Tag: Incovacc

  • ಮೂಗಿನ ಮೂಲಕ ತೆಗೆದುಕೊಳ್ಳಬಹುದಾದ ಲಸಿಕೆ- ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಲೆ ಎಷ್ಟು?

    ಮೂಗಿನ ಮೂಲಕ ತೆಗೆದುಕೊಳ್ಳಬಹುದಾದ ಲಸಿಕೆ- ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಲೆ ಎಷ್ಟು?

    ನವದೆಹಲಿ: ಕೋವ್ಯಾಕ್ಸಿನ್ (Covaxin) ಲಸಿಕೆಯನ್ನು ಅಭಿವೃದ್ಧಿಪಡಿಸಿರುವ ಹೈದರಾಬಾದ್‌ನ ಭಾರತ್ ಬಯೋಟೆಕ್ (Bharat Biotech) ಇಂಟ್ರಾನಾಸನಲ್ ಕೋವಿಡ್ ಲಸಿಕೆಯನ್ನು (Intranasal Covid Vaccine) ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದೀಗ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಇಂತಿಷ್ಟು ಹಣ ಪಾವತಿಸಿ ಈ ಲಸಿಕೆಯನ್ನು ಪಡೆದುಕೊಳ್ಳಬಹುದಾಗಿದೆ.

    ವರದಿಗಳ ಪ್ರಕಾರ ಖಾಸಗಿ ಆಸ್ಪತ್ರೆಗಳಲ್ಲಿ ಈ ಲಸಿಕೆಯನ್ನು ಜಿಎಸ್‌ಟಿ ಹೊರತುಪಡಿಸಿ 800 ರೂ.ಗೆ ಪಡೆದುಕೊಳ್ಳಬಹುದು. ಸರ್ಕಾರಿ ಆಸ್ಪತ್ರೆಯಲ್ಲಿ ಇದರ ಪ್ರತಿ ಡೋಸ್‌ಗೆ 325 ರೂ. ಬೆಲೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

    ಭಾರತ ಸರ್ಕಾರ ಮೂಗಿನ ಮೂಲಕ ಪಡೆಯಬಹುದಾದ ಲಸಿಕೆಗೆ ಅನುಮೋದನೆ ನೀಡಿದೆ. ಇದನ್ನು ಕೋವಿಶೀಲ್ಡ್ ಅಥವಾ ಕೋವಾಕ್ಸಿನ್ ತೆಗೆದುಕೊಂಡವರು ಬೂಸ್ಟರ್ ಡೋಸ್ ಆಗಿ ತೆಗೆದುಕೊಳ್ಳಬಹುದು. ಸೂಜಿ ರಹಿತವಾಗಿರುವ iNCOVACC  ಲಸಿಕೆ ಜನವರಿ 4ನೇ ವಾರದಲ್ಲಿ ಲಭ್ಯವಾಗಲಿದೆ. ಇದನ್ನೂ ಓದಿ: ಜನರಿಗೆ ಮಾಸ್ಕ್ ಹಾಕಿ ಅನ್ನೋ ಬದಲು ಒಂದಷ್ಟು ಎಚ್ಚರಿಕೆ ಕ್ರಮ ಕೈಗೊಳ್ಳಲಿ: ಖಾದರ್ ಆಗ್ರಹ

    ಮೂಗಿನಿಂದ ಪಡೆಯಬಹುದಾದ iNCOVACC  ಲಸಿಕೆಯನ್ನು 2 ಡ್ರಾಪ್‌ನಂತೆ ಹಾಕಲಾಗುತ್ತದೆ. ಒಂದು ಬಾರಿ ಈ ಲಸಿಕೆಯನ್ನು ಪಡೆದ ಬಳಿಕ ಇನ್ನೊಂದು ಲಸಿಕೆಯನ್ನು 4 ವಾರಗಳ ಬಳಿಕ ಹಾಕಿಸಿಕೊಳ್ಳಬೇಕಾಗುತ್ತದೆ.

    ನವೆಂಬರ್‌ನಲ್ಲಿ ಡ್ರಗ್ ಕಂಟ್ರೋಲ್ ಜನರಲ್ ಆಫ್ ಇಂಡಿಯಾ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್‌ನಂತೆ iNCOVACC  ಲಸಿಕೆಯನ್ನು ನೀಡಬಹುದು ಎಂದು ಅನುಮೋದನೆ ನೀಡಿತ್ತು. ಇದನ್ನೂ ಓದಿ: ವೈಕುಂಠ ಏಕಾದಶಿ, ಸಂಕ್ರಾಂತಿಗೂ ಕೊರೊನಾ ಕರಿನೆರಳು – ದೇವಾಲಯಗಳಿಗೆ ಟಫ್ ರೂಲ್ಸ್?

    Live Tv
    [brid partner=56869869 player=32851 video=960834 autoplay=true]

  • ನಾವೇ ಚೀನಾದ ವುಹಾನ್‌ಗೆ ಹೋಗಿ ವೈರಸ್ ಬಿಟ್ಟಿದ್ವಾ – ಕಾಂಗ್ರೆಸ್‌ಗೆ ಸುಧಾಕರ್ ಪ್ರಶ್ನೆ

    ನಾವೇ ಚೀನಾದ ವುಹಾನ್‌ಗೆ ಹೋಗಿ ವೈರಸ್ ಬಿಟ್ಟಿದ್ವಾ – ಕಾಂಗ್ರೆಸ್‌ಗೆ ಸುಧಾಕರ್ ಪ್ರಶ್ನೆ

    ಚಿಕ್ಕಬಳ್ಳಾಪುರ: ಇಡೀ ವಿಶ್ವದಲ್ಲೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ರೆ ಕಾಂಗ್ರೆಸ್‌ನವರು ನಾವೇ ಚೀನಾದ (China) ವುಹಾನ್‌ಗೆ ಹೋಗಿ ಕೊರೊನಾ ವೈರಸ್ (Corona Virus) ಬಿಟ್ಟಂತೆ ಮಾತನಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ (K Sudhakar) ಕಿಡಿಕಾರಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ವಿಶ್ವದಲ್ಲೇ ಕೋವಿಡ್‌ನಿಂದ ಏನಾಗ್ತಿದೆ ಅಂತ ಜನಸಾಮಾನ್ಯರಿಗೆ ಗೊತ್ತಾಗುತ್ತಿದೆ. ಆದ್ರೆ ಕಾಂಗ್ರೆಸ್ (Congress) ನಾಯಕರಿಗೆ ಏಕೆ ಗೊತ್ತಾಗುತ್ತಿಲ್ಲ? ಯಾವುದೇ ಸರ್ಕಾರ ಇರಲಿ, ಜನರ ರಕ್ಷಣೆಗೆ ಅದ್ಯತೆ ನೀಡಬೇಕು. ಸಹಕಾರ ಕೊಡದಿದ್ರೂ ಪರವಾಗಿಲ್ಲ ಸುಮ್ಮನಾದರೂ ಇರಿ. ಆದರೆ ಜನರ ಆರೋಗ್ಯದ ಜೊತೆ ಚೆಲ್ಲಾಟ ಆಡಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಇನ್ನೂ ಭಾರತ್ ಬಯೋಟೆಕ್‌ನ ನಸೆಲ್ ಸ್ಪೈ (Incovacc) ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ನೆಜಲ್ ಸ್ಪೈ ವ್ಯಾಕ್ಸಿನೇಷನ್ ನಿಂದಾಗಿ ಮೂಗಿನ ಮೂಲಕ ಡ್ರಾಪ್ಸ್ ಹಾಕಿಕೊಳ್ಳಲು ಅವಕಾಶ ಆಗಲಿದೆ. ಇದು ಲಸಿಕೆ (Vaccine) ನೀಡುವ ವೇಗವನ್ನು ಹೆಚ್ಚಿಸುತ್ತದೆ. ಇದು ಕೂಡ ಬಹಳ ಪ್ರಭಾವಿತವಾಗಿ ಕೆಲಸ ಮಾಡಲಿದೆ ಅಂತಾ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಸ್, ಸಿನಿಮಾ ಥಿಯೇಟರ್, ಪಬ್ ಬಾರ್‌ಗಳಲ್ಲೂ ಮಾಸ್ಕ್ ಅಗತ್ಯ – ರಾಜ್ಯ ಆರೋಗ್ಯ ಇಲಾಖೆ ಗೈಡ್‌ಲೈನ್ಸ್‌ನಲ್ಲಿ ಏನೇನಿದೆ?

    ರಾಜ್ಯದಲ್ಲಿ ಕೋವಿಡ್ ಲಸಿಕೆಗಳಿಗೆ ಯಾವುದೇ ಕೊರತೆಯಿಲ್ಲ. ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ಸ್ಟಾಕ್ ಇದೆ. ಇನ್ನೂ ನಸೆಲ್ ಸ್ಪೈ ಕೋವ್ಯಾಕ್ಸಿನ್, ಕೋವಿಶೀಲ್ಡ್, ಕಾರ್ಬೆವ್ಯಾಕ್ಸ್‌ಗೆ ಕೇಂದ್ರಕ್ಕೆ ಮನವಿ ಮಾಡಲಿದ್ದೇನೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಪರೀಕ್ಷೆ ಹೆಚ್ಚಿಸಿ.. ಎಲ್ಲರೂ ಮಾಸ್ಕ್ ಧರಿಸಿ – ಮೋದಿ ಸಲಹೆ

    Live Tv
    [brid partner=56869869 player=32851 video=960834 autoplay=true]