ಉಡುಪಿ: ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (Anoop Pujari) ಸಾವು ಜನರನ್ನು ನೋವಿನ ಕಡಲಿಗೆ ತಳ್ಳುವಂತೆ ಮಾಡಿದೆ. 33ರ ಹರೆಯ, ಕುಟುಂಬದ ಆಕ್ರಂದನ ಪುಟ್ಟ ಮಗುವಿನ ಅಳು ಊರ ಜನರ ಪ್ರೀತಿ ಕೋಟ್ಯಾಂತರ ಜನರನ್ನು ವಿಚಲಿತಗೊಳಿಸಿದೆ.
ಅನೂಪ್ ಪೂಜಾರಿ ಮತ್ತು ಮಂಜುಶ್ರೀಯದ್ದು ಪ್ರೇಮ ವಿವಾಹ. ಸಂಗೀತಾಸಕ್ತರಾದ ಇಬ್ಬರಿಗೆ ಫೇಸ್‌ಬುಕ್ ನಲ್ಲಿ ಪರಿಚಯವಾಗಿತ್ತು. ಸಂಗೀತ ಮತ್ತು ಪ್ರೀತಿಗೆ ಜಾತಿ ಅಡ್ಡಿಯಾಗಲಿಲ್ಲ. ಎರಡು ಮನೆಯವರನ್ನು ಒಪ್ಪಿಸಿ 2022 ರಲ್ಲಿ ಮದುವೆಯಾಗಿದ್ದರು.
ಅನೂಪ್ ಮತ್ತು ಮಂಜುಶ್ರೀ ಆಪ್ತರ, ಸಂಬಂಧಿಕರ ಕಾರ್ಯಕ್ರಮಗಳಲ್ಲಿ ಹಾಡುತ್ತಿದ್ದರು. ಇತ್ತೀಚೆಗೆ ಹಾಡಿದ್ದ ಹಾಡಿನ ವೀಡಿಯೋ ಈಗ ಎಲ್ಲೆಡೆ ಹರಿದಾಡುತ್ತಿದೆ. ಅಪರಂಜಿ ಚಿನ್ನವೋ ಚಿನ್ನವೋ ನನ್ನ ಮನೆಯ ದೇವತೆ ಹಾಡನ್ನು ಜನ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಕಂಬನಿ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಪೂಂಚ್‍ನಲ್ಲಿ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿದ್ದ ರಾಜ್ಯದ ಮೂವರು ಯೋಧರಿಗೆ ಕಣ್ಣೀರ ವಿದಾಯ
ಬಾಗಲಕೋಟೆ: ದೇಶ ಸೇವೆಯ ಕನಸು ಹೊತ್ತು ಭಾರತೀಯ ಸೇನೆಗೆ (Indian Army) ಸೇರಿದ್ದರು. ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಯೋಧನಿಗೆ ಜಮ್ಮು ಕಾಶ್ಮೀರಕ್ಕೆ (Jammu Kashmir) ವರ್ಗಾವಣೆ ಆಗಿತ್ತು. ವರ್ಗಾವಣೆ ಬಳಿಕ ಜೊತೆಗೆ ಇದ್ದ ಪತ್ನಿಯನ್ನು ಊರಿಗೆ ಕಳಿಸಿ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದರು. ಪತ್ನಿ ಬೆಳಿಗ್ಗೆಯಷ್ಟೇ ಮನೆಗೆ ಬಂದು ಸೇರಿದರೆ ಸಂಜೆ ವೇಳೆಗೆ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರದ 25 ವರ್ಷದ ಮಹೇಶ್ ನಾಗಪ್ಪ ಮರಿಗೊಂಡ (Mahesh Nagappa) 11ನೇ ಮರಾಠಾ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸೇನೆಗೆ ಸೇರಿ 6 ವರ್ಷ 6 ತಿಂಗಳು ಆಗಿತ್ತು. ಮಹೇಶ್ ಅವರು ಮೂರು ವರ್ಷದ ಹಿಂದೆ ಲಕ್ಷ್ಮೀ ಅವರ ಕೈ ಹಿಡಿದಿದ್ದರು. ಮಂಗಳವಾರ ಬೆಳಗ್ಗೆ ಲಕ್ಷ್ಮೀ ಅವರು ಮಹಾಲಿಂಗಪುರಕ್ಕೆ ಬಂದಿದ್ದಾರೆ. ಆ ಬಳಿಕ ಪೋನ್‌ನಲ್ಲಿ ಮಹೇಶ್ ಜೊತೆ ಮಾತನಾಡಿದ್ದಾರೆ. ಆದರೆ ಸಂಜೆ ವಾಹನದೊಂದಿಗೆ ಪ್ರಪಾತಕ್ಕೆ ಬಿದ್ದು ಯೋಧ ಮಹೇಶ್ ಹುತಾತ್ಮರಾಗಿದ್ದಾರೆ.
ಮಹೇಶ್ ಹಿರಿಯ ಪುತ್ರನಾಗಿದ್ದು ಕುಟುಂಬವೇ ಅವರ ಮೇಲೆ ಅವಲಂಬಿಸಿತ್ತು. ಇದೀಗ ಮಗನನ್ನು ಕಳೆದುಕೊಂಡು ತಾಯಿ, ಅಜ್ಜಿ ಸೇರಿದಂತೆ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸಂಬಂಧಿಕರು ಬಂಧುಗಳು ಮನೆ ಬಳಿ ಜಮಾವಣೆಗೊಂಡಿದ್ದಾರೆ.
ಶಾಸಕ ಸಿದ್ದು ಸವದಿ, ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಸೇರಿದಂತೆ ಹಲವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸಂಜೆ ಮಹಾಲಿಂಗಪುರದಲ್ಲಿ ಸಾರ್ವಜನಿಕ ದರ್ಶನದ ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಸಾಂತ್ವನ ಹೇಳಿದ ಸಚಿವ ತಿಮ್ಮಾಪುರ ಕುಟುಂಬಕ್ಕೆ ಸರಕಾರದಿಂದ ಸೇರಬೇಕಾದ ಎಲ್ಲ ಪರಿಹಾರ ಕೊಡಿಸುವ ಭರವಸೆ ನೀಡಿದರು.
ಮನೆಗೆ ಮಗನನ್ನು ಕಳೆದುಕೊಂಡು ಕುಟುಂಬಸ್ಥರು ಕಣ್ಣೀರುಡುತ್ತಿದ್ದು. ಇಂದು ಪಾರ್ಥಿವ ಶರೀರ ಸ್ವಗ್ರಾಮ ತಲುಪಿದ್ದು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಬೆಳಗಾವಿ/ ಉಡುಪಿ/ ಬಾಗಲಕೋಟೆ: ಜಮ್ಮು ಕಾಶ್ಮೀರ (Jammu Kashmir) ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಕರ್ನಾಟದ (Karnataka) ಮೂವರು ಸೈನಿಕರು ಹುತಾತ್ಮರಾಗಿದ್ದಾರೆ.
ಮಂಗಳವಾರ ಸಂಜೆ 5:30ಕ್ಕೆ 300 ಅಡಿ ಕಂದಕಕ್ಕೆ ಸೇನಾ ವಾಹನ ಬಿದ್ದು ಮರಾಠಾ ರೆಜಿಮೆಂಟ್‌ನ (Maratha Light Infantry) ಐವರು ಮೃತಪಟ್ಟಿದ್ದರು. ಐವರು ಪೈಕಿ ಮೂವರು ಕರ್ನಾಟಕದವರಾಗಿದ್ದಾರೆ.
ಬೆಳಗಾವಿ ಪಂತ ಬಾಳೇಕುಂದ್ರಿ ದಯಾನಂದ ತಿರಕನ್ನವರ್, ಮುಧೋಳದ ಮಹಾಲಿಂಗಪುರದ ಮಹೇಶ್ ಮರಿಗೊಂಡ, ಕುಂದಾಪುರ ಬೀಜಾಡಿಯ ಅನುಪ್ ಮೃತರಾಗಿದ್ದಾರೆ. ಸೈನಿಕರು ಮೃತಪಟ್ಟ ಬಗ್ಗೆ ಭಾರತೀಯ ಸೇನೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೆ.
ಅನೂಪ್ ಕುಟುಂಬಕ್ಕೆ ಸೇನಾಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ. ಕಳೆದ 13 ವರ್ಷಗಳಿಂದ ಅನೂಪ್ ಸೇನೆಯಲ್ಲಿದ್ದು 2 ವರ್ಷದ ಹಿಂದೆ ವಿವಾಹವಾಗಿತ್ತು. ದಂಪತಿಗೆ 1 ವರ್ಷದ ಮಗುವಿದೆ. ಜಿಲ್ಲಾಡಳಿತ, ಜಿಲ್ಲಾ ಪೊಲೀಸರಿಗೂ ಸೇನೆಯಿಂದ ಮಾಹಿತಿ ಕಳುಹಿಸಲಾಗಿದೆ.
ಮಹೇಶ್ ನಾಗಪ್ಪ ಮಾರಿಗೊಂಡ (25) ರಬಕವಿ ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ನಿವಾಸಿಯಾಗಿದ್ದರು. 7 ವರ್ಷಗಳಿಂದ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹೇಶ್ ಅವರಿಗೆ ಮೂರು ವರ್ಷದ ಹಿಂದೆ ಮದುವೆಯಾಗಿತ್ತು. ನಾಳೆ ಬೆಳಗಾವಿ ಮೂಲಕ ಮಹಾಲಿಂಗಪುರಕ್ಕೆ ಪಾರ್ಥಿವ ಶರೀರ ಬರಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದಿತ್ತು. ಘರೋವಾ ಪ್ರದೇಶದಲ್ಲಿ ಸಂಜೆ 5:20 ರ ಸುಮಾರಿಗೆ ಆರು ವಾಹನಗಳ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿತ್ತು.
ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ ಜಿಲ್ಲೆಯಲ್ಲಿ 300 ಅಡಿ ಆಳದ ಕಂದಕಕ್ಕೆ ಸೇನಾ ವಾಹನ (Indian Army) ಬಿದ್ದು ಬೆಳಗಾವಿ ಯೋಧ (Belagavi Soldier) ಸೇರಿದಂತೆ ಐವರು ಹುತಾತ್ಮರಾಗಿದ್ದಾರೆ.
ಬೆಳಗಾವಿ ಸಾಂಭ್ರದ ದಯಾನಂದ ಮೃತರಾಗಿದ್ದಾರೆ. ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದಿತ್ತು.
Jammu and Kashmir: In Poonch district’s Mendhar sub-district, a military vehicle fell into a gorge in Balnoi, near the India-Pakistan Line of Control. The injured personnel were brought to the military hospital in Poonch pic.twitter.com/JKcNjrICYE
11 ಮದ್ರಾಸ್ ಲೈಟ್ ಇನ್‌ಫೆಂಟ್ರಿಗೆ ಸೇರಿದ ವಾಹನವು ನಿಲಂ ಪ್ರಧಾನ ಕಛೇರಿಯಿಂದ ಬಲ್ನೋಯಿ ಘೋರಾ ಪೋಸ್ಟ್‌ಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಗಾಯಗೊಂಡ ಸಿಬ್ಬಂದಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೇನೆ ತಿಳಿಸಿದೆ.
All ranks of #WhiteKnightCorps extend their deepest condolences on the tragic loss of five brave soldiers in a vehicle accident during operational duty in the #Poonch sector.
Rescue operations are ongoing, and the injured personnel are receiving medical care.@adgpi…
ಶ್ರೀನಗರ: 18 ಸೈನಿಕರು ಪ್ರಯಾಣಿಸುತ್ತಿದ್ದ ಸೇನಾ ವಾಹನ (Army Vehicle) 300 ಅಡಿ ಆಳದ ಕಣಿವೆಗೆ ಉರುಳಿದ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪೂಂಚ್ ಜಿಲ್ಲೆಯ ಬಲ್ನೋಯಿ ಪ್ರದೇಶದಲ್ಲಿ ನಡೆದಿದೆ.
All ranks of #WhiteKnightCorps extend their deepest condolences on the tragic loss of five brave soldiers in a vehicle accident during operational duty in the #Poonch sector.
Rescue operations are ongoing, and the injured personnel are receiving medical care.@adgpi…
ಜಮ್ಮು ಮತ್ತು ಕಾಶ್ಮೀರದಲ್ಲಿನ ಕಡಿದಾದ, ಪರ್ವತಮಯ ಭೂಪ್ರದೇಶದ ಕಾರಣದಿಂದಾಗಿ ಕಾರುಗಳು ಮತ್ತು ಇತರ ವಾಹನಗಳು ಕಣಿವೆ ಉರುಳುವುದು ಸಾಮಾನ್ಯ. ಆದರೆ ಇಂದು ನಡೆದ ಘಟನೆಗೆ ನಿಜವಾದ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.
ಬೆಳಗಾವಿ: ಭಾರತೀಯ ಸೇನೆಯಲ್ಲಿ (Indian Army) ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು (Soldier) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಕಿತ್ತೂರು (Kittur) ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ.
ಕಳೆದ 20 ದಿನಗಳ ಹಿಂದೆ ರಜೆ ಮೇಲೆ ದೇಗಾಂವ ಗ್ರಾಮಕ್ಕೆ ಬಂದಿದ್ದರು. ರಜೆ ಮುಗಿಸಿ ನವೆಂಬರ್ 24ರಂದು ಸೇನಾ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು. ಆದರೆ ಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವಾರು ಸಂದೇಹಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಪಿಎಸ್‌ಐ ಪ್ರವೀಣ ಗಂಗೋಳ, ಪ್ರವೀಣ ಕೋಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣ ಗೆಲುವಿಗೆ ಬಿಜೆಪಿಯವರೂ ಸಪೋರ್ಟ್ ಮಾಡಿದ್ದಾರೆ – ಡಿಕೆಶಿ ಅಚ್ಚರಿ ಹೇಳಿಕೆ
ಶ್ರೀನಗರ: ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ (Indian Army) ನಡುವೆ ನಡೆದ ಎನ್‌ಕೌಂಟರ್‌ನ ವೇಳೆ ಇಬ್ಬರು ಚಾರಣಿಗರು ಸಿಕ್ಕಿಕೊಂಡ ಘಟನೆ ಜಮ್ಮು ಮತ್ತು ಜಬರ್ವಾನ್‌ನಲ್ಲಿ ನಡೆದಿದೆ. ಚಾರಣಿಗರು ಪೊಲೀಸ್ (Police) ಕಂಟ್ರೋಲ್ ರೂಮ್ ಸಂಖ್ಯೆ 100ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಚಾರಣಿಗರನ್ನು (Trekkers) ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಭಯೋತ್ಪಾದಕರ ಇರುವಿಕೆಯ ಗುಪ್ತಚರ ಮಾಹಿತಿ ಆಧಾರದ ಮೇಲೆ ಪೊಲೀಸರು ಮತ್ತು ಭದ್ರತಾ ಪಡೆಗಳು ಜಬರ್ವಾನ್ ಅರಣ್ಯ ಪ್ರದೇಶದಲ್ಲಿ ಭಾನುವಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಈ ವೇಳೆ ಚಾರಣಿಗರು ಆ ಪ್ರದೇಶದಲ್ಲಿ ಸಿಲುಕಿಕೊಂಡಿದ್ದಾರೆ. ಬಳಿಕ ಅವರು ಬಂಡೆಗಳ ನಡುವೆ ಅಡಗಿಕೊಂಡು ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ ಭದ್ರತಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅವರನ್ನು ರಕ್ಷಿಸಲಾಗಿದೆ.
ಈ ಘಟನೆಯ ಬಳಿಕ ಪ್ರತಿಕ್ರಿಯಿಸಿರುವ ಕಾಶ್ಮೀರ ಪೊಲೀಸ್ ಮುಖ್ಯಸ್ಥ ವಿಧಿ ಕುಮಾರ ಬಿರ್ಡಿಯವರು, ಚಾರಣಿಗರು ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಬೇಕು. ವಿಶೇಷವಾಗಿ ಭದ್ರತಾ ಕಾರ್ಯಾಚರಣೆಗಳು ಇರುವ ಪ್ರದೇಶಗಳಲ್ಲಿ ಈ ಅನಿರೀಕ್ಷಿತ ಘಟನೆಗಳು ಸಂಭವಿಸಿದಲ್ಲಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ತ್ವರಿತವಾಗಿ ಕಾರ್ಯನಿರ್ವಹಿಸಲು ಇದು ಸಹಕಾರಿಯಾಗಲಿದೆ ಎಂದಿದ್ದಾರೆ.
ಸ್ಥಳೀಯರು, ಪ್ರವಾಸಿಗರು ಮತ್ತು ವಿಶೇಷವಾಗಿ ಚಾರಣಿಗರು ಸಂಕಷ್ಟದಲ್ಲಿದ್ದಾಗ 100ಕ್ಕೆ ಅಥವಾ ನೇರವಾಗಿ ಪೊಲೀಸ್ ಠಾಣೆಗೆ ತಲುಪುವುದು ಸೇರಿದಂತೆ ಸಹಾಯವಾಣಿ ಸೇವೆಗಳನ್ನು ಬಳಸಲು ನಾವು ಪ್ರೋತ್ಸಾಹಿಸುತ್ತೇವೆ. ಈ ಮೂಲಕ ಪೊಲೀಸರ ತ್ವರಿತ ಸಹಾಯವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಸಂಕಷ್ಟದಲ್ಲಿ ಸಿಲುಕಿದ ವೇಳೆ ಚಾರಣಿಗನೊಬ್ಬ ಪೊಲೀಸ್ ಕಂಟ್ರೋಲ್ ರೂಮ್‌ಗೆ ಸಂಪರ್ಕಿಸಿದ್ದಾನೆ. ಈ ವೇಳೆ ಕರ್ತವ್ಯದಲ್ಲಿರುವ ಅಧಿಕಾರಿಗಳಿಗೆ ಮಾಹಿತಿಯನ್ನು ರವಾನಿಸುವಲ್ಲಿ ಪಿಸಿಆರ್‌ನ ತ್ವರಿತ ಸಮನ್ವಯ ಸಂಭವನೀಯ ದುರಂತವನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕಿಶ್ತ್ವಾರ್ (Kishtwar) ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಸೇನಾಧಿಕಾರಿ ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಭಾರತೀಯ ಸೇನೆ ಹಾಗೂ ಜಮ್ಮು ಕಾಶ್ಮೀರದ ಪೊಲೀಸರ ತಂಡಗಳು ಉಗ್ರರಿಗಾಗಿ ಜಂಟಿ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಉಗ್ರರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ನ.10 ರಂದು ಕಿಶ್ತ್ವಾರ್‌ನ ಭರ್ಟ್ ರಿಡ್ಜ್ ಪ್ರದೇಶದಲ್ಲಿ 2 ಪ್ಯಾರಾ (ವಿಶೇಷ ಪಡೆಯ) ನಾಲ್ವರು ಗಾಯಗೊಂಡಿದ್ದರು. ಬಳಿಕ ಅವರನ್ನು ಚಿಕಿತ್ಸೆಗಾಗಿ ಉಧಂಪುರಕ್ಕೆ ವಿಮಾನದಲ್ಲಿ ಕಳುಹಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಸೇನಾಧಿಕಾರಿ ನೈಬ್ ಸುಬೇದಾರ್ ಕುಮಾರ್ ಸಾವನ್ನಪ್ಪಿದ್ದಾರೆ.
ಅದೇ ಸ್ಥಳದಿಂದ ಕೆಲವು ಕಿ.ಮೀ. ದೂರದಲ್ಲಿರುವ ಕುಂಟ್ವಾರ ಮತ್ತು ಕಿಶ್ತ್ವಾರ್‌ನ ಕೇಶ್ವಾನ್ ಅರಣ್ಯದಲ್ಲಿ ವಿಲೇಜ್ ಡಿಫೆನ್ಸ್ ಗ್ರೂಪ್‌ನ ಇಬ್ಬರು ಸದಸ್ಯರು ಪತ್ತೆಯಾಗಿದ್ದಾರೆ. ಇನ್ನೂ ಅದೇ ತಂಡದ ಇಬ್ಬರನ್ನು ಅಪಹರಿಸಿ ಹತ್ಯೆಗೈದಿದ್ದಾರೆ.ಇದನ್ನೂ ಓದಿ: Maharashtra Polls | 28 ಬಂಡಾಯ ಅಭ್ಯರ್ಥಿಗಳನ್ನು ಅಮಾನತುಗೊಳಿಸಿದ ಕಾಂಗ್ರೆಸ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರ (Kupwara) ಜಿಲ್ಲೆಯಲ್ಲಿ ಭದ್ರತಾ ಪಡೆಗಳು (Indian Army) ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತ್ಯೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆ ನಡೆದ ಸ್ಥಳದಿಂದ ಎಕೆ 47 ರೈಫಲ್, ಎರಡು ಹ್ಯಾಂಡ್ ಗ್ರೆನೇಡ್, ನಾಲ್ಕು ಮ್ಯಾಗಜೀನ್‌ಗಳು, ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಲೋಲಾಬ್ ಪ್ರದೇಶದಲ್ಲಿ ಮಂಗಳವಾರ ಕಾರ್ಯಾಚರಣೆ ಆರಂಭವಾಗಿತ್ತು. ಬುಧವಾರ ಸಹ ಈ ಕಾರ್ಯಾಚರಣೆ ಮುಂದುವರೆದಿತ್ತು. ಓರ್ವ ಉಗ್ರನ ಹತ್ಯೆಯ ನಂತರ ಈ ಕಾರ್ಯಾಚರಣೆ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ಬಂಡಿಪೋರಾ ಜಿಲ್ಲೆಯ ಕೆತ್ಸುನ್ ಅರಣ್ಯದಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆಗೈಯ್ಯಲಾಗಿತ್ತು. ಆ ಪ್ರದೇಶದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.
ಕಾಶ್ಮೀರದಲ್ಲಿ ನೂತನ ಸರ್ಕಾರ ರಚನೆಯಾದಗಿನಿಂದ ಭಯೋತ್ಪಾದಕರು ತಮ್ಮ ಚಟುವಟಿಕೆಗಳನ್ನು ಹೆಚ್ಚಿಸಿದ್ದಾರೆ. ನವೆಂಬರ್ 2 ರಂದು, ಹಳೆಯ ಶ್ರೀನಗರ ನಗರದ ಖನ್ಯಾರ್ ಪ್ರದೇಶದಲ್ಲಿ ನಡದ ಕಾರ್ಯಾಚರಣೆಯಲ್ಲಿ ಎಲ್ಇಟಿಯ ಕಮಾಂಡರ್‌ನನ್ನು ಹತ್ಯೆಗೈಯ್ಯಲಾಗಿತ್ತು. ಈ ಕಾರ್ಯಾಚರಣೆ ವೇಳೆ ಇಬ್ಬರು ಸ್ಥಳೀಯ ಪೊಲೀಸರು ಮತ್ತು ಇಬ್ಬರು ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದರು.
ಕಳೆದ ತಿಂಗಳು ಗಂದರ್‌ಬಾಲ್ ಜಿಲ್ಲೆಯ ಗಗಂಗೀರ್ ಪ್ರದೇಶದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಆರು ಕಾರ್ಮಿಕರು ಮತ್ತು ಸ್ಥಳೀಯ ವೈದ್ಯರನ್ನು ಸಾವನ್ನಪ್ಪಿದ್ದರು.