Tag: indian

  • ಕೆನಡಾದಲ್ಲಿ ಭಾರತೀಯ ಪ್ರಜೆಗೆ ಚಾಕುವಿನಿಂದ ಇರಿದು ಕೊಲೆ

    ಕೆನಡಾದಲ್ಲಿ ಭಾರತೀಯ ಪ್ರಜೆಗೆ ಚಾಕುವಿನಿಂದ ಇರಿದು ಕೊಲೆ

    ಒಟ್ಟಾವಾ: ಭಾರತೀಯ ಪ್ರಜೆಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೆನಡಾದ(Canada) ರಾಕ್‌ಲ್ಯಾಂಡ್(Rockland) ಪ್ರದೇಶದಲ್ಲಿ ನಡೆದಿದೆ ಎಂದು ಕೆನಡಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ(Indian Embassy in Canada) ಶನಿವಾರ ತಿಳಿಸಿದೆ.

    `ಒಟ್ಟಾವಾ(Ottawa) ಬಳಿಯ ರಾಕ್‌ಲ್ಯಾಂಡ್‌ನಲ್ಲಿ ಚಾಕುವಿನಿಂದ ಇರಿದು ಭಾರತೀಯನನ್ನು ಕೊಲೆ ಮಾಡಿರುವ ದುರಂತದ ಘಟನೆಗೆ ನಾವು ತೀವ್ರ ದುಃಖಿತರಾಗಿದ್ದೇವೆ. ಶಂಕಿತ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಸಮುದಾಯ ಸಂಘದ ಮೂಲಕ ಕೊಲೆಯಾದ ವ್ಯಕ್ತಿಯ ಸಂಬಂಧಿಕರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ನಾವು ನಿಕಟ ಸಂಪರ್ಕದಲ್ಲಿದ್ದೇವೆ’ ಎಂದು ಭಾರತೀಯ ರಾಯಭಾರಿ ಕಚೇರಿ ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದೆ. ಇದನ್ನೂ ಓದಿ: ಝೆಲೆನ್ಸ್ಕಿ ತವರೂರು ಕ್ರಿವಿ ರಿಹ್‌ ಮೇಲೆ ರಷ್ಯಾ ದಾಳಿ – 18 ಮಂದಿ ಸಾವು

    ಇಂದು ಬೆಳಿಗ್ಗೆ ಕ್ಲಾರೆನ್ಸ್-ರಾಕ್‌ಲ್ಯಾಂಡ್‌ನಲ್ಲಿ ಓರ್ವನನ್ನು ಕೊಲೆ ಮಾಡಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜ್ಯದಲ್ಲಿ ಏ.8ರವರೆಗೆ ಮಳೆಯ ಮುನ್ಸೂಚನೆ

  • ನಾಪ್ತತೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿಯ ಶವ ಸ್ಕಾಟ್ಲೆಂಡ್‌ನ ನದಿಯಲ್ಲಿ ಪತ್ತೆ

    ನಾಪ್ತತೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿಯ ಶವ ಸ್ಕಾಟ್ಲೆಂಡ್‌ನ ನದಿಯಲ್ಲಿ ಪತ್ತೆ

    ಕುಟುಂಬದವರಿಗೆ ಮಾಹಿತಿ ತಲುಪಿಸಿದ್ದೇವೆ ಎಂದ ಸ್ಕಾಟ್ಲೆಂಡ್ ಪೊಲೀಸರು

    ಎಡಿನ್‌ಬರ್ಗ್: ಡಿಸೆಂಬರ್ ತಿಂಗಳ ಆರಂಭದಲ್ಲಿ ನಾಪತ್ತೆಯಾಗಿದ್ದ ಭಾರತೀಯ (Indian) ಮೂಲದ ವಿದ್ಯಾರ್ಥಿಯ ಮೃತದೇಹ ಸ್ಕಾಟ್ಲೆಂಡ್ ನದಿಯಲ್ಲಿ (Scotland River) ಪತ್ತೆಯಾಗಿದೆ.

    ಮೃತ ವಿದ್ಯಾರ್ಥಿಯನ್ನು 22 ವರ್ಷದ ಕೇರಳ (Kerala) ಮೂಲದ ಸಂತ್ರಾ ಸಾಜು ಎಂದು ಗುರುತಿಸಲಾಗಿದ್ದು, ಎಡಿನ್‌ಬರ್ಗ್ ಬಳಿಯ ನ್ಯೂಬ್ರಿಡ್ಜ್ ಹಳ್ಳಿಯ ನದಿಯೊಂದರದಲ್ಲಿ ಶವ ಪತ್ತೆಯಾಗಿದೆ.ಇದನ್ನೂ ಓದಿ: ಶಿಶಿರ್‌ ತುಂಬಾ ಒಳ್ಳೆಯ ವ್ಯಕ್ತಿ: ಮದುವೆ ಬಗ್ಗೆ Bigg Boss ಐಶ್ವರ್ಯಾ ರಿಯಾಕ್ಷನ್‌

    ಸಂತ್ರಾ ಸಾಜು ಸ್ಕಾಟಿಷ್ ರಾಜಧಾನಿ ಎಡಿನ್‌ಬರ್ಗ್‌ದಲ್ಲಿರುವ (Edinburgh) ಹೆರಿಯಟ್-ವ್ಯಾಟ್ ವಿಶ್ವವಿದ್ಯಾಲಯದಲ್ಲಿ (Heriot-Watt University) ಓದುತ್ತಿದ್ದಳು. ಡಿ.6 ರಂದು ಸಂಜೆ ಲಿವಿಂಗ್‌ಸ್ಟನ್‌ನ ಆಲ್ಮಂಡ್‌ವೇಲ್‌ನಲ್ಲಿರುವ ಅಸ್ಡಾ ಸೂಪರ್‌ಮಾರ್ಕೆಟ್‌ನಲ್ಲಿ ಸಾಜು ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದಳು. ಅದಾದ ಬಳಿಕ ಕಾಣೆಯಾಗಿದ್ದ ಸಾಜು ಕುರಿತು ಆಕೆಯ ಕುಟುಂಬಸ್ಥರು ಹಾಗೂ ಸ್ನೇಹಿತರಿಂದ ದೂರು ಸ್ವೀಕರಿಸಿದ ಪೊಲೀಸರು ಆಕೆಯ ಸುಳಿವು ಸಿಕ್ಕ ಬಳಿಕ ಮಾಹಿತಿ ನೀಡುವುದಾಗಿ ತಿಳಿಸಿದ್ದರು.

    ಆಕೆಯ ಮೈಕಟ್ಟು, ಕೊನೆಯ ಬಾರಿ ಆಕೆ ಧರಿಸಿದ ಬಟ್ಟೆ ಎಲ್ಲದರ ಮಾಹಿತಿ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದರು. ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ, ಅವಳ ಫೋಟೋ ಬಿಡುಗಡೆ ಮಾಡಿ ತೀವ್ರ ಪತ್ತೆಹಚ್ಚುವ ಪ್ರಯತ್ನದಲ್ಲಿದ್ದ ಪೊಲೀಸರಿಗೆ ಡಿ.27 ರಂದು ಬೆಳಿಗ್ಗೆ 11:55ರ ಸುಮಾರಿಗೆ ಶವ ಪತ್ತೆಯಾಗಿದ್ದು, ಆಕೆಯ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಕಾಟ್ಲೆಂಡ್ ಪೊಲೀಸರು ತಿಳಿಸಿದ್ದಾರೆ.

    ಸದ್ಯ ಮೃತದೇಹವನ್ನು ಸ್ಕಾಟ್ಲೆಂಡ್‌ನ ಪ್ರಾಸಿಕ್ಯೂಷನ್ ಸೇವೆ, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ: ಸಿಡ್ನಿ ಟೆಸ್ಟ್‌ ಬಳಿಕ ರೋಹಿತ್‌ ಗುಡ್‌ಬೈ? – ಹಿಂಟ್‌ ಕೊಟ್ಟ ರವಿ ಶಾಸ್ತ್ರಿ

  • ‘ಇಂಡಿಯನ್ 2’ ಬಜೆಟ್ ಮೀರಲು ಕಾರಣ ತಿಳಿಸಿದ ಕಮಲ್ ಹಾಸನ್

    ‘ಇಂಡಿಯನ್ 2’ ಬಜೆಟ್ ಮೀರಲು ಕಾರಣ ತಿಳಿಸಿದ ಕಮಲ್ ಹಾಸನ್

    ಮಲ್ ಹಾಸನ್ (Kamal Haasan) ನಟನೆಯ ‘ಇಂಡಿಯನ್ 2’ (Indian 2) ನಟನೆಯ ಇದೇ ಜುಲೈ 12ಕ್ಕೆ ರಿಲೀಸ್‌ಗೆ ಸಿದ್ಧವಾಗಿದೆ. ಇದೀಗ ಬಜೆಟ್ ಮಿತಿ ಮೀರಲು ಕಾರಣವೇನು ಎಂಬುದನ್ನು ಸಂದರ್ಶನವೊಂದರಲ್ಲಿ ಕಮಲ್ ಹಾಸನ್ ತಿಳಿಸಿದ್ದಾರೆ. ಇದನ್ನೂ ಓದಿ:ತಮಿಳು ನಟ ಜಯಂ ರವಿ ಬಾಳಲ್ಲಿ ಡಿವೋರ್ಸ್ ಬಿರುಗಾಳಿ?

    ಕೊವಿಡ್ ಮತ್ತು ಸಿನಿಮಾ ಸೆಟ್‌ನಲ್ಲಿ ಆದ ಅವಘಡಗಳಿಂದ ಚಿತ್ರದ ಬಜೆಟ್ ಮೀರಿತು ಎಂದು ಕಮಲ್ ಹಾಸ್ ಮಾತನಾಡಿದ್ದಾರೆ. ಕಥೆ ಮತ್ತು ನಿರ್ದೇಶಕರು ನಮ್ಮ ಬಜೆಟ್ ನಿರ್ಧರಿಸಲಿಲ್ಲ. ಕೊವಿಡ್ ನಮ್ಮ ಬಜೆಟ್ ನಿರ್ಧರಿಸಿತು. ಸೆಟ್ ನಡೆದ ಅವಘಡದಿಂದ ಚಿತ್ರತಂಡಕ್ಕೆ ನಷ್ಟವಾಯಿತು. ಆದರೆ ಸಿನಿಮಾವನ್ನು ಕೈಬಿಡದೇ ಸಿನಿಮಾ ಪೂರ್ಣಗೊಳಿಸಿದರು ಎಂದು ಕಮಲ್ ಹಾಸನ್ ಮಾತನಾಡಿದ್ದಾರೆ.

    1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ‍್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಮತ್ತದೇ ಅವತಾರದಲ್ಲಿ ನೋಡಬಹುದಾಗಿದೆ.

    ಕಮಲ್ ಹಾಸನ್ ಜೊತೆಯಲ್ಲಿ ಸಿದ್ದಾರ್ಥ್, ಎಸ್ ಜೆ ಸೂರ್ಯ, ಕಾಜಲ್ ಅಗರ್ವಾಲ್, ರಾಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಂ, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಕಣಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲಾ ಕಿಶೋರ್, ಮತ್ತು ದೀಪಾ ಶಂಕರ್ ತಾರಾಬಳಗದಲ್ಲಿದ್ದಾರೆ.

    ಎಸ್. ಶಂಕರ್ ನಿರ್ದೇಶನದಲ್ಲಿ ‘ಇಂಡಿಯನ್ 2’ (Indian 2) ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

  • ‌ತಾಯಿ ಜೊತೆ ಕಾಲ್‌ನಲ್ಲಿದ್ದಾಗಲೇ ಕೆನಡಾದಲ್ಲಿ ಭಾರತೀಯ ಯುವಕನ ಗುಂಡಿಕ್ಕಿ ಹತ್ಯೆ

    ‌ತಾಯಿ ಜೊತೆ ಕಾಲ್‌ನಲ್ಲಿದ್ದಾಗಲೇ ಕೆನಡಾದಲ್ಲಿ ಭಾರತೀಯ ಯುವಕನ ಗುಂಡಿಕ್ಕಿ ಹತ್ಯೆ

    ಒಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾ (Canada’s British Columbia) ಪ್ರಾಂತ್ಯದಲ್ಲಿ ಭಾರತೀಯ ಮೂಲದ 28 ವರ್ಷದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

    ಯುವಕನನ್ನು ಯುವರಾಜ್‌ ಗೋಯಲ್‌ ಎಂದು ಗುರುತಿಸಲಾಗಿದ್ದು, ಇವರು ಪಂಜಾಬ್‌ ಮೂದವರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಾಲ್ವರನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸರ್ರೆಯ ಮನ್ವಿರ್ ಬಸ್ರಾಮ್ (23), ಸಾಹಿಬ್ ಬಸ್ರಾ (20), ಹರ್ಕಿರತ್ ಜುಟ್ಟಿ (23 ) ಮತ್ತು ಒಂಟಾರಿಯೊದ ಕೆಲೋನ್ ಫ್ರಾಂಕೋಯಿಸ್ ( 20 ) ಎಂದು ಗುರುತಿಸಲಾಗಿದೆ.

    ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಗುಂಡಿನ ದಾಳಿಯ ಸಂಬಂಧ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಯುವರಾಜ್ ಗೋಯಲ್ ಶವವಾಗಿ ಪತ್ತೆಯಾಗಿದ್ದಾರೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ತಿಳಿಸಿದ್ದಾರೆ.

    ಸಹೋದರಿ ಚಾರು ಸಿಂಘ್ಲಾ ಅವರು ಸರ್ರೆಯಲ್ಲಿನ ಕಾರ್ ಡೀಲರ್‌ಶಿಪ್‌ನಲ್ಲಿ ಗೋಯಲ್ ಕೆಲಸ ಮಾಡುತ್ತಿದ್ದಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಅಲ್ಲದೇ ಸಹೋದರನನ್ನು ಯಾಕೆ ಕೊಲೆ ಮಾಡಿದ್ದಾರೆ ಎಂಬುದು ತಿಳಿದಿಲ್ಲ. ಅವನು ಅಂತಹ ಯಾವುದೇ ಕೆಲಸಗಳಲ್ಲಿ ಭಾಗಿಯಾಗುವವನಲ್ಲ ಎಂದಿದ್ದಾರೆ.

    ಗೋಯಲ್ ಅವರ ಸೋದರ ಮಾವ ಬವಾನ್‌ದೀಪ್, ಯುವರಾಜ್‌ ಭಾರತದಲ್ಲಿ ವಾಸವಾಗಿರುವ ತನ್ನ ತಾಯಿಯ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದನು. ಅವನು ಎಂದಿನಂತೆ ಜಿಮ್‌ ಮುಗಿಸಿ, ಫೋನ್‌ನಲ್ಲಿ ಅಮ್ಮನ ಜೊತೆ ಮಾತಾಡಿಕೊಂಡು ಬಂದು ಮನೆ ಹತ್ತಿರ ಕಾರು ನಿಲ್ಲಿಸಿ ಇಳಿಯುತ್ತಿದ್ದಂತೆಯೇ ಆತನ ಮೇಲೆ ಗುಂಡು ಹಾರಿಸಲಾಯಿತು ಎಂದು ತಿಳಿಸಿದ್ದಾರೆ.

    ಈ ಕೊಲೆಗೆ ಕಾರಣ ಏನು ಎಂಬುದನ್ನು ತಿಳಿಯಲು ಪೊಲೀಸರು ತನಿಖೆಗೆ ಇಳಿದಿದ್ದಾರೆ. ಅಲ್ಲದೇ ಈ ಸಂಬಂಧ ಸಿಸಿಟಿವಿ ದೃಶ್ಯಗಳನ್ನು ಕೂಡ ಪರಿಶೀಲನೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

  • 1 ಕೆಜಿ ಗಾಂಜಾ ಕಳ್ಳಸಾಗಣೆ ಆರೋಪ – ಭಾರತ ಮೂಲದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಸಿಂಗಾಪುರ

    1 ಕೆಜಿ ಗಾಂಜಾ ಕಳ್ಳಸಾಗಣೆ ಆರೋಪ – ಭಾರತ ಮೂಲದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಸಿಂಗಾಪುರ

    ಸಿಂಗಾಪುರ: ಸುಮಾರು 1 ಕೆಜಿ ತೂಕದಷ್ಟು ಗಾಂಜಾವನ್ನು ಕಳ್ಳಸಾಗಣೆ (Cannabis Smuggling) ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ ಭಾರತ ಮೂಲದ ವ್ಯಕ್ತಿಯನ್ನು (Indian) ಸಿಂಗಾಪುರ (Singapore) ಗಲ್ಲಿಗೇರಿಸಿದೆ.

    ಅಂತಾರಾಷ್ಟ್ರೀಯ ಮಟ್ಟದ ವಿರೋಧದ ನಡುವೆಯೂ ಭಾರತ ಮೂಲದ ವ್ಯಕ್ತಿ ತಂಗರಾಜು ಸುಪ್ಪಯ್ಯನನ್ನು (46) ಸಿಂಗಾಪುರದ ಚಾಂಗಿ ಜೈಲು ಸಂಕೀರ್ಣದಲ್ಲಿ ಬುಧವಾರ ಗಲ್ಲಿಗೇರಿಸಲಾಗಿದೆ (Hanging) ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    2017 ರಲ್ಲಿ ತಂಗರಾಜು 1,017.9 ಗ್ರಾಂ. ಗಾಂಜಾವನ್ನು ಕಳ್ಳಸಾಗಣೆ ಮಾಡುವ ಸಂಚಿನಲ್ಲಿ ತೊಡಗಿದ್ದಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದ. ಸಿಂಗಾಪುರದ ಕಾನೂನಿನ ಪ್ರಕಾರ ಗಲ್ಲುಶಿಕ್ಷೆಗೆ ಗುರಿಪಡಿಸಲು ಇರುವ ಪ್ರಮಾಣದ 2 ಪಟ್ಟು ಮಾದಕ ವಸ್ತು ಆತನ ಬಳಿ ಸಿಕ್ಕಿತ್ತು. 2018ರಲ್ಲಿ ಆತನಿಗೆ ಮರಣದಂಡನೆ ವಿಧಿಸಲಾಗಿತ್ತು. ಇದನ್ನು ಮೇಲ್ಮನವಿ ನ್ಯಾಯಾಲಯ ಕೂಡಾ ಬಳಿಕ ಎತ್ತಿ ಹಿಡಿದಿತ್ತು.

    ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಸೇರಿದಂತೆ ಅಂತಾರಾಷ್ಟ್ರೀಯ ಸಂಸ್ಥೆಗಳು ತಂಗರಾಜುವಿನ ಗಲ್ಲುಶಿಕ್ಷೆಯನ್ನು ಮರುಪರಿಶೀಲನೆ ನಡೆಸುವಂತೆ ಸಿಂಗಾಪುರ ಸರ್ಕಾರವನ್ನು ಒತ್ತಾಯಿಸಿವೆ. ಆದರೆ ಇವಾವುದಕ್ಕೂ ಕಿವಿಗೊಡದ ಅಲ್ಲಿನ ಸರ್ಕಾರ ತಂಗರಾಜುನನ್ನು ಗಲ್ಲಿಗೇರಿಸಿದೆ. ಇದನ್ನೂ ಓದಿ: 40 ಮಹಿಳೆಯರಿಗೆ ಒಬ್ನೇ ಪತಿ

    ತಂಗರಾಜುನನ್ನು ಬಂಧಿಸಲಾದ ಸಂದರ್ಭ ಆತನ ಬಳಿ ಎಲ್ಲಿಯೂ ಡ್ರಗ್ಸ್ ಪತ್ತೆಯಾಗಿರಲಿಲ್ಲ. ಅಮಾಯಕ ವ್ಯಕ್ತಿಯನ್ನು ವಿನಾಕಾರಣ ಕೊಲ್ಲಲಾಗುತ್ತಿದೆ ಎಂದು ಜಿನೀವಾ ಮೂಲದ ಮಾದಕ ವಸ್ತು ನೀತಿಗಳ ಜಾಗತಿಕ ಆಯೋಗದ ಸದಸ್ಯ ರಿಚರ್ಡ್ ಬ್ರಾನ್ಸರ್ ಅವರು ತಮ್ಮ ಬ್ಲಾಗ್‌ನಲ್ಲಿ ಸೋಮವಾರ ಬರೆದಿದ್ದರು. ಆದರೆ ತಂಗರಾಜುವಿನ ತಪ್ಪನ್ನು ಸಮಂಜಸವಾದ ಅನುಮಾನದಾಚೆಗೂ ಸಾಬೀತುಪಡಿಸಲಾಗಿದೆ ಎಂದು ಸಿಂಗಾಪುರದ ಗೃಹ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ.

    ಜಗತ್ತಿನ ಅತ್ಯಂತ ಕಠಿಣ ಮಾದಕವಸ್ತು ವಿರೋಧಿ ಕಾನೂನುಗಳಿರುವ ದೇಶಗಳಲ್ಲಿ ಸಿಂಗಾಪುರ ಒಂದಾಗಿದೆ. ಅಲ್ಲಿ ಮಾದಕವಸ್ತುಗಳ ಕಳ್ಳಸಾಗಣೆಯನ್ನು ತಡೆಯಲು ಮರಣ ದಂಡನೆ ಶಿಕ್ಷೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಅಲ್ಲಿನ ಸರ್ಕಾರ ಹೇಳಿದೆ. ಆದರೆ ಸಿಂಗಾಪುರದ ವಾದವನ್ನು ವಿಶ್ವಸಂಸ್ಥೆಗಳ ಮಾನವ ಹಕ್ಕುಗಳ ಹೈ ಕಮಿಷನ್ ಖಂಡಿಸಿದೆ.

    ಕಳೆದ 6 ತಿಂಗಳಲ್ಲಿ ಸಿಂಗಾಪುರದಲ್ಲಿ ಜಾರಿಗೊಳಿಸಲಾದ ಮೊದಲ ಮರಣದಂಡನೆ ತಂಗರಾಜುವಿನದ್ದಾಗಿದೆ. 2 ವರ್ಷಗಳ ಅಂತರದ ಬಳಿಕ 2022ರ ಮಾರ್ಚ್‌ನಲ್ಲಿ ಸಿಂಗಾಪುರ ಮರಣದಂಡನೆ ಶಿಕ್ಷೆಯನ್ನು ಮತ್ತೆ ಆರಂಭಿಸಿತು. ಅದರಲ್ಲಿ ಇದು 12ನೇ ಶಿಕ್ಷೆಯಾಗಿದೆ. ಇದನ್ನೂ ಓದಿ: ಉತ್ತರ ಪ್ರದೇಶ ಅಂದ್ರೆ ಗೂಂಡಾ ರಾಜ್ಯ ಅನ್ನೋ ವಾತಾವರಣವಿತ್ತು – ಸುಮಲತಾ

  • ನೇಪಾಳದ ಅನ್ನಪೂರ್ಣ ಪರ್ವತವೇರುತ್ತಿದ್ದಾಗ ನಾಪತ್ತೆಯಾಗಿದ್ದ ಭಾರತದ ಪರ್ವತಾರೋಹಿ ಜೀವಂತವಾಗಿ ಪತ್ತೆ

    ನೇಪಾಳದ ಅನ್ನಪೂರ್ಣ ಪರ್ವತವೇರುತ್ತಿದ್ದಾಗ ನಾಪತ್ತೆಯಾಗಿದ್ದ ಭಾರತದ ಪರ್ವತಾರೋಹಿ ಜೀವಂತವಾಗಿ ಪತ್ತೆ

    ಕಠ್ಮಂಡು: ನೇಪಾಳದ (Nepal) ಅನ್ನಪೂರ್ಣ ಪರ್ವತವನ್ನು (Mount Annapurna) ಏರುತ್ತಿದ್ದ ವೇಳೆ ಆಳವಾದ ಬಿರುಕಿನೊಳಗೆ ಬಿದ್ದು ಸೋಮವಾರದಿಂದ ನಾಪತ್ತೆಯಾಗಿದ್ದ ಭಾರತೀಯ ಪರ್ವತಾರೋಹಿ (Indian Climber) ಅನುರಾಗ್ ಮಾಲೂ (Anurag Maloo) ಅವರನ್ನು ಜೀವಂತವಾಗಿ ಪತ್ತೆಹಚ್ಚಲಾಗಿದೆ.

    34 ವರ್ಷದ ಭಾರತೀಯ ವಾಣಿಜ್ಯೋದ್ಯಮಿ ಮತ್ತು ಅನುಭವಿ ಪರ್ವತಾರೋಹಿ ಅನುರಾಗ್ ಮಾಲೂ ಸೋಮವಾರ ನಾಪತ್ತೆಯಾಗಿದ್ದರು. ಸೋಮವಾರ 4ನೇ ಕ್ಯಾಂಪ್‌ನಿಂದ ಹಿಂತಿರುಗುತ್ತಿದ್ದಾಗ 3ನೇ ಕ್ಯಾಂಪ್ ಬಳಿ ಬಿರುಕಿನಲ್ಲಿ ಬಿದ್ದಿದ್ದರು. ಅನ್ನಪೂರ್ಣ ಪರ್ವತ ವಿಶ್ವದ 10ನೇ ಅತಿ ಎತ್ತರದ ಪರ್ವತವಾಗಿದೆ.

    ಇದೀಗ ಅನುರಾಗ್ ಅವರನ್ನು ರಕ್ಷಣಾ ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ಅನುರಾಗ್ ಸದ್ಯ ಜೀವಂತವಾಗಿ ಪತ್ತೆಯಾಗಿದ್ದರೂ ಅವರ ಸ್ಥಿತಿ ಚಿಂತಾಜನಕವಾಗಿದೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಬೇಕಿದೆ ಎಂದು ಅನುರಾಗ್ ಸಹೋದರ ಸುಧೀರ್ ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್‌ಗೆ ಹಿನ್ನಡೆ – ಜೈಲು ಶಿಕ್ಷೆಗೆ ತಡೆ ಕೋರಿದ ಅರ್ಜಿ ವಜಾ

    ಅನುರಾಗ್ ರಾಜಸ್ಥಾನದ ಕಿಶನ್‌ಗಢ್ ಮೂಲದವರಾಗಿದ್ದು ರೆಕ್ಸ್ ಕರಮ್‌ವೀರ್ ಚಕ್ರ ಪ್ರಶಸ್ತಿಯನ್ನು ಪಡೆದಿದ್ದಾರೆ. ಅನುಭವಿ ಪರ್ವತಾರೋಹಿಯಾಗಿರುವ ಮಾಲೂ ಕಳೆದ ವರ್ಷ ಮೌಂಟ್ ಅಮಾ ದಬ್ಲಾಮ್ ಅನ್ನು ಹತ್ತಿದ್ದರು. ಈ ಋತುವಿನಲ್ಲಿ ನೇಪಾಳದ ಮೌಂಟ್ ಎವರೆಸ್ಟ್, ಅನ್ನಪೂರ್ಣ ಮತ್ತು ಲೊಟ್ಸೆಯನ್ನು ಏರುವ ಯೋಜನೆಯನ್ನು ಅವರು ಮಾಡಿದ್ದರು.

    8,000 ಮೀ. ಎತ್ತರದ ಎಲ್ಲಾ 14 ಶಿಖರಗಳನ್ನು ಮತ್ತು ಎಲ್ಲಾ 7 ಖಂಡಗಳಲ್ಲಿನ 7 ಎತ್ತರದ ಪ್ರದೇಶಗಳನ್ನು ಏರುವುದು ಮಾಲೂ ಗುರಿಯಾಗಿದೆ. ಇದನ್ನೂ ಓದಿ: ಕಾಲ್ತುಳಿತಕ್ಕೆ ಮಹಿಳೆ, ಮಕ್ಕಳು ಸೇರಿದಂತೆ 85 ಮಂದಿ ಸಾವು

  • ಸುಡಾನ್ ಸೈನಿಕರ ಸಂಘರ್ಷ – ಗುಂಡೇಟಿಗೆ ಭಾರತ ಮೂಲದ ವ್ಯಕ್ತಿ ಬಲಿ

    ಸುಡಾನ್ ಸೈನಿಕರ ಸಂಘರ್ಷ – ಗುಂಡೇಟಿಗೆ ಭಾರತ ಮೂಲದ ವ್ಯಕ್ತಿ ಬಲಿ

    – 56 ಸಾವು, 500ಕ್ಕೂ ಹೆಚ್ಚು ಜನರಿಗೆ ಗಾಯ

    ಖಾರ್ಟೂಮ್: ಸುಡಾನ್‌ನಲ್ಲಿ (Sudan) ಮಿಲಿಟರಿ ಹಾಗೂ ಪ್ಯಾರಾಮಿಲಿಟರಿ ನಡುವೆ ಸಂಘರ್ಷ (Clash) ಉಂಟಾಗಿದ್ದು, ಪರಿಣಾಮ 56 ಜನರು ಸಾವನ್ನಪ್ಪಿದ್ದಾರೆ. 500ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ ಎಂದು ಸುಡಾನ್ ಕೇಂದ್ರ ಮಂಡಳಿ ತಿಳಿಸಿದೆ.

    ಸುಡಾನ್ ಸೈನಿಕರ ಸಂಘರ್ಷದಲ್ಲಿ ಸಾವನ್ನಪ್ಪಿದವರ ಪೈಕಿ ಒಬ್ಬ ಭಾರತ ಮೂಲದ ವ್ಯಕ್ತಿಯೂ (Indian) ಸೇರಿದ್ದಾರೆ ಎಂದು ವರದಿಯಾಗಿದೆ. ಸುಡಾನ್‌ನಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯನೊಬ್ಬ ಶನಿವಾರ ಗುಂಡು ತಗುಲಿ ಗಾಯಗೊಂಡಿದ್ದು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಸುಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮಾಡಿ ತಿಳಿಸಿದೆ.

    ಸುಡಾನ್ ಸಂಘರ್ಷದಲ್ಲಿ ಸಾವನ್ನಪ್ಪಿರುವ ಭಾರತೀಯನ ಕುಟುಂಬಕ್ಕೆ ಸಹಾಯ ಮಾಡಲು ರಾಯಭಾರ ಕಚೇರಿ ಎಲ್ಲಾ ಪ್ರಯತ್ನ ಮಾಡುತ್ತಿದೆ. ಖಾರ್ಟೂಮ್‌ನಲ್ಲಿನ (Khartoum) ಪರಿಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ. ನಾವು ಈ ಬೆಳವಣಿಗೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಇದನ್ನೂ ಓದಿ: ಅತಿಕ್, ಅಶ್ರಫ್ ಹತ್ಯೆ – ಮೂವರು ಹಂತಕರ ಬಂಧನ, ಯುಪಿಯಲ್ಲಿ ಹೈ ಅಲರ್ಟ್

    ಸುಡಾನ್‌ನ ರಾಜಧಾನಿ ಖಾರ್ಟೂಮ್‌ನಲ್ಲಿ ಸೇನೆ ಹಾಗೂ ಅರೆಸೈನಿಕ ಪಡೆಯ ನಡುವೆ ಅಧಿಕಾರಕ್ಕೆ ಸಂಬಂಧಪಟ್ಟಂತೆ ಸಂಘರ್ಷ ಉಂಟಾಗಿದೆ. ಮಿಲಿಟರಿ ಆಡಳಿತದ ವಿರುದ್ಧ ಅರೆಸೇನಾಪಡೆ ದಂಗೆ ಎದ್ದಿದ್ದು, ಖಾರ್ಟೂಮ್‌ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಅಧ್ಯಕ್ಷರ ನಿವಾಸವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದೆ. ಈ ಹಿನ್ನೆಲೆ ಎರಡೂ ಕಡೆಗಳಿಂದ ಗುಂಡಿನ ಚಕಮಕಿ ನಡೆದಿದೆ.

    ಶನಿವಾರ ಬೆಳಗ್ಗೆ ಸಂಘರ್ಷ ಸ್ವಲ್ಪ ಮಟ್ಟಿನಲ್ಲಿ ಪ್ರಾರಂಭವಾಗಿದ್ದು, ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಗುಂಡಿನ ದಾಳಿಗೆ ತುತ್ತಾದವರಲ್ಲಿ ಅಮಾಯಕ ನಾಗರಿಕ ಸಂಖ್ಯೆಯನ್ನು ಮಾತ್ರವೇ ಪ್ರಕಟಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಆರ್‌ಸಿಬಿ, ಚೆನ್ನೈ ಮ್ಯಾಚ್ – ಟಿಕೆಟ್‍ಗಾಗಿ ಮುಗಿಬಿದ್ದ ಅಭಿಮಾನಿಗಳಿಗೆ ಲಾಠಿ ಚಾರ್ಜ್

  • ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನ – ಭಾರತೀಯರು ಸೇರಿ 8 ಮಂದಿ ಸಾವು

    ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನ – ಭಾರತೀಯರು ಸೇರಿ 8 ಮಂದಿ ಸಾವು

    ವಾಷಿಂಗ್ಟನ್: ಕೆನಡಾದಿಂದ (Canada) ಅಮೆರಿಕಕ್ಕೆ (US) ಅಕ್ರಮವಾಗಿ ದಾಟಲು ಯತ್ನಿಸಿದ್ದ ಇಬ್ಬರು ಮಕ್ಕಳು ಸೇರಿದಂತೆ 8 ಜನರ ಶವಗಳನ್ನು ಕೆನಡಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಮೃತರೆಲ್ಲರೂ ಸೇಂಟ್ ಲಾರೆನ್ಸ್ ನದಿಯ ಮೂಲಕ ದೋಣಿ ಮೂಲಕ ಕೆನಡಾದಿಂದ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದರು. ಇವರಲ್ಲಿ ಭಾರತೀಯರು (Indian) ಸೇರಿದ್ದಾರೆ.

    ಮೃತರಲ್ಲಿ ಓರ್ವ ಮಹಿಳೆಯನ್ನು ಭಾರತ ಮೂಲದವರು ಹಾಗೂ ಮತ್ತೋರ್ವನನ್ನು ಕೆನಡಾ ಮೂಲದವರು ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೆನಡಾದಿಂದ ಅಕ್ರಮವಾಗಿ ಅಮೆರಿಕಾಕ್ಕೆ ದಾಟಲು ಪ್ರಯತ್ನಿಸುತ್ತಿದ್ದರು. ಆದರೆ ಕೆನಡಾ- ಅಮೆರಿಕಾ ಗಡಿಯ ಬಳಿಯ ಜವುಗು ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ಮಾಡಾಳ್‍ನ ಮೈಂಟೇನ್ ಮಾಡೋದೇ ‘ಲೋಕಾ’ಗೆ ಸವಾಲು- ರಾತ್ರಿಪೂರ್ತಿ ಕಣ್ಣೀರಿಡ್ತಿರೋ ಭ್ರಷ್ಟ ಮಾಡಾಳ್

    ಘಟನೆಗೆ ಸಂಬಂಧಿಸಿ ಕೆನಡಾ ಅಧಿಕಾರಿಗಳು ಮಾತನಾಡಿ, ಈ ಪ್ರದೇಶದಲ್ಲಿ ವೈಮಾನಿಕ ಶೋಧ ನಡೆಸಿದಾಗ ಮೊದಲ ಶವ ಪತ್ತೆಯಾಗಿದೆ. ನಾಪತ್ತೆ ಆದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ದೇವಸ್ಥಾನದ ಹುಂಡಿಗೆ ಹಾಕಲು ತೆಗೆದುಕೊಂಡು ಹೋಗುತ್ತಿದ್ದ 2.50 ಸಾವಿರ ಹಣ ಸೀಜ್

    .

  • ತಮಿಳುನಾಡಿನ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ಆಸ್ಟ್ರೇಲಿಯಾ ಪೊಲೀಸರು

    ತಮಿಳುನಾಡಿನ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ಆಸ್ಟ್ರೇಲಿಯಾ ಪೊಲೀಸರು

    ಕ್ಯಾನ್ಬೆರಾ: ಸಿಡ್ನಿ (Sydney) ರೈಲ್ವೆ ನಿಲ್ದಾಣದಲ್ಲಿ ಕ್ಲೀನರ್‌ಗೆ ಚಾಕುವಿನಿಂದ ಇರಿದ ಹಾಗೂ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಆಸ್ಟ್ರೇಲಿಯಾ ಪೊಲೀಸರು (Australian police) ಭಾರತೀಯನನ್ನು (Indian) ಗುಂಡಿಕ್ಕಿ ಕೊಂದಿದ್ದಾರೆ.

    ಮೃತನನ್ನು ತಮಿಳುನಾಡು (Tamil Nadu) ಮೂಲದ ಮೊಹಮ್ಮದ್ ರಹಮತುಲ್ಲಾ ಸೈಯದ್ ಅಹ್ಮದ್ (32) ಎಂದು ಗುರುತಿಸಲಾಗಿದೆ. ಈತ ಬ್ರಿಡ್ಜಿಂಗ್ ವೀಸಾದಲ್ಲಿ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿದ್ದ.

    ಅಹ್ಮದ್ ಆಬರ್ನ್ ಪೊಲೀಸ್ ಠಾಣೆಯನ್ನು ತಲುಪುವ ಮೊದಲು ಸಿಡ್ನಿಯ ಆಬರ್ನ್ ಠಾಣೆಯಲ್ಲಿ 28 ವರ್ಷದ ಕ್ಲೀನರ್ ಮೇಲೆ ಹಲ್ಲೆ ನಡೆಸಿದ್ದ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ರೈಲುಗಳ ನಡುವೆ ಭೀಕರ ಅಪಘಾತ- 16 ಮಂದಿ ದುರ್ಮರಣ

    ಈ ವೇಳೆ ಪೊಲೀಸ್ ಠಾಣೆಯಿಂದ ಹೊರಬರುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಅಹ್ಮದ್‍ಗೆ ಎದುರಾದರು. ಅವರ ಮೇಲೂ ಅಹ್ಮದ್ ದಾಳಿ ಮಾಡಲು ಪ್ರಯತ್ನಿಸಿದ್ದ. ಈ ಹಿನ್ನೆಲೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ದಾಳಿಯಿಂದ ತಪ್ಪಿಸಿಕೊಳ್ಳಲು 3 ಬಾರಿ ಗುಂಡು ಹಾರಿಸಿದ್ದಾರೆ. ಈ ವೇಳೆ 2 ಗುಂಡು ಅಹ್ಮದ್ ಎದೆಗೆ ತಗುಲಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ. ಇದನ್ನೂ ಓದಿ: ಭಾರತ ಮಾತ್ರವಲ್ಲದೇ ವಿದೇಶದಲ್ಲೂ ಅಂಬಾನಿ, ಕುಟುಂಬಕ್ಕೆ z+ ಭದ್ರತೆ ನೀಡಿ: ಸುಪ್ರೀಂ

  • ಲಂಕಾ ಆರ್ಥಿಕ ಬಿಕ್ಕಟ್ಟು – ಶಾಲೆಗಳ ಪಠ್ಯಪುಸ್ತಕ ಮುದ್ರಣಕ್ಕೆ ಭಾರತದಿಂದ ಭಾರೀ ನೆರವು

    ಲಂಕಾ ಆರ್ಥಿಕ ಬಿಕ್ಕಟ್ಟು – ಶಾಲೆಗಳ ಪಠ್ಯಪುಸ್ತಕ ಮುದ್ರಣಕ್ಕೆ ಭಾರತದಿಂದ ಭಾರೀ ನೆರವು

    ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ನರಳುತ್ತಿರುವ ಶ್ರೀಲಂಕಾಗೆ (Srilanka) 2023ನೇ ಸಾಲಿನ ಶಾಲಾ (School) ಮಕ್ಕಳಿಗೆ ಪಠ್ಯಪುಸ್ತಕಗಳ ಮುದ್ರಣಕ್ಕೆ ಅಗತ್ಯ ನೆರವು ನೀಡಲು ಭಾರತ ಮುಂದಾಗಿದ್ದು, 4 ವರ್ಷಗಳಲ್ಲಿ 2.9 ಶತಕೋಟಿ ಡಾಲರ್ ನೆರವು ನೀಡಲಿದೆ.

    ಭಾರತೀಯ ಸಾಲ ಯೋಜನೆ ಅಡಿಯಲ್ಲಿ ಪಠ್ಯಪುಸ್ತಕ (Text Book) ಮುದ್ರಣಕ್ಕೆ ಅಗತ್ಯವಿರುವ ಕಾಗದ, ಶಾಯಿ ಸೇರಿದಂತೆ ಕಚ್ಚಾವಸ್ತುಗಳನ್ನು ಆಮದು ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುಸಿಲ್ ಪ್ರೇಮೇಜನಾಥ ತಿಳಿಸಿದ್ದಾರೆ. ಇದನ್ನೂ ಓದಿ: ಗೇಮಿಂಗ್ ಆ್ಯಪ್ ಸ್ಕ್ಯಾಮ್- ಉದ್ಯಮಿ ಮನೆಯಿಂದ 12 ಕೋಟಿ ನಗದು ವಶ

    SRILANKA (1)

    ಡಾಲರ್ ಕೊರತೆ ಇರುವುದರಿಂದ ಪಠ್ಯಪುಸ್ತಕಗಳ ಮುದ್ರಣಕ್ಕೆ ಅತ್ಯಂತ ಪ್ರಮುಖವಾಗಿ ಬೇಕಾದ ಕಚ್ಚಾವಸ್ತುಗಳ ಖರೀದಿಗೂ ಶ್ರೀಲಂಕಾ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಕಳೆದ ವರ್ಷದ ಮಾರ್ಚ್ನಲ್ಲಿ ಪ್ರಶ್ನೆಪತ್ರಿಕೆ ಮುದ್ರಿಸಲು ಕಾಗದದ ಕೊರತೆ ಉಂಟಾಗಿದ್ದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಪರೀಕ್ಷೆ ರದ್ದುಪಡಿಸಲಾಗಿತ್ತು.

    ಉಚಿತ ಶಿಕ್ಷಣ ಯೋಜನೆಯಡಿ ಶ್ರೀಲಂಕಾವು ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ಒದಗಿಸುತ್ತದೆ. 2023ರ ಶೈಕ್ಷಣಿಕ ವರ್ಷದಲ್ಲಿ ಪಠ್ಯಪುಸ್ತಕ ಮುದ್ರಣಕ್ಕೆ ಸುಮಾರು 44 ಮಿಲಿಯನ್ ಡಾಲರ್ ಖರ್ಚಾಗಲಿದೆ ಎಂದು ಅಂದಾಜಿಸಿದೆ. ಇದನ್ನೂ ಓದಿ: 6 ತಿಂಗಳು ರಜೆ ಹಾಕಿ- ಡೀನ್ ವಿರುದ್ಧ ಸಚಿವ ಸೋಮಣ್ಣ ಗರಂ

    ಹಾಗಾಗಿ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ(IMF) ಆರ್ಥಿಕ ಬಿಕ್ಕಟ್ಟಿನಿಂದ ಲಂಕಾವನ್ನು ರಕ್ಷಿಸಲು ವಿವಿಧ ಷರತ್ತುಗಳೊಂದಿಗೆ 4 ವರ್ಷಗಳಲ್ಲಿ 2.9 ಶತಕೋಟಿ ಡಾಲರ್ ನೆರವು ನೀಡಲಿದೆ. ಇದರಿಂದ 2022ರಲ್ಲಿ ಭಾರತ ದೇಶವೊಂದರಿಂದಲೇ ಲಂಕಾಕ್ಕೆ 4 ಶತಕೋಟಿ ಡಾಲರ್ ನೆರವು ಒದಗಿಸಿದಂತಾಗುತ್ತದೆ.

    Live Tv
    [brid partner=56869869 player=32851 video=960834 autoplay=true]