Tag: illness

  • Bengaluru | ಅನಾರೋಗ್ಯಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

    Bengaluru | ಅನಾರೋಗ್ಯಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

    ಬೆಂಗಳೂರು: ಅನಾರೋಗ್ಯಕ್ಕೆ (Illness) ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಾಣಾಗಿರುವ ಘಟನೆ ಬೆಂಗಳೂರಿನ (Bengaluru) ಗೊಲ್ಲರಹಟ್ಟಿಯಲ್ಲಿ ನಡೆದಿದೆ.

    ಪುರುಷೋತ್ತಮ್ (27) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೂಲತಃ ಮಾಗಡಿ (Magadi) ತಾಲೂಕು ರಾಮನಗರ (Ramanagara) ಜಿಲ್ಲೆ ಬಾಳೆನಹಳ್ಳಿಯ ಪುರುಷೋತ್ತಮ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪುರುಷೋತ್ತಮ್ ಕಳೆದ 5 ವರ್ಷದಿಂದ ಹೆಂಡತಿ ಹಾಗೂ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅನಾರೋಗ್ಯದಿಂದ ಬೆಸತ್ತು ಗೊಲ್ಲರಹಟ್ಟಿಯಲ್ಲಿ ರೂಂ ಡೋರ್ ಲಾಕ್ ಮಾಡಿಕೊಂಡು ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ದಳಪತಿಗಳಿಗೆ ಮುಖಭಂಗ – ಮತ್ತೆ ‘ಕೈ’ ವಶವಾಯ್ತು ಮನ್ಮುಲ್‌ ಗದ್ದುಗೆ

    ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಗಳೂರು ಡಿಸಿಸಿ ಬ್ಯಾಂಕ್‌ಗೆ ಆರ್‌ಬಿಐ ಶಾಕ್‌ – 5 ಲಕ್ಷ ರೂ. ದಂಡ, ಕಾನೂನು ಕ್ರಮದ ಎಚ್ಚರಿಕೆ

  • ಮಂಗಳೂರಿನಲ್ಲಿ ಎಳನೀರು ಕುಡಿದು 15 ಮಂದಿ ಅಸ್ವಸ್ಥ!

    ಮಂಗಳೂರಿನಲ್ಲಿ ಎಳನೀರು ಕುಡಿದು 15 ಮಂದಿ ಅಸ್ವಸ್ಥ!

    ಮಂಗಳೂರು: ಎಳನಿರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ.

    ಅಡ್ಯಾರ್‍ನಲ್ಲಿರುವ ಎಳನೀರು (Tender Coconut)  ಮತ್ತು ಐಸ್ ಕ್ರೀಮ್ ಮಾರಾಟ ಸಂಸ್ಥೆಯಿಂದ ಒಂದಷ್ಟು ಮಂದಿ ಎಳನೀರು ಖರೀದಿಸಿದ್ದರು. ಈ ಎಳನೀರು ಕುಡಿದ ಬಳಿಕ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ವಾಂತಿ ಮತ್ತು ಭೇದಿಯಿಂದ ಬಳಲಿದ್ದಾರೆ.

    ಸದ್ಯ ಅಸ್ವಸ್ಥಗೊಂಡ ಮೂವರಿಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ 12 ಮಂದಿ ಹೊರರೋಗಿಗಳಾಗಿ ಔಷಧಿ ಪಡೆದಿದ್ದಾರೆ. ಘಟನೆ ಬಳಿಕ ಆಸ್ಪತ್ರೆ ಹಾಗೂ ಫ್ಯಾಕ್ಟರಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಎಳನೀರಿನ ಸ್ಯಾಂಪಲ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದಾರೆ. ಅಲ್ಲದೇ ಜನ ಆತಂಕಕ್ಕೆ ಒಳಗಾಗದಂತೆ ಆರೋಗ್ಯಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.  ಇದನ್ನೂ ಓದಿ: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ಗುಡ್‍ನ್ಯೂಸ್- ನಾಳೆ, ನಾಡಿದ್ದು ಬೆಂಗಳೂರಲ್ಲಿ ಮಳೆ ಸಾಧ್ಯತೆ

  • ಆಸ್ಪತ್ರೆಗೆ ದಾಖಲಾದ ಖ್ಯಾತ ನಟ ಅಜಿತ್ ಕುಮಾರ್

    ಆಸ್ಪತ್ರೆಗೆ ದಾಖಲಾದ ಖ್ಯಾತ ನಟ ಅಜಿತ್ ಕುಮಾರ್

    ಮಿಳು ಸಿನಿಮಾ ರಂಗದ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಆಸ್ಪತ್ರೆಗೆ ದಾಖಲಾಗಿರುವ ವಿಚಾರ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಸೈಕಲ್, ಬೈಕ್ ಏರಿ ಏಕಾಏಕಿ ನೂರಾರು ಕೀಲೋ ಮೀಟರ್ ಪ್ರವಾಸ ಮಾಡುವ ಅಜಿತ್ ಅವರಿಗೆ ಸಡನ್ನಾಗಿ ಏನಾಯಿತು ಎಂದು ಹಲವಾರು ಪ್ರಶ್ನೆಗಳನ್ನು ಅಭಿಮಾನಿಗಳು ಮಾಡಿದ್ದರು.

    ಹೌದು, ಬೆಳಗ್ಗೆಯಿಂದಲೇ ಅಜಿತ್ ಆಸ್ಪತ್ರೆಗೆ ಸೇರಿರುವ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಆದರೆ, ಆತಂಕ ಪಡುವಂಥದ್ದು ಅಜಿತ್ ಅವರಿಗೆ ಏನೂ ಆಗಿಲ್ಲ ಎನ್ನುವ ಮಾಹಿತಿ ಸಿಕ್ಕಿದೆ. ದೂರದೂರಿನ ಪ್ರವಾಸ ಮತ್ತು ಇಂತಿಷ್ಟು ತಿಂಗಳು ಕಳೆದ ಬಳಿಕ, ಅವರು ರೆಗ್ಯುಲರ್ ಆಗಿ ಚೆಕಪ್ ಮಾಡಿಸಿಕೊಳ್ಳುತ್ತಾರಂತೆ. ಈಗಲೂ ಆಸ್ಪತ್ರೆಗೆ ಹೋಗಿದ್ದು ರೆಗ್ಯುಲರ್ ಚೆಕಪ್ ಗಾಗಿ ಎಂದು ಹೇಳಲಾಗುತ್ತಿದೆ.

     

    ಅಜಿತ್ ಅವರ ಆರೋಗ್ಯ ಅಷ್ಟೊಂದು ಆರೋಗ್ಯಪೂರ್ಣವಾಗಿರಲು ಕಾರಣ, ಆಗಾಗ್ಗೆ ಅವರು ವೈದ್ಯರನ್ನು ಭೇಟಿ ಮಾಡಿ, ಪರೀಕ್ಷೆ ಮಾಡಿಸಿಕೊಳ್ಳುತ್ತಾರೆ. ಅದರಲ್ಲೂ ಬೈಕ್ ಸವಾರಿಗೆ ಹೊರಟರೆ, ಅದಕ್ಕೂ ಮುನ್ನ ಆರೋಗ್ಯ ತಪಾಸಣೆ ಮಾಡಿಕೊಳ್ಳುತ್ತಾರಂತೆ. ಈಗಲೂ ಅಜಿತ್ ಮಾಡಿದ್ದು ಅದೇ ಎನ್ನುವುದು ಅವರ ಆಪ್ತರ ಮಾಹಿತಿ.

  • ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲು

    ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲು

    ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ (Priyanaka Gandhi Vadra) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ಶುಕ್ರವಾರ ಉತ್ತರಪ್ರದೇಶದ (Uttar Pradesh) ಚಂದೌಲಿಯಲ್ಲಿ (Chandauli) ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಸ್ಪಷ್ಟಪಡಿಸಿದ್ದಾರೆ.

    ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಸ್ವತಃ ಪ್ರಿಯಾಂಕ ಗಾಂಧಿ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ. ಬಿಹಾರದಿಂದ ಉತ್ತರಪ್ರದೇಶಕ್ಕೆ ಭಾರತ್ ಜೋಡೋ ನ್ಯಾಯ ಯಾತ್ರೆ (Bharat Jodo Nyay Yatra) ತಲುಪುವ ವೇಳೆ ತಾನೂ ಅದರಲ್ಲಿ ಪಾಲ್ಗೊಳ್ಳಬೇಕೆಂದು ಬಯಸಿದ್ದೆ. ಆದರೆ ಅನಾರೋಗ್ಯದಿಂದಾಗಿ ನಾನು ಆಸ್ಪತ್ರೆ ಸೇರಬೇಕಾಯಿತು. ಅನಾರೋಗ್ಯದಿಂದ ಚೇತರಿಸಿಕೊಂಡ ತಕ್ಷಣ ಮತ್ತೆ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಪ್ರತಿಭಟನಾ ನಿರತರ ಮೇಲೆ ಮತ್ತೆ ಅಶ್ರುವಾಯು ದಾಳಿ – ಹೃದಯಾಘಾತದಿಂದ ರೈತ ಸಾವು!

    ಯಾತ್ರೆಯಲ್ಲಿ ತಾನು ಭಾಗಿಯಾಗದ ಹಿನ್ನೆಲೆ ಭಾರತ್ ನ್ಯಾಯ್ ಯಾತ್ರೆಯಲ್ಲಿ ಶ್ರಮಿಸಿದ ಎಲ್ಲಾ ನನ್ನ ಸಹೋದ್ಯೋಗಿಗಳು, ಯಾತ್ರಿಗಳು ಹಾಗೂ ನನ್ನ ಸಹೋದರನಿಗೆ ಶುಭಹಾರೈಸುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ – 11 ಮಂದಿ ಸಜೀವ ದಹನ

  • Breaking- ಮತ್ತೆ ಆಸ್ಪತ್ರೆ ಪಾಲಾದ ಡ್ರೋನ್ ಪ್ರತಾಪ್: ಹೆಚ್ಚಿದ ಆತಂಕ

    Breaking- ಮತ್ತೆ ಆಸ್ಪತ್ರೆ ಪಾಲಾದ ಡ್ರೋನ್ ಪ್ರತಾಪ್: ಹೆಚ್ಚಿದ ಆತಂಕ

    ನಿನ್ನೆ ರಾತ್ರಿಯಿಂದಲೇ ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಡ್ರೋನ್ ಪ್ರತಾಪ್ (Drone Pratap) ಕಾಣಿಸಿಕೊಂಡಿಲ್ಲ. ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ಬಾರಿ ಕಣ್ಣಿಗೆ ಸೋಪಿನ ನೀರು ಹಾಕಿಸಿಕೊಂಡು ಆಸ್ಪತ್ರೆ (Hospital) ಸೇರಿದ್ದರು. ಆದರೆ, ಈ ಬಾರಿ ಅವರಿಗೆ ಆಹಾರದಲ್ಲಿ ವ್ಯತ್ಯಾಸವಾಗಿ ಆಸ್ಪತ್ರೆ ಸೇರಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಇನ್ನೂ ಕೆಲವರು ಬಿಗ್ ಬಾಸ್ ಮನೆಗೆ ವಾಪಸ್ಸು ಆಗದೇ ಇರುವಂತಹ ಘಟನೆ ನಡೆದಿದೆ ಎಂದೂ ಬರೆದುಕೊಂಡಿದ್ದಾರೆ.

    ಫುಡ್ ಪಾಯಿಸನ್ ಆಗಿದೆ ಎಂದು ಕೆಲವು ಮೂಲಗಳು ಮಾಹಿತಿ ನೀಡಿದರೆ, ಇನ್ನೂ ಕೆಲವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕೋವಿಡ್ ಸೋಂಕು ಏನಾದರೂ ತಗಲಿರಬಹುದಾ ಎನ್ನುವ ಪ್ರಶ್ನೆಯನ್ನೂ ಮಾಡಿದ್ದಾರೆ. ಹಾಗಾಗಿ ಸಹಜವಾಗಿಯೇ ಡ್ರೋನ್ ಪ್ರತಾಪ್ ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಪ್ರತಾಪ್ ಅವರಿಗೆ ಏನಾಗಿದೆ ಎಂದು ತಿಳಿಸಿ ಎಂದು ವಾಹಿನಿಗೆ ಸೋಷಿಯಲ್ ಮೀಡಿಯಾ ಮೂಲಕ ಕೇಳುತ್ತಿದ್ದಾರೆ.

    ಡ್ರೋನ್ ಪ್ರತಾಪ್ ಅವರ ಟೀಮ್ ಹ್ಯಾಂಡಲ್ ಮಾಡುವಂತಹ ಸೋಷಿಯಲ್ ಮೀಡಿಯಾದಲ್ಲಿ ಊಟದಲ್ಲಿ ಸ್ವಲ್ಪ ವ್ಯತ್ಯಾಸ ಉಂಟಾಗಿ ಹುಷಾರು ತಪ್ಪಿದ್ದಾರೆ. ಇನ್ನ ಸ್ವಲ್ಪ ಸಮಯದ ಒಳಗೆ ಬಿಗ್ ಬಾಸ್ ಮನೆಗೆ ನಿಮ್ಮ ಡ್ರೋನ್ ಪ್ರತಾಪ್ ಅವರು ತೆರಳಿದ್ದಾರೆ. ಅವರಿಗೆ ವೋಟ್ ಮಾಡಿ’ ಎಂದು ಪೋಸ್ಟ್ ಮಾಡಿದ್ದಾರೆ.

    ಬಿಗ್ ಬಾಸ್ ಮನೆಯ ಅಪ್ ಡೇಟ್ ನೀಡುವಂತಹ ಮತ್ತು ಅದರಲ್ಲಿ ಬಹುತೇಕ ವಿಷಯಗಳು ನಿಜವೂ ಆಗಿರುವಂತಹ ಬಿಬಿಕೆ ಅಪ್ ಡೇಟ್ ಸೋಷಿಯಲ್ ಮೀಡಿಯಾ ಬರೆದುಕೊಂಡಂತೆ ಮತ್ತೆ ಬಿಗ್ ಬಾಸ್ ಮನೆಗೆ ಪ್ರತಾಪ್ ಬರೋದು ಅನುಮಾನ ಎಂದು ಪೋಸ್ಟ್ ಮಾಡಲಾಗಿದೆ. ಹಾಗಾಗಿ ಡ್ರೋನ್ ಅವರಿಗೆ ಏನಾಗಿದೆ ಎನ್ನುವ ಆತಂಕ ಎಲ್ಲರದ್ದು.

  • ಕನ್ನಡದ ಹೆಸರಾಂತ ನಟಿ ಲೀಲಾವತಿ ನಿಧನ

    ಕನ್ನಡದ ಹೆಸರಾಂತ ನಟಿ ಲೀಲಾವತಿ ನಿಧನ

    ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ (Passed away). ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ.

    ಲೀಲಾವತಿ (Leelavathi) ಅವರು ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದರು. ಅವರ ಆರೋಗ್ಯ (Health) ಯೋಗ ಕ್ಷೇಮ ವಿಚಾರಿಸಲು ಖುದ್ದು ಸಿಎಂ ಸಿದ್ದರಾಮಯ್ಯ (Cm Siddaramiah) ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದರು.

    87 ವರ್ಷದ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟ ದರ್ಶನ್, ಅಂಬರೀಶ್, ಗಿರಿಜಾ ಲೋಕೇಶ್ ಸೇರಿದಂತೆ ಅನೇಕರು ಆಗಮಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟ ಮನೆಗೆ ಭೇಟಿ ನೀಡಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದರು.

     

    ಈ ವೇಳೆ ಮಾಧ್ಯಮಕ್ಕೆ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ, ನೆಲಮಂಗಲದಲ್ಲಿ ಕಾರ್ಯಕ್ರಮವೊಂದಕ್ಕೆ ಬಂದಿದ್ದೆ ಹಾಗೆ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಬಂದಿದ್ದೀನಿ. ಅವರು ಈಗ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ್ರೆ ಎಲ್ಲಾ ಖರ್ಚು ನಾನೇ ನೋಡಿಕೊಳ್ಳುತ್ತೇನೆ. ಲೀಲಾವತಿ ಅವರು ನೈಜ ಕಲಾವಿದೆ ಎಂದು ಮೆಚ್ಚುಗೆ ಸೂಚಿಸಿದ್ದರು. ಅದರಂತೆ ಲೀಲಾವತಿ ಪುತ್ರ ವಿನೋದ್ ರಾಜ್ (Vinod Raj), ತಾಯಿ ಲೀಲಾವತಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ

  • ಕಂಗನಾ ಅನಾರೋಗ್ಯ: 12 ತಿಂಗಳಲ್ಲಿ ಬಂದ ಕಾಯಿಲೆಗಳೆಷ್ಟು?

    ಕಂಗನಾ ಅನಾರೋಗ್ಯ: 12 ತಿಂಗಳಲ್ಲಿ ಬಂದ ಕಾಯಿಲೆಗಳೆಷ್ಟು?

    ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ (Kangana Ranaut) ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಕುರಿತು ಅವರೇ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ. ಈ ಹನ್ನೆರಡು ತಿಂಗಳಲ್ಲಿ ಒಟ್ಟು ನಾಲ್ಕು ಬಾರಿ ಅವರು ವಿವಿಧ ಕಾಯಿಲೆಗಳಿಗೆ ತುತ್ತಾಗಿದ್ದು, ಯಾವೆಲ್ಲ ಕಾಯಿಲೆಗಳು ಅವಾಗಿದ್ದವು ಎನ್ನುವುದನ್ನೂ ಅವರು ಹೇಳಿಕೊಂಡಿದ್ದಾರೆ.

    ಕೋವಿಡ್, ಡೆಂಘಿ, ಹಂದಿ ಜ್ವರ,  ಕೋವಿಡ್ ಒಮಿಕ್ರಾನ್ ಹೀಗೆ ಸಾಲು ಸಾಲು ರೋಗಗಳು ಕಂಗನಾ ಅವರನ್ನು ಬಾಧಿಸಿವೆಯಂತೆ. ಯಾಕೆ ಈ ಮಾಹಿತಿಯನ್ನು ಕಂಗನಾ ಹಂಚಿಕೊಂಡಿದ್ದಾರೆ ಎನ್ನುವ ಕುರಿತು ಅವರು ಬರೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಎಷ್ಟೋ ಜನರು ಕುಸಿದು ಹೋಗುತ್ತಾರೆ, ಹತಾಶೆ ಕಾಣಿಸಿಕೊಳ್ಳುತ್ತದೆ. ಆದರೆ, ಅದರಿಂದ ಶರವೇಗದಲ್ಲಿ ಆಚೆ ಬರಬೇಕು ಎಂದು ಉತ್ಸಾಹ ತುಂಬಿದ್ದಾರೆ.

    ಸದ್ಯ ಕಂಗನಾ ರಣಾವತ್ ಚಂದ್ರಮುಖಿ 2 ಸಿನಿಮಾದ ಪ್ರಚಾರದಲ್ಲೂ ಭಾಗಿಯಾಗುತ್ತಿದ್ದಾರೆ.  ಈ ಸಿನಿಮಾ ಕುರಿತು ಅವರು ಮಾತನಾಡಿ, ‘ನನ್ನ ನಟನಾ ವೃತ್ತಿಜೀವನದಲ್ಲಿ ನಾನು ಚಂದ್ರಮುಖಿ 2 ಚಿತ್ರ ಮಾಡಿಲ್ಲ. ಅಸಲಿ ವಿಷಯವೆಂದರೆ, ನಾನು ಯಾರನ್ನೂ ಆಫರ್ ಕೇಳಿಲ್ಲ. ಮೊದಲ ಬಾರಿಗೆ ನಾನು ನಿರ್ದೇಶಕ ಪಿ. ವಾಸು ಅವರನ್ನು ಕೇಳಿದೆ. ಈ ಚಿತ್ರದಲ್ಲಿ ವಾಸು ಅವರು ನನ್ನ ಪಾತ್ರದ ಜೊತೆಗೆ ಪ್ರತಿ ಪಾತ್ರಕ್ಕೂ ಸಮಾನ ಪ್ರಾಮುಖ್ಯತೆ ನೀಡಿದ್ದಾರೆ.ಇಡೀ ಕ್ರೆಡಿಟ್ ಅವರಿಗೆ ಸಲ್ಲುತ್ತದೆ. ಲಾರೆನ್ಸ್ ಮಾಸ್ಟರ್ ಅನೇಕರಿಗೆ ಸ್ಫೂರ್ತಿ’ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 13 ವರ್ಷ ಭಾರತಾಂಬೆಯ ಸೇವೆ ಮಾಡಿದ ಕೊಡಗಿನ ಯೋಧ ಅನಾರೋಗ್ಯದಿಂದ ನಿಧನ

    13 ವರ್ಷ ಭಾರತಾಂಬೆಯ ಸೇವೆ ಮಾಡಿದ ಕೊಡಗಿನ ಯೋಧ ಅನಾರೋಗ್ಯದಿಂದ ನಿಧನ

    ಮಡಿಕೇರಿ: ಬೆಂಗಳೂರಿನ (Bengaluru) ಮಿಲಿಟರಿ (Military) ಎಂಇಜಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧರೊಬ್ಬರು (Soldier) ಶುಕ್ರವಾರ ಅನಾರೋಗ್ಯದಿಂದ (Illness) ನಿಧನರಾಗಿದ್ದಾರೆ.

    ಮಡಿಕೇರಿ (Madikeri) ತಾಲೂಕಿನ ಭಾಗಮಂಡಲ ಸಮೀಪದ ಸಣ್ಣಪುಲಿಕೋಟು ಗ್ರಾಮದ ಜಿತಿನ್ (31) ಮೃತಪಟ್ಟ ಯೋಧ. ಸಣ್ಣಪುಲಿಕೋಟು ಗ್ರಾಮದ ಕಾಳಪ್ಪ ಮತ್ತು ದಮಯಂತಿ ಪುತ್ರರಾಗಿರುವ ಜಿತಿನ್ 2012ರಲ್ಲಿ ಮಿಲಿಟರಿ ಸೇವೆಗೆ ಸೇರಿದ್ದು, 11 ವರ್ಷಗಳ ಸೇವೆಯನ್ನು ಪೂರೈಸಿದ್ದಾರೆ. ಆರಂಭದಲ್ಲಿ ಬೆಂಗಳೂರಿನಲ್ಲಿ ತರಬೇತಿಗೆ ಸೇರಿದ್ದು, ಜಮ್ಮು ಹಾಗೂ ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಬೆಂಗಳೂರಿನಲ್ಲಿ ನಾಯಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ಹೆಚ್‍ಡಿಕೆ ಕಿಡಿ

    ವಿದೇಶಕ್ಕೆ ತೆರಳುವ ಉದ್ದೇಶದಿಂದ ಜಿತಿನ್ ಹೆಚ್ಚಿನ ತರಬೇತಿಯನ್ನು ಪಡೆಯುತ್ತಿದ್ದರು. ಪ್ಯಾರಾಚೂಟ್ ತರಬೇತಿ ಪಡೆಯುತ್ತಿದ್ದ ಸಂದರ್ಭ ಬಿದ್ದು ಅವರ ಕಿಡ್ನಿಗೆ ತೊಂದರೆಯಾಗಿತ್ತು. ಇದಕ್ಕೆ ಸೂಕ್ತ ಚಿಕಿತ್ಸೆಯನ್ನು ಪಡೆದಿದ್ದರು. ತರಬೇತಿ ಮುಕ್ತಾಯ ಹಂತದಲ್ಲಿದ್ದು, ಕೊನೆಯ ದಿನವಾದ ಶುಕ್ರವಾರ ಬೆಳಗ್ಗಿನ ಜಾವ ಓಟದ ಸಂದರ್ಭ ಕುಸಿದು ಬಿದ್ದಿದ್ದಾರೆ. ಅವರನ್ನು ಕಮಾಂಡೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಐಸಿಯುಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಗಣೇಶನ ಹಬ್ಬ ಸೆ.18ಕ್ಕಾ ಅಥವಾ 19ಕ್ಕಾ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    ಒಂದೂವರೆ ವರ್ಷಗಳ ಹಿಂದಷ್ಟೇ ಜಿತಿನ್ ವನಿತಾ ಎಂಬವರನ್ನು ವಿವಾಹವಾಗಿದ್ದರು. ಅವರ ಪತ್ನಿ ವೀರಾಜಪೇಟೆ ಎಸ್‌ಬಿಐ ಬ್ಯಾಂಕ್ ಉದ್ಯೋಗಿಯಾಗಿದ್ದು, ಆ ಕೆಲಸ ಬಿಟ್ಟು ಒಂದು ವರ್ಷದಿಂದ ಬೆಂಗಳೂರಿನಲ್ಲಿ ಪತಿಯೊಂದಿಗೆ ವಾಸವಿದ್ದರು. ಜಿತಿನ್ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಸೇನಾ ಗೌರವ ಸಲ್ಲಿಸಿ ಶುಕ್ರವಾರ ಸಂಜೆ ಬೆಂಗಳೂರಿನಿಂದ ಕಳುಹಿಸಿಕೊಡಲಾಗಿದೆ. ಶನಿವಾರ ಸಣ್ಣಪುಲಿಕೋಟು ಮೇಲ್ಕಟ್ಟು ಶಾಲೆಯ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಪೂಜೆಗೆ ತೆರಳಿದ್ದ ವೈದ್ಯ ಹೇಮಾವತಿ ನದಿಯಲ್ಲಿ ಮುಳುಗಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೆಚ್‌ಡಿ ಕುಮಾರಸ್ವಾಮಿ ತಡರಾತ್ರಿ ಆಸ್ಪತ್ರೆಗೆ ದಾಖಲು

    ಹೆಚ್‌ಡಿ ಕುಮಾರಸ್ವಾಮಿ ತಡರಾತ್ರಿ ಆಸ್ಪತ್ರೆಗೆ ದಾಖಲು

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (H.D.Kumaraswamy) ಅವರಿಗೆ ಏಕಾಏಕಿ ಅನಾರೋಗ್ಯ (Illness) ಕಾಣಿಸಿಕೊಂಡಿದ್ದು, ಈ ಹಿನ್ನೆಲೆ ತಡರಾತ್ರಿ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ.

    ಎರಡು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ಯ ಮನೆಯಲ್ಲೇ ಇದ್ದರು. ಮಂಗಳವಾರ ತಡರಾತ್ರಿ ಇವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ಅಲ್ಲದೇ ಸತತ ಪ್ರವಾಸದ ಹಿನ್ನೆಲೆ ಜ್ವರ ಕಾಣಿಸಿಕೊಂಡಿದ್ದು, ಮಂಗಳವಾರ ತಡರಾತ್ರಿ ಬನ್ನೇರುಘಟ್ಟ ರಸ್ತೆಯ ಅಪೋಲೋ (Apollo) ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಪಟಾಕಿ ಗೋದಾಮು ದುರಂತ ಸೂಕ್ತ ತನಿಖೆಯಾಗಲಿ: ಬಸವರಾಜ ಬೊಮ್ಮಾಯಿ

    ಈ ಹಿಂದೆ ಕೂಡಾ ಚುನಾವಣಾ ಸಮಯದಲ್ಲಿ ನಿರಂತರ ಪ್ರಚಾರದಲ್ಲಿ ತೊಡಗಿದ್ದ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡಿದ್ದರು. ಇದೀಗ ಎರಡೆರಡು ಬಾರಿ ವಿದೇಶ ಪ್ರವಾಸ ಮಾಡಿದ್ದು, ಸತತ ಪ್ರವಾಸದಿಂದ ಅನಾರೋಗ್ಯ ಕಾಣಿಸಿಕೊಂಡಿದೆ. ಇದನ್ನೂ ಓದಿ: ಇಂದೇ ಗೃಹಲಕ್ಷ್ಮಿ ಹಣ ಬರುವ ನಿರೀಕ್ಷೆಯಲ್ಲಿ ರಾಯಚೂರಿನ 3,64,059 ಫಲಾನುಭವಿಗಳು

    ಇತ್ತೀಚಿಗಷ್ಟೇ ಕುಟುಂಬ ಸಮೇತ ಯೂರೋಪ್ ಪ್ರವಾಸ ಮುಗಿಸಿದ್ದ ಹೆಚ್‌ಡಿಕೆ ಆಗಸ್ಟ್ 7ರಂದು ವಿಶೇಷ ಆಹ್ವಾನದ ಮೇರೆಗೆ ಕಾಂಬೋಡಿಯಾ ಪ್ರವಾಸಕ್ಕೆ ಹೋಗಿದ್ದರು. ವಿದೇಶ ಪ್ರವಾಸದಿಂದ ಬಳಲಿದ ಕಾರಣ ಅನಾರೋಗ್ಯ ಉಂಟಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ಚಾಲನೆಗೆ ಮೈಸೂರನ್ನೇ ಆಯ್ಕೆ ಮಾಡಿದ್ದು ಯಾಕೆ – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಡ್ವಾನ್ಸ್ ವಾಪಸ್ ಮಾಡಿದ ಸಮಂತಾ: ಚಿತ್ರರಂಗಕ್ಕೆ ತಾತ್ಕಾಲಿಕ ಗುಡ್ ಬೈ

    ಅಡ್ವಾನ್ಸ್ ವಾಪಸ್ ಮಾಡಿದ ಸಮಂತಾ: ಚಿತ್ರರಂಗಕ್ಕೆ ತಾತ್ಕಾಲಿಕ ಗುಡ್ ಬೈ

    ದು ನಿಜಕ್ಕೂ ಸಮಂತಾ (Samantha) ಅಭಿಮಾನಿಗಳಿಗೆ ಕಹಿ ಸಮಾಚಾರ. ಇದ್ದಕ್ಕಿದ್ದಂತೆಯೇ ಸಮಂತಾ ಸಿನಿಮಾ ರಂಗದಿಂದ ದೂರ (Goodbye) ಉಳಿಯುವ ಆಲೋಚನೆ ಮಾಡಿದ್ದಾರಂತೆ. ಕೈಯಲ್ಲಿರುವ ಎರಡು ಪ್ರಾಜೆಕ್ಟ್ ಗಳನ್ನು ಶೀಘ್ರವಾಗಿ ಮುಗಿಸಿಕೊಟ್ಟು, ಒಂದು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಇರುವ ಪ್ಲ್ಯಾನ್ ಮಾಡಿದ್ದಾರಂತೆ.

    ಸದ್ಯ ವಿಜಯ್ ದೇವರಕೊಂಡ ಜೊತೆ ಖುಷಿ (Khushi,) ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಸಮಂತಾ.  ಈ ಸಿನಿಮಾದ ಶೂಟಿಂಗ್ ನಾಲ್ಕೈದು ದಿನಗಳ ಬಾಕಿಯಷ್ಟೇ ಇದೆಯಂತೆ. ಅಲ್ಲದೇ, ಸಿಟಾಡೆಲ್ (Citadel) ಪ್ರಾಜೆಕ್ಟ್ ಅನ್ನೂ ಬಹುತೇಕ ಮುಗಿಸಿದ್ದಾರಂತೆ ಸಮಂತಾ. ಈಗಾಗಲೇ ಒಪ್ಪಿಕೊಂಡಿದ್ದ ಕೆಲವು ಪ್ರಾಜೆಕ್ಟ್ ಗಳ ನಿರ್ಮಾಪಕರಿಗೆ ಹಣ ವಾಪಸ್ಸು ಮಾಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಇದನ್ನೂ ಓದಿ:‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ: ರೆಟ್ರೋ ಲುಕ್ ಫೋಟೋ ಲೀಕ್

    ಸಮಂತಾ ಇಂಥದ್ದೊಂದು ಕಠಿಣ ನಿರ್ಧಾರ ತೆಗೆದುಕೊಳ್ಳಲು ಕಾರಣ ಅವರಿಗಿರುವ ಅನಾರೋಗ್ಯ. ಆಟೋಇಮ್ಯೂನ್ ಎನ್ನುವ ಅಪರೂಪದ ಕಾಯಿಲೆಯಿಂದ ಸಮಂತಾ ಬಳಲುತ್ತಿದ್ದಾರೆ. ಕಳೆದ ವರ್ಷದಿಂದ ಅದಕ್ಕಾಗಿ ಅವರು ಚಿಕಿತ್ಸೆಯನ್ನೂ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುವಾಗಲೂ ಅವರು ಚಿತ್ರರಂಗದಿಂದ ದೂರವಿದ್ದರು. ಇದೀಗ ಹೆಚ್ಚುವರಿಯಾಗಿ ಮತ್ತೆ ಅವರು ಚಿಕಿತ್ಸೆ ಪಡೆದುಕೊಳ್ಳಲಿದ್ದಾರಂತೆ.

    ಈ ಕಾಯಿಲೆಗೆ ಹೆಚ್ಚು ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸೂಚಿಸಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದು ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆಯಲು ಸಮಂತಾ ಪ್ಲ್ಯಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]