Tag: Imphal

  • ಮತ್ತೆ ಮಣಿಪುರದಲ್ಲಿ ಘರ್ಷಣೆ ಕರ್ಫ್ಯೂ ಜಾರಿ – ಇಂಟರ್‌ನೆಟ್ ಬಂದ್

    ಮತ್ತೆ ಮಣಿಪುರದಲ್ಲಿ ಘರ್ಷಣೆ ಕರ್ಫ್ಯೂ ಜಾರಿ – ಇಂಟರ್‌ನೆಟ್ ಬಂದ್

    ಇಂಫಾಲ: ಮೈಟೀಸ್ (Meiteis) ಮತ್ತು ಕುಕಿ ಜನಾಂಗದ ನಡುವೆ ಸೋಮವಾರ ನಡೆದ ಘರ್ಷಣೆಯಿಂದಾಗಿ ಮಣಿಪುರದ (Manipur) ರಾಜಧಾನಿ ಇಂಫಾಲನಲ್ಲಿ (Imphal) ಮತ್ತೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಲ್ಲದೆ ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಘರ್ಷಣೆ ವ್ಯಾಪಕವಾಗಿ ಹಬ್ಬುವುದನ್ನು ತಡೆಯಲು ಮೇ 26 ರ ವರೆಗೆ ರಾಜ್ಯದಲ್ಲಿ ಇಂಟರ್ನೆಟ್ ಸ್ಥಗಿತ ಗೊಳಿಸಲಾಗಿದೆ. ಅಲ್ಲದೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಕರ್ಫ್ಯೂ ಬಿಗಿಗೊಳಿಸಲಾಗಿದೆ. 2 ರಿಂದ 6 ರ ವರೆಗೆ ಕರ್ಫ್ಯೂ ಸಡಿಲಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: `ಗ್ಯಾರಂಟಿ’ ಕಾಂಗ್ರೆಸ್ ಜನರಿಗೆ ಮೋಸ ಮಾಡಿದೆ, 40% ಕಮಿಷನ್ ಆರೋಪ ತನಿಖೆಯಾಗಲಿ – ಬೊಮ್ಮಾಯಿ

    ಈ ಬಗ್ಗೆ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಪ್ರತಿಕ್ರಿಯಿಸಿ, ಎರಡು ಸಮುದಾಯಗಳ ನಡುವಿನ ಉದ್ವಿಗ್ನತೆಯ ಬಗ್ಗೆ ವರದಿಗಳು ಬರುತ್ತಲೇ ಇದೆ. ಮೈಟೈಸ್ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ (Manipur High Court) ಸೂಚಿಸಿತ್ತು. ಇದಾದ ಬಳಿಕ ಪ್ರತಿಭಟನೆ ವ್ಯಾಪಾಕವಾಗಿ ಹಬ್ಬಿತ್ತು. ಈಗ ಪ್ರಸ್ತುತ ಆ ವಿಚಾರವಾಗಿ ಘರ್ಷಣೆ ನಡೆಯುತ್ತಿಲ್ಲ. ಅಲ್ಲದೆ ಇಂದಿನ ಪ್ರತಿಭಟನೆಯ ಎರಡು ಗುಂಪಿನ ನಡುವೆ ಯಾವುದೇ ದ್ವೇಷವಿಲ್ಲ. ಅರಣ್ಯ ಸಂರಕ್ಷಣೆ ಮತ್ತು ಗಸಗಸೆ ತೆರವುಗೊಳಿಸುವ ಸರ್ಕಾರದ ನೀತಿಗೆ ಪ್ರತಿರೋಧವಾಗಿ ಪ್ರತಿಭಟನೆ ನಡೆದಿದೆ ಎಂದಿದ್ದಾರೆ.

    ಮಣಿಪುರದಲ್ಲಿ ಹಿಂಸಾಚಾರ ಮೇ 3 ರಿಂದ ಪ್ರಾರಂಭವಾಗಿ ಇಂದಿಗೂ ಜೀವಂತವಾಗಿದೆ. ಹಿಂಸಾಚಾರ ಆರಂಭಗೊಂಡ ದಿನವೇ ಸರ್ಕಾರ ಮೊದಲ ಬಾರಿಗೆ ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಿತ್ತು. ಹಿಂಸಾಚಾರದಲ್ಲಿ 70ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು. ಅಲ್ಲದೆ 26,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿತ್ತು. ಇದನ್ನೂ ಓದಿ: ಬಿಬಿಸಿ ಮೇಲೆ 10 ಸಾವಿರ ಕೋಟಿ ರೂ. ಮಾನನಷ್ಟ ಕೇಸ್ – ಹೈಕೋರ್ಟ್‍ನಿಂದ ಸಮನ್ಸ್ ಜಾರಿ

  • ಮಣಿಪುರದಲ್ಲಿ ಉಗ್ರರ ದಾಳಿ – ಓರ್ವ ಪೊಲೀಸ್ ಹುತಾತ್ಮ, ನಾಲ್ವರು ಗಂಭೀರ

    ಮಣಿಪುರದಲ್ಲಿ ಉಗ್ರರ ದಾಳಿ – ಓರ್ವ ಪೊಲೀಸ್ ಹುತಾತ್ಮ, ನಾಲ್ವರು ಗಂಭೀರ

    ಇಂಪಾಲ: ಉಗ್ರರು (Militants) ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಣಿಪುರದಲ್ಲಿ (Manipur) ನಡೆದಿದೆ.

    ಟೊರ್ಬಂಗ್ ಪ್ರದೇಶದಲ್ಲಿ ಇಬ್ಬರು ನಾಗರಿಕರನ್ನು ಉಗ್ರರು ಇತ್ತೀಚೆಗೆ ಅಪಹರಿಸಿದ್ದರು. ಅವರ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದ ವೇಳೆ ಸಮೀಪದ ಪ್ರದೇಶ ಒಂದರಲ್ಲಿ ಉಗ್ರರು ಅಡಗಿರುವ ಮಾಹಿತಿ ಬಂದಿತ್ತು. ಇದರಿಂದಾಗಿ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಫೋನ್ ನಂಬರ್‌ಗಳನ್ನು ಟ್ರ್ಯಾಕ್ ಮಾಡಲಾಗುತ್ತಿದೆ: ಕುಸ್ತಿಪಟು ಬಜರಂಗ್ ಪೂನಿಯಾ ಆರೋಪ

    ಇತ್ತೀಚೆಗೆ ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಹಿಂಸಾಚಾರ ಬುಗಿಲೆದ್ದಿತ್ತು. ಕೆಲವು ಜಿಲ್ಲೆಗಳಲ್ಲಿ ಇನ್ನೂ ಕರ್ಫ್ಯೂ (Curfew) ಜಾರಿಯಲ್ಲಿದೆ. ಇದರ ನಡುವೆಯೇ ಉಗ್ರರು, ಪೊಲೀಸರು ಬೀಡು ಬಿಟ್ಟಿರುವ ಪ್ರದೇಶಗಳಲ್ಲಿ ಚಟುವಟಿಕೆ ಆರಂಭಿಸಿದ್ದಾರೆ. ಉಗ್ರರನ್ನು ಹತ್ತಿಕ್ಕಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇನ್ನೊಂದು ಘಟನೆಯಲ್ಲಿ ದಿಮಾಪುರ್‌ನಿಂದ (Dimapur) ಇಂಫಾಲಗೆ (Imphal) ಅಗತ್ಯ ವಸ್ತುಗಳನ್ನು ಸಾಗಿಸುತ್ತಿದ್ದ 100 ಟ್ರಕ್‍ಗಳನ್ನು ಉತ್ತರ ಕಾಂಗ್‍ಫೋಕ್ಪಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಅಪರಿಚಿತರು ತಡೆದ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶಾಲೆಯ ಗುಮಾಸ್ತನಿಂದ 4ರ ಬಾಲಕಿಗೆ ಕಿರುಕುಳ

  • ಹಿಂಸಾಚಾರ ಸಾವಿನ ಸಂಖ್ಯೆ 54ಕ್ಕೆ ಏರಿಕೆ – ಸಹಜ ಸ್ಥಿತಿಯತ್ತ ಮಣಿಪುರ

    ಹಿಂಸಾಚಾರ ಸಾವಿನ ಸಂಖ್ಯೆ 54ಕ್ಕೆ ಏರಿಕೆ – ಸಹಜ ಸ್ಥಿತಿಯತ್ತ ಮಣಿಪುರ

    ಇಂಪಾಲ: ಮಣಿಪುರದಲ್ಲಿ (Manipur) ಹಿಂಸಾಚಾರದ ಪರಿಣಾಮ ಸಾವಿನ ಸಂಖ್ಯೆ 54ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶನಿವಾರ ಅಂಗಡಿಗಳು ಹಾಗೂ ಮಾರುಕಟ್ಟೆಗಳು ತೆರೆಯಲ್ಪಟ್ಟಿದ್ದು ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ವಾಹನಗಳ ಸಂಚಾರ ಪ್ರಾರಂಭಗೊಂಡಿದೆ. ಆದರೂ ಹೆಚ್ಚಿನ ಸೇನಾ ಪಡೆಗಳು, ಪೊಲೀಸ್ ಪಡೆಗಳು ಭದ್ರತೆಯ ದೃಷ್ಠಿಯಿಂದ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

    54 ಮೃತರಲ್ಲಿ 16 ಶವಗಳನ್ನು ಚುರಾಚಂದ್‍ಪುರ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. 15 ಮೃತದೇಹಗಳನ್ನು ಇಂಪಾಲ (Imphal) ಪೂರ್ವ ಜಿಲ್ಲೆಯ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (Jawaharlal Nehru Institute of Medical Sciences) ಇರಿಸಲಾಗಿದೆ. ಇಂಪಾಲ ಪಶ್ಚಿಮ ಜಿಲ್ಲೆಯ ಲ್ಯಾಂಫೆಲ್‍ನಲ್ಲಿರುವ ರೀಜನಲ್ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ 23 ಮಂದಿ ಶವ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಚುರಾಚಂದ್‍ಪುರ, ಮೋರೆ, ಕಾಕ್ಚಿಂಗ್ ಮತ್ತು ಕಾಂಗ್‍ಪೊಕ್ಪಿ ಜಿಲ್ಲೆಗಳನ್ನು ಸೇನೆಯು ನಿಯಂತ್ರಣಕ್ಕೆ ತಂದಿದ್ದರಿಂದ ಒಟ್ಟು 13,000 ಜನರನ್ನು ರಕ್ಷಿಸಲಾಗಿದೆ. ಅವರನ್ನು ಸುರಕ್ಷಿತ ಆಶ್ರಯಕ್ಕೆ ಸ್ಥಳಾಂತರಿಸಲಾಗಿದೆ. ಗುಂಡೇಟು ತಗುಲಿದ ಅನೇಕ ಜನರು ರಿಮ್ಸ್ ಮತ್ತು ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

    ಹಿಂಸಾಚಾರದ ನಡುವೆ, ಶುಕ್ರವಾರ ರಾತ್ರಿ ಚುರಾಚಂದ್‍ಪುರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಎನ್‍ಕೌಂಟರ್‌ನಲ್ಲಿ ಐವರು ಉಗ್ರರು ಹತರಾಗಿದ್ದಾರೆ. ಇಬ್ಬರು ಇಂಡಿಯಾ ರಿಸರ್ವ್ ಬೆಟಾಲಿಯನ್ ಜವಾನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇಂಪಾಲ ಕಣಿವೆಯಲ್ಲಿ ವಾಸಿಸುವ ಮೇಟಿ (Meitei community) ಮತ್ತು ಬೆಟ್ಟದ ಜಿಲ್ಲೆಗಳ ನಿವಾಸಿಗಳಾದ ನಾಗಾ ಮತ್ತು ಕುಕಿ ಬುಡಕಟ್ಟು ಜನಾಂಗದವರ ನಡುವೆ ಬುಧವಾರದಿಂದ ಘರ್ಷಣೆ ನಡೆಯುತ್ತಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆಯ ಹಾಗೂ ಅಸ್ಸಾಂ ರೈಫಲ್ಸ್‍ನ ಸುಮಾರು 10,000 ಸೈನಿಕರನ್ನು ನಿಯೋಜಿಸಲಾಗಿದೆ. 1,000 ಕೇಂದ್ರೀಯ ಅರೆಸೈನಿಕ ಸಿಬ್ಬಂದಿ ನಿಯೋಜಿಸಲಾಗಿದೆ. ಗಲಭೆಯನ್ನು ನಿಯಂತ್ರಿಸಲು ರೈಲುಗಳನ್ನು ರದ್ದುಗೊಳಿಸಲಾಗಿದೆ ರೈಲ್ವೆ (Railway) ಇಲಾಖೆ ತಿಳಿಸಿದೆ.

    ಮೇಟಿ ಸಮುದಾಯ ಎಸ್‍ಟಿ ಸ್ಥಾನಮಾನದ ಬೇಡಿಕೆಯ ಕುರಿತು ನಾಲ್ಕು ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸನ್ನು ಕಳುಹಿಸುವಂತೆ ಮಣಿಪುರ ಹೈಕೋರ್ಟ್ (High Court) ಕಳೆದ ತಿಂಗಳು ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ನಂತರ ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಬುಡಕಟ್ಟು ಜನಾಂಗದವರು ಮೆರವಣಿಗೆಯನ್ನು ಆಯೋಜಿಸಿದ್ದರು. ಟೊಬರ್ಂಗ್‍ನಲ್ಲಿ ನಡೆದ ಮೆರವಣಿಗೆಯಲ್ಲಿ ಶಸ್ತ್ರಸಜ್ಜಿತ ಜನಸಮೂಹವು ಮೇಟಿ ಸಮುದಾಯದ ಜನರ ಮೇಲೆ ದಾಳಿ ಮಾಡಿದೆ. ಇದು ಕಣಿವೆ ಜಿಲ್ಲೆಗಳಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು. ಇದು ರಾಜ್ಯದಾದ್ಯಂತ ವ್ಯಾಪಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

    ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಉನ್ನತ ಅಧಿಕಾರಿಗಳೊಂದಿಗೆ ಮಣಿಪುರದ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಖರ್ಗೆ ಹತ್ಯೆಗೆ ಬಿಜೆಪಿ ಅಭ್ಯರ್ಥಿಯಿಂದ ಸಂಚು: ಕಾಂಗ್ರೆಸ್‌ ಆಡಿಯೋ ಬಾಂಬ್‌

  • ಮಣಿಪುರದಲ್ಲಿ ಇಂದು ಮೊದಲ ಹಂತದ ಮತದಾನ

    ಮಣಿಪುರದಲ್ಲಿ ಇಂದು ಮೊದಲ ಹಂತದ ಮತದಾನ

    ಇಂಫಾಲ್: ಇಂದು ಬೆಳಗ್ಗೆ 7ರಿಂದ 4ಗಂಟೆಯವರೆಗೆ ಮಣಿಪುರದ 38 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ.

    28 ವಿಧಾನ ಕ್ಷೇತ್ರಗಳಲ್ಲಿ ಕಣಿವೆ ಜಿಲ್ಲೆಗಳಾದ 29 ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಬಿಷ್ಣುಪುರವಾಗಿದ್ದರೆ, ಉಳಿದ 9 ಕ್ಷೇತ್ರಗಳು ಚರ್ಚಂಡ್‍ಪುರ, ಕಾಂಗ್‍ಪೋಕ್ಪಿ ಮತ್ತು ಫರ್ಜಾಲ್ ಪ್ರದೇಶದಲ್ಲಿದೆ. ಮಣಿಪುರದ ವಿಧಾನಸಭೆ ಚುನಾವಣೆಯೂ 2ಹಂತದಲ್ಲಿ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ನಡೆಯುವ ಮತದಾನ ಸಂಜೆ 4ಗಂಟೆಗೆ ಕೊನೆಗೊಳ್ಳಲಿದೆ.

    ಮೊದಲ ಹಂತದಲ್ಲಿ 15 ಮಹಿಳೆಯರು ಸೇರಿದಂತೆ ಒಟ್ಟು 173 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಪ್ರಮುಖ ಅಭ್ಯರ್ಥಿಗಳ ಪೈಕಿ ಮುಖ್ಯಮಂತ್ರಿ ಮತ್ತು ಹೀಂಗಾಂಗ್‍ನ ಬಿಜೆಪಿ ಅಭ್ಯರ್ಥಿ ಎನ್. ಬಿರೇನ್ ಸಿಂಗ್, ಸಚಿವರಾದ ತೊಂಗಮ್ ಬಿಸ್ವಜಿತ್ ಸಿಂಗ್, ಸಿಂಗ್‍ಜಮೇಯ್‍ನಿಂದ ಸ್ಪೀಕರ್ ವೈ. ಖೇಮ್‍ಚಂದ್ ಸಿಂಗ್, ಉಪ ಮುಖ್ಯಮಂತ್ರಿ ಮತ್ತು ಎನ್‍ಪಿಪಿ ಅಭ್ಯರ್ಥಿ ಯುಮ್ನಮ್ ಜಾಯ್‍ಕುಮಾರ್ ಉರಿಪೋಕ್ ಮತ್ತು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಎನ್ ಲೋಕೇಶ್ ಸಿಂಗ್ ನಂಬೋಲ್ ಅವರು ಇಂದು ನಡೆಯುವ ಮೊದಲ ಹಂತದ ಮತದಾನದಲ್ಲಿ ಸ್ಪರ್ಧಿಸಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ- ಇಂದು ಬಿಡದಿಯಿಂದ ಮತ್ತೆ ಆರಂಭ

    ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್‌ ಮಾಡಿ ಮಣಿಪುರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಮತದಾನ ಮಾಡುತ್ತಿರುವ ಎಲ್ಲರಿಗೂ ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಕರೆ ನೀಡಿದರು. ಜೊತೆಗೆ ಮೊದಲಬಾರಿಗೆ ಮತದಾನ ಮಾಡುತ್ತಿರುವವರಿಗೆ ಹಾಗೂ ಯುವಕರು ತಮ್ಮ ಹಕ್ಕನ್ನು ಚಲಾಯಿಸುವಂತೆ ವಿಶೇಷವಾಗಿ ತಿಳಿಸುತ್ತೇನೆ ಎಂದು ಮನವಿ ಮಾಡಿದರು.

    ಈ ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕ ಸ್ಥಾನಗಳನ್ನು ಪಡೆದುಕೊಂಡಿದ್ದರೂ, ಬಹುಮತ ಗಳಿಸಿರಲಿಲ್ಲ. ಆದರೆ ಬಿಜೆಪಿ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ಪ್ರಬಲ ಪಕ್ಷಗಳಾಗಿ ಹೊರಹೊಮ್ಮಿದೆ. ಇದನ್ನೂ ಓದಿ: ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಡಬಲ್ ಮೋಸ ಮಾಡಿದೆ: ರಣದೀಪ್ ಸಿಂಗ್ ಸುರ್ಜೇವಾಲಾ

  • ಚುನಾವಣೆಗೂ ಮುನ್ನ ಭಾರೀ ಅವಘಡ – ಮಗು ಸೇರಿ ಇಬ್ಬರ ಸಾವು, ಐವರಿಗೆ ಗಾಯ

    ಚುನಾವಣೆಗೂ ಮುನ್ನ ಭಾರೀ ಅವಘಡ – ಮಗು ಸೇರಿ ಇಬ್ಬರ ಸಾವು, ಐವರಿಗೆ ಗಾಯ

    ಇಂಫಾಲ್: ಚುನಾವಣೆಗೂ ಮುನ್ನ ಮಣಿಪುರದಲ್ಲಿ ಭಾರೀ ಸ್ಫೋಟ ನಡೆದಿದೆ. ಪರಿಣಾಮ 6 ವರ್ಷದ ಮಗು ಸೇರಿದಂತೆ ಇಬ್ಬರ ಸಾವು, 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಮಣಿಪುರದ ಚುರಾಚಂದಪುರ ಜಿಲ್ಲೆಯಲ್ಲಿ ನಿನ್ನೆ ಸಂಜೆ ಮಹಾ ಸ್ಫೋಟ ನಡೆದಿದೆ. ಈ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವುದು ಪತ್ತೆಯಾಗಿದೆ. ಈ ಸ್ಫೋಟಕ್ಕೆ ಕಾರಣಗಳೇನು ಎಂಬುದನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಇದನ್ನೂ ಓದಿ:  ಕನ್ನಡಿಗರ ರಕ್ಷಣೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ: ಬೊಮ್ಮಾಯಿ

    ಜಿಲ್ಲಾ ಪೊಲೀಸರ ಪ್ರಕಾರ, ಎಸ್‍ಟಿಸಿ-ಬಿಎಸ್‍ಎಫ್ ರಸ್ತೆಯಲ್ಲಿರುವ ಗ್ಯಾಂಗ್‍ಪಿಮುಯಲ್ ಗ್ರಾಮದ ಮನೆಯೊಂದರಲ್ಲಿ ನಿನ್ನೆ ರಾತ್ರಿ 7:30ಕ್ಕೆ ಗ್ಯಾಸ್ ಸ್ಫೋಟವಾಗಿದೆ. ಈ ಸ್ಫೋಟದಲ್ಲಿ ಮಕ್ಕಳು ಸೇರಿದಂತೆ ಏಳು ಮಂದಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಮಾಹಿತಿಯನ್ನು ನೀಡಿದ್ದಾರೆ.

    ಘಟನಾ ಸ್ಥಳದಲ್ಲಿ ಸ್ಫೋಟಗೊಂಡ ಶೆಲ್‍ನ ಭಾಗಗಳು ಮತ್ತು ಕೆಲವು ಸ್ಪ್ಲಿಂಟರ್ ಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸ್ಥಳದ ಸಮೀಪವಿರುವ ಗಡಿ ಭದ್ರತಾ ಪಡೆ ಗುಂಡಿನ ದಾಳಿಗೆ ಹತ್ತಿರವಿರುವ ಕೆಲವರು ಶೆಲ್‍ಗಳನ್ನು ಎತ್ತಿಕೊಂಡಿರುವುದರಿಂದ ಈ ಸ್ಫೋಟ ಸಂಭವಿಸಿರಬಹುದೆಂದು ಪೊಲೀಸರು ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

    ಮೃತರನ್ನು ಮಂಗ್ಮಿನ್ಲಾಲ್(6) ಮತ್ತು ಲಾಂಗಿನ್ಸಾಂಗ್(22) ಎಂದು ಗುರುತಿಸಲಾಗಿದೆ. ಗಾಯಗೊಂಡವರು ಲಿಯಾನ್ಸುಲಾಲ್(18), ಮನ್ಲಾಡಿಯಾ (28), ಸಿಯಾಂಬೋಯ್ (19), ಮುವಾನ್ಬಿಯಾಕ್ಮುವಾನ್(15) ಮತ್ತು ತಂಗ್ಬಿಯಾಕ್ಲುನ್ (34) ಎಂದು ಮಾಹಿತಿಯನ್ನು ಕೊಟ್ಟಿದ್ದಾರೆ. ಗಾಯಾಳುಗಳಲ್ಲಿ ಕೆಲವರಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆಯಿದ್ದು, ಅವರನ್ನು ಇಂಫಾಲ್‍ಗೆ ಕಳುಹಿಸಲಾಗುತ್ತಿದೆ. ಇದನ್ನೂ ಓದಿ: ಶುಭ ಭಾನುವಾರ, ಶುಭ ಗಳಿಗೆಯಲ್ಲಿ ಇಂದು ಪಾದಯಾತ್ರೆಗೆ ಚಾಲನೆ: ಡಿಕೆಶಿ

    ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

  • 1 ನಿಮಿಷದಲ್ಲಿ 105 ಪುಶ್-ಅಪ್ ಮಾಡಿ ದಾಖಲೆ ಸೃಷ್ಟಿಸಿದ ಯುವಕ!

    1 ನಿಮಿಷದಲ್ಲಿ 105 ಪುಶ್-ಅಪ್ ಮಾಡಿ ದಾಖಲೆ ಸೃಷ್ಟಿಸಿದ ಯುವಕ!

    ಇಂಫಾಲ್: ಮಣಿಪುರದ ಅಜ್ಟೆಕ್ಸ್ ಸ್ಪೋಟ್ರ್ಸ್ ನಡೆಸಿದ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ 24 ವರ್ಷದ ಯುವಕ ಒಂದು ನಿಮಿಷದಲ್ಲಿ 105 ಪುಶ್-ಅಪ್ ಮಾಡುವ ಮೂಲಕ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

    ಮಣಿಪುರದ ತೌನೊಜಮ್ ನಿರಂಜೋಯ್ ಸಿಂಗ್, ಎರಡು ಬಾರಿ ಗಿನ್ನೆಸ್ ವಿಶ್ವ ದಾಖಲೆಯನ್ನು ಮಾಡಿದ್ದಾರೆ. ಒಂದು ನಿಮಿಷದಲ್ಲಿ ಅತಿ ಹೆಚ್ಚು ಪುಶ್-ಅಪ್‍ಗಳ ದಾಖಲೆ ಬರೆದಿದ್ದು, ಗಿನ್ನೆಸ್ ಬುಕ್ ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾನೆ. 13 ವರ್ಷಗಳ ನಂತರ ಭಾರತೀಯರೊಬ್ಬರು ಈ ದಾಖಲೆಯನ್ನು ಸಾಧಿಸಿದ್ದಾರೆ. ಈ ಸುದ್ದಿ ಕೇಳಿ ಭಾರತೀಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಡ್ರೆಸ್ಸಿಂಗ್ ಸೆನ್ಸ್ ಬಗ್ಗೆ ಕೆಟ್ಟ ಕಾಮೆಂಟ್ ಮಾಡಿದವ್ರಿಗೆ ಮಲೈಕಾ ಖಡಕ್ ಉತ್ತರ

    ಯಾರಿದು?
    2019 ರಲ್ಲಿ ಸಿಂಗ್ ಒಂದು ನಿಮಿಷದಲ್ಲಿ ಒನ್-ಆರ್ಮ್ ಲೆಗ್ ಪುಶ್-ಅಪ್‍ಗಳ ದಾಖಲೆಯನ್ನು ಮಾಡಿದ್ದರು. ಒಂದು ವರ್ಷದ ನಂತರ, ಮತ್ತೆ ಅವರು ಒಂದು ನಿಮಿಷದಲ್ಲಿ ಒನ್-ಆರ್ಮ್ ಲೆಗ್ ಪುಶ್-ಅಪ್‍ಗಳ ದಾಖಲೆ ಸೃಷ್ಟಿಸಿದ್ದಾರೆ. ಯುಕೆ ಗ್ರಹಾಂ ಮಾಲಿ 2009 ರಿಂದ ಒಂದು ನಿಮಿಷದಲ್ಲಿ ಅತಿ ಹೆಚ್ಚು ಪುಷ್-ಅಪ್‍ಗಳ ದಾಖಲೆಯನ್ನು ಬರೆದಿದ್ದರು. ಆದರೆ ಈಗ ಅವರನ್ನು ಮಣಿಪುರಿ ಯುವಕ ಹಿಂದಿಕ್ಕಿದ್ದಾನೆ.

    ಮಣಿಪುರದ ಯುವಕರನ್ನು ಶ್ಲಾಘಿಸಿ, ಭಾರತದ ಕಾನೂನು ಮತ್ತು ನ್ಯಾಯಾಂಗ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ನಲ್ಲಿ, ಅತಿ ಹೆಚ್ಚು ಪುಷ್-ಅಪ್ ಮಾಡುವ ಮೂಲಕ ಗಿನ್ನೆಸ್ ಬುಕ್ ಆಫ್ ವಲ್ರ್ಡ್ ರೆಕಾಡ್ರ್ಸ್ ದಾಖಲೆ ಮಾಡಿದ ಮಣಿಪುರಿ ಯುವಕ ಟಿ.ನಿರಂಜೋಯ್ ಸಿಂಗ್ ಅಭಿನಂದನೆಗಳು. ಇದು ಅದ್ಭುತವಾಗಿದೆ. ನಿಮ್ಮ ಸಾಧನೆಯ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಅವಧಿ ಮೀರಿ ವಾಸಗೃಹದಿಂದ ಕುಟುಂಬ ಹೊರಹಾಕಿದ್ದ ಪ್ರಕರಣ ಸುಖಾಂತ್ಯ – ಮೃತ ನೌಕರನ ಪುತ್ರನಿಗೆ ಗುತ್ತಿಗೆ ನೌಕರಿ

    ಹಲವಾರು ರಾಜಕಾರಣಿಗಳು, ಫಿಟ್ನೆಸ್ ಉತ್ಸಾಹಿಗಳು ಮತ್ತು ನೆಟ್ಟಿಗರು ಸಿಂಗ್ ದೇಶಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದ್ದಾರೆ.

  • ಗುದನಾಳದಲ್ಲಿ 42 ಲಕ್ಷ ಬೆಲೆ ಬಾಳುವ ಚಿನ್ನದ ಪೇಸ್ಟ್- ವ್ಯಕ್ತಿ ವಶಕ್ಕೆ

    ಗುದನಾಳದಲ್ಲಿ 42 ಲಕ್ಷ ಬೆಲೆ ಬಾಳುವ ಚಿನ್ನದ ಪೇಸ್ಟ್- ವ್ಯಕ್ತಿ ವಶಕ್ಕೆ

    ಇಂಫಾಲ್: ಪ್ರಯಾಣಿಕನೋರ್ವ ಗುದನಾಳದಲ್ಲಿ ಬಚ್ಚಿಟ್ಟುಕೊಂಡಿದ್ದ 900 ಗ್ರಾಂ ತೂಕದ 42 ಲಕ್ಷ ಬೆಲೆ ಬಾಳುವ ಚಿನ್ನದ ಪೇಸ್ಟ್‌ನನ್ನು ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್‍ಎಫ್) ಮಣಿಪುರದ ಇಂಫಾಲ್ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಬಸ್, ಟ್ರಕ್ ನಡುವೆ ಡಿಕ್ಕಿ – 7 ಮಂದಿ ಸಾವು, 14 ಮಂದಿಗೆ ಗಾಯ

    ಆರೋಪಿ ಕೇರಳ ಮೂಲದ ವ್ಯಕ್ತಿಯಾಗಿದ್ದು, ಇಂಫಾಲದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದನು. ಆದರೆ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಎಚ್ಚೆತ್ತ ಸಿಐಎಸ್‍ಎಫ್ ಅಧಿಕಾರಿಗಳು ಪ್ರಯಾಣಿಕನ ಗುದನಾಳದ ಒಳಗೆ ಚಿನ್ನ ಇರುವುದನ್ನು ಗಮನಿಸಿದ್ದಾರೆ. ಬಳಿಕ ಈ ಕುರಿತಂತೆ ವಿಚಾರಣೆ ನಡೆಸಿದಾಗ ಆರೋಪಿ ಸರಿಯಾಗಿ ಉತ್ತರ ನೀಡದೇ ಇದ್ದ ಕಾರಣ ಅನುಮಾನಗೊಂಡ ಅಧಿಕಾರಿಗಳು ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆ ಎಕ್ಸ್-ರೇಯಲ್ಲಿ ಆರೋಪಿ ಗುದನಾಳದಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡಿರುವ ವಿಚಾರ ಬಹಿರಂಗಗೊಂಡಿದೆ.

    ನಂತರ ಆರೋಪಿ ತನ್ನ ಗುದನಾಳದಲ್ಲಿ ಚಿನ್ನದ ಪೇಸ್ಟ್ ಅಡಗಿಸಿಟ್ಟಿಕೊಂಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕೊನೆಗೆ ಭದ್ರತಾ ಪಡೆ ಆರೋಪಿ ಮತ್ತು ಆತನ ಬಳಿ ಇದ್ದ 4 ಪ್ಯಾಕೆಟ್ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಅಧಿಕಾರಿಗಳು ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಹೋಟೆಲಿನಲ್ಲಿ ಐಸ್ ಕ್ರೀಂ ಆಕಾರದ ಇಡ್ಲಿ- ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

    ಆರೋಪಿಯನ್ನು ಮೊಹಮ್ಮದ್ ಶರೀಫ್ ಎಂದು ಗುರುತಿಸಲಾಗಿದ್ದು, ಈತ ಕೇರಳದ ಕೋಯಿಕ್ಕೋಡ್ ಮೂಲದವನಾಗಿದ್ದು, ಸೋಮವಾರ ಮಧ್ಯಾಹ್ನ 2:40ಕ್ಕೆ ಏರ್ ಇಂಡಿಯಾ ವಿಮಾನದ ಮೂಲಕ ಇಂಫಾಲದಿಂದ ದೆಹಲಿಗೆ ಹೋಗಲು ನಿರ್ಧರಿಸಿದ್ದನು ಎಂಬ ಸತ್ಯ ತಿಳಿದುಬಂದಿದೆ.

    .

  • ಕ್ಯಾನ್ಸರ್ ವಿರುದ್ಧ ಡಿಂಕೊ ಸಿಂಗ್ ಹೋರಾಟ- ಬಾಕ್ಸರ್ ಬೆಂಬಲಕ್ಕೆ ನಿಂತ ಸ್ಪೈಸ್ ಜೆಟ್

    ಕ್ಯಾನ್ಸರ್ ವಿರುದ್ಧ ಡಿಂಕೊ ಸಿಂಗ್ ಹೋರಾಟ- ಬಾಕ್ಸರ್ ಬೆಂಬಲಕ್ಕೆ ನಿಂತ ಸ್ಪೈಸ್ ಜೆಟ್

    – ಏರ್ ಅಂಬುಲೆನ್ಸ್ ಮೂಲಕ ದೆಹಲಿಗೆ ಶಿಫ್ಟ್‌

    ಇಂಫಾಲ್: ಪಿತ್ತಜನಕಾಂಗದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಭಾರತೀಯ ಬಾಕ್ಸರ್ ಡಿಂಕೊ ಸಿಂಗ್ ಅವರನ್ನು ಸ್ಪೈಸ್‍ ಜೆಟ್ ಏರ್ ಅಂಬುಲೆಂನ್ಸ್ ಮೂಲಕ ದೆಹಲಿಯ ಆಸ್ಪತ್ರೆಗೆ ಶಿಫ್ಟ್ ಮಾಡಲು ಸಿದ್ಧತೆ ನಡೆದಿದೆ.

    ಡಿಂಕೊ ಸಿಂಗ್ ಭಾರತದ ಪರ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಮಣಿಪುರದ ರಾಜಧಾನಿ ಇಂಫಾಲ್‍ನಲ್ಲಿ ವಾಸಿಸುತ್ತಿರುವ 41 ವರ್ಷದ ಡಿಂಕೊ ಅವರಿಗೆ ಲಾಕ್‍ಡೌನ್‍ನಿಂದಾಗಿ ವಿಕಿರಣ ಚಿಕಿತ್ಸೆ ಸಿಗುತ್ತಿಲ್ಲ. ಚಿಕಿತ್ಸೆಗಾಗಿ ಅವರನ್ನು ಸ್ಪೈಸ್ ಜೆಟ್‍ನ ಏರ್ ಅಂಬುಲೆನ್ಸ್ ಮೂಲಕ ಇಂಫಾಲ್‍ನಿಂದ ದೆಹಲಿಗೆ ಕರೆತರಲು ಸಿದ್ಧತೆ ನಡೆದಿದೆ.

    ಬಾಕ್ಸರ್ ಡಿಂಕೊ ಸಿಂಗ್ ಅವರಿಗೆ ಸ್ಪೈಸ್ ಜೆಟ್ ಸಂಸ್ಥೆಯು ಉಚಿತವಾಗಿ ಏರ್ ಅಂಬುಲೆನ್ಸ್ ಸೇವೆ ನೀಡಲು ಮುಂದೆ ಬಂದಿದೆ. ಈ ನಿರ್ಧಾರವನ್ನು ಸ್ಪೈಸ್‍ಜೆಟ್‍ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಯ್ ಸಿಂಗ್ ಪ್ರಕಟಿಸಿದ್ದಾರೆ. ಅಜಯ್ ಸಿಂಗ್ ಅವರು ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾದ (ಬಿಎಫ್‍ಐ) ಅಧ್ಯಕ್ಷರೂ ಆಗಿದ್ದಾರೆ.

    ಹಿರಿಯ ಬಾಕ್ಸರ್ ಗಳಾದ ವಿಜೇಂದರ್ ಸಿಂಗ್ ಮತ್ತು ಭಾರತದ ಮನೋಜ್ ಕುಮಾರ್ ಕೂಡ ಅರ್ಜುನ್ ಮತ್ತು ಪದ್ಮಾ ಪ್ರಶಸ್ತಿ ಪುರಸ್ಕೃತ ಡಿಂಕೊ ಸಿಂಗ್ ಅವರಿಗೆ ಸಹಾಯ ಮಾಡಲು ಹಣವನ್ನು ಸಂಗ್ರಹಿಸುತ್ತಿದ್ದಾರೆ. ”ನಾವು ವಾಟ್ಸಾಪ್ ಗ್ರೂಪ್ ‘ಹಮ್ ಮೇನ್ ಹೈ ದಮ್’ ಮೂಲಕ ಹಣವನ್ನು ಸಂಗ್ರಹಿಸುತ್ತಿದ್ದೇವೆ. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ರೂಪಾಯಿ ಸಂಗ್ರಹಿಸಿದ್ದೇವೆ. ಅದು ನೇರವಾಗಿ ಡಿಂಕೊ ಅವರ ಖಾತೆಗೆ ಹೋಗುತ್ತದೆ” ಎಂದು ವಿಜೇಂದರ್ ಹೇಳಿದ್ದಾರೆ.

    ಡಿಂಕೊ ಸಿಂಗ್ ಅವರನ್ನು ಏಪ್ರಿಲ್ 25ರಂದು ದೆಹಲಿಗೆ ಕರೆತರಲಾಗುವುದು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅಜಯ್ ಸಿಂಗ್, ”ಲಾಕ್‍ಡೌನ್‍ನಿಂದಾಗಿ ಡಿಂಕೊ ಸಿಂಗ್ ಅವರ ಚಿಕಿತ್ಸೆ ಮಧ್ಯದಲ್ಲಿ ನಿಂತುಹೋಯಿತು. ಇದು ನಿಜವಾಗಿಯೂ ದುರದೃಷ್ಟಕರ. ನಮ್ಮ ದೇಶದ ವೀರನಿಗೆ ಏರ್ ಅಂಬುಲೆನ್ಸ್ ಸೇವೆಯನ್ನು ಒದಗಿಸುವುದು ಮತ್ತು ಅವರನ್ನು ದೆಹಲಿಗೆ ಕರೆತರುವುದು ಸ್ಪೈಸ್‍ಜೆಟ್‍ಗೆ ಒಂದು ಭಾಗ್ಯವಾಗಿದೆ. ಭಾರತೀಯ ಬಾಕ್ಸರ್ ಡಿಂಕೊ ಅನೇಕ ದೊಡ್ಡಮಟ್ಟದ ಪಂದ್ಯಗಳನ್ನು ಗೆದ್ದಿದ್ದಾರೆ. ಈ ಯುದ್ಧದಲ್ಲಿಯೂ ಅವರು ಗೆಲ್ಲಬೇಕು ಎಂಬುದು ನಮ್ಮ ಪ್ರಾರ್ಥನೆ” ಎಂದು ತಿಳಿಸಿದ್ದಾರೆ.

    ಈ ಹಿಂದೆ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಮಣಿಪುರ ಸರ್ಕಾರದೊಂದಿಗೆ ಮಾತನಾಡಿ ಡಿಂಕೊ ಸಿಂಗ್ ಅವರ ಚಿಕಿತ್ಸೆಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಿದ್ದರು. 1998ರಲ್ಲಿ ಬ್ಯಾಂಕಾಕ್‍ನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಬಾಂಟಮ್‍ವೈಟ್ ಬಾಕ್ಸರ್ ಡಿಂಕೊ ಸಿಂಗ್ ಚಿನ್ನದ ಪದಕ ಗೆದ್ದರು.