Tag: IMA case

  • ತೀವ್ರಗೊಂಡ ಮನ್ಸೂರ್ ವಿಚಾರಣೆ – ಜಮೀರ್, ಬೇಗ್‍ಗೆ ಎಸ್‍ಐಟಿ ನೋಟಿಸ್ ಜಾರಿ

    ತೀವ್ರಗೊಂಡ ಮನ್ಸೂರ್ ವಿಚಾರಣೆ – ಜಮೀರ್, ಬೇಗ್‍ಗೆ ಎಸ್‍ಐಟಿ ನೋಟಿಸ್ ಜಾರಿ

    ಬೆಂಗಳೂರು: ಬಹುಕೋಟಿ ವಂಚಕ ಮನ್ಸೂರ್ ಖಾನ್ ವಿಚಾರಣೆ ಇಡಿ ತೀವ್ರಗೊಳಿಸಿದ್ದರೆ ಇತ್ತ ವಿಶೇಷ ತನಿಖಾ ತಂಡ(ಎಸ್‍ಐ) ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಮಾಜಿ ಸಚಿವ ಜಮೀರ್ ಅಹ್ಮದ್ ಹಾಗೂ ಶಾಸಕ ರೋಷನ್ ಬೇಗ್‍ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಈ ತಿಂಗಳ 29ರಂದು ವಿಚಾರಣೆಗೆ ಹಾಜರಾಗುವಂತೆ ತನಿಖಾಧಿಕಾರಿಗಳು ಸೂಚಿಸಿದ್ದಾರೆ.

    ದಿನೇ ದಿನೇ ಐಎಂಎ ಪ್ರಕರಣ ವಿಚಾರಣೆಯನ್ನು ಇಡಿ ಅಧಿಕಾರಿಗಳು ತೀವ್ರಗೊಳಿಸುತ್ತಿದ್ದು, ಇಡಿ ಅಧಿಕಾರಿಗಳು ಹಾಕುತ್ತಿರುವ ಪ್ರಶ್ನೆಗಳಿಗೆ ಆರೋಪಿ ಮನ್ಸೂರ್ ಖಾನ್ ತಬ್ಬಿಬ್ಬಾಗಿ ಪ್ರಕರಣದ ಹಿಂದೆ ಇರುವ ಕಾಣದ ಕೈಗಳ ಹೆಸರನ್ನು ಬಾಯಿಬಿಟ್ಟಿದ್ದಾನೆ.

    ಮನ್ಸೂರ್ ಖಾನ್ ಜೊತೆ ಇಬ್ಬರೂ ವ್ಯವಹಾರ ನಡೆಸಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ಮಧ್ಯೆ ಐಎಂಎ ಕಂಪನಿಯ ಲೆಕ್ಕ ಪರಿಶೋಧಕ ಇಕ್ಬಾಲ್ ಖಾನ್‍ರನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ಮತ್ತು ಕಂಪನಿಗಳ ರಿಜಿಸ್ಟ್ರಾರ್ ಗೆ ತಪ್ಪು ಮಾಹಿತಿ ನೀಡಿದ ಆರೋಪ ಆಡಿಟರ್ ಮೇಲಿದೆ.

    ಈ ಹಿಂದೆ ವಿಚಾರಣೆ ವೇಳೆ ಮನ್ಸೂರ್ 1000ಕ್ಕೂ ಹೆಚ್ಚು ಕೋಟಿ ಮೌಲ್ಯದ ವ್ಯವಹಾರದ ರಹಸ್ಯ ವಿವರವನ್ನು ಇಡಿ ಅಧಿಕಾರಿಗಳಿಗೆ ತಿಳಿಸಿದ್ದನು. ಅಲ್ಲದೆ ಕೆಲ ಪ್ರಭಾವಿಗಳ ಹೆಸರುಗಳನ್ನು ಕೂಡ ಮನ್ಸೂರ್ ಪ್ರಸ್ತಾಪಿಸಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.

    ಪ್ರಭಾವಿಗಳ ಜೊತೆಗಿನ ನಂಟು ಹಾಗೂ ಪ್ರಭಾವಿಗಳಿಗೆ ಹಂಚಿಕೆಯಾಗಿರುವ ಐಎಂಎನ ಲಾಭಾಂಶದ ಕುರಿತು ಮನ್ಸೂರ್ ಬಾಯ್ಬಿಟ್ಟಿದ್ದನು. ಮನ್ಸೂರ್ ಗೆ ಜೀವ ಬೆದರಿಕೆ ಇರುವ ಹಿನ್ನೆಲೆ ಆತನಿಗೆ ಹೈ ಸೆಕ್ಯುರಿಟಿ ನೀಡಲಾಗಿದ್ದು, ಖಾನ್ ಗೆ ರಾತ್ರಿಯಿಡಿ ಬಿಗಿ ಭದ್ರತೆ ಒದಗಿಸಲಾಗುತ್ತಿದೆ.

  • ಐಎಂಎ ಪ್ರಕರಣ ಮುಚ್ಚಲು ಎಸ್‍ಐಟಿ ಬಳಕೆ: ಸೊಗಡು ಶಿವಣ್ಣ

    ಐಎಂಎ ಪ್ರಕರಣ ಮುಚ್ಚಲು ಎಸ್‍ಐಟಿ ಬಳಕೆ: ಸೊಗಡು ಶಿವಣ್ಣ

    ತುಮಕೂರು: 40 ಸಾವಿರಕ್ಕೂ ಹೆಚ್ಚು ಜನರಿಗೆ ವಂಚನೆ ಮಾಡಿರುವ ಐಎಂಎ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದ್ದಾರೆ.

    ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರವೇ ಇಲ್ಲಾ, ಮಳೆ ಬೆಳೆ ಇಲ್ಲಾ, ಶವ ಸಂಸ್ಕಾರಕ್ಕೂ ನೀರಿಲ್ಲದ್ದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥ ಸ್ಥಿತಿಯಲ್ಲಿ 40 ಸಾವಿರ ಜನರ ಹಣವನ್ನು ಮನ್ಸೂರ್ ಅಲಿಖಾನ್ ತಿಂದು ಬಿಟ್ಟಿದ್ದಾನೆ ಎಂದು ಕಿಡಿಕಾರಿದರು.

    ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಈ ಪ್ರಕರಣದಲ್ಲಿ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಕೋಟ್ಯಾಂತರ ರೂಪಾಯಿ ಹೋಗಿರುವ ಅನುಮಾನ ಇದೆ. ಪ್ರಕರಣವನ್ನು ಮುಚ್ಚಿಹಾಕುವ ದೃಷ್ಠಿಯಲ್ಲಿ ಎಸ್‍ಐಟಿಯನ್ನು ಬಳಸಿಕೊಳ್ಳಲಾಗುತ್ತಿದೆ. ಹೀಗಾಗಿ ಐಎಂಎ ಕೇಸನ್ನು ಕೂಡಲೇ ಸಿಬಿಐಗೆ ವಹಿಸಲೇಬೇಕು ಎಂದು ಆಗ್ರಹಿಸಿದರು.

  • ವಿಕ್ಟೋರಿಯಾ ಆಸ್ಪತ್ರೆಗೆ ಮಾನ್ಸೂರ್ ಖಾನ್ ದಾಖಲು

    ವಿಕ್ಟೋರಿಯಾ ಆಸ್ಪತ್ರೆಗೆ ಮಾನ್ಸೂರ್ ಖಾನ್ ದಾಖಲು

    ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಐಎಂಎ ಪ್ರಕರಣದ ಆರೋಪಿ ಮಾನ್ಸೂರ್ ಖಾನ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾನೆ.

    ಸದ್ಯ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮನ್ಸೂರ್ ನನ್ನು ವಿಚಾರಣೆ ನಡೆಸುತ್ತಿದ್ದು, ಇಡಿ ಕಚೇರಿಯಲ್ಲಿಯೇ ಆತನನ್ನು ಇರಿಸಲಾಗಿದೆ. ಮನ್ಸೂರ್ ಭಾನುವಾರ ಎದೆ ನೋವು ಎಂದು ಹೇಳಿದ ಹಿನ್ನೆಲೆಯಲ್ಲಿ ಆತನನ್ನು ಜಯದೇವ ಆಸ್ಪತ್ರೆಯಲ್ಲಿ ಇಡಿ ಅಧಿಕಾರಿಗಳು ಚಿಕಿತ್ಸೆ ಕೊಡಿಸಿದ್ದರು. ಬಳಿಕ ಶಾಂತಿನಗರದ ಇಡಿ ಕಚೇರಿಗೆ ವಾಪಸ್ ಕರೆತಂದಿದ್ದರು. ಆದರೆ ಇಡಿ ಕಚೇರಿಗೆ ಬಂದ ಒಂದು ಗಂಟೆ ನಂತರ ಮಾನ್ಸೂರ್ ಗೆ ಮತ್ತೆ ಎದೆನೋವು ಕಾಣಿಸಿಕೊಂಡಿದ್ದು, ತಡರಾತ್ರಿ ವಿಕ್ಟೋರಿಯಾ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿದೆ.

    ಈ ಹಿಂದೆ ವಿಚಾರಣೆ ವೇಳೆ ಮನ್ಸೂರ್ 1000ಕ್ಕೂ ಹೆಚ್ಚು ಕೋಟಿ ಮೌಲ್ಯದ ವ್ಯವಹಾರದ ರಹಸ್ಯ ವಿವರವನ್ನು ಇಡಿ ಅಧಿಕಾರಿಗಳಿಗೆ ತಿಳಿಸಿದ್ದನು. ಅಲ್ಲದೆ ಕೆಲ ಪ್ರಭಾವಿಗಳ ಹೆಸರುಗಳನ್ನು ಕೂಡ ಮನ್ಸೂರ್ ಪ್ರಸ್ತಾಪಿಸಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.

    ಪ್ರಭಾವಿಗಳ ಜೊತೆಗಿನ ನಂಟು ಹಾಗೂ ಪ್ರಭಾವಿಗಳಿಗೆ ಹಂಚಿಕೆಯಾಗಿರುವ ಐಎಂಎನ ಲಾಭಾಂಶದ ಕುರಿತು ಮನ್ಸೂರ್ ಬಾಯ್ಬಿಟ್ಟಿದ್ದನು. ಮನ್ಸೂರ್ ಗೆ  ಜೀವ ಬೆದರಿಕೆ ಇರುವ ಹಿನ್ನೆಲೆ ಆತನಿಗೆ ಹೈ ಸೆಕ್ಯುರಿಟಿ ನೀಡಲಾಗಿದ್ದು, ಖಾನ್ ಗೆ ರಾತ್ರಿಯಿಡಿ ಬಿಗಿ ಭದ್ರತೆ ಒದಗಿಸಲಾಗುತ್ತಿದೆ.

    ಶನಿವಾರ ಬೆಂಗಳೂರಿನ ಶಾಂತಿ ನಗರದಲ್ಲಿರುವ ಇಡಿ ಕಚೇರಿಗೆ ಕರೆತಂದ ಬಳಿಕ ಸಿವಿಲ್ ಕೋರ್ಟ್ ಗೆ ಇಡಿ ಅಧಿಕಾರಿಗಳು ಹಾಜರುಪಡಿಸಿದ್ದರು. ಹಲವು ವಿಷಯಗಳ ಕುರಿತು ವಿಚಾರಣೆ ನಡೆಸಬೇಕಿದೆ. ಆದ್ದರಿಂದ 15 ದಿನಗಳ ಕಾಲ ವಶಕ್ಕೆ ನೀಡಿ ಅಂತ ಇಡಿ ಕೇಳಿತು. ಆದರೆ, ಕೇವಲ 3 ದಿನಗಳಿಗೆ ಮಾತ್ರ ನೀಡೋದಾಗಿ ಜಡ್ಜ್ ಆದೇಶಿಸಿದರು. ಹೀಗಾಗಿ ಖಾನ್‍ ನನ್ನು 3 ದಿನಗಳ ಅವಧಿಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ.

    ಐಎಂಎ ಕಚೇರಿ ಸೇರಿದಂತೆ ಮನ್ಸೂರ್ ಖಾನ್ ಮನೆ ಮೇಲೆ ದಾಳಿ ನಡೆಸಿದ ವೇಳೆ ಲಭ್ಯವಾದ ಆಸ್ತಿಪಾಸ್ತಿ, ಚಿನ್ನಾಭರಣಗಳು, ದಾಖಲೆಗಳ ಕುರಿತು ಇಡಿ ವಿಚಾರಣೆ ನಡೆಸುತ್ತಿದೆ. ಇನ್ನೊಂದೆಡೆ, ಎಸ್‍ಐಟಿ ಹಾಗೂ ತೆಲಂಗಾಣ ಪೊಲೀಸರು ಕೂಡ ಮನ್ಸೂರ್ ನನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದಾರೆ.

    ವಂಚನೆ ಎಸಗಿ ಮನ್ಸೂರ್ ಖಾನ್ ದುಬೈಗೆ ತೆರಳಿದ್ದ. ಈತನ ಚಲನವಲನಗಳ ಕಣ್ಣಿಟ್ಟಿತ್ತ ಎಸ್‍ಐಟಿ ಭಾರತಕ್ಕೆ ಬರುವಂತೆ ಹೇಳಿತ್ತು. ಅಲ್ಲದೇ ರಕ್ಷಣೆ ನೀಡಲಾಗುವುದು ಎಂದು ಎಸ್‍ಐಟಿ ತಿಳಿಸಿತ್ತು. ದುಬೈನಿಂದ ದೆಹಲಿಗೆ ಬಂದಿಳಿದ ಮನ್ಸೂರ್ ಖಾನ್‍ ನನ್ನು ಗುರುವಾರ ಮಧ್ಯರಾತ್ರಿ 1:50ರ ಸುಮಾರಿಗೆ ಬಂಧಿಸಲಾಗಿತ್ತು. ಮನ್ಸೂರ್ ಖಾನ್‍ ನನ್ನು ಇ.ಡಿ ಅಧಿಕಾರಿಗಳು ವಿಚಾರಣೆ ಪೂರ್ಣಗೊಳಿಸಿದ ಬಳಿಕ ಎಸ್‍ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ.

  • ತನಿಖೆ ವೇಳೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮನ್ಸೂರ್ ಖಾನ್

    ತನಿಖೆ ವೇಳೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮನ್ಸೂರ್ ಖಾನ್

    ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ಪ್ರಾಥಮಿಕ ತನಿಖೆ ವೇಳೆ ಸ್ಫೋಟಕ ಮಾಹಿತಿ ತಿಳಿಸಿದ್ದಾನೆ.

    ಜಾರಿ ನಿದೇಶನಾಲಯ(ಇಡಿ) ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದ ವೇಳೆ ಪ್ರಕರಣದ ಕುರಿತು ಸ್ಫೋಟಕ ಮಾಹಿತಿಯನ್ನು ಮನ್ಸೂರ್ ಬಾಯ್ಬಿಟ್ಟಿದ್ದಾನೆ. ಈ ವೇಳೆ 1000ಕ್ಕೂ ಹೆಚ್ಚು ಕೋಟಿ ಮೌಲ್ಯದ ವ್ಯವಹಾರದ ರಹಸ್ಯ ವಿವರವನ್ನು ಇಡಿ ಅಧಿಕಾರಿಗಳು ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೆಲ ಪ್ರಭಾವಿಗಳ ಹೆಸರುಗಳನ್ನು ಕೂಡ ಮನ್ಸೂರ್ ಪ್ರಸ್ತಾಪಿಸಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಪ್ರಭಾವಿಗಳ ಜೊತೆಗಿನ ನಂಟು ಹಾಗೂ ಪ್ರಭಾವಿಗಳಿಗೆ ಹಂಚಿಕೆಯಾಗಿರುವ ಐಎಂಎನ ಲಾಭಾಂಶದ ಕುರಿತು ಮನ್ಸೂರ್ ಬಾಯ್ಬಿಟ್ಟಿದ್ದಾನೆ. ಮನ್ಸೂರ್ ಗೆ ಜೀವ ಬೆದರಿಕೆ ಇರುವ ಹಿನ್ನೆಲೆ ಆತನಿಗೆ ಹೈ ಸೆಕ್ಯುರಿಟಿ ನೀಡಲಾಗಿದೆ. ಹೀಗಾಗಿ ಖಾನ್ ಗೆ ರಾತ್ರಿಯಿಡಿ ಬಿಗಿ ಭದ್ರತೆ ಒದಗಿಸಲಾಗುತ್ತಿದೆ. ಸದ್ಯ ಶಾಂತಿನಗರದ ಇಡಿ ಕಚೇರಿಯಲ್ಲಿ ಮನ್ಸೂರ್ ನನ್ನು ಇಡಿ ಅಧಿಕಾರಿಗಳು ಇರಿಸಿದ್ದಾರೆ.

    ಶನಿವಾರ ಬೆಂಗಳೂರಿನ ಶಾಂತಿ ನಗರದಲ್ಲಿರುವ ಇಡಿ ಕಚೇರಿಗೆ ಕರೆತಂದ ಬಳಿಕ ಸಿವಿಲ್ ಕೋರ್ಟ್ ಗೆ ಇಡಿ ಅಧಿಕಾರಿಗಳು ಹಾಜರುಪಡಿಸಿದ್ದರು. ಹಲವು ವಿಷಯಗಳ ಕುರಿತು ವಿಚಾರಣೆ ನಡೆಸಬೇಕಿದೆ. ಆದ್ದರಿಂದ 15 ದಿನಗಳ ಕಾಲ ವಶಕ್ಕೆ ನೀಡಿ ಅಂತ ಇಡಿ ಕೇಳಿತು. ಆದರೆ, ಕೇವಲ 3 ದಿನಗಳಿಗೆ ಮಾತ್ರ ನೀಡೋದಾಗಿ ಜಡ್ಜ್ ಆದೇಶಿಸಿದರು. ಹೀಗಾಗಿ ಖಾನ್‍ನನ್ನು 3 ದಿನಗಳ ಅವಧಿಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ.

    ಐಎಂಎ ಕಚೇರಿ ಸೇರಿದಂತೆ ಮನ್ಸೂರ್ ಖಾನ್ ಮನೆ ಮೇಲೆ ದಾಳಿ ನಡೆಸಿದ ವೇಳೆ ಲಭ್ಯವಾದ ಆಸ್ತಿಪಾಸ್ತಿ, ಚಿನ್ನಾಭರಣಗಳು, ದಾಖಲೆಗಳ ಕುರಿತು ಇಡಿ ವಿಚಾರಣೆ ನಡೆಸುತ್ತಿದೆ. ಇನ್ನೊಂದೆಡೆ, ಎಸ್‍ಐಟಿ ಹಾಗೂ ತೆಲಂಗಾಣ ಪೊಲೀಸರು ಕೂಡ ಮನ್ಸೂರ್ ನನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದಾರೆ.

    ವಂಚನೆ ಎಸಗಿ ಮನ್ಸೂರ್ ಖಾನ್ ದುಬೈಗೆ ತೆರಳಿದ್ದ. ಈತನ ಚಲನವಲನಗಳ ಕಣ್ಣಿಟ್ಟಿತ್ತ ಎಸ್‍ಐಟಿ ಭಾರತಕ್ಕೆ ಬರುವಂತೆ ಹೇಳಿತ್ತು. ಅಲ್ಲದೇ ರಕ್ಷಣೆ ನೀಡಲಾಗುವುದು ಎಂದು ಎಸ್‍ಐಟಿ ಹೇಳಿತ್ತು. ದುಬೈನಿಂದ ದೆಹಲಿಗೆ ಬಂದಿಳಿದ ಮನ್ಸೂರ್ ಖಾನ್‍ನನ್ನು ಗುರುವಾರ ಮಧ್ಯರಾತ್ರಿ 1:50ರ ಸುಮಾರಿಗೆ ಬಂಧಿಸಲಾಗಿತ್ತು. ಮನ್ಸೂರ್ ಖಾನ್‍ನನ್ನು ಇ.ಡಿ ಅಧಿಕಾರಿಗಳು ವಿಚಾರಣೆ ಪೂರ್ಣಗೊಳಿಸಿದ ಬಳಿಕ ಎಸ್‍ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ.

  • ಪೊಲೀಸರು ರಕ್ಷಣೆ ಕೊಟ್ಟರೆ 24 ಗಂಟೆಯೊಳಗೆ ಭಾರತಕ್ಕೆ ಬರುತ್ತೇನೆ : ಮನ್ಸೂರ್ ಖಾನ್

    ಪೊಲೀಸರು ರಕ್ಷಣೆ ಕೊಟ್ಟರೆ 24 ಗಂಟೆಯೊಳಗೆ ಭಾರತಕ್ಕೆ ಬರುತ್ತೇನೆ : ಮನ್ಸೂರ್ ಖಾನ್

    – ಭಾರತದಿಂದಲೇ ವಿಡಿಯೋ ಅಪ್ಲೋಡ್

    ಬೆಂಗಳೂರು: ಶೀಘ್ರದಲ್ಲೇ ನಾನು ಭಾರತಕ್ಕೆ ಮರಳಲು ಪ್ರಯತ್ನಿಸುತ್ತಿದ್ದೇನೆ. ಆದರೆ ನನ್ನ ಆರೋಗ್ಯದ ಸಮಸ್ಯೆ (ಕಾರ್ಡಿಯಾಕ್, ಸಕ್ಕರೆ ಕಾಯಿಲೆ) ಕಾರಣ 1 ತಿಂಗಳಿಂದ ಬೆಡ್ ರೆಸ್ಟ್ ನಲ್ಲಿದ್ದೇನೆ. ಈಗ ಹುಷಾರಾಗಿದ್ದು, ಪೊಲೀಸರು ರಕ್ಷಣೆ ನೀಡಿದರೆ 24 ಗಂಟೆಯ ಒಳಗಡೆ ಭಾರತಕ್ಕೆ ಬರುತ್ತೇನೆ ಎಂದು ಐಎಂಎ ವಂಚಕ ಮನ್ಸೂರ್ ಖಾನ್ ಹೇಳಿದ್ದಾನೆ.

    ವಿಡಿಯೋ ಬಿಡುಗಡೆ ಮಾಡಿ ಮಾತನಾಡಿರುವ ಮನ್ಸೂರ್, ಕಳೆದ ವಿಡಿಯೋದಲ್ಲಿ ನಾನು ಆದಷ್ಟು ಬೇಗ ವಾಪಸ್ ಬರುವುದಾಗಿ ಹೇಳಿದ್ದೆ. ಆದರೆ ಹೃದಯದ ಆರೋಗ್ಯದ ಸಮಸ್ಯೆ ಇರುವ ಹಿನ್ನೆಲೆಯಲ್ಲಿ ಬರಲು ಆಗುತ್ತಿಲ್ಲ. ಭಾರತೀಯ ನ್ಯಾಯಾಂಗದ ಮೇಲೆ ನನಗೆ ನಂಬಿಕೆ ಇದೆ. ದೇಶಕ್ಕೆ ಮರಳಿ ಬರಲು ಸೂಕ್ತ ಭದ್ರತೆ ಪಡೆಯಲು ಯತ್ನಿಸುತ್ತಿದ್ದೇನೆ. ಭದ್ರತೆ ನೀಡುತ್ತಾರೆ ಎಂಬ ವಿಶ್ವಾಸವಿದೆ. ನಾನು ಭಾರತ ಬಿಟ್ಟು ಹೋಗಿದ್ದು, ನನ್ನ ದೊಡ್ಡ ತಪ್ಪಾಗಿದ್ದು, ನಾನು ದೇಶ ಬಿಟ್ಟು ಈ ರೀತಿ ಬರಲು ರಾಜಕಾರಣಿಗಳ ಒತ್ತಡ ಕಾರಣವಾಗಿತ್ತು ಎಂದಿದ್ದಾನೆ.

    ಬಹು ಸಮಯದಿಂದ ಅನಾರೋಗ್ಯದ ಕಾರಣ ಬೆಡ್ ರೆಸ್ಟ್ ನಲ್ಲಿದ್ದೇನೆ, ಈಗ ನಾನು ಹುಷಾರಿರುವ ಕಾರಣ ವಿಡಿಯೋ ಮಾಡುತ್ತಿದ್ದೇನೆ. ನಾನು ದೇಶ ಬಿಟ್ಟು ಬಂದಿದ್ದು, ತಪ್ಪು, ಈಗಲೂ ನನಗೆ ನನ್ನ ಫ್ಯಾಮಿಲಿ ಎಲ್ಲಿದೆ? ಹೇಗಿದ್ದಾರೆ ಗೊತ್ತಿಲ್ಲ. ನಾನು ಒಂದಷ್ಟು ಲಿಸ್ಟ್ ಮಾಡಿದ್ದು, ಯಾರಿಂದ ಹಣ ಹಿಂಪಡೆಯಬಹುದು ಮಾಡಬಹುದು ಎಂಬುವುದು ಪಟ್ಟಿಯಲ್ಲಿದೆ. ಅಲ್ಲದೇ ಪ್ರಕರಣದ ತನಿಖೆಗೆ ಬೇಕಾದ ಎಲ್ಲಾ ದಾಖಲೆಗಳನ್ನು ನಾನು ಅಧಿಕಾರಿಗಳಿಗೆ ಕೊಡುತ್ತೇನೆ. ನಾನು ಮತ್ತೆ ವಾಪಸ್ ಬರುತ್ತಿರುವುದು ಹಣ ವಾಪಾಸ್ ಕೊಡಲಿಕ್ಕೆ ಎಂದು ಅಳುತ್ತಾ ಹೇಳಿದ್ದಾನೆ.

    ಭಾರತದಿಂದಲೇ ವಿಡಿಯೋ ಅಪ್ಲೋಡ್: ಸದ್ಯ ಬಿಡುಗಡೆಯಾಗಿರುವ ವಿಡಿಯೋ ಭಾರತದಿಂದಲೇ ಅಪ್ ಲೋಡ್ ಆಗಿದೆ ಎನ್ನುವುದರ ಬಗ್ಗೆ ಎಸ್‍ಐಟಿ ಪೊಲೀಸರು ತನಿಖೆ ನಡೆಸಿದ್ದಾರೆ. ಆಪ್ತರಿಗೆ ವಿಡಿಯೋ ಕಳುಹಿಸಿ ಅಪ್ಲೋಡ್ ಮಾಡಿರುವ ಸಾಧ್ಯತೆ ಇದ್ದು, ಯಾರ ಮುಖಾಂತರ ವಿಡಿಯೋ ಬಿಡುಗಡೆ ಆಗಿದೆ ಎಂಬ ಬಗ್ಗೆ ತನಿಖೆ ಆರಂಭವಾಗಿದೆ. ಮನ್ಸೂರ್ ಸುಖಾ ಸುಮ್ಮನೆ ವಿಡಿಯೋ ಬಿಡುಗಡೆ ಮಾಡಿದ್ದು, ಭಾರತಕ್ಕೆ ಮರಳುವ ನಾಟಕ ಮಾಡುತ್ತಿದ್ದಾನೆ. ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಎಸ್‍ಐಟಿ ಮೂಲಗಳು ತಿಳಿಸಿವೆ.

  • ಇಂದು ಎಸ್‍ಐಟಿಯಿಂದ ರೋಷನ್ ಬೇಗ್ ವಿಚಾರಣೆ

    ಇಂದು ಎಸ್‍ಐಟಿಯಿಂದ ರೋಷನ್ ಬೇಗ್ ವಿಚಾರಣೆ

    ಬೆಂಗಳೂರು: ಈ ರಾಜಕೀಯ ಜಂಜಾಟದ ನಡುವೆ ರೆಬೆಲ್ ಶಾಸಕ ರೋಷನ್ ಬೇಗ್‍ಗೆ ಐಎಂಎ ಕಂಟಕ ಎದುರಾಗಿದೆ. ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧ ರೋಷನ್ ಬೇಗ್ ಇಂದು ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

    ಐಎಂಎ ವಂಚನೆ ಬಳಿಕ ಬಿಡುಗಡೆಯಾದ ಆಡಿಯೋದಲ್ಲಿ ಮನ್ಸೂರ್ ಖಾನ್, ರೋಷನ್ ಬೇಗ್ ಹೆಸರು ಪ್ರಸ್ತಾಪ ಆಗಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ರೋಷನ್ ಬೇಗ್‍ಗೆ ಎಸ್‍ಐಟಿ ನೊಟೀಸ್ ನೀಡಿತ್ತು. ಆದರೆ, ಜುಲೈ 11ರಂದು ರೋಷನ್ ಬೇಗ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಕಾರಣಕ್ಕೆ ಎಸ್‍ಐಟಿ ಮತ್ತೊಮ್ಮೆ ನೊಟೀಸ್ ಜಾರಿ ಮಾಡಿತ್ತು. ಇಂದು ರೋಷನ್ ಬೇಗ್ ವಿಚಾರಣೆಗೆ ಹಾಜರಾದರೆ ಡಿಸಿಪಿ ಗಿರೀಶ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ.

    ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾದ ನಡುವೆ ಅಮಾಯಕರಿಗೆ ಮೊಸ ಮಾಡಿದ ಬಹುಕೋಟಿ ಹಗರಣದ ಸುದ್ದಿ ಕಡಿಮೆಯಾಗಿದೆ. ಆದರೆ ಎಸ್‍ಐಟಿ ಮಾತ್ರ ನಮಗೂ ರಾಜಕೀಯ ವಿಷಯಕ್ಕೂ ಸಂಬಂಧವಿಲ್ಲ ಎಂದು ವಿಚಾರಣೆ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಹಿಂದೆ ಜಮೀರ್ ಅಹ್ಮದ್ ಅವರನ್ನ ಇಡಿ ವಿಚಾರಣೆ ನಡೆಸಿತ್ತು. ಈಗ ರೋಷನ್ ಬೇಗ್ ಸರದಿಯಾಗಿದೆ.

  • ಬೇಗ್ ಮೇಲೆ ‘ಐಎಂಎ’ ಅಸ್ತ್ರ ಪ್ರಯೋಗ – ವಿಚಾರಣೆಗೆ ಹಾಜರಾಗುವಂತೆ ನೋಟಿಸ್

    ಬೇಗ್ ಮೇಲೆ ‘ಐಎಂಎ’ ಅಸ್ತ್ರ ಪ್ರಯೋಗ – ವಿಚಾರಣೆಗೆ ಹಾಜರಾಗುವಂತೆ ನೋಟಿಸ್

    ಬೆಂಗಳೂರು: ಶಿವಾಜಿನಗರ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸರ್ಕಾರ ಐಎಂಎ ಅಸ್ತ್ರ ಪ್ರಯೋಗಿಸಿತೇ ಎಂಬ ಪ್ರಶ್ನೆಯೊಂದು ರಾಜಕೀಯ ಅಂಗಳದಲ್ಲಿ ಹುಟ್ಟಿಕೊಂಡಿದೆ.

    ಐಎಂಎ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಅವರ ಹೆಸರು ಕೇಳಿ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ವಿಚಾರಣೆಗೆ ಹಾಜರಾಗಬೇಕೆಂದು ಎಸ್‍ಐಟಿ ನೋಟಿಸ್ ನೀಡಿದೆ. ರಾಜೀನಾಮೆ ನೋಟಿಸ್ ನೀಡಿದ್ದು ಸಾಕಷ್ಟು ಅನುಮಾನಗಳು ಮೂಡಿವೆ. ಈ ಹಿಂದೆ ಸಚಿವ ಜಮೀರ್ ಅಹ್ಮದ್ ಅವರಿಗೂ ಎಸ್‍ಐಟಿ ನೋಟಿಸ್ ನೀಡಿತ್ತು. ಎಸ್‍ಐಟಿ ನೋಟಿಸ್ ಪಡೆದ ಜಮೀರ್ ಅಹ್ಮದ್ ವಿಚಾರಣೆಗೆ ಹಾಜರಾಗಿದ್ದರು.

    ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ತೆರಳಿದ ರೋಷನ್ ಬೇಗ್ ಅವರು ರಾಜೀನಾಮೆಯನ್ನು ಸಲ್ಲಿಸಿದರು. ರೋಷನ್ ಬೇಗ್ ರಾಜೀನಾಮೆ ಸಲ್ಲಿಸುವ ಸಮಯದಲ್ಲಿ ಸ್ಪೀಕರ್ ಕೊಠಡಿಯ ಒಳಗಡೆ ಕೃಷ್ಣಬೈರೇಗೌಡ ಮತ್ತು ಕೆಜೆ ಜಾರ್ಜ್ ಇದ್ದರು. ಲೋಕಸಭಾ ಚುನಾವಣೆಯ ನಂತರ ಬಹಿರಂಗವಾಗಿಯೇ ಸಿದ್ದರಾಮಯ್ಯ ವಿರುದ್ಧ ಅಸಮಾಧಾನವನ್ನು ಹೊರ ಹಾಕಿದ್ದಕ್ಕೆ ರೋಷನ್ ಬೇಗ್ ಅವರನ್ನು ಕಾಂಗ್ರೆಸ್ಸಿನಿಂದ ಉಚ್ಚಾಟಿಸಲಾಗಿತ್ತು.

  • ಐಎಂಎ ವಂಚನೆ ಪ್ರಕರಣ- ಇಂದು ಇಡಿ ಅಧಿಕಾರಿಗಳಿಂದ ಜಮೀರ್ ವಿಚಾರಣೆ

    ಐಎಂಎ ವಂಚನೆ ಪ್ರಕರಣ- ಇಂದು ಇಡಿ ಅಧಿಕಾರಿಗಳಿಂದ ಜಮೀರ್ ವಿಚಾರಣೆ

    ಬೆಂಗಳೂರು: ಬಹುಕೋಟಿ ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಸಂಬಂಧ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜಾರಿ ನಿರ್ದೇಶನಾಲಯ(ಇಡಿ)ದ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.

    ರಿಚ್ಮಂಡ್ ಟೌನ್‍ನ ಸರ್ಫೆಂಟೈನ್ ರಸ್ತೆಯಲ್ಲಿರುವ ನಿವೇಶನವನ್ನ ಮನ್ಸೂರ್ ಖಾನ್‍ಗೆ ಸಚಿವ ಜಮೀರ್ ಮಾರಾಟ ಮಾಡಿದ್ದರು. ಈ ಬಗ್ಗೆ ವಿವರಣೆಗೆ ಹಾಜಾರಾಗುವಂತೆ ಇ.ಡಿ ಅಧಿಕಾರಿಗಳು ಜಮೀರ್ ಅವರಿಗೆ  ನೋಟೀಸ್ ನೀಡಿದ್ದರು. ಜೂನ್ 5ರಂದು ಖುದ್ದು ಹಾಜರಾಗಿ ಐಎಂಎ ಹಗರಣ ಆರೋಪಿ ಮನ್ಸೂರ್ ಖಾನ್ ಜೊತೆ ನಡೆಸಿದ ನಿವೇಶನ ಮಾರಾಟ ಸಂಬಂಧ ಮಾಹಿತಿ ನೀಡುವಂತೆ ನೋಟಿಸ್ ಜಾರಿಗೊಳಿಸಲಾಗಿತ್ತು.

    ಕಳೆದ ವಾರ ಸಚಿವರ ಸೆವೆನ್ ಮಿನಿಸ್ಟರ್ಸ್ ಕ್ವಾಟ್ರಸ್‍ನ ಸರ್ಕಾರಿ ಮನೆಗೆ ಹೋಗಿ ಸಚಿವರ ಕೈಗೆ ಇಡಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದರು. ನೋಟಿಸ್ ತಲುಪಿದ ನಂತರ ಪ್ರತಿಕ್ರಿಯೆ ನೀಡಿದ್ದ ಜಮೀರ್ ಅವರು, ಕಾನೂನು ಪ್ರಕಾರವಾಗಿ ನಿವೇಶನ ಮಾರಾಟ ಮಾಡಿದ್ದೇನೆ. ಇಡಿ ವಿಚಾರಣೆಗೆ ಹಾಜರಾಗಿ ಎಲ್ಲಾ ದಾಖಲಾತಿಗಳನ್ನ ನೀಡಿ ವಿವರಣೆ ನೀಡುತ್ತೇನೆ ಎಂದಿದ್ದರು.

    ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಶಾಂತಿನಗರದ ಇಡಿ ಕಚೇರಿಗೆ ಸಚಿವರು ಹಾಜರಾಗಲಿದ್ದು, ಅಧಿಕಾರಿಗಳು ನಡೆಸುವ ವಿಚಾರಣೆ ಎದುರಿಸಲಿದ್ದಾರೆ ಎನ್ನಲಾಗಿದೆ.

  • ಐಎಂಎ ವಂಚನೆ ಪ್ರಕರಣ: ಬಿಡಿಎ ಅಧಿಕಾರಿಯನ್ನ ವಶಕ್ಕೆ ಪಡೆದ ಎಸ್‍ಐಟಿ

    ಐಎಂಎ ವಂಚನೆ ಪ್ರಕರಣ: ಬಿಡಿಎ ಅಧಿಕಾರಿಯನ್ನ ವಶಕ್ಕೆ ಪಡೆದ ಎಸ್‍ಐಟಿ

    ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡಿಎ ಕುಮಾರ್‍ ನನ್ನು ನ್ಯಾಯಾಲಯಕ್ಕೆ ಒಪ್ಪಿಸಿ, 8 ದಿನಗಳ ಕಾಲ ಎಸ್‍ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡಿಎ ಎಕ್ಸ್ ಕ್ಯೂಟಿವ್ ಇಂಜಿನೀಯರ್ ಕುಮಾರ ಎಂಬವರನ್ನು ನ್ಯಾಯಾಲಯಕ್ಕೆ ಒಪ್ಪಿಸಿ, 8 ದಿನನಗಳ ಕಾಲ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಆರೋಪಿಯನ್ನು ನ್ಯಾಯಾಲಯ 8 ದಿನಗಳ ಕಾಲ ಎಸ್‍ಐಟಿ ವಶಕ್ಕೆ ನೀಡಿದೆ. ಮನ್ಸೂರ್ ಖಾತೆಯಿಂದ ಕುಮಾರ್ ಖಾತೆಗೆ 5 ಕೋಟಿ ರೂ. ಹಣ ವರ್ಗಾವಣೆಯಾಗಿದ್ದು, ಈ ಕುರಿತು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಎಸ್‍ಐಟಿ ತಂಡದ ಡಿವೈಎಸ್‍ಪಿ ಅನೀಲ್ ಭೂಮಿರೆಡ್ಡಿ ನೇತೃತ್ವದಲ್ಲಿ ಫ್ರಂಟ್ ಲೈನ್ ಫಾರ್ಮಾಸಿ ಮಳಿಗೆಗಳನ್ನು ಪರಿಶೀಲಿಸಲಾಗಿದೆ.

    ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ಕಾರ್ಯಾಚರಣೆ ಮುಂದುವರಿಸಿದ್ದು, ಐಎಂಎ ಒಡೆತನದ ಫ್ರಂಟ್ ಲೈನ್ ಫಾರ್ಮಸಿಯ ನೀಲಸಂದ್ರ ಹಾಗೂ ವಿಜಯನಗರದ ಔಷಧಿ ಮಳಿಗೆಗಳ ಮೆಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 60 ಸಾವಿರ ನಗದು ಹಾಗೂ 40 ಲಕ್ಷ ರೂ. ಮೌಲ್ಯದ ಔಷಧಿ ಹಾಗೂ ವಿದ್ಯುನ್ಮಾನ ಉಪಕರಣಗಳು ಪತ್ತೆಯಾಗಿದ್ದು, ವಶಪಡಿಸಿಕೊಳ್ಳಲಾಗಿದೆ.

  • ಐಎಂಎ ಪ್ರಕರಣದಲ್ಲಿ ಜಮೀರ್ ಅಹಮ್ಮದ್ ಭಾಗಿ, ಸಚಿವ ಸ್ಥಾನದಿಂದ ವಜಾಮಾಡಿ: ಶ್ರೀರಾಮುಲು

    ಐಎಂಎ ಪ್ರಕರಣದಲ್ಲಿ ಜಮೀರ್ ಅಹಮ್ಮದ್ ಭಾಗಿ, ಸಚಿವ ಸ್ಥಾನದಿಂದ ವಜಾಮಾಡಿ: ಶ್ರೀರಾಮುಲು

    ಚಿತ್ರದುರ್ಗ: ಐಎಂಎ ಪ್ರಕರಣದಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಭಾಗಿಯಾಗಿದ್ದಾರೆ ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಆಗ್ರಸಿದ್ದಾರೆ.

    ಮೊಳಕಾಲ್ಮೂರು ತಾಲ್ಲೂಕಿನ ರಾಂಪುರದಲ್ಲಿ ಭದ್ರಾ ಹಿನ್ನೀರು ಯೋಜನೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಐಎಂಎ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್‍ಗೆ ಬನ್ನಿ ನಾವು ರಕ್ಷಣೆ ನೀಡುತ್ತೇವೆ ಎಂದು ಜಮೀರ್ ಅಹಮ್ಮದ್ ಖಾನ್ ಹೇಳುತ್ತಾರೆ. ಇದನ್ನು ನೋಡಿದರೆ ಅವರು ಕೂಡ ನೇರವಾಗಿ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಅನ್ನಿಸುತ್ತಿದೆ ಎಂದು ಆರೋಪ ಮಾಡಿದರು.

    ಈ ಸಮ್ಮಿಶ್ರ ಸರ್ಕಾರ ಭ್ರಷ್ಟಾಚಾರ ರಹಿತ ಸರ್ಕಾರ ಆಗಿದ್ದರೆ, ಈಗಾಗಲೇ ಇಡಿ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿರುವ ಸಚಿವರಾದ ಡಿಕೆಶಿ ಹಾಗು ಜಮೀರ್ ಅವರ ರಾಜೀನಾಮೆ ಪಡೆಯಬೇಕು. ಅಲ್ಲದೇ ಮಾಜಿ ಹಾಗೂ ಹಾಲಿ ಸಿಎಂಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಂಡಿದ್ದಾರೆ. ಇನ್ನು ಈ ಕುಮಾರಸ್ವಾಮಿ ಲಾಟರಿ ಮೂಲಕ ಸಿಎಂ ಆಗಿದ್ದಾರೆ. ಹೀಗಾಗಿ ಇವರಿಬ್ಬರು ಸೇರಿ ಎಂಪಿ ಚುನಾವಣೆಯಲ್ಲಿ ಎರಡು ಸ್ಥಾನ ಗೆಲ್ಲಲು ಆಗಿಲ್ಲ ಎಂದು ವ್ಯಂಗ್ಯವಾಡಿದರು.

    ಕಾಂಗ್ರೆಸ್ ಮತ್ತು ದಳದವರಿಗೆ ಭಾರತ ದೇಶದಲ್ಲಿ ಮೋದಿ ಅಲೆ ಇರೋದನ್ನು ಸಹಿಸಿಕೊಳ್ಳಲು ಸಹ ಆಗುತ್ತಿಲ್ಲ. ಹೀಗಾಗಿ ಈ ಮೈತ್ರಿ ಸರ್ಕಾರ ಇರುವವರೆಗೂ ಯಾವುದೇ ಅಭಿವೃದ್ಧಿ ಮಾಡದೇ ಕೇವಲ ವರ್ಗಾವಣೆಯಲ್ಲಿ ಹಣ ಮಾಡುವ ಕೆಲಸ ಮಾಡುತ್ತಿದ್ದು, ಈ ಮೈತ್ರಿ ಸರ್ಕಾರವು ಭ್ರಷ್ಟಾಚಾರದ ಕೂಪವೆಂದು ಹೇಳಿದರು.

    ಇದೇ ವೇಳೆ ಸಿಎಂ ಗ್ರಾಮ ವಾಸ್ತವ್ಯ ಬಗ್ಗೆ ಮಾತನಾಡಿ, ಅವರು ಗ್ರಾಮ ವಾಸ್ತವ್ಯ ಮಾಡುತ್ತಾರೆ ಆದರೆ ಅಲ್ಲಿನ ಸಮಸ್ಯೆ ಆಲಿಸಿ ಪರಿಹಾರ ಸೂಚಿಸುವ ಬದಲಾಗಿ ಎಲ್ಲರನ್ನೂ ಬೈಯುತ್ತಾರೆ ಎಂದು ಕುಟುಕಿದರು.