Tag: independenceDay2018

  • ಸ್ವಾತಂತ್ರ್ಯ ಕೇವಲ ರಾಜಕೀಯ ಕ್ಷೇತ್ರಕ್ಕೆ ಮಾತ್ರ ಸೀಮಿತವಲ್ಲ- ಮಾಜಿ ಸಿಎಂ

    ಸ್ವಾತಂತ್ರ್ಯ ಕೇವಲ ರಾಜಕೀಯ ಕ್ಷೇತ್ರಕ್ಕೆ ಮಾತ್ರ ಸೀಮಿತವಲ್ಲ- ಮಾಜಿ ಸಿಎಂ

    ಬೆಂಗಳೂರು: ಇಂದು ನಾಡಿನಾದ್ಯಂತ 72ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ. ಆದ್ರೆ ಈ ಸ್ವಾತಂತ್ರ್ಯ ಕೇವಲ ರಾಜಕೀಯ ರಂಗಕ್ಕೆ ಮಾತ್ರ ಸೀಮಿತವಲ್ಲ ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಸ್ವಾತ್ರಂತ್ಯ ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತವಾದುದಲ್ಲ. ಅದರ ಜತೆ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಕೂಡಾ ಸಾಕ್ಷಾತ್ಕಾರಗೊಳ್ಳಬೇಕು. ಇದನ್ನೇ ಬಾಬಾ ಸಾಹೇಬ್ ಅಂಬೇಡ್ಕರ್ ಆಶಿಸಿದ್ದು. ಇದು ನಮ್ಮೆಲ್ಲರ ಆಶಯವಾಗಬೇಕು. ದೇಶಬಾಂಧವರಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ಅಂತ ಹೇಳಿದ್ದಾರೆ.

    ಬಿಬಿಎಂಪಿ ವತಿಯಿಂದ 72 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗಿದ್ದು, ಬಿಬಿಎಂಪಿ ಕೇಂದ್ರ ಕಚೇರಿ ಮುಂಭಾಗ ಧ್ವಜಾರೋಹಣ ಮಾಡಿ ಆವರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮೇಯರ್ ಸಂಪತ್ ರಾಜ್, ಆಯುಕ್ತ ಮಂಜುನಾಥ್ ಪ್ರಸಾದ್ ಭಾಗಿಯಾಗಿದ್ದರು. ರಾಜ್ಯ, ದೇಶದ ಜನತೆಗೆ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಶುಭ ಹಾರೈಸಿದ್ರು. ಹಲವು ಮಹನಿಯರ ಬಲಿತ್ಯಾಗದಿಂದ ದೇಶ ಸ್ವಾತಂತ್ರ್ಯವಾಗಿದೆ. ನಾಡಿನ ಜನ್ರು ಸುಖ, ಶಾಂತಿಯಿಂದ ಇರಲಿ ಅಂತ ಧ್ವಜಾರೋಹಣದ ಬಳಿಕ ಮೇಯರ್ ಹೇಳಿದ್ದಾರೆ.

    ಬೆಂಗಳೂರಿನ ವೈಯಲಿಕವಲ್ ಬಳಿಯಿರುವ ಗ್ರೌಂಡ್ ನಿಂದ ಯಲಹಂಕ ಗೆ ಬೈಕ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 400ಕು ಹೆಚ್ಚು ಬೈಕ್ ಗಳು ಭಾಗಿಯಾಗಿತ್ತು.


    ಆರ್‍ಟಿ ನಗರದ ಹೆಚ್‍ಎಂಟಿ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಸುರೇಶ್ ಧ್ವಜಾರೋಹಣ ಮಾಡಿದ್ರು. ಬಳಿಕ ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಮಾಡಲಾಯಿತು. ಪರೇಡ್‍ನಲ್ಲಿ ಸರ್ಕಾರಿ, ಖಾಸಗಿ ಶಾಲೆಯ ಮಕ್ಕಳು ಭಾಗಿಯಾಗಿದ್ದರು. ಆರ್ ಟಿ ನಗರದ ಎಚ್ ಎಮ್ ಟಿ ಮೈದಾನದಲ್ಲಿ ಹೆಲಿಕಾಪ್ಟರ್ ಮೂಲಕ ಧ್ವಜಾರೋಹಣ ನಂತರ ಪುಷ್ಪಾರ್ಚನೆ ಮಾಡಿ ಆಚರಿಸಲಾಯಿತು.

    ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿಯೂ ಕೂಡ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದ್ದು, ಆಸ್ಪತ್ರೆಯ ನಿರ್ದೇಶಕರಾದ ಡಾ ಶಿವಲಿಂಗಯ್ಯ ಅವರು ಧ್ವಜಾರೋಹಣ ನೆರವೇರಿಸಿದ್ರು. ಬಳಿಕ ಆಸ್ಪತ್ರೆಯನ್ನು ಕ್ಲೀನ್ ಮಾಡೋ ಮೂಲಕ ವಿಕ್ಟೋರಿಯಾ ಸಿಬ್ಬಂದಿ ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆ ಅಚರಣೆ ಮಾಡಿದ್ರು.