ಚಿತ್ರದುರ್ಗ: ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಇಲ್ಲಿನ ಕೃಷಿ ಇಲಾಖೆ ಎಡಿ (ಹೆಚ್ಚುವರಿ ನಿರ್ದೇಶಕ) ಮನೆ ಮೇಲೆ ಲೋಕಾಯುಕ್ತ ದಾಳಿ (Lokayukta Raid) ನಡೆಸಿದೆ.
ಚಿತ್ರದುರ್ಗ (Chitradurga) ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ, ಪಿಐ ಮಂಜುನಾಥ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಚಂದ್ರಕಾಂತ್ ಅವರಿಗೆ ಸೇರಿದ 2 ಮನೆ ಮತ್ತು ಚಿತ್ರದುರ್ಗದ ಕೃಷಿ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.
ತರಳಬಾಳು ನಗರ, ಹೊಳಲ್ಕೆರೆ ತಾಲೂಕಿನ ಟಿ ನುಲೇನೂರು ಗ್ರಾಮದ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಶೋಧ ನಡೆಸಿದ್ದಾರೆ.
ನವದೆಹಲಿ: ರಾಜ್ಯದಲ್ಲಿ ಜಾತಿಗಣತಿ (Caste Census) ಹೊತ್ತಲ್ಲೇ ಮುಂದಿನ ವರ್ಷದ ಫೆಬ್ರವರಿಯಿಂದ ಕೇಂದ್ರ ಸರ್ಕಾರ ದೇಶಾದ್ಯಂತ ಆದಾಯ ಸಮೀಕ್ಷೆ (NHIS) ಕಾರ್ಯ ಆರಂಭಿಸಲಿದೆ. ಇದೇ ಮೊದಲ ಬಾರಿಗೆ ಮನೆ ಮಂದಿಯ ಜೀವನ ಸ್ಥಿತಿ, ಆದಾಯ, ಖರ್ಚಿನ ಡೇಟಾ ಸಂಗ್ರಹಿಸಲಿದ್ದು, ದೇಶದ ಬಡತನ ಸ್ಥಿತಿಗತಿ ಬಗ್ಗೆ ತಿಳಿದು ಬರಲಿದೆ.
ಕೇಂದ್ರ ಸರ್ಕಾರದ ಅಂಕಿ ಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ಅಧೀನದಲ್ಲಿರುವ ರಾಷ್ಟ್ರೀಯ ಅಂಕಿ ಅಂಶ ಕಚೇರಿ ವತಿಯಿಂದ ರಾಷ್ಟ್ರೀಯ ಗೃಹ ಆದಾಯ ಸಮೀಕ್ಷೆ (National Household Income Survey) ಪ್ರಾರಂಭಿಸಲು ನಿರ್ಧರಿಸಲಾಗಿದೆ.
ಈ ಸಮೀಕ್ಷೆಯೂ ಮನೆಯ ಆದಾಯವನ್ನು ಅಳೆಯುವತ್ತ ಗಮನಹರಿಸಿದ ಮೊದಲ ಪ್ಯಾನ್-ಇಂಡಿಯಾ (Pan India) ಸಮೀಕ್ಷೆಯಾಗಿದ್ದು, ಭಾರತದ ಸಾಮಾಜಿಕ-ಆರ್ಥಿಕ ಅಂಕಿಅಂಶಗಳ ವ್ಯವಸ್ಥೆಯಲ್ಲಿ ದೀರ್ಘಕಾಲದ ದತ್ತಾಂಶ ಅಂತರವನ್ನು ತೋರುವ ಮಹತ್ವದ ಹೆಜ್ಜೆ ಇದಾಗಿದೆ.
ರಾಷ್ಟ್ರೀಯ ಗೃಹ ಆದಾಯ ಸಮೀಕ್ಷೆ ಜನರ ಜೀವನ ಪರಿಸ್ಥಿತಿಗಳು ಮತ್ತು ಆದಾಯ ಮತ್ತು ವೆಚ್ಚದ ಮಾದರಿಗಳ ಮಾಹಿತಿಯನ್ನು ಒದಗಿಸುತ್ತದೆ. ಪ್ರಪಂಚದಾದ್ಯಂತದ ದೇಶಗಳಲ್ಲಿನ ಸಮುದಾಯಗಳಲ್ಲಿನ ಬಡತನ ಮತ್ತು ಕಷ್ಟಗಳನ್ನು ವಿಶ್ಲೇಷಿಸಲು ಈ ದತ್ತಾಂಶವನ್ನು ಬಳಸಲಾಗುತ್ತದೆ. ಇದನ್ನೂ ಓದಿ: ಟ್ರಂಪ್ ಭಾಷಣಕ್ಕೆ ಅಡ್ಡಿ – ಇಬ್ಬರು ಇಸ್ರೇಲ್ ಸಂಸದರನ್ನು ಹೊರದಬ್ಬಿದ ಸಿಬ್ಬಂದಿ
ಕೆನಡಾ, ಅಮೆರಿಕ ಬ್ರಿಟನ್‌ನಂತಹ ಅಭಿವೃದ್ಧಿ ಹೊಂದಿದ ದೇಶಗಳು ಮತ್ತು ಶ್ರೀಲಂಕಾ, ಬಾಂಗ್ಲಾದೇಶ, ಚೀನಾ ಮತ್ತು ಮಲೇಷ್ಯಾದಂತಹ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳು ಸೇರಿದಂತೆ ಅನೇಕ ದೇಶಗಳಲ್ಲಿ, ಮನೆಯ ಆದಾಯದ ಡೇಟಾವನ್ನು ಮನೆಯ ಸಮೀಕ್ಷೆಗಳ ಮೂಲಕ ಸಂಗ್ರಹಿಸಲಾಗುತ್ತದೆ.
ಈ ಸಮಿತಿ ನೀಡಿದ ಪ್ರಶ್ನೆಗಳ ಆಧಾರದ ಮೇಲೆ ಕಳೆದ ಆಗಸ್ಟ್ 4–8 ರ ನಡುವೆ ಮುಂಬೈ, ದೆಹಲಿ, ಕೋಲ್ಕತ್ತಾ, ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ ಆರು ವಲಯಗಳಲ್ಲಿ ಪ್ರಾಯೋಗಿಕವಾಗಿ ಸಮೀಕ್ಷೆ ನಡೆಸಿದೆ. ಸಮೀಕ್ಷೆಯಲ್ಲಿ ಎರಡು ನಗರ ಮತ್ತು ಎರಡು ಗ್ರಾಮೀಣ ಪ್ರದೇಶಗಳನ್ನು ಆಯ್ಕೆ ಮಾಡಿ ಶ್ರೀಮಂತ ಮತ್ತು ಶ್ರೀಮಂತರಲ್ಲದ ಮಾಹಿತಿ ಸಂಗ್ರಹಿಸಿದೆ. ಮುಂದಿನ ವರ್ಷದ ಫೆಬ್ರವರಿಯಲ್ಲಿ ಅಧಿಕೃತ ಸಮೀಕ್ಷೆ ಆರಂಭವಾಗಲಿದೆ.
ಸಮೀಕ್ಷೆಯಲ್ಲಿ ಏನು ಇರುತ್ತೆ?
– ಈ ಸಮೀಕ್ಷೆಯಲ್ಲಿ ಮನೆ, ಕುಟುಂಬದ ಮುಖ್ಯಸ್ಥರ ಮಾಹಿತಿ, ಧರ್ಮ, ಜಾತಿ ಮಾಹಿತಿ
– ಕುಟುಂಬಸ್ಥರ ಕೃಷಿ ಸೇರಿ ಇತರೆ ಆದಾಯ ಮೂಲ ಮತ್ತು ಖರ್ಚುಗಳ ವಿವರ ಸಂಗ್ರಹ
– ಕೃಷಿ ಜಮೀನು ಅಥವಾ ಇತರೆ ಭೂಮಿಯ ಮಾಲೀಕತ್ವ ಹಾಗೂ ಸಾಲ, ಸಾಲ ಪಡೆಯಲು ಕಾರಣ ಇತ್ಯಾದಿ ಮಾಹಿತಿ
ನವದೆಹಲಿ: ತೆರಿಗೆದಾರರು ವಿದೇಶದಲ್ಲಿ ಹೊಂದಿರುವ ಆಸ್ತಿ (Foreign Aassets) ಅಥವಾ ವಿದೇಶದಿಂದ ಗಳಿಸಿದ ಆದಾಯದ ವಿವರ ಘೋಷಿಸದಿದ್ದರೇ ಅಂತಹವರಿಗೆ ಕಪ್ಪುಹಣ ತಡೆ ಕಾಯ್ದೆ ಅಡಿಯಲ್ಲಿ 10 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ಆದಾಯ ತೆರಿಗೆ ಇಲಾಖೆ (Income Tax Department) ಎಚ್ಚರಿಕೆ ನೀಡಿದೆ.
2024-25ನೇ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದಂತೆ ವಿಳಂಬ ಹಾಗೂ ಪರಿಷ್ಕೃತ ಐಟಿಆರ್ ಸಲ್ಲಿಕೆಗೆ ಡಿಸೆಂಬರ್ 31ರಂದು ಅಂತಿಮ ದಿನವಾಗಿದೆ. ಹಾಗಾಗಿ ಎಲ್ಲಾ ಅರ್ಹ ತೆರಿಗೆದಾರರು ತಮ್ಮ ಐಟಿ ರಿಟರ್ನ್ಸ್‌ನಲ್ಲಿ ವಿದೇಶಿ ಆಸ್ತಿ (ಎಫ್‌ಎ) ಅಥವಾ ವಿದೇಶಿ ಮೂಲ ಆದಾಯ (ಎಫ್‌ಎಸ್‌ಐ) ವೇಳಾಪಟ್ಟಿಯನ್ನು ʻಕಡ್ಡಾಯವಾಗಿʼ ಭರ್ತಿ ಮಾಡಬೇಕು ಎಂದು ಎಂದು ಇಲಾಖೆ ಎಚ್ಚರಿಸಿದೆ. ಇದನ್ನೂ ಓದಿ: ಮಣಿಪುರದ ಭದ್ರತಾ ವ್ಯವಸ್ಥೆ ಕುರಿತು ಅಮಿತ್ ಶಾ ಸಭೆ – ಸೋಮವಾರವೂ ಹೈವೋಲ್ಟೇಜ್ ಮೀಟಿಂಗ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಸುರಿದ ಭಾರೀ ಮಳೆಯ ಪರಿಣಾಮ ನಮ್ಮ ಮೆಟ್ರೋ (Namma Metro) ಆದಾಯದ ಏರಿಕೆಯಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ (Bengaluru) ಧಾರಾಕಾರ ಮಳೆ ಸುರಿದಿತ್ತು. ಇದರ ಪರಿಣಾಮ ಹೆಚ್ಚಿನ ಜನರು ಸಂಚಾರಕ್ಕಾಗಿ ಮೆಟ್ರೋ ರೈಲನ್ನು ಬಳಸಿದ್ದರು. ಇದರ ಪರಿಣಾಮ ನಮ್ಮ ಮೆಟ್ರೋ ರೈಲಿನ ಆದಾಯದಲ್ಲಿ ಭಾರೀ ಏರಿಕೆಯಾಗಿದೆ.ಇದನ್ನೂ ಓದಿ: ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಗುಂಡಿನ ದಾಳಿ – ಉಗ್ರರಿಗಾಗಿ ತೀವ್ರ ಶೋಧ
ಕಳೆದ ವರ್ಷಕ್ಕಿಂತ ಈ ವರ್ಷ ಮೆಟ್ರೋ ಆದಾಯದಲ್ಲಿ ಭಾರೀ ಏರಿಕೆ ಕಂಡಿದೆ. 2023ರಲ್ಲಿ ಅಕ್ಟೋಬರ್ ತಿಂಗಳ 24 ದಿನಗಳಲ್ಲಿ 39.12 ಕೋಟಿ ರೂ. ಸಂಗ್ರಹವಾಗಿತ್ತು. ಈ ವರ್ಷ 48.35 ಕೋಟಿ ರೂ. ಆದಾಯ ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 9.22 ಕೋಟಿ ರೂ. ಹೆಚ್ಚಿನ ಆದಾಯ ಬಂದಿದೆ.
2023ರ ಅ.1 ರಿಂದ ಅ.24 ರವರೆಗೆ ಒಟ್ಟು 1.52 ಕೋಟಿ ಜನರು ಮೆಟ್ರೋದಲ್ಲಿ ಪ್ರಯಾಣಿಸಿದ್ದರು. 2024ರ ಅಕ್ಟೋಬರ್ ಆರಂಭದಿಂದ ಇಲ್ಲಿಯವರೆಗೂ ಒಟ್ಟು 1.85 ಕೋಟಿ ಜನರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ 32.90 ಲಕ್ಷ ಜನರು ಹೆಚ್ಚಾಗಿ ಪ್ರಯಾಣಿಸಿದ್ದಾರೆ. ಅದರಲ್ಲೂ ಅತೀ ಹೆಚ್ಚು ಪ್ರಯಾಣಿಕರು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದವನ್ನು (Majestic Metro Station) ಬಳಸಿ ಪ್ರಯಾಣಿಸಿದ್ದಾರೆ.ಇದನ್ನೂ ಓದಿ: ಸರ್ಕಾರದ ಮುಖ್ಯಸ್ಥರ ಭೇಟಿಯಾದ್ರೆ ಡೀಲ್ ಎಂದರ್ಥವಲ್ಲ: ಮೋದಿ ಭೇಟಿ ಬಗ್ಗೆ ಮೌನ ಮುರಿದ ಸಿಜೆಐ
ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ (Disproportionate Assets Case) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಸಂಕಷ್ಟ ಎದುರಾಗಿದೆ. ಸಿಬಿಐ ಪ್ರಕರಣವನ್ನು ರದ್ದು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್‌ಸಿ ಶರ್ಮಾ ಅವರ ಪೀಠವು ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು.
ಸಿಬಿಐ ದಾಖಲಿಸಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಡಿಕೆಶಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಕ್ಟೋಬರ್ 19, 2023 ರಂದು ಕರ್ನಾಟಕ ಹೈಕೋರ್ಟ್ ಡಿಕೆಶಿ ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಡಿಕೆಶಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಬಸ್ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ : ರಾಮಲಿಂಗಾ ರೆಡ್ಡಿ
ಏನಿದು ಪ್ರಕರಣ?
2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಡಿಕೆಶಿ ಹೈಕೋರ್ಟ್, ಸುಪ್ರೀಂ ಮೊರೆ ಹೋಗಿದ್ದರು.
ಡಿಕೆ ಶಿವಕುಮಾರ್ ಅವರು 2013 ಮತ್ತು 2018 ರ ನಡುವೆ ತಮ್ಮ ಆದಾಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಯನ್ನು ಗಳಿಸಿದ್ದಾರೆ . ಈ ಅವಧಿಯಲ್ಲಿ ಅವರು ಸಚಿವರಾಗಿದ್ದರು ಎಂದು ಸಿಬಿಐ ಆರೋಪಿಸಿದೆ.
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಇಬ್ಬರು ನಿವೃತ್ತ ಎಂಜಿನಿಯರ್ ಸೇರಿದಂತೆ 11 ಅಧಿಕಾರಿಗಳಿಗೆ ಸಂಬಂಧಿಸಿದ 56 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು (Lokayukta Police) ದಾಳಿ ನಡೆಸಿದ್ದಾರೆ.
ಒಟ್ಟು 11 ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ಒಟ್ಟು 56 ಸ್ಥಳಗಳಲ್ಲಿ 100 ಕ್ಕೂ ಅಧಿಕಾರಿಗಳ ತಂಡದ ದಾಳಿ ನಡೆಸಿ ಕಡತ ಪರಿಶೀಲಿಸುತ್ತಿದೆ.
ಬೆಂಗಳೂರಿನ 15 ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಪಾಲಿಕೆ ಎಂಜಿನಿಯರ್ ಬಸವರಾಜ್ ಮಾಗಿ ಮನೆ ಹಾಗೂ ಸಂಬಂಧಿಕರ ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ.
ಈ ಎಲ್ಲ ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ (Disappropriate Assets) ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ ಪೊಲೀಸ್ ಎಫ್‌ಐಆರ್ ದಾಖಲಿಸಿದ್ದಾರೆ. ನ್ಯಾಯಾಲಯದಿಂದ ಶೋಧನಾ ವಾರಂಟ್ ಪಡೆದು ಇಂದು ಬೆಳಗ್ಗೆ ದಾಳಿ ನಡೆಸಲಾಗಿದೆ.
ನವದೆಹಲಿ: ಬಜೆಟ್‌ನಲ್ಲಿ (Union Budget 2023) 7 ಲಕ್ಷ ರೂ. ವೈಯಕ್ತಿಕ ಆದಾಯಕ್ಕೆ (Personal Income) ತೆರಿಗೆ ವಿನಾಯಿತಿಯನ್ನು ಘೋಷಿಸಿದ್ದ ಸರ್ಕಾರ ಈಗ ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ಮಾಡಿ ಈ ಪ್ರಸ್ತಾಪವನ್ನು ಅಧಿಕೃತವಾಗಿ ಜಾರಿ ಮಾಡಿದೆ.
Finance Act, 2023 amended Section 115BAC to reduce the rates under the #NewTaxRegime providing an option to individual taxpayers for paying income-tax at lower slab rates if they did not avail specified exemption/deduction. (2/5) #PromisesDeliveredpic.twitter.com/6ka0fGfEpf
ಈ ಸಂಬಂಧ ಹಣಕಾಸು ಸಚಿವಾಲಯ (Finance Ministry) ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದೆ. ಆದಾಯ ತೆರಿಗೆ ಕಾಯ್ದೆ (Income Tax Act) 2023 ಸೆಕ್ಷನ್ 87ಕ್ಕೆ ತಿದ್ದುಪಡಿ ಮಾಡಿ ವಾರ್ಷಿಕ ಬಜೆಟ್‌ನಲ್ಲಿ ಪ್ರಕಟಿಸಿದ ಘೋಷಣೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: Ayodhya Ram Mandir: ರಾಮನೂರಿನಲ್ಲಿ ತಲೆಎತ್ತಲಿದೆ 7 ಸ್ಟಾರ್ ಸಸ್ಯಹಾರಿ ಹೋಟೆಲ್
Limit for tax exemption on leave encashment on retirement or otherwise of non-government salaried employees increased to Rs 25 lakh wef 1.04.23.
ಆದಾಯ 7 ಲಕ್ಷ ರೂಪಾಯಿಯ ತನಕ ಇದ್ದಲ್ಲಿ ಇನ್ನು ಮುಂದೆ ಆದಾಯ ತೆರಿಗೆ ಸಲ್ಲಿಸುವಾಗ ಕಟ್ಟಿರುವ ತೆರಿಗೆಯನ್ನು ರಿಬೇಟ್ ಅಥವಾ ವಾಪಸ್ ಪಡೆದುಕೊಳ್ಳುವ ಅವಕಾಶ ಲಭ್ಯವಿರುತ್ತದೆ. ಈ ಹಿಂದೆ 5 ಲಕ್ಷ ರೂ. ತನಕ ಆದಾಯ ಇದ್ದವರಿಗೆ ಈ ವಿನಾಯಿತಿ ನೀಡಲಾಗುತ್ತಿತ್ತು. 2023ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಅವಕಾಶವನ್ನು 7 ಲಕ್ಷ ರೂ. ಆದಾಯ ಇರುವವರಿಗೂ ವಿಸ್ತರಿಸಿದ್ದರು.
ಹಾಸನ: ವರ್ಷಕ್ಕೆ ಒಂದು ಬಾರಿ ದರ್ಶನ ನೀಡುವ ಹಾಸನಾಂಬೆಯ (Hasanambe) ಜಾತ್ರಾ ಮಹೋತ್ಸವ ಇತಿಹಾಸದಲ್ಲೇ ದಾಖಲೆ ಬರೆದಿದ್ದು, ದಾಖಲೆಯ ಆದಾಯ (Income) ಗಳಿಸಿದೆ.
9 ದಿನಗಳ ದರ್ಶನದಲ್ಲಿ ಒಟ್ಟು 4,56,22,580 ರೂ. ಸಂಗ್ರಹವಾಗಿದೆ. ವಿಶೇಷ ದರ್ಶನದ ಪಾಸ್ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ ಕೋಟಿ ಕೋಟಿ ಆದಾಯ ಗಳಿಸಿದೆ. ನ.3ರಿಂದ ಪ್ರಾರಂಭವಾಗಿ ನ.11ರ ಮಧ್ಯಾಹ್ನ 2ಗಂಟೆಯವರೆಗೆ ಒಟ್ಟು 4,56,22,580 ರೂ. ಆದಾಯ ಬಂದಿದೆ. ಸಾವಿರ ರೂ. ಟಿಕೆಟ್ ಮಾರಾಟದಿಂದ 2,30,91,000 ರೂ. ಸಂಗ್ರಹವಾಗಿದ್ದು, 300 ರೂ. ಟಿಕೆಟ್ ಮಾರಾಟದಿಂದ 1,79,65,500 ರೂ. ಸಂಗ್ರಹವಾಗಿದೆ. ಇದನ್ನೂ ಓದಿ: ಅತಿವೃಷ್ಠಿಯಲ್ಲಿ ಬಿಎಸ್‍ವೈ ಭಿಕ್ಷೆ ಬೇಡಿದ್ದರು, ಸಿದ್ದರಾಮಯ್ಯರಂತೆ ಡ್ಯಾನ್ಸ್ ಮಾಡಿರಲಿಲ್ಲ: ಆರಗ ಜ್ಞಾನೇಂದ್ರ ವ್ಯಂಗ್ಯ
ಲಡ್ಡು ಪ್ರಸಾದ ಮಾರಾಟದಿಂದ ಕೂಡ 45,66,080 ಹಣ ಸಂಗ್ರಹವಾಗಿದ್ದು, ಒಟ್ಟು 4,56,22,580 ರೂ. ಆದಾಯವನ್ನು ಹಾಸನಾಂಬ ದೇವಾಲಯ ಗಳಿಸಿದೆ. ಹಾಸನಾಂಬೆ ದರ್ಶನೋತ್ಸವ ಇತಿಹಾಸದಲ್ಲೇ ಅತಿ ಹೆಚ್ಚಿನ ಆದಾಯ ಗಳಿಸಿದ್ದು, ಇನ್ನೂ ಮೂರು ದಿನ ಬಾಕಿ ಇರುವಾಗಲೇ ಕೋಟಿ ಕೋಟಿ ಆದಾಯ ಗಳಿಸಿದೆ. ಇದನ್ನೂ ಓದಿ: ನ.15ಕ್ಕೆ ವಿಜಯೇಂದ್ರ ಪದಗ್ರಹಣ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಪ್ರಕರಣದ (Disproportionate Asset Case) ತನಿಖೆಯನ್ನು ಪೂರ್ಣಗೊಳಿಸಿ ಚಾರ್ಜ್‌ಶೀಟ್ (Chargesheet) ಅನ್ನು 3 ತಿಂಗಳ ಒಳಗಡೆ ಸಲ್ಲಿಸಬೇಕೆಂದು ಹೈಕೋರ್ಟ್ ಸಿಬಿಐಗೆ ಸೂಚಿಸಿದೆ.
ಸಿಬಿಐ ತನಿಖೆ ರದ್ದು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಮೂರ್ತಿ ಕೆ.ನಟರಾಜನ್ ನೇತೃತ್ವದ ಪೀಠ ಈ ಕುರಿತು ತೀರ್ಪು ನೀಡಿದ್ದು, ತನಿಖೆಗೆ ನೀಡಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಿ ಇಂದಿನಿಂದಲೇ ಸಿಬಿಐ (CBI) ಡಿಕೆಶಿ ಅವರನ್ನು ವಿಚಾರಣೆ ನಡೆಸಬಹುದು ಎಂದು ತೀರ್ಪು ನೀಡಿದೆ. ಇದನ್ನೂ ಓದಿ: ಡಿಕೆಶಿ ಮೆರವಣಿಗೆ ನೋಡಿ ಕೇಸ್ ಖುಲಾಸೆ ಅಂದ್ಕೊಂಡಿದ್ದೆ: ಕೆ.ಎಸ್ ಈಶ್ವರಪ್ಪ
ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್‌ನ (High Court) ಕೆ ನಟರಾಜನ್ ಅವರ ಪೀಠ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಅರ್ಜಿ ವಜಾ ಮಾಡುವಾಗ ಕೆಲವೊಂದು ಪ್ರಮುಖ ಅಂಶಗಳನ್ನು ಉಲ್ಲೇಖಿಸಿದೆ.
ಕೋರ್ಟ್ ಹೇಳಿದ್ದೇನು?
ಅರ್ಜಿದಾರ ಡಿಕೆ ಶಿವಕುಮಾರ್ ಅರ್ಜಿಯನ್ನು ತುಂಬಾ ವಿಳಂಬವಾಗಿ ಸಲ್ಲಿಸಿದ್ದಾರೆ. ಈಗಾಗಲೇ ತನಿಖೆ ಕೊನೆಯ ಹಂತದಲ್ಲಿ ಇದ್ದು, ಕೆಲವೇ ದಿನದಲ್ಲಿ ಪ್ರಕರಣದ ತನಿಖೆ ಸಂಪೂರ್ಣ ಮಾಡುತ್ತೇವೆ ಎಂದು ಹೇಳಿದೆ. ಈ ಹಂತದಲ್ಲಿ ಪ್ರಕರಣಕ್ಕೆ ತಡೆ ನೀಡುವುದು ಸರಿಯಲ್ಲ.
ಇನ್ನು ತನಿಖೆ ವಿಳಂಬ ಆಗಿದ್ದರೆ ತನಿಖೆ ಚುರುಕುಗೊಳಿಸಿ ಎಂದು ನಿರ್ದೇಶನ ನೀಡಬಹುದು. ಸಿಬಿಐ ದೋಷಾರೋಪ ಪಟ್ಟಿ ಹಾಕಿದ ಬಳಿಕವೂ ನೂನ್ಯತೆಗಳು ಇದ್ದರೆ ಅರ್ಜಿ ಸಲ್ಲಿಸಬಹುದು.
ಏನಿದು ಪ್ರಕರಣ?
2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ತನಿಖೆಗೆ ತಡೆ ಕೋರಿ ಡಿಕೆಶಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ (Disproportionate Assets Case) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಸಂಕಷ್ಟ ಎದುರಾಗಿದೆ. ಸಿಬಿಐ (CBI) ತನಿಖೆ ರದ್ದು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ (Karnataka High Court) ವಜಾಗೊಳಿಸಿ ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಇದನ್ನೂ ಓದಿ: ಭಿಕ್ಷೆ ಬೇಡಲು ಹೋಗಿದ್ದೆ: ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಕಿಡಿ
ಸಿಬಿಐ ತನಿಖೆ ರದ್ದು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಮೂರ್ತಿ ಕೆ.ನಟರಾಜನ್ ನೇತೃತ್ವದ ಪೀಠ ಈ ಕುರಿತು ತೀರ್ಪು ನೀಡಿದ್ದು, ತನಿಖೆಗೆ ನೀಡಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಿ ಇಂದಿನಿಂದಲೇ ಸಿಬಿಐ ಡಿಕೆಶಿ ಅವರನ್ನು ವಿಚಾರಣೆ ನಡೆಸಬಹುದು ಎಂದು ತೀರ್ಪು ನೀಡಿದೆ.
ಏನಿದು ಪ್ರಕರಣ?
2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.