Tag: Ind vs Ban

  • ಗಿಲ್‌ ಶತಕದಾಟ, ಶಮಿ ಬೆಂಕಿ ಬೌಲಿಂಗ್ – ಬಾಂಗ್ಲಾ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

    ಗಿಲ್‌ ಶತಕದಾಟ, ಶಮಿ ಬೆಂಕಿ ಬೌಲಿಂಗ್ – ಬಾಂಗ್ಲಾ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

    ದೆಲ್ಲಿ: ಗಿಲ್‌ ಶತಕದಾಟ, ಶಮಿ ಬೆಂಕಿ ಬೌಲಿಂಗ್‌ ನೆರವಿನಿಂದ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಬಾಂಗ್ಲಾದೇಶದ ವಿರುದ್ಧ ಟೀಂ ಇಂಡಿಯಾ 6 ವಿಕೆಟ್‌ಗಳ ಜಯ ಸಾಧಿಸಿದೆ. ಟೂರ್ನಿಯಲ್ಲಿ ಭಾರತ ಶುಭಾರಂಭ ಮಾಡಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾ 49.4 ಓವರ್‌ಗಳಿಗೆ ಆಲೌಟ್‌ ಆಗಿ 228 ರನ್‌ ಗಳಿಸಿತು. 229 ರನ್‌ ಗುರಿ ಬೆನ್ನತ್ತಿದ ಟೀಂ ಇಂಡಿಯಾ 46.3 ಓವರ್‌ಗಳಿಗೆ 4 ವಿಕೆಟ್‌ ನಷ್ಟಕ್ಕೆ ಗುರಿ ತಲುಪಿ ಗೆಲುವು ದಾಖಲಿಸಿದೆ.

    ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮಾ, ಶುಭಮನ್‌ ಗಿಲ್‌ ಜೋಡಿ ಉತ್ತಮ ಪ್ರದರ್ಶನ ನೀಡಿತು. ಶರ್ಮಾ 41 ರನ್‌ ಗಳಿಸಿ ಔಟಾದರು. ವಿರಾಟ್‌ ಕೊಹ್ಲಿ 22, ಶ್ರೇಯಸ್‌ ಅಯ್ಯರ್‌ 15 ರನ್‌ ಗಳಿಸಿದರು. ಗಿಲ್‌ ಶತಕ ಸಿಡಿಸಿ (101 ರನ್‌, 9 ಫೋರ್‌, 2 ಸಿಕ್ಸರ್‌) ತಂಡವನ್ನು ಗೆಲುವಿನ ದಡ ಸೇರಿಸಿದರು. ಗಿಲ್‌ಗೆ ಕೆ.ಎಲ್‌.ರಾಹುಲ್‌ ಸಾಥ್‌ ನೀಡಿ 41 ರನ್‌ ಕಲೆ ಹಾಕಿದರು.

    ಬಾಂಗ್ಲಾ ಪರ ಜಾಕರ್ ಅಲಿ ಅರ್ಧಶತಕ (68), ತಾಂಜಿದ್ ಹಸನ್ 25, ರಿಷದ್ ಹೊಸೇನ್ 18 ರನ್‌ ಗಳಿಸಿದರು. ತಂಡದ ಕ್ಯಾಪ್ಟನ್‌ ನಜ್ಮುಲ್ ಹೊಸೇನ್ ಶಾಂತೊ ಸೇರಿದಂತೆ ಪ್ರಮುಖ ಆಟಗಾರರೇ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು.

    ಭಾರತದ ಬೌಲರ್‌ಗಳು ಬಾಂಗ್ಲಾ ಬ್ಯಾಟರ್‌ಗಳ ಬೆವರಿಳಿಸಿದರು. ಟೀಂ ಇಂಡಿಯಾ ಪರ ಮೊಹಮ್ಮದ್‌ ಶಮಿ 5 ವಿಕೆಟ್‌ ಕಿತ್ತು ಮಿಂಚಿದರು. ಹರ್ಷಿತ್‌ ರಾಣಾ 3 ವಿಕೆಟ್‌ ಕಬಳಿಸಿ ಗಮನ ಸೆಳೆದರು. ಅಕ್ಷರ್‌ ಪಟೇಲ್‌ 2 ವಿಕೆಟ್‌ ಕಿತ್ತರು.

  • ಶಮಿಗೆ 5 ವಿಕೆಟ್‌; ಬಾಂಗ್ಲಾ ಆಲೌಟ್‌ – ಟೀಂ ಇಂಡಿಯಾಗೆ 229 ರನ್‌ಗಳ ಗುರಿ

    ಶಮಿಗೆ 5 ವಿಕೆಟ್‌; ಬಾಂಗ್ಲಾ ಆಲೌಟ್‌ – ಟೀಂ ಇಂಡಿಯಾಗೆ 229 ರನ್‌ಗಳ ಗುರಿ

    – ಶತಕ ಸಿಡಿಸಿ ಬಾಂಗ್ಲಾಗೆ ನೆರವಾದ ತೋಹಿದ್ ಹೃದಯ್

    ದುಬೈ: ಇಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಎರಡನೇ ಪಂದ್ಯದಲ್ಲಿ 228 ರನ್‌ಗಳಿಗೆ ಆಲೌಟ್‌ ಆದ ಬಾಂಗ್ಲಾದೇಶ ಟೀಂ ಇಂಡಿಯಾಗೆ 229 ರನ್‌ಗಳ ಗುರಿ ನೀಡಿದೆ. ಭಾರತ ಪರ ಮಹಮ್ಮದ್‌ ಶಮಿ 5 ವಿಕೆಟ್‌ ಕಿತ್ತು ಮಿಂಚಿದರು.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾ 49.4 ಬಾಲ್‌ಗಳಿಗೆ ಆಲೌಟ್‌ ಆಗಿ 228 ರನ್‌ ಗಳಿಸಿತು. ತೋಹಿದ್ ಹೃದಯ್ ಶತಕ ಸಿಡಿಸಿ ಗಮನ ಸೆಳೆದರು.

    ಜಾಕರ್ ಅಲಿ ಅರ್ಧಶತಕ (68), ತಾಂಜಿದ್ ಹಸನ್ 25, ರಿಷದ್ ಹೊಸೇನ್ 18 ರನ್‌ ಗಳಿಸಿದರು. ತಂಡದ ಕ್ಯಾಪ್ಟನ್‌ ನಜ್ಮುಲ್ ಹೊಸೇನ್ ಶಾಂತೊ ಸೇರಿದಂತೆ ಪ್ರಮುಖ ಆಟಗಾರರೇ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು.

    ಭಾರತದ ಬೌಲರ್‌ಗಳು ಬಾಂಗ್ಲಾ ಬ್ಯಾಟರ್‌ಗಳ ಬೆವರಿಳಿಸಿದರು. ಟೀಂ ಇಂಡಿಯಾ ಪರ ಮೊಹಮ್ಮದ್‌ ಶಮಿ 5 ವಿಕೆಟ್‌ ಕಿತ್ತು ಮಿಂಚಿದರು. ಹರ್ಷಿತ್‌ ರಾಣಾ 3 ವಿಕೆಟ್‌ ಕಬಳಿಸಿ ಗಮನ ಸೆಳೆದರು. ಅಕ್ಷರ್‌ ಪಟೇಲ್‌ 2 ವಿಕೆಟ್‌ ಕಿತ್ತರು.

  • ಭಾರತ-ಬಾಂಗ್ಲಾ 2ನೇ ಟೆಸ್ಟ್ ಪಂದ್ಯಕ್ಕೆ ಮಳೆ ಕಾಟ – ಮೊದಲ ದಿನದಂತ್ಯಕ್ಕೆ ಬಾಂಗ್ಲಾದೇಶ 107ಕ್ಕೆ 3 ವಿಕೆಟ್‌

    ಭಾರತ-ಬಾಂಗ್ಲಾ 2ನೇ ಟೆಸ್ಟ್ ಪಂದ್ಯಕ್ಕೆ ಮಳೆ ಕಾಟ – ಮೊದಲ ದಿನದಂತ್ಯಕ್ಕೆ ಬಾಂಗ್ಲಾದೇಶ 107ಕ್ಕೆ 3 ವಿಕೆಟ್‌

    – ದಿಗ್ಗಜ ಅನಿಲ್‌ ಕುಂಬ್ಳೆ ದಾಖಲೆ ಮುರಿದ ಅಶ್ವಿನ್‌

    ಕಾನ್ಪುರ: ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ (Ind vs Ban) ತಂಡಗಳು ಕಾದಾಟ ನಡೆಸುತ್ತಿವೆ. ಮಳೆಯ ಕಾಟದಿಂದಾಗಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ 2ನೇ ಟೆಸ್ಟ್‌ ಪಂದ್ಯದ (Test Cricket Match) ಮೊದಲ ದಿನ ಕೇವಲ 35 ಓವರ್‌ಗಳಿಗೆ ಮುಕ್ತಾಯಗೊಂಡಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ ಮೊದಲ ದಿನದ ಅಂತ್ಯಕ್ಕೆ 3 ವಿಕೆಟ್‌ ಕಳೆದುಕೊಂಡು 107 ರನ್‌ ಗಳಿಸಿದೆ.

    ಕಾನ್ಪುರದ (Kanpur) ಗ್ರೀನ್‌ ಪಾರ್ಕ್‌ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್‌ ಪಂದ್ಯಕ್ಕೆ ಮಳೆಯ ಕಾಟದಿಂದಾಗಿ ಟಾಸ್‌ ತಡವಾಯಿತು. ಜೊತೆಗೆ ಮೊದಲ ದಿನದಾಟವನ್ನು ಕೇವಲ 35 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾ ತಂಡ 26 ರನ್‌ಳಿಗೆ ಮೊದಲ ವಿಕೆಟ್‌ ಪಡೆದರೂ ಬಳಿಕ ಮೊಮಿನುಲ್ ಹಕ್, ನಾಯಕ ನಜ್ಮುಲ್‌ ಹೊಸೈನ್‌ ಸ್ಯಾಂಟೋ (Najmul Hossain Shanto) ಅವರ ಸಾಧಾರಣ ಬ್ಯಾಟಿಂಗ್‌ ಪ್ರದರ್ಶನದಿಂದ 100 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಇದನ್ನೂ ಓದಿ: ವೆಸ್ಟ್ ಇಂಡೀಸ್ ಆಲ್‌ರೌಂಡರ್‌ ಡ್ವೇನ್ ಬ್ರಾವೋ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ

    ಶಾದ್ಮಾನ್‌ ಇಸ್ಲಾಂ 24 ರನ್‌ ಗಳಿಸಿದ್ರೆ, ಸ್ಯಾಂಟೋ 31 ರನ್‌ ಗಳಿಸಿ ಔಟಾದರು. ಮತ್ತೊಬ್ಬ ಆರಂಭಿಕ ಝಾಕಿರ್‌ ಹಸನ್‌ ಶೂನ್ಯ ಸುತ್ತಿದರು. ಇನ್ನೂ 81 ಎಸೆತಗಳಲ್ಲಿ 40 ರನ್‌ ಗಳಿಸಿರುವ ಮೊಮಿನುಲ್ ಹಕ್ ಮತ್ತು ಮುಶ್ಫಿಕರ್ ರಹೀಮ್ 6 ರನ್‌ ಗಳಿಸಿದ್ದು, ಕ್ರೀಸ್‌ನಲ್ಲಿದ್ದಾರೆ. ಶನಿವಾರ 2ನೇ ದಿನದಾಟ ಮುಂದುವರಿಸಲಿದ್ದಾರೆ.

    ಮೊದಲ ಟೆಸ್ಟ್‌ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಪಡೆದು ದಿಗ್ಗಜರ ಎಲೈಟ್‌ ಪಟ್ಟಿ ಸೇರಿದ್ದ ಆರ್‌. ಅಶ್ವಿನ್‌ 2ನೇ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಒಂದು ವಿಕೆಟ್‌ ಪಡೆದರೆ, ವೇಗಿ ಆಕಾಶ್‌ ದೀಪ್‌ 2 ವಿಕೆಟ್‌ ಪಡೆದು ಮಿಂಚಿದ್ದಾರೆ. ಇದನ್ನೂ ಓದಿ: IPL 2025 Auction: ಮೆಗಾ ಹರಾಜಿಗೂ ಮುನ್ನ ಬಿಸಿಸಿಐನಿಂದ ಆಗುತ್ತಾ ಪ್ರಮುಖ ಬದಲಾವಣೆ?

    ದಿಗ್ಗಜ ಅನಿಲ್‌ ಕುಂಬ್ಳೆ ದಾಖಲೆ ಮುರಿದ ಅಶ್ವಿನ್‌:
    ಬಾಂಗ್ಲಾ ನಾಯಕ ನಜ್ಮುಲ್‌ ಹುಸೇನ್‌ ಸ್ಯಾಂಟೋ ಅವರ ವಿಕೆಟ್‌ ಔಟ್‌ ಮಾಡಿದ ಭಾರತದ ರವಿಚಂದ್ರನ್‌ ಅಶ್ವಿನ್‌ (Ravichandran Ashwin) ಅವರು ಏಷ್ಯಾದಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಸ್ಪಿನ್‌ ದಿಗ್ಗಜ ಅನಿಲ್‌ ಕಂಬ್ಳೆಯನ್ನು ಹಿಂದಿಕ್ಕಿದ್ದಾರೆ. ಆರ್‌ ಅಶ್ವಿನ್‌ ಎಸೆದ 29ನೇ ಓವರ್‌ನ ಕೊನೆಯ ಎಸೆತವನ್ನು ಅರಿಯುವಲ್ಲಿ ವಿಫಲರಾದ ಸ್ಯಾಂಟೋ ಚೆಂಡನ್ನು ಪ್ಯಾಡ್‌ ಮೇಲೆ ತಾಗಿಸಿಕೊಂಡರು. ಆ ಮೂಲಕ ಎಲ್‌ಬಿಡಬ್ಲ್ಯು ಔಟ್‌ಗೆ ತುತ್ತಾದರು. ಇದರೊಂದಿಗೆ ಅಶ್ವಿನ್‌ ಅವರು ಏಷ್ಯಾ ನೆಲದಲ್ಲಿ 420 ಟೆಸ್ಟ್‌ ವಿಕೆಟ್‌ಗಳನ್ನು ಪೂರ್ಣಗೊಳಿಸಿದರು. ಆ ಮೂಲಕ 419 ವಿಕೆಟ್‌ಗಳನ್ನು ಕಬಳಿಸಿದ್ದ ಸ್ಪಿನ್ ದಿಗ್ಗಜ ಅನಿಲ್‌ ಕುಂಬ್ಳೆ ದಾಖಲೆಯನ್ನು ಮುರಿದಿದ್ದಾರೆ.

  • ಇಂದಿನಿಂದ ಭಾರತ v/s ಬಾಂಗ್ಲಾ ಟೆಸ್ಟ್‌ ಸರಣಿ ಶುರು – ವರ್ಕೌಟ್‌ ಆಗುತ್ತಾ ಗಂಭೀರ್‌ ಪ್ಲ್ಯಾನ್‌?

    ಇಂದಿನಿಂದ ಭಾರತ v/s ಬಾಂಗ್ಲಾ ಟೆಸ್ಟ್‌ ಸರಣಿ ಶುರು – ವರ್ಕೌಟ್‌ ಆಗುತ್ತಾ ಗಂಭೀರ್‌ ಪ್ಲ್ಯಾನ್‌?

    ಚೆನ್ನೈ: ಭಾರತ ಮತ್ತು ಬಾಂಗ್ಲಾದೇಶ (Ind vs Ban) ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಇಂದಿನಿಂದ (ಸೆ.19) ಆರಂಭವಾಗುತ್ತಿದೆ. ಚೆನ್ನೈನ ಎಂ.ಎ ಚಿದಂಬರಂ @ಚೆಪಾಕ್ ಕ್ರೀಡಾಂಗಣದಲ್ಲಿ ಸರಣಿಯ ಮೊದಲ ಟೆಸ್ಟ್‌ ಪಂದ್ಯ ನಡೆಯಲಿದೆ.‌ 2023-25ನೇ ಸಾಲಿನ ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ (WTC) ಭಾಗವಾಗಿ ನಡೆಯುತ್ತಿರುವ ಟೆಸ್ಟ್‌ ಪಂದ್ಯ ಉಭಯ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದೆ.

    ಪ್ರಸಕ್ತ ವರ್ಷದ ಆರಂಭದಲ್ಲಿ ಭಾರತವು ಆಡಿದ್ದ ಕೊನೆಯ ಟೆಸ್ಟ್‌ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ 4-1 ಅಂತರದಿಂದ ಜಯ ಸಾಧಿಸಿತ್ತು. ಅದಾದ ಬಳಿಕ ಟೆಸ್ಟ್‌ ಸರಣಿಯಲ್ಲಿ ತಂಡ ಕಣಕ್ಕಿಳಿದಿಲ್ಲ. ಕೊನೆಯ ಬಾರಿಗೆ ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಗೆಲುವು ಸಾಧಿಸಿದ್ದ ಭಾರತ, ಏಕದಿನ ಸರಣಿ ಸೋತು ತೀವ್ರ ಮುಖಭಂಗ ಅನುಭವಿಸಿತ್ತು. ಏಕದಿನ ಸರಣಿ ಸೋತಿದ್ದ ನಾಯಕ ರೋಹಿತ್‌ ಶರ್ಮಾ (Rohit Sharma) ಪಡೆ, ಇದೀಗ ನಜ್ಮುಲ್ ಹೊಸೈನ್ ಶಾಂಟೊ ಬಳಗದ ವಿರುದ್ಧ ತವರಿನ ಸರಣಿ ಗೆಲುವಿನ ನಿರೀಕ್ಷೆಯಲ್ಲಿದೆ. ಇದನ್ನೂ ಓದಿ: Asian Champions Trophy| ಅತಿಥೇಯ ಚೀನಾಗೆ ಸೋಲು – 5ನೇ ಬಾರಿ ಭಾರತ ಚಾಂಪಿಯನ್‌

    ನೂತನ ಮುಖ್ಯ ಕೋಚ್‌ ಆಗಿ ನೇಮಕಗೊಂಡ ಬಳಿಕ, ಗೌತಮ್‌ ಗಂಭೀರ್‌ ಅವರಿಗೆ ಇದು ಮೊದಲ ಟೆಸ್ಟ್‌ ಸರಯಾಗಿದ್ದು ಸವಾಲಿನದ್ದು ಸಹ ಆಗಿದೆ. ಭಾರತದ ವಿರುದ್ಧ ಬಾಂಗ್ಲಾದೇಶ ತಂಡ ಇದುವರೆಗೂ ಟೆಸ್ಟ್‌ ಸರಣಿ ಗೆದ್ದಿಲ್ಲ. ಹಾಗಂತ, ಬಾಂಗ್ಲಾ ಹುಲಿಗಳನ್ನು ರೋಹಿತ್ ಶರ್ಮಾ ಪಡೆ ಲಘುವಾಗಿ ಪರಿಗಣಿಸುವಂತಿಲ್ಲ. ಏಕೆಂದರೆ ಇತ್ತೀಚೆಗೆ ಬಾಂಗ್ಲಾದೇಶವು ಎಲ್ಲಾ ಮೂರು ಸ್ವರೂಪಗಳಲ್ಲಿಯೂ ಉತ್ತಮ ಪ್ರದರ್ಶನ ನೀಡುತ್ತಿದೆ. ಈ ತಿಂಗಳ ಆರಂಭದಲ್ಲಿ ಆಡಿದ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಪಾಕಿಸ್ತಾನವನ್ನು ಅವರ ತವರಲ್ಲೇ ಬಗ್ಗು ಬಡಿದು 2-0 ಅಂತರದಲ್ಲಿ ವೈಟ್‌ ವಾಶ್‌ ಮಾಡಿತ್ತು. ಅಲ್ಲಿಂದ ಬಾಂಗ್ಲಾ ಆಟಗಾರರು ಭಾರತ ವಿರುದ್ಧವೂ ಸರಣಿ ಗೆಲುವಿನ ಗುರಿಯೊಂದಿಗೆ ಚೆನ್ನೈಗೆ ಆಗಮಿಸಿದ್ದಾರೆ. ‌

    ಭಾರತವೇನಾದರೂ ಚೆನ್ನೈ ಟೆಸ್ಟ್‌ ಗೆದ್ದರೆ, ಟೆಸ್ಟ್‌ ಸ್ವರೂಪದಲ್ಲಿ ಇದೇ ಮೊದಲ ಬಾರಿಗೆ ಸೋಲಿಗಿಂತ ಹೆಚ್ಚು ಗೆಲುವು ಸಂಪಾದಿಸಿದ ಸಾಧನೆ ಮಾಡಿದಂತಾಗುತ್ತದೆ. ಇದನ್ನೂ ಓದಿ: ಭಾರತ-ಬಾಂಗ್ಲಾ ಟೆಸ್ಟ್ ಸರಣಿ: 5 ದಾಖಲೆಗಳನ್ನು ಮುರಿದು ಹೊಸ ದಾಖಲೆ ನಿರ್ಮಿಸ್ತಾರಾ ಅಶ್ವಿನ್?

    ಚೆನ್ನೈ ಹವಾಮಾನ ವರದಿ ಹೇಗಿದೆ?
    ಇಂದು (ಸೆ.19) ಚೆನ್ನೈನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇದೆ. 1% ಮಳೆ ಸಾಧ್ಯತೆಯಿದ್ದು, 78%, ಆದ್ರತೆ ಇರಲಿದೆ. 11 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ವಿರಾಟ್‌ ಕೊಹ್ಲಿ ನನ್ನ ನಾಯಕತ್ವದಡಿಯಲ್ಲಿ ಆಡಿದ್ದಾರೆ: ತೇಜಸ್ವಿ ಯಾದವ್‌

  • Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!

    Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!

    ಡಂಬುಲ್ಲಾ: ಮಹಿಳಾ ಏಷ್ಯಾಕಪ್‌ (Women’s Asia Cup) ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಭಾರತೀಯ ಮಹಿಳಾ ಕ್ರಿಕೆಟ್‌ ತಂಡ (India Womens Team) ಸತತ 5ನೇ ಬಾರಿಗೆ ಫೈನಲ್‌ ತಲುಪಿತು.

    2012, 2016, 2018, 2022ರಲ್ಲಿ ಫೈನಲ್‌ ಪ್ರವೇಶಿಸಿದ್ದ ಭಾರತ 2018 ಹೊರತುಪಡಿಸಿ ಮೂರು ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. 2018ರಲ್ಲಿ ಬಾಂಗ್ಲಾ (Bangladesh Womens) ವಿರುದ್ಧವೇ ಸೋತು ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಇದೀಗ ಸತತ 5ನೇ ಬಾರಿಗೆ ಫೈನಲ್‌ ಪ್ರವೇಶಿಸಿರುವ ಭಾರತ ಮತ್ತೊಮ್ಮೆ ಚಾಂಪಿಯನ್‌ ಆಗಿ ಹೊರಹೊಮ್ಮುವ ಭರವಸೆ ಮೂಡಿಸಿದೆ.

    ಶುಕ್ರವಾರ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 80 ರನ್​ ಬಾರಿಸಿತು. ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ ಭಾರತ 11 ಓವರ್​ಗಳಲ್ಲಿ ಯಾವುದೇ ವಿಕೆಟ್​ ನಷ್ಟವಿಲ್ಲದೇ 83 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

    ಚೇಸಿಂಗ್‌ ಆರಂಭಿಸಿದ ಭಾರತದ ಪರ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ (Shafali Verma) 26 ರನ್‌ (28 ಎಸೆತ, 2 ಬೌಂಡರಿ), ಸ್ಮೃತಿ ಮಂಧಾನ (Smriti Mandhana) 55 ರನ್‌ (39 ಎಸೆತ, 9 ಬೌಂಡರಿ, 1 ಸಿಕ್ಸರ್‌) ಬಾರಿಸಿ ಅಜೇಯರಾಗುಳಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಬಾಂಗ್ಲಾ ದೇಶದ ವಿರುದ್ಧ ಭಾರತದ ಬೌಲರ್‌ಗಳು ಘಾತುಕ ದಾಳಿ ನಡೆಸಿದರು. ಮಧ್ಯಮವೇಗಿ ರೇಣುಕಾ ಸಿಂಗ್‌ 4 ಓವರ್‌ಗಳಲ್ಲಿ 1 ಮೇಡಿನ್‌ ಸಹಿತ ಕೇವಲ 10 ರನ್‌ ಬಿಟ್ಟುಕೊಟ್ಟು 3 ವಿಕೆಟ್‌ ಕಿತ್ತರು. ಇದೇ ವೇಳೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 50 ವಿಕೆಟ್​ಗಳ ಮೈಲುಗಲ್ಲು ತಲುಪಿದರು. ಇದರೊಂದಿಗೆ ರಾಧಾ ಯಾದವ್‌ 4 ಓವರ್‌ಗಳಲ್ಲಿ 3 ವಿಕೆಟ್‌ ಕಿತ್ತರೆ, ಪೂಜಾ ವಸ್ತ್ರಕಾರ್‌ ಹಾಗೂ ದೀಪ್ತಿ ಶರ್ಮಾ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಬಾಂಗ್ಲಾ ಪರ ನಾಯಕಿ ನಿಗರ್ ಸುಲ್ತಾನಾ 51 ಎಸೆತ ಎದುರಿಸಿ 32 ರನ್​, ಶೋರ್ನಾ ಅಖ್ತರ್​ 19 ರನ್ ಗಳಿಸಿದ್ರೆ, ಉಳಿದ ಆಟಗಾರರು ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದರು.

    ಶುಕ್ರವಾರ (ಇಂದು) ರಾತ್ರಿ ನಡೆಯುವ ಮತ್ತೊಂದು ಸೆಮಿಫೈನಲ್​ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಆತಿಥೇಯ ಶ್ರೀಲಂಕಾ ಮುಖಾಮುಖಿಯಾಗಲಿವೆ. ಗೆದ್ದ ತಂಡ ಫೈನಲ್‌ನಲ್ಲಿ ಭಾರತ ತಂಡದೊಂದಿಗೆ ಫೈನಲ್‌ನಲ್ಲಿ ಸೆಣಸಲಿದೆ.

  • ಬಾಂಗ್ಲಾ ವಿರುದ್ಧ ಭಾರತಕ್ಕೆ 50 ರನ್‌ಗಳ ಭರ್ಜರಿ ಜಯ – ಸೆಮಿಸ್ ಹಾದಿ ಸುಗಮ

    ಬಾಂಗ್ಲಾ ವಿರುದ್ಧ ಭಾರತಕ್ಕೆ 50 ರನ್‌ಗಳ ಭರ್ಜರಿ ಜಯ – ಸೆಮಿಸ್ ಹಾದಿ ಸುಗಮ

    -ಭಾರತ 196/5, ಬಾಂಗ್ಲಾದೇಶ 146/8

    ನಾರ್ತ್ ಸೌಂಡ್ (ಆ್ಯಂಟಿಗಾ): ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವೆ ನಡೆದ 2024ರ ಟಿ20 ವಿಶ್ವಕಪ್‌ನ ಸೂಪರ್-8 ಪಂದ್ಯದಲ್ಲಿ ಭಾರತ 196 ರನ್ ಗಳಿಸುವ ಮೂಲಕ ಭರ್ಜರಿ ಜಯ ಗಳಿಸಿದೆ.

    ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟ್ ಬೀಸಿದ ಭಾರತ ಒಟ್ಟು 20 ಓವರ್‌ಗಳಲ್ಲಿ 196 ರನ್ ಗಳಿಸಿ ಬಾಂಗ್ಲಾದೇಶಕ್ಕೆ 197 ರನ್‌ಗಳ ಗುರಿ ನೀಡಿತು. 197 ರನ್‌ಗಳ ಬೆನ್ನಟ್ಟಿದ ಬಾಂಗ್ಲಾ 20 ಓವರ್‌ಗಳಲ್ಲಿ 146 ರನ್‌ಗಳಿಸಿ ಸೋಲನ್ನು ಅನುಭವಿಸಿತು.

    ಭಾರತ ತಂಡದಿಂದ ಓಪನಿಂಗ್ ಬ್ಯಾಟ್ಸ್ಮನ್‌ಗಳಾಗಿ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಬ್ಯಾಟ್ ಬೀಸಿದರು. 11 ಎಸೆತಗಳಿಗೆ 23 ರನ್ ಸಿಡಿಸಿ ರೋಹಿತ್ ಶರ್ಮಾ ಔಟಾಗುವ ಮೂಲಕ ಟೀಂ ಇಂಡಿಯಾದ ಮೊದಲ ವಿಕೆಟ್ ಪತನಗೊಂಡಿತು. 11 ಬಾಲ್‌ಗಳಲ್ಲಿ ರೋಹಿತ್ ಶರ್ಮಾ 3 ಫೋರ್ ಹಾಗೂ 1 ಸಿಕ್ಸ್ ಸಿಡಿಸಿ ಒಟ್ಟು 23 ಅಂಕಗಳನ್ನು ತಂಡಕ್ಕೆ ಗಳಿಸಿಕೊಟ್ಟರು. ವಿರಾಟ್ ಕೊಹ್ಲಿ 28 ಬಾಲ್‌ಗಳಿಗೆ ಒಟ್ಟು 37 ರನ್ ಸಿಡಿಸಿ 2ನೇ ವಿಕೆಟ್ ಬಿಟ್ಟುಕೊಟ್ಟರು.

    ಬಳಿಕ ಕ್ರೀಸ್‌ಗೆ ಬಂದ ಸೂರ್ಯಕುಮಾರ್ ಯಾದವ್ ಮೊದಲ ಎಸೆತಕ್ಕೆ ಸಿಕ್ಸ್ ಬಾರಿಸಿ ಎರಡನೇ ಬಾಲ್ ಅನ್ನು ವಿಕೆಟ್ ಕೀಪರ್ ಕೈಗೆ ಕ್ಯಾಚ್ ನೀಡುವ ಮೂಲಕ ಒಟ್ಟು 6 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ರಿಷಭ್ ಪಂತ್ 4 ಫೋರ್ ಹಾಗೂ 2 ಸಿಕ್ಸ್ ಸಿಡಿಸಿ 24 ಬಾಲ್‌ಗಳಿಗೆ ಒಟ್ಟು 36 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

    ನಂತರ ಕ್ರೀಸ್‌ಗೆ ಮರಳಿದ ಶಿವಂ ದುಬೆ 24 ಎಸೆತಗಳಿಗೆ 34 ರನ್ ಸಿಡಿಸಿ ಔಟಾದರು. ಶಿವಂ ದುಬೆ ಹಾಗೂ ಹಾರ್ದಿಕ್ ಪಾಂಡ್ಯ ಜೊತೆಯಾಟವಾಡಿ ತಂಡಕ್ಕೆ 54 ರನ್ ಗಳಿಸಿಕೊಟ್ಟರು. ಅಕ್ಷರ್ ಪಟೇಲ್ 5 ಎಸೆತಗಳಿಗೆ 3 ರನ್ ಗಳಿಸಿ ಔಟಾಗದೇ ಆಟವನ್ನು ಕೊನೆಗೊಳಿಸಲು ಸಹಕರಿಸಿದರು. ಹಾರ್ದಿಕ್ ಪಾಂಡ್ಯ ಕೊನೆಯ 1 ಬಾಲ್‌ನಲ್ಲಿ ಫೋರ್ ಸಿಡಿಸಿ 27 ಎಸೆತಗಳಿಗೆ ಅರ್ಧಶತಕ ಪೂರ್ಣಗೊಳಿಸಿ ಔಟಾಗದೇ ಆಟವನ್ನು ಕೊನೆಗೊಳಿಸಿ ಬಾಂಗ್ಲಾದೇಶಕ್ಕೆ 197 ರನ್‌ಗಳ ಗುರಿ ನೀಡಿದರು.

    197 ರನ್‌ಗಳ ಬೆನ್ನಟ್ಟಿದ ಬಾಂಗ್ಲದೇಶ 20 ಓವರ್‌ಗಳಲ್ಲಿ 146 ರನ್ ಗಳಿಸಿ ಸೋಲನ್ನಪ್ಪಿತು. ಓಪನಿಂಗ್ ಬ್ಯಾಟ್ಸ್ಮೆನ್‌ಗಳಾಗಿ ಲಿಟನ್ ದಾಸ್ ಹಾಗೂ ತಂಜೀದ್ ಹಸನ್ ಬ್ಯಾಟ್ ಬೀಸಿದರು. 10 ಎಸೆತಗಳಿಗೆ 13 ರನ್ ಗಳಿಸಿ ಲಿಟನ್ ದಾಸ್ ಔಟಾದರು. 4.3 ಓವರ್‌ಗಳಿಗೆ ಬಾಂಗ್ಲಾ ಮೊದಲ ವಿಕೆಟ್ ಕಳೆದುಕೊಂಡಿತು. ಲಿಟನ್ ದಾಸ್ ಅವರನ್ನು ಔಟ್ ಮಾಡುವ ಮೂಲಕ ಹಾರ್ದಿಕ್ ಪಾಂಡ್ಯ ಭಾರತಕ್ಕೆ ಮೊದಲ ಯಶಸ್ಸನ್ನು ನೀಡಿದರು.

    ತಂಜೀದ್ ಹಸನ್ 31 ಎಸೆತಗಳಿಗೆ 29 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ತೌಹಿದ್ ಹೃದೋಯ್ 6 ಬಾಲ್‌ಗಳಿಗೆ 4 ರನ್ ಸಿಡಿಸಿ ವಿಕೆಟ್ ಬಿಟ್ಟುಕೊಟ್ಟರು. ಇವರ ಬಳಿಕ ಶಕೀಬ್ ಅಲ್ ಹಸನ್ 7 ಎಸೆತಗಳಿಗೆ 11 ರನ್ ಗಳಿಸಿ ಔಟಾದರು. ಬೂಮ್ರಾ ಮಾರಕ ಬೌಲಿಂಗ್‌ಗೆ ಬಾಂಗ್ಲಾ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂಟೋ 32 ಎಸೆತಗಳಲ್ಲಿ 40 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು. ಜಾಕಿರ್ ಅಲಿ 4 ಎಸೆತಗಳಿಗೆ ಕೇವಲ 1 ರನ್, ರಶೀದ್ ಹೊಸೈನ್ 24 ರನ್, ಮಹಮ್ಮದುಲ್ಲಾ 15 ಬಾಲ್‌ಗಳಿಗೆ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಔಟಾಗದೆ ಮೆಹದಿ ಹಸನ್ 5 ರನ್ ಹಾಗೂ ತಂಜೀಮ್ ಹಸನ್ ಶಕೀಬ್ 1 ರನ್‌ಗಳಿಸಿ ಆಟವನ್ನು ಪೂರ್ಣಗೊಳಿಸಿದರು.

  • Virat Kohli: ಸಚಿನ್‌ ತೆಂಡೂಲ್ಕರ್‌ ಮತ್ತೊಂದು ದಾಖಲೆ ಉಡೀಸ್‌ ಮಾಡಿದ ಕೊಹ್ಲಿ!

    Virat Kohli: ಸಚಿನ್‌ ತೆಂಡೂಲ್ಕರ್‌ ಮತ್ತೊಂದು ದಾಖಲೆ ಉಡೀಸ್‌ ಮಾಡಿದ ಕೊಹ್ಲಿ!

    ಪುಣೆ: ಚೇಸ್‌ ಮಾಸ್ಟರ್‌, ಸೂಪರ್‌ ಸ್ಟಾರ್‌ ಕ್ರಿಕೆಟಿಗ, ಕ್ರಿಕೆಟ್‌ ಲೋಕದ ಕಿಂಗ್‌ ಎಂದೇ ವಿಶ್ವದಾದ್ಯಂತ ಖ್ಯಾತಿ ಗಳಿಸಿರುವ ಟೀಂ ಇಂಡಿಯಾ ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ (Virat Kohli) ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ.

    2018ರ ಆಗಸ್ಟ್‌ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎಂಟ್ರಿ ಕೊಟ್ಟ ಕೊಹ್ಲಿ ಇದೀಗ ವಿಶ್ವದಲ್ಲೇ ಅತಿಹೆಚ್ಚು ರನ್‌ ಗಳಿಸಿದ ಟಾಪ್‌-5 ಬ್ಯಾಟರ್ಸ್‌ಗಳ ಪಟ್ಟಿ ಸೇರಿ ಇತಿಹಾಸ ನಿರ್ಮಿಸಿದ್ದು, ಒಂದು ಸ್ಥಾನ ಮುಂದಕ್ಕೆ ಜಿಗಿದಿದ್ದಾರೆ. ಇದನ್ನೂ ಓದಿ: ಬಾಬರ್‌ ಆಜಂ ಬಳಿಕ ನವೀನ್ ಉಲ್ ಹಕ್‌ನನ್ನ ಹೊಗಳಿದ ಗಂಭೀರ್‌ – ಕಾಲೆಳೆದ ಕೊಹ್ಲಿ ಫ್ಯಾನ್ಸ್‌

    ಬಾಂಗ್ಲಾದೇಶದ (Bangladesh) ವಿರುದ್ಧ ನಡೆದ ವಿಶ್ವಕಪ್‌ ಪಂದ್ಯದಲ್ಲಿ ಕೊಹ್ಲಿ 50ಕ್ಕೂ ಹೆಚ್ಚು ರನ್‌ ಗಳಿಸುವ ಮೂಲಕ ವೇಗವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 26,000 ರನ್‌ ಗಳಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. 511 ಪಂದ್ಯ ಮತ್ತು 567 ಇನ್ನಿಂಗ್ಸ್‌ಗಳಲ್ಲಿ 26 ಸಾವಿರ ರನ್‌ ಬಾರಿಸಿರುವ ಕೊಹ್ಲಿ 600 ಇನ್ನಿಂಗ್ಸ್‌ಗಳಲ್ಲಿ 26,000 ರನ್‌ ಪೂರೈಸಿದ ಸಚಿನ್‌ ತೆಂಡೂಲ್ಕರ್‌ (Sachin Tendulkar) ದಾಖಲೆಯನ್ನ ಉಡೀಸ್‌ ಮಾಡಿದ್ದಾರೆ. ಅಲ್ಲದೇ ಈ ಪಂದ್ಯದಲ್ಲಿ 106.18 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಕೊಹ್ಲಿ ಒಟ್ಟು 97 ಎಸೆತಗಳಲ್ಲಿ ಅಜೇಯ 103 ರನ್‌ ಬಾರಿಸಿ ಮಿಂಚಿದ್ದಾರೆ. ಇದನ್ನೂ ಓದಿ: Asia Cup 2023ː ಕಿಂಗ್‌ ಕೊಹ್ಲಿ, ರಾಹುಲ್‌ ಆರ್ಭಟಕ್ಕೆ‌ ಪಾಕ್‌ ಪಂಚರ್‌ – 357 ರನ್‌ ಗುರಿ ನೀಡಿದ ಭಾರತ

    ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 78ನೇ ಶತಕ ಸಿಡಿಸಿರುವ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ 48ನೇ ಶತಕ ಸಿಡಿಸಿದ್ದು, ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿಯಲು 2 ಶತಕಗಳಷ್ಟೇ ಬಾಕಿಯಿವೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್‌ ಗಳಿಸಿದ ಟಾಪ್‌ 5 ಆಟಗಾರರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇದನ್ನೂ ಓದಿ: Asia Cup 2023ː ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕಿಂಗ್‌ ಕೊಹ್ಲಿ ಮತ್ತೊಂದು ಮೈಲುಗಲ್ಲು

    ವೃತ್ತಿ ಜೀವನದಲ್ಲಿ 34,357 ರನ್‌ ಗಳಿಸಿರುವ ಸಚಿನ್‌ ತೆಂಡೂಲ್ಕರ್‌ ಅಗ್ರಸ್ಥಾನದಲ್ಲಿದ್ದರೆ, 28,016 ರನ್‌ ಗಳಿಸಿರುವ ಶ್ರೀಲಂಕಾ ತಂಡದ ಮಾಜಿ ಕ್ರಿಕೆಟಿಗ ಕುಮಾರ್‌ ಸಂಗಕ್ಕಾರ 2ನೇ ಸ್ಥಾನದಲ್ಲಿದ್ದಾರೆ. 27,483 ರನ್‌ ಗಳಿಸಿರುವ ರಿಕಿ ಪಾಟಿಂಗ್‌ 3ನೇ ಸ್ಥಾನದಲ್ಲಿದ್ದರೆ, 25,957 ರನ್‌ ಗಳಿಸಿದ್ದ ಮಹೇಲಾ ಜಯವರ್ಧನೆ ಅವರನ್ನು ಹಿಂದಿಕ್ಕಿ ಕೊಹ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Cup 2023: ದಾಖಲೆಯ ಶತಕ ಸಿಡಿಸಿ ಮೆರೆದಾಡಿದ ಕೊಹ್ಲಿ – ಬಾಂಗ್ಲಾ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ

    World Cup 2023: ದಾಖಲೆಯ ಶತಕ ಸಿಡಿಸಿ ಮೆರೆದಾಡಿದ ಕೊಹ್ಲಿ – ಬಾಂಗ್ಲಾ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ

    ಪುಣೆ: ವಿರಾಟ್‌ ಕೊಹ್ಲಿ (Virat Kohli) ಅಜೇಯ ಶತಕ, ಶುಭಮನ್‌ ಗಿಲ್‌ (Shubman Gill) ಅರ್ಧಶತಕ, ರೋಹಿತ್‌ ಶರ್ಮಾ ಹಾಗೂ ಕೆ.ಎಲ್‌ ರಾಹುಲ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಇನ್ನೂ ಬಾಂಗ್ಲಾದೇಶದ ವಿರುದ್ಧ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ (International ODI Cricket) 48ನೇ ಶತಕ ಸಿಡಿಸಿದ ವಿರಾಟ್‌, 26 ಸಾವಿರ ಅಂತಾರಾಷ್ಟ್ರೀಯ ರನ್‌ಗಳಮನ್ನೂ ಪೂರೈಸಿದ ವಿಶೇಷ ಸಾಧನೆಯನ್ನೂ ಮಾಡಿದ್ದಾರೆ. ಜೊತೆಗೆ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 78ನೇ ಶತಕ ಸಿಡಿಸಿದ ವಿಶ್ವದ 2ನೇ ಆಟಗಾರ ಸಹ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: World Cup 2023: 6 ವರ್ಷಗಳ ಬಳಿಕ ಬೌಲಿಂಗ್‌ ಮಾಡಿ ಅಭಿಮಾನಿಗಳ ಮನಗೆದ್ದ ಕಿಂಗ್‌ ಕೊಹ್ಲಿ!

    ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಭಾರತದ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶ (Bangladesh) ತಂಡವು ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿತ್ತು. 257ರನ್‌ಗಳ ಗುರಿ ಬೆನ್ನತ್ತಿದ್ದ ಭಾರತ 41.3 ಓವರ್‌ಗಳಲ್ಲೇ 3 ವಿಕೆಟ್‌ ನಷ್ಟಕ್ಕೆ 261 ರನ್‌ ಸಿಡಿಸಿ ಗೆಲುವು ಸಾಧಿಸಿತು. ಈ ಮೂಲಕ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಸತತ 4ನೇ ಗೆಲುವು ತನ್ನದಾಗಿಸಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಭಾರತ ಉತ್ತಮ ಆರಂಭ ಪಡೆದುಕೊಂಡಿತ್ತು. ಮೊದಲ ವಿಕೆಟ್‌ಗೆ ನಾಯಕ ರೋಹಿತ್‌ ಶರ್ಮಾ (Rohit Sharma) ಮತ್ತು ಶುಭಮನ್‌ ಗಿಲ್‌ ಜೋಡಿ 12.4 ಓವರ್‌ಗಳಲ್ಲಿ 48 ರನ್‌ ಬಾರಿಸಿತ್ತು. ರೋಹಿತ್‌ 40 ಎಸೆತಗಳಲ್ಲಿ 2 ಸಿಕ್ಸರ್‌, 7 ಬೌಂಡರಿಯೊಂದಿಗೆ 48 ರನ್‌ ಬಾರಿಸಿ ಪೆವಿಲಿಯನ್‌ ಸೇರಿಕೊಂಡರು. ಆದ್ರೆ ಬ್ಯಾಟಿಂಗ್‌ ಅಬ್ಬರ ಮುಂದುವರಿಸಿದ ಗಿಲ್‌ 55 ಎಸೆತಗಳಲ್ಲಿ 53 ರನ್‌ (5 ಬೌಂಡರಿ, 2 ಸಿಕ್ಸರ್)‌ ಬಾರಿಸಿ ನಿರ್ಗಮಿಸಿದರು. ಶ್ರೇಯಸ್‌ ಅಯ್ಯರ್‌ 19 ರನ್‌ಗಳಿ ಔಟಾಗುತ್ತಿದ್ದಂತೆ ಒಂದಾದ ಕೆ.ಎಲ್‌ ರಾಹುಲ್‌ ಹಾಗೂ ವಿರಾಟ್‌ ಕೊಹ್ಲಿ ಜೋಡಿ ಮುರಿಯದ 4ನೇ ವಿಕೆಟ್‌ಗೆ 74 ಎಸೆತಗಳಲ್ಲಿ 83 ರನ್‌ಗಳ ಜೊತೆಯಾಟ ನೀಡಿತು. ವಿರಾಟ್‌ ಕೊಹ್ಲಿ 97 ಎಸೆತಗಳಲ್ಲಿ ಅಜೇಯ 103 ರನ್‌ (6 ಸಿಕ್ಸರ್‌, 6 ಬೌಂಡರಿ) ಗಳಿಸಿದರೆ, ಕೆ.ಎಲ್‌ ರಾಹುಲ್‌ 34 ರನ್‌ (34 ಎಸೆತ, 1 ಸಿಕ್ಸರ್‌, 3 ಬೌಂಡರಿ) ಬಾರಿಸಿ ಅಜೇಯರಾಗುಳಿದರು.

    ಟಾಸ್ ಗೆದ್ದು ಮೊದಲು ಕ್ರೀಸ್‌ಗಿಳಿದ ಬಾಂಗ್ಲಾದೇಶದ ಪರ ಆರಂಭಿಕರಾಗಿ ಕಣಕ್ಕಿಳಿದ ತಂಜಿದ್ ಹಸನ್ ಹಾಗೂ ಲಿಟ್ಟನ್ ದಾಸ್ ಜೋಡಿ ಉತ್ತಮ ಆರಂಭ ನೀಡಿತ್ತು. ಮೊದಲ ವಿಕೆಟ್‌ಗೆ 14.4 ಓವರ್‌ಗಳಲ್ಲಿ 93 ಬಾರಿಸಿತ್ತು. ಈ ಜೋಡಿ ವಿಕೆಟ್ ಬೀಳುತ್ತಿದ್ದಂತೆ ನಿಧಾನಗತಿಯ ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಸತತ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿತು. 37.2 ಓವರ್‌ಗಳಲ್ಲಿ 179 ರನ್‌ಗಳಿಗೆ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿತ್ತು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಮುಶಾಫ್ಕುರ್ ರಹೀಮ್ ಮತ್ತು ಮಹಮೂದುಲ್ಲಾ 32 ರನ್‌ಗಳ ಸಣ್ಣ ಪ್ರಮಾಣದ ಜೊತೆಯಾಟದಿಂದ ತಂಡಕ್ಕೆ ಚೇತರಿಕೆ ನೀಡಿದರು. ಅಂತಿಮವಾಗಿ ಬಾಂಗ್ಲಾದೇಶ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿತು. ಇದನ್ನೂ ಓದಿ: World Cup 2023: ಟೀಂ ಇಂಡಿಯಾ ಬೌಲಿಂಗ್‌ ದಾಳಿಗೆ ಬೆಚ್ಚಿದ ಬಾಂಗ್ಲಾ – ಭಾರತಕ್ಕೆ 257 ರನ್‌ಗಳ ಗುರಿ

    ತಂಜಿದ್ ಹಸನ್ 51 ರನ್ (43 ಎಸೆತ, 5 ಸಿಕ್ಸರ್, 3 ಬೌಂಡರಿ), ಲಿಟ್ಟನ್ ದಾಸ್ 66 ರನ್ (82 ಎಸೆತ, 7 ಬೌಂಡರಿ), ನಜ್ಮುಲ್ ಹೊಸೈನ್ ಶಾನ್‌ಟೊ 8 ರನ್, ಮೆಹದಿ ಹಸನ್ ಮಿರ್ಜಾ 3 ರನ್, ತೌಹಿದ್ ಹರಿದಿ 16 ರನ್, ಮುಶಾಫ್ಕುರ್ ರಹೀಮ್ 38 ರನ್ (46 ಎಸೆತ, 1 ಸಿಕ್ಸರ್, 1 ಬೌಂಡರಿ), ಮಹಮ್ಮದುಲ್ಲಾ 46 ರನ್ (36 ಎಸೆತ, 3 ಬೌಂಡರಿ, 3 ಸಿಕ್ಸರ್), ನಸುಮ್ ಅಹ್ಮದ್ 14 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರೆ, ಮುಸ್ತಫಿಜುರ್ ರೆಹಮಾನ್ 1 ರನ್, ಶರೀಫುಲ್ ಇಸ್ಲಾಂ 7 ರನ್‌ಗಳಿಸಿ ಅಜೇಯರಾಗುಳಿದರು. ಇದನ್ನೂ ಓದಿ: ಬೆಂಗಳೂರಲ್ಲಿ ವಿಶ್ವಕಪ್‌ ಪಂದ್ಯಾವಳಿ; ನಮ್ಮ ಮೆಟ್ರೋದಿಂದ ವಿಶೇಷ ಟಿಕೆಟ್‌ ವ್ಯವಸ್ಥೆ

    ಮಿಂಚಿದ ಬೌಲರ್ಸ್: ಇನ್ನೂ ಆರಂಭದಿಂದಲೂ ಬೌಲಿಂಗ್‌ನಲ್ಲಿ ಪ್ರಾಬಲ್ಯ ಮೆರೆಯುತ್ತಿರುವ ಟೀಂ ಇಂಡಿಯಾ ಬೌಲರ್ಸ್‌ಗಳು ಬಾಂಗ್ಲಾದೇಶ ವಿರುದ್ಧವೂ ಹಿಡಿತ ಸಾಧಿಸಿದ್ದಾರೆ. ಟೀಂ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್ ಮತ್ತು ಕುಲ್ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]