Tag: indian air force

  • ರಷ್ಯಾದಿಂದ ಶೀಘ್ರದಲ್ಲೇ ಇನ್ನಷ್ಟು S-400 ಭಾರತಕ್ಕೆ – 10,000 ಕೋಟಿ ಡೀಲ್‌ ಫೈನಲ್‌

    ರಷ್ಯಾದಿಂದ ಶೀಘ್ರದಲ್ಲೇ ಇನ್ನಷ್ಟು S-400 ಭಾರತಕ್ಕೆ – 10,000 ಕೋಟಿ ಡೀಲ್‌ ಫೈನಲ್‌

    ನವದೆಹಲಿ: ರಷ್ಯಾದಿಂದ ಶೀಘ್ರದಲ್ಲೇ S-400 ವಾಯು ರಕ್ಷಣಾ ವ್ಯವಸ್ಥೆಗಾ0 (S 400 Air Defence)ಗಿ ಹೆಚ್ಚಿನ ಸಂಖ್ಯೆಯ ಕ್ಷಿಪಣಿಗಳನ್ನ ಖರೀದಿಸಲು ಭಾರತ ಸಿದ್ಧತೆ ನಡೆಸುತ್ತಿದೆ. ಅದಕ್ಕಾಗಿ 10,000 ಕೋಟಿ ರೂ. ಒಪ್ಪಂದ ಅಂತಿಮಗೊಳಿಸಲಾಗಿದೆ.

    ವಾಯುಪಡೆಯ (Indian Air Force) ಗೇಮ್‌ ಚೇಂಜರ್‌ ಎಂದೇ ಗುರುತಿಸಿಕೊಂಡಿರುವ S-400 ವಾಯುರಕ್ಷಣಾ ವ್ಯವಸ್ಥೆ ಈಗಾಗಲೇ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತು ಮಾಡಿದೆ. ಆದ್ದರಿಂದ ವಾಯುರಕ್ಷಣಾ ಸಾಮರ್ಥ್ಯವನ್ನು ಇನ್ನಷ್ಟು ಬಲಪಡಿಸಲು ಎಸ್‌-400 ಖರೀದಿಗೆ ಭಾರತ ಮುಂದಾಗಿದೆ.

    ಈ ಒಪ್ಪಂದದ ಕುರಿತು ಭಾರತ ಮತ್ತು ರಷ್ಯಾದ ನಡುವೆ ಮಾತುಕತೆ ಅಂತಿಮಗೊಂಡಿದೆ. ಅ.23ರಂದು ರಕ್ಷಣಾ ಸಚಿವಾಲಯದ ರಕ್ಷಣಾ ಸ್ವಾಧೀನ ಮಂಡಳಿಯು ಸಭೆ ಸೇರಲಿದ್ದು, ಅಧಿಕೃತ ಹೇಳಿಕೆಯನ್ನು ಪ್ರಕಟಿಸಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಭಾರತೀಯ ಸೇನೆಗೆ ಬ್ರಹ್ಮೋಸ್ ಕ್ಷಿಪಣಿ ಬ್ರಹ್ಮಾಸ್ತ್ರ – ಶೀಘ್ರದಲ್ಲೇ ಮಿಸೈಲ್ ಸಾಮರ್ಥ್ಯ 800 ಕಿಮೀಗೆ ಹೆಚ್ಚಳ

    2018ರಲ್ಲಿ ಭಾರತ ಎಸ್‌-400 ವಾಯು ರಕ್ಷಣಾ ವ್ಯವಸ್ಥೆಗಳಿಗಾಗಿ ರಷ್ಯಾದೊಂದಿಗೆ 5.5 ಶತಕೋಟಿ ಡಾಲರ್‌ ಒಪ್ಪಂದಕ್ಕೆ ಸಹಿ ಹಾಕಿತ್ತು. ಚೀನಾದ (China) ಮಿಲಿಟರಿ ಶಕ್ತಿಯನ್ನು ಎದುರಿಸುವ ಉದ್ದೇಶದಿಂದ ಅಂದು ಭಾರತ, ರಷ್ಯಾ ಜೊತೆ ಈ ಒಪ್ಪಂದಕ್ಕೆ ಸಹಿ ಹಾಕಿತ್ತು. ಆದ್ರೆ ಈವರೆಗಿನ ಪೂರೈಕೆಯಲ್ಲಿ ವಿಳಂಬವಾಗಿತ್ತು. ಇದೀಗ ಈ ಒಪ್ಪಂದದ ಅಡಿಯಲ್ಲಿ ಕೊನೆಯ 2 ಘಟಕಗಳು 2026 ಮತ್ತು 2027ರ ವೇಳೆ ಭಾರತಕ್ಕೆ ಲಭ್ಯವಾಗಲಿದೆ. ಇದನ್ನೂ ಓದಿ: ಆರ್‌ಜಿ ಕರ್ ಅತ್ಯಾಚಾರ ಅಪರಾಧಿಯ ಅಪ್ರಾಪ್ತ ಸೊಸೆ ಶವ ಮನೆ ಕಪಾಟಿನಲ್ಲಿ ಪತ್ತೆ

    ಆಪರೇಷನ್‌ ಸಿಂಧೂರದಲ್ಲಿ ಯಶಸ್ವಿ ಕಾರ್ಯಾಚರಣೆ
    ಆಪರೇಷನ್ ಸಿಂಧೂರ ಸಮಯದಲ್ಲಿ ಎಸ್-400 ವಾಯು ರಕ್ಷಣಾ ವ್ಯವಸ್ಥೆಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದ್ದವು. ದೀರ್ಘ-ಶ್ರೇಣಿಯ ಮೇಲ್ಮೈಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ವ್ಯವಸ್ಥೆಯು ಪಾಕ್‌ನ ಮಿಸೈಲ್‌, ಡ್ರೋನ್‌ಗಳನ್ನು ಹೊಡೆದುರುಳಿಸಿದ್ದವು. ಇದಾದ ಬಳಿಕ ವಿಶ್ವದ ಬೇರೆ ಬೇರೆ ರಾಷ್ಟ್ರಗಳಿಂದಲೂ ಎಸ್‌-400 ಗೆ ಬೇಡಿಕೆ ಹೆಚ್ಚಾಗಿತ್ತು. ಪಾಕ್‌ ಕೂಡ ಭಾರತಕ್ಕೆ ನೀಡಿರುವ ವಾಯು ರಕ್ಷಣಾ ವ್ಯವಸ್ಥೆಯನ್ನ ತಮಗೆ ಕೊಡುವಂತೆ ಮನವಿ ಮಾಡಿಕೊಂಡಿತ್ತು.

    ಸುದರ್ಶನ ಚಕ್ರ ವಿಶೇಷತೆ ಏನು?
    IAF ಸೇವೆಯಲ್ಲಿ ಸುದರ್ಶನ ಚಕ್ರ ಎಂದು ಕರೆಯಲ್ಪಡುವ S-400 ಟ್ರಯಂಫ್, ವಿಶ್ವದ ಅತ್ಯಂತ ಮುಂದುವರಿದ ದೀರ್ಘ-ಶ್ರೇಣಿಯ ವಾಯು ರಕ್ಷಣಾ ವ್ಯವಸ್ಥೆಗಳಲ್ಲಿ ಒಂದಾಗಿದೆ. ರಷ್ಯಾ ನಿರ್ಮಿತ ಮತ್ತು ಭಾರತದ ಕಾರ್ಯತಂತ್ರದ ವಾಯು ರಕ್ಷಣಾ ಕಮಾಂಡ್‌ಗೆ ಇದು ಸಂಯೋಜಿಸಲ್ಪಟ್ಟದೆ. ರಹಸ್ಯ ವಿಮಾನಗಳು, ಕ್ರೂಸ್ ಕ್ಷಿಪಣಿಗಳು, ಡ್ರೋನ್‌ಗಳು ಮತ್ತು ಯುದ್ಧತಂತ್ರದ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಾಯುಗಾಮಿ ಬೆದರಿಕೆಗಳನ್ನು ಪತ್ತೆಹಚ್ಚುವ ಮತ್ತು ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೇ ಏಕಕಾಲಕ್ಕೆ 80 ಗುರಿಗಳನ್ನು ಪತ್ತೆಹಚ್ಚುವ ಸಾಮರ್ಥ್ಯ ಇದಕ್ಕಿದೆ.

  • ಕೊನೇ ಹಾರಾಟ ನಡೆಸಿದ MIG-21 – ʻಹಾರುವ ಶವಪೆಟ್ಟಿಗೆʼಗೆ ಸೆ.19ರಂದು ಬೀಳ್ಕೊಡುಗೆ!

    ಕೊನೇ ಹಾರಾಟ ನಡೆಸಿದ MIG-21 – ʻಹಾರುವ ಶವಪೆಟ್ಟಿಗೆʼಗೆ ಸೆ.19ರಂದು ಬೀಳ್ಕೊಡುಗೆ!

    ಬಿಕಾನೇ‌ರ್: 62 ವರ್ಷಗಳ ಕಾಲ ಭಾರತೀಯ ವಾಯುಪಡೆಗೆ ಶಕ್ತಿಯಾಗಿ ನಿಂತಿದ್ದ, ಬಳಿಕ ಹಾರುವ ಶವ ಪೆಟ್ಟಿಗೆ ಎಂದೇ ಕುಖ್ಯಾತಿ ಪಡೆದಿದ್ದ ಮಿಗ್-21 ಯುದ್ಧವಿಮಾನವು (MiG-21 Fighter Jet) ಸೋಮವಾರ ರಾಜಸ್ಥಾನದ (Rajastan) ಬಿಕಾನೇರ್‌ನಲ್ಲಿರುವ ನಾಲ್ ವಾಯುನೆಲೆಯಲ್ಲಿ ಕೊನೆಯ ಬಾರಿಗೆ ಹಾರಾಟ ನಡೆಸಿತು.

    ರಷ್ಯಾ (Russia) ಮೂಲದ ಈ ಯುದ್ಧವಿಮಾನವು 62 ವರ್ಷಗಳ ಕಾಲ ಸೇವೆ ಸಲ್ಲಿಸಿದೆ. ಸೆ.19 ರಂದು ಚಂಡೀಗಢದಲ್ಲಿ ಈ ಮಿಗ್‌-21 ಯುದ್ಧವಿಮಾನಕ್ಕೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಲಿದೆ. ಸಾಂಕೇತಿಕ ಬೀಳ್ಕೊಡುಗೆಯ ಭಾಗವಾಗಿ ಆ.18 ಮತ್ತು 19ರಂದು ಏರ್ ಚೀಫ್ ಮಾರ್ಷಲ್ ಎ.ಪಿ.ಸಿಂಗ್ (AP Singh) ಅವರು ಮಿಗ್-21 ವಿಮಾನದ ಹಾರಾಟ ನಡೆಸಿದರು. ಇದನ್ನೂ ಓದಿ: ಕಾಲ್ ಸೆಂಟರ್ ಮಾಡಿಕೊಂಡು ಅಮೆರಿಕದ ಪ್ರಜೆಗಳಿಗೆ 350 ಕೋಟಿ ರೂ. ವಂಚನೆ – ಮೂವರನ್ನು ಬಂಧಿಸಿದ ಸಿಬಿಐ

    ಬಳಿಕ ಮಾತನಾಡಿದ ಅವರು, ಮಿಗ್-21 ಅನ್ನು 1960ರ ದಶಕದಲ್ಲಿ ಸೇನೆಗೆ ನಿಯೋಜಿಸಲಾಗಿತ್ತು. ಸುಮಾರು 11,000 ಯುದ್ಧವಿಮಾನಗಳು 60ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯನಿರ್ವಹಿಸಿವೆ. ಇದು ಇತಿಹಾಸದಲ್ಲಿಯೇ ಅತಿ ಹೆಚ್ಚು ಉತ್ಪಾದನೆಯಾದ ಸೂಪರ್‌ಸಾನಿಕ್ ಯುದ್ಧವಿಮಾನ ಎಂಬ ಹೆಗ್ಗಳಿಕೆ ಪಾತ್ರವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಆ.27ರಿಂದ ಟ್ರಂಪ್ ಸುಂಕ ಜಾರಿ – ಮಂಗಳವಾರ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ ಸಾಧ್ಯತೆ

    ಮಿಗ್-21 ಯುದ್ಧವಿವಿಮಾನವು ವಾಯುಪಡೆಗೆ ಸಲ್ಲಿಸಿದ ಸೇವೆ ಅಗಾಧ. ಆದರೆ ಈ ಯುದ್ಧವಿಮಾನದ ತಂತ್ರಜ್ಞಾನದ ನಿರ್ವಹಣೆವು ಈಗ ಕಷ್ಟವಾಗಿದೆ. ನೂತನ ತಂತ್ರಜ್ಞಾನ ಒಳಗೊಂಡ ತೇಜಸ್, ರಪೇಲ್‌ಗಳನ್ನು ಅಳವಡಿಸಿಕೊಳ್ಳಲು ಇದು ಸರಿಯಾದ ಸಮಯ ಎಂದರು.

    ಐಎಎಫ್ ವಕ್ತಾರ ವಿಂಗ್ ಕಮಾಂಡರ್ ಜೈದೀಪ್ ಸಿಂಗ್ ಮಾತನಾಡಿ, ಮಿಗ್-21 ವಿಮಾನವು 1971 ಡಿ.14ರಲ್ಲಿ ಢಾಕಾದ ಗವರ್ನರ್ ನಿವಾಸದ ಮೇಲಿನ ದಾಳಿ ನಡೆದ ಸಂದರ್ಭದಲ್ಲಿ ಬಹುಮುಖ್ಯ ಪಾತ್ರ ವಹಿಸಿತ್ತು. ಯುದ್ಧದ ಮರುದಿನವೇ ಗವರ್ನರ್ ರಾಜೀನಾಮೆ ಸಲ್ಲಿಸಿದರು. ಬಳಿಕ ಪಾಕಿಸ್ತಾನ ಶರಣಾಗತಿಯಾಯಿತು ಎಂದು ಮೆಲುಕು ಹಾಕಿದರು.

  • 97 LCA ಮಾರ್ಕ್ 1A ಫೈಟರ್ ಜೆಟ್‌ ಖರೀದಿಗೆ 62,000 ಕೋಟಿ ರೂ. ಒಪ್ಪಂದಕ್ಕೆ ಭಾರತ ಅನುಮೋದನೆ

    97 LCA ಮಾರ್ಕ್ 1A ಫೈಟರ್ ಜೆಟ್‌ ಖರೀದಿಗೆ 62,000 ಕೋಟಿ ರೂ. ಒಪ್ಪಂದಕ್ಕೆ ಭಾರತ ಅನುಮೋದನೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (PM Modi) ರಕ್ಷಣಾ ಯೋಜನೆಯಾದ ಮೇಕ್ ಇನ್ ಇಂಡಿಯಾಗೆ ಉತ್ತೇಜನ ನೀಡಲು, ಭಾರತೀಯ ವಾಯುಪಡೆಗೆ 97 ಎಲ್‌ಸಿಎ ಮಾರ್ಕ್ 1ಎ ಫೈಟರ್ ಜೆಟ್‌ಗಳನ್ನು ಖರೀದಿಸುವ ಯೋಜನೆಗೆ ಮಂಗಳವಾರ ಭಾರತ ಅನುಮೋದನೆ ನೀಡಿದೆ.

    ಬುಧವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ 97 LCA ಮಾರ್ಕ್ 1A ಯುದ್ಧವಿಮಾನಗಳ ಸ್ವಾಧೀನಕ್ಕೆ ಅಂತಿಮ ಅನುಮೋದನೆಯನ್ನು ನೀಡಿದ್ದು, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವಿಮಾನಗಳನ್ನು ಉತ್ಪಾದಿಸಲು ದಾರಿ ಮಾಡಿಕೊಡುತ್ತದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಯೋಧನಿಗೆ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ ಕೇಸ್ – 20 ಲಕ್ಷ ದಂಡ ವಿಧಿಸಿದ NHAI

    ಸರ್ಕಾರವು ಕೆಲವು ವರ್ಷಗಳ ಹಿಂದೆ ಸುಮಾರು 48,000 ಕೋಟಿ ರೂ.ಗೆ 83 ವಿಮಾನಗಳಿಗೆ ಆರ್ಡರ್‌ ನೀಡಿರುವುದು, LCA ಮಾರ್ಕ್ 1A ಯುದ್ಧವಿಮಾನಗಳಿಗೆ ಎರಡನೇ ಆರ್ಡರ್ ಆಗಿರುತ್ತದೆ. ಮುಂದಿನ ಕೆಲವು ವಾರಗಳಲ್ಲಿ ಸರ್ಕಾರವು ಹಂತಹಂತವಾಗಿ ಸ್ಥಗಿತಗೊಳಿಸುತ್ತಿರುವ ಮಿಗ್-21 ವಿಮಾನಗಳ ಸಮೂಹವನ್ನು ಬದಲಾಯಿಸಲು ಈ ಕಾರ್ಯಕ್ರಮವು ಐಎಎಫ್‌ಗೆ ಸಹಾಯ ಮಾಡುತ್ತದೆ ಎಂದು ಹೇಳಿದೆ.

    ರಕ್ಷಣಾ ಸಚಿವಾಲಯ ಮತ್ತು ವಾಯುಪಡೆಯ ಪ್ರಧಾನ ಕಚೇರಿಯ ಸಂಪೂರ್ಣ ಬೆಂಬಲದೊಂದಿಗೆ ದೇಶೀಯ ಯುದ್ಧ ವಿಮಾನ ಕಾರ್ಯಕ್ರಮವು ದೇಶೀಕರಣವನ್ನು ಉತ್ತೇಜನ ನೀಡಲಿದೆ. ದೇಶಾದ್ಯಂತ ರಕ್ಷಣಾ ವ್ಯವಹಾರದಲ್ಲಿ ತೊಡಗಿರುವ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಪ್ರಮುಖ ವ್ಯವಹಾರವನ್ನು ನೀಡುತ್ತದೆ. ಇದನ್ನೂ ಓದಿ: ಭಾರೀ ಮಳೆಗೆ ವಿದ್ಯುತ್ ಸಮಸ್ಯೆ – ಮಾರ್ಗ ಮಧ್ಯದಲ್ಲೇ ನಿಂತ ಮೋನೋ ರೈಲು

  • ಪಂಜಾಬ್‌ | ನಕಲಿ ದಾಖಲೆ ಸೃಷ್ಟಿಸಿ 2ನೇ ಮಹಾಯುದ್ಧದಲ್ಲಿ ಬಳಸಿದ್ದ ವಾಯುನೆಲೆ ಮಾರಾಟ – 28 ವರ್ಷಗಳ ಬಳಿಕ ಎಫ್‌ಐಆರ್‌

    ಪಂಜಾಬ್‌ | ನಕಲಿ ದಾಖಲೆ ಸೃಷ್ಟಿಸಿ 2ನೇ ಮಹಾಯುದ್ಧದಲ್ಲಿ ಬಳಸಿದ್ದ ವಾಯುನೆಲೆ ಮಾರಾಟ – 28 ವರ್ಷಗಳ ಬಳಿಕ ಎಫ್‌ಐಆರ್‌

    ಚಂಡೀಗಢ: ಪಂಜಾಬ್‌ನ (Punjab) ಫಟ್ಟು ವಾಲಾ ಗ್ರಾಮದಲ್ಲಿರುವ 2ನೇ ಮಹಾಯುದ್ಧದಲ್ಲಿ (World War II) ಬಳಸಲಾಗಿದ್ದ ವಾಯುನೆಲೆಯನ್ನು (Airstrip )ನಕಲಿ ದಾಖಲೆ ಸೃಷ್ಟಿಸಿ 28 ವರ್ಷಗಳ ಹಿಂದೆಯೇ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬಳು (Woman) ತನ್ನ ಮಗನ ಜೊತೆ ಸೇರಿ ಈ ಕೃತ್ಯ ಎಸಗಿದ್ದು, ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ದುಮಾನಿ ವಾಲಾ ಗ್ರಾಮದ ಉಷಾ ಅನ್ಸಾಲ್ ಮತ್ತು ಆಕೆಯ ಮಗ ನವೀನ್ ಚಂದ್ ಅನ್ಸಾಲ್ ವಿರುದ್ಧ ಈ ಆರೋಪ ಕೇಳಿಬಂದಿದೆ. ಈ ಇಬ್ಬರು ಸೇರಿ ನಕಲಿ ದಾಖಲೆಗಳನ್ನು ಸೃಷ್ಟಿಸಿ,  ವಾಯುನೆಲೆಯ ಜಾಗವನ್ನು ಮಾರಾಟ ಮಾಡಿದ್ದಾರೆ. ಭಾರತ 1962, 1965 ಮತ್ತು 1971ರ ಯುದ್ಧಗಳ ಸಮಯದಲ್ಲಿ ಈ ವಾಯು ನೆಲೆಯನ್ನು ಬಳಸಿತ್ತು. ಈ ಭೂಮಿಯನ್ನು 1997 ರಲ್ಲಿ ಮಾರಾಟ ಮಾಡಲಾಗಿದೆ. ಈ ಜಾಗ ಮಾರಾಟ ಮಾಡಿರುವ ಉಷಾ ಮತ್ತು ಚಂದ್‌ ಅನ್ಸಾಲ್‌ ಪ್ರಸ್ತುತ ದೆಹಲಿಯಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.

    ವರ್ಷಗಳ ಹಿಂದೆ ಈ ಸಂಬಂಧ ನಿವೃತ್ತ ಕನುಂಗೋ ನಿಶಾನ್ ಸಿಂಗ್ ದೂರು ದಾಖಲಿಸಿದ್ದರು. ಆದರೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. 2021 ರಲ್ಲಿ, ಪಂಜಾಬ್‌ನ ಹಲ್ವಾರಾ ವಾಯುಪಡೆ ನಿಲ್ದಾಣದ ಅಧಿಕಾರಿಗಳು ಫಿರೋಜ್‌ಪುರದ ಉಪ ಆಯುಕ್ತರಿಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು. ಆಗಲೂ ಯಾವುದೇ ಕ್ರಮಕೈಗೊಂಡಿರಲಿಲ್ಲ. ಬಳಿಕ ನಿಶಾನ್ ಸಿಂಗ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದಾದ ಬಳಿಕ ಕುಲ್‌ಗಢಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಉಷಾ ಹಾಗೂ ಆಕೆಯ ಮಗ ಕಂದಾಯ ಇಲಾಖೆಯ ಕೆಲವು ಅಧಿಕಾರಿಗಳ ಜೊತೆ ಸೇರಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಆ ನಕಲಿ ದಾಖಲೆ ಬಳಸಿ IAF (Indian Air Force) ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

    ನ್ಯಾಯಾಲಯದ ನಿರ್ದೇಶನದ ನಂತರ, ಉಪ ಆಯುಕ್ತರು 1958-59 ರ ಕಂದಾಯ ದಾಖಲೆಗಳ ಪ್ರಕಾರ ಭೂಮಿ ಇನ್ನೂ IAF ವಶದಲ್ಲಿದೆ ಎಂದು ಮೂರು ಪುಟಗಳ ವರದಿಯನ್ನು ಸಲ್ಲಿಸಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಿಶಾನ್‌ ಸಿಂಗ್‌ ಹೆಚ್ಚಿನ ತನಿಖೆಗೆ ಆಗ್ರಹಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಉತ್ತರಾಖಂಡ್‌ ಹೆಲಿಕಾಪ್ಟರ್‌ ಪತನ – 15 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಪೈಲಟ್‌ಗಿತ್ತು ಅಪಾರ ಅನುಭವ

    ಉತ್ತರಾಖಂಡ್‌ ಹೆಲಿಕಾಪ್ಟರ್‌ ಪತನ – 15 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಪೈಲಟ್‌ಗಿತ್ತು ಅಪಾರ ಅನುಭವ

    ಡೆಹ್ರಾಡೂನ್‌: ಭಾನುವಾರ ಮುಂಜಾನೆ ಉತ್ತರಾಖಂಡದ (Uttarakhand) ಗೌರಿಕುಂಡ್ ಬಳಿ ಪತನಗೊಂಡ ಹೆಲಿಕಾಪ್ಟರ್‌ನ (Chopper Crash) ಪೈಲಟ್‌ ಕ್ಯಾಪ್ಟನ್‌ ರಾಜ್‌ವೀರ್ ಸಿಂಗ್ ಚೌಹಾಣ್ (37) (Rajveer Singh Chauhan ) ಭಾರತೀಯ ವಾಯು ಸೇನೆಯಲ್ಲಿ (Indian Air Force) 15ಕ್ಕೂ ಹೆಚ್ಚು ವರ್ಷಗಳ ಕಾಲ ಸೇವೆಸಲ್ಲಿಸಿದ್ದರು. ಅವರಿಗೆ ವಿವಿಧ ಭೂ ಪ್ರದೇಶಗಳ ಮೇಲೆ ಹೆಲಿಕಾಪ್ಟರ್ ಹಾರಾಟ ನಡೆಸಿದ್ದ ಅನುಭವ ಇತ್ತು ಎಂದು ತಿಳಿದು ಬಂದಿದೆ.

    ರಾಜಾವೀರ್‌ ಸಿಂಗ್‌ ಅವರ ತಂದೆ ಗೋವಿಂದ್ ಸಿಂಗ್ ಮಗನ ಬಗ್ಗೆ ಮಾತನಾಡಿ, ಹೆಲಿಕಾಪ್ಟರ್‌ ದುರಂತದ ಮಾಹಿತಿ ಅವರ ಸಹೋದ್ಯೋಗಿಗಳಿಂದ ಸಿಕ್ಕಿದೆ. ನನ್ನ ಮಗ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ. ನನ್ನ ಸೊಸೆ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದಾರೆ. ಅವರಿಗೆ ನಾಲ್ಕು ತಿಂಗಳ ಅವಳಿ ಮಕ್ಕಳಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ – ಪೈಲೆಟ್, ಮಗು ಸೇರಿ 6 ಮಂದಿ ಸಜೀವ ದಹನ

    ಜೈಪುರದ ಶಾಸ್ತ್ರಿ ನಗರದ ನಿವಾಸಿಯಾಗಿದ್ದ ರಾಜಾವೀರ್‌ ಸಿಂಗ್‌, ಅಕ್ಟೋಬರ್ 2024 ರಿಂದ ಆರ್ಯನ್ ಏವಿಯೇಷನ್ ​​ಪ್ರೈವೇಟ್ ಲಿಮಿಟೆಡ್‌ನಲ್ಲಿ ಪೈಲಟ್ ಆಗಿ ಕೆಲಸ ಮಾಡುತ್ತಿದ್ದರು. ಭಾನುವಾರ ಬೆಳಿಗ್ಗೆ ಉತ್ತರಾಖಂಡದ ಬಳಿ ಅಪಘಾತಕ್ಕೀಡಾದ ಬೆಲ್ 407 ಹೆಲಿಕಾಪ್ಟರ್‌ನ ಪೈಲಟ್ ಆಗಿದ್ದರು. ಈ ಅಪಘಾತದಲ್ಲಿ ಅವರನ್ನು ಸೇರಿದಂತೆ 7 ಜನ ಸಾವನ್ನಪ್ಪಿದ್ದರು.

    ಸಿಂಗ್‌ ಅವರು, ವೈಮಾನಿಕ ಕಾರ್ಯಾಚರಣೆಗಳ ಮೇಲ್ವಿಚಾರಣೆ, ವಿವಿಧ ರೀತಿಯ ಹೆಲಿಕಾಪ್ಟರ್‌ಗಳ ಹಾರಾಟ ಮತ್ತು ಅವುಗಳ ನಿರ್ವಹಣೆಯಲ್ಲಿ ತರಬೇತಿ ಪಡೆದಿದ್ದರು.

    ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಇತರ ನಾಯಕರು ಏಳು ಜನರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಅಹಮದಾಬಾದ್ ವಿಮಾನ ದುರಂತ – ಅವಶೇಷಗಳಡಿ ಸೂಟ್‌ಕೇಸ್‌ನಲ್ಲಿದ್ದ ಹಣ ಪತ್ತೆ

  • ಪಾಕ್‌ ಪ್ರಧಾನಿ ಮನೆ ಬಳಿಯೇ ದಾಳಿ

    ಪಾಕ್‌ ಪ್ರಧಾನಿ ಮನೆ ಬಳಿಯೇ ದಾಳಿ

    – ಶೆಹಬಾಜ್‌ ಷರೀಫ್‌ ಮನೆಗೆ 20 ಕಿಮೀ ದೂರದಲ್ಲಿ ಸ್ಫೋಟದ ಸದ್ದು

    ಇಸ್ಲಾಮಾಬಾದ್: ಭಾರತ ನಡೆಸಿದ ಮಿಸೈಲ್‌ ದಾಳಿಗೆ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ನಡುಗುವಂತಾಗಿದೆ. ಪಾಕ್‌ ಪ್ರಧಾನಿ ಮನೆ ಬಳಿಯೇ ದಾಳಿಯಾಗಿದೆ ಎಂದು ವರದಿಯಾಗಿದೆ.

    ಪಾಕ್‌ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಶೆಹಬಾಜ್‌ ಶರೀಫ್‌ ಅವರ ಮನೆಯಿದೆ. ಮನೆಗೆ 20 ಕಿಮೀ ದೂರದಲ್ಲೇ ಸ್ಫೋಟದ ಸದ್ದಾಗಿದೆ. ಇದನ್ನೂ ಓದಿ: ಭಾರತ-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಣೆ

    ಭಾರತದ ದಾಳಿಗೆ ಪಾಕ್‌ ಪ್ರಧಾನಿಯೂ ಬೆಚ್ಚಿದ್ದಾರೆ. ಪಾಕಿಸ್ತಾನದಲ್ಲಿ ದಿಕ್ಕು ತೋಚದ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ಹಲವು ನಗರಗಳು ಕತ್ತಲಲ್ಲಿ ಸಿಲುಕಿವೆ. ಕೆಲವು ನಗರಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದೆ.

    ರಸ್ತೆಗಳಿಗೆ ಬಾರದಂತೆ ಪಾಕ್‌ ನಾಗರಿಕರಿಗೆ ಅಲ್ಲಿನ ಸ್ಥಳೀಯ ಆಡಳಿತಗಳಿಂದ ಸೂಚನೆ ನೀಡಿದೆ. ಪಾಕಿಸ್ತಾನದ ಪೈಲಟ್‌ನನ್ನು ಭಾರತೀಯ ಸೇನೆ ವಶಕ್ಕೆ ಪಡೆದಿರೋದು ಎನ್ನಲಾಗಿದೆ. ಇದನ್ನೂ ಓದಿ: ಭಾರತದ ಮೇಲೆ ಪಾಕ್‌ನಿಂದ 100 ಕ್ಷಿಪಣಿ ದಾಳಿ

  • ಪ್ರಯಾಗ್‍ರಾಜ್‍ನಲ್ಲಿ ಗುಂಡಿಕ್ಕಿ ಏರ್ ಫೋರ್ಸ್ ಎಂಜಿನಿಯರ್ ಹತ್ಯೆ

    ಪ್ರಯಾಗ್‍ರಾಜ್‍ನಲ್ಲಿ ಗುಂಡಿಕ್ಕಿ ಏರ್ ಫೋರ್ಸ್ ಎಂಜಿನಿಯರ್ ಹತ್ಯೆ

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಪ್ರಯಾಗ್‌ರಾಜ್‌ನಲ್ಲಿ (Prayagraj) ಭಾರತೀಯ ವಾಯುಪಡೆಯ (Indian Air Force) ಸಿವಿಲ್ ಎಂಜಿನಿಯರ್‌ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ.

    ಹತ್ಯೆಗೀಡಾದ ಅಧಿಕಾರಿಯನ್ನು ಎಸ್‌ಎನ್ ಮಿಶ್ರಾ (51) ಎಂದು ಗುರುತಿಸಲಾಗಿದೆ. ಪ್ರಯಾಗ್‌ರಾಜ್‌ನ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಮಲಗಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಅಪರಿಚಿತ ದುಷ್ಕರ್ಮಿಯೊಬ್ಬ ಕಿಟಕಿಯ ಮೂಲಕ ಗುಂಡು ಹಾರಿಸಿದ್ದಾನೆ ಎಂದು ಪುರಾಮುಫ್ತಿ ಸ್ಟೇಷನ್ ಹೌಸ್ ಅಧಿಕಾರಿ (ಎಸ್‌ಎಚ್‌ಒ) ಮನೋಜ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢ | ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿ – 16 ನಕ್ಸಲರ ಹತ್ಯೆ

    ಗುಂಡು ಅವರ ಎದೆಗೆ ತಗುಲಿತ್ತು. ಅವರನ್ನು ತಕ್ಷಣ ಸೇನಾ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಿಶ್ರಾ ಅವರಿಗೆ ಪತ್ನಿ, ಒಬ್ಬ ಮಗ ಮತ್ತು ಒಬ್ಬ ಮಗಳು ಇದ್ದಾರೆ. ಕುಟುಂಬದಿಂದ ದೂರು ದಾಖಲಾದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭೂಕಂಪದಿಂದಾಗಿ ಆಸ್ಪತ್ರೆ ನಾಮಾವಶೇಷ – ಬ್ಯಾಂಕಾಕ್‌ನ ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

  • ಹರಿಯಾಣದಲ್ಲಿ ವಾಯುಪಡೆಯ ಜಾಗ್ವಾರ್ ಫೈಟರ್ ಜೆಟ್ ಪತನ – ಪೈಲಟ್ ಸೇಫ್‌

    ಹರಿಯಾಣದಲ್ಲಿ ವಾಯುಪಡೆಯ ಜಾಗ್ವಾರ್ ಫೈಟರ್ ಜೆಟ್ ಪತನ – ಪೈಲಟ್ ಸೇಫ್‌

    ಚಂಡೀಗಢ: ಭಾರತೀಯ ವಾಯುಪಡೆಯ (IAF) ಜಾಗ್ವಾರ್ ಫೈಟರ್‌ ಜೆಟ್ ಹರಿಯಾಣದ (Haryana) ಅಂಬಾಲದಲ್ಲಿ ಪತನಗೊಂಡಿದೆ.‌ ಪೈಲಟ್‌ ಸುರಕ್ಷಿತವಾಗಿ ಎಜೆಕ್ಟ್‌ ಆಗಿದ್ದಾರೆ ಎಂದು ವಾಯು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

    ತರಬೇತಿ ಹಾರಾಟದ ವೇಳೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಪೈಲಟ್‌ ಜನವಸತಿ ಪ್ರದೇಶದಿಂದ ವಿಮಾನವನ್ನು ದೂರ ಕೊಂಡೊಯ್ದಿದ್ದಾರೆ. ಬಳಿಕ ವಿಮಾನ ಪತನಗೊಂಡಿದ್ದು, ಪೈಲಟ್‌ ಸುರಕ್ಷಿತವಾಗಿ ಎಜೆಕ್ಟ್‌ ಆಗಿದ್ದಾರೆ.

    ತಾಂತ್ರಿಕ ದೋಷದಿಂದ ಈ ಅವಘಡ ಸಂಭವಿಸಿದೆ. ಪೈಲಟ್ ವಿಮಾನವನ್ನು ಸುರಕ್ಷಿತವಾಗಿ ಜನವಸತಿ ಇಲ್ಲದ ಕಡೆ ತೆಗೆದುಕೊಂಡು ಹೋಗಿ ಚಾಣಾಕ್ಷ್ಯತನ ಮೆರೆದಿದ್ದಾರೆ. ಇದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ ಎಂದು IAF ತಿಳಿಸಿದೆ.

    ವಿಮಾನ ಪಥನದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಆಗ್ರಾ ಬಳಿ MiG-29 ಫೈಟರ್ ಜೆಟ್ ಪತನ – ಪೈಲಟ್‌ ಸೇಫ್‌

    ಆಗ್ರಾ ಬಳಿ MiG-29 ಫೈಟರ್ ಜೆಟ್ ಪತನ – ಪೈಲಟ್‌ ಸೇಫ್‌

    ಲಕ್ನೋ: ಭಾರತೀಯ ವಾಯುಪಡೆಯ (Indian Air Force) MiG-29 ಫೈಟರ್ ಜೆಟ್ (MiG-29 fighter jet) ಪತನಗೊಂಡು ಹೊತ್ತಿ ಉರಿದ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾದ (Agra) ಸಾಂಗಾ ಗ್ರಾಮದಲ್ಲಿ ನಡೆದಿದೆ. ಅವಘಡದಲ್ಲಿ ಪೈಲಟ್‌ ಸುರಕ್ಷಿತವಾಗಿ ಎಜೆಕ್ಟ್‌ ಆಗಿದ್ದಾರೆ.

    ಮಿಗ್ -29 ವಿಮಾನವು ತರಬೇತಿಯ ಸಮಯದಲ್ಲಿ ತಾಂತ್ರಿಕ ಸಮಸ್ಯೆ ಎದುರಿಸಿದೆ. ಬಳಿಕ ವಿಮಾನ ಪತನಗೊಂಡು ಹೊತ್ತಿ ಉರಿದಿದೆ. ಇಂತಹ ಸಮಯದಲ್ಲೂ ಪೈಲಟ್ ನೆಲದಲ್ಲಿ ಯಾವುದೇ ಜೀವ ಅಥವಾ ಆಸ್ತಿಗೆ ಹಾನಿಯಾಗದಂತೆ ನೋಡಿಕೊಂಡಿದ್ದಾರೆ. ವಿಮಾನ ಪತನಕ್ಕೆ ಕಾರಣವೇನು ಎಂಬುದನ್ನು ಕಂಡುಹಿಡಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಭಾರತೀಯ ವಾಯುಪಡೆ ಮಾಹಿತಿ ನೀಡಿದೆ.

    ಸದ್ಯ ʼಹಾರುವ ಶವಪೆಟ್ಟಿಗೆʼ ಎಂದೇ ಮಿಗ್‌ ವಿಮಾನಗಳು ಕುಖ್ಯಾತವಾಗಿದ್ದು,  ಮಿಗ್‌ 29 ವಿಮಾನಗಳನ್ನು  1987 ರಲ್ಲಿ ಭಾರತೀಯ ವಾಯುಪಡೆಗೆ ಸೇರ್ಪಡೆ ಮಾಡಲಾಗಿತ್ತು.

    ಎರಡು ತಿಂಗಳ ಅವಧಿಯಲ್ಲಿ ಇದು ಎರಡನೇ MiG-29 ಅಪಘಾತವಾಗಿದೆ. ಸೆಪ್ಟೆಂಬರ್‌ನಲ್ಲಿ, ಮಿಗ್ -29 ರಾಜಸ್ಥಾನದ ಬಾರ್ಮರ್‌ನಲ್ಲಿ ತಾಂತ್ರಿಕ ಅಡಚಣೆಯನ್ನು ಎದುರಿಸಿ ಪತನಗೊಂಡಿತ್ತು. ಪೈಲಟ್ ಸುರಕ್ಷಿತವಾಗಿ ಎಜೆಕ್ಟ್ ಆಗಿದ್ದರು.

  • ಚೆನ್ನೈ ಏರ್ ಶೋ ವೇಳೆ ದುರಂತ – ಬಿಸಿಲಿನ ತಾಪಕ್ಕೆ ಐವರು ಸಾವು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ಚೆನ್ನೈ ಏರ್ ಶೋ ವೇಳೆ ದುರಂತ – ಬಿಸಿಲಿನ ತಾಪಕ್ಕೆ ಐವರು ಸಾವು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ಚೆನ್ನೈ: ಭಾರತೀಯ ವಾಯುಪಡೆಯ (Indian Air Force) 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ (Chennai) ಮರೀನಾ ಬೀಚ್‌ನಲ್ಲಿ ನಡೆದ ಏರ್ ಶೋ (ವೈಮಾನಿಕ ಪ್ರದರ್ಶನ) ವೇಳೆ ಬಿಸಿಲಿನತಾಪಕ್ಕೆ 5 ಮಂದಿ ಸಾವಾಗಿದ್ದು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

    ವಾಯುಪಡೆ ಸಂಸ್ಥಾಪನಾ ದಿನ ನಿಮಿತ್ತ ದಕ್ಷಿಣ ಭಾರತದಲ್ಲಿ ನಡೆದ ಮೊದಲ ಏರ್ ಶೋ ಇದಾಗಿತ್ತು. ಚೆನ್ನೈನ ಮರೀನಾ ಬೀಚ್‌ನಲ್ಲಿ (Marina Beach) ಏರ್ ಶೋ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ 72 ವಿಮಾನಗಳು ವಿವಿಧ ಸಾಹಸಗಳನ್ನು ಪ್ರದರ್ಶಿಸಿದ್ದವು. 15 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆಗೆ ಆಗಮಿಸಿದ್ದರು. ಇದನ್ನೂ ಓದಿ: ಉಡುಪಿಯಲ್ಲಿ ಮೇಘಸ್ಪೋಟ – ನಾಪತ್ತೆಯಾದ ವೃದ್ಧೆ ಶವವಾಗಿ ಪತ್ತೆ

     

    ಏರ್ ಶೋ ವೀಕ್ಷಿಸಿ ವಾಪಾಸ್ ತೆರಳುವಾಗ ಬಿಸಿಲಿನ ತಾಪಕ್ಕೆ ಜನರ ನಡುವೆ ನೂಕು ನುಗ್ಗಲು ಸಂಭವಿಸಿದೆ. ಈ ವೇಳೆ ಉಸಿರಾಡಲಾಗದೇ 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. 100 ಕ್ಕೂ ಹೆಚ್ಚು ಜನರಿಗೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯ ರಸ್ತೆಯಲ್ಲಿ ವಾಹನ ಸಂದಣಿ ಹಾಗೂ ಜನಸಂದಣಿ ಏರ್ಪಟ್ಟಿತ್ತು. ಅಸ್ವಸ್ಥರಾದವರನ್ನ ಆಂಬ್ಯಲೆನ್ಸ್ಗೆ ಸಾಗಿಸಿವುದಕ್ಕೆ ಪರದಾಡಬೇಕಾಯಿತು. ಇದನ್ನೂ ಓದಿ: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 91 ಹೊಸ ಡೆಂಗ್ಯೂ ಪ್ರಕರಣ ದಾಖಲು

    ಮೃತರನ್ನು ಜಾನ್ (60), ತಿರುವೊಟ್ಟಿಯೂರು ಮೂಲದ ಕಾರ್ತಿಕೇಯನ್, ದಿನೇಶ್ ಕುಮಾರ್ (37), ಪೆರುಂಗಲತ್ತೂರಿನ ಶ್ರೀನಿವಾಸನ್, ಎಂದು ಗುರುತಿಸಲಾಗಿದೆ.

    ಏರ್ ಶೋನಲ್ಲಿ 72 ವಿಮಾನಗಳು ಭಾಗಿ:
    ವಾಯುಸೇನೆಯ ಈ ಪ್ರತಿಷ್ಠಿತ ಏರ್ ಶೋನಲ್ಲಿ ರಫೇಲ್ ಸೇರಿದಂತೆ 72 ವಿಮಾನಗಳು ಪಾಲ್ಗೊಂಡಿದ್ದವು. ಸ್ವದೇಶಿ ನಿರ್ಮಿತ ಅತ್ಯಾಧುನಿಕ ಲಘು ಯುದ್ಧ ವಿಮಾನ ತೇಜಸ್, ಲಘು ಯುದ್ಧ ಹೆಲಿಕಾಪ್ಟರ್ ಪ್ರಚಂಡ್ ಮತ್ತು ಹೆರಿಟೇಜ್ ವಿಮಾನ ಡಕೋಟಾ ಕೂಡ ಏರ್ ಶೋನಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶನ ಮಾಡಿದವು. ಈ ಏರ್ ಶೋ ವಿಶೇಷ ಗರುಡ ಫೋರ್ಸ್ ಕಮಾಂಡೋಗಳ ಸಿಮ್ಯುಲೇಟೆಡ್ ರಕ್ಷಣಾ ಕಾರ್ಯಾಚರಣೆಯಲ್ಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಪ್ರದರ್ಶನವನ್ನು ಒಳಗೊಂಡಿತ್ತು. ಇದನ್ನೂ ಓದಿ: ಮೊಯಿದ್ದೀನ್ ಬಾವ ಸಹೋದರನ ಶವ ಫಲ್ಗುಣಿ ನದಿಯಲ್ಲಿ ಪತ್ತೆ