Tag: income tax officers

  • ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಬೆನ್ನಲ್ಲೇ ದರ್ಶನ್‌ಗೆ ಐಟಿ ಕಂಟಕ

    ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಬೆನ್ನಲ್ಲೇ ದರ್ಶನ್‌ಗೆ ಐಟಿ ಕಂಟಕ

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಅವರನ್ನು ಆದಾಯ ತೆರಿಗೆ ಇಲಾಖೆ (Income Tax Department) ವಿಚಾರಣೆ ನಡೆಸಲಿದೆ.

    ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿದ್ದ ದರ್ಶನ್ ಅವರನ್ನು ರಾಜಾತಿಥ್ಯ ಪ್ರಕರಣದ ಬಳಿಕ ಬಳ್ಳಾರಿ ಸೆಂಟ್ರಲ್ ಜೈಲಿಗೆ (Ballary Central Jail) ವರ್ಗಾಯಿಸಲಾಗಿತ್ತು. ಇಂದು (ಸೆ.23ರಂದು) ನಡೆಯಬೇಕಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.ಇದನ್ನೂ ಓದಿ:ರೇಣುಕಾ ಹತ್ಯೆ ಕೇಸ್‌ – ಮೂವರಿಗೆ ಜಾಮೀನು ಮಂಜೂರು

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 70 ಲಕ್ಷ ರೂ. ಸಿಕ್ಕಿರುವ ಕಾರಣ ಐಟಿ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ (Magistrate Court) ಮನವಿ ಸಲ್ಲಿಸಿದ್ದರು. ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ (Darshan) ಅವರನ್ನು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಕೋರಿದ್ದರು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮನವಿಗೆ ಕೋರ್ಟ್ ಒಪ್ಪಿಗೆ ಸೂಚಿಸಿದೆ.

    ಕೋರ್ಟ್ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದರ್ಶನ್ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ.ಇದನ್ನೂ ಓದಿ:ರೇಣುಕಾಸ್ವಾಮಿ ಹತ್ಯೆ ಕೇಸ್‌ – ಮೊದಲ ಜಾಮೀನು ಮಂಜೂರು

  • ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸಿ ಚಿನ್ನ ಕಳವು – ನಾಲ್ವರ ಬಂಧನ

    ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸಿ ಚಿನ್ನ ಕಳವು – ನಾಲ್ವರ ಬಂಧನ

    ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ (Income Tax Officer) ವೇಷ ಧರಿಸಿ ಹೈದರಾಬಾದ್‌ನ (Hyderabad) ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್‌ಗಳನ್ನು (Gold Biscuit) ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ರೆಹಮಾನ್ ಗಫೂರ್ ಅಥರ್, ಜಾಕಿರ್ ಗನಿ ಅಥರ್, ಪ್ರವೀಣ್ ಯಾದವ್ ಹಾಗೂ ಆಕಾಶ್ ಅರುಣ್ ಎಂದು ಗುರುತಿಸಲಾಗಿದೆ. ಆರೋಪಿಗಳು ಸೇರಿದಂತೆ 8ರಿಂದ 10 ಜನರಿದ್ದ ತಂಡವು ಮೇ 27ರಂದು ಹೈದರಾಬಾದ್‌ನ ಮೋಂಡಾ ಮಾರ್ಕೆಟ್‌ನಲ್ಲಿರುವ ಸಿದ್ದಿವಿನಾಯಕ ಎಂಬ ಅಂಗಡಿಯಿಂದ ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸಿ 60 ಲಕ್ಷ ರೂ. ಮೌಲ್ಯದ 17 ಚಿನ್ನದ ಬಿಸ್ಕತ್‌ಗಳನ್ನು ಕಳವು ಮಾಡಿದ್ದಾರೆ. ಇದನ್ನೂ ಓದಿ: ಒಂದೇ ವಾರದಲ್ಲಿ 2,000 ರೂ. ನೋಟುಗಳ 14,000 ಕೋಟಿ ಡೆಪಾಸಿಟ್: SBI

    ಬಂಧಿತ ಆರೋಪಿಗಳಿಂದ 7 ಚಿನ್ನದ ಬಿಸ್ಕತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತರ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಪಶ್ಚಾತ್ತಾಪವಿಲ್ಲ, ನನ್ನ ತಿರಸ್ಕರಿಸಿದ್ದಕ್ಕೆ ಆಕೆಯನ್ನು ಕೊಂದೆ- ತಪ್ಪೊಪ್ಪಿಕೊಂಡ ಸಾಹಿಲ್

  • ಕೈ ನಾಯಕರ ಆಪ್ತರ ಮನೆಯ ಮೇಲೆ ಐಟಿ ದಾಳಿ

    ಕೈ ನಾಯಕರ ಆಪ್ತರ ಮನೆಯ ಮೇಲೆ ಐಟಿ ದಾಳಿ

    ದಾವಣಗೆರೆ/ಬೆಳಗಾವಿ: ರಾಜ್ಯ ಕಾಂಗ್ರೆಸ್-ಜೆಡಿಎಸ್ ನಾಯಕರ ಆಪ್ತರಿಗೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ಕಳೆದ ವಾರ ಬಿಸಿ ಮುಟ್ಟಿಸಿದ್ದರು. ಇಂದು ರಾಜ್ಯದ ನಾಲ್ಕು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

    ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರರು, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಹಾಗೂ ಮಾಜಿ ಸಚಿವ ಅನಿಲ್ ಲಾಡ್ ಅವರ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ.

    ದಾವಣಗೆರೆಯ ವಿದ್ಯಾನಗರದ ವಿವೇಕಾನಂದ ಬಡಾವಣೆಯಲ್ಲಿರುವ ಉದಯ ಶಿವಕುಮಾರ್ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 10 ಜನ ಐಟಿ ಅಧಿಕಾರಿಗಳ ತಂಡವು ಉದಯ ಶಿವಕುಮಾರ್ ಅವರ ಮನೆಯಲ್ಲಿರುವ ಅಪಾರ ಪ್ರಮಾಣದ ಕಡತಗಳ ಪರಿಶೀಲನೆ ನಡೆಸಿದೆ.

    ಉದಯ ಶಿವಕುಮಾರ್, ಎಸ್.ಎಸ್.ಮಲ್ಲಿಕಾರ್ಜುನ ಅವರ ಆಪ್ತರಾಗಿದ್ದಾರೆ. ಅವರು ದಾವಣಗೆರೆ ಜಿಲ್ಲೆಯ ಬಹುತೇಕ ಕಾಮಗಾರಿಗಳನ್ನು ಅವರು ಗುತ್ತಿಗೆ ಪಡೆದಿದ್ದಾರೆ. ಇತ್ತ ಜಾರಕಿಹೊಳಿ ಸಹೋದರರಾದ ಆಪ್ತ, ಉದ್ಯಮಿ ಜಯಶೀಲ ಶೆಟ್ಟಿ ಅವರ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಐಟಿ ಅಧಿಕಾರಿಗಳು ಗೋವಾ ಮೂಲದವರಾಗಿದ್ದು, ದಾಖಲೆಗಳ ಪರಿಶೀಲೆ ನಡೆಸಿದ್ದಾರೆ.

    ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಬೆಂಬಲಿಗ, ಗುತ್ತಿಗೆದಾರ ಪ್ರಕಾಶ ವಂಟಮುತ್ತೆ ಅವರ ಚಿಕ್ಕೋಡಿ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಸಂಸದರು, ಚುನಾವಣಾ ಸಂದರ್ಭದಲ್ಲಿ ಐಟಿ ದಾಳಿ ಮಾಡಿದ್ದು ತಪ್ಪು. ಗುತ್ತಿಗೆದಾರರ ಮೇಲೆ ಐಟಿ ರೇಡ್ ಮಾಡುವ ಮೂಲಕ ಭಯ ಹುಟ್ಟಿಸುವ ಪ್ರಯತ್ನ ನಡೆದಿದೆ. ನಾನು ಇದಕ್ಕೆ ಭಯಪಡುವುದಿಲ್ಲ ಎಂದು ತಿಳಿಸಿದ್ದಾರೆ.