Tag: income tax deparment

  • ಸಚಿವ ಡಿಕೆಶಿ ಮನೆ ಮೇಲೆ ಐಟಿ ದಾಳಿಯಾದ್ರೂ ರಮ್ಯಾ ನೋ ರಿಯಾಕ್ಷನ್

    ಸಚಿವ ಡಿಕೆಶಿ ಮನೆ ಮೇಲೆ ಐಟಿ ದಾಳಿಯಾದ್ರೂ ರಮ್ಯಾ ನೋ ರಿಯಾಕ್ಷನ್

    ಮಂಡ್ಯ: ಸದಾ ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರವನ್ನು ಒಂದಲ್ಲ ಒಂದು ಕಾರಣಕ್ಕೆ ಟೀಕಿಸುತ್ತಿದ್ದ ಮಾಜಿ ಸಂಸದೆ ರಮ್ಯಾ ಇದೀಗ ತಮ್ಮದೇ ಪಕ್ಷದ ಸಚಿವರ ಮನೆ ಮೇಲೆ ಐಟಿ ದಾಳಿ ಮಾಡಿದಾಗ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

    ಕಳೆದ ಮೂರು ದಿನಗಳಿಂದ ಇಂಧನ ಸಚಿವ ಡಿಕೆ ಶಿವಕುಮಾರ್, ಸಂಬಂಧಿಕರು ಹಾಗೂ ಅವರ ಆಪ್ತರ ನಿವಾಸದ ಮೇಲೆ ಐಟಿ ದಾಳಿ ನಡೆಯುತ್ತಿದೆ. ನಿರಂತರವಾಗಿ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಅಲ್ಲದೇ ಈ ಕುರಿತು ರಾಜ್ಯಾದ್ಯಂತ ಹಾಗೂ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳು ಕೇಳಿ ಬರ್ತಾ ಇದೆ. ಈ ದಾಳಿ ಒಂದು ರಾಜಕೀಯ ಪ್ರೇರಿತವಾಗಿದೆ ಎನ್ನುವ ಆರೋಪಗಳು ವ್ಯಕ್ತವಾಗುತ್ತಿದೆ. ಆದ್ರೆ ಪ್ರತಿ ಬಾರಿ ಕೇಂದ್ರ ಸರ್ಕಾರದ ವಿರುದ್ಧ ಟ್ವಿಟ್ಟರ್ ನಲ್ಲಿ ಜರಿಯುತ್ತಿದ್ದ ರಮ್ಯಾ ಇದೀಗ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಗೊಂದಲಕ್ಕೀಡುಮಾಡಿದೆ.

    ಅಲ್ಲದೇ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಕಾರ್ಯನಿರತರಾಗರೋ ರಮ್ಯಾ ತಮ್ಮ ಮಂಡ್ಯದಲ್ಲಿರೋ ನಿವಾಸಕ್ಕೆ ಭೇಟಿ ನೀಡದೆ ತಿಂಗಳುಗಳೇ ಕಳೆದಿದೆ ಎನ್ನುವ ಮಾಹಿತಿ ಮೂಲಗಳಿಂದ ಸಿಕ್ಕಿದೆ.