ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ನಟಿಸಿರುವ ಬಾಲಿವುಡ್ ನಟಿ ಜಯಪ್ರದಾ (Jayaprada) ಅವರಿಗೆ ಚೆನ್ನೈನ (Chennai) ಎಗ್ಮೋರ್ ನ್ಯಾಯಾಲಯವು ಆರು ತಿಂಗಳ ಕಾಲ ಜೈಲು ಶಿಕ್ಷೆ ಪ್ರಕಟಿಸಿದೆ. ನಟಿಯ ವಿರುದ್ಧ ಸರಕಾರದ ಲೇಬರ್ ಇನ್ಶುರೆನ್ಸ್ ಕಾರ್ಪೋರೇಷನ್ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ಈ ಪ್ರಕರಣದಲ್ಲಿ ಜಯಪ್ರದಾಗೆ ಸೋಲಾಗಿದೆ.

ಭಾರತೀಯ ಸಿನಿಮಾ ರಂಗದಲ್ಲಿ ಖ್ಯಾತ ನಟಿಯಾಗಿ ಗುರುತಿಸಿಕೊಂಡಿರುವ ಜಯಪ್ರದಾ, ಸಿನಿಮಾ ಪ್ರದರ್ಶಕಿಯೂ ಹೌದು. ಚೆನ್ನೈನಲ್ಲೇ ಇವರ ಹೆಸರಿನಲ್ಲಿ ಎರಡು ಚಿತ್ರಮಂದಿರಗಳಿವೆ. ಈ ಎರಡು ಚಿತ್ರ ಮಂದಿರಗಳಲ್ಲಿ ಅನೇಕ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಕಾರ್ಮಿಕರ ಇ.ಎಸ್.ಐ ಹಣವನ್ನು ಕಡಿತ ಮಾಡಿಕೊಂಡು ಕಾರ್ಮಿಕ ಇಲಾಖೆಗೆ ಅದನ್ನು ಪಾವತಿಸಿಲ್ಲ ಎನ್ನುವ ಕಾರಣಕ್ಕಾಗಿ ದೂರು ನೀಡಲಾಗಿತ್ತು.
ಈಗಾಗಲೇ ಅವರು ಮಾಲೀಕರಾಗಿರುವ ಆ ಎರಡೂ ಚಿತ್ರಮಂದಿರಗಳ ಮೇಲೆ ಕೇಸ್ ದಾಖಲಾಗಿದೆ. ಆಸ್ತಿ ತೆರಿಗೆಯನ್ನು ಕಟ್ಟದೇ ಇರುವ ಕಾರಣಕ್ಕಾಗಿ ಜಪ್ತಿ ಕೂಡ ಮಾಡಲಾಗಿದೆ. ಆದರೂ ಇ.ಎಸ್.ಐ ಕಟ್ ಮಾಡಿಯೂ ಕಾರ್ಮಿಕ ಇಲಾಖೆಗೆ ಅವರು ಪಾವತಿ ಮಾಡಿರಲಿಲ್ಲ ಎನ್ನುವುದು ಅಧಿಕಾರಿಗಳ ಆರೋಪವಾಗಿತ್ತು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

















ಕೃಷ್ಣನ್ ತಾಯಿ ಆಕೆಯನ್ನು ಗದರುತ್ತಾನೆ. ಮನೆಗೆಲಸದವಳ ಕೆನ್ನೆಗೆ ಎರಡು-ಮೂರು ಬಾರಿ ಹೊಡೆಯುತ್ತಾನೆ. ಆಕೆ ಕೆಳಗೆ ಬೀಳುತ್ತಾಳೆ. ಮನೆಯವರೆಲ್ಲ ತಡೆದರೂ ಕೃಷ್ಣನ್ ಮನೆಗೆಲಸದವಳ ಮೇಲೆ ಹಲ್ಲೆ ಮಾಡಿದ್ದಾನೆ. ಪರಿಣಾಮ ಆಕೆ ಆಸ್ಪತ್ರೆ ಸೇರಿದ್ದು, ಗಂಭೀರ ಗಾಯವಾಗಿದೆ. ಪರಿಣಾಮ ಆಕೆ ಪೊಲೀಸರಿಗೆ ದೂರನ್ನು ಕೊಟ್ಟಿದ್ದು, ಕೃಷ್ಣನ್ ನನ್ನು ಬಂಧಿಸಿ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.






