Tag: India vs England

  • ಕೇವಲ 4 ರನ್‍ಗಳಿಂದ ಡಬಲ್ ಸೆಂಚುರಿ ಮಿಸ್; ಆದ್ರೂ ದಾಖಲೆ ಬರೆದ ಒಲೀ ಪೋಪ್!

    ಕೇವಲ 4 ರನ್‍ಗಳಿಂದ ಡಬಲ್ ಸೆಂಚುರಿ ಮಿಸ್; ಆದ್ರೂ ದಾಖಲೆ ಬರೆದ ಒಲೀ ಪೋಪ್!

    ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೀಂ ಇಂಡಿಯಾ (Team India) ಹಾಗೂ ಇಂಗ್ಲೆಂಡ್ (England)  ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಒಲೀ ಪೋಪ್ (Ollie Pope)  ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅವರು 278 ಎಸೆತಗಳಲ್ಲಿ 196 ರನ್‍ಗಳನ್ನು ಗಳಿಸಿದ್ದಾರೆ.

    163 ರನ್‍ಗಳಿಗೆ 5 ವಿಕೆಟ್ ನಷ್ಟ ಅನುಭವಿಸಿದ್ದ ಇಂಗ್ಲೆಂಡ್‍ಗೆ ಆಸರೆಯಾಗಿ ನಿಂತ ಪೋಪ್ 3ನೇ ದಿನದಾಟದಲ್ಲಿ 154 ಎಸೆತಗಳಲ್ಲಿ ಶತಕ ಬಾರಿಸಿದ್ದರು. ನಾಲ್ಕನೇ ದಿನದಾಟದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ 196 ರನ್‍ಗಳಿಸಿ ವಿಕೆಟ್ ಒಪ್ಪಿಸಿದ ಅವರು, ಕೇವಲ 4 ರನ್‍ಗಳಿಂದ ದ್ವಿಶತಕ ವಂಚಿತರಾದರು. ಇದನ್ನೂ ಓದಿ: ‘ಜೈ ಶ್ರೀರಾಮ್‌ ಇಂಡಿಯಾ’: ವಿಶೇಷ ಪೋಸ್ಟ್‌ ಮೂಲಕ ರಾಮಮಂದಿರ ಪ್ರಾಣ ಪ್ರತಿಷ್ಠೆ ಆಚರಿಸಿದ ಡೇವಿಡ್‌ ವಾರ್ನರ್‌

    ಇನ್ನೂ ಈ ಮೊದಲು ಭಾರತದ ನೆಲದಲ್ಲಿ ಟೀಂ ಇಂಡಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್‍ನಲ್ಲಿ ಅತ್ಯಧಿಕ ರನ್‍ಗಳಿಸಿದ ಇಂಗ್ಲೆಂಡ್ ಬ್ಯಾಟರ್ ಅಲಿಸ್ಟರ್ ಕುಕ್ ಹೆಸರಿನಲ್ಲಿದ್ದ ದಾಖಲೆಯನ್ನು ಒಲೀ ಪೋಪ್ ಮುರಿದಿದ್ದಾರೆ. 2012 ರಲ್ಲಿ ಅಹಮದಾಬಾದ್‍ನಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆರಂಭಿಕ ಬ್ಯಾಟರ್ ಕುಕ್ 176 ರನ್ ಬಾರಿಸಿದ್ದರು. ಇದು ದಾಖಲೆಯಾಗಿತ್ತು. ಇದೀಗ ಪೋಪ್ ಆ ದಾಖಲೆಯನ್ನು ತಮ್ಮ ಪಾಲಾಗಿಸಿಕೊಂಡಿದ್ದಾರೆ.

    ಆತಿಥೇಯ ಭಾರತ ತಂಡದ ವಿರುದ್ಧ ಟೆಸ್ಟ್ ಕ್ರಿಕೆಟ್‍ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ ನಾಲ್ಕನೇ ಬ್ಯಾಟರ್ ಎಂಬ ದಾಖಲೆಯನ್ನು ಪೋಪ್ ಇದೀಗ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಕ್ರಮವಾಗಿ ಆ್ಯಂಡಿ ಫ್ಲವರ್ (232), ಬ್ರೆಂಡನ್ ಮೆಕಲಂ (225) ಹಾಗೂ ಗ್ಯಾರಿ ಸೋಬರ್ಸ್ (198) ಇದ್ದಾರೆ. ಇದೀಗ 196 ರನ್ ಗಳಿಸುವ ಮೂಲಕ ಒಲೀ ಪೋಪ್ ನಾಲ್ಕನೆಯವರಾಗಿ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: IND vs ENG, 1st Test:‌ ಟೆಸ್ಟ್ ಸರಣಿ ಮೊದಲ ದಿನದಾಟ ಅಂತ್ಯ – ಟೀಂ ಇಂಡಿಯಾ ಸ್ಪಿನ್ನರ್ಸ್ ಮಿಂಚು, ಜೈಸ್ವಾಲ್‌ ಫಿಫ್ಟಿ

  • ಬಾತುಕೋಳಿ ತಲೆಗೆ ಕೊಹ್ಲಿ ಫೋಟೊ ಹಾಕಿ ತಗ್ಲಾಕ್ಕೊಂಡ ಇಂಗ್ಲೆಂಡ್‌ ಫ್ಯಾನ್ಸ್‌ – ಇಂಗ್ಲೆಂಡ್‌ ಆರ್ಮಿಗೆ ಭಾರತ್‌ ಆರ್ಮಿ ಕೌಂಟರ್‌

    ಬಾತುಕೋಳಿ ತಲೆಗೆ ಕೊಹ್ಲಿ ಫೋಟೊ ಹಾಕಿ ತಗ್ಲಾಕ್ಕೊಂಡ ಇಂಗ್ಲೆಂಡ್‌ ಫ್ಯಾನ್ಸ್‌ – ಇಂಗ್ಲೆಂಡ್‌ ಆರ್ಮಿಗೆ ಭಾರತ್‌ ಆರ್ಮಿ ಕೌಂಟರ್‌

    ನವದೆಹಲಿ: ಭಾನುವಾರ ಇಂಗ್ಲೆಂಡ್‌ (England) ವಿರುದ್ಧದ ಪಂದ್ಯದಲ್ಲಿ ಭಾರತ (India) ತಂಡದ ಆಟಗಾರ ವಿರಾಟ್‌ ಕೊಹ್ಲಿ (Virat Kohli) ಡಕೌಟ್‌ ಆಗಿದ್ದನ್ನು ಲೇವಡಿ ಮಾಡಲು ಹೋಗಿ ಇಂಗ್ಲೆಂಡ್‌ ಅಭಿಮಾನಿಗಳು ಪೇಚಿಗೆ ಸಿಲುಕಿದ್ದಾರೆ. ಇಂಗ್ಲೆಂಡ್‌ ಅಭಿಮಾನಿಗಳಿಗೆ ಎರಡು ಡಕ್‌ (ಬಾತುಕೋಳಿ)ಗಳನ್ನ ಗಿಫ್ಟ್‌ ನೀಡಿ ಭಾರತದ ಅಭಿಮಾನಿಗಳು ಕಾಲೆಳೆದಿದ್ದಾರೆ. ಅಷ್ಟಕ್ಕೂ ನಡೆದಿದ್ದೇನು?

    ಭಾನುವಾರ ಲಕ್ನೋದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಹೈವೋಲ್ಟೇಜ್‌ ಪಂದ್ಯ ನಡೆಯಿತು. ಪಂದ್ಯದಲ್ಲಿ ಟಾಸ್‌ ಸೋತು ಭಾರತ ಮೊದಲು ಬ್ಯಾಟಿಂಗ್‌ ಮಾಡಿತು. ಭರವಸೆ ಆಟಗಾರನಾದ ವಿರಾಟ್‌ ಕೊಹ್ಲಿ ಈ ಪಂದ್ಯದಲ್ಲಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. 9 ಬಾಲ್‌ಗಳನ್ನು ಆಡಿದ ಕೊಹ್ಲಿ ಒಂದು ರನ್‌ ಕೂಡ ಕಲೆಹಾಕಲಾಗದೇ ಶೂನ್ಯಕ್ಕೆ ಔಟ್‌ ಆಗಿ ನಿರ್ಗಮಿಸಿದರು. ಕೊಹ್ಲಿ ಡಕೌಟ್‌ ಅನ್ನು ಇಂಗ್ಲೆಂಡ್‌ ಅಭಿಮಾನಿಗಳು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್‌ ವಿರುದ್ಧ 100 ರನ್‌ಗಳ ಭರ್ಜರಿ ಜಯ – 20 ವರ್ಷಗಳ ಬಳಿಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ

    ಇಂಗ್ಲೆಂಡ್ಸ್‌ ಬರ್ಮಿ ಆರ್ಮಿ ತನ್ನ ಎಕ್ಸ್‌ ಖಾತೆಯಲ್ಲಿ, ನೀರಿನಲ್ಲಿ ಈಜುತ್ತಿದ್ದ ಎರಡು ಬಾತುಕೋಳಿಗಳ ಪೈಕಿ ಒಂದರ ತಲೆಗೆ ವಿರಾಟ್‌ ಕೊಹ್ಲಿ ಚಿತ್ರವನ್ನು ಹಾಕಿದ್ದ ಎಡಿಟ್‌ ಫೋಟೊ ಹಾಕಿ ಪೋಸ್ಟ್‌ ಮಾಡಿತ್ತು. ಆ ಫೋಟೊಗೆ ‘ಬೆಳಗ್ಗೆ ವಾಕ್‌ಗೆ ಹೊರಟಾಗ’ ಎಂದು ಶೀರ್ಷಿಕೆ ನೀಡಿತ್ತು. ಇದಕ್ಕೆ ಭಾರತದ ಕ್ರಿಕೆಟ್‌ ಅಭಿಮಾನಿಗಳು ಕೆಂಡಾಮಂಡಲರಾಗಿದ್ದಾರೆ. ಅಲ್ಲದೇ ಭಾರತದ ಫ್ಯಾನ್ಸ್‌, ಇಂಗ್ಲೆಂಡ್‌ ಫ್ಯಾನ್ಸ್‌ಗೆ ಬಿಸಿ ಮುಟ್ಟಿಸಿದ್ದಾರೆ.

    ಅದೇ ಬಾತುಕೋಳಿಗಳ ಫೋಟೊಗೆ ಇಂಗ್ಲೆಂಡ್‌ ಆಟಗಾರರಾದ ಜೋ ರೂಟ್‌ (Joe Root) ಮತ್ತು ಬೆನ್‌ ಸ್ಟೋಕ್ಸ್‌ (Ben Stokes) ತಲೆ ಸೇರಿಸಿ ಇಂಗ್ಲೆಂಡ್‌ ಫ್ಯಾನ್ಸ್‌ಗೆ ದಿ ಭಾರತ್‌ ಆರ್ಮಿ ಕೌಂಟರ್‌ ಕೊಟ್ಟಿದೆ. ಜೋ ರೂಟ್‌ ಇರುವ ಫೋಟೊಗೆ ‘ಸಂಜೆ ವೇಳೆ ವಾಕ್‌ಗೆ ಹೊರಟಾಗ’ ಎಂದು ಶೀರ್ಷಿಕೆ ಕೊಟ್ಟಿದೆ. ಅಲ್ಲದೇ ಬೆನ್‌ ಸ್ಟೋಕ್ಸ್‌ ಇರುವ ಫೋಟೊಗೆ ‘ಎಡಿಟ್‌ ಮಾಡಲು ನಮಗೆ ಸ್ವಲ್ಪ ಸಮಯ ಕೊಡಿ’ ಎಂದು ಶೀರ್ಷಿಕೆ ಕೊಟ್ಟು ಠಕ್ಕರ್‌ ಕೊಟ್ಟಿದೆ.

    ಇಂಗ್ಲೆಂಡ್‌ ಬ್ಯಾಟಿಂಗ್‌ ವೇಳೆ ಜೋ ರೂಟ್‌ ಮತ್ತು ಬೆನ್‌ ಸ್ಟೋಕ್ಸ್‌ ಕೂಡ ಶೂನ್ಯಕ್ಕೆ ಔಟ್‌ ಆಗಿ ನಿರ್ಗಮಿಸಿದ್ದರು. ಹೀಗಾಗಿ ಇಂಗ್ಲೆಂಡ್‌ನ ಒಂದು ಕೌಂಟರ್‌ಗೆ ಭಾರತದ ಫ್ಯಾನ್ಸ್‌ ಎರಡು ಠಕ್ಕರ್‌ ಕೊಟ್ಟಿದ್ದಾರೆ. ಇದನ್ನೂ ಓದಿ: World Cup 2023: ಮಾರಕ ಬೌಲಿಂಗ್‌ ದಾಳಿಗೆ ತಿಣುಕಾಡಿದ ಭಾರತ – ಇಂಗ್ಲೆಂಡ್‌ಗೆ 230 ರನ್‌ ಗುರಿ

    ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ವಿರುದ್ಧ ಭಾನುವಾರ ನಡೆದ ಕ್ರಿಕೆಟ್ ವಿಶ್ವಕಪ್ 2023 ರ ಪಂದ್ಯದಲ್ಲಿ ಭಾರತ 9 ವಿಕೆಟ್‌ ನಷ್ಟಕ್ಕೆ 229 ರನ್‌ ಗಳಿಸಿತ್ತು. ನಾಯಕ ರೋಹಿತ್ ಶರ್ಮಾ ಅವರು ತಂಡದ ಪರ 87 ರನ್‌ ಗಳಿಸಿದ್ದರು. 230 ರನ್‌ಗಳ ಗುರಿ ಬೆನ್ನತ್ತಿದ್ದ ಆಂಗ್ಲರ ಪಡೆ 129 ರನ್‌ಗಳಿಗೆ ಸರ್ವಪತನ ಕಂಡಿತು. ಭಾರತ 100 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂಗ್ಲೆಂಡ್‌ ವಿರುದ್ಧ 100 ರನ್‌ಗಳ ಭರ್ಜರಿ ಜಯ – 20 ವರ್ಷಗಳ ಬಳಿಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ

    ಇಂಗ್ಲೆಂಡ್‌ ವಿರುದ್ಧ 100 ರನ್‌ಗಳ ಭರ್ಜರಿ ಜಯ – 20 ವರ್ಷಗಳ ಬಳಿಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ

    – 10 ರನ್‌ಗಳ ಅಂತರದಲ್ಲೇ 4 ವಿಕೆಟ್‌ ಉಡೀಸ್‌

    ಲಕ್ನೋ: ಮೊಹಮ್ಮದ್‌ ಶಮಿ (Mohammed Shami), ಜಸ್ಪ್ರೀತ್‌ ಬುಮ್ರಾ (Jasprit Bumrah) ಬೆಂಕಿ ಬೌಲಿಂಗ್‌ ದಾಳಿ ನೆರವಿನಿಂದ ಟೀಂ ಇಂಡಿಯಾ‌, ಇಂಗ್ಲೆಂಡ್‌ ವಿರುದ್ಧ 100 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಬರೋಬ್ಬರಿ 20 ವರ್ಷಗಳ ನಂತ್ರ ವಿಶ್ವಕಪ್‌ ಟೂರ್ನಿಯಲ್ಲಿ ಆಂಗ್ಲರನ್ನ ಸೋಲಿಸಿ ಜಯದ ಮಾಲೆ ಹಾಕಿಕೊಂಡಿದೆ. ಜೊತೆಗೆ ಸತತ 6 ಪಂದ್ಯಗಳಲ್ಲಿ ಜಯ ಸಾಧಿಸಿ, ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಜಿಗಿದಿದೆ.

    ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ನಾಯಕತ್ವದಲ್ಲಿ ಭಾರತ 2003 ರಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿತ್ತು. ಉಳಿದಂತೆ 2007, 2011, 2015 ಮತ್ತು 2019ರಲ್ಲಿ ಭಾರತ, ಇಂಗ್ಲೆಂಡ್‌ (England) ಎದುರು ವಿರೋಚಿತ ಸೋಲನುಭವಿಸಿತ್ತು. ಹೀಗಾಗಿ ಕಳೆದ 20 ವರ್ಷಗಳಿಂದ ವಿಶ್ವಕಪ್‌ ಟೂರ್ನಿಯಲ್ಲಿ ಭಾರತಕ್ಕೆ (India) ಗೆಲುವು ಸಿಕ್ಕಿರಲಿಲ್ಲ. ಇಂದು 100 ರನ್‌ಗಳ ಭರ್ಜರಿ ಜಯದೊಂದಿಗೆ ಹೊಸ ಇತಿಹಾಸ ಸೃಷ್ಟಿಸಿದೆ.

    ಚೇಸಿಂಗ್‌ ಆರಂಭಿಸಿದ ಇಂಗ್ಲೆಂಡ್‌ ಮೊದಲ ನಾಲ್ಕು ಓವರ್‌ಗಳಲ್ಲೇ 26 ರನ್‌ ಬಾರಿಸಿ ಸ್ಫೋಟಕ ಆರಂಭ ಪಡೆಯುವ ನಿರೀಕ್ಷೆ ಮೂಡಿಸಿತ್ತು. ಆದ್ರೆ 5ನೇ ಓವರ್‌ನಲ್ಲಿ ಬುಮ್ರಾ ಮಾರಕ ದಾಳಿಯಿಂದ ಎರಡು ವಿಕೆಟ್‌ ಕಿತ್ತರು. ಈ ಬೆನ್ನಲ್ಲೇ ಶಮಿ ಕೂಡ ಮಾರಕದಾಳಿ ಮುಂದುವರಿಸಿದ್ದರಿಂದ ಇಂಗ್ಲೆಂಡ್‌ 10 ರನ್‌ಗಳ ಅಂತರದಲ್ಲೇ ಪ್ರಮುಖ ನಾಲ್ಕು ವಿಕೆಟ್‌ಗಳನ್ನ ಕಳೆದುಕೊಂಡಿತ್ತು. ಇದು ತಂಡಕ್ಕೆ ಸೋಲಿನ ಮುನ್ಸೂಚನೆ ನೀಡಿತು. ಸತತ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಇಂಗ್ಲೆಂಡ್‌ 25 ಓವರ್‌ಗಳಲ್ಲಿ 6 ವಿಕೆಟ್‌ಗೆ ಕೇವಲ 84 ರನ್‌ ಗಳಿಸಿತ್ತು. ಟೀಂ ಇಂಡಿಯಾ ಬೌಲರ್‌ಗಳ ದಾಳಿಯಿಂದ ಚೇತರಿಸಿಕೊಳ್ಳಲು ಸಾಧ್ಯವಾಗದ ಇಂಗ್ಲೆಂಡ್‌ ಅಂತಿಮವಾಗಿ 129 ರನ್‌ಗಳಿಗೆ ಸರ್ವಪತನ ಕಂಡಿತು.

    ಇಂಗ್ಲೆಂಡ್‌ ಪರ ಜಾನಿ ಬೈರ್ಸ್ಟೋವ್ 14 ರನ್‌, ಡೇವಿಡ್‌ ಮಲಾನ್‌ 16 ರನ್‌ ಗಳಿಸಿದ್ರೆ ಜೋ ರೂಟ್‌, ಬೆನ್‌ಸ್ಟೋಕ್ಸ್‌ ಶೂನ್ಯಕ್ಕೆ ಔಟಾಗಿ ಪೆವಿಲಿಯನ್‌ಗೆ ಮರಳಿದರು. ನಂತರ ಜೋಸ್‌ ಬಟ್ಲರ್‌ (Jos Buttler) 10 ರನ್‌, ಮೊಯಿನ್‌ ಅಲಿ 15 ರನ್‌, ಲಿಯಾಮ್‌ ಲಿವಿಂಗ್‌ಸ್ಟೋನ್‌ 27 ರನ್‌, ಕ್ರಿಸ್‌ವೋಕ್ಸ್‌ 10 ರನ್‌ ಗಳಿಸಿದ್ರೆ, ಕೊನೆಯಲ್ಲಿ ಆದಿಲ್‌ ರಶೀದ್‌ 13 ರನ್‌ ಗಳಿಸಿದ್ರೆ, ಮಾರ್ಕ್‌ವುಡ್‌ ಶೂನ್ಯಕ್ಕೆ ಔಟಾದರು. ಡೇವಿಡ್‌ ವಿಲ್ಲಿ (David Willey) 13 ರನ್‌ ಗಳಿಸಿ ಅಜೇಯರಾಗುಳಿದರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ (Team India), ಇಂಗ್ಲೆಂಡ್‌ ತಂಡಕ್ಕೆ 230 ರನ್‌ಗಳ ಗುರಿ ನೀಡಿತ್ತು. ಬೃಹತ್‌ಮೊತ್ತ ಕಲೆಹಾಕುವ ಗುರಿ ಹೊಂದಿದ್ದ ಭಾರತಕ್ಕೆ ಆರಂಭದಲ್ಲೇ ನಿರಾಸೆಯಾಯಿತು. ಅಗ್ರಕ್ರಮಾಂಕದ ಬ್ಯಾಟರ್‌ಗಳಾದ ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ (Virat Kohli), ಶ್ರೇಯಸ್‌ ಅಯ್ಯರ್‌ ಅಲ್ಪ ಮೊತ್ತಕ್ಕೆ ಕೈಕೊಟ್ಟ ಪರಿಣಾಮ ಟೀಂ ಇಂಡಿಯಾ 50 ಓವರ್‌ಗಳಲ್ಲಿ ಕೇವಲ 229 ರನ್‌ ಗಳಿಸಲಷ್ಟೇ ಸಾಧ್ಯವಾಯಿತು.

    ಶುಭಮನ್‌ ಗಿಲ್‌ 9 ರನ್‌, ಶ್ರೇಯಸ್‌ ಅಯ್ಯರ್‌ 4 ರನ್‌ ಗಳಿಸಿದ್ರೆ, ವಿರಾಟ್‌ ಕೊಹ್ಲಿ 9 ಎಸೆತಗಳಲ್ಲಿ ಒಂದೂ ರನ್‌ ಗಳಿಸದೇ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು. ಆದ್ರೆ 4ನೇ ವಿಕೆಟ್‌ಗೆ ಜೊತೆಯಾದ ಕೆ.ಎಲ್‌ ರಾಹುಲ್‌ ಹಾಗೂ ರೋಹಿತ್‌ ಶರ್ಮಾ ಜೋಡಿ 111 ಎಸೆತಗಳಲ್ಲಿ 91 ರನ್‌ಗಳ ಜೊತೆಯಾಟ ನೀಡಿ ಚೇತರಿಕೆ ಕಂಡಿತ್ತು. ಕೆ.ಎಲ್‌ ರಾಹುಲ್‌ 58 ಎಸೆತಗಳಲ್ಲಿ 39 ರನ್‌ ಗಳಿಸಿ ಔಟಾಗುತ್ತಿದ್ದಂತೆ ಟೀಂ ಇಂಡಿಯಾ ಒಂದೊಂದೇ ವಿಕೆಟ್‌ ಕಳೆದುಕೊಂಡಿತು.

    ಆಂಗ್ಲರ ವಿರುದ್ಧ ಹೋರಾಡಿದ ರೋಹಿತ್‌ ಶರ್ಮಾ 101 ಎಸೆತಗಳಲ್ಲಿ 87 ರನ್‌ (3 ಸಿಕ್ಸರ್‌, 10 ಬೌಂಡರಿ) ಗಳಿಸಿದ್ರೆ, ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್‌ ಯಾದವ್‌ 47 ಎಸೆತಗಳಲ್ಲಿ 49 ರನ್‌ (1 ಸಿಕ್ಸರ್‌, 4 ಬೌಂಡರಿ) ಗಳಿಸಿ ಅರ್ಧಶತಕದಿಂದ ವಂಚಿತರಾದರು. ಕೊನೆಯಲ್ಲಿ ಜಸ್ಪ್ರೀತ್‌ ಬುಮ್ರಾ 16 ರನ್‌, ರವೀಂದ್ರ ಜಡೇಜಾ 8 ರನ್‌, ಮೊಹಮ್ಮದ್‌ ಶಮಿ 1 ರನ್‌ ಗಳಿಸಿದ್ರೆ, ಕುಲ್ದೀಪ್‌ ಯಾದವ್ ‌9 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು.

    ಇಂಗ್ಲೆಂಡ್‌ ಪರ ಡೇವಿಡ್‌ ವಿಲ್ಲಿ 3 ವಿಕೆಟ್‌ ಕಿತ್ತರೆ, ಕ್ರಿಸ್‌ ವೋಕ್ಸ್‌ ಮತ್ತು ಆದಿಲ್‌ ರಶೀದ್‌ ತಲಾ 2 ವಿಕೆಟ್‌ ಹಾಗೂ ಮಾರ್ಕ್‌ವುಡ್‌ ಒಂದು ವಿಕೆಟ್‌ ಪಡೆದು ಮಿಂಚಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊಹ್ಲಿ ಭರ್ಜರಿ ಬ್ಯಾಟಿಂಗ್-ಇಂಗ್ಲೆಂಡ್‍ಗೆ 8 ವಿಕೆಟ್ ಜಯ

    ಕೊಹ್ಲಿ ಭರ್ಜರಿ ಬ್ಯಾಟಿಂಗ್-ಇಂಗ್ಲೆಂಡ್‍ಗೆ 8 ವಿಕೆಟ್ ಜಯ

    ಅಹಮದಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ 3 ನೇ ಟಿ20 ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಭರ್ಜರಿ ಬ್ಯಾಟಿಂಗ್ ನಡುವೆಯೂ, ಇಂಗ್ಲೆಂಡ್ ತಂಡ ಇನ್ನು 10 ಬಾಲ್ ಉಳಿದಿರುವಂತೆ 8 ವಿಕೆಟ್‍ನಿಂದ ಗೆದ್ದು ಸರಣಿಯಲ್ಲಿ 2-1 ಮುನ್ನಡೆ ಪಡೆದುಕೊಂಡಿದೆ.

    ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಇಯಾನ್ ಮೊರ್ಗನ್ ಅತಿಥೇಯ ತಂಡವನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿದರು. ಭಾರತದ ಪರ ಆರಂಭಿಕರಾಗಿ ಬ್ಯಾಟಿಂಗಿಳಿದ ರೋಹಿತ್ ಶರ್ಮಾ 15ರನ್(17 ಬಾಲ್, 2 ಬೌಂಡರಿ) ಮತ್ತು ಕೆಎಲ್ ರಾಹುಲ್ ಮತ್ತೆ ಶೂನ್ಯಕ್ಕೆ ಔಟ್ ಆಗುವ ಮೂಲಕ ಭರವಸೆಯನ್ನು ನಿರಾಸೆ ಮಾಡಿದರು. ನಂತರ ಬಂದ ಕಳೆದ ಪಂದ್ಯದ ಹೀರೋ ಇಶಾನ್ ಕಿಶಾನ್ ಈ ಪಂದ್ಯದಲ್ಲಿ 4 ರನ್(9 ಬಾಲ್) ಸಿಡಿಸಿ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು.

    ನಂತರ ಒಂದಾದ ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ ಕೆಲ ಹೊತ್ತು ಬ್ಯಾಟಿಂಗ್‍ನಲ್ಲಿ ಮಿಂಚಿದರು ಕೂಡ ಪಂತ್ 25 ರನ್(20 ಬಾಲ್, 3 ಬೌಂಡರಿ) ಸಿಡಿಸಿ ರನ್ ಔಟ್ ಆದರು. ಒಂದು ಕಡೆ ವಿಕೆಟ್ ಬೀಳುತ್ತಿದ್ದರು ಇತ್ತ ಕೊಹ್ಲಿ ತಮ್ಮ ಎಂದಿನ ಶೈಲಿಯಲ್ಲಿ ಬ್ಯಾಟ್ ಬೀಸಿ ಅಜೇಯ 77 ರನ್( 46 ಎಸೆತ, 8 ಬೌಂಡರಿ, 4 ಸಿಕ್ಸರ್) ಸಿಡಿಸಿ ಕಡೆಯವರೆಗೆ ಕ್ರೀಸ್‍ನಲ್ಲಿದ್ದರು ಅಂತಿಮವಾಗಿ ಭಾರತ ನಿಗದಿತ 20 ಓವರ್‍ನಲ್ಲಿ 6 ವಿಕೆಟ್ ಕಳೆದುಕೊಂಡು 156 ರನ್ ಗಳಿಸಿತು. ಇಂಗ್ಲೆಂಡ್ ಪರ ಮಾರ್ಕ್‍ವುಡ್ 3 ವಿಕೆಟ್ ಮತ್ತು ಜೋರ್ಡನ್ 2 ವಿಕೆಟ್ ಕಿತ್ತು ಮಿಂಚಿದರು.

    157 ರನ್‍ಗಳ ಟಾರ್ಗೆಟ್‍ನೊಂದಿಗೆ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್‍ಗೆ ಚಹಲ್ ಆರಂಭಿಕ ಆಘಾತ ನೀಡಿದರು. ಜೋಸನ್ ರಾಯ್ 9 ರನ್(13 ಬಾಲ್, 2 ಬಾಲ್) ಔಟ್ ಆದರೆ, ಇತ್ತ ಇನ್ನೋರ್ವ ಆರಂಭಿಕ ಬ್ಯಾಟ್‍ಮ್ಯಾನ್ ಜೋಸ್ ಬಟ್ಲರ್, ಡೇವಿಡ್ ಮಲಾನ್ ಜೊತೆ ಸೇರಿ ಎರಡನೇ ವಿಕೆಟ್‍ಗೆ 58 ರನ್(39 ಬಾಲ್) ಜೊತೆಯಾಟವಾಡಿ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿದರು.

    ಈ ವೇಳೆ ದಾಳಿಗಿಳಿದ ವಾಷಿಂಗ್ಟನ್ ಸುಂದರ್ 18 ರನ್ ಗಳಿಸಿದ್ದ ಡೇವಿಡ್ ಮಲಾನ್ ವಿಕೆಟ್ ಕಬಳಿಸಿದರು. ಆದರೂ ಬಟ್ಲರ್ ತಮ್ಮ ಆರ್ಭಟ ಮುಂದುವರಿಸಿ ಅಜೇಯ 83 ರನ್(52 ಎಸೆತ, 5 ಬೌಂಡರಿ, 4 ಸಿಕ್ಸ್‍ರ್) ಸಿಡಿಸಿ ಪಂದ್ಯಗೆಲ್ಲಲು ಮಹತ್ವದ ಪಾತ್ರ ವಹಿಸಿದರು. ಇವರಿಗೆ ಉತ್ತಮ ಸಾಥ್ ನೀಡಿದ ಜಾನಿ ಬೈಸ್ರ್ಟೋವ್ ಅಜೇಯ 40 ರನ್(28 ಬಾಲ್, 5 ಬೌಂಡರಿ) ಸಿಡಿಸಿ ಇನ್ನು 10 ಬಾಲ್ ಬಾಕಿ ಇರುವಂತೆ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ ಇಂಗ್ಲೆಂಡ್ ತಂಡ 5 ಪಂದ್ಯಗಳ ಟಿ20ಸರಣಿಯಲ್ಲಿ 2-1 ಮುನ್ನಡೆ ಪಡೆದುಕೊಂಡಿದೆ.