Tag: Imtiaz Jaleel

  • ಪ್ರವಾದಿಯನ್ನು ಅವಹೇಳನಗೈದ ನೂಪುರ್ ಶರ್ಮಾರನ್ನು ಗಲ್ಲಿಗೇರಿಸಿ: ಎಐಎಂಐಎಂ

    ಪ್ರವಾದಿಯನ್ನು ಅವಹೇಳನಗೈದ ನೂಪುರ್ ಶರ್ಮಾರನ್ನು ಗಲ್ಲಿಗೇರಿಸಿ: ಎಐಎಂಐಎಂ

    ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನ ಮಾಡಿರುವ ನೂಪುರ್ ಶರ್ಮಾ ಅವರನ್ನು ಗಲ್ಲಿಗೇರಿಸಬೇಕು ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ಸಂಸದ, ಮಾಜಿ ಪತ್ರಕರ್ತ ಇಮ್ತಿಯಾಜ್ ಜಲೀಲ್ ಹೇಳಿಕೆ ನೀಡಿದ್ದಾರೆ.

    ನೂಪುರ್ ಶರ್ಮಾ ಅವರನ್ನು ಸುಮ್ಮನೆ ಹೋಗಲು ಬಿಟ್ಟರೆ ನಾವು ಪ್ರತಿಭಟಿಸುವುದು ಮುಂದುವರಿಸುತ್ತಲೇ ಇರುತ್ತೇವೆ. ಯಾವುದೇ ಧರ್ಮ ಅಥವಾ ಪಂಥದ ಬಗ್ಗೆ ಇಂತಹ ಟೀಕೆಗಳನ್ನು ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಆಗ್ರಹಿಸಿದರು. ಇದನ್ನೂ ಓದಿ: ಕಲ್ಲು ತೂರಿದವರಿಗೆ ಬುಲ್ಡೋಜರ್‌ ಶಾಕ್‌ ಕೊಟ್ಟ ಯೋಗಿ – ಅಕ್ರಮ ಕಟ್ಟಡಗಳು ಧ್ವಂಸ

    ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್‌ಗೆ ಅವಹೇಳನ ಮಾಡಿರುವ ಹಿನ್ನೆಲೆಯಲ್ಲಿ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಜನರನ್ನು ಪ್ರಚೋದಿದುವ ಸಂದೇಶಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ಈ ಕಾರಣಕ್ಕೆ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಗುರುವಾರ ಸಂಸತ್ ಸ್ಟ್ರೀಟ್ ಪೊಲೀಸ್ ಠಾಣೆ ಹೊರಭಾಗ ಪ್ರತಿಭಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 30 ಜನರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ – ಇಂಟರ್‌ನೆಟ್ ಸ್ಥಗಿತ, 70 ಮಂದಿ ಅರೆಸ್ಟ್

  • ಎಐಎಂಐಎಂ ಜೊತೆ ಮೈತ್ರಿ ಮಾಡಿಕೊಳ್ಳಲ್ಲ: ಶರದ್ ಪವಾರ್

    ಎಐಎಂಐಎಂ ಜೊತೆ ಮೈತ್ರಿ ಮಾಡಿಕೊಳ್ಳಲ್ಲ: ಶರದ್ ಪವಾರ್

    ಮುಂಬೈ: ಎಐಎಂಐಎಂ ಜೊತೆ ತಮ್ಮ ಪಕ್ಷವು ಮೈತ್ರಿ ಮಾಡಿಕೊಳ್ಳಲು ಒಲವು ಹೊಂದಿಲ್ಲ ಎಂದು ಎನ್‍ಸಿಪಿ ಅಧ್ಯಕ್ಷ ಶರದ್ ಪವಾರ್ ಪುಣಾದಲ್ಲಿ ಸ್ಪಷ್ಟ ಪಡಿಸಿದರು.

    ಎಐಎಂಐಎಂ ಸಂಸದ ಇಮ್ತಿಯಾಜ್ ಜಲೀಲ್ ಅವರು ಶಿವಸೇನೆ ನೇತೃತ್ವದ ತ್ರಿಪಕ್ಷೀಯ ಮಹಾ ವಿಕಾಸ್ ಅಘಾಡಿ(ಎಂವಿಎ) ಜೊತೆ ಮೈತ್ರಿ ಮಾಡಿಕೊಳ್ಳಲು ಪ್ರಸ್ತಾಪಿಸಿತ್ತು. ಈ ಬಗ್ಗೆ ಮಾತನಾಡಿ, ಮೈತ್ರಿಯ ಬಗ್ಗೆ ಇಮ್ತಿಯಾಜ್ ಜಲೀಲ್ ಅವರ ಸಲಹೆಯನ್ನು ಶಿವಸೇನೆ ಈಗಾಗಲೇ ತಿರಸ್ಕರಿಸಿದೆ ಎಂದು ಹೇಳಿದರು.

    ಎಐಎಂಐಎಂ ಮೈತ್ರಿ ಬಗ್ಗೆ ಮಾತನಾಡಬಹುದು. ಆದರೆ ಅವರು ಮಾತನಾಡುತ್ತಿರುವ ಪಕ್ಷಗಳು ಅಂತಹ ಪ್ರಸ್ತಾಪವನ್ನು ಮೊದಲು ಒಪ್ಪಿಕೊಳ್ಳಬೇಕು. ಎಐಎಂಐಎಂ ರಾಜ್ಯ ಮಟ್ಟದಲ್ಲಿ ಮೈತ್ರಿ ಮಾಡಿಕೊಳ್ಳಲೂ ಪ್ರಸ್ತಾಪಿಸಿದ್ದರೂ, ಅಂತಹ ಮೈತ್ರಿ ರಚನೆಗೆ ರಾಜಕೀಯ ಪಕ್ಷಗಳ ರಾಷ್ಟ್ರೀಯ ಸಮಿತಿಯು ಅನುಮೋದನೆ ನೀಡಬೇಕು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸೇನೆಗೆ ತಯಾರಿ – ಕೆಲಸ ಮುಗಿಸಿ ಪ್ರತಿದಿನ 10 ಕಿಮೀ ಓಡಿಕೊಂಡೇ ಮನೆಗೆ ಹೋಗ್ತಾನೆ!

    ಎನ್‍ಸಿಪಿಯು ಶಿವಸೇನೆ ಮತ್ತು ಕಾಂಗ್ರೆಸ್‍ನೊಂದಿಗೆ ಆಡಳಿತಾರೂಢ ಒಕ್ಕೂಟದ ಭಾಗವಾಗಿರುವುದರಿಂದ, ಮೈತ್ರಿಯನ್ನು ವಿಸ್ತರಿಸುವ ಬಗ್ಗೆ ಅದರ ಅಸ್ತಿತ್ವದಲ್ಲಿರುವ ಪಾಲುದಾರರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದರು. ಇದನ್ನೂ ಓದಿ: ಪತ್ನಿ ಮಟನ್ ಕರಿ ಮಾಡ್ಲಿಲ್ಲ ಅಂತ ಪೊಲೀಸರಿಗೆ ಟಾರ್ಚರ್ ಕೊಟ್ಟ ವ್ಯಕ್ತಿ

    ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ತಡೆಯಲು ಶಿವಸೇನೆ ನೇತೃತ್ವದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ(ಎಂವಿಎ) ಸಮ್ಮಿಶ್ರದೊಂದಿಗೆ ತಮ್ಮ ಪಕ್ಷವು ಮೈತ್ರಿಮಾಡಿಕೊಳ್ಳಬಹುದು ಎಂದು ಎಐಎಂಐಎಂ ಸಂಸದ ಇಮ್ತಿಯಾಜ್ ಜಲೀಲ್ ಹೇಳಿದ್ದರು.

  • ಕಾಂಗ್ರೆಸ್‍ಗೆ ಮುಸ್ಲಿಮರ ಮತಗಳು ಬೇಕಿದೆ – ನಾವು ಮೈತ್ರಿಗೆ ಸಿದ್ಧ ಎಂದ ಜಲೀಲ್

    ಕಾಂಗ್ರೆಸ್‍ಗೆ ಮುಸ್ಲಿಮರ ಮತಗಳು ಬೇಕಿದೆ – ನಾವು ಮೈತ್ರಿಗೆ ಸಿದ್ಧ ಎಂದ ಜಲೀಲ್

    ಔರಂಗಬಾದ್: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಎಐಎಂಐಎಂ ಸಿದ್ಧವಾಗಿದೆ. ಆದರೆ ಅವರು ನಮ್ಮೊಂದಿಗೆ ಕೈಜೋಡಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ ಎಂದು ಎಐಎಂಐಎಂ (ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್) ಪಕ್ಷದ ಸಂಸದ ಇಮ್ತಿಯಾಜ್ ಜಲೀಲ್ ಹೇಳಿದ್ದಾರೆ.

    ರಾಜ್ಯ ಸಚಿವ ಮತ್ತು ಎನ್‍ಸಿಪಿ ನಾಯಕ ರಾಜೇಶ್ ಟೋಪೆ ಅವರ ನಿವಾಸಕ್ಕೆ ಭೇಟಿ ನೀಡಿದ ಜಲೀಲ್ ಎಐಎಂಐಎಂ ಸಂಘಟನೆಯ ಬಗ್ಗೆ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮತ್ತು ಎನ್‍ಸಿಪಿಯೊಂದಿಗೆ ಎಐಎಂಐಎಂ ಮೈತ್ರಿ ಮಾಡಿಕೊಳ್ಳಲು ಸಿದ್ಧವಾಗಿದೆ ಎಂದಿದ್ದಾರೆ.

    ಕಾಂಗ್ರೆಸ್ ಪಕ್ಷಗಳಿಗೆ ಮುಸ್ಲಿಮರ ಮತಗಳು ಬೇಕಿದೆ. ಕಾಂಗ್ರೆಸ್ ಸಹ ತಾನು ಜಾತ್ಯಾತೀತರು ಎನ್ನುತ್ತದೆ. ಹಾಗಾಗಿ ನಾವೂ ಅವರೊಂದಿಗೆ ಕೈಜೋಡಿಸಲು ಸಿದ್ಧರಿದ್ದೇವೆ. ಈಗಾಗಲೇ ಉತ್ತರ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್‍ಗೆ ಗರಿಷ್ಠ ಹಾನಿಯನ್ನುಂಟು ಮಾಡಿದೆ. ಕಾಂಗ್ರೆಸ್ ಒಂದೇ ಒಂದು ಮತವನ್ನು ಗಳಿಸುವ ಮೂಲಕ ತೀವ್ರ ಮುಖಭಂಗ ಎದುರಿಸುವಂತಾಗಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ನಾವು ಬಿಜೆಪಿ ಸೋಲಿಸಲು ಸಿದ್ಧರಿದ್ದೇವೆ ಎಂದು ಜಲೀಲ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಂದೂ-ಮುಸ್ಲಿಂ ಒಟ್ಟಿಗೆ ಇರಲು ಸಾಧ್ಯವಿಲ್ಲ ಅಂತ ಅಂಬೇಡ್ಕರ್ ಹೇಳಿದ್ದರು: ಪ್ರತಾಪ್ ಸಿಂಹ

    ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದೊಂದಿಗೆ (ಚುನಾವಣೆ) ಎಐಎಂಐಎಂ ಮಾತನಾಡಿದೆ, ಆದರೆ ಅವರಿಗೆ ಮುಸ್ಲಿಮರ ಮತಗಳು ಬೇಕೇ ಹೊರತು ನಮ್ಮ ಪಕ್ಷದ ಮುಖ್ಯಸ್ಥರು ಬೇಕಿಲ್ಲ ಎಂದಿದ್ದಾರೆ.

    2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಎಐಎಂಐಎಂ ಎರಡು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈಗ ಮೈತ್ರಿ ಮಾಡಿಕೊಂಡರೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿಯನ್ನು ಮಣಿಸಬಹುದು. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‍ಗೆ ಮುಸ್ಲಿಮರ ಮತಗಳು ಅವಶ್ಯವಿದ್ದು, ನಾವು ಒಟ್ಟಾಗಿ ಚುನಾವಣೆ ಎದುರಿಸೋಣ ಎಂದು ಪ್ರಸ್ತಾಪಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ಆಪ್ ಸರ್ಕಾರ ಸಂಪುಟ ರಚನೆ – 10 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

    ಇಲ್ಲಿ ಯಾವುದೇ ಧರ್ಮವೂ ಕೆಟ್ಟದ್ದಲ್ಲ. ಅದನ್ನು ಅನುರಸರಿಸುವ ಜನರು ಒಳ್ಳೆಯವರು ಅಥವಾ ಕೆಟ್ಟವರು ಆಗಿರಬಹುದು ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಜಲೀಲ್ ಸಲಹೆ ನೀಡಿದ್ದಾರೆ.