ಕಲಬುರಗಿ: ಈ ಹಿಂದೆ ಹೈದರಾಬಾದ್ ಕರ್ನಾಟಕ ಪ್ರದೇಶ ಎಂದು ಕರೆಯಲ್ಪಡುತ್ತಿದ್ದ ಕಲ್ಯಾಣ ಕರ್ನಾಟಕ (Kalyana Karnataka) ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಂದಿಗೆ 75 ವರ್ಷಗಳು ಕಳೆದಿದೆ. ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು (Amrutha Mahotsav) ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಇಂದು ಕಲಬುರಗಿಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬರುತ್ತಿದ್ದಂತೆ ತಳವಾರ ಸಮುದಾಯದ ಜನ ಕಪ್ಪುಪಟ್ಟಿ (Black Flag) ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.
ಬೊಮ್ಮಾಯಿ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತಕ್ಕೆ ಆಗಮಿಸಿ ವಲ್ಲಭಬಾಯ್ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡುತ್ತಿದ್ದಂತೆ ಅಲ್ಲಿಗೆ ಆಗಮಿಸಿದ ತಳವಾರ ಸಮುದಾಯದ ಜನ ಕಪ್ಪುಪಟ್ಟಿ ಪ್ರದರ್ಶಿಸಿದರು. ತಳವಾರ ಸಮುದಾಯಕ್ಕೆ ಎಸ್‍ಟಿ (ST) ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಹೋರಾಟ ನಡೆಯುತ್ತಿದೆ. ಈ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಸಿಎಂಗೆ ಕಪ್ಪುಪಟ್ಟಿ ಪ್ರದರ್ಶನ ಮಾಡಿದ್ದಾರೆ. ಬಳಿಕ ಪೊಲೀಸರು (Police) ಕಪ್ಪುಪಟ್ಟಿ ಪ್ರದರ್ಶಿಸಿದ 25ಕ್ಕೂ ಅಧಿಕ ಜನರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಅಮೃತ ಮಹೋತ್ಸವ ಸಂಭ್ರಮ – ಸಿಎಂ ಬೊಮ್ಮಾಯಿ ಭಾಗಿ
ಕಲಬುರಗಿ: ಈ ಹಿಂದೆ ಹೈದರಾಬಾದ್ ಕರ್ನಾಟಕ ಪ್ರದೇಶ ಎಂದು ಕರೆಯಲ್ಪಡುತ್ತಿದ್ದ ಕಲ್ಯಾಣ ಕರ್ನಾಟಕ (Kalyana Karnataka) ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಂದಿಗೆ 75 ವರ್ಷಗಳು ಕಳೆದಿದೆ. ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು (Amrutha Mahotsav) ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.
ಇಂದು ಕಲಬುರಗಿ ನಗರದ ಪ್ರಮುಖ ಬೀದಿಗಳಲ್ಲಿ ಬ್ಯಾನರ್ ಕಟೌಟ್‍ಗಳು ರಾರಾಜಿಸುತ್ತಿದ್ದು 2 ದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ನಗರದ ನಗರೇಶ್ವರ ಶಾಲೆಯಿಂದ ಕೇಂದ್ರ ಬಸ್ ನಿಲ್ದಾಣದವರೆಗೆ 24 ಕಲಾ ತಂಡಗಳು ಮತ್ತು 200 ಕಲಾವಿದರು ಮೆರವಣಿಗೆ ಮಾಡಲಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ (Basavarj Bommai) ಕೂಡ ಜಿಲ್ಲೆಗೆ ಬರಲಿದ್ದು ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನೂ 7,030 ಹುದ್ದೆಗಳು ಸರ್ಕಾರದ ನಿರ್ಲಕ್ಷ್ಯದಿಂದ ಭರ್ತಿಯಾಗದೇ ಉಳಿದಿವೆ. ಹೀಗಾಗಿ ನಿರುದ್ಯೋಗ ಸಮಸ್ಯೆ ಪರಿಹಾರದ ದಿಸೆಯಲ್ಲಿ ಯುವ ಸಮೂಹ ಕಾತುರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಅವರಿಗೆ 72ರ ಸಂಭ್ರಮ – ನಮೀಬಿಯಾದಿಂದ ಭಾರತಕ್ಕೆ 8 ಚಿರತೆಗಳು
ಅಮೃತ ಮಹೋತ್ಸವಕ್ಕೆ ಕಲಬುರಗಿಗೆ ಬೊಮ್ಮಾಯಿ ಆಗಮಿಸುತ್ತಿದ್ದು, ಬೆಂಗಳೂರಿನ ಎಚ್‍ಎಎಲ್ (HAL) ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಸಿಎಂ ಕಲಬುರಗಿಗೆ ತೆರಳುತ್ತಿದ್ದಾರೆ. ಬೆಳಗ್ಗೆ 8:15ರ ಸುಮಾರಿಗೆ ಕಲಬುರಗಿಗೆ ಸಿಎಂ ಬಂದಿಳಿಯಲಿದ್ದಾರೆ. 8:30ಕ್ಕೆ ಸರ್ದಾರ್ ವಲ್ಲಭಭಾಯ್ ಪಟೇಲ್ (Vallabhbhai Patel) ಪುತ್ಥಳಿಗೆ ಸಿಎಂ ಮಾಲಾರ್ಪಣೆ ಮಾಡಲಿದ್ದು, 9 ಗಂಟೆಗೆ ಡಿಎಆರ್ ಪೊಲೀಸ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. 11 ಗಂಟೆಗೆ ನೂತನ ನಗರ ಪೊಲೀಸ್ ಆಯುಕ್ತರ ಕಟ್ಟಡ ಉದ್ಘಾಟನೆ. 11:30 ಗಂಟೆಗೆ ಎನ್‍ವಿ ಕಾಲೇಜು ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಉದ್ಘಾಟನೆ ಕಾರ್ಯಕ್ರಮದ ನಂತರ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ಮಹಾಗಣಪತಿ ವಿಸರ್ಜನೆ – ಶಾಲಾ-ಕಾಲೇಜ್‍ಗಳಿಗೆ ರಜೆ, 4 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕನ್ನಡಿಗರು ಪ್ರಗತಿಪರ ಚಿಂತಕರು. ಸ್ವಾತಂತ್ರ್ಯ ಪೂರ್ವ ಹಾಗೂ ನಂತರದಲ್ಲಿ ದೇಶಕ್ಕೆ ಕನ್ನಡಿಗರ ಕೊಡುಗೆ ಬಹಳಷ್ಟಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಬೊಮ್ಮಾಯಿ ಅವರು ಇಂದು ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ‘ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನ’ವನ್ನು ಉದ್ಘಾಟಿಸಿ ಮಾತನಾಡಿದರು.
ಕನ್ನಡ ಪರಂಪರೆಯ ಮೂಲಕ ಭಾರತ ಪರಂಪರೆಗೆ ನಾಂದಿ ಹಾಡಬೇಕಿದೆ. ನವಕರ್ನಾಟಕದಿಂದ ನವಭಾರತ ನಿರ್ಮಾಣದ ಚಿಂತನೆಯನ್ನು ಸರ್ಕಾರ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯಾದ ಭಾರತದ 5 ಟ್ರಿಲಿಯನ್ ಆರ್ಥಿಕತೆಯಲ್ಲಿ ಕರ್ನಾಟಕದ ಕೊಡುಗೆ ದೊಡ್ಡ ಪ್ರಮಾಣದಲ್ಲಿದೆ. ದೂರದೃಷ್ಟಿಯ ಚಿಂತನೆಯಿಂದ ರಾಜ್ಯ ಸರ್ಕಾರ ಕೆಲಸ ಮಾಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಜನರಿಗೆ ಸಿದ್ದರಾಮಯ್ಯ ಅವಶ್ಯಕತೆ ಇದೆ, ಅವರೇ ಸಿಎಂ ಆಗಬೇಕು: ಬೈರತಿ ಸುರೇಶ್
ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡ ನಾಡಿನ ಅಪೂರ್ವ ಕೊಡುಗೆ
ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ 75 ವರ್ಷ ಮಹತ್ವದ ಕಾಲಘಟ್ಟ. ಸ್ವಾತಂತ್ರ್ಯ ಪೂರ್ವದಲ್ಲಿ ಹುಟ್ಟಿದವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಮಡಿದವರಿದ್ದಾರೆ. ರಾಜರಿಂದ ಪ್ರಾರಂಭವಾದ ಸ್ವಾತಂತ್ರ್ಯ ಹೋರಾಟ ನಂತರದ ದಿನಗಳಲ್ಲಿ ಸ್ವಾತಂತ್ರ್ಯ ಚಳುವಳಿಯ ರೂಪ ಪಡೆಯಿತು.
ಇಂದು ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ "ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನ"ವನ್ನು ಉದ್ಘಾಟಿಸಿ ಮಾತನಾಡಿದೆನು.#ಅಮೃತಭಾರತಿಗೆಕನ್ನಡದಾರತಿpic.twitter.com/bR7RfDz2nk
1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ, ಕರ್ನಾಟಕದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುವ ಎದೆಗಾರಿಕೆ ಇದೆಯೆಂಬುದನ್ನು ನಿರೂಪಿಸಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡ ನಾಡು ಅಪೂರ್ವ ಕೊಡುಗೆ ನೀಡಿದೆ. ಮೈಲಾರ ಮಾಹದೇವಪ್ಪ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಹಲವಾರು ಸ್ವಾತಂತ್ರ್ಯ ಹೋರಾಟಗಾರರು ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದರು.
ತ್ಯಾಗಬಲಿದಾನಗಳ ನಂತರ ದೊರೆತ ಸ್ವತಂತ್ರ ದೇಶದ ಏಕತೆ, ಅಖಂಡತೆ ಕಾಯ್ದುಕೊಂಡು ಪ್ರಬಲ ಹಾಗೂ ಸಶಕ್ತ ರಾಷ್ಟ್ರ ನಿರ್ಮಾಣದ ಚಿಂತನೆ ಎಲ್ಲ ಭಾರತೀಯರಲ್ಲಿ ಇರಬೇಕು ಎಂದು ಕರೆ ಕೊಟ್ಟರು.
ಎಲ್ಲರಿಗೂ ಸ್ವಾಭಿಮಾನ, ಸಮಾನತೆಯ ಬದುಕು ನೀಡುವ ಸ್ವತಂತ್ರ ಭಾರತ ವಿಶ್ವಮಾನ್ಯ ರಾಷ್ಟ್ರವಾಗಿದೆ. ಸಾವಿರ ವರ್ಷಗಳಿಂದ ಮೊಘಲರು, ಬ್ರಿಟೀಷರ ಆಕ್ರಮಣದಲ್ಲಿ ಸ್ವಾಭಿಮಾನವನ್ನು ಅದುಮಿಟ್ಟು ಬದುಕುವ ಪರಿಸ್ಥಿತಿಯಿಂದ ಸ್ವಾತಂತ್ರ್ಯ ದೊರಕಿದೆ. ದೇಶದ ಜನರೆಲ್ಲರೂ ಒಗ್ಗಟ್ಟಾಗಬೇಕು. ಮೋದಿ ಅವರು ಬಲಿಷ್ಟ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುತ್ತಿದ್ದಾರೆ ಎಂದರು.
ಜನರ ಏಳಿಗೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು 25 ವರ್ಷಗಳ ಅಮೃತ ಕಾಲ ಮಾಡಬೇಕೆಂದು ಕರೆ ನೀಡಿದರು. ಒಬ್ಬ ಮುತ್ಸದ್ದಿಯ ಕಣ್ಣು ಮುಂದಿನ ಜನಾಂಗದ ಮೇಲಿರುತ್ತದೆ. ನಾವು ಹುಟ್ಟಿದ ಜನ್ಮಭೂಮಿ ಶ್ರೇಷ್ಠ ಭಾರತವಾಗಬೇಕೆಂಬ ಗುರಿಯನ್ನು ಹೊಂದಿರುವ ನಾಯಕ ಮೋದಿ ಅವರು ಎಂದು ಪ್ರಶಂಸಿದರು.
ವೀರ್ ಸಾವರ್ಕರ್ ದಿಟ್ಟ, ಧೀಮಂತ ನಾಯಕ
ಮೊದಲನೇ ಸ್ವಾತಂತ್ರ್ಯ ಹೋರಾಟವನ್ನು ಲೋಕಮಾನ್ಯ ತಿಲಕ, ವೀರಸಾವರ್ಕರ್ ಅವರಿಂದ ಪ್ರಾರಂಭವಾಯಿತು. ವೀರ್ ಸಾವರ್ಕರ್ 1883ರ ಜೂನ್ 28 ರಲ್ಲಿ ಜನಿಸಿದ್ದು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿನ ಕಾರಾಗೃಹದಲ್ಲಿ ಕಾಲಾಪಾನಿ ಶಿಕ್ಷೆಯನ್ನು ಅನುಭವಿಸಿದ್ದರು.
ದೇಶಕ್ಕಾಗಿ ತ್ಯಾಗ ಮಾಡಲು ಸಿದ್ಧರಾಗಿದ್ದ ವೀರ್ ಸಾವರ್ಕರ್ ಅವರು ದಿಟ್ಟ, ಧೀಮಂತ ನಾಯಕರಾಗಿದ್ದರು. ಸ್ವಾತಂತ್ರ್ಯ ನನ್ನ ಜನ್ಮಸಿದ್ಧ ಹಕ್ಕು ಎಂದ ಲೋಕಮಾನ್ಯ ತಿಲಕರ ಚಿಂತನೆ, ಯೋಚನಾಶಕ್ತಿ ವಿಶಿಷ್ಟವಾದುದಾಗಿತ್ತು. ಸ್ವಾತಂತ್ರ್ಯ ಹೊರತುಪಡಿಸಿ, ಮಿಕ್ಕೆಲ್ಲವೂ ನಗಣ್ಯ ಎಂದ ಈ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ನನ್ನ ಪ್ರಥಮ ನಮಸ್ಕಾರಗಳು ಎಂದು ನಮಿಸಿದರು. ಇದನ್ನೂ ಓದಿ: ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಚುನಾವಣೆ ಸಮಿತಿ ಇದೆಯೇ? – ಡಿಕೆಶಿಗೆ ಪತ್ರ ಬರೆದ ಸ್ಥಾನ ವಂಚಿತರು
ಮಹನೀಯರ ಚಿಂತನೆ, ತ್ಯಾಗದ ಫಲವಾಗಿ ಸ್ವಾತಂತ್ರ್ಯ ಲಭಿಸಿದೆ
ಲಾಹೋರ್‌ನಲ್ಲಿ ಲಾಲ್ ಲಜಪತ್ ರಾಯ್ ನೇತೃತ್ವದಲ್ಲಿ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕೆ ವೇಗ ದೊರಕಿತು. ಇದೇ ಹಾದಿಯಲ್ಲಿ ಭಗತ್ ಸಿಂಗ್, ಚಂದ್ರಶೇಖರ್ ಅಜಾದ್ ನಡೆದರು. ಈ ಹೋರಾಟಕ್ಕೆ ಅಂತರರಾಷ್ಟ್ರೀಯ ಸ್ವರೂಪವನ್ನು ಸುಭಾಷ್ ಚಂದ್ರ ಬೋಸರು ನೀಡಿದರು. ಈ ಎಲ್ಲ ಹೋರಾಟಕ್ಕೆ ಆಧ್ಯಾತ್ಮಿಕ ಶಕ್ತಿಯನ್ನು ಸ್ವಾಮಿ ವಿವೇಕಾನಂದರು ತುಂಬಿದರು ಎಂದು ಸ್ಪೂರ್ತಿ ತುಂಬಿ ಮಾತನಾಡಿದರು.
ಹಲವಾರು ಮಹನೀಯರ ಚಿಂತನೆ, ಹೋರಾಟ ತ್ಯಾಗದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಮಹಾತ್ಮಾ ಗಾಂಧಿ ಅವರಿಂದ ಸ್ಪೂರ್ತಿ ಹೊಂದಿ ಸಹಸ್ರಾರು ದೇಶಭಕ್ತರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ತಮ್ಮ ಸರ್ವಸ್ವವನ್ನು ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ. ಇಂತಹ ಅನೇಕ ಮಹನೀಯರು ದೇಶಕ್ಕಾಗಿ ತ್ಯಾಗ ಮಾಡಿದವರಿಗೆ ನನ್ನ ನಮಸ್ಕಾರಗಳು ಎಂದರು.
ಬ್ರಿಟಿಷರು ವಿರುದ್ಧ ದುಡಿಯುವ ವರ್ಗದ ಹೋರಾಟ
ಮಹಾತ್ಮಾಗಾಂಧಿ ಅವರ ಸ್ವದೇಶಿ ಚಳುವಳಿಯಲ್ಲಿ ಮಹಿಳೆಯರೂ ಪಾಲ್ಗೊಂಡರು. ಕ್ವಿಟ್ ಇಂಡಿಯಾ ಚಳುವಳಿ, ಬಾರ್ಡೋಲಿಯಲ್ಲಿ ರೈತರ ಸತ್ಯಾಗ್ರಹ, ಪಶ್ಚಿಮ ಬಂಗಾಳದಲ್ಲಿ ಇಂಡಿಗೋ ಚಳವಳಿಗಳ ಮೂಲಕ ದುಡಿಯುವ ವರ್ಗ ಬ್ರಿಟಿಷರು ವಿರುದ್ಧ ನಡೆಸಿದ ಹೋರಾಟವನ್ನು ಸಿಎಂ ಸ್ಮರಿಸಿದರು.
ಬಾಗಲಕೋಟೆ: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆಯ್ತು. ಬಹುತೇಕ 60 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದವರು ಆಡಳಿತ ಮಾಡಿದರು. ಕಾಂಗ್ರೆಸ್ ನಾಯಕರು ಜೈಲಿಗೆ ಹೋಗಿ ಬಂದಿದ್ದು, ಬೇಲ್‍ನಲ್ಲಿದ್ದಾರೆ. ಅಂತವರಿಂದ ನೀತಿ ಪಾಠವನ್ನು ಹೇಳಿಸಿಕೊಳ್ಳುವ ಪರಿಸ್ಥಿತಿ ಬಿಜೆಪಿ ಪಕ್ಷಕ್ಕಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ ಪಕ್ಷವನ್ನು ತೀಕ್ಷ್ಮವಾಗಿ ಝರಿದರು.
ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ರಾಜ್ಯ ಮತ್ತು ದೇಶದಲ್ಲಿ ಪಾರದರ್ಶಕವಾದ, ನಿಕ್ಷಪಕ್ಷವಾದ ಆಡಳಿತವನ್ನು ಮಾಡುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ಇಷ್ಟು ವರ್ಷದಲ್ಲಿ 60 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ಅಧಿಕಾರ ನಡೆಸಿತು. ಈ ವೇಳೆ ಅನೇಕ ಆರೋಪಗಳು ಬಂದವು. ಆಗ ಕಾಂಗ್ರೆಸ್ ಪಕ್ಷದವರು ನಿಕ್ಷಪಕ್ಷವಾಗಿ, ಪಾರದರ್ಶಕವಾದ ತನಿಖೆ ಮಾಡಿಸಿದ್ದರೇ ಜನರ ಮುಂದೆ ಇಡಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಮಲೆನಾಡಿಗರನ್ನು ಬಿಟ್ಟು ಬಿಡದೇ ಕಾಡುತ್ತಿರುವ ‘ಮಂಗನ ಕಾಯಿಲೆ’
ಈಗ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಹಗರಣ ಬೆಳಕಿಗೆ ಬಂದ ತಕ್ಷಣ ನಮ್ಮ ಬಿಜೆಪಿ ಸರ್ಕಾರ ನಿಕ್ಷಪಕ್ಷವಾದ ತನಿಖೆಗೆ ಸೂಚಿಸಿತು. ಪೆÇಲೀಸ್ ಕಾನ್ಸಟೇಬಲ್‍ನಿಂದ ಹಿಡಿದು ಡಿಎಸ್‍ಪಿವರೆಗೂ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವ ಕ್ರಮಕೈಗೊಳ್ಳಲಾಗಿದೆ. ಸರ್ಕಾರ ಯಾವುದೇ ಜಾತಿ, ಧರ್ಮ, ಪಕ್ಷ ನೋಡದೇ ಕಠಿಣ ನಿರ್ಣಯವನ್ನು ತೆಗೆದುಕೊಂಡಿದೆ.
ಇಂತಹ ಕಠಿಣ ಕ್ರಮನ್ನು ತೆಗೆದುಕೊಂಡಿದ್ದರೆ ಕಾಂಗ್ರೆಸ್ ಪಕ್ಷ ಹೇಳಲಿ. ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಪಾರದರ್ಶನಕವಾಗಿ ಆಡಳಿತ ಮಾಡುತ್ತಿದೆ. ಆದರೆ ಭಂಡತನದಿಂದ ಕಾಂಗ್ರೆಸ್ ಪಕ್ಷದವರು ಸುಳ್ಳು ಆರೋಪಗನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೇಂದ್ರವು ಧ್ವನಿವರ್ಧಕಗಳ ಬಗ್ಗೆ ನೀತಿಯನ್ನು ತರಬೇಕು: ಮಹಾರಾಷ್ಟ್ರ ಗೃಹ ಸಚಿವ
ಶ್ರೀನಗರ: ಸ್ವಾತಂತ್ರ್ಯದ 75 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದ ಉಧಮ್‍ಪುರದ ಗ್ರಾಮ ಸದ್ದಲ್‍ಗೆ ಕೇಂದ್ರ ಸರ್ಕಾರದ ‘ಅನ್ಟೈಡ್ ಗ್ರ್ಯಾಂಟ್ಸ್ ಸ್ಕೀಮ್’ ಅಡಿಯಲ್ಲಿ ಬುಧವಾರ ಮೊದಲ ಬಾರಿಗೆ ವಿದ್ಯುತ್ ಪಡೆಯುವ ಮೂಲಕ ಕತ್ತಲೆಯಿಂದ ಮುಕ್ತಿ ದೊರೆತಿದೆ.
ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವುದರಿಂದ ಈ ಗ್ರಾಮದ ನಿವಾಸಿಗಳು ತಮ್ಮ ಮಕ್ಕಳ ವಿದ್ಯಾಭ್ಯಾಸದ ಭವಿಷ್ಯಕ್ಕಾಗಿ ಆಶಾಭಾವನೆ ಮೂಡಿಸಿದ್ದಾರೆ. ಮೊದಲು, ಹಳ್ಳಿಯಲ್ಲಿ ಸಂಜೆಯ ಸಮಯದಲ್ಲಿ ಬೆಳಕಿನ ಏಕೈಕ ಮೂಲವೆಂದರೆ ಮೇಣದಬತ್ತಿಗಳು ಮತ್ತು ಎಣ್ಣೆ ದೀಪಗಳು, ಅದು ಕ್ರಮೇಣ ಅವರ ದೈನಂದಿನ ಜೀವನದ ಭಾಗವಾಯಿತು. ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂಬ ಬಹುದಿನಗಳ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಗ್ರಹ ಮಾಡೋದು ಹರಾಮ್, ಆದ್ರೇ ಜೀವನೋಪಾಯಕ್ಕೆ ಅದು ಅನಿವಾರ್ಯ: ಉಮರ್ ಷರೀಫ್
ಈ ಕಾರ್ಯಾಚರಣೆಯ ಯಶಸ್ಸಿಗಾಗಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಜಾರಿಗೆ ಬಂದ ಪಂಚಾಯತ್ ರಾಜ್ ಕಾಯ್ದೆಯ ಮೂರು ಹಂತದ ವ್ಯವಸ್ಥೆಗೆ ಗ್ರಾಮಸ್ಥರು ಮನ್ನಣೆ ನೀಡಿದ್ದಾರೆ. ತಮ್ಮ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ, ಉಧಮ್‍ಪುರ ಆಡಳಿತ ಮತ್ತು ವಿದ್ಯುತ್ ಇಲಾಖೆಗೆ ಮಕ್ಕಳು ಕೃತಜ್ಞರಾಗಿದ್ದಾರೆ. ಇದನ್ನೂ ಓದಿ: ವಿದ್ಯುತ್ ದರ ಏರಿಕೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ
8 ನೇ ತರಗತಿ ವಿದ್ಯಾರ್ಥಿನಿ ಪ್ಯಾರ್ ಸಿಂಗ್ ಅನ್ನುವವರು ಮಾತನಾಡಿ, ಈಗ ನಾವು ಯಾವುದೇ ತೊಂದರೆಯಿಲ್ಲದೆ ಆರಾಮವಾಗಿ ಓದುತ್ತೇವೆ. ಈ ಹಿಂದೆ ವಿದ್ಯುತ್ ಇಲ್ಲದ ಕಾರಣ ಎಣ್ಣೆ ದೀಪ ಹಚ್ಚಿಕೊಂಡು ಓದಬೇಕಾಗಿತ್ತು. ಇದರಿಂದ ನಮಗೆ ಹೆಚ್ಚು ಬೇಸರ ತರಿಸುತ್ತಿತು ಎಂದರು. 72 ವರ್ಷದ ತಾತ ಬದರಿನಾಥ್ ಅವರು, ಮಾತನಾಡಿ, ಹಿಂದಿನ ಪೀಳಿಗೆಯವರಂತು ವಿದ್ಯುತ್ ಪವಾಡವನ್ನು ಕಣ್ತುಂಬಿಕೊಳ್ಳಲು ಸಾಧ್ಯವಾಗಲಿಲ್ಲ. ಇಷ್ಟು ಸುದೀರ್ಘ ಕಾಯುವಿಕೆಯ ನಂತರ ನಮಗೆ ವಿದ್ಯುತ್ ಒದಗಿಸಿದ ಇಲಾಖೆಗೆ ಇಂದು ನಾವು ಕೃತಜ್ಞರಾಗಿರುತ್ತೇವೆ ಎಂದು ಖುಷಿಪಟ್ಟರು.
ಎಕ್ಸಿಕ್ಯೂಟಿವ್ ಇಂಜಿನಿಯರ್ (ಎಕ್ಸ್‌ಇಎನ್), ಪವರ್ ಡೆವಲಪ್‍ಮೆಂಟ್ ಡಿಪಾರ್ಟ್‍ಮೆಂಟ್ (ಪಿಡಿಡಿ) ಉಧಮ್‍ಪುರ್ ಜಾವೇದ್ ಹುಸೇನ್ ಅಖ್ತರ್ ಮಾತನಾಡಿ, ಗ್ರಾಮ ಸದ್ದಲ್ ಭಾರತ ಸರ್ಕಾರದ ನಿರ್ದೇಶನಗಳೊಂದಿಗೆ ಸಂಪೂರ್ಣವಾಗಿ ವಿದ್ಯುದ್ದೀಕರಿಸಲ್ಪಟ್ಟಿದೆ. ಇದಕ್ಕೆ 10.28 ಲಕ್ಷ ರೂಪಾಯಿ ವೆಚ್ಚವಾಗಿದೆ ಎಂದು ತಿಳಿಸಿದರು.
ಸರ್ಕಾರ ಮತ್ತು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ, 25 ಕೆವಿಎ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿದ ನಂತರ ಗ್ರಾಮದ ಸುಮಾರು 25 ಮನೆಗಳು ಪ್ರಯೋಜನ ಪಡೆದಿವೆ. ಇದು ಜಿಲ್ಲೆಯ ವಿದ್ಯುತ್ ವಲಯದಿಂದ ಐತಿಹಾಸಿಕ ಸಾಧನೆಯಾಗಿದೆ. ಉಧಂಪುರದ ಪಂಚರಿ ತಹಸಿಲ್‍ನಲ್ಲಿರುವ ಪಂಚಾಯತ್ ಹಲ್ಕಾ ಕುಲ್ತ್ಯಾರ್ ಬಾಳದ ವಾರ್ಡ್ ಸಂಖ್ಯೆ 5ರ ಅಡಿಯಲ್ಲಿ ಈ ಗ್ರಾಮವು ಬರುತ್ತದೆ.
ಬೆಂಗಳೂರು: ರಾಷ್ಟ್ರ ರಕ್ಷಣೆಗಾಗಿ ಪ್ರಾಣ ಕೊಟ್ಟ ಕರ್ನಾಟಕದ ಯೋಧರ ನೆನಪಿಗಾಗಿ ಯುವಾ ಬ್ರಿಗೇಡ್ ಇಂದು ಮೈಲಸಂದ್ರದಲ್ಲಿ ಸಸಿ ನೆಡುವ ಸೈನ್ಯ ವನ ಅಭಿಯಾನ ಪ್ರಾರಂಭಿಸಿದೆ.
50 ಸೈನಿಕ ದಂಪತಿ ಹಾಗೂ ಯುವಾ ಬ್ರಿಗೇಡ್ ಕಾರ್ಯಕರ್ತರು ಮೈಲಸಂದ್ರದ ಪಿಳೇಕಮ್ಮ ದೇಗುಲದ ಬಳಿ ಸಸಿ ನೆಟ್ಟು ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಯುವಾ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಸ್ವಾತಂತ್ರಕ್ಕೆ 75 ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಕರ್ನಾಟಕದ ಹುತಾತ್ಮ ಯೋಧರ ಹೆಸರಿನಲ್ಲಿ ಕಾಡೊಂದನ್ನು ನಿರ್ಮಿಸುವ ಯೋಜನೆ ಇದು ಎಂದು ಖುಷಿ ಹಂಚಿಕೊಂಡರು. ಇದನ್ನೂ ಓದಿ: ಸಿಎಂ ಬೊಮ್ಮಾಯಿ 6-7 ತಿಂಗಳು ಅಧಿಕಾರ, 2022ರಲ್ಲಿ ಗಡ್ಡಧಾರಿ ಹೊಸ ಮುಖ್ಯಮಂತ್ರಿ: ಮೈಲಾರ ದೈವವಾಣಿ
ಸೈನ್ಯ ವನದ ವಿಶೇಷ ಏನೆಂದರೆ ಈ ಕಾಡಿನಲ್ಲಿ ಪ್ರತಿ ಮರಗಳಿಗೂ ಹುತಾತ್ಮ ಯೋಧರ ಹೆಸರಿಡಲಿದ್ದು, ಸ್ಮಾರಕಗಳು ಸೈನ್ಯಕ್ಕೆ ಸೇರಿದ ಮಾಹಿತಿಗಳನ್ನು ಒಳಗೊಂಡಿರಲಿದೆ. ಮುಂದೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸೈನ್ಯವನವನ್ನು ನಿರ್ಮಿಸುವ ಯೋಜನೆ ಯುವಾ ಬ್ರಿಗೇಡಿನದ್ದಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡರು.
ಕೋಲಾರ: ಕೇಂದ್ರ ಮಾಜಿ ಸಚಿವ ಹಾಗೂ ಕರ್ನಾಟಕ ಹೈನೋದ್ಯಮದ ಪಿತಾಮಹ ಎಂದೇ ಖ್ಯಾತಿ ಪಡೆದ ದಿವಂಗತ ಎಂ.ವಿ. ಕೃಷ್ಣಪ್ಪ ಅವರ ಪತ್ನಿ ಪ್ರಮೀಳಮ್ಮ ಕೃಷ್ಣಪ್ಪ (95) ನಿಧನರಾಗಿದ್ದಾರೆ.
ಅಲ್ಪಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 6 ಗಂಟೆಗೆ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾದರು. ಇಂದು ಸಂಜೆ 4 ಗಂಟೆಗೆ ಕೆಜಿಎಫ್ ತಾಲೂಕಿನ ಬಂಗಾರತಿರುಪತಿ (ಗುಟ್ಟಹಳ್ಳಿ) ಬಳಿಯ ಸ್ವಂತ ತೋಟದ ಭೂಮಿಯಲ್ಲಿರುವ ಪತಿ, ದಿವಂಗತ ಎಂ.ವಿ.ಕೃಷ್ಣಪ್ಪ ಅವರ ಸಮಾಧಿ ಬಳಿಯಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಪುತ್ರರಾದ ಅಶೋಕ್ ಕೃಷ್ಣಪ್ಪ ಮತ್ತು ಜಯಸಿಂಹ ಕೃಷ್ಣಪ್ಪ ಹೇಳಿದ್ದಾರೆ. ಇದನ್ನೂ ಓದಿ: ಬೇಟೆಯಾಡಲು ಹೋದವನೇ ಬೇಟೆಯಾದ ?
ಕೃಷ್ಣಪ್ಪ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಸಚಿವರಾಗಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯಕ್ಕೆ ಅದರಲ್ಲೂ ವಿಶೇಷವಾಗಿ ಕೋಲಾರ ಜಿಲ್ಲೆಗೆ ಅಪಾರ ಕೊಡುಗೆಗಳನ್ನು ನೀಡಿದ್ದರು. ಅವರ ಸಾಧನೆಯಲ್ಲಿ ಮೃತ ಪತ್ನಿ ಪ್ರಮೀಳಮ್ಮರವರ ಪಾತ್ರವೂ ಇತ್ತು. ಅಲ್ಲದೆ ಸ್ವಾತಂತ್ರ್ಯ ಹೋರಾಟದಲ್ಲಿ ಕೃಷ್ಣಪ್ಪ ಅವರ ಜೊತೆ ಭಾಗಿಯಾಗಿದ್ದ ಪ್ರಮೀಳಮ್ಮ ಹಲವು ಬಾರಿ ಜೈಲಿಗೂ ಹೋಗಿದ್ದರು.
ಚಿಕ್ಕಬಳ್ಳಾಪುರ: ದೇಶಕ್ಕೆ ಸ್ವಾತಂತ್ರ್ಯ ಬಂದು 2022 ಆಗಸ್ಟ್ 15ಕ್ಕೆ 75 ವರ್ಷಗಳು ತುಂಬುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರ, ಸ್ವಾತಂತ್ರ್ಯ ಸಂಗ್ರಾಮದ ಸ್ಥಳಗಳಲ್ಲಿ, 75 ವಾರಗಳ ವರೆಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಪಾಲ ವಿ.ಆರ್.ವಾಲಾ ಜಲಿಯನ್ ವಾಲಾಬಾಗ್ ಖ್ಯಾತಿಯ ವಿದುರಾಶ್ವತ್ಥಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇಂದು ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ರಾಜ್ಯದಲ್ಲಿ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥಕ್ಕೆ ಸಿಎಂ ಹಾಗೂ ರಾಜ್ಯಪಾಲರು ಭೇಟಿ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ವಾತಂತ್ರ್ಯ ಸಂಗ್ರಾಮ, ಸ್ವಾತಂತ್ರ್ಯ ಹೋರಾಟಗಾರರು, ದೇಶ ಭಕ್ತಿಯ ಬಗ್ಗೆ ಜನಜಾಗೃತಿ ಮೂಡಿಸಲು ಮುಂದಾಗಿರುವ ಕೇಂದ್ರ ಸರ್ಕಾರ, ದೇಶದ 75 ಸ್ವಾತಂತ್ರ್ಯ ಸಂಗ್ರಾಮ ಸ್ಥಳಗಳಲ್ಲಿ ಏಕಕಾಲಕ್ಕೆ, ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಲು ಚಾಲನೆ ನೀಡಿದೆ.
ವಿದುರಾಶ್ವತ್ಥಕ್ಕೆ ಆಗಮಿಸಿ ಹುತಾತ್ಮ ಸ್ವಾತಂತ್ರ್ಯ ಸೇನಾನಿಗಳ ಸ್ಮಾರಕ ಸ್ಥೂಪಗಳಿಗೆ ಪುಷ್ಪನಮನ ಸಲ್ಲಿಸಿ, ಗೌರವ ವಂದನೆ ಸಲ್ಲಿಸಿದರು. ಇದೇ ವೇಳೆ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮ ವೇದಿಕೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ಮೋದಿಯವರ ಆಶಯದಂತೆ ಶಾಲಾಕಾಲೇಜು, ಸಾರ್ವಜನಿಕ ಸ್ಥಳಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.
ರಾಜ್ಯಪಾಲ ವಿ.ಆರ್.ವಾಲಾ ಮಾತನಾಡಿ, ಸ್ವಾತಂತ್ರ್ಯ ಸೇನಾನಿಗಳ ತ್ಯಾಗ, ಬಲಿದಾನ, ಶ್ರಮದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು, ಈಗ ನಮ್ಮ ಸೈನಿಕರು ಹಿಮ ಪ್ರದೇಶದಲ್ಲಿ ದೇಶದ ರಕ್ಷಣೆ ಮಾಡುತ್ತಿದ್ದಾರೆ. ನಾವು ಎಸಿ ರೂಮ್ ಗಳಲ್ಲಿ ಹಾಯಾಗಿ ಕೆಲಸ ಮಾಡುತ್ತಿದ್ದೇವೆ. ಇಂದಿನ ಯುವ ಸಮುದಾಯಕ್ಕೆ, ಸಾಕಷ್ಟು ಅವಕಾಶಗಳಿವೆ ದೇಶ ಸೇವೆಗಾಗಿ ಜೀವನ ಮುಡುಪಾಗಿಡಬೇಕೆಂದು ಕರೆ ನೀಡಿದರು.
ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಪಾಲರು ವಿಧುರಾಶ್ವತ್ಥಕ್ಕೆ ಆಗಮಿಸುತ್ತಿದ್ದಂತೆ ಆಶ್ವತ್ಥ ನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇಂದಿನಿಂದ ಮುಂದಿನ 75 ವಾರಗಳ ಕಾಲ ದೇಶದ ವಿವಿಧ ಸ್ಥಳಗಳಲ್ಲಿ ವಾರಕ್ಕೊಮ್ಮೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಗಳು ನಡೆಯಲಿವೆ.
ಮಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಹಿಂದುಳಿದ ವರ್ಗದವರು, ಮುಸ್ಲಿಮರು ಮತ್ತು ದಲಿತರು ಇಂದಿಗೂ ತುಳಿತಕ್ಕೊಳಗಾಗಿದ್ದಾರೆ. ಅವರ ಏಳಿಗೆಗಾಗಿ ಮತ್ತು ಸಮಾನ ಹಕ್ಕಿಗಾಗಿ ಪಿಎಫ್‍ಐ ಹೊಸ ಚಳುವಳಿಯನ್ನೇ ರೂಪಿಸಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಸಮಿತಿ ಸದಸ್ಯ ಕೆ.ಎಂ.ಶರೀಫ್ ಹೇಳಿದ್ದಾರೆ.
ಪಾಪ್ಯುಲರ್ ಫ್ರಂಟ್ ಡೇ ಪ್ರಯುಕ್ತ ಸುಳ್ಯದಲ್ಲಿ ನಡೆದ ಯುನಿಟಿ ಮಾರ್ಚ್ ಬಳಿಕ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯತೀತ ತತ್ವಗಳ ಉಳಿವಿಗೆ ಮತ್ತು ದಮನಿತರ ಧ್ವನಿಯಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಾಚರಿಸುತ್ತಿದೆ. ಅಧಿಕಾರಶಾಹಿಗಳ ದಮನಕಾರಿ ನೀತಿ ಮತ್ತು ತಾರತಮ್ಯ ನೀತಿಯಿಂದಾಗಿ ಸಮಾಜದಲ್ಲಿ ಶೋಷಣೆಗೊಳಗಾಗಿರುವ ಜನರಲ್ಲಿ ಆತ್ಮವಿಶ್ವಾಸ ಮತ್ತು ಭದ್ರತೆಯನ್ನು ತುಂಬುವುದೇ ನಮ್ಮ ಧ್ಯೇಯ. ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಅದರ ವಿರುದ್ಧ ಜನಪರವಾದ ಹೋರಾಟ ನಡೆಸುವ ಕಾರಣ ಪಿಎಫ್‍ಐ ಸರ್ಕಾರಗಳ ಕೆಂಗಣ್ಣಿಗೆ ಗುರಿಯಾಗಿದೆ ಎಂದು ಅವರು ಹೇಳಿದರು.
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಕೇರಳ ರಾಜ್ಯ ಕಾರ್ಯದರ್ಶಿ ಶಫೀಕ್ ಅಲ್ ಖಾಸಿಮಿ ಮಾತನಾಡಿ, ವಿಶ್ವಕ್ಕೆ ಮಾದರಿಯಾದ ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತ ರಾಷ್ಟ್ರವನ್ನಾಗಿ ಭಾರತವನ್ನು ಕಟ್ಟುವುದೇ ಪಿಎಫ್‍ಐ ಉದ್ದೇಶ. ಸರ್ಕಾರಗಳ ಯಾವುದೇ ದಮನಕಾರಿ ನೀತಿ ವಿರುದ್ಧ ಎದೆಯೊಡ್ಡಿ ಹೋರಾಟ ನಡೆಸುವ ಕಾರಣ ಪಿಎಫ್‍ಐ ಅಂದ ಕೂಡಲೇ ಆಡಳಿತ ಶಾಹಿಗಳಿಗೆ ಭಯ ಉಂಟಾಗುತ್ತಿದೆ ಎಂದು ಹೇಳಿದ್ರು.
ಪಿಎಫ್‍ಐ ಇಂಡಿಯಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಸಿರ್ ಹಸನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಮಜೀದ್ ಕೊಡ್ಲಿಪೇಟೆ ಮೈಸೂರು, ಅಬ್ದುಲ್ ಲತೀಫ್ ಪುತ್ತೂರು, ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ, ಕೋಶಾಧಿಕಾರಿ ಫಾರೂಖ್ ರಹ್ಮಾನ್ ಮೈಸೂರು, ನ್ಯಾಷನಲ್ ವುಮೆನ್ಸ್ ಫ್ರಂಟ್ ರಾಜ್ಯಾಧ್ಯಕ್ಷೆ ನಸೀಮಾ ಫಾತಿಮಾ, ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಚಂದ್ರಶೇಖರ್, ದಲಿತ ಮುಖಂಡ ಆನಂದ ಮಿತ್ತಬೈಲು, ಸುಳ್ಯ ನ.ಪಂ.ಸದಸ್ಯ ಕೆ.ಎಸ್.ಉಮ್ಮರ್, ಪಿಎಫ್‍ಐ ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ ಖಾದರ್ ಪುತ್ತೂರು, ಅನ್ವರ್ ಸಾದತ್, ರಾಜ್ಯ ಕಾಯದರ್ಶಿ ಅಬ್ದುಲ್ ರಝಾಕ್ ಕೆಮ್ಮಾರ, ಪ್ರಮುಖರಾದ ಮಹಮ್ಮದ್ ವಳವೂರು, ಅತಾವುಲ್ಲಾ ಜೋಕಟ್ಟೆ, ಮಮ್ಮಾಲಿ ಹಾಜಿ, ರಫೀಕ್ ದಾರಿಮಿ, ಅಬ್ದುಲ್ ಕಲಾಂ ಸುಳ್ಯ, ಶಿಹಾಬ್, ರಿಯಾಸ್ ಫರಂಗಿಪೇಟೆ, ಮಹಮ್ಮದ್ ತಫ್ಸೀರ್, ಅಮೀನ್ ಮೋಸಿಂ, ಅಮೀನ್ ಸೇಠ್, ಅಫ್ಸರ್ ಕೊಡ್ಲಿಪೇಟೆ, ಜಾಫರ್ ಸಾಧಿಕ್ ಫೈಝಿ ಉಪಸ್ಥಿತರಿದ್ದರು.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಅಧ್ಯಕ್ಷ ಅಬೂಬಕ್ಕರ್ ರಿಝ್ವಾನ್ ಸ್ವಾಗತಿಸಿ, ಸಂಶುದ್ದೀನ್ ವಂದಿಸಿದ್ದು, ಎ. ಕೆ.ಅಶ್ರಫ್ ಕಾರ್ಯಕ್ರಮ ನಿರೂಪಿಸಿದರು.