Tag: illegal sand mining

  • ಅಕ್ರಮ ಮರಳು ದಂಧೆ ಬಗ್ಗೆ ತನಿಖೆ ಮಾಡ್ತಿದ್ದ ಪತ್ರಕರ್ತನ ಮೇಲೆ ಲಾರಿ ಹರಿದು ಸಾವು

    ಅಕ್ರಮ ಮರಳು ದಂಧೆ ಬಗ್ಗೆ ತನಿಖೆ ಮಾಡ್ತಿದ್ದ ಪತ್ರಕರ್ತನ ಮೇಲೆ ಲಾರಿ ಹರಿದು ಸಾವು

    ಭೋಪಾಲ್: ಅಕ್ರಮ ಮರಳು ದಂಧೆ ಬಗ್ಗೆ ತನಿಖೆ ಮಾಡುತ್ತಿದ್ದ ಪತ್ರಕರ್ತರೊಬ್ಬರ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಪ್ರದೇಶದಲ್ಲಿ ನಡೆದಿದೆ.

    35 ವರ್ಷದ ಸಂದೀಪ್ ಶರ್ಮಾ ಮೃತ ಪತ್ರಕರ್ತ. ಸಂದೀಪ್ ಅವರು ಬೈಕ್‍ನಲ್ಲಿ ಹೋಗುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸಂದೀಪ್ ಮೃತಪಟ್ಟಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

    ಪೊಲೀಸ್ ಠಾಣೆಯ ಬಳಿಯೇ ಅಪಘಾತ ಸಂಭವಿಸಿದ್ದು, ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಸಂದೀಪ್ ಅವರನ್ನು ಆಸ್ಪತ್ರೆಗೆ ರವಾನಿಸಿದರು ಎಂದು ವರದಿಯಾಗಿದೆ. ಆದ್ರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಸಂದೀಪ್ ಸಾವನ್ನಪ್ಪಿದ್ದಾರೆಂದು ವೈದ್ಯರು ಹೇಳಿದ್ದಾರೆ. ಅಪಘಾತದ ದೃಶ್ಯ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋವನ್ನ ಸುದ್ದಿಸಂಸ್ಥೆ ಹಂಚಿಕೊಂಡಿದೆ.

    ರಾಷ್ಟ್ರೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂದೀಪ್ ಶರ್ಮಾ ಈ ಹಿಂದೆ ನಡೆಸಿದ ಕುಟುಕು ಕಾರ್ಯಾಚರಣೆಯಿಂದಾಗಿ ತನಗೆ ಜೀವ ಬೆದರಿಕೆ ಇದೆ ಎಂದು ಪೊಲೀಸರಿಗೆ ದೂರು ನೀಡಿದ್ದರು ಎಂದು ವರದಿಯಾಗಿದೆ. ಸಂದೀಪ್ ಅವರು ಮಾಡಿದ್ದ ಕುಟುಕು ಕಾರ್ಯಾಚರಣೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಾಫಿಯಾದವರಿಂದ ಲಂಚ ಪಡೆಯುತ್ತಿರುವುದನ್ನು ತೋರಿಸಲಾಗಿತ್ತು.

    ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾ ಎಸ್‍ಪಿ ವಿಶೇಷ ತನಿಖಾ ತಂಡವನ್ನ ರಚಿಸಿದ್ದಾರೆ.

  • ಅಕ್ರಮ ಮರಳುಗಣಿಗಾರಿಕೆ ಟ್ರಾಕ್ಟರ್ ಪಲ್ಟಿ- ಇಬ್ಬರು ಯುವಕರ ಸಾವು

    ಅಕ್ರಮ ಮರಳುಗಣಿಗಾರಿಕೆ ಟ್ರಾಕ್ಟರ್ ಪಲ್ಟಿ- ಇಬ್ಬರು ಯುವಕರ ಸಾವು

    ದಾವಣಗೆರೆ: ಅಕ್ರಮ ಮರಳುಗಣಿಗಾರಿಕೆ ಇಬ್ಬರು ಯುವಕರು ಬಲಿಯಾದ ಘಟನೆ ದಾವಣಗೆರೆ ಜಿಲ್ಲೆಯ ಗಂಗನಕಟ್ಟೆ ಗ್ರಾಮದ ಕೆರೆಯಲ್ಲಿ ನಡೆದಿದೆ.

    ಗುರುವಾರ ಮಧ್ಯರಾತ್ರಿ ಕೆರೆಯಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಟ್ರಾಕ್ಟರ್ ಪಲ್ಟಿಯಾಗಿದ್ದು, ಯುವಕರ ಮೇಲೆ ಮರಳು ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯುವಕರ ಹೆಸರು ತಿಳಿದುಬಂದಿಲ್ಲ.

    ಘಟನೆ ವೇಳೆ ಟ್ರಾಕ್ಟರ್ ಟ್ರ್ಯಾಲಿ ಪಲ್ಟಿಯಾದ ಬಳಿಕ ಯುವಕರು ಸತ್ತಿದ್ದಾರೋ, ಬದುಕಿದ್ದಾರೋ ಅನ್ನುವುದನ್ನು ನೋಡದೇ ಚಾಲಕ ಎಂಜಿನ್ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಬೆಳಗ್ಗೆ ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿದಾಗ ಯುವಕರು ಸಾವನ್ನಪ್ಪಿದ ಮಾಹಿತಿ ಬೆಳಕಿಗೆ ಬಂದಿದೆ.

    ಹಲವು ವರ್ಷಗಳಿಂದ ಕೆರೆಯಲ್ಲಿ ಅಕ್ರಮ ಮರಳುಗಣಿಗಾರಿಕೆ ನಡೆಯುತ್ತಿದ್ದು, ಈ ಕುರಿತು ಅಧಿಕಾರಿಗಳಿಗೆ ಹಲವು ಬಾರಿ ಗ್ರಾಮಸ್ಥರು ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಕ್ರಮ ಮರಳುಗಣಿಗಾರಿಕೆಯೇ ಇಂತಹ ಅವಘಡಕ್ಕೆ ಕಾರಣವಾಗಿದ್ದು, ಜಿಲ್ಲೆಯಲ್ಲಿ ಈಗಾಗಲೇ ಅಕ್ರಮ ಮರಳು ಸಾಗಾಟ ಪ್ರಕರಣದಲ್ಲಿ ಕಳೆದ ಆರು ತಿಂಗಳಲ್ಲಿ 10 ಕ್ಕೂ ಹೆಚ್ಚು ಸಾವು ಸಂಭವಿಸಿವೆ. ಅದರೂ ಅಧಿಕಾರಿಗಳು ಮರಳುಗಣಿಗಾರಿಕೆ ಕುರಿತು ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಮಾಯಕೊಂಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಅಕ್ರಮ ಮರಳುಗಾರಿಕೆ ಮೇಲೆ ದಾಳಿ- 20 ಕಿ.ಮೀ ಚೇಸ್ ಮಾಡಿ ಟಿಪ್ಪರ್ ವಶಪಡಿಸಿಕೊಂಡ ತಹಶೀಲ್ದಾರ್

    ಅಕ್ರಮ ಮರಳುಗಾರಿಕೆ ಮೇಲೆ ದಾಳಿ- 20 ಕಿ.ಮೀ ಚೇಸ್ ಮಾಡಿ ಟಿಪ್ಪರ್ ವಶಪಡಿಸಿಕೊಂಡ ತಹಶೀಲ್ದಾರ್

    ರಾಯಚೂರು: ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ ಟಿಪ್ಪರ್‍ನನ್ನ ಸುಮಾರು 20 ಕಿ.ಮೀ ಹಿಂಬಾಲಿಸಿ ರಾಯಚೂರಿನ ದೇವದುರ್ಗ ತಹಶೀಲ್ದಾರ್ ಹಿಡಿದಿದ್ದಾರೆ.

    ದೇವದುರ್ಗದ ಜಾಲಹಳ್ಳಿಯಲ್ಲಿ ಘಟನೆ ನಡೆದಿದ್ದು ತಹಶೀಲ್ದಾರ್ ಕೆ.ಶಿವಶರಣಪ್ಪ ಟಿಪ್ಪರ್ ವಶಕ್ಕೆ ಪಡೆದಿದ್ದಾರೆ. ನಂಬರ್ ಪ್ಲೇಟ್ ಸಹ ಇಲ್ಲದೆ ಅಕ್ರಮ ದಂಧೆಯಲ್ಲಿ ತೊಡಗಿದ್ದ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ.

    ಕೃಷ್ಣ ನದಿ ತೀರದ ಬಾಗೂರು, ಹೆರುಂಡಿ, ನಿಲವಂಜಿ, ಲಿಂಗದಹಳ್ಳಿಯಿಂದ ರಾತ್ರಿ-ಹಗಲು ಅಕ್ರಮ ಮರಳುಗಾರಿಕೆ ನಡೆದಿದೆ. ಇಲ್ಲಿಂದ ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತಿದೆ. ಘಟನೆ ಹಿನ್ನೆಲೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.