೆ ಮಾಡಿ ಸುಪ್ರೀಂಕೋರ್ಟ್ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಇದನ್ನೂ ಓದಿ: ಪಾಕಿಸ್ತಾನ, ಚೀನಾ ಏಜೆಂಟ್‌ ಆಗಿದ್ದಾರೆ ತೆಲಂಗಾಣ ಸಿಎಂ: ಬಿಜೆಪಿ

  • 8 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಆಸ್ತಿ- ಅಧಿಕಾರಿ ವಿರುದ್ಧ ಪ್ರಕರಣ ದಾಖಲು

    8 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಆಸ್ತಿ- ಅಧಿಕಾರಿ ವಿರುದ್ಧ ಪ್ರಕರಣ ದಾಖಲು

    ಪಾಟ್ನಾ: ಬಿಹಾರ ಸರ್ಕಾರದ ವಿಜಿಲೆನ್ಸ್ ಇನ್ವೆಸ್ಟಿಗೇಶನ್ ಬ್ಯೂರೋ ಬ್ಲಾಕ್ ಮಟ್ಟದ ಅಧಿಕಾರಿಯೊಬ್ಬರ ವಿರುದ್ಧ ತನ್ನ ಆದಾಯಕ್ಕಿಂತ 8 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಗಳಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದೆ.

    ಜಾಗೃತ ದಳದ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಮೇರೆಗೆ ಪಾಟ್ನಾ ಮತ್ತು ಮೋತಿಹಾರಿಯಲ್ಲಿರುವ ಅಧಿಕಾರಿಯ ಎರಡು ನಿವಾಸಗಳ ಮೇಲೆ ದಾಳಿ ಮಾಡಿದ್ದು, ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ 1.75 ಕೋಟಿ ನಗದು, 48 ಲಕ್ಷ ಮೌಲ್ಯದ 2.2 ಕೆಜಿ ಚಿನ್ನ ಮತ್ತು ಬೆಳ್ಳಿ ಆಭರಣಗಳು, 42 ರಾಷ್ಟ್ರೀಕೃತ ಬ್ಯಾಂಕುಗಳ ಪಾಸ್‍ಬುಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಲವ್ ಇದ್ಮೇಲೆ ಜಿಹಾದ್ ಯಾಕೆ ಬರುತ್ತೆ – ಇಬ್ರಾಹಿಂ ತಿರುಗೇಟು

    BRIBE

    ಈ ಕುರಿತು ವಿಜಿಲೆನ್ಸ್ ಅಧಿಕಾರಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕಾರ್ಮಿಕ ಇಲಾಖೆಯ ಹಾಜಿಪುರದ ಬ್ಲಾಕ್ ಮಟ್ಟದ ಅಧಿಕಾರಿ 8 ಕೋಟಿಗೂ ಹೆಚ್ಚು ಮೊತ್ತದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಾಳಿಯ ವೇಳೆ 14 ಎಲ್‍ಐಸಿ ಪಾಲಿಸಿಗಳು, 17 ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‍ಗಳು ಮತ್ತು 25 ಭೂಮಿ ಖರೀದಿ ಒಪ್ಪಂದ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಚರ ಮತ್ತು ಸ್ಥಿರ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗಿದೆ. ವಿಶೇಷ ನ್ಯಾಯಾಧೀಶರು, ವಿಜಿಲೆನ್ಸ್, ಪಾಟ್ನಾ ಅವರು ಸರ್ಚ್ ವಾರೆಂಟ್ ಹೊರಡಿಸಿದ ನಂತರ ಈ ದಾಳಿಗಳನ್ನು ನಡೆಸಲಾಯಿತು. ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ನಡೆದ ಅಕ್ರಮ ಆಸ್ತಿ ಪ್ರಕರಣಗಳಲ್ಲಿ ಇದು ಅತಿ ದೊಡ್ಡ ಜಪ್ತಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಯೋಗಿ ಸರ್ಕಾರದಿಂದ ಇಲ್ಲಿಯವರೆಗೆ 15246 ಕಿ.ಮೀ.ಗೂ ಹೆಚ್ಚು ಗ್ರಾಮೀಣ ರಸ್ತೆಗಳನ್ನು ನಿರ್ಮಾಣ

  • ವಕ್ಫ್ ಆಸ್ತಿ ಕಬಳಿಕೆ – ಪ್ರಶ್ನಿಸಿದ್ದಕ್ಕೆ ಪೊಲೀಸ್ ಠಾಣೆ ಎದುರೇ ನಾಲ್ವರಿಗೆ ಬಹಿಷ್ಕಾರ

    ವಕ್ಫ್ ಆಸ್ತಿ ಕಬಳಿಕೆ – ಪ್ರಶ್ನಿಸಿದ್ದಕ್ಕೆ ಪೊಲೀಸ್ ಠಾಣೆ ಎದುರೇ ನಾಲ್ವರಿಗೆ ಬಹಿಷ್ಕಾರ

    ಯಾದಗಿರಿ: ವಕ್ಫ್ ಆಸ್ತಿ ಕಬಳಿಕೆ ವಿಚಾರಕ್ಕೆ ದೂರು ನೀಡಲು ಹುಣಸಗಿ ಬಳಿ ಬಂದ ನಾಲ್ವರಿಗೆ ಪೊಲೀಸ್ ಸ್ಟೇಷನ್ ಎದುರಿನಲ್ಲಿಯೇ ಮುಸ್ಲಿಂ ಮುಖಂಡರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

    ಹುಣಸಗಿ ಪಟ್ಟಣದ ಕೆಂಭಾವಿ ರಸ್ತೆ ಬಳಿಯ ಸರ್ವೆ ನಂಬರ್ 456 ಖಬರಸ್ಥಾನದಲ್ಲಿರುವ 6 ಎಕರೆ ಖಬರಾಸ್ತಾನ ಆಸ್ತಿಯಲ್ಲಿ 2 ಎರಡು ಎಕರೆಯನ್ನು ಸಯ್ಯದ್ ಮುರ್ತಜಾ ಖಾದ್ರಿ ಬೆಣ್ಣೂರು ಕುಟುಂಬಸ್ಥರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕೆಲ ಮುಸ್ಲಿಂ ಸಮುದಾಯದ ಜನರು ಆರೋಪಿಸಿದ್ದಾರೆ.

    ಈ ವಿಚಾರವಾಗಿ ಪ್ರಶ್ನಿಸಿ ಬೆಣ್ಣೂರು ಕುಟುಂಬವರಾದ ದಾವಲ್ ಸಾಬ್ ಬೆಣ್ಣೂರು, ಹುಸೇನ್ ಸಾಬ್ ಗಾದಿ, ಸೂಫಿ ಸಾಬ್, ಹಸನ್ ಸಾಬ್ ಎಂಬವರು ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ. ಈ ವೇಳೆ ಪೊಲೀಸರು ಸಮಾಜದ ವಿಚಾರ ಸೂಕ್ತ ವೇದಿಕೆಯಲ್ಲಿ ಬಗೆಹರಿಸಿಕೊಳ್ಳಲು ನಿರ್ದೇಶನದ ನೀಡಿದ್ದಾರೆ.

    ಸಯ್ಯದ್ ಮೊಹಮ್ಮದ್ ಹನಿಫ್ ಬೆಣ್ಣೂರು, ಮೊಹಮ್ಮದ್ ಇಲಿಯಾಸ್ ಮಾತಿಗೆ ಜನ ತಲೆಯಾಡಿಸಿದ್ದು, ಸಭೆ ಹೆಸರಲ್ಲಿ ಪೊಲೀಸ್ ಠಾಣೆ ಎದುರಲ್ಲೇ ನಾಲ್ವರಿಗೆ ಧಾರ್ಮಿಕ ಕಾರ್ಯ, ಸಾಮಾಜಿಕ ಕಾರ್ಯದಲ್ಲಿ ಭಾಗಿಯಾಗದಂತೆ ಬಹಿಷ್ಕಾರ ಹಾಕಿದ್ದಾರೆ ಹಾಗೂ ಸಮಾಜದವರ ಮದುವೆ ಸಮಾರಂಭಕ್ಕೂ ಕರೆಯದಂತೆ ಮುಖಂಡರು ತಾಕೀತು ಮಾಡಿದ್ದಾರೆ. ಸಾಮಾಜಿಕ ಬಹಿಷ್ಕಾರ ಹಾಕುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದೆ.

  • ವಿದೇಶದಲ್ಲಿ ಭಾರೀ ಹೂಡಿಕೆ – ಜಾರ್ಜ್‌ಗೆ ಇಡಿಯಿಂದ ಸಮನ್ಸ್ ಜಾರಿ

    ವಿದೇಶದಲ್ಲಿ ಭಾರೀ ಹೂಡಿಕೆ – ಜಾರ್ಜ್‌ಗೆ ಇಡಿಯಿಂದ ಸಮನ್ಸ್ ಜಾರಿ

    ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಕೆಜೆ ಜಾರ್ಜ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

    ಬೆಂಗಳೂರು ಅಭಿವೃದ್ಧಿ ಸಚಿವರಾಗಿದ್ದಾಗ ವಿದೇಶಕ್ಕೆ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪವನ್ನು ಜಾರ್ಜ್ ಎದುರಿಸ್ತಿದ್ದು, ಈ ಸಂಬಂಧ ಜನವರಿ 16ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

    ಡಿ.23ರಂದೇ ಸಮನ್ಸ್ ಕೊಟ್ಟಿರೋ ಇಡಿ, ಜಾರ್ಜ್ ಪತ್ನಿ, ಪುತ್ರ ರಾಣಾ ಹಾಗೂ ಮಗಳ ಬ್ಯಾಂಕ್ ಖಾತೆಗಳು, ವ್ಯವಹಾರ, ಪಾಲುದಾರಿಕೆ ಬಗ್ಗೆಯೂ ವಿವರಣೆ ಕೇಳಿದೆ. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಬಿತ್ತರಿಸಿದ ಬೆನ್ನಲ್ಲೇ ಟ್ವೀಟ್ ಮಾಡಿದ ಕೆಜೆ ಜಾರ್ಜ್, ತಮಗೆ ಸಮನ್ಸ್ ಬಂದಿದ್ದನ್ನು ಒಪ್ಪಿಕೊಂಡು ತನಿಖೆಗೆ ಸಹಕರಿಸುವುದಾಗಿ ತಿಳಿಸಿದ್ದಾರೆ.

    ಆರೋಪ ಏನು?
    ಮಂತ್ರಿ ಆಗಿದ್ದಾಗ ವಿದೇಶಕ್ಕೆ ಹಣ ವರ್ಗಾವಣೆ ಮಾಡಿ ಉದ್ಯಮ ನಡೆಸುತ್ತಿರುವುದರ ಬಗ್ಗೆ ಆರೋಪ ಕೇಳಿ ಬಂದಿದೆ. ನ್ಯೂಯಾರ್ಕ್ ನಲ್ಲಿ ಆಸ್ತಿ ಖರೀದಿಸಿದ್ದಾರೆ. ಆಸ್ಟ್ರೇಲಿಯಾ, ಸಿಂಗಾಪುರ ಮತ್ತು ಹಾಂಕಾಂಗ್‍ನಲ್ಲಿ ವ್ಯವಹಾರ ಮಾಡುತ್ತಿದ್ದಾರೆ. ಪುತ್ರ ರಾಣಾ ಜಾರ್ಜ್ ಹೆಸರಿನಲ್ಲಿ ನ್ಯೂಯಾರ್ಕ್ ನಲ್ಲಿ ಆಸ್ತಿ ಖರೀದಿಸಿದ್ದರೆ ಪುತ್ರಿ ಹೆಸರಿನಲ್ಲಿ ಆಸ್ಟ್ರೇಲಿಯಾದಲ್ಲಿ ಪಂಚತಾರಾ ಹೋಟೆಲ್ ವ್ಯವಹಾರ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

    ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೆ.ಜೆ ಜಾರ್ಜ್ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದರು. ಅಕ್ರಮವಾಗಿ ಹಣ ವರ್ಗಾವಣೆ, ವಿದೇಶದಲ್ಲಿ ಆಸ್ತಿ, ಆಸ್ತಿ ವಿವರ ಘೋಷಣಾ ಪತ್ರದಲ್ಲಿ ಈ ಕುರಿತು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿ ಕೃಷ್ಣಾರೆಡ್ಡಿ ಮತ್ತು ಪ್ರಧಾನ ಕಾರ್ಯದರ್ಶಿ ದೀಪಕ್ ಅವರು ಅಗಸ್ಟ್ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು.

    ಈ ಕುರಿತು ಪ್ರತಿಕ್ರಿಯಿಸಿದ್ದ ರವಿ ಕೃಷ್ಣಾರೆಡ್ಡಿ, ಪ್ರಮುಖ ರಾಜಕೀಯ ನಾಯಕರು ತಮ್ಮ ಶಕ್ತಿ ಬಳಸಿ ಹಣ ಸಂಪಾದನೆ ಮಾಡುತ್ತಿದ್ದಾರೆ. ಈಗ ಇಡಿ ವಶದಲ್ಲಿರುವ ಡಿ.ಕೆ ಶಿವಕುಮಾರ್ ಮೇಲೆ ಸಹ ಈ ಬಗ್ಗೆ ನಾವು ಇಡಿಗೆ ದೂರು ನೀಡಿದ್ದೆವು. ಎರಡು ವರ್ಷದ ಹಿಂದೆಯೇ ದೂರು ನೀಡಿದ್ದೆವು ಆದರೆ, ನಿಧಾನವಾಗಿ ತನಿಖೆ ನಡೆಸಿ ಇಡಿ ಕ್ರಮ ಕೈಗೊಂಡಿದೆ. ಇಂದೂ ಸಹ ಅನೇಕ ಮಂತ್ರಿಗಳ ಮಕ್ಕಳ ಹೆಸರಲ್ಲಿ ನೂರಾರು ಕೋಟಿ ರೂ. ಆಸ್ತಿ ಇದೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಸೇರಿದಂತೆ ವಿವಿಧ ನಾಯಕರ ಮಕ್ಕಳ ಹೆಸರಿನಲ್ಲಿ ಬೇನಾಮಿ ಆಸ್ತಿಗಳಿವೆ ಎಂದು ಆರೋಪಿಸಿದ್ದರು.

    ಕೇರಳದಿಂದ ಕೊಡಗಿಗೆ ಬಂದು, ಸಣ್ಣ ಪುಟ್ಟ ಟಿಂಬರ್ ಕೆಲಸ ಮಾಡಿಕೊಂಡಿದ್ದ ಜಾರ್ಜ್ ನಂತರ ರಾಜಕಾರಣ ಮಾಡಿಕೊಂಡು ಬೆಂಗಳೂರಿಗೆ ಬಂದು ಇಷ್ಟೆಲ್ಲ ಆಸ್ತಿ ಸಂಪಾದಿಸಿದ್ದಾರೆ. ಕೆ.ಜೆ ಜಾರ್ಜ್ ಇದೀಗ ಸಾವಿರಾರು ಕೋಟಿ ರೂ.ಗಳ ಆಸ್ತಿಯ ಒಡೆಯ. ಅವರ ಮಗನ ಹೆಸರಿನಲ್ಲಿ ಬೇನಾಮಿ ಆಸ್ತಿ ಇದೆ. ಮಗಳ ಹೆಸರಿನಲ್ಲಿ ಅಮೆರಿಕದಲ್ಲಿ ಆಸ್ತಿ ಇದೆ. ಲೋಕಾಯುಕ್ತಕ್ಕೆ ಆಸ್ತಿ ಘೋಷಣೆ ಮಾಡುವಾಗ ಸಲ್ಲಿಸಿರುವ ಅಫಿಡೆವಿಟ್‍ನಲ್ಲಿ ಆಸ್ಟ್ರೇಲಿಯಾದಲ್ಲಿ ಆಸ್ತಿ ಇದೆ ಎಂದು ನಮೂದಿಸಿದ್ದಾರೆ. ಆದರೆ, ಚುನಾವಣೆಗೆ ಸ್ಪರ್ಧಿಸುವಾಗ ಈ ಆಸ್ತಿಗಳನ್ನು ಘೋಷಿಸಿಲ್ಲ ಎಂದು ತಿಳಿಸಿದ್ದರು.

    ಜನ ಪ್ರತಿನಿಧಿಗಳು ಸಿಂಗಾಪುರ ಮಾರ್ಗವಾಗಿ ತಮ್ಮ ಎಲ್ಲ ವ್ಯವಹಾರಗಳನ್ನು ನಡೆಸುತ್ತಾರೆ. ಅಮೇರಿಕ, ಮಲೇಷ್ಯಾ, ಸಿಂಗಾಪುರ ಹೋಗುವುದು ಕೇವಲ ಕ್ಯಾಸಿನೋ ಆಡಿ ಮಜಾ ಮಾಡುವುದಕ್ಕಲ್ಲ. ತಮ್ಮ ಆಸ್ತಿಗಳನ್ನು ನಿರ್ವಹಿಸಿಕೊಂಡು ಬರಲು ಹೋಗುತ್ತಾರೆ. ತಾವು ಸಂಪಾದಿಸಿರುವ ಹಣವನ್ನು ಹವಾಲಾ ಮೂಲಕ ವಿದೇಶಗಳಿಗೆ ಸಾಗಿಸುತ್ತಾರೆ. ಹೀಗಾಗಿ ನೀವು ರಾಜಕಾರಣ ಮಾಡಿ ಇಲ್ಲವೇ ಕೈಗಾರಿಕೋದ್ಯಮಿ, ವ್ಯಾಪಾರಸ್ಥರಾಗುವುದು ಒಳ್ಳೆಯದು. ಆದರೆ ಎರಡೂ ಮಾಡುವುದು ಜನದ್ರೋಹದ ಕೆಲಸವಾಗಿದ್ದು ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ. ಜನರ ದುಡ್ಡನ್ನು ವೈಯಕ್ತಿಕ ವಿಚಾರಕ್ಕೆ ಬಳಸಿಕೊಳ್ಳಲಾಗುತ್ತದೆ ಎಂದು ದೂರಿದ್ದರು.