ಇಂಫಾಲ: ಭಾನುವಾರ ಇಂಫಾಲದ ವಿಮಾನ ನಿಲ್ದಾಣದ (Imphal Airport) ಮೇಲೆ ಡ್ರೋನ್ (Drone) ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಹಲವು ವಿಮಾನಗಳ ಹಾರಾಟ ವಿಳಂಬ ಮಾಡಿದ್ದು, ಮಾಹಿತಿ ಪಡೆದ ಭಾರತೀಯ ವಾಯುಪಡೆ (IAF) 2 ರಾಫೆಲ್ ವಿಮಾನವನ್ನು (Rafale Jet) ಅಪರಿಚಿತ ವಸ್ತುವನ್ನು ಹುಡುಕಲು ಕಳುಹಿಸಿದೆ.
ಮಣಿಪುರದ ಇಂಫಾಲ ವಿಮಾನ ನಿಲ್ದಾಣದ ಬಳಿ ಡ್ರೋನ್ ಇರುವಿಕೆ ಬಗ್ಗೆ ಮಾಹಿತಿ ಪಡೆದ ಬಳಿಕ ಐಎಎಫ್ ಹಶಿಮಾರಾದಿಂದ ಒಂದು ರಾಫೆಲ್ ಅನ್ನು ಹುಡುಕಾಟಕ್ಕೆ ಕಳುಹಿಸಿತು. ಆದರೆ ಅದು ಯಾವುದೇ ಅಪರಿಚಿತ ವಸ್ತುವನ್ನು ಪತ್ತೆಹಚ್ಚಿಲ್ಲ ಎಂದು ಮೂಲಗಳು ತಿಳಿಸಿವೆ.
ಮಣಿಪುರದ (Manipur) ಇಂಫಾಲದಲ್ಲಿರುವ ಬಿರ್ ಟಿಕೇಂದ್ರಜಿತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ಕಂಡುಬಂದ ಬಳಿಕ ಹಲವು ಗಂಟೆಗಳ ಕಾಲ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಯುಎಫ್‌ಒ ಸಂಜೆ 4 ಗಂಟೆಯವರೆಗೆ ವಾಯುನೆಲೆಯ ಪಶ್ಚಿಮಕ್ಕೆ ಚಲಿಸುತ್ತಿದ್ದು, ಅದು ಬರಿ ಕಣ್ಣುಗಳಿಗೂ ಕಾಣಿಸುತ್ತಿತ್ತು ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೋಲ್ಕತ್ತಾದಿಂದ ಆಗಮಿಸುತ್ತಿದ್ದ ಇಂಡಿಗೋ ವಿಮಾನ ಸೇರಿದಂತೆ ಹಲವು ವಿಮಾನಗಳ ಮಾರ್ಗ ಬದಲಿಸಲಾಗಿತ್ತು. 25 ನಿಮಿಷಗಳ ನಂತರ ಅದನ್ನು ಗುವಾಹಟಿಗೆ ಕಳುಹಿಸಲಾಯಿತು. ತಡವಾದ ವಿಮಾನಗಳು ಸುಮಾರು 3 ಗಂಟೆಗಳ ಬಳಿಕ ಇಂಫಾಲ ನಿಲ್ದಾಣದಿಂದ ಹೊರಟಿವೆ. ಘಟನೆ ಬಗ್ಗೆ ಶಿಲ್ಲಾಂಗ್‌ನಲ್ಲಿರುವ ಭಾರತೀಯ ವಾಯುಪಡೆಯ ಪೂರ್ವ ಕಮಾಂಡರ್‌ಗೂ ತಿಳಿಸಲಾಗಿದೆ. ಇದನ್ನೂ ಓದಿ: ಹಣಕಾಸು ಕೊರತೆಯ ನೆಪ ಬೇಡ; 6 ಮತ್ತು 7ನೇ ವೇತನ ಆಯೋಗ ಶಿಫಾರಸಿನನ್ವಯ ಶಿಕ್ಷಕರಿಗೆ ವೇತನ ನೀಡಿ: ಹೈಕೋರ್ಟ್ ಆದೇಶ
ಇಂಫಾಲ್: ಬಿರ್ ಟಿಕೇಂದ್ರಜಿತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Airport) ವಾಯುಪ್ರದೇಶದಲ್ಲಿ ಅಪರಿಚಿತ ಡ್ರೋನ್‍ಗಳು ಹಾರಾಟ ನಡೆಸಿದ್ದು, ವಿಮಾನ ಹಾರಾಟದ ಕಾರ್ಯಾಚರಣೆಯನ್ನು ರದ್ದು ಪಡೆಸಲಾಗಿದೆ. ಈ ಘಟನೆಯಿಂದ ಹಿಂಸಾಚಾರ ಪೀಡಿತ ಮಣಿಪುರದಲ್ಲಿ (Manipur) ಮತ್ತೆ ಆತಂಕ ಶುರುವಾಗಿದೆ.
ಕೆಲವು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಯಿತು. ಇನ್ನೂ ಕೆಲವು ವಿಮಾನಗಳನ್ನು ಮಾರ್ಗ ಮಧ್ಯದಿಂದಲೇ ಬೇರೆಡೆಗೆ ತಿರುಗಿಸಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿಮಾನ ನಿಲ್ದಾಣದ ನಿರ್ದೇಶಕ ಚಿಪೆಮ್ಮಿ ಕೀಶಿಂಗ್, ಇಂಫಾಲ್ (Imphal) ನಿಯಂತ್ರಿತ ವಾಯುಪ್ರದೇಶದಲ್ಲಿ ಅಪರಿಚಿತ ಹಾರುವ ವಸ್ತುವೊಂದು ಕಂಡುಬಂದ ಕಾರಣ, ಎರಡು ವಿಮಾನಗಳನ್ನು ತಿರುಗಿಸಲಾಗಿದೆ ಮತ್ತು ಮೂರು ಹೊರಡುವ ವಿಮಾನಗಳು ವಿಳಂಬವಾಗಿವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸುರಂಗ ಕಾಮಗಾರಿ ವೇಳೆ ಭೂಕುಸಿತ – ಕಾರ್ಮಿಕರ ರಕ್ಷಣೆಗೆ ಇನ್ನೂ ನಾಲ್ಕೈದು ದಿನ ಬೇಕು
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪ್ರತಿಕೂಲವಾದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಪರಿಗಣಿಸಿ ಸರ್ಕಾರ ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಿತ್ತು. ಬಳಿಕ ನಿಷೇಧವನ್ನು ನ.23ರ ವರೆಗೆ ವಿಸ್ತರಿಸಿತ್ತು. ಇದಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.
ಪರಿಶಿಷ್ಟ ಪಂಗಡದ (ಎಸ್‍ಟಿ) ಸ್ಥಾನಮಾನಕ್ಕಾಗಿ ಮೇಥಿ ಬುಡಕಟ್ಟು ಜನಾಂಗ ಮೆರವಣಿಗೆ ನಡೆಸಿತ್ತು. ಇದು ಮೇ 3 ರಂದು ಎರಡು ಬುಡಕಟ್ಟು ಗುಂಪುಗಳಾದ ಕುಕಿಸ್ ಮತ್ತು ಮೇಥಿ ನಡುವೆ ನಡೆದ ಜನಾಂಗೀಯ ಘರ್ಷಣೆಗೆ ಕಾರಣವಾಗಿತ್ತು. ಈ ಘರ್ಷಣೆಯಲ್ಲಿ ಸುಮಾರು 200 ಜನರು ಸಾವನ್ನಪ್ಪಿದ್ದರು. ಈ ಘರ್ಷಣೆ ಇನ್ನೂ ಸಹ ಬೂದಿ ಮುಚ್ಚಿದ ಕೆಂಡದಂತಿದ್ದು ಈ ಬೆಳವಣಿಗೆ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಕಾರಿಗೆ ಟ್ರಕ್ ಡಿಕ್ಕಿ – ಮೋದಿ ಭದ್ರತೆಗೆ ತೆರಳುತ್ತಿದ್ದ 6 ಪೊಲೀಸರ ದುರ್ಮರಣ
ಇಂಫಾಲ: ಮಣಿಪುರದಲ್ಲಿ (Manipur) ಮತ್ತೆ ಹಿಂಸಾಚಾರ (Violence) ಭುಗಿಲೆದ್ದಿದೆ. ಇಂಫಾಲದ (Imphal) ಪಶ್ಚಿಮ ಜಿಲ್ಲೆಯಲ್ಲಿ ಹಲವು ಸುತ್ತುಗಳ ಗುಂಡುಗಳನ್ನು ಹಾರಿಸಲಾಗಿದ್ದು, ಕನಿಷ್ಠ 2 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಪಟ್ಸೋಯಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಕೀಥೆಲ್ಮನ್ಬಿಯಲ್ಲಿ ಘಟನೆ ಸಂಭವಿಸಿದೆ. ದಾಳಿಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸದ್ಯ ಭದ್ರತಾ ಪಡೆಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆ ಬಳಿಕ ಪ್ರದೇಶದಲ್ಲಿ ಜಮಾಯಿಸಿದ ಮೈತೆಯಿ ಮಹಿಳೆಯರ ಗುಂಪನ್ನು ಭದ್ರತಾ ಪಡೆಗಳು ಮುಂದೆ ಸಾಗದಂತೆ ತಡೆದಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಭದ್ರತೆಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳ ಸಚಿವನ ಮನೆ ಮೇಲೆ ಇಡಿ ದಾಳಿ
ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾಗಿದ್ದು, ಅಂದಿನಿಂದ ಹಿಂಸಾಚಾರದಲ್ಲಿ 180 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ.
ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೈತೆಯಿ ಸಮುದಾಯದ ಬೇಡಿಕೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದೆ. ಮಣಿಪುರದ ಜನಸಂಖ್ಯೆಯ 53% ರಷ್ಟಿರುವ ಮೈತೆಯಿಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರು ನಾಗಾಗಳು ಮತ್ತು ಕುಕಿಗಳು 40% ಕ್ಕಿಂತ ಸ್ವಲ್ಪ ಹೆಚ್ಚು ಮತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. ಇದನ್ನೂ ಓದಿ: ಇಸ್ಪೀಟ್ ಅಡ್ಡೆಯ ಮೇಲೆ ದಾಳಿ – 1.78 ಲಕ್ಷ ರೂ. ಜಪ್ತಿ
ಇಂಫಾಲ: ಮಣಿಪುರದಲ್ಲಿ (Manipur) ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್‌ಪೋಕಿ (Kangpopki) ಜಿಲ್ಲೆಯಲ್ಲಿ ನಿಷೇಧಿತ ಭಯೋತ್ಪಾದಕ ಗುಂಪುಗಳು (Banned Terror Groups) ಮಂಗಳವಾರ ಬೆಳಗ್ಗೆ ಕುಕಿ-ಜೋ ಸಮುದಾಯಕ್ಕೆ ಸೇರಿದ ಮೂವರು ಆದಿವಾಸಿಗಳನ್ನು (Tribals) ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿಷೇಧಿತ ಭಯೋತ್ಪಾದಕರು ಇಂಫಾಲ ಮತ್ತು ಕಾಂಗ್‌ಪೋಕಿ ಜಿಲ್ಲೆಗಳ ಗಡಿಭಾಗದಲ್ಲಿರುವ ಇರೆಂಗ್ ಮತ್ತು ಕರಮ್ ಪ್ರದೇಶಗಳ ಗ್ರಾಮಸ್ಥರ ಮೇಲೆ ದಾಳಿ (Attack) ನಡೆಸಿ ಮೂವರನ್ನು ಹತ್ಯೆಗೈದಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮುಂಬೈ-ಗುವಾಹಟಿ ವಿಮಾನದಲ್ಲಿ ಅನುಚಿತವಾಗಿ ವರ್ತಿಸಿದ ಪ್ರಯಾಣಿಕ ಅರೆಸ್ಟ್
ಈ ಗ್ರಾಮವು ಬೆಟ್ಟದ ತುದಿಯಲ್ಲಿದ್ದು, ಬುಡಕಟ್ಟು ಜನರ ಪ್ರಾಬಲ್ಯವನ್ನು ಹೊಂದಿದೆ. ಮಣಿಪುರದಲ್ಲಿ ಮೈತೇಯಿ ಸಮುದಾಯ ಮತ್ತು ಬುಡಕಟ್ಟು ಸಮುದಾಯಗಳ ಮಧ್ಯೆ ಆಗಾಗ ಘರ್ಷಣೆ ನಡೆಯುತ್ತಿದ್ದು, ಇದುವರೆಗೆ 160ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸೆಪ್ಟೆಂಬರ್ 8ರಂದು ತೆಂಗ್ನೌಪಾಲ್ ಜಿಲ್ಲೆಯ ಪಲ್ಲೆಲ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದನ್ನೂ ಓದಿ: ಪತಿಯಿಂದ್ಲೇ ಸುಪ್ರೀಂಕೋರ್ಟ್ ವಕೀಲೆಯ ಬರ್ಬರ ಹತ್ಯೆ
ಇಂಫಾಲ್: ಅಂದು ನೆರೆಹೊರೆಯ ಮನೆಗಳಿಗೆಲ್ಲಾ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು, ನನ್ನ ಮನೆಗೂ ಬೆಂಕಿ ಬಿದ್ದಿತ್ತು. ಇಬ್ಬರು ಮಕ್ಕಳನ್ನ ಬೆನ್ನಿಗೆ ಕಟ್ಟಿಕೊಂಡು, ಸೊಸೆ, ನಾದಿನಿಯನ್ನ ಕರೆದುಕೊಂಡು ಬೆಂಕಿಬಿದ್ದ ಮನೆಯಿಂದ ತಪ್ಪಿಸಿಕೊಂಡು ಓಡುತ್ತಿದೆ. ವೇಗವಾಗಿ ಓಡುತ್ತಿದ್ದರಿಂದ ಕಾಲು ತಡವರಿಸಿ ಎಡವಿ ಬಿದ್ದೆ. ಅಷ್ಟರಲ್ಲಿ ಯಮಸ್ವರೂಪಿಗಳಂತೆ ಬಂದ ದುಷ್ಕರ್ಮಿಗಳು ನನ್ನನ್ನ ಹಿಡಿದು ಎಳೆದಾಡಿ, ಮನಸ್ಸೋ ಇಚ್ಚೆ ಎಳೆದಾಡಿದ್ರು, ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ರು. ಇದು ಮಣಿಪುರದ ಸಂಘರ್ಷದಲ್ಲಿ (Manipur Violence) ಸಿಕ್ಕಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತ ಮಹಿಳೆ ಕಹಿ ಅನುಭವವನ್ನು ಬಿಚ್ಚಿಟ್ಟ ಪರಿ.
ಮಣಿಪುರದಲ್ಲಿ (Manipur) ಜನಾಂಗೀಯ ಘರ್ಷಣೆ ನಡೆಯುತ್ತಿದ್ದು ಮಹಿಳಾ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪರಿಹಾರ ಶಿಬಿರದಲ್ಲಿ ವಾಸಿಸುತ್ತಿರುವ ಮಹಿಳೆಯರು ಆಘಾತಕಾರಿ ಘಟನೆಗಳಲ್ಲಿ ತಾವು ಅನುಭವಿಸಿದ ಕಹಿ ಸತ್ಯಗಳನ್ನ ಬಿಚ್ಚಿಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮತ್ತೊಂದು ಭಯಾಕನ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಹಾಗೂ ಅಧಿಕಾರಿಗಳು ಜನರಿಗೆ ಪ್ರೋತ್ಸಾಹ ನೀಡುತ್ತಿರುವುದರಿಂದ ನೊಂದ ಜೀವಗಳು ಕಷ್ಟ ಹೇಳಿಕೊಳ್ಳಲು ಮುಂದೆ ಬರುತ್ತಿವೆ.
ಮಣಿಪುರದಲ್ಲಿ ಸಂಘರ್ಷ ಭುಗಿಲೇಳುತ್ತಿದ್ದಂತೆ ಹಲವು ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ದುಷ್ಕೃತ್ಯ ಎಸಗಿದ್ದರು. ಇಂತಹ ಸಂದರ್ಭದಲ್ಲಿ ಸುಟ್ಟು ಹೋದ ಮನೆಯಿಂದ 37ರ ವಿವಾಹಿತ ಮಹಿಳೆ ತನ್ನ ಇಬ್ಬರು ಮಕ್ಕಳು, ಸೊಸೆ ಮತ್ತು ನಾದಿನಿಯೊಂದಿಗೆ ಓಡಿ ಹೋಗುತ್ತಿದ್ದ ವೇಳೆ ಪುರುಷರಿಂದ ಗುಂಪಿಗೆ ಸಿಕ್ಕಿಬಿದ್ದು ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ CJI ಹೊರಗೆ – ರಾಜ್ಯಸಭೆಯಲ್ಲಿ ಮಸೂದೆ ಮಂಡನೆ
ನನ್ನ, ನನ್ನ ಕುಟುಂಬದ ಘನತೆ ಗೌರವ ಹಾಳಾಗುತ್ತದೆ, ಸಮಾಜದಿಂದ ಬಹಿಷ್ಕಾರಕ್ಕೆ ಒಳಗಾಗುವುದನ್ನು ತಪ್ಪಿಸಿಕೊಳ್ಳಲು ಘಟನೆಯನ್ನು ಬಹಿರಂಗಪಡಿಸಿರಲಿಲ್ಲ. ಸಾಮಾಜಿಕ ಕಳಂಕದಿಂದ ತಪ್ಪಿಸಿಕೊಳ್ಳೋದಕ್ಕಾಗಿ ಅತ್ಯಾಚಾರ ಆಗಿದ್ದರೂ ವಿಷಯವನ್ನ ಮುಚ್ಚಿಟ್ಟಿದೆ. ಕೊನೆಗೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ನಿರ್ಧಾರ ಮಾಡಿದ್ದೆ. ಆದ್ರೆ ಕುಟುಂಬಸ್ಥರು ಧೈರ್ಯತುಂಬಿದ್ದರಿAದ ದೂರು ನೀಡುತ್ತಿದ್ದೇನೆ ಎಂದು ಬಿಷ್ಣುಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾಳೆ. ಮಹಿಳೆ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ. ಸದ್ಯ ಸಂತ್ರಸ್ತ ಕುಟುಂಬಸ್ಥರು ಪರಿಹಾರ ಶಿಬಿರದಲ್ಲಿ ನೆಲೆಸಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲ್ಮೈ ಸಮೀಪಕ್ಕೆ Chandrayaan-3 ಬಾಹ್ಯಾಕಾಶ ನೌಕೆ – ಇಷ್ಟು ದೂರ ಹೋದ್ರೆ ಚಂದ್ರನ ಮೇಲೆ ಲ್ಯಾಂಡಿಂಗ್ ಪಕ್ಕಾ!
ಆ ಕರಳ ದಿನದಲ್ಲಿ ನಡೆದಿದ್ದೇನು?
ಮೇ 3 ರಂದು ಸಂಜೆ 6:30ರ ವೇಳೆ ದುಷ್ಕರ್ಮಿಗಳ ಗುಂಪೊಂದು ಆಕೆಯ ಮನೆ ಹಾಗೂ ನೆರೆಹೊರೆಯ ಮನೆಗಳಿಗೆ ಬೆಂಕಿ ಹಚ್ಚಿದ್ದರು. ಆಗ ಅಲ್ಲಿಂದ ತಪ್ಪಿಸಿಕೊಳ್ಳಲು ಮುಂದಾದ ಮಹಿಳೆ ತನ್ನ ಇಬ್ಬರು ಮಕ್ಕಳು, ಸೊಸೆ ಮತ್ತು ನಾದಿನಿಯೊಂದಿಗೆ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಳು. ವೇಗವಾಗಿ ಓಡುತ್ತಿದ್ದ ವೇಳೆ ರಸ್ತೆಯಲ್ಲಿ ಎಡವಿ ಬಿದ್ದಿದ್ದಾಳೆ. ಅಷ್ಟರಲ್ಲಿ ಸೊಸೆ ಇಬ್ಬರು ಗಂಡುಮಕ್ಕಳನ್ನು ಕರೆದುಕೊಂಡು ಓಡಿ ಹೋಗಿದ್ದಾಳೆ. ಆದ್ರೆ ಎಡವಿ ಬಿದ್ದ ಮಹಿಳೆ ಚೇತರಿಸಿಕೊಂಡು ಎದ್ದೇಳುತ್ತಿದ್ದಂತೆ ಐದಾರು ದುಷ್ಕರ್ಮಿಗಳು ಆಕೆಯನ್ನ ಹಿಡಿದು ಎಳೆದಾಡಿದ್ದಾರೆ. ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಆಕೆ ಪ್ರತಿರೋಧ ವ್ಯಕ್ತಪಡಿಸಿದ್ದಾಳೆ, ಆಗ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಶೂನ್ಯ ಎಫ್‌ಐಆರ್‌ನಲ್ಲಿ ಹೇಳಿಕೆ ದಾಖಲಿಸಿದ್ದಾಳೆ.
ಶೂನ್ಯ ಎಫ್‌ಐಆರ್ ಅನ್ನು ಯಾವುದೇ ಪೊಲೀಸ್ ಠಾಣೆಯಲ್ಲಿ ಬೇಕಾದರೂ ದಾಖಲಿಸಬಹುದು. ಪ್ರಕರಣ ದಾಖಲಾದ ಪೊಲೀಸ್ ಠಾಣೆಯು ಎಫ್‌ಐಆರ್ ಅನ್ನು ಸರಿಯಾದ ನ್ಯಾಯವ್ಯಾಪ್ತಿಗೆ ಕಳುಹಿಸಬೇಕು, ನಂತರ ಅದನ್ನು ತನಿಖೆ ಮಾಡಲಾಗುತ್ತದೆ ಎಂದು ಚುರಚಂದಪುರದ ಪೊಲೀಸರು ತಿಳಿಸಿದ್ದಾರೆ.
ಇದುವರೆಗೆ ಮಣಿಪುರದಲ್ಲಿ ಸಾವಿರಾರು ಎಫ್‌ಐಆರ್‌ಗಳು ದಾಖಲಾಗಿದೆ. ಅದರಲ್ಲಿ ಒಂದೇ ಪ್ರಕರಣದ ಮೇಲೆ ಅನೇಕ ಝೀರೋ ಎಫ್‌ಐಆರ್‌ಗಳು ದಾಖಲಾಗಿವೆ. ಬೆಂಕಿ ಹಚ್ಚಿ ದಾಳಿ ಮಾಡಿರುವ ಸಂಬಂಧ 4,454 ಕೇಸ್, 4,148 ಲೂಟಿ ಕೇಸ್, ಮನೆ ಆಸ್ತಿ ನಾಶಕ್ಕೆ ಸಂಬಂಧಿಸಿದಂತೆ 4,694 ಕೇಸ್ ಹಾಗೂ ಸಾರ್ವಜನಿಕ ಆಸ್ತಿ ಹಾನಿಗೆ ಸಂಬಂಧಿಸಿದಂತೆ 584 ಕೇಸ್‌ಗಳು ದಾಖಲಾಗಿವೆ.
ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ (Manipur Violence) ಕಳೆದ 3 ತಿಂಗಳುಗಳಿಂದ ನಿರಂತರವಾಗಿ ನಡೆಯುತ್ತಲೇ ಇದ್ದು, ಗುರುವಾರ ಕಿಡಿಗೇಡಿಗಳು ಇಂಫಾಲದಲ್ಲಿ (Imphal) ಪೊಲೀಸ್ ಅಧಿಕಾರಿಯೊಬ್ಬರನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿರುವ ಘಟನೆ ನಡೆದಿದೆ.
ಗುರುವಾರ ಪುರುಷರು ಹಾಗೂ ಮಹಿಳೆಯರನ್ನು ಒಳಗೊಂಡ ಗುಂಪು ಬಿಷ್ಣುಪುರ್ ಜಿಲ್ಲೆಯ ಮಣಿಪುರ ಸಶಸ್ತ್ರ ಪೊಲೀಸ್ ಎರಡನೇ ಬೆಟಾಲಿಯನ್‌ನ ಕೀರೆನ್‌ಫಾಬಿ ಪೊಲೀಸ್ ಔಟ್‌ಪೋಸ್ಟ್ ಹಾಗೂ ತಂಗಲವಾಯ್ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜನಸಮೂಹ ಹೀಂಗಾಂಗ್ ಹಾಗೂ ಸಿಂಗ್ಜಮೇಯಿ ಪೊಲೀಸ್ ಠಾಣೆಗಳಿಂದಲೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದೆ. ಆದರೆ ಭದ್ರತಾಪಡೆಗಳು ಅವರ ದಾಳಿಯನ್ನು ವಿಫಲಗೊಳಿಸಿದೆ. ಕೌಟ್ರುಕ್, ಹರಾಥೆಲ್ ಮತ್ತು ಸೆಂಜಮ್ ಚಿರಾಂಗ್ ಪ್ರದೇಶದಲ್ಲಿ ಶಸ್ತ್ರಸಜ್ಜಿತ ದಾಳಿಕೋರರು ಹಾಗೂ ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೇದಾರನಾಥ ಮಾರ್ಗದಲ್ಲಿ ಭಾರಿ ಭೂಕುಸಿತ – ಹಲವರ ಸಮಾಧಿ ಶಂಕೆ
ಕಳೆದ 24 ಗಂಟೆಗಳಲ್ಲಿ ರಾಜ್ಯದ ಪರಿಸ್ಥಿತಿ ಇನ್ನೂ ಹದಗೆಟ್ಟಿದೆ. ವಿವಿಧ ಸ್ಥಳಗಳಲ್ಲಿ ಜನರ ಸಮೂಹ ಅಶಿಸ್ತಿನಿಂದ ವರ್ತಿಸಿ ಗುಂಡು ಹಾರಿಸುವ ಹಾಗೂ ಗುಂಪುಗೂಡುವುದು ಸಂಭವಿಸುತ್ತಲೇ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಣಿಪುರದ ಬೆಟ್ಟ ಮತ್ತು ಕಣಿವೆ ಜಿಲ್ಲೆಗಳಲ್ಲಿ ಒಟ್ಟು 129 ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಲ್ಲಂಘನೆಗೆ ಸಂಬಂಧಿಸಿದಂತೆ ಸುಮಾರು 1,047 ಜನರನ್ನು ಬಂಧಿಸಲಾಗಿದೆ. ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವೆ ಪ್ರಾರಂಭವಾದ ಜನಾಂಗೀಯ ಘರ್ಷಣೆ ಕಳೆದ 3 ತಿಂಗಳಿನಿಂದ ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ. ಇದನ್ನೂ ಓದಿ: ಟೈಟ್ ಸೆಕ್ಯುರಿಟಿಯೊಂದಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ಆರಂಭ
ಇಂಪಾಲ: 1,500 ಕ್ಕೂ ಹೆಚ್ಚು ಮಹಿಳೆಯರಿದ್ದ ಗುಂಪು ಸೇನಾ ವಾಹನಗಳಿಗೆ ಮುತ್ತಿಗೆ ಹಾಕಿದ ನಂತರ ಭಾರತೀಯ ಸೇನೆ (Indian Army) 12 ಜನ ದಾಳಿಕೋರರನ್ನು ಬಿಡುಗಡೆ ಮಾಡಿದ ಘಟನೆ ಮಣಿಪುರದಲ್ಲಿ (Manipur) ನಡೆದಿದೆ.
ಸೇನಾ ವಾಹನವನ್ನು ತಡೆದವರ ಬಳಿ ಸ್ಫೋಟಕಗಳು ಹಾಗೂ ಶಸ್ತ್ರಾಸ್ತಗಳಿದ್ದವು. ಅದ್ದರಿಂದ ನಾಗರಿಕರ ಪ್ರಾಣಕ್ಕೆ ಅಪಾಯ ಆಗದಂತೆ ರಕ್ಷಿಸಲು ದಾಳಿಕೋರರನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಸೇನೆ ಕೈಗೊಂಡಿದೆ. ಸೇನೆ ಮಾನವೀಯ ದೃಷ್ಠಿಯಿಂದ ಯಾವುದೇ ದಾಳಿ ನಡೆಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆಯ ಕಾರ್ಯಕ್ಕೆ ಕಾರ್ಯಾಚರಣೆಯ ಉಸ್ತುವಾರಿ ಕಮಾಂಡರ್ ಅವರನ್ನು ಅಧಿಕಾರಿಗಳು ಶ್ಲಾಘಿಸಿದ್ದಾರೆ. ಇದನ್ನೂ ಓದಿ: Manipur Violence: ಧಗ ಧಗನೆ ಹೊತ್ತಿ ಉರಿಯುತ್ತಿದ್ದ ಮಣಿಪುರ ಸಹಜ ಸ್ಥಿತಿಗೆ – ಮೂರೇ ದಿನದಲ್ಲಿ 54 ಮಂದಿ ಸಾವು
ಸೇನೆಯು ಮೈತೇಯ್ ಉಗ್ರಗಾಮಿ ಸಂಘಟನೆಯ 12 ಕೆವೈಕೆಎಲ್ ಉಗ್ರಗಾಮಿಗಳನ್ನು ಬಂಧಿಸಿತ್ತು. ಈ ಗುಂಪು 2015 ರಲ್ಲಿ 6 ಡೋಗ್ರಾ ಘಟಕದ ಮೇಲೆ ದಾಳಿ ಸೇರಿದಂತೆ ಹಲವು ದಾಳಿಗಳಲ್ಲಿ ಭಾಗಿಯಾಗಿತ್ತು ಎಂದು ಸೇನೆ ತಿಳಿಸಿದೆ. ಅಲ್ಲದೇ ಸೇನಾ ವಾಹನವನ್ನು ಸುತ್ತುವರೆದ ಮಹಿಳೆಯರಿಗೆ ಎಷ್ಟೇ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಸ್‍ಟಿ ಮೀಸಲಾತಿ ವಿಚಾರವಾಗಿ ಮೈತೇಯ್ ಮತ್ತು ಕುಕಿ ಬುಡಕಟ್ಟು ಸಮುದಾಯಗಳ ನಡುವೆ ಸಂಘರ್ಷ ಶುರುವಾಗಿದೆ. ಇದು ಮಣಿಪುರದಲ್ಲಿ ಹಿಂಸಾಚಾರ ಬುಗಿಲೆದ್ದಿತ್ತು. ಮೈತೇಯ್ ಹಾಗೂ ಕುಕಿ ಬುಡಕಟ್ಟು ಜನಾಂಗದ ನಡುವಿನ ಘರ್ಷಣೆಯಲ್ಲಿ ಇಲ್ಲಿಯ ವರೆಗೆ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Manipur Violence: ಮಣಿಪುರದಲ್ಲಿ 40 ಮಂದಿ ದಂಗೆಕೋರರ ಹತ್ಯೆ – ಇಂಟರ್ನೆಟ್ ಸೇವೆ ಬಂದ್
ಇಂಫಾಲ: ಈಶಾನ್ಯ ರಾಜ್ಯ ಮಣಿಪುರದಲ್ಲಿ (Manipur) ಹೆಚ್ಚುತ್ತಿರುವ ಹಿಂಸಾಚಾರದ (Violence) ನಡುವೆ ಶುಕ್ರವಾರ ನಸುಕಿನ ವೇಳೆ ಇಂಫಾಲದಲ್ಲಿರುವ (Imphal) ಕೇಂದ್ರ ಸಚಿವ ರಾಜ್‌ಕುಮಾರ್ ರಂಜನ್ ಸಿಂಗ್ (Rajkumar Ranjan Singh) ಅವರ ಮನೆಗೆ ಕೆಲ ದುಷ್ಕರ್ಮಿಗಳು ಬೆಂಕಿ (Fires) ಹಚ್ಚಿದ್ದಾರೆ.
ಶುಕ್ರವಾರ ನಸುಕಿನ ವೇಳೆ ಈ ಘಟನೆ ನಡೆದಿದೆ. ಕಿಡಿಗೇಡಿಗಳು ಸಿಂಗ್ ಅವರ ಮನೆಗೆ ದಾಳಿ ಮಾಡಿ ಬೆಂಕಿ ಹಚ್ಚಿದ್ದಾರೆ. ಸದ್ಯ ಘಟನೆ ವೇಳೆ ಕೇಂದ್ರ ಸಚಿವರು ಮನೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವಾರದ ಆರಂಭದಲ್ಲಿ ರಾಜ್ಯ ಸಚಿವ ಹಾಗೂ ಬಿಜೆಪಿ ನಾಯಕ ನೆಮ್ಚಾ ಕಿಪ್ಗೆನ್ ಅವರ ಮನೆಗೂ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಇದರ ನಡುವೆ ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, ಈ ಬಗ್ಗೆ ಅನೇಕ ಹಂತಗಳಲ್ಲಿ ಚರ್ಚೆ ನಡೆಸಲಾಗುತ್ತಿದ್ದು, ಹಿಂಸಾಚಾರದಲ್ಲಿ ತೊಡಗಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ತ್ರಿವರ್ಣ ಧ್ವಜ ತೆಗೆದಿದ್ದ ಖಲಿಸ್ತಾನಿ ಉಗ್ರ ಅವತಾರ್ ಸಿಂಗ್ ನಿಗೂಢ ಸಾವು
ಮಣಿಪುರದಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೇಯಿ ಹಾಗೂ ಕುಕಿ ಸಮುದಾಯದ ನಡುವೆ ಕಳೆದ ಒಂದು ತಿಂಗಳಿನಿಂದ ಹಿಂಸಾಚಾರ ನಡೆಯುತ್ತಲೇ ಇದೆ. ಇದುವರೆಗೆ ಘಟನೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬುಧವಾರ ನಡೆದ ಹಿಂಸಾಚಾರದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮೇಘಸ್ಫೋಟದ ಆತಂಕ – ಜೂ.18, 19ರಂದು ಬೆಂಗ್ಳೂರಲ್ಲಿ ಭಾರೀ ಮಳೆಯ ಮುನ್ಸೂಚನೆ
ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ (Manipur Violence) ಮುಂದುವರೆದಿದ್ದು, ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಮಹಿಳೆ ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ.
ಖಮೆನ್ಲೋಕ್ ಪ್ರದೇಶದಲ್ಲಿ ತಡರಾತ್ರಿ ಈ ದಾಳಿ ನಡೆದಿದೆ. ಮೃತ ದೇಹಗಳು ಗುರುತು ಸಿಗದಂತೆ ಗಾಯಗಳಾಗಿದ್ದು, ಅನೇಕ ಸುತ್ತಿನ ಗುಂಡುಗಳು ದೇಹವನ್ನು ಛಿದ್ರಗೊಳಿಸಿವೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಇಂಫಾಲ್‍ನ (Imphal) ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ – ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ
ಮೇಟಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳಿಂದಾಗಿ ಕಳೆದ ಒಂದು ತಿಂಗಳಿನಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದೆ. ಶಾಂತಿಯನ್ನು ಪುನರ್ ಸ್ಥಾಪಿಸುವ ಪ್ರಯತ್ನಗಳ ಮಧ್ಯೆ ಈ ಘಟನೆಯು ದೊಡ್ಡ ಹಿನ್ನಡೆಯಾಗಿದೆ. ರಾತ್ರಿಯ ಘಟನೆಯ ನಂತರ ಕಫ್ರ್ಯೂ ಸಡಿಲಿಕೆಯನ್ನು ನಿಬರ್ಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಬಹುಸಂಖ್ಯಾತ ಮೇಟಿಗಳಿಗೆ ಪರಿಶಿಷ್ಟ ಪಂಗಡಗಳ ಸ್ಥಾನಮಾನ ನೀಡುವ ಕ್ರಮದ ವಿರುದ್ಧ ಬುಡಕಟ್ಟು ಸಮುದಾಯ (Tribal) ಪ್ರತಿಭಟನೆ ನಡೆಸಿದ ನಂತರ ಈ ಹಿಂಸಾಚಾರ ಆರಂಭವಾಗಿತ್ತು. ಇಲ್ಲಿವರೆಗಿನ ಘರ್ಷಣೆಯಲ್ಲಿ ಸುಮಾರು 100 ಜನರು ಸಾವನ್ನಪ್ಪಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ. ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದೆ.
ಇಂಪಾಲ: ಮಣಿಪುರದ (Manipur) ಸೆರೌ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಕುಕಿ ದಂಗೆಕೋರರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ಗಡಿ ಭದ್ರತಾ ಪಡೆ (BSF) ಯೋಧರೊಬ್ಬರು ಹುತಾತ್ಮರಾಗಿದ್ದು, ಇಬ್ಬರು ಅಸ್ಸಾಂ ರೈಫಲ್ಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಕಾಕ್ಚಿಂಗ್ (Kakching) ಜಿಲ್ಲೆಯ ಸುಗ್ನುವಿನ ಸೆರೌ (Serou) ಪ್ರದೇಶದ ಶಾಲೆಯೊಂದರಲ್ಲಿ ದಂಗೆಕೋರರು ಮತ್ತು ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಕಾನ್‌ಸ್ಟೇಬಲ್ ರಂಜಿತ್ ಯಾದವ್ ಎಂಬ ಯೋಧನಿಗೆ ಗುಂಡು ತಗುಲಿತ್ತು. ತಕ್ಷಣ ಅವರನ್ನು ಕಾಕ್ಚಿಂಗ್ ಜೀವನ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದರು. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಭಯೋತ್ಪಾದಕರ ಭೀತಿ- ಭದ್ರತಾ ಪಡೆಗಳೇ ಟಾರ್ಗೆಟ್
ಮಂಗಳವಾರ ಮುಂಜಾನೆ 4:15ರ ಸುಮಾರಿಗೆ ಸೆರೌ ಪ್ರಾಕ್ಟಿಕಲ್ ಹೈಸ್ಕೂಲ್‌ನಲ್ಲಿ ನಿಯೋಜಿಸಲಾಗಿದ್ದ ಬಿಎಸ್‌ಎಫ್ ಪಡೆಗಳನ್ನು ಗುರಿಯಾಗಿಸಿಕೊಂಡು ಕುಕಿ ದಂಗೆಕೋರರು (Kuki Miscreants) ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಅಲ್ಲದೇ ಗಾಯಗೊಂಡಿರುವ ಇಬ್ಬರು ಅಸ್ಸಾಂ ರೈಫಲ್ಸ್ ಸಿಬ್ಬಂದಿಯನ್ನು ಮಂತ್ರಿಪುಖ್ರಿಗೆ ವಾಯು ಸ್ಥಳಾಂತರಿಸಲಾಗಿದೆ. ಶೋಧ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ ಎಂದು ದಿಮಾಪುರದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಭಾರತೀಯ ಸೇನೆಯ ಸ್ಪಿಯರ್‌ಕಾರ್ಪ್ಸ್ ಟ್ವಿಟ್ಟರ್‌ನಲ್ಲಿ ಹೇಳಿದೆ. ಇದನ್ನೂ ಓದಿ: ಬಾಲಸೋರ್ ರೈಲು ಅಪಘಾತ – ತನಿಖೆ ಆರಂಭಿಸಿದ ಸಿಬಿಐ
ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಯುನೈಟೆಡ್ ಕುಕಿ ಲಿಬರೇಶನ್ ಫ್ರಂಟ್ (UKLF) ದಂಗೆಕೋರರು ಮಣಿಪುರದ ಕಕ್ಚಿಂಗ್ ಜಿಲ್ಲೆಯ ಸುಗ್ನು ಎಂಬಲ್ಲಿ ತಂಗಿದ್ದರು. ಶನಿವಾರ ಮಧ್ಯರಾತ್ರಿ ಸೆರೌನಲ್ಲಿ ಕಾಂಗ್ರೆಸ್ ಶಾಸಕ ರಂಜಿತ್ ಮನೆ ಸೇರಿದಂತೆ 100ಕ್ಕೂ ಹೆಚ್ಚು ಮನೆಗಳನ್ನು ದಂಗೆಕೋರರು ಸುಟ್ಟುಹಾಕಿದ್ದರು. ಈ ಘಟನೆಯ ಬಳಿಕ ದಂಗೆಕೋರರು ತಂಗಿದ್ದ ಶಿಬಿರಕ್ಕೆ ಗ್ರಾಮಸ್ಥರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಇದನ್ನೂ ಓದಿ: ಸತ್ತಿದ್ದಾನೆಂದು ಹೆಣಗಳ ರಾಶಿಯಲ್ಲಿ ಇಟ್ಟಿದ್ದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ!