Tag: Imphal Valley

  • ಮಣಿಪುರದ 3 ಜಿಲ್ಲೆಗಳಲ್ಲಿ ಬೆ.5 ರಿಂದ ಸ.5ರವರೆಗೆ ನಿಷೇಧಾಜ್ಞೆ ಸಡಿಲಿಕೆ

    ಮಣಿಪುರದ 3 ಜಿಲ್ಲೆಗಳಲ್ಲಿ ಬೆ.5 ರಿಂದ ಸ.5ರವರೆಗೆ ನಿಷೇಧಾಜ್ಞೆ ಸಡಿಲಿಕೆ

    ಇಂಫಾಲ್: ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಹಿತದೃಷ್ಟಿಯಿಂದ 3 ಜಿಲ್ಲೆಗಳಲ್ಲಿ ನಿಷೇಧಾಜ್ಞೆಯನ್ನು ಸಡಿಲಗೊಳಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ (District Magistrate) ಆದೇಶ ಹೊರಡಿಸಿದೆ.

    ಇಂಫಾಲ್ ಪಶ್ಚಿಮ, ಪೂರ್ವ ಹಾಗೂ ಬಿಷ್ಣುಪುರ ಜಿಲ್ಲಾ ನ್ಯಾಯಾಧೀಶರು ಈ ಸಂಬಂಧ ಪ್ರತ್ಯೇಕ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಬಾರದು ಎಂದು ಬೆಳಿಗ್ಗೆ 5 ರಿಂದ ಸಂಜೆ 5 ರವರೆಗೆ ಹೊರಗೆ ಓಡಾಡಲು ಅವಕಾಶವಿದೆ. ಸಂಜೆ 5 ರಿಂದ ಬೆಳಿಗ್ಗೆ 5 ರವರೆಗೆ ನಿಷೇಧಾಜ್ಞೆ ಮುಂದುವರಿಯಲಿದೆ.ಇದನ್ನೂ ಓದಿ: ಕಾಂಗ್ರೆಸ್ಸಿನವರೇ ಸಿಕ್ಸ್, ಫೋರ್ ಹೊಡೆದು ಆರ್‌ಸಿಬಿಯನ್ನು ಗೆಲ್ಲಿಸಿದಂತೆ ಅವರಿಗೆ ಆತುರ ಇತ್ತು – ಸಿ.ಟಿ.ರವಿ

    ಮೈತೇಯಿ ಸಮುದಾಯದ ಅರಂಬಾಯಿ ತೆಂಗೋಲ್ ಸಂಘಟನೆಯ ನಾಯಕನ ಬಂಧನದ ವಿರುದ್ಧ ಮಣಿಪುರದಲ್ಲಿ ಪ್ರತಿಭಟನೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಜೊತೆಗೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್, ಬಿಷ್ಣುಪುರ ಮತ್ತು ಕಕ್ಟಿಂಗ್ ಜಿಲ್ಲೆಗಳಲ್ಲಿ ವಿಎಸ್‌ಎಟಿ, ವಿಪಿಎನ್ ಸೇರಿದಂತೆ ಇಂಟರ್‌ನೆಟ್ ಹಾಗೂ ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು.

    ಪ್ರತಿಭಟನಾಕಾರರು ಮೈತೆಯಿ ಸ್ವಯಂಸೇವಕ ಗುಂಪು ಅರಂಬಾಯಿ ತೆಂಗೋಲ್‌ಗೆ ಸೇರಿದವರಾಗಿದ್ದು, ತಮ್ಮ ನಾಯಕನ ಬಿಡುಗಡೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದರು. ಅಲ್ಲದೇ ರಸ್ತೆಗಳಲ್ಲಿ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.ಇದನ್ನೂ ಓದಿ: ಹುಲಿ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ

  • ಮಣಿಪುರ ಮತ್ತೆ ಧಗ ಧಗ – ಅಮಿತ್‌ ಶಾ ಭೇಟಿಗೆ ಮುನ್ನ ಮತ್ತೊಂದು ಅಟ್ಯಾಕ್‌, ಐವರ ಸಾವು

    ಮಣಿಪುರ ಮತ್ತೆ ಧಗ ಧಗ – ಅಮಿತ್‌ ಶಾ ಭೇಟಿಗೆ ಮುನ್ನ ಮತ್ತೊಂದು ಅಟ್ಯಾಕ್‌, ಐವರ ಸಾವು

    ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ (Manipur Violence) ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು ತಿಂಗಳಲ್ಲಿ ಸಾವಿನ ಸಂಖ್ಯೆ 80ಕ್ಕೆ ಏರಿಕೆಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಭೇಟಿಗೆ ಕೆಲವೇ ಗಂಟೆಗಳಿಗೆ ಮುನ್ನ ಹಿಂಸಾಚಾರ ನಡೆಸಿದೆ.

    ನಿನ್ನೆಯಷ್ಟೇ ಸಿಎಂ ಎನ್‌. ಬಿರೇನ್‌ ಸಿಂಗ್‌ ನಾಗರಿಕರ ವಿರುದ್ಧ ಶಸ್ತ್ರಾಸ್ತ್ರ ಬಳಸಿದ 40 ಭಯೋತ್ಪಾದಕರನ್ನ ಹತ್ಯೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದರು. ಭಯೋತ್ಪಾದಕರು ನಾಗರಿಕರ ವಿರುದ್ಧ M-16 ಮತ್ತು AK-47 ರೈಫಲ್‌ ಹಾಗೂ ಸ್ನೈಪರ್‌ ಗನ್‌ಗಳನ್ನ ಬಳಸಿ ದಾಳಿ ನಡೆಸಿದ್ದರು. ಅಲ್ಲದೇ ಮನೆಗಳಿಗೆ ಬೆಂಕಿ ಹಚ್ಚಲು ವಿವಿಧ ಗ್ರಾಮಗಳಿಗೆ ದಾಂಗುಡಿ ಇಟ್ಟಿದ್ದರು. ಅದಕ್ಕಾಗಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಬೇಕಾಯಿತು ಎಂಬುದಾಗಿ ಹೇಳಿದ್ದರು.

    ಮೇ 31ರ ವರೆಗೆ ಇಂಟರ್ನೆಟ್ ಬಂದ್:
    ಮಣಿಪುರದಲ್ಲಿ ಸದ್ಯ ಇನ್ನೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ಮೇ 31ರ ವರೆಗೂ ರಾಜ್ಯಾದ್ಯಂತ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: Manipur Violence: ಮಣಿಪುರದಲ್ಲಿ 40 ಮಂದಿ ದಂಗೆಕೋರರ ಹತ್ಯೆ – ಇಂಟರ್ನೆಟ್ ಸೇವೆ ಬಂದ್

    ಇದೇ ತಿಂಗಳ ಮೇ 3ರಂದು ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ವ್ಯಾಪಕ ಹಿಂಸಾಚಾರ ಭುಗಿಲೆದ್ದಿತ್ತು. ಎಸ್ಟಿ ಸ್ಥಾನಮಾನ ನೀಡಬೇಕೆಂಬ ಮೀಟೈ ಸಮುದಾಯದ ಬೇಡಿಕೆಯನ್ನ ವಿರೋಧಿಸಲಾಗಿತ್ತು. ಆ ನಂತರ ಹಿಂಸಾಚಾರ ಭುಗಿಲೆದ್ದಿತ್ತು. ಇದನ್ನೂ ಓದಿ: ಸಂಸತ್‌ ಉದ್ಘಾಟನೆಯನ್ನು ಪ್ರಧಾನಿ ತಮ್ಮ ಪಟ್ಟಾಭಿಷೇಕ ಅಂದುಕೊಂಡಿದ್ದಾರೆ – ಮೋದಿ ವಿರುದ್ಧ ರಾಗಾ ವಾಗ್ದಾಳಿ

    ಭಾನುವಾರ (ಮೇ 28) ಹಿಂಸಾಚಾರ ಪೀಡಿತ ಸ್ಥಳಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ ನೀಡಿ ಪರಿಶೀಲಿಸಿದರು. ಇದಕ್ಕೆ ಮೂರು ದಿನ ಮುಂಚಿತವಾಗಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಸಹ ಮಣಿಪುರ ರಾಜಧಾನಿಗೆ ಭೇಟಿ ನೀಡಿದ್ದರು. ಘರ್ಷಣೆ ನಡೆದು ಒಂದು ತಿಂಗಳಾದರೂ ಮಣಿಪುರದಲ್ಲಿ ಇನ್ನೂ ಅಶಾಂತಿ ವಾತಾವರಣ ಮುಂದುವರಿದಿದೆ.

    ಮಣಿಪುರದಲ್ಲಿ ಹಿಂಸಾಚಾರ ನಡೆದಿದ್ದೇಕೆ?
    ಮೀಟೈ ಸಮುದಾಯ ಎಸ್ಟಿ ಸ್ಥಾನಮಾನದ ಬೇಡಿಕೆಯ ಕುರಿತು 4 ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸನ್ನು ಕಳುಹಿಸುವಂತೆ ಮಣಿಪುರ ಹೈಕೋರ್ಟ್ ಕಳೆದ ತಿಂಗಳು ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ನಂತರ ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಬುಡಕಟ್ಟು ಜನಾಂಗದವರು ಮೆರವಣಿಗೆಯನ್ನು ಆಯೋಜಿಸಿದ್ದರು. ಆಲ್ ಟ್ರೈಬಲ್ ಸ್ಟೂಡೆಂಟ್ ಯೂನಿಯನ್ ಮಣಿಪುರ ಚುರಾಚಂದ್‌ಪುರ ಜಿಲ್ಲೆಯ ಟೋರ್ಬಂಗ್ ಪ್ರದೇಶದಲ್ಲಿ ಬುಡಕಟ್ಟು ಐಕ್ಯತಾ ಮೆರವಣಿಗೆಗೆ ಕರೆ ನೀಡಿತ್ತು. ಈ ರ‍್ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಆದರೆ ಈ ಸಂದರ್ಭದಲ್ಲಿ ಆದಿವಾಸಿಗಳು ಮತ್ತು ಬುಡಕಟ್ಟು ಜನಾಂಗದವರ ನಡುವೆ ಹಿಂಸಾಚಾರ ನಡೆದಿತ್ತು.

    ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ರಾಜ್ಯದ ಇತರ ಭಾಗಗಳಿಂದಲೂ ಹೆಚ್ಚುವರಿ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದವು. ಪರಿಸ್ಥಿತಿ ಕೈಮೀರಿದ್ದರಿಂದಾಗಿ ಕಂಡಲ್ಲಿ ಗುಂಡು ಹಾರಿಸಲು ಸರ್ಕಾರ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಸೇನಾಪಡೆಗಳು ಹಾಗೂ ಕೇಂದ್ರೀಯ ಭದ್ರತಾಪಡೆಗಳ ಕ್ಷಿಪ್ರ ಕಾರ್ಯಾಚರಣೆಯಿಂದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತ್ತು. ಆದ್ರೆ ಮತ್ತೆ ಅಶಾಂತಿ ವಾತಾವರಣ ಮುಂದುವರಿದ್ದು, ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಿರುವುದನ್ನ ಮುಂದುವರಿಸಲಾಗಿದೆ.

  • Manipur Violence: ಮಣಿಪುರದಲ್ಲಿ 40 ಮಂದಿ ದಂಗೆಕೋರರ ಹತ್ಯೆ – ಇಂಟರ್ನೆಟ್ ಸೇವೆ ಬಂದ್

    Manipur Violence: ಮಣಿಪುರದಲ್ಲಿ 40 ಮಂದಿ ದಂಗೆಕೋರರ ಹತ್ಯೆ – ಇಂಟರ್ನೆಟ್ ಸೇವೆ ಬಂದ್

    ಇಂಫಾಲ್: ರಾಜ್ಯದಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ನಾಗರಿಕರ ವಿರುದ್ಧ ಶಸ್ತ್ರಾಸ್ತ್ರ ಬಳಸಿ ದಾಳಿ ನಡೆಸಿದ್ದ ಕನಿಷ್ಠ 40 ಮಂದಿ ದಂಗೆಕೋರರು (Insurgents) ಹತರಾಗಿದ್ದಾರೆ. ಇನ್ನೂ ಕೆಲವು ಕಿಡಿಗೇಡಿಗಳನ್ನ ಬಂಧಿಸಲಾಗಿದೆ ಎಂದು ಸಿಎಂ ಎ. ಬಿರೇನ್ ಸಿಂಗ್ (N Biren Singh) ಭಾನುವಾರ ತಿಳಿಸಿದ್ದಾರೆ.

    ಮಣಿಪುರದಲ್ಲಿ ಸದ್ಯ ಇನ್ನೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ಮೇ 31ರ ವರೆಗೂ ರಾಜ್ಯಾದ್ಯಂತ ಇಂಟರ್ನೆಟ್ ಸೇವೆ (Internet Service) ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: Manipur Violence: ಧಗ ಧಗನೆ ಹೊತ್ತಿ ಉರಿಯುತ್ತಿದ್ದ ಮಣಿಪುರ ಸಹಜ ಸ್ಥಿತಿಗೆ – ಮೂರೇ ದಿನದಲ್ಲಿ 54 ಮಂದಿ ಸಾವು

    ಇದೇ ತಿಂಗಳ ಮೇ 3ರಂದು ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ವ್ಯಾಪಕ ಹಿಂಸಾಚಾರ ಭುಗಿಲೆದ್ದಿತ್ತು. ಎಸ್ಟಿ ಸ್ಥಾನಮಾನ ನೀಡಬೇಕೆಂಬ ಮೀಟೈ ಸಮುದಾಯದ ಬೇಡಿಕೆಯನ್ನ ವಿರೋಧಿಸಲಾಗಿತ್ತು. ಆ ನಂತರ ಹಿಂಸಾಚಾರ ಭುಗಿಲೆದ್ದಿತ್ತು.

    ಭಾನುವಾರ (ಮೇ 28) ಹಿಂಸಾಚಾರ ಪೀಡಿತ ಸ್ಥಳಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ ನೀಡಿ ಪರಿಶೀಲಿಸಿದರು. ಇದಕ್ಕೆ ಮೂರು ದಿನ ಮುಂಚಿತವಾಗಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಸಹ ಮಣಿಪುರ ರಾಜಧಾನಿಗೆ ಭೇಟಿ ನೀಡಿದ್ದರು. ಘರ್ಷಣೆ ನಡೆದು ಒಂದು ತಿಂಗಳಾದರೂ ಮಣಿಪುರದಲ್ಲಿ ಇನ್ನೂ ಅಶಾಂತಿ ವಾತಾವರಣ ಮುಂದುವರಿದಿದೆ.  ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ದೌರ್ಜನ್ಯ – ದೆಹಲಿ ಪೊಲೀಸರ ನಡೆಗೆ ವ್ಯಾಪಕ ಖಂಡನೆ

    ಮಣಿಪುರದಲ್ಲಿ ಹಿಂಸಾರ ನಡೆದಿದ್ದೇಕೆ?
    ಮೀಟೈ ಸಮುದಾಯ ಎಸ್ಟಿ ಸ್ಥಾನಮಾನದ ಬೇಡಿಕೆಯ ಕುರಿತು 4 ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸನ್ನು ಕಳುಹಿಸುವಂತೆ ಮಣಿಪುರ ಹೈಕೋರ್ಟ್ ಕಳೆದ ತಿಂಗಳು ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ನಂತರ ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಬುಡಕಟ್ಟು ಜನಾಂಗದವರು ಮೆರವಣಿಗೆಯನ್ನು ಆಯೋಜಿಸಿದ್ದರು. ಆಲ್ ಟ್ರೈಬಲ್ ಸ್ಟೂಡೆಂಟ್ ಯೂನಿಯನ್ ಮಣಿಪುರ ಚುರಾಚಂದ್‌ಪುರ ಜಿಲ್ಲೆಯ ಟೋರ್ಬಂಗ್ ಪ್ರದೇಶದಲ್ಲಿ ಬುಡಕಟ್ಟು ಐಕ್ಯತಾ ಮೆರವಣಿಗೆಗೆ ಕರೆ ನೀಡಿತ್ತು. ಈ ರ‍್ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಆದರೆ ಈ ಸಂದರ್ಭದಲ್ಲಿ ಆದಿವಾಸಿಗಳು ಮತ್ತು ಬುಡಕಟ್ಟು ಜನಾಂಗದವರ ನಡುವೆ ಹಿಂಸಾಚಾರ ನಡೆದಿತ್ತು.

    ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ರಾಜ್ಯದ ಇತರ ಭಾಗಗಳಿಂದಲೂ ಹೆಚ್ಚುವರಿ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದವು. ಪರಿಸ್ಥಿತಿ ಕೈಮೀರಿದ್ದರಿಂದಾಗಿ ಕಂಡಲ್ಲಿ ಗುಂಡು ಹಾರಿಸಲು ಸರ್ಕಾರ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಸೇನಾಪಡೆಗಳು ಹಾಗೂ ಕೇಂದ್ರೀಯ ಭದ್ರತಾಪಡೆಗಳ ಕ್ಷಿಪ್ರ ಕಾರ್ಯಾಚರಣೆಯಿಂದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತ್ತು. ಆದ್ರೆ ಮತ್ತೆ ಅಶಾಂತಿ ವಾತಾವರಣ ಮುಂದುವರಿದ್ದು, ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಿರುವುದನ್ನ ಮುಂದುವರಿಸಲಾಗಿದೆ.

  • Manipur Violence: ಧಗ ಧಗನೆ ಹೊತ್ತಿ ಉರಿಯುತ್ತಿದ್ದ ಮಣಿಪುರ ಸಹಜ ಸ್ಥಿತಿಗೆ – ಮೂರೇ ದಿನದಲ್ಲಿ 54 ಮಂದಿ ಸಾವು

    Manipur Violence: ಧಗ ಧಗನೆ ಹೊತ್ತಿ ಉರಿಯುತ್ತಿದ್ದ ಮಣಿಪುರ ಸಹಜ ಸ್ಥಿತಿಗೆ – ಮೂರೇ ದಿನದಲ್ಲಿ 54 ಮಂದಿ ಸಾವು

    ಇಂಫಾಲ್: ಪರಿಶಿಷ್ಟ ಪಂಗಡದ (ST Community) ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿದ್ದ ಪ್ರತಿಭಟನಾ ಕಾವು ಕಡಿಮೆಯಾಗಿದ್ದು, ಮಣಿಪುರ (Manipur) ಸಹಜ ಸ್ಥಿತಿಗೆ ಮರಳುತ್ತಿದೆ.

    ಶನಿವಾರ (ಮೇ 6) ಮಣಿಪುರದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಅಂಗಡಿಗಳು ಹಾಗೂ ಮಾರುಕಟ್ಟೆಗಳು ತೆರೆಯಲ್ಪಟ್ಟಿದ್ದು ವಾಣಿಜ್ಯ ಚಟುವಟಿಕೆಗಳು ಪ್ರಾರಂಭಗೊಳ್ಳುತ್ತಿವೆ. ಹೆಚ್ಚಿನ ಸೇನಾಪಡೆಗಳು (Army) ಹಾಗೂ ಕೇಂದ್ರ ಪೊಲೀಸ್‌ ಪಡೆಗಳ ಕ್ಷೀಪ್ರ ಕಾರ್ಯಾಚರಣೆಯಿಂದ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಇದನ್ನೂ ಓದಿ: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ – ಇಂಟರ್‌ನೆಟ್ ಸ್ಥಗಿತ, ಸ್ಥಳದಲ್ಲಿ ಸೇನೆ

    ಇನ್ನೂ ಮಣಿಪುರ್‌ನಲ್ಲಿ ನಡೆದ ಹಿಂಸಾಚಾರದಲ್ಲಿ (Manipur Violence) ಮೂರೇ ದಿನಗಳಲ್ಲಿ 54 ಮಂದಿ ಬಲಿಯಾಗಿದ್ದಾರೆ ಎಂದು ಅನಧಿಕೃತಮೂಲಗಳು ತಿಳಿಸಿವೆ. 16 ಮಂದಿಯ ಮೃತದೇಹಗಳನ್ನ ಚುರಾಚಂದ್‌ಪುರ್‌ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ, 15 ಮೃತದೇಹಗಳನ್ನ ಇಂಪಾಲ ಪೂರ್ವ ಜಿಲ್ಲೆಯ ಜವಾಹರಲಾಲ್‌ ನೆಹರೂ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿರಿಸಲಾಗಿದೆ. ಇಂಫಾಲ್ ಪಶ್ಚಿಮ ಜಿಲ್ಲೆಯ ಲ್ಯಾಂಫೆಲ್‌ನಲ್ಲಿರುವ ರೀಜನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

    ಈ ನಡುವೆ ಚುರಾಚಂದ್‌ಪುರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಐವರು ಉಗ್ರರನ್ನ ಹತ್ಯೆ ಮಾಡಲಾಗಿದೆ. ಉಗ್ರರು, ಭದ್ರತಾಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಇಂಡಿಯಾ ರಿಸರ್ವ್ ಬೆಟಾಲಿಯನ್ ಭದ್ರತಾಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮಣಿಪುರದಲ್ಲಿ ಹಿಂಸಾರ ನಡೆದಿದ್ದೇಕೆ?
    ಮೇಟೈ ಸಮುದಾಯ ಎಸ್ಟಿ ಸ್ಥಾನಮಾನದ ಬೇಡಿಕೆಯ ಕುರಿತು 4 ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸನ್ನು ಕಳುಹಿಸುವಂತೆ ಮಣಿಪುರ ಹೈಕೋರ್ಟ್ (High Court) ಕಳೆದ ತಿಂಗಳು ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ನಂತರ ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಬುಡಕಟ್ಟು ಜನಾಂಗದವರು ಮೆರವಣಿಗೆಯನ್ನು ಆಯೋಜಿಸಿದ್ದರು.‌ ಆಲ್ ಟ್ರೈಬಲ್ ಸ್ಟೂಡೆಂಟ್ ಯೂನಿಯನ್ ಮಣಿಪುರ ಚುರಾಚಂದ್‍ಪುರ ಜಿಲ್ಲೆಯ ಟೋರ್ಬಂಗ್ ಪ್ರದೇಶದಲ್ಲಿ ಬುಡಕಟ್ಟು ಐಕ್ಯತಾ ಮೆರವಣಿಗೆಗೆ ಕರೆ ನೀಡಿತ್ತು. ಈ ರ‍್ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಆದರೆ ಈ ಸಂದರ್ಭದಲ್ಲಿ ಆದಿವಾಸಿಗಳು ಮತ್ತು ಬುಡಕಟ್ಟು ಜನಾಂಗದವರ ನಡುವೆ ಹಿಂಸಾಚಾರ ನಡೆದಿತ್ತು. ಇದನ್ನೂ ಓದಿ:  ಮಣಿಪುರ ಧಗಧಗ – ಪರಿಸ್ಥಿತಿ ಕೈಮೀರಿದರೆ ಕಂಡಲ್ಲಿ ಗುಂಡು ಹಾರಿಸಿ: ಸರ್ಕಾರ ಆದೇಶ

    ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಬುಧವಾರ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡಬೇಕಿದ್ದ ಸ್ಥಳವನ್ನು ಧ್ವಂಸಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ರಾಜ್ಯದ ಇತರ ಭಾಗಗಳಿಂದಲೂ ಹೆಚ್ಚುವರಿ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದವು, ಪರಿಸ್ಥಿತಿ ಕೈಮೀರಿದ್ದರಿಂದಾಗಿ ಕಂಡಲ್ಲಿ ಗುಂಡು ಹಾರಿಸಲು ಸರ್ಕಾರ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಸೇನಾಪಡೆಗಳು ಹಾಗೂ ಕೇಂದ್ರೀಯ ಭದ್ರತಾಪಡೆಗಳ ಕ್ಷಿಪ್ರ ಕಾರ್ಯಾಚರಣೆಯಿಂದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ.