Tag: Incentives

  • ಕೋವಿಡ್ ಸಮಯದಲ್ಲಿ ವೈದ್ಯರ ಸೇವೆಗೆ ಸಿಗದ ಪ್ರೋತ್ಸಾಹ ಧನ- ಕ್ರಿಮ್ಸ್ ವೈದ್ಯರ ಪ್ರತಿಭಟನೆ

    ಕೋವಿಡ್ ಸಮಯದಲ್ಲಿ ವೈದ್ಯರ ಸೇವೆಗೆ ಸಿಗದ ಪ್ರೋತ್ಸಾಹ ಧನ- ಕ್ರಿಮ್ಸ್ ವೈದ್ಯರ ಪ್ರತಿಭಟನೆ

    ಕಾರವಾರ: ಕೋವಿಡ್ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ ವೈದ್ಯರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ಸರ್ಕಾರ ವಿಫಲವಾಗಿರುವುದನ್ನು ಖಂಡಿಸಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ವೈದ್ಯರು ಸಾಂಕೇತಿಕ ಪ್ರತಿಭಟನೆ ನಡೆಸಿದರು.

    ನಗರದ ಕಾರವಾರ ಮೆಡಿಕಲ್ ಕಾಲೇಜಿನ ಎದುರು ಜಮಾಯಿಸಿದ ಕ್ರಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಸ್ಥಾನಿಕ ವೈದ್ಯರು, ಸರ್ಕಾರದ ವಿರುದ್ಧ ಘೋಷಣಾ ಫಲಕಗಳನದನ ಹಿಡಿದು ಶಾಂತಿಯುತವಾಗಿ ಪ್ರತಿಭಟಿಸಿದರು. ಇದನ್ನೂ ಓದಿ: ರಾಯಚೂರಿನಲ್ಲಿ ಸಚಿವ ಪ್ರಭು ಚವ್ಹಾಣ್‍ಗೆ ಘೇರಾವ್ – ಹೋರಾಟಗಾರರ ಬಂಧನ

    ಕೊರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ರಾಜ್ಯಾದ್ಯಂತ ವೈದ್ಯರು ಸೇವೆ ಸಲ್ಲಿಸಿದ್ದಾರೆ. ಆದರೆ ವೈದ್ಯರಿಗೆ ನೀಡಬೇಕಾದ ಪ್ರೋತ್ಸಾಹ ಧನವನ್ನು ನೀಡುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದ್ದು, ಇದರಿಂದಾಗಿ ವೈದ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಈ ನಿಟ್ಟಿನಲ್ಲಿ ಆದಷ್ಟು ಶೀಘ್ರದಲ್ಲಿ ಸರ್ಕಾರ ಪ್ರೋತ್ಸಾಹ ಧನ ನೀಡಬೇಕು ಎಂದು ವೈದ್ಯರು ಒತ್ತಾಯಿಸಿದ್ದರೆ.

  • ರಾಮನಗರದಲ್ಲಿ ಕೊರೊನಾ ವಾರಿಯರ್ಸ್‍ಗೆ 5 ಸಾವಿರ ರೂ. ಪ್ರೋತ್ಸಾಹ ಧನ

    ರಾಮನಗರದಲ್ಲಿ ಕೊರೊನಾ ವಾರಿಯರ್ಸ್‍ಗೆ 5 ಸಾವಿರ ರೂ. ಪ್ರೋತ್ಸಾಹ ಧನ

    ರಾಮನಗರ: ಕೊರೊನಾ ವಾರಿಯರ್ಸ್ ಗೆ ಇಂದು ಸನ್ಮಾನ ಮಾಡಲಾಯ್ತು. ಹಾಲು ಉತ್ಪಾದಕರ ಸಹಕಾರ ಸಂಘಗಳ ವತಿಯಿಂದ ರಾಮನಗರ ತಾಲೂಕಿನ ಕೊರೊನಾ ವಾರಿಯರ್ಸ್ ಗೆ ಶಾಲು ಹಾರ ಹಾಕಿ ಸನ್ಮಾನಿಸಿ ತಲಾ 5 ಸಾವಿರ ರೂಪಾಯಿಗಳ ನಗದು ನೀಡುವಂತಕ ಕೆಲಸ ಮಾಡಲಾಯ್ತು.

    ಕೆಎಂಎಫ್ ಮಾಜಿ ಅಧ್ಯಕ್ಷ ಪಿ.ನಾಗರಾಜ್ ನೇತೃತ್ವದಲ್ಲಿ ಮೊದಲ ಹಂತದಲ್ಲಿ ಮಾಯಗಾನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸನ್ಮಾನ ನಡೆಸಲಾಯಿತು. ಸನ್ಮಾನದ ಮೂಲಕ ಎಲ್ಲ ಕೊರೊನಾ ವಾರಿಯರ್ಸ್ ಗೆ ಧನ್ಯವಾದ ಹೇಳಲಾಯ್ತು. ಸಾಂಕೇತವಾಗಿ ಮಾಯಾಗನಹಳ್ಳಿಯಲ್ಲಿನ ತಮ್ಮ ನಿವಾಸದ ಬಳಿಯಲ್ಲಿ ಇಬ್ಬರು ದಾದಿಯರು, 7 ಮಂದಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಮಾಡಿ, ಥ್ಯಾಂಕ್ಯೂ ಎನ್ನುವ ಮೂಲಕ ತಲಾ 5 ಸಾವಿರ ರೂಪಾಯಿಗಳ ಚೆಕ್ ವಿತರಣೆ ಮಾಡಿದರು.

    ರಾಮನಗರ ತಾಲೂಕಿನಲ್ಲಿ 200ಕ್ಕೂ ಹೆಚ್ಚು ಮಂದಿ ಕೊರೊನಾ ವಾರಿಯರ್ಸ್ ಸೇವೆ ಸಲ್ಲಿಸುತ್ತಿದ್ದಾರೆ. ಇವರುಗಳು ಮನೆ-ಮಠ ಬಿಟ್ಟು ನಮಗಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾವಿನೊಂದಿಗೆ ಸೆಣೆಸಾಟ ನಡೆಸುತ್ತಿರುವ ಇಂತಹ ರಿಯಲ್ ಹೀರೋಗಳಿಗೆ ಸ್ಥೈರ್ಯ ತುಂಬುವುದರೊಂದಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ಸಾರುವ ಕೆಲಸಗಳು ಹಾಲಿನ ಡೈರಿಗಳ ನಡೆಯುತ್ತಿರುವುದು ವಿಶೇಷವಾಗಿದೆ.

    ತಾಲೂಕಿನಲ್ಲಿರುವ ದಾದಿಯರು, ಆಶಾ ಕಾರ್ಯಕರ್ತೆರುಗಳಿಗೆ ಹಾರ ಹಾಕಿ, ಶಾಲು ಹೊದಿಸಿ, 5 ಸಾವಿರ ರೂ.ಗಳ ಚೆಕ್ ನೀಡುವ ಮೂಲಕ ಯು ಸೇವ್ಡ್ ಮೈ ಲೈಫ್ ಥಾಂಕ್ಯೂ ಎನ್ನುವ ಕೆಲಸ ನಡೆಯಲಿದೆ. ಇಂತಹ ಕಾರ್ಯಕ್ರಮಗಳಿಂದಾಗಿ ಹಗಲಿರುಳು ಸೇವೆ ಸಲ್ಲಿಸುತ್ತರುವ ವಾರಿಯರ್ಸ್ ಗಳಿಗೆ ಇನ್ನಷ್ಟು ಪ್ರೋತ್ಸಾಹ ತುಂಬಬಹುದು ಎನ್ನುತ್ತಾರೆ ಕೆಎಂಎಫ್ ಮಾಜಿ ಅಧ್ಯಕ್ಷ ಪಿ.ನಾಗರಾಜ್.

  • ನಾಳೆ ಖಾತೆ ಹಂಚಿಕೆ ಫಿಕ್ಸ್- ಖಚಿತಪಡಿಸಿದ ಸಿಎಂ

    ನಾಳೆ ಖಾತೆ ಹಂಚಿಕೆ ಫಿಕ್ಸ್- ಖಚಿತಪಡಿಸಿದ ಸಿಎಂ

    – ಪಿ.ವಿ.ಸಿಂಧುಗೆ 5 ಲಕ್ಷ ರೂ. ಪ್ರೋತ್ಸಾಹ ಧನ

    ನವದೆಹಲಿ: ಕೊನೆಗೂ ಖಾತೆ ಹಂಚಿಕೆಗೆ ಕಾಲ ಕೂಡಿ ಬಂದಿದ್ದು, ನಾಳೆ ಬೆಳಗ್ಗೆ 9 ಗಂಟೆಗೆ ಖಾತೆಗಳ ಪಟ್ಟಿ ರವಾನೆಯಾಗಲಿದೆ. ನಾಳೆಯೇ ಖಾತೆ ಹಂಚಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

    ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾತೆ ಹಂಚಿಕೆ ಬಳಿಕ ನಾಳೆ ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ. ನೆರೆ ಪರಿಸ್ಥಿತಿ ಬಗ್ಗೆ ವರದಿ ಕೇಳಿದ್ದೆ, ನಾಳೆ ವರದಿ ಪಡೆದು ಮುಂದಿನ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಇತ್ತೀಚೆಗೆ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಲಿದೆ. ಹೀಗಾಗಿ ರಾಜ್ಯಕ್ಕೆ ಮೊದಲು ಅಧ್ಯಯನ ತಂಡ ಕಳುಹಿಸಲಾಗಿದೆ. ತಂಡ ಈಗಾಗಲೇ ಅಧ್ಯಯನ ಪ್ರಾರಂಭಿಸಿದ್ದು, ವರದಿ ನೀಡಿದ ಬಳಿಕ ಹೆಚ್ಚಿನ ನೆರವು ಪಡೆಯಲಿದ್ದೇವೆ ಎಂದು ತಿಳಿಸಿದರು.

    ಉಪಮುಖ್ಯಮಂತ್ರಿ ಹುದ್ದೆ ಇರುತ್ತದೆ. ಯಾರು, ಎಷ್ಟು ಎಂಬುದು ನಾಳೆ ಗೊತ್ತಾಗುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ, ಡಿಸಿಎಂ ಹುದ್ದೆ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಂಡಿದೆ. ಹೈಕಮಾಂಡ್ ಸೂಚನೆಗಳನ್ನು ಪಾಲಿಸುತ್ತೇವೆ. ಎಷ್ಟು ಡಿಸಿಎಂ ಸ್ಥಾನ ಅನ್ನೊದು ಚರ್ಚೆ ನಡೆಯುತ್ತಿದೆ. ನಾಳೆ ಅಂತಿಮವಾಗಿ ಗೊತ್ತಾಗಲಿದೆ. ಸಚಿವ ಸ್ಥಾನ ಸಿಗದ ಅಸಮಾಧಾನಿತ ಶಾಸಕರಿಗೂ ನಿಗಮ ಮಂಡಳಿಯಲ್ಲಿ ಸ್ಥಾನ ಮಾನ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

    ಅನರ್ಹ ಶಾಸಕರ ಬಗ್ಗೆ ಮಾತನಾಡುವುದಿಲ್ಲ. ಈ ಕುರಿತು ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ಈಗೇನಿದ್ದರೂ ಸಮಸ್ಯೆ ಕಾಂಗ್ರೆಸ್ ಜೆಡಿಎಸ್‍ನಲ್ಲಿ ಮಾತ್ರ ಎಂದು ಅನರ್ಹ ಶಾಸಕರ ಕುರಿತು ಬಿಎಸ್‍ವೈ ಮಾತನಾಡನಲಿಲ್ಲ. ಲಕ್ಷ್ಮಣ ಸವದಿ ಬಗ್ಗೆ ಕೆಲವು ಶಾಸಕರು ಹಾಗೂ ನಾಯಕರಲ್ಲಿ ಅಸಮಾಧಾನ ಇರುವುದು ನಿಜ. ಹೈಕಮಾಂಡ್ ನಿರ್ದೇಶನದ ಮೇರೆಗೆ ಸವದಿಗೆ ಅವಕಾಶ ನೀಡಲಾಗಿದೆ. ಬೆಳಗಾವಿಯಲ್ಲಿ ಮತ್ತೊಬ್ಬರಿಗೆ ಅವಕಾಶ ನೀಡಲಾಗುವುದು ಎಂದು ಮಾಹಿತಿ ನಿಡಿದರು.

    ಸಿಂಧುಗೆ 5 ಲಕ್ಷ ಪ್ರೋತ್ಸಾಹ ಧನ:
    ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪಿ.ವಿ.ಸಿಂಧು ಅವರಿಗೆ 5 ಲಕ್ಷ ರೂ. ಪ್ರೋತ್ಸಾಹ ಧನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

    ಇಂದು ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲೇ ಈ ಕುರಿತು ಮಾಹಿತಿ ನೀಡಿದ್ದು, ಚಿನ್ನದ ಪದಕ ಗೆಲ್ಲುವ ಮೂಲಕ ದೇಶಕ್ಕೆ ಗೌರವ ತಂದಿದ್ದಾರೆ, ಹೀಗಾಗಿ ಅವರಿಗೆ ಪ್ರೋತ್ಸಾಹ ಧನ ಘೋಷಿಸಲಾಗಿದೆ ಎಂದು ಬಿಎಸ್‍ವೈ ತಿಳಿಸಿದ್ದಾರೆ.

    ಪಿ.ವಿ.ಸಿಂಧು ಈ ಹಿಂದೆ ಎರಡು ಬಾರಿ ಫೈನಲ್ ಪ್ರವೇಶ ಮಾಡಿದ್ದರು. ಆದರೆ ಪ್ರಶಸ್ತಿಯಿಂದ ವಂಚಿತರಾಗಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದರು. 24 ವರ್ಷದ ಹೈದರಾಬಾದ್‍ನ ಆಟಗಾರ್ತಿ ಪಿ.ವಿ.ಸಿಂಧು ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಜಪಾನ್‍ನ ಒಕುಹಾರ ಅವರನ್ನು 21-7, 21-7 ಗೇಮ್‍ಗಳಿಂದ ಸೋಲಿಸಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಷಿಪ್ ನಲ್ಲಿ ಸಿಂಧು ಅವರು 2013 ಮತ್ತು 2014ರಲ್ಲಿ ಕಂಚಿನ ಪದಕ ಗೆದ್ದಿದ್ದರು. 2017 ಹಾಗೂ 2018ರಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದರು. ಆದರೆ ಈ ಬಾರಿಯ ಫೈಲನ್ ಪ್ರವೇಶದಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಷಿಪ್ ಪ್ರಶಸ್ತಿ ಗೆದ್ದಿದ್ದಾರೆ.