Tag: ilyaraj

  • ಸಂಗೀತ ಮಾಂತ್ರಿಕ ಇಳಯರಾಜರನ್ನು ರಾಜ್ಯಸಭೆಗೆ ಸ್ವಾಗತಿಸಿದ ಪ್ರಲ್ಹಾದ್ ಜೋಶಿ

    ಸಂಗೀತ ಮಾಂತ್ರಿಕ ಇಳಯರಾಜರನ್ನು ರಾಜ್ಯಸಭೆಗೆ ಸ್ವಾಗತಿಸಿದ ಪ್ರಲ್ಹಾದ್ ಜೋಶಿ

    ನವದೆಹಲಿ: ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರು ರಾಜ್ಯಸಭೆಯಲ್ಲಿಂದು ಪ್ರಮಾಣ ವಚನ ಸ್ವೀಕರಿಸಿದರು.

    ಪ್ರಮಾಣ ವಚನ ಸ್ವೀಕರಿಸಿದ ನಂತರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನ ಭೇಟಿಯಾದ ಇಳಯರಾಜ ಅವರು ಮಾತುಕತೆ ನಡೆಸಿದರು. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಅತ್ಯಂತ ಗೌರವಯುತವಾಗಿ ಇಳಯರಾಜ ಅವರನ್ನು ಬರಮಾಡಿಕೊಂಡು ಸನ್ಮಾನಿಸಿ ಅಭಿನಂದಿಸಿದರು.

    ನಂತರ ಇಳಯರಾಜ ಅವರನ್ನು ಕುರಿತು ನಮ್ಮ ದೇಶದ ಹೆಮ್ಮೆಯಾಗಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟುಮಾಡಿದೆ ಎಂದು ಭೇಟಿ ವೇಳೆ ತಮ್ಮ ಧನ್ಯತಾಭಾವ ವ್ಯಕ್ತಪಡಿಸಿದ್ದಾರೆ. ಈ ಭೇಟಿಯ ವೇಳೆ ಕೇಂದ್ರ ಸಚಿವ ಪಿಯುಷ್ ಗೊಯಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಇದನ್ನೂ ಓದಿ: ನಾಲ್ವರು ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಅಮಾನತು

    Live Tv
    [brid partner=56869869 player=32851 video=960834 autoplay=true]