Tag: illness

  • HDD ಆಸ್ಪತ್ರೆಗೆ ದಾಖಲು

    HDD ಆಸ್ಪತ್ರೆಗೆ ದಾಖಲು

    ಬೆಂಗಳೂರು: ಅನಾರೋಗ್ಯ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು (HD Deve Gowda) ಬೆಂಗಳೂರಿನ (Bengaluru) ಖಾಸಗಿ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ.

    ಕಾಲು ಊತ ಜಾಸ್ತಿ ಆಗಿದ್ದ ಕಾರಣ ಮಾಜಿ ಪ್ರಧಾನಿ ದೇವೇಗೌಡರು ಜನರಲ್ ಚೆಕಪ್‌ಗೆಂದು ಬೆಂಗಳೂರಿನ ಆಸ್ಪತ್ರೆಗೆ ಹೋಗಿದ್ದರು. ಈ ಸಂದರ್ಭ ವೈದ್ಯರು ಪರಿಶೀಲಿಸಿ ಒಂದು ವಾರದ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.

    ವೈದ್ಯರ ಸೂಚನೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುವ ಸಲುವಾಗಿ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್ – ಕೋರ್ಟ್‌ನಲ್ಲಿ ಇಂದು ಏನಾಯ್ತು?

  • ‘ಖುಷಿ’ ಸಿನಿಮಾದ ಶೂಟಿಂಗ್‌ಗೆ ಸಮಂತಾ ಗೈರು: ಅನಾರೋಗ್ಯದ ಬಗ್ಗೆ ಗುಸುಗುಸು

    ‘ಖುಷಿ’ ಸಿನಿಮಾದ ಶೂಟಿಂಗ್‌ಗೆ ಸಮಂತಾ ಗೈರು: ಅನಾರೋಗ್ಯದ ಬಗ್ಗೆ ಗುಸುಗುಸು

    ಮಂತಾ (Samantha) ಆರೋಗ್ಯದ (health) ಬಗ್ಗೆ ಹಲವು ತಿಂಗಳಿನಿಂದ ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಅವುಗಳಿಗೆ ಪುಷ್ಠಿ ಕೊಡುವಂತೆ ಸಮಂತಾ ಕೂಡ ಯಾರ ಕಣ್ಣಿಗೂ ಕಾಣಿಸಿಕೊಳ್ಳದೇ, ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳದೇ, ಕೊನೆ ಪಕ್ಷ ಹರಡಿರುವ ಸುದ್ದಿಗೆ ಸ್ಪಷ್ಟನೆ ಕೊಡದೇ ಮತ್ತೆ ಮತ್ತೆ ಅಭಿಮಾನಿಗಳನ್ನು ಆತಂಕಕ್ಕೆ ದೂಡುತ್ತಿದ್ದಾರೆ.

    ಸಮಂತಾ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಅವರು ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೇ, ಖಾಯಿಲೆ ಕಾರಣದಿಂದಾಗಿ ಅವರು ಮನೆಯಿಂದ ಆಚೆ ಬರುತ್ತಿಲ್ಲ ಎನ್ನುವ ಸುದ್ದಿಯೂ ಇತ್ತು. ಈ ಕಾರಣದಿಂದಾಗಿಯೇ ಅವರು ನಟಿಸಿದ ಸಿನಿಮಾಗಳ ಬಿಡುಗಡೆ ದಿನಾಂಕ ಮುಂದೂಡಲಾಗಿದೆ ಎಂದೂ ಹೇಳಲಾಗಿತ್ತು. ಇಷ್ಟೆಲ್ಲ ಸುದ್ದಿಗಳು ಹರಡಿದರೂ, ಅವರು ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ:ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್

    ಅಂದುಕೊಂಡಂತೆ ಆಗಿದ್ದರೆ, ವಿಜಯ್ ದೇವರಕೊಂಡ (Vijay Devarakonda) ನಾಯಕನಾಗಿ ನಟಿಸುತ್ತಿರುವ ಖುಷಿ (Khushi) ಸಿನಿಮಾದ ಚಿತ್ರೀಕರಣದಲ್ಲಿ ಸಮಂತಾ ತೊಡಗಿಕೊಳ್ಳಬೇಕಿತ್ತು. ಆದರೆ, ಅವರು ಚಿತ್ರೀಕರಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಲಾಗಿತ್ತು. ಖುಷಿ ಸಿನಿಮಾಗೆ ಎರಡು ಹಂತದಲ್ಲಿ ಚಿತ್ರೀಕರಣ ನಡೆದಿದ್ದೂ, ಎರಡೂ ಹಂತದ ಶೂಟಿಂಗ್‌ನಲ್ಲಿ ಅವರು ಭಾಗಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ವಿಜಯ್ ದೇವರಕೊಂಡ ಡೇಟ್ ಸಮಸ್ಯೆ ಆಗುತ್ತಿದೆಯಂತೆ.

    ಖುಷಿ ಸಿನಿಮಾದ ಚಿತ್ರೀಕರಣದಲ್ಲಿ ಸಮಂತಾ ಭಾಗಿ ಆಗಿಲ್ಲ ಎನ್ನುವ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಮತ್ತೆ ಸಮಂತಾ ಅವರ ಆರೋಗ್ಯದ ಬಗ್ಗೆ ಚರ್ಚೆ ಶುರುವಾಗಿದೆ. ಅನಾರೋಗ್ಯದ ಕಾರಣದಿಂದಾಗಿಯೇ ಅವರು ಶೂಟಿಂಗ್‌ಗೆ ಬಂದಿಲ್ಲ ಎಂದು ಹೇಳಲಾಗುತ್ತಿದೆ. ಸಮಂತಾ ಈ ಕುರಿತು ಏನೂ ಹೇಳದೇ ಇರುವ ಕಾರಣದಿಂದಾಗಿ ಅಭಿಮಾನಿಗಳಿಗೆ ಸಹಜವಾಗಿ ಆತಂಕ ಮೂಡಿದೆ.

    Live Tv
    [brid partner=56869869 player=32851 video=960834 autoplay=true]

  • ಕೈ ಶಾಸಕ ತನ್ವೀರ್ ಸೇಠ್ ಆಸ್ಪತ್ರೆಗೆ ದಾಖಲು

    ಕೈ ಶಾಸಕ ತನ್ವೀರ್ ಸೇಠ್ ಆಸ್ಪತ್ರೆಗೆ ದಾಖಲು

    ಮೈಸೂರು: ಮೈಸೂರು ಎನ್‍ಆರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ತನ್ವೀರ್ ಸೇಠ್ ಸೋಮವಾರ ರುಟಿನ್ ಚೆಕ್‍ಅಪ್‍ಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ತನ್ವೀರ್ ಸುಸ್ತು ಹಾಗೂ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ವೈದ್ಯರು ಒಂದು ದಿನ ಆಸ್ಪತ್ರೆಯಲ್ಲೇ ಇರುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಖಡ್ಗ, ಭಯ, ದಬ್ಬಾಳಿಕೆಯಿಂದ ತನ್ವೀರ್ ಸೇಠ್ ಆಗಿದ್ದಾರೆ: ಪ್ರತಾಪ್ ಸಿಂಹ

    ಸದ್ಯ ಆಸ್ಪತ್ರೆಗೆ ದಾಖಲಾಗಿರುವ ತನ್ವೀರ್ ಸೇಠ್ ವೈದ್ಯರ ನಿಗಾದಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಗಳು ಬಿಜೆಪಿ ಸರ್ಕಾರದ ಸೆಟ್ಲ್ಮೇಂಟ್ ಕೇಂದ್ರಗಳಾಗಿವೆ: ಈಶ್ವರ್ ಖಂಡ್ರೆ

  • ಮೊಹಮ್ಮದ್ ಸಿರಾಜ್ ತಂದೆ ನಿಧನ – ಕೊನೆಯ ಬಾರಿ ಅಪ್ಪನನ್ನು ನೋಡಲಾಗದ ಸ್ಥಿತಿಯಲ್ಲಿ ವೇಗಿ

    ಮೊಹಮ್ಮದ್ ಸಿರಾಜ್ ತಂದೆ ನಿಧನ – ಕೊನೆಯ ಬಾರಿ ಅಪ್ಪನನ್ನು ನೋಡಲಾಗದ ಸ್ಥಿತಿಯಲ್ಲಿ ವೇಗಿ

    – ಆಟೋ ಓಡಿಸಿ ಮಗನನ್ನು ಟೀಂ ಇಂಡಿಯಾಗೆ ಕಳುಹಿಸಿದ್ದ ಅಪ್ಪ

    ನವದೆಹಲಿ: ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಅವರ 53 ವರ್ಷದ ತಂದೆ ಮೊಹಮ್ಮದ್ ಗೌಸ್ ಅವರು ಹೈದರಾಬಾದಿನಲ್ಲಿ ವಿಧವಶರಾಗಿದ್ದಾರೆ.

    ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಮೊಹಮ್ಮದ್ ಗೌಸ್ ಅವರು ಹಲವಾರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಸದ್ಯ ಸಿರಾಜ್ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದು, ತಂದೆಯ ಅಂತ್ಯಕ್ರಿಯೆಗೂ ಬಾರದ ಸ್ಥಿತಿಯಲ್ಲಿ ಇದ್ದಾರೆ. ಕ್ವಾರಂಟೈನ್ ನಿಯಮದ ಪ್ರಕಾರ ಸಿರಾಜ್ ಆಸ್ಟ್ರೇಲಿಯಾದಿಂದ ಬರಲು ಸಾಧ್ಯವಾಗುತ್ತಿಲ್ಲ.

    ಈ ವಿಚಾರವಾಗಿ ಕ್ರೀಡಾವಾಹಿನಿಯ ಜೊತೆ ಮಾತನಾಡಿರುವ ಸಿರಾಜ್, ಸಿಡ್ನಿಯಲ್ಲಿ ಅಭ್ಯಾಸ ಮುಗಿಸಿ ಬಂದ ನನಗೆ ತಂದೆಯ ವಿಚಾರವನ್ನು ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿಯವರು ತಿಳಿಸಿದರು. ನಮ್ಮ ತಂದೆ ಯಾವಾಗಲೂ ಹೇಳುತ್ತಿದ್ದರು, ನನ್ನ ಮಗ ನನ್ನ ದೇಶವನ್ನು ಹೆಮ್ಮೆ ಪಡುವಂತೆ ಮಾಡುತ್ತಾನೆ ಎಂದು ಅವರಿಗಾಗಿ ನಾನು ಖಂಡಿತವಾಗಿಯೂ ಅದನ್ನು ಮಾಡೇ ಮಾಡುತ್ತೇನೆ ಎಂದು ಹೇಳಿದ್ದಾರೆ.

    ನನಗಾಗಿ ಮತ್ತು ನನ್ನ ಕನಸಿಗಾಗಿ ನನ್ನಪ್ಪ ಆಟೋ ಓಡಿಸಿಕೊಂಡು ಬಹಳ ಕಷ್ಟಪಟ್ಟಿದ್ದಾರೆ. ನಾನು ನನ್ನ ಜೀವನದ ಪ್ರಮುಖ ಬೆಂಬಲವೊಂದನ್ನು ಕಳೆದುಕೊಂಡಿದ್ದೇನೆ. ನಾನು ದೇಶಕ್ಕಾಗಿ ಆಡಬೇಕು ಎಂದು ಅವರು ಕನಸು ಕಂಡಿದ್ದರು. ಎಲ್ಲೋ ಒಂದು ಕಡೆ ಅವರ ಕನಸ್ಸನ್ನು ನನಸು ಮಾಡಿದ್ದೇನೆ ಎಂಬ ಸಂತೋಷವಿದೆ. ಕೊಹ್ಲಿಯವರು ಮತ್ತು ರವಿಶಾಸ್ತ್ರಿಯವರು ಬಂದು ವಿಷಯ ಹೇಳಿದಾಗ ಶಾಕ್ ಆಯ್ತು ಎಂದು ಸಿರಾಜ್ ಹೇಳಿಕೊಂಡಿದ್ದಾರೆ.

    ಅಕ್ಟೋಬರ್ 21ರಂದು ಕೋಲ್ಕತ್ತಾ ವಿರುದ್ಧ ಸಿರಾಜ್ ನಾಲ್ಕು ಓವರ್ ಬೌಲ್ ಮಾಡಿ ಕೇವಲ ಎಂಟು ರನ್ ನೀಡಿ ಮೂರು ವಿಕೆಟ್ ಪಡೆದಿದ್ದರು. ಅಂದು ಅವರ ತಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಅಂದು ಮ್ಯಾಚ್ ಮುಗಿಸಿ ಮನೆಗೆ ಕಾಲ್ ಮಾಡಿದಾಗ ತಂದೆ ಆಸ್ಪತ್ರೆಯಿಂದ ಮನೆಗೆ ಬಂದಿದ್ದರು. ಆಗ ನಾನು ಇಂದು ಎರಡು ಗುಡ್ ನ್ಯೂಸ್, ಮ್ಯಾಚ್ ಗೆದ್ದಿದ್ದೇವೆ ಜೊತೆಗೆ ಅಪ್ಪ ವಾಪಸ್ ಮನೆಗೆ ಬಂದಿದ್ದಾರೆ ಎಂದು ಖುಷಿಪಟ್ಟಿದೆ ಎಂದು ಸಿರಾಜ್ ತಿಳಿಸಿದ್ದಾರೆ.

    ಐಪಿಎಲ್‍ನಲ್ಲಿ ನಾನು ಚೆನ್ನಾಗಿ ಆಡಿದ್ದ ದಿನ ನನ್ನ ತಂದೆ ನನಗೆ ಕರೆ ಮಾಡಿ ನಿನ್ನ ಫೋಟೋ ಪೇಪರಿನಲ್ಲಿ ಬಂದಿದೆ. ದಿನ ಪೂರ್ತಿ ಜನ ನನ್ನ ಕರೆದು ನಿನ್ನ ಮಗ ಐಪಿಎಲ್ ಚೆನ್ನಾಗಿ ಆಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದರು ಎಂದು ತಂದೆಯ ನೆನಪನ್ನು ಸಿರಾಜ್ ಹಂಚಿಕೊಂಡಿದ್ದಾರೆ. ಸದ್ಯ ಸಿರಾಜ್ ಈಗ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದು, ಆಸ್ಟ್ರೇಲಿಯಾದಲ್ಲಿ ಅಭ್ಯಾಸ ಮಾಡುತ್ತಿದ್ದಾರೆ.

  • ಕನ್ನಡದ ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು

    ಕನ್ನಡದ ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು

    ಬೆಂಗಳೂರು: ಕನ್ನಡ ಹಿರಿಯ ನಟಿ ಜಯಂತಿ ಅವರು ಅನಾರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಜಯಂತಿ ಅವರು ಹಲವು ದಿನಗಳಿಂದ ಅಸ್ತಮ ಸಮಸ್ಯೆಯಿಂದ ಬಳಲುತ್ತಿದ್ದು, ಅವರನ್ನು ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅನಾರೋಗ್ಯದಿಂದ ಬಳುತ್ತಿರುವ ಜಯಂತಿ ಅವರಿಗೆ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ಸತೀಶ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ.

    ಜಯಂತಿ ಅವರ ಆರೋಗ್ಯದ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ಅವರ ಮಗ ಕೃಷ್ಣಕುಮಾರ್, ಅಸ್ತಮ ಸಮಸ್ಯೆಯಿಂದ ಎರಡು ದಿನಗಳ ಹಿಂದೆಯೇ ತಾಯಿಯವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದೇವೆ. ಅವರಿಗೆ ಕೊರೊನಾ ಟೆಸ್ಟ್ ಕೂಡ ನಡೆಸಿದ್ದು, ವರದಿಯಲ್ಲಿ ನೆಗಟಿವ್ ಬಂದಿದೆ. ಯಾವುದೇ ತೊಂದರೆ ಇಲ್ಲ. ಅಮ್ಮನನ್ನು ತುರ್ತು ಚಿಕಿತ್ಸಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

  • ಕಿಮ್ ಜಾಂಗ್-ಉನ್ ಆರೋಗ್ಯ ಗಂಭೀರ – ಉ.ಕೊರಿಯಾಗೆ ಬಂದಿಳಿದ ಚೀನಾ ವೈದ್ಯರು

    ಕಿಮ್ ಜಾಂಗ್-ಉನ್ ಆರೋಗ್ಯ ಗಂಭೀರ – ಉ.ಕೊರಿಯಾಗೆ ಬಂದಿಳಿದ ಚೀನಾ ವೈದ್ಯರು

    ಬೀಜಿಂಗ್: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್-ಉನ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಚಿಕಿತ್ಸೆ ನೀಡಲು ಚೀನಾದ ನುರಿತ ವೈದ್ಯರ ತಂಡ ಉತ್ತರ ಕೊರಿಯಾಗೆ ಬಂದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡಿವೆ.

    ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿಪಿಸಿ) ಅಂತರರಾಷ್ಟ್ರೀಯ ಸಂಪರ್ಕ ವಿಭಾಗದ ಹಿರಿಯ ಸದಸ್ಯರ ನೇತೃತ್ವದಲ್ಲಿ ವೈದ್ಯರ ನಿಯೋಗವು ಬೀಜಿಂಗ್‍ನಿಂದ ಪ್ಯೊಂಗ್ಯಾಂಗ್‍ಗೆ ಗುರುವಾರ ಹೋಗಿದೆ ಎನ್ನಲಾಗಿದೆ. ಕಿಮ್ ಜಾಂಗ್-ಉನ್ ಚೈನ್ ಸ್ಮೋಕರ್ ಆಗಿದ್ದು, ಅವರ ದೇಹದ ತೂಕ ಜಾಸ್ತಿಯಾಗಿದೆ. ಜೊತೆಗೆ ಅವರ ಕುಟುಂಬ ಈ ಹಿಂದೆಯಿಂದಲೂ ಹೃದಯರಕ್ತನಾಳದ ಸಮಸ್ಯೆಯನ್ನು ಬಳಲಿದ್ದ ಇತಿಹಾಸವನ್ನು ಹೊಂದಿದೆ ಎಂದು ವರದಿಯಾಗಿದೆ.

    ಈ ಮುಂಚೆಯಿಂದಲೂ ಚೀನಾ ಮತ್ತು ಉತ್ತರ ಕೊರಿಯಾದ ಸಂಬಂಧ ಉತ್ತಮವಾಗಿದೆ. ಕಳೆದ ಕೆಲ ವರ್ಷಗಳಿಂದ ಚೀನಾದ ರಹಸ್ಯ ಅಧಿಕಾರಿಗಳು ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಸೇರಿ ಹಲವಾರು ಬಾರಿ ಕಿಮ್ ಜಾಂಗ್-ಉನ್ ಅನ್ನು ಭೇಟಿಯಾಗಿ ಬಂದಿದ್ದರು ಎನ್ನಲಾಗಿದೆ. ಈ ಕಾರಣದಿಂದಲೇ ಕಿಮ್ ಜಾಂಗ್-ಉನ್ ಆರೋಗ್ಯ ಹದೆಗೆಟ್ಟ ಸಮಯದಲ್ಲಿ ಚೀನಾ ವೈದ್ಯರನ್ನು ಕಳುಹಿಸಿಕೊಟ್ಟಿದೆ. ಆದರೆ ಈ ಬಗ್ಗೆ ಚೀನಾ ಎಲ್ಲೂ ಬಹಿರಂಗವಾಗಿ ಹೇಳಿಕೊಂಡಿಲ್ಲ.

    ಕಿಮ್ ಜಾಂಗ್-ಉನ್ ಸರ್ವಾಧಿಕಾರಿಯಾಗಿದ್ದು, ಹೆಚ್ಚು ಹೆಚ್ಚು ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳುತ್ತಿದ್ದರು. ಆದರೆ ಏಪ್ರಿಲ್ 11ರ ನಂತರ ಕಿಮ್ ಜಾಂಗ್-ಉನ್ ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ವರದಿಗಳ ಪ್ರಕಾರ ಕಿಮ್ ಏಪ್ರಿಲ್ 15 ರಂದು ನಡೆದ ತನ್ನ ಅಜ್ಜ ಮತ್ತು ಉತ್ತರ ಕೊರಿಯಾ ಸಂಸ್ಥಾಪಕ ಕಿಮ್ ಇಲ್ ಸುಂಗ್ ಅವರ ಹುಟ್ಟುಹಬ್ಬದ ಆಚರಣೆಗೂ ಗೈರು ಹಾಜರಾಗಿದ್ದರು. ಅಧಿಕಾರಕ್ಕೆ ಏರಿದ ಬಳಿಕ ಇಲ್ಲಿಯವರೆಗೆ ಈ ಕಾರ್ಯಕ್ರಮಕ್ಕೆ ಗೈರಾಗಿರಲಿಲ್ಲ. ಈ ಕಾರಣದಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

    ಉತ್ತರ ಕೊರಿಯಾ ತಮ್ಮ ದೇಶದ ನಾಯಕರ ಆರೋಗ್ಯದ ವಿಚಾರವನ್ನು ರಾಷ್ಟ್ರದ ಭದ್ರತೆಯ ವಿಚಾರವೆಂದು ಪರಿಗಣಿಸುತ್ತದೆ. ಈ ಕಾರಣಕ್ಕೆ ಕಿಮ್ ಆರೋಗ್ಯ ಬಗ್ಗೆ ಎಲ್ಲಿಯೂ ಸುದ್ದಿ ಪ್ರಕಟವಾಗಿಲ್ಲ. ಆದರೆ ಈ ಎಲ್ಲದರ ಮಧ್ಯೆ ಸರ್ಕಾರಿ ಸ್ವಾಮ್ಯದ ಕೊರಿಯಾದ ಕೇಂದ್ರ ಸುದ್ದಿ ಸಂಸ್ಥೆಯೊಂದು ಕಿಮ್ ಕಳೆದ ಬುಧವಾರ ಸಿರಿಯಾ ದೇಶದ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಅವರಿಗೆ ಸಂದೇಶವೊಂದನ್ನು ಕಳುಹಿಸಿದ್ದಾರೆ ಎಂದು ಸುದ್ದಿ ಮಾಡಿದೆ.

    ಈ ಹಿಂದೆ ಅಮೆರಿಕ ಮೂಲದ ಸುದ್ದಿ ಸಂಸ್ಥೆಯೊಂದು ಕಿಮ್ ಹೃದಯರಕ್ತನಾಳದ ಸರ್ಜರಿಗೆ ಒಳಗಾಗಿದ್ದರು ಎಂದು ಸುದ್ದಿ ಮಾಡಿತ್ತು. ಜೊತೆಗೆ ನಮಗೆ ಬಂದ ಗುಪ್ತ ಮಾಹಿತಿ ಪ್ರಕಾರ ಈ ಸರ್ಜರಿಯ ನಂತರ ಕಿಮ್ ಆರೋಗ್ಯ ಪರಿಸ್ಥಿತಿ ತುಂಬ ಹದಗೆಟ್ಟಿದೆ ಎಂದು ವರದಿ ಮಾಡಿತ್ತು. ಬುಧವಾರ ಈ ಬಗ್ಗೆ ಮಾಹಿತಿ ನೀಡಿದ್ದ ಚೀನಾ ರಾಯಭಾರಿ ಕಚೇರಿ ವಕ್ತಾರ, ನಮಗೆ ಕಿಮ್ ಆರೋಗ್ಯದ ಬಗ್ಗೆ ಮಾಹಿತಿ ಇದೆ. ಆದರೆ ಈ ಸಮಯದಲ್ಲಿ ಅದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

  • ಹೆರಿಗೆ ಬಳಿಕ ಹೊಟ್ಟೆ ನೋವು ತಾಳಲಾರದೆ ತಾಯಿ ಆತ್ಮಹತ್ಯೆ

    ಹೆರಿಗೆ ಬಳಿಕ ಹೊಟ್ಟೆ ನೋವು ತಾಳಲಾರದೆ ತಾಯಿ ಆತ್ಮಹತ್ಯೆ

    – 10 ತಿಂಗ್ಳ ಮಗ್ಳನ್ನು ಡ್ರಂನಲ್ಲಿ ಮುಳುಗಿಸಿ ಕೊಲೆ
    – ಮಗು ಅನಾಥ ಆಗುತ್ತೆ ಎಂಬ ಕಾರಣಕ್ಕೆ ಹತ್ಯೆ

    ಚಿತ್ರದುರ್ಗ: ತಾಯಿಯೊಬ್ಬಳು ತನ್ನ ಹತ್ತು ತಿಂಗಳ ಹೆಣ್ಣು ಮಗುವನ್ನು ಡ್ರಂನಲ್ಲಿ ಮುಳುಗಿಸಿ ಕೊಂದು ಆಕೆಯೂ ಸಹ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಐನಳ್ಳಿ ಗ್ರಾಮದಲ್ಲಿ ನಡೆದಿದೆ.

    ಆಶಾಬಾಯಿ (24) ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ. ಹೆರಿಗೆ ಬಳಿಕ ಆಶಾಬಾಯಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ನೋವು ಹಾಗೂ ತೀವ್ರ ಅನಾರೋಗ್ಯ ತಾಳಲಾರದೆ ಆತ್ಮಹತ್ಯೆ ನಿರ್ಧಾರ ಮಾಡಿದ್ದಳು.

    ತಾನು ಸತ್ತರೆ ಮಗು ಅನಾಥ ಆಗುತ್ತೆ ಎಂಬ ಕಾರಣಕ್ಕೆ ಆಶಾ ತಮ್ಮ 10 ತಿಂಗಳ ಹೆಣ್ಣು ಮಗುವನ್ನು ಡ್ರಂನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ. ಬಳಿಕ ತಾನು ಸಹ ನೇಣಿಗೆ ಶರಣಾಗುವುದಾಗಿ ಡೆತ್ ನೋಟ್ ನಲ್ಲಿ ನಮೂದಿಸಿದ್ದಾಳೆ.

    ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಶಾ ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಡಿದ್ದಾಳೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಲಂಬಾಣಿಹಟ್ಟಿಯ ಹೇಮಂತ್ ಎಂಬವರ ಜೊತೆ ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಆಶಾ ಪ್ರೇಮ ವಿವಾಹ ಆಗಿದ್ದಳು.

    ಈ ಸಂಬಂಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ.

  • ನನ್ನಿಂದ ಯಾರು ಕಷ್ಟ ಪಡಬಾರದೆಂದು ಡೆತ್‍ನೋಟ್ ಬರೆದು ಯುವತಿ ಆತ್ಮಹತ್ಯೆ

    ನನ್ನಿಂದ ಯಾರು ಕಷ್ಟ ಪಡಬಾರದೆಂದು ಡೆತ್‍ನೋಟ್ ಬರೆದು ಯುವತಿ ಆತ್ಮಹತ್ಯೆ

    ಮಡಿಕೇರಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಬಳ್ಳೇಕೆರೆಯಲ್ಲಿ ನಡೆದಿದೆ.

    ರಂಜಿತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಿದ್ದಾಪುರದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ರಂಜಿತಾ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಅಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ರಂಜಿತಾ ಡೆತ್‍ನೋಟ್ ಬರೆದಿದ್ದಾಳೆ.

    ಡೆತ್‍ನೋಟ್‍ನಲ್ಲಿ ಏನಿದೆ?
    ನನ್ನ ಸಾವಿಗೆ ಯಾರು ಕಾರಣ ಅಲ್ಲ. ನನ್ನ ಕುಟುಂಬದಲ್ಲಿ ನಡೆಯುವುದನ್ನು ನೋಡಿಯೇ ನಾನು ಈ ತೀರ್ಮಾನಕ್ಕೆ ಬಂದಿದ್ದೇನೆ. ನಾನು ಎಲ್ಲರಿಗೂ ಕಷ್ಟವನ್ನು ಕೊಡುತ್ತಿದ್ದೇನೆ. ನನ್ನಿಂದ ಯಾರು ಕಷ್ಟ ಪಡಬಾರದು. ಅಪ್ಪ ಅಮ್ಮ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ, ನನ್ನ ಎಲ್ಲಾ ಸ್ನೇಹಿತರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.

    ಮನೆಯಲ್ಲಿ ಯಾರು ಇಲ್ಲದ ವೇಳೆ ರಂಜಿತಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅನಾರೋಗ್ಯ, ಬಡತನಕ್ಕೆ ನೊಂದು ಸೈನೈಡ್ ಸೇವಿಸಿ ದಂಪತಿ ಆತ್ಮಹತ್ಯೆ

    ಅನಾರೋಗ್ಯ, ಬಡತನಕ್ಕೆ ನೊಂದು ಸೈನೈಡ್ ಸೇವಿಸಿ ದಂಪತಿ ಆತ್ಮಹತ್ಯೆ

    ಕೋಲಾರ: ತೀವ್ರ ಅನಾರೋಗ್ಯದಿಂದ ಬೇಸತ್ತಿದ್ದ ದಂಪತಿ ಸೈನೈಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

    ಬಂಗಾರಪೇಟೆ ಮೂಲದ ಪ್ರಮೀಳ (48) ಹಾಗೂ ರಾಮು (55) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಟೀಚರ್ಸ್ ಕಾಲೀನಿಯಲ್ಲಿಂದು ಮುಂಜಾನೆ ಈ ಘಟನೆ ಸಂಭವಿಸಿದೆ.

    ಡಯಾಬಿಟೀಸ್ ಕಾಯಿಲೆಯಿಂದ ನರಳುತ್ತಿದ್ದ ಪ್ರಮೀಳ ಅವರ ಒಂದು ಕಾಲನ್ನು ತೆಗೆದಿದ್ದ ವೈದ್ಯರು ಡಯಾಲಸಿಸ್ ಮಾಡುವಂತೆ ತಿಳಸಿದ್ದರು. ಮಾತ್ರವಲ್ಲದೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಮು ದಂಪತಿ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು.

    ಬಡತನ, ತೀವ್ರ ಅನಾರೋಗ್ಯ, ಅಸಾಹಯಕತೆಯಿಂದ ನೊಂದಿದ್ದ ಮೂಲತಃ ಬಂಗಾರಪೇಟೆ ಮೂಲದ ದಂಪತಿ ಮುಳಬಾಗಿಲು ಪಟ್ಟಣದಲ್ಲಿ ಸ್ನೇಹಿತರ ಮನೆಯಲ್ಲಿ ವಾಸವಾಗಿದ್ದರು. ಇಂದು ಮುಂಜಾನೆ ಮೆಡಿಕಲ್ ಶಾಪ್‍ಗೆ ತೆರಳಿ ಸೈನೈಡ್ ತೆಗೆದುಕೊಂಡಿರುವ ದಂಪತಿ ಅದನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಈ ವಿಷಯ ತಿಳಿದ ಮುಳಬಾಗಿಲು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಏನೂ ಸಮಸ್ಯೆ ಇಲ್ಲ ಆರೋಗ್ಯವಾಗಿದ್ದೇನೆ: ಸಿದ್ದರಾಮಯ್ಯ

    ಏನೂ ಸಮಸ್ಯೆ ಇಲ್ಲ ಆರೋಗ್ಯವಾಗಿದ್ದೇನೆ: ಸಿದ್ದರಾಮಯ್ಯ

    -ಸಿಎಂ ಭೇಟಿ ಬಳಿಕ ಮುಖಂಡರ ಸಾಲು ಸಾಲು ಟ್ವೀಟ್

    ಬೆಂಗಳೂರು: ಊಹಾಪೋಹಗಳಿಗೆ ಕಿವಿಗೊಡಬೇಡಿ, ಈಗ ಏನೂ ಸಮಸ್ಯೆ ಇಲ್ಲ ಆರೋಗ್ಯವಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

    ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕಪಡುವ ಅಗತ್ಯ ಇಲ್ಲ. ಇನ್ನೂ ಎರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿಯಲ್ಲಿದ್ದು ಮನೆಗೆ ಮರಳುತ್ತೇನೆ. ನನ್ನ ಆರೋಗ್ಯದ ಬಗ್ಗೆ ಕಾಳಜಿಯಿಂದ ವಿಚಾರಿಸಿ, ಶೀಘ್ರ ಗುಣಮುಖರಾಗಲು ಹಾರೈಸುತ್ತಿರುವವರಿಗೆಲ್ಲ ಕೃತಜ್ಞನಾಗಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

    ಇದಾದ ಬಳಿಕ ಎರಡನೇ ಟ್ವೀಟ್ ಮಾಡಿರುವ ಅವರು, ಹೃದಯದ ಎರಡು ರಕ್ತನಾಳಗಳು 19 ವರ್ಷಗಳ ಹಿಂದೆ ಬ್ಲಾಕ್ ಆಗಿದ್ದ ಕಾರಣ ಸ್ಟಂಟ್ ಹಾಕಿದ್ದರು. ಕ್ರಿಯಾಶೀಲನಾಗಿ ಓಡಾಡುತ್ತಿದ್ದರೂ ಏನೂ ಆಗಿರಲಿಲ್ಲ. ಈಗ ಒಂದು ರಕ್ತ ನಾಳ ಬ್ಲಾಕ್ ಆಗಿರುವುದು ಆಂಜಿಯೋಗ್ರಾಮ್ ನಲ್ಲಿ ಗೊತ್ತಾಯಿತು. ಅದಕ್ಕಾಗಿ ಆಂಜಿಯೋ ಪ್ಲಾಸ್ಟಿ ಮಾಡಿದ್ದಾರೆ. ಈಗ ಏನೂ ಸಮಸ್ಯೆ ಇಲ್ಲ ಆರೋಗ್ಯವಾಗಿದ್ದೇನೆ ಎಂದು  ಸ್ಪಷ್ಟಪಡಿಸಿದ್ದಾರೆ.

    ಊಹಾಪೋಹಗಳಿಗೆ ಕಿವಿಗೊಡಬೇಡಿ. ಈಗಲೇ ಮನೆಗೆ ಹೋಗಬಹುದು. ಅಲ್ಲಿ ನೋಡಲು ಬರುವ ಜನರ ಸಂಖ್ಯೆ ಜಾಸ್ತಿಯಾಗುತ್ತದೆ. ಹೀಗಾಗಿ ಎರಡು ದಿನ ಇಲ್ಲೇ ಇರುತ್ತೇನೆ. ಸದ್ಯ ಯಾರೂ ಅಸ್ಪತ್ರೆಗೆ ಬರುವುದು ಬೇಡ. ಮನೆಗೆ ಮರಳಿದ ಬಳಿಕ ಬನ್ನಿ. ನನ್ನ ಆರೋಗ್ಯ ವಿಚಾರಿಸಲು ಬಂದಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆಗಳು. ರಾಜಕೀಯ ಭಿನ್ನಾಭಿಪ್ರಾಯ ವೈಯಕ್ತಿಕ ಸ್ನೇಹಕ್ಕೆ ಅಡ್ಡಿಯಾಗಬಾರದು ಎಂದು ನಂಬಿಕೊಂಡು ಬಂದವನು ನಾನು ಎಂದು ಟ್ವೀಟ್ ಮಾಡಿದ್ದಾರೆ.

    ಸಿದ್ದರಾಮಯ್ಯ ಅವರನ್ನು ಸಿಎಂ ಬಿಎಸ್ ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ಬಸವರಾಜ ಬೊಮ್ಮಾಯಿ ಅವರು ಇಂದು ಆಸ್ಪತ್ರೆಗೆ ಹೋಗಿ ಭೇಟಿ ಮಾಡಿದ್ದರು. ಇದಾದ ಬಳಿಕ ಹಲವಾರು ಬಿಜೆಪಿ ನಾಯಕರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರನ್ನು ಹಾರೈಸಿದ್ದರು.