Tag: india fights corona

  • ದೇಶದಲ್ಲಿ 60 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

    ದೇಶದಲ್ಲಿ 60 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

    ನವದೆಹಲಿ: ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು 60 ಲಕ್ಷ ದಾಟಿದೆ. ಒಂದೇ ದಿನ 82,170 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 60,74,703ಕ್ಕೆ ಏರಿಕೆಯಾಗಿದೆ.

    ಕಳೆದ 24 ಗಂಟೆಯಲ್ಲಿ 1,039 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದೂವರೆಗೂ ದೇಶದಲ್ಲಿ ಒಟ್ಟು 95,542 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. 60,74,703 ಸೋಂಕಿತರ ಸಂಖ್ಯೆಯಲ್ಲಿ 9,62,640 ಸಕ್ರಿಯ ಪ್ರಕರಣಗಳಿದ್ದರೆ, 5,01,6521 ಮಂದಿ ಮಹಾಮಾರಿ ಗೆದ್ದಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

    ದೇಶದಲ್ಲಿ ನಿನ್ನೆ ಒಂದೇ ದಿನ 7,09,394 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 7,19,67,230 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.