Tag: indian army

  • Operation Sindoor | ವಾಯುನೆಲೆ ಬಂದ್ – ಶ್ರಿನಗರದಿಂದ ವಿಮಾನ ಹಾರಾಟ ಸ್ಥಗಿತ

    Operation Sindoor | ವಾಯುನೆಲೆ ಬಂದ್ – ಶ್ರಿನಗರದಿಂದ ವಿಮಾನ ಹಾರಾಟ ಸ್ಥಗಿತ

    ಶ್ರೀನಗರ: ಪಹಲ್ಗಾಮ್ ಉಗ್ರರ ದಾಳಿಗೆ(Pahalgam Terror Attack) ಪ್ರತೀಕಾರವಾಗಿ ಭಾರತ ತಡರಾತ್ರಿ ಪಾಕಿಸ್ತಾನದ(Pakistan) ಉಗ್ರರ ಅಡಗುತಾಣಗಳ ಮೇಲೆ ಏರ್‌ಸ್ಟ್ರೈಕ್‌(Air Strike) ನಡೆಸಿದೆ. ದಾಳಿಯ ಬೆನ್ನಲ್ಲೇ ವಾಯು ನೆಲೆಯನ್ನು ಬಂದ್ ಮಾಡಲಾಗಿದ್ದು, ಶ್ರೀನಗರದಿಂದ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.

    ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತ ತಡರಾತ್ರಿ 1:44ಕ್ಕೆ ದಾಳಿ ನಡೆಸಿದೆ. ರಫೇಲ್ ಯುದ್ಧ ವಿಮಾನಗಳನ್ನು ಬಳಸಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ(PoK ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಏರ್‌ಸ್ಟ್ರೈಕ್‌ ನಡೆದಿದೆ. ಈ ದಾಳಿಗಳಲ್ಲಿ ಮೂವತ್ತಕ್ಕೂ ಹೆಚ್ಚು ಉಗ್ರರು ಮೃತಪಟ್ಟಿರುವುದಾಗಿ ಕೆಲ ವರದಿಗಳು ತಿಳಿಸಿವೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ಹೆಸರನ್ನೇ ಯಾಕೆ ಇಡಲಾಯಿತು ಗೊತ್ತಾ?

    ಉಗ್ರರ 9 ಸ್ಥಳಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿದ್ದೇವೆ. ಯಾವುದೇ ಯಾವುದೇ ಪಾಕಿಸ್ತಾನಿ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿಲ್ಲ ಎಂದು ಭಾರತೀಯ ಸೇನೆ ತಿಳಿಸಿದೆ. ಗುರಿ ಮಾಡಲಾದ ೯ ಸ್ಥಳಗಳಲ್ಲಿ ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್ ಪ್ರಧಾನ ಕಚೇರಿ ಮತ್ತು ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೈಬಾ ಸೇರಿವೆ ಎಂದು ಮೂಲಗಳು ತಿಳಿಸಿವೆ.

    ಒಂಬತ್ತು ಗುರಿಗಳಲ್ಲಿ ನಾಲ್ಕು ಪಾಕಿಸ್ತಾನದಲ್ಲಿ ಮತ್ತು ಐದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದವು. ಪಾಕಿಸ್ತಾನದಲ್ಲಿರುವ ಗುರಿಗಳಲ್ಲಿ ಬಹಾವಲ್ಪುರ್, ಮುರಿಡ್ಕೆ ಮತ್ತು ಸಿಯಾಲ್‌ಕೋಟ್ ಸೇರಿವೆ. ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಲು ವಿಶೇಷ ನಿಖರ ಯುದ್ಧಸಾಮಗ್ರಿಗಳನ್ನು ಬಳಸಲಾಗಿದೆ. ಇದನ್ನೂ ಓದಿ: Operation Sindoor – ಪಾಕ್‌ ಉಗ್ರರ 9 ನೆಲೆಗಳ ಮೇಲೆ ಏರ್‌ಸ್ಟ್ರೈಕ್‌

    ಭಾರತದ 26 ಸಹೋದರಿಯರ ಕುಂಕುಮ ಅಳಿಸಿದ್ದಕ್ಕೆ ನಡೆಸಿದ ಪ್ರತೀಕಾರಕ್ಕೆ `ಆಪರೇಷನ್ ಸಿಂಧೂರ'(Operation Sindoor) ಎಂಬ ಹೆಸರನ್ನು ಇಡಲಾಗಿದೆ. ಉಗ್ರರ ಶಿಬಿರಗಳನ್ನು ಧ್ವಂಸ ಮಾಡಲಾಗಿರುವ ವಿಡಿಯೋಗಳು ಹರಿದಾಡುತ್ತಿವೆ.

    ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ ತೀರಿಸುವುದಾಗಿ ಭಾರತ ಪ್ರತಿಜ್ಞೆ ಮಾಡಿತ್ತು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿ ಮತ್ತು ಸಮಯವನ್ನು ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ‍್ಯ ನೀಡಿದ್ದರು.

  • ದೊಡ್ಡ ದುರಂತ ತಪ್ಪಿಸಿದ ಭಾರತೀಯ ಸೇನೆ – 5 ಜೀವಂತ ಬಾಂಬ್ ವಶಕ್ಕೆ

    ದೊಡ್ಡ ದುರಂತ ತಪ್ಪಿಸಿದ ಭಾರತೀಯ ಸೇನೆ – 5 ಜೀವಂತ ಬಾಂಬ್ ವಶಕ್ಕೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ (Poonch) ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಸೇನೆ ಭೇದಿಸಿದ್ದು, 5 ಜೀವಂತ ಬಾಂಬ್ ವಶಕ್ಕೆ ಪಡೆದಿದೆ. ಈ ಮೂಲಕ ಭಾರತೀಯ ಸೇನೆಯು (Indian Army) ಅತಿದೊಡ್ಡ ದುರಂತವನ್ನು ತಪ್ಪಿಸಿದೆ.

    ಭಾನುವಾರ ಸಂಜೆ ಪೂಂಚ್‌ನ ಸುರನ್‌ಕೋಟ್(Surankot) ಅರಣ್ಯದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಉಗ್ರರ ಅಡಗುತಾಣದಲ್ಲಿ 5 ಸ್ಫೋಟಕಗಳು, ಐಇಡಿಯಿದ್ದ 3 ಟಿಫನ್ ಬಾಕ್ಸ್, 2 ಸ್ಟೀಲ್ ಬಕೆಟ್ ಪತ್ತೆಯಾಗಿವೆ. ಇದನ್ನೂ ಓದಿ: ಅಮೆರಿಕದ ಹೊರಗಡೆ ತಯಾರಾದ ಸಿನಿಮಾಗಳಿಗೆ 100% ಸುಂಕ – ಟ್ರಂಪ್ ಘೋಷಣೆ

    ಭದ್ರತಾ ಪಡೆಯು ಅಡಗುತಾಣದಲ್ಲಿ ಪತ್ತೆಯಾದ ಸಂಹವನ ಉಪಕರಣವನ್ನು ವಶಕ್ಕೆ ಪಡೆದಿದೆ. ಕಳೆದ ಕೆಲವು ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಭಯೋತ್ಪಾದಕ ಕೇಂದ್ರಬಿಂದುವಾಗಿದೆ. ಇದನ್ನೂ ಓದಿ: ಯುದ್ಧ ಕಾರ್ಮೋಡದ ನಡುವೆ BSFಗೆ ಇನ್ನಷ್ಟು ಬಲ – 16 ಹೊಸ ಬೆಟಾಲಿಯನ್ ಸೇರ್ಪಡೆ?

    ಭಯೋತ್ಪಾದಕರ (Terrorists) ಈ ಅಡಗುತಾಣವನ್ನು ಪತ್ತೆ ಹಚ್ಚುವ ಮೂಲಕ ಸೇನೆಯು ಅತಿದೊಡ್ಡ ದುರಂತವನ್ನೇ ತಪ್ಪಿಸಿದೆ. ಅಲ್ಲದೇ ಪಹಲ್ಗಾಮ್ ದಾಳಿಯ(Pahalgam Attack) ಬಳಿಕ ಉಗ್ರರು ಜಮ್ಮು ಕಾಶ್ಮೀರದಲ್ಲಿ ಮತ್ತೆ ದಾಳಿಗೆ ಸಂಚು ರೂಪಿಸಿರುವ ಶಂಕೆ ವ್ಯಕ್ತವಾಗಿದೆ.

  • 30 ನಿಮಿಷ ಲೈಟ್ ಆಫ್ – ಪಂಜಾಬ್ ಗಡಿಯಲ್ಲಿ ಸೇನೆಯಿಂದ ಮಾಕ್ ಡ್ರಿಲ್

    30 ನಿಮಿಷ ಲೈಟ್ ಆಫ್ – ಪಂಜಾಬ್ ಗಡಿಯಲ್ಲಿ ಸೇನೆಯಿಂದ ಮಾಕ್ ಡ್ರಿಲ್

    ಚಂಡೀಗಢ: ಪಹಲ್ಗಾಮ್ ದಾಳಿಯ (Pahalgam Terrorist Attack) ಬಳಿಕ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಹೆಚ್ಚುತ್ತಿರುವ ಕಾದಾಟದ ನಡುವೆಯು ಇದೀಗ ಭಾರತೀಯ ಸೇನೆ (Indian Army) ಪಂಜಾಬ್‌ನ (Punjab) ಫಿರೋಜ್‌ಪುರ (Ferozepur) ಗಡಿ ಭಾಗದಲ್ಲಿ ಮಾಕ್ ಡ್ರಿಲ್ ನಡೆಸಿದೆ.

    ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಜೋರಾಗಿದೆ. ಭಾರತ ಪಾಕಿಸ್ತಾನಕ್ಕೆ ಒಂದಾದ ಮೇಲೊಂದರಂತೆ ಶಾಕ್ ಕೊಡುತ್ತಲೇ ಇದೆ. ಇದೆಲ್ಲದರ ನಡುವೆ ಭಾರತೀಯ ಸೇನೆ ಪಂಜಾಬ್‌ನ ಫಿರೋಜ್‌ಪುರ ಗಡಿ ಭಾಗದಲ್ಲಿ ಭಾನುವಾರ ರಾತ್ರಿ 9 ರಿಂದ 9:30ರ ಸಮಯದಲ್ಲಿ ಮಾಕ್ ಡ್ರಿಲ್ ನಡೆಸಿತು.ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆಗೆ 50 ಲಕ್ಷ ಫಂಡಿಂಗ್‌ – ಪ್ರಭಾವಿ ಮುಸ್ಲಿಮರ ಬ್ಯಾಂಕ್ ಖಾತೆ ಮೇಲೆ ಕಣ್ಣು!

    ಮಾಕ್ ಡ್ರಿಲ್ ನಡೆಸುವ ಉದ್ದೇಶದಿಂದ ಪಂಜಾಬ್ ರಾಜ್ಯ ವಿದ್ಯುತ್ ನಿಗಮ ಲಿಮಿಟೆಡ್ 30 ನಿಮಿಷಗಳ ಕಾಲ ವಿದ್ಯುತ್ ಕಡಿತಗೊಳಿಸಿತ್ತು. ಗಡಿಭಾಗದಲ್ಲಿರುವ ಜನರು ಯಾವುದೇ ಕಾರಣಕ್ಕೂ ಈ ಸಂದರ್ಭದಲ್ಲಿ ಲೈಟ್ ಉರಿಸದಂತೆ ಮನವಿ ಮಾಡಲಾಗಿತ್ತು. ಜೊತೆಗೆ ಲೌಡ್ ಸ್ಪೀಕರ್ ಮೂಲಕ ಗ್ರಾಮಗಳಿಗೆ ತೆರಳುವಂತೆ ಘೋಷಣೆ ಮಾಡಲಾಯಿತು. ಮಾಕ್ ಡ್ರಿಲ್ ನಡೆದ 30 ನಿಮಿಷಗಳ ಕಾಲ ನಿರಂತರವಾಗಿ ಹೂಟರ್‌ಗಳು ಸದ್ದು ಮಾಡುತ್ತಿದ್ದವು.

    ಹಿರಿಯ ಅಧಿಕಾರಿಗಳ ಆದೇಶದಂತೆ, ದೀಪಗಳನ್ನು ಸಂಪೂರ್ಣವಾಗಿ ಆರಿಸಲಾಗಿತ್ತು. ಯಾವುದೇ ವಾಹನ ಲೈಟ್‌ಗಳನ್ನು ಆನ್ ಮಾಡದಂತೆ ಸೂಚಿಸಲಾಗಿತ್ತು. ಇನ್ನೂ ಭದ್ರತಾ ದೃಷ್ಟಿಯಿಂದ ಪಂಜಾಬ್ ಪೊಲೀಸರು ಪ್ರಮುಖ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದಾರೆ.ಇದನ್ನೂ ಓದಿ: 5-10 ಸಾವಿರ ರೂ.ಗೆ ಪಾಕ್ ಐಎಸ್‌ಐಗೆ ಮಿಲಿಟರಿ ಮಾಹಿತಿ ಲೀಕ್‌ – ಇಬ್ಬರು ಅರೆಸ್ಟ್‌

  • ಉಗ್ರರಿಗೆ ಆಹಾರ, ಆಶ್ರಯ ನೀಡಿದ್ದ ವ್ಯಕ್ತಿ ನದಿಗೆ ಹಾರಿ ನೀರಿನಲ್ಲಿ ಮುಳುಗಿ ಸಾವು

    ಉಗ್ರರಿಗೆ ಆಹಾರ, ಆಶ್ರಯ ನೀಡಿದ್ದ ವ್ಯಕ್ತಿ ನದಿಗೆ ಹಾರಿ ನೀರಿನಲ್ಲಿ ಮುಳುಗಿ ಸಾವು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಉಗ್ರರಿಗೆ ಆಹಾರ ಮತ್ತು ಆಶ್ರಯ ನೀಡಿ ಸಹಾಯ ಮಾಡಿದ್ದ ವ್ಯಕ್ತಿಯೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳುವಾಗ ನದಿಗೆ ಹಾರಿ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

    23 ವರ್ಷದ ಇಮಿತಿಯಾಜ್ ಅಹ್ಮದ್ ಮ್ಯಾಗ್ರೆ ನದಿಗೆ ಹಾರಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಹೌತಿ ಬಂಡುಕೋರ ಮೇಲೆ ಸರಣಿ ದಾಳಿ ನಡೆಸಿ ಪೆಟ್ಟು ಕೊಡ್ತೇವೆ: ಬೆಂಜಮಿನ್ ನೆತನ್ಯಾಹು

    ಶನಿವಾರ (ಮೇ 3) ಪೊಲೀಸರು ಮ್ಯಾಗ್ರೆನನ್ನ ಬಂಧಿಸಿದ್ದರು. ವಿಚಾರಣೆ ವೇಳೆ ಕುಲ್ಗಾಮ್‌ನ ತಂಗ್‌ಮಾರ್ಗ್‌ನಲ್ಲಿರುವ ಕಾಡಿನಲ್ಲಿ ಅಡಗಿರುವ ಭಯೋತ್ಪಾದಕರಿಗೆ ಆಹಾರ ಮತ್ತು ಆಶ್ರಯ ನೀಡಿರುವುದಾಗಿ ಆತ ಒಪ್ಪಿಕೊಂಡಿದ್ದ. ಬಳಿಕ ಭಯೋತ್ಪಾದಕರ ಅಡಗುತಾಣಗಳ ಮೇಲೆ ದಾಳಿ ಮಾಡಲು ಭದ್ರತಾ ಪಡೆ ಅಧಿಕಾರಿಗಳು ಆರೋಪಿಯನ್ನು ಕರೆದೊಯ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೇಶದ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ರಜೆ ರದ್ದು – ಅತ್ತ DRDOದಿಂದ ಏರ್‌ಶಿಪ್‌ ಪ್ರಯೋಗ ಯಶಸ್ವಿ

    ಭಾನುವಾರ ಬೆಳಗ್ಗೆ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸುವ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ವೇಶಾವ್‌ ನದಿಗೆ ಹಾರಿದ್ದಾನೆ. ಆದರೆ ನೀರಿನ ರಭಸಕ್ಕೆ ಸಿಲುಕಿ, ನೀರಿನಲ್ಲೇ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತ ನೀರಿನಲ್ಲಿ ಮುಳುಗುತ್ತಿರುವ ದೃಶ್ಯಾವಳಿಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

  • ಆರ್ಮಿಗೆ ಸೇರೋಕಾಗಿಲ್ಲ ಅಂತ 30ಕ್ಕೂ ಹೆಚ್ಚು ಶ್ವಾನಗಳನ್ನು ದೇಶ ಸೇವೆಗೆ ನೀಡಿದ ಅಧಿಕಾರಿ!

    ಆರ್ಮಿಗೆ ಸೇರೋಕಾಗಿಲ್ಲ ಅಂತ 30ಕ್ಕೂ ಹೆಚ್ಚು ಶ್ವಾನಗಳನ್ನು ದೇಶ ಸೇವೆಗೆ ನೀಡಿದ ಅಧಿಕಾರಿ!

    ಕಾರವಾರ: ಅಂಕೋಲದ (Ankola) ವ್ಯಕ್ತಿಯೊಬ್ಬರು ಸೈನ್ಯ (Indian Army) ಸೇರಿ ದೇಶ ಸೇವೆ ಮಾಡಬೇಕು ಎಂಬ ಹಂಬಲ ಈಡೇರದಿದ್ದಿದ್ದಕ್ಕೆ, ತಾವು ಸಾಕಿದ್ದ ಶ್ವಾನದ ಸಂತತಿಯನ್ನೇ ದೇಶ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಇಲ್ಲಿಯವರೆಗೆ ಅವರು 30ಕ್ಕೂ ಹೆಚ್ಚು ಶ್ವಾನಗಳನ್ನು ದೇಶದ ಭದ್ರತೆಗಾಗಿ ನೀಡಿದ್ದಾರೆ. ಇದೀಗ ಎರಡು ಮರಿಗಳು ಸಿಆರ್‌ಪಿಎಫ್ (CRPF) ತುಕಡಿಗೆ ಸೇರಲು ಸಿದ್ಧವಾಗಿವೆ.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿರುವ ಅಂಕೋಲ ತಾಲೂಕಿನ ಬಾವಿಕೇರಿಯ ರಾಘವೇಂದ್ರ ಭಟ್ ಅವರಿಗೆ ಸೇನೆಗೆ ಸೇರಬೇಕೆಂಬ ಬಯಕೆ ಇತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ಅದಕ್ಕಾಗಿಯೇ ಅವರು ಸಾಕಿದ್ದ ನಾಯಿಗಳನ್ನೇ ಕಳೆದ ಹಲವು ವರ್ಷಗಳಿಂದ ಸೇನೆ ಹಾಗೂ ಪೊಲೀಸ್‌ ಇಲಾಖೆಗೆ ಒಪ್ಪಿಸುತ್ತಿದ್ದಾರೆ. ಇಲ್ಲಿಯವರೆಗೆ ಸುಮಾರು 30ಕ್ಕೂ ಹೆಚ್ಚು ಶ್ವಾನಗಳನ್ನು ಅವರು ದೇಶದ ಭದ್ರತೆಗೆ ಒಪ್ಪಿಸಿದ್ದಾರೆ.

    ಹವ್ಯಾಸಕ್ಕಾಗಿ ಕಳೆದ 25 ವರ್ಷಗಳಿಂದ ಹಲವು ತಳಿಯ ಶ್ವಾನಗಳನ್ನು ಸಾಕುತ್ತಾ ಬಂದಿದ್ದಾರೆ. ಈಗ ಇವರ ಬಳಿ ಬೆಲ್ಝಿಯಂ ಮೆಲಿನೋಯ್ಸ್ ತಳಿಯ ಐದು ಶ್ವಾನಗಳಿದ್ದು, ಇವುಗಳಲ್ಲಿ ಮೂರು ಹೆಣ್ಣು ,ಎರಡು ಗಂಡುಗಳಿವೆ. ಇವುಗಳ ಮರಿಗಳೆಲ್ಲವೂ ದೇಶಸೇವೆಗೆ ಮುಡಿಪಾಗಿಡಲಾಗಿದೆ. ಲೀಸಾ ಶ್ವಾನದ ಎರಡು ಮರಿಗಳನ್ನು ಬೆಂಗಳೂರಿನ ಸಿಆರ್‌ಪಿಎಫ್‌ನ ಡಾಗ್ ಬ್ರೀಡ್ ಸೆಂಟರ್‌ಗೆ ಕರೆದೊಯ್ಯಲಾಗುತ್ತಿದೆ. ಇಲ್ಲಿ ಒಂದು ವರ್ಷಗಳ ತರಬೇತಿ ನೀಡಿದ ನಂತರ ಮಾದಕ ವಸ್ತು ಪತ್ತೆ, ಬಾಂಬ್ ಪತ್ತೆ ಕಾರ್ಯಕ್ಕೆ ಇವುಗಳ ನಿಯೋಜನೆಯಾಗಲಿವೆ. ನಕ್ಸಲ್ ನಿಗ್ರಹ ಪಡೆಯಲ್ಲಿ ಈ ಶ್ವಾನದ ಮರಿಗಳು ಕಾರ್ಯ ನಿರ್ವಹಿಸಲಿದೆ.

    ವರ ಮನೆಯಲ್ಲಿ ಸಾಕಿರುವ ಬೆಲ್ಝಿಯಂ ಮೆಲಿನೋಯ್ಸ್ ತಳಿಯ ಶ್ವಾನಗಳ ವಿಶೇಷವೇನು ಗೊತ್ತಾ? ಇವುಗಳಿಗೆ ಚಿರತೆಯ ವೇಗ, ಹದ್ದಿನ ಕಣ್ಣು, ಚಾಣಾಕ್ಷ ಬುದ್ಧಿ, ಎಂಟೆದೆ ಬಂಟನಂತ ದೈರ್ಯ! ಇವು ನೋಟದಲ್ಲೇ ಶತ್ರುಗಳ ಹುಟ್ಟಡಗಿಸುವ ಶಕ್ತಿ ಹೊಂದಿವೆ. ಮೊದಲ ಬಾರಿಗೆ ತಾವು ಸಾಕಿದ್ದ ಲೀಸಾ ಮತ್ತು ಟೈನಿ ಎಂಬ ಎರಡು ಶ್ವಾನಗಳ ಸಂಪೂರ್ಣ ಸಂತತಿಯನ್ನ ದೇಶ ಮತ್ತು ರಾಜ್ಯದ ಸೇವೆಗೆ ಮುಡಿಪಾಗಿರಿಸಿದ್ದಾರೆ. ಮೊದಲ ಬಾರಿ ಹುಟ್ಟಿದ ಟೈನಿ ಶ್ವಾನದ -8 ಲೀಸಾ ಶ್ವಾನದ 9 ಮರಿಗಳನ್ನು ಆರ್ಮಿಗಳಿಗೆ ಒಪ್ಪಿಸಿದ್ದಾರೆ. ಇದರ ಜೊತೆಗೆ 6 ವರ್ಷಗಳಲ್ಲಿ ಹುಟ್ಟಿದ 15 ಮರಿಗಳನ್ನು ರಾಜ್ಯದ ಪೊಲೀಸ್ ಇಲಾಖೆಗೆ ನೀಡಿದ್ದಾರೆ.

    ಅಸ್ಸಾಂ ರೈಫಲ್ ತುಕಡಿಯಲ್ಲಿ ಇವರು ನೀಡಿದ 16 ಶ್ವಾನಗಳು ದೇಶ ಸೇವೆ ಮಾಡುತ್ತಿವೆ. ಬಾಂಬ್ ಪತ್ತೆಕಾರ್ಯ, ಮಾದಕ ವಸ್ತುಗಳ ಪತ್ತೆ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ. ಇನ್ನೂ ರಾಜ್ಯ ಪೊಲೀಸ್ ಇಲಾಖೆಯ ಬೆಳಗಾವಿಯ ಬಾಂಬ್ ನಿಷ್ಕ್ರಿಯ ದಳದಲ್ಲಿರುವ ಇವರ ಮಾಯಾ ಎಂಬ ಶ್ವಾನವು ಎಕ್ಸ್ ಪೊಲೀಸಿವ್ ಟ್ರೇಡ್‌ನಲ್ಲಿ ಪ್ರಥಮ ಸ್ಥಾನಗಳಿಸಿದೆ. ಬೆಂಗಳೂರಿನ ವಿಮಾನ ನಿಲ್ದಾಣ, ರಾಜ್ಯದ ಬಾಂಬ್ ನಿಷ್ಕ್ರಿಯ ದಳದಲ್ಲಿ ಕರ್ತವ್ಯ ನಿರ್ವಹಿಸಿತ್ತಿವೆ.

    ಲೀಸಾ ಶ್ವಾನವು ಈಗ ಮೂರು ಮರಿಗಳನ್ನು ಹಾಕಿದ್ದು ಪಹಲ್ಗಾವ್ ದಾಳಿಯ ನಂತರ ಮರಿಗಳನ್ನು ಸಿಆರ್‌ಪಿಎಫ್‌ಗೆ ನೀಡಬೇಕು ಎಂಬ ಹಂಬಲದಲ್ಲಿ ರಾಘವೇಂದ್ರ ಭಟ್, ಅಧಿಕಾರಿಗಳನ್ನು ಸಂಪರ್ಕಿಸಿದ್ದರು. ಉತ್ತಮ ಶ್ವಾನದ ಹುಡುಕಾಟದಲ್ಲಿದ್ದ ಸಿಆರ್‌ಪಿಎಫ್ ಅಧಿಕಾರಿಗಳು ತಕ್ಷಣ ಇವರ ಮನೆಗೆ ಆಗಮಿಸಿ ಮರಿಗಳನ್ನು ತಪಾಸಣೆ ಮಾಡಿದಾಗ ಉತ್ತಮ ಆರೋಗ್ಯ, ಚುರುಕುತನದಿಂದ ಕೂಡಿದ ಬಲಶಾಲಿಯಾದ ಬೆಲ್ಝಿಯಂ ಮೆಲಿನೋಯ್ಸ್‌ನ ಎರಡು ಮರಿಗಳು ಆಯ್ಕೆಯಾಗಿದ್ದು ಉಚಿತವಾಗಿ ದೇಶಸೇವೆಗಾಗಿ ಈ ಮರಿಗಳನ್ನು ಅಧಿಕಾರಿಗಳಿಗೆ ಹಸ್ತಾಂತರಿಸಿದರು.

    ಸೈನ್ಯದ ಪ್ರತಿ ತುಕಡಿಗೆ 14 ಶ್ವಾನಗಳ ಅವಶ್ಯಕತೆ ಇರುತ್ತದೆ. ಇವುಗಳು ಯೋಧರ ಜೀವ ರಕ್ಷಣೆಯ ಹೊಣೆ ಹೊರುವ ಜೊತೆ ಬಾಂಬ್ ಪತ್ತೆ ಕಾರ್ಯ, ಮಾದಕ ವಸ್ತುಗಳ ಪತ್ತೆ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸುತ್ತವೆ.

  • ನನಗೆ ನ್ಯಾಯ ಬೇಕು – ಪಾಕ್‌ ಯುವತಿಯನ್ನು ಮದುವೆಯಾಗಿ ವಜಾಗೊಂಡಿದ್ದ ಯೋಧನಿಂದ ಮೋದಿಗೆ ಮನವಿ

    ನನಗೆ ನ್ಯಾಯ ಬೇಕು – ಪಾಕ್‌ ಯುವತಿಯನ್ನು ಮದುವೆಯಾಗಿ ವಜಾಗೊಂಡಿದ್ದ ಯೋಧನಿಂದ ಮೋದಿಗೆ ಮನವಿ

    ಶ್ರೀನಗರ: ಪಾಕಿಸ್ತಾನದ (Pakistan) ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಕೆಲಸ ಕಳೆದುಕೊಂಡಿದ್ದ ಸಿಆರ್‌ಪಿಎಫ್‌ (CRPF) ಯೋಧ, ನ್ಯಾಯಕ್ಕಾಗಿ ಪ್ರಧಾನಿ ಮೋದಿಯವರ (Narendra Modi) ಮೊರೆ ಹೋಗಿದ್ದಾರೆ.

    41ನೇ ಬೆಟಾಲಿಯನ್‍ನಲ್ಲಿ ಸಿಆರ್‌ಪಿಎಫ್ ಯೋಧರಾಗಿದ್ದ ಮುನೀರ್ ಅಹಮದ್ ಪಾಕಿಸ್ತಾನದ ಯುವತಿ ಮೆನಾಲ್ ಖಾನ್ ಅವರನ್ನು ಪ್ರೀತಿಸುತ್ತಿದ್ದರು. ಆಕೆಯ ಜೊತೆ ವಿವಾಹಕ್ಕೆ ಸಿಆರ್‌ಪಿಎಫ್ ಬಳಿ ಅನುಮತಿಯನ್ನು ಕೋರಿದ್ದರು. ಅವರಿಗೆ ಅನುಮತಿ ನೀಡುವ ಮುನ್ನವೇ ಮುನೀರ್ ಅವರು ವಿವಾಹವಾಗಿದ್ದರು. ಇದರಿಂದ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು. ಇನ್ನೂ ಮುನೀರ್ ಅಹ್ಮದ್ ಅವರ ಪತ್ನಿ ಮೆನಾಲ್ ಖಾನ್ ಅವರನ್ನು ಗಡೀಪಾರು ಮಾಡುವ ಹಂತದಲ್ಲಿದ್ದರು, ಕೊನೆ ಕ್ಷಣದಲ್ಲಿ ನ್ಯಾಯಾಲಯದಿಂದ ಗಡೀಪಾರಿಗೆ ತಡೆ ತರಲಾಗಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಮುನೀರ್‌, ವೀಸಾ ಅವಧಿ ಮುಗಿದ ನಂತರವೂ ತನ್ನ ಪತ್ನಿ ಭಾರತದಲ್ಲಿ ಉಳಿದುಕೊಂಡಿರುವ ಬಗ್ಗೆ ಅಧಿಕಾರಿಗಳಿಗೆ ತಿಳಿಸಿಲ್ಲ ಎಂದು ವಜಾ ಪತ್ರದಲ್ಲಿ ತಿಳಿಸಲಾಗಿದೆ. ಆದರೆ ಈ ಬಗ್ಗೆ ನಾನು ಮಾಹಿತಿ ನೀಡಿದ್ದೇನೆ, ನನ್ನ ಬಳಿ ಪುರಾವೆಗಳಿವೆ. ನಾನು ಸರಿಯಾದ ದಾಖಲೆಗಳನ್ನು ಒದಗಿಸಿದ್ದೇನೆ ಎಂದಿದ್ದಾರೆ.

    ಮುನೀರ್ ಅಹ್ಮದ್ ಅವರು ಪಾಕ್‌ನ ಯುವತಿ ಮೆನಾಲ್ ಖಾನ್ ಅವರನ್ನು ಕಳೆದ ವರ್ಷ ಮೇ 24 ರಂದು ವೀಡಿಯೊ ಕರೆಯಲ್ಲಿ ವಿವಾಹವಾಗಿದ್ದರು. ಅಕ್ಟೋಬರ್‌ನಲ್ಲಿ ಮದುವೆಯ ಬಗ್ಗೆ ಸಿಆರ್‌ಪಿಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ಮೆನಾಲ್ ಖಾನ್ ಫೆಬ್ರವರಿಯಲ್ಲಿ ವಾಘಾ-ಅಟ್ಟಾರಿ ಗಡಿಯ ಮೂಲಕ ಭಾರತಕ್ಕೆ ಬಂದು ಮುನೀರ್ ಅಹ್ಮದ್ ಜೊತೆ ವಾಸವಾಗಿದ್ದರು. ಅವರ 15 ದಿನಗಳ ವೀಸಾ ಮಾರ್ಚ್‌ನಲ್ಲಿ ಮುಕ್ತಾಯಗೊಂಡಿತ್ತು. ನಂತರ ಮುನೀರ್ ದೀರ್ಘಾವಧಿಯ ವೀಸಾಕ್ಕೆ ಅರ್ಜಿ ಸಲ್ಲಿಸಿದ್ದರು. ಇದೇ ವೇಳೆ ಪಹಲ್ಗಾಮ್ ಭಯೋತ್ಪಾದಕ ದಾಳಿಯಾಗಿತ್ತು. ಇದರಿಂದ ಕೇಂದ್ರ ಸರ್ಕಾರ ಪಾಕ್‌ ಪ್ರಜೆಗಳನ್ನು ದೇಶ ತೊರೆಯುವಂತೆ ಆದೇಶಿಸಿತ್ತು. ಇನ್ನೂ ಮೆನಾಲ್ ಖಾನ್ ಅಹ ಗಡೀಪಾರಾಗುವ ಹಂತದಲ್ಲಿದ್ದರು. ಅಷ್ಟರಲ್ಲೇ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ ಅವರ ಗಡೀಪಾರಿಗೆ ತಡೆ ನೀಡಿತ್ತು.

    ಫೆಬ್ರವರಿಯಲ್ಲಿ ಪತ್ನಿ ಬಂದ ನಂತರ ನಾನು ರಜೆಯಲ್ಲಿದ್ದೆ. ಮಾರ್ಚ್ 23 ರಂದು ಮತ್ತೆ ಕರ್ತವ್ಯಕ್ಕೆ ಸೇರಿಕೊಂಡೆ. ಅಧಿಕಾರಿಗಳಿಗೆ ಈ ವೇಳೆ ಎಲ್ಲಾ ಮಾಹಿತಿ ತಿಳಿಸಿದೆ. ನಾನು ಅವರ ವೀಸಾದ ಪ್ರತಿಯನ್ನು ನೀಡಿ ದೀರ್ಘಾವಧಿಯ ವೀಸಾ ಅರ್ಜಿಯ ಬಗ್ಗೆಯೂ ಹೇಳಿದೆ. ನಂತರ ಇದ್ದಕ್ಕಿದ್ದಂತೆ, ನನ್ನನ್ನು (ಭೋಪಾಲ್‌ಗೆ) ವರ್ಗಾಯಿಸಲಾಯಿತು. ನಾನು 2027 ರಲ್ಲಿ ಜಮ್ಮು ಮತ್ತು ಕಾಶ್ಮೀರದ ನನ್ನ ನಿಯೋಜನೆ ಪೂರ್ಣಗೊಳಿಸಬೇಕಾಗಿತ್ತು. ಬೇರೆ ಬೆಟಾಲಿಯನ್‌ಗೆ ವರ್ಗಾಯಿಸಿದಾಗಲೆಲ್ಲಾ, 15 ದಿನಗಳ ಸೇರ್ಪಡೆ ಸಮಯ ಸಿಗುತ್ತದೆ. ನನಗೆ ಅದು ಸಿಗಲಿಲ್ಲ. ನನಗೆ ರೈಲು ಟಿಕೆಟ್ ಕೂಡ ನೀಡಲಾಗಿಲ್ಲ. ನಾನು 41ನೇ ಬೆಟಾಲಿಯನ್‌ಗೆ ಸೇರಿದೆ. ಸಂದರ್ಶನದ ವೇಳೆ ಮದುವೆಯ ಬಗ್ಗೆ ಎಲ್ಲವನ್ನೂ ಹೇಳಿದೆ. ನನ್ನ ವರ್ಗಾವಣೆಯ ಬಗ್ಗೆ ನಾನು ಮಹಾನಿರ್ದೇಶಕರಿಗೆ ಸಹ ಪತ್ರ ಬರೆದಿದ್ದೇನೆ. ಆ ಅರ್ಜಿ ಪ್ರಕ್ರಿಯೆಯಲ್ಲಿದೆ ಎಂದು ಮುನೀರ್‌ ಹೇಳಿಕೊಂಡಿದ್ದಾರೆ.

    ಸೇವೆಯಿಂದ ವಜಾಗೊಳಿಸಿದ್ದರಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ಒಬ್ಬ ಜವಾನನಾಗಿ ನನಗೆ ನ್ಯಾಯ ಸಿಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಲು ಬಯಸುತ್ತೇನೆ. ನಾನು 2024 ರಲ್ಲಿ ವಿವಾಹವಾದೆ ಮತ್ತು 2022 ರಿಂದ ಇಲಾಖೆಗೆ ಎಲ್ಲಾ ಮಾಹಿತಿ ನೀಡುತ್ತಿದ್ದೇನೆ. ಇದರಲ್ಲಿ ಅಕ್ರಮ ಎಲ್ಲಿದೆ ಎಂದು ಅವರು ಪ್ರಶ್ನಿಸಿದ್ದಾರೆ.

  • 700 ಅಡಿ ಆಳದ ಪ್ರಪಾತಕ್ಕೆ ಬಿದ್ದ ಸೇನಾ ವಾಹನ – ಮೂವರು ಯೋಧರು ಸಾವು 

    700 ಅಡಿ ಆಳದ ಪ್ರಪಾತಕ್ಕೆ ಬಿದ್ದ ಸೇನಾ ವಾಹನ – ಮೂವರು ಯೋಧರು ಸಾವು 

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ರಾಂಬನ್‌ನಲ್ಲಿ ಸೇನಾ (Indian Army) ವಾಹನ 700 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ (Accident) ಪರಿಣಾಮ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ.

    ಮೃತ ಸೈನಿಕರನ್ನು ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು ಗುರುತಿಸಲಾಗಿದೆ. ಸೇನಾ ವಾಹನ ಬಿದ್ದ ರಭಸಕ್ಕೆ ಛಿದ್ರಗೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಸೇನಾ ವಾಹನದ ಫೋಟೋ ವೈರಲ್‌ ಆಗಿದೆ. ಫೋಟೋದಲ್ಲಿ ವಾಹನದ ಅವಶೇಷಗಳು, ಸೈನಿಕರ ಶವಗಳು, ಸೈನಿಕರ ಬಳಿ ಇದ್ದ ಕಾಗದ ಪತ್ರಗಳು ಹರಡಿಕೊಂಡಿರುವುದನ್ನು ನೋಡಬಹುದಾಗಿದೆ. ಇದನ್ನೂ ಓದಿ: ಬಾಲಾಕೋಟ್‌ ದಾಳಿಯ ನಂತರ ಶಕ್ತಿಶಾಲಿಯಾದ ಭಾರತ! – ಬತ್ತಳಿಕೆಗೆ ಏನೇನು ಸೇರಿದೆ?

    ಬೆಳಿಗ್ಗೆ 11.30 ರ ಸುಮಾರಿಗೆ ಬ್ಯಾಟರಿ ಚಶ್ಮಾ ಬಳಿ ಅಪಘಾತ ಸಂಭವಿಸಿದೆ. ಟ್ರಕ್ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.

    ಸೈನಿಕರು, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಸ್ಥಳೀಯ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಪಾಕ್‌ಗೆ ಸೇನಾ ಮಾಹಿತಿ ರವಾನೆ – ಇಬ್ಬರು ಅರೆಸ್ಟ್‌

  • ಪಾಕ್ ಯುವತಿಯನ್ನು ಮದ್ವೆಯಾಗಿ ಕೆಲಸ ಕಳೆದುಕೊಂಡ ಸಿಆರ್‌ಪಿಎಫ್‌ ಯೋಧ!

    ಪಾಕ್ ಯುವತಿಯನ್ನು ಮದ್ವೆಯಾಗಿ ಕೆಲಸ ಕಳೆದುಕೊಂಡ ಸಿಆರ್‌ಪಿಎಫ್‌ ಯೋಧ!

    ನವದೆಹಲಿ: ಸಿಆರ್‌ಪಿಎಫ್‌ ಯೋಧರೊಬ್ಬರು (CRPF Jawan) ಪಾಕಿಸ್ತಾನದ (Pakistan) ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಕೆಲಸ ಕಳೆದುಕೊಂಡಿದ್ದಾರೆ.

    41ನೇ ಬೆಟಾಲಿಯನ್‍ನಲ್ಲಿ ಸಿಆರ್‍ಪಿಎಫ್ ಯೋಧರಾಗಿದ್ದ ಮುನೀರ್ ಅಹಮದ್ ಪಾಕಿಸ್ತಾನದ ಯುವತಿ ಮೆನಾಲ್ ಖಾನ್ ಅವರನ್ನ ಪ್ರೀತಿಸುತ್ತಿದ್ದರು. ಆಕೆಯ ಜೊತೆ ವಿವಾಹಕ್ಕೆ ಸಿಆರ್‍ಪಿಎಫ್ ಬಳಿ ಅನುಮತಿಯನ್ನು ಕೋರಿದ್ದರು. ಅವರಿಗೆ ಅನುಮತಿ ನೀಡುವ ಮುನ್ನವೇ ಮುನೀರ್ ಅವರು ವಿವಾಹವಾಗಿದ್ದರು. ಈಗ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಇದನ್ನೂ ಓದಿ: ಪಾಕ್‌ನಿಂದ ಆಮದಾಗುವ ಎಲ್ಲಾ ವಸ್ತುಗಳಿಗೆ ನಿರ್ಬಂಧ ವಿಧಿಸಿದ ಭಾರತ

    ಸಿಆರ್‌ಪಿಎಫ್‌ ಯೋಧನಿಗೆ ಪಾಕ್ ಯುವತಿಯನ್ನು ವಿವಾಹವಾಗಲು ಎನ್‍ಓಸಿ ನೀಡಿರಲಿಲ್ಲ. ಅಲ್ಲದೇ ತನ್ನ ಪತ್ನಿ ಮೆನಾಲ್ ಖಾನ್ ಅನಧಿಕೃತವಾಗಿ ಭಾರತದಲ್ಲಿ ವಾಸಿಸುತ್ತಿರುವ ಬಗ್ಗೆ ಮುನೀರ್ ಅಹಮದ್ ಅವರು ಸಿಆರ್‍ಪಿಎಫ್‍ಗೂ ಮಾಹಿತಿ ನೀಡಿರಲಿಲ್ಲ. ಈಗ ಸಿಆರ್‍ಪಿಎಫ್ ಯೋಧ ಮುನೀರ್ ಅಹಮದ್ ವಿರುದ್ಧ ರಾಷ್ಟ್ರದ ಭದ್ರತೆಗೆ ಆತಂಕ ಮತ್ತು ಕಾನೂನು ಪ್ರಕ್ರಿಯೆಗಳ ಉಲ್ಲಂಘನೆ ಆರೋಪ ಕೇಳಿ ಬಂದಿದೆ.

    ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ ಬಳಿಕ ಪಾಕ್ ಪ್ರಜೆಗಳು ದೇಶ ತೊರೆಯುವಂತೆ ಕೇಂದ್ರ ಆದೇಶಿಸಿತ್ತು. ಇದರಿಂದ ಪತ್ನಿಯನ್ನು ಪಾಕಿಸ್ತಾನಕ್ಕೆ ಕಳುಹಿಸುವಾಗ ಮುನೀರ್ ಅಹಮದ್ ಭಾವುಕರಾಗಿದ್ದರು. ಇದನ್ನೂ ಓದಿ: ಜಲ ಮಾರ್ಗ ಬಂದ್ – ಪಾಕ್‌ಗೆ ಹೋಗುವ, ಬರುವ ಹಡಗುಗಳ ಸಂಚಾರಕ್ಕೆ ಬ್ರೇಕ್ ಹಾಕಿದ ಭಾರತ

  • ಉಗ್ರರ ವಿರುದ್ಧ ಪ್ರತೀಕಾರಕ್ಕೆ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟ ಮೋದಿ

    ಉಗ್ರರ ವಿರುದ್ಧ ಪ್ರತೀಕಾರಕ್ಕೆ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟ ಮೋದಿ

    ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ (Pahalgam Terror Attack) ಪ್ರತೀಕಾರ ಆಗಲೇಬೇಕು ಎಂದು ಭಾರತ ಪಣತೊಟ್ಟಿದೆ. ಭಾರತದ ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಸಂಪೂರ್ಣ ಸ್ವಾತಂತ್ರ್ಯ ನೀಡಿ ಆದೇಶಿಸಿದ್ದಾರೆ.

    ಪ್ರಧಾನ ಮೋದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರನ್ನು ಭೇಟಿ ಈ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಪಾಕ್‌ ವಿರುದ್ಧ ಮುಂದಿನ 36 ಗಂಟೆಗಳಲ್ಲಿ ಮಿಲಿಟರಿ ಕ್ರಮಕ್ಕೆ ಭಾರತ ಮುಂದಾಗಿದೆ: ಪಾಕ್‌ ಸಚಿವ

    ಭಯೋತ್ಪಾದನೆಗೆ ತಕ್ಕ ಹೊಡೆತ ನೀಡುವುದು ನಮ್ಮ ರಾಷ್ಟ್ರೀಯ ಸಂಕಲ್ಪ ಎಂದು ಪ್ರಧಾನಿ ಪುನರುಚ್ಚರಿಸಿದ್ದಾರೆ. ಭಾರತೀಯ ಸೇನೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ ಎಂದು ಮೋದಿ ತಿಳಿಸಿದ್ದಾರೆ.

    ಸಭೆಯ ಸ್ವಲ್ಪ ಸಮಯದ ನಂತರ, ಗೃಹ ಸಚಿವ ಅಮಿತ್ ಶಾ ಮತ್ತು ಆಡಳಿತಾರೂಢ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಪ್ರಧಾನ ಮಂತ್ರಿಯವರ ನಿವಾಸಕ್ಕೆ ಭೇಟಿ ನೀಡಿದ್ದರು. ಇದನ್ನೂ ಓದಿ: ಉಗ್ರರು ದಾಳಿ ನಡೆಸಿದ ಬೈಸರನ್‌ ಕಣಿವೆಯನ್ನು ಮಿನಿ ಸ್ವಿಟ್ಜರ್ಲೆಂಡ್ ಎನ್ನುವುದ್ಯಾಕೆ?

    2019 ರ ಫೆಬ್ರವರಿಯಲ್ಲಿ ನಡೆದ ಪುಲ್ವಾಮಾ ದಾಳಿಯ ನಂತರದ ಅತ್ಯಂತ ಭೀಕರ ದಾಳಿ ಇದಾಗಿದೆ. ಪಹಲ್ಗಾಮ್‌ನಲ್ಲಿ 26 ಜನರನ್ನು ಕೊಂದ ಭಯೋತ್ಪಾದಕರ ವಿರುದ್ಧ ಮಿಲಿಟರಿ ಕ್ರಮಕ್ಕೆ ಪ್ರಧಾನಿಯವರ ಸಂದೇಶವು ಹಸಿರು ನಿಶಾನೆ ತೋರಿಸಿದೆ ಎಂದು ಮೂಲಗಳು ವಿವರಿಸಿವೆ.

    ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಪಾಕಿಸ್ತಾನದ ಬಾಲಕೋಟ್‌ನಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ನಿಖರವಾದ ವಾಯುದಾಳಿಗಳನ್ನು ನಡೆಸಿತು. ಈ ಶಿಬಿರಗಳನ್ನು ಪಾಕ್‌ ಸೇನೆಯ ಸಹಾಯದಿಂದ ನಿಷೇಧಿತ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ ನಡೆಸುತ್ತಿತ್ತು.

  • ಗಡಿಯಲ್ಲಿ ಯುದ್ಧ ಕಾರ್ಮೋಡ – ಭಾರತೀಯ ಸೈನಿಕರ ಯಶಸ್ಸಿಗಾಗಿ ಪರಶುರಾಮನ ಕೊಡಲಿಯಿಟ್ಟು ಮಹಾಯಾಗ

    ಗಡಿಯಲ್ಲಿ ಯುದ್ಧ ಕಾರ್ಮೋಡ – ಭಾರತೀಯ ಸೈನಿಕರ ಯಶಸ್ಸಿಗಾಗಿ ಪರಶುರಾಮನ ಕೊಡಲಿಯಿಟ್ಟು ಮಹಾಯಾಗ

    – ಶ್ರೀರಾಮಸೇನೆ ವತಿಯಿಂದ ಸತತ 10 ಗಂಟೆ ವಿಶೇಷ ಪೂಜೆ

    ಬೆಂಗಳೂರು: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ (Pehalgam Terrorist Attack) ಬಳಿಕ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಉಭಯ ರಾಷ್ಟ್ರ ನಾಯಕರ ಹೇಳಿಕೆಗಳು ಯಾವುದೇ ಸಮಯದಲ್ಲೂ ಯುದ್ಧ ಘೋಷಿಸುವ ಭೀತಿಯನ್ನು ಉಂಟುಮಾಡಿವೆ. ಹೀಗಾಗಿ ಯುದ್ಧ (War) ಸಂಭವಿಸಿದ್ರೆ ಭಾರತೀಯ ಸೈನಿಕರಿಗೆ ಯಶಸ್ಸು ಸಿಗಲೆಂದು ಶ್ರೀರಾಮ ಸೇನೆ (Shri Ram Sena) ಸಂಘಟನೆ ವತಿಯಿಂದ ಇಂದು ನಗರದಲ್ಲಿ ಮಹಾಯಾಗ ನಡೆಸಲಾಯಿತು.

    ಬೆಂಗಳೂರಿನ ರಾಜಾಜಿನಗರ ರಾಮಮಂದಿರದ ಬಿಬಿಎಂಪಿ ಮೈದಾನದಲ್ಲಿ (BBMP Ground) ಪರಶುರಾಮನ ಬೃಹತ್‌ ಕೊಡಲಿಯಿಟ್ಟು ರಾಮ ಭದ್ರಕಯಾಗ, ಸಂಕಲ್ಪಯಾಗ, ಪರಶುರಾಮ ಯಾಗ ನೆರವೇರಿಸಲಾಯಿತು. ಒಂದು ವೇಳೆ ಯುದ್ಧ ಸಂಭವಿಸಿದ್ರೆ ಪಾಕಿಸ್ತಾನ ಉಗ್ರರ ಹುಟ್ಟಡಗಿಸಬೇಕೆಂದು ಹಾರೈಸಿ, ಭಾರತೀಯ ಯೋಧರಿಗೆ (Indian Soldiers) ಆತ್ಮಸ್ಥೈರ್ಯ, ಶಕ್ತಿ ತುಂಬಲು ಸಂಕಲ್ಪ ಮಾಡಿ ಸತತ 10 ಗಂಟೆ ವಿಶೇಷ ಪೂಜೆ ನೆರವೇರಿಸಲಾಯಿತು.

    ಈ ಕಾರ್ಯಕ್ರಮದಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik), ಹಿಂದೂ ಮುಖಂಡರಾದ ಗಂಗಾಧರ್ ಕುಲಕರ್ಣಿ, ರಾಮಾನಾನಂದ ಶ್ರೀಗಳು ಸೇರಿದಂತೆ ಸಾವಿರಾರು ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದರು. ಇದನ್ನೂ ಓದಿ: ಪಹಲ್ಗಾಮ್ ಅಟ್ಟಹಾಸದ ಬಳಿಕ ಪಾಕ್ ಪ್ರಜೆಗಳ ಗಡೀಪಾರು – 55,000 ಮಂದಿಗಿಲ್ಲ ಗಡೀಪಾರಿನ ಆತಂಕ!

    ಪರಶುರಾಮನ ಕೊಡಲಿ ಹಿಡಿದು ಶೋಭಯಾತ್ರೆ:
    ವಿಶೇಷ ಹೋಮ, ಹವನದ ಬಳಿಕ ಬೃಹತ್‌ ಗಾತ್ರದ ಪರಶುರಾಮನ 15 ಅಡಿಯ ಮೂರ್ತಿಯೊಂದಿಗೆ ಕೊಡಲಿ ಹಿಡಿದು ಶ್ರೀ ರಾಮಸೇನೆಯಿಂದ ಶೋಭಯಾತ್ರೆ ನಡೆಸಲಾಯಿತು. ಇದನ್ನೂ ಓದಿ: Pahalgam Attack | ಟಿಆರ್‌ಎಫ್‌ಗೆ ಭಾರತೀಯ ಯುವಕರೇ ಟಾರ್ಗೆಟ್‌ – ಈ ಭಯೋತ್ಪಾದಕ ಗುಂಪು ಹೇಗೆ ಕೆಲಸ ಮಾಡುತ್ತೆ?

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಮೋದ್‌ ಮುತಾಲಿಕ್‌, ಶ್ರೀ ರಾಮ ಸೇನೆ ಸಂಘಟನೆಯಿಂದ ಪೆಹಲ್ಗಾಮ್‌ ಉಗ್ರರ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಗಳಿಗೆ ಶ್ರದ್ಧಾಂಜಲಿ & ಯೋಧರಿಗೆ ಧೈರ್ಯ, ಸ್ಥೈರ್ಯ, ಶಕ್ತಿ ತುಂಬಲು ಯಾಗ ಮಾಡುತ್ತಿದ್ದೇವೆ. ಹೋಮ, ಹವನ, ಯಜ್ಞ ಮಾಡಿ ನಮ್ಮ ಯೋಧರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇವೆ.ಸ್ವಾತಂತ್ರ‍್ಯ ಬಂದು ಇಷ್ಟು ವರ್ಷಗಳಾದರೂ ಹಿಂದೂಗಳಿಗೆ ಸುರಕ್ಷತೆ ಇಲ್ಲ. ಹೊರಗಡೆ ಎಷ್ಟು ಶತ್ರುಗಳಿದ್ದಾರೋ ದೇಶದ ಒಳಗೂ ಅಷ್ಟೇ ಶತ್ರುಗಳಿದ್ದಾರೆ. ನಮ್ಮಲ್ಲಿಯೇ ಪಾಕಿಸ್ತಾನ ಪರ ಘೋಷಣೆ ಕೂಗುವವರು ಇದ್ದಾರೆ. ಈ ಹಿನ್ನೆಲೆ ಸಮಾಜಕ್ಕೆ, ಹಿಂದೂ ಧರ್ಮಕ್ಕೆ ಬಲ ತುಂಬಲು ಈ ಯಾಗ ಮಾಡ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಭಾರತ ಯಾವುದೇ ಸಮಯದಲ್ಲಿ ಯುದ್ಧ ಮಾಡಬಹುದು, ನಮ್ಮ ಪಡೆಗಳನ್ನೂ ಬಲಪಡಿಸಿದ್ದೇವೆ: ಪಾಕ್‌ ಸಚಿವ

    ಇದೇ ವೇಳೆ ಸಚಿವ ಆರ್‌.ಬಿ ತಿಮ್ಮಾಪೂರ್‌ ಹೇಳಿಕೆ ವಿಚಾಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸ್ವಾತಂತ್ರ‍್ಯ ಬಂದಾಗಿನಿಂದ ಇಲ್ಲಿವರೆಗೆ ಮುಸ್ಲಿಂ ತುಷ್ಟೀಕರಣ, ಮತಕ್ಕೆ ಹಪಾಹಪಿ ಮಾಡೋದು, ಆ ಸಮುದಾಯವನ್ನ ಓಲೈಕೆ ಮಾಡೋದನ್ನೆ ಮಾಡಿಕೊಂಡು ಬಂದಿದೆ. ಈ ನೀತಿಗೆಟ್ಟ, ಮಾನಗೆಟ್ಟ ಕಾಂಗ್ರೆಸ್‌ ಸರ್ಕಾರಕ್ಕೆ ಸತ್ತವರ ಕುಟುಂಬದ ನೋವು ಗೊತ್ತಾಗುತ್ತಾ? ಇಲ್ಲಿ ಯಾರನ್ನ ಬಚಾವ್ ಮಾಡ್ತಾ ಇದ್ದಾರೆ? ಮುಸ್ಲಿಮರ ತುಷ್ಟೀಕರಣವಾ? ಗಾಂಧೀಜಿಯವರು ಪಕ್ಷವನ್ನ ವಿಸರ್ಜನೆ ಮಾಡಿ ಅಂತ ಅವತ್ತೇ ಹೇಳಿದ್ರು. ಆದ್ರೆ ಕಾಂಗ್ರೆಸ್ ಅವರಿಗೆ ದೇಶ ಬೇಡ ಮುಸ್ಲಿಮರ ಮತ ಬೇಕಾಗಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಭಾರತ-ಪಾಕ್‌ ನಡುವಿನ ಉದ್ವಿಗ್ನತೆಯಿಂದ ಯುದ್ಧದ ಭೀತಿ – ಗಡಿಯಲ್ಲಿ ಬಂಕರ್‌ ಶುಚಿಗೊಳಿಸುವ ಕಾರ್ಯ ಚುರುಕು