Tag: Illegal storage

  • 4 ಲಕ್ಷ ರೂ.ಮೌಲ್ಯದ ಪಡಿತರ ಅಕ್ಕಿ ಅಕ್ರಮ ಸಂಗ್ರಹ

    4 ಲಕ್ಷ ರೂ.ಮೌಲ್ಯದ ಪಡಿತರ ಅಕ್ಕಿ ಅಕ್ರಮ ಸಂಗ್ರಹ

    ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರಗುಂಟಾದಲ್ಲಿ ಗೋದಾಮೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಪಡಿತರ ಅಕ್ಕಿಯನ್ನ ಜಪ್ತಿ ಮಾಡಿದ್ದಾರೆ.

    ಗುರಗುಂಟಾದ ತಿಮ್ಮಾರೆಡ್ಡಿಗೆ ಸೇರಿದ ಗೋದಾಮಿನಲ್ಲಿ ಪಡಿತರ ಅಕ್ಕಿ ಪತ್ತೆಯಾಗಿದೆ. ಪೊಲೀಸರ ರಕ್ಷಣೆಯೊಂದಿಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ 4,92,600 ರೂ ಮೌಲ್ಯದ 821 ಚೀಲ ಪಡಿತರ ಅಕ್ಕಿ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: 500 ರೂಪಾಯಿಗೆ ಕೈ ಮಿಲಾಯಿಸಿದ ಆಶಾ ಕಾರ್ಯಕರ್ತೆಯರು

    ಆರೋಪಿ ತಿಮ್ಮಾರೆಡ್ಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ದಾಳಿ ಹಿನ್ನೆಲೆ ಆಹಾರ ನಿರೀಕ್ಷಕ ಅಬ್ದುಲ್ ರೌಫ್ ದೂರು ದಾಖಲಿಸಿದ್ದು, ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಬಣ ರಾಜಕೀಯ ಬಲು ಜೋರು – ಕತ್ತಿ ಸಭೆಗೆ ಪ್ರತಿಯಾಗಿ ಜಾರಕಿಹೊಳಿ ಮೀಟಿಂಗ್

  • ಅಕ್ರಮವಾಗಿ ಈರುಳ್ಳಿ ದಾಸ್ತಾನು ಮಾಡಿದ್ರೆ ಹುಷಾರ್!

    ಅಕ್ರಮವಾಗಿ ಈರುಳ್ಳಿ ದಾಸ್ತಾನು ಮಾಡಿದ್ರೆ ಹುಷಾರ್!

    ಮೈಸೂರು: ಈರುಳ್ಳಿ ಬೆಲೆ ದುಬಾರಿ ಆಗಿರುವ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಈರುಳ್ಳಿ ಮಾರಾಟಕ್ಕೆ ಲೈಸನ್ಸ್ ಪಡೆಯುವುದು ಕಡ್ಡಾಯವಾಗಿದ್ದು, ಅಕ್ರಮವಾಗಿ ಈರುಳ್ಳಿ ದಾಸ್ತಾನು ಮಾಡುವವರ ವಿರುದ್ಧ ಕ್ರಮ ತೆಗದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    ಮೈಸೂರು ಜಿಲ್ಲಾಧಿಕಾರಿಗಳು ಈರುಳ್ಳಿ ಮಾರಾಟಕ್ಕೆ ಲೈಸನ್ಸ್ ಪಡೆಯುವುದು ಕಡ್ಡಾಯ ಎಂದು ಆದೇಶ ಹೊರಡಿಸಿದ್ದಾರೆ. ಅಗತ್ಯ ವಸ್ತುಗಳ ಪರವಾನಗಿಗೆ ಆದೇಶ 1986ರ(ತಿದ್ದುಪಡಿ 2019) ಪ್ರಕಾರ, ನಗರದಲ್ಲಿ ಈರುಳ್ಳಿ ವ್ಯಾಪಾರಿಗಳು ಜಿಲ್ಲಾಧಿಕಾರಿಯಿಂದ ಲೈಸೆನ್ಸ್ ಪಡೆಯುವುದು ಕಡ್ಡಾಯ. ತಾಲೂಕಿನಲ್ಲಿನ ಮಾರಾಟಗಾರರು ಆಯಾ ತಾಲೂಕಿನ ತಹಶಿಲ್ದಾರರ್‍ರಿಂದ ಲೈಸೆನ್ಸ್ ಪಡೆದು ಈರುಳ್ಳಿ ಮಾರಾಟ ಮಾಡಬೇಕು ಎಂದು ಆದೇಶಿಸಲಾಗಿದೆ.

    ಸರ್ಕಾರದ ಆದೇಶದಂತೆ ಈರುಳ್ಳಿ ಸಗಟು ವ್ಯಾಪಾರಿಗಳು 250 ಕ್ವಿಂಟಾಲ್ ದಾಸ್ತಾನು ಮಾಡಬೇಕು. ಚಿಲ್ಲರೆ ವ್ಯಾಪಾರಿಗಳು 50 ಕ್ವಿಂಟಾಲ್ ದಾಸ್ತಾನು ಮಾಡಬೇಕು. ಲೈಸೆನ್ಸ್ ಇಲ್ಲದೆ ಅದಕ್ಕಿಂತ ಹೆಚ್ಚಿನ ಈರುಳ್ಳಿ ದಾಸ್ತಾನು ಮಾಡಿದರೆ, ನಿಯಮ ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

    ಜಿಲ್ಲಾಧಿಕಾರಿಗಳ ಈ ಆದೇಶದಿಂದ ಈರುಳ್ಳಿಗೆ ಅಕ್ರಮ ದಾಸ್ತಾನು ಮಾಡಿಕೊಂಡವರಲ್ಲಿ ಆತಂಕ ಸೃಷ್ಟಿಯಾಗಿದೆ. ಇಂದಿನಿಂದ ಈರುಳ್ಳಿ ಅಂಗಡಿಗಳ ಮೇಲೂ ಆಹಾರ ಇಲಾಖೆ ಪರಿಶೀಲನೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.