Tag: indian army

  • ಜಮ್ಮು & ಕಾಶ್ಮೀರದ ಪ್ರವಾಸೋದ್ಯಮ ಕಚೇರಿ ಬಳಿ ಗ್ರೆನೇಡ್ ದಾಳಿ – 10 ಮಂದಿಗೆ ಗಾಯ

    ಜಮ್ಮು & ಕಾಶ್ಮೀರದ ಪ್ರವಾಸೋದ್ಯಮ ಕಚೇರಿ ಬಳಿ ಗ್ರೆನೇಡ್ ದಾಳಿ – 10 ಮಂದಿಗೆ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪ್ರವಾಸೋದ್ಯಮ ಕಚೇರಿ (Tourism office) ಬಳಿ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಶ್ರೀನಗರದ (Srinagar) ಪ್ರವಾಸಿ ಸ್ವಾಗತ ಕೇಂದ್ರದ ಸಮೀಪ ಇರುವ ಚಿಗಟ ಮಾರುಕಟ್ಟೆಯಲ್ಲಿ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆದಿದೆ. ಸ್ಫೋಟದ ನಂತರ ವೈದ್ಯಕೀಯ ತಂಡಗಳೊಂದಿಗೆ ಭದ್ರತಾ ಪಡೆಗಳು (Indian Army) ತಕ್ಷಣವೇ ಸ್ಥಳಕ್ಕೆ ತೆರಳಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶ್ರೀನಗರದ ಖನ್ಯಾರ್ ಪ್ರದೇಶದಲ್ಲಿ ಇತ್ತೀಚೆಗೆ ಭದ್ರತಾ ಪಡೆಗಳು ಉಗ್ರ ಸಂಘಟನೆ ಎಲ್‌ಇಟಿಯ ಪಾಕಿಸ್ತಾನಿ ಕಮಾಂಡರ್‌ನ್ನು ಹೊಡೆದುರುಳಿಸಿದ್ದರು. ಇದಾದ ಒಂದು ದಿನದ ನಂತರ ಭಾರೀ ಭದ್ರತೆಯ ಪ್ರವಾಸಿ ಸ್ವಾಗತ ಕೇಂದ್ರದ (ಟಿಆರ್‌ಸಿ) ಬಳಿ ಈ ದಾಳಿ ನಡೆದಿದೆ. ಸ್ಫೋಟದಿಂದಾಗಿ ವ್ಯಾಪಾರಸ್ಥರು ಹಾಗೂ ಜನರು ಭಯಭೀತರಾಗಿದ್ದಾರೆ.

    ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಜಮ್ಮು & ಕಾಶ್ಮೀರ | ಕಾರ್ಮಿಕರ ಮೇಲೆ ದಾಳಿ ನಡೆಸಿದ್ದ ಮೂವರು ಉಗ್ರರನ್ನು ಹತ್ಯೆಗೈದ ಸೇನೆ

    ಜಮ್ಮು & ಕಾಶ್ಮೀರ | ಕಾರ್ಮಿಕರ ಮೇಲೆ ದಾಳಿ ನಡೆಸಿದ್ದ ಮೂವರು ಉಗ್ರರನ್ನು ಹತ್ಯೆಗೈದ ಸೇನೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಖಯ್ನಾರ್ ಪ್ರದೇಶದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು (Indian Army) ನಡೆಸಿದ ಎನ್‌ಕೌಂಟರ್‌ನಲ್ಲಿ (Encounter) ಮೂವರು ಉಗ್ರರು ಬಲಿಯಾಗಿದ್ದಾರೆ.

    ಉಗ್ರರು ಅಡಗಿದ್ದ ಸ್ಥಳದಲ್ಲಿ ಸೇನೆ ಶೋಧ ಕಾರ್ಯಾಚರಣೆ ಆರಂಭಿಸಿದ ವೇಳೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮೂರು ಉಗ್ರರು ಹತ್ಯೆಗೀಡಾಗಿದ್ದಾರೆ. ಘಟನೆಯಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶುಕ್ರವಾರ ಖಯ್ನಾರ್ ಬಳಿ ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದಾದ ಬಳಿಕ ಸೇನೆ ಈ ಭಾಗದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಕಳೆದ ಎರಡು ವಾರಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ವಲಸಿಗರ ಮೇಲೆ ನಡೆದ ನಾಲ್ಕನೇ ದಾಳಿ ಇದಾಗಿತ್ತು.

    ಅ.20 ರಂದು ಉಗ್ರರು ಗಂದೇರ್ಬಾಲ್ ಜಿಲ್ಲೆಯ ಸುರಂಗ ನಿರ್ಮಾಣ ಸ್ಥಳದಲ್ಲಿ ಸ್ಥಳೀಯ ವೈದ್ಯ ಮತ್ತು ಇಬ್ಬರು ಕಾರ್ಮಿಕರು ಸೇರಿದಂತೆ ಏಳು ಜನರನ್ನು ಗುಂಡಿಕ್ಕಿ ಹತ್ಯೆಗೈದಿದ್ದರು.

  • ಭಾರತದ ಭೂಮಿಯ ಮೇಲೆ ಒಂದಿಂಚೂ ಕಾಂಪ್ರಮೈಸ್ ಮಾಡಲ್ಲ: ಮೋದಿ ಭರವಸೆ

    ಭಾರತದ ಭೂಮಿಯ ಮೇಲೆ ಒಂದಿಂಚೂ ಕಾಂಪ್ರಮೈಸ್ ಮಾಡಲ್ಲ: ಮೋದಿ ಭರವಸೆ

    ನವದೆಹಲಿ: ಭಾರತವು ತನ್ನ ಗಡಿಯಲ್ಲಿನ ಒಂದಿಂಚು ಭೂಮಿಯಲ್ಲಿಯೂ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

    ಗುಜರಾತಿನ ಕಚ್ ಪ್ರದೇಶದಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ನಂತರ ಮೋದಿ ಅವರು ಸೈನಿಕರನ್ನು ಉದ್ದೇಶಿಸಿ ಮಾತನಾಡಿದರು. ದೇಶವನ್ನು ರಕ್ಷಿಸಲು ಅದರ ಮಿಲಿಟರಿಯ ಶಕ್ತಿಯನ್ನು ಜನರು ನಂಬುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೇನಾ ವಾಪಸಾತಿ ಬಳಿಕ ಗಡಿಯಲ್ಲಿ ದೀಪಾವಳಿ ಸಿಹಿ ಹಂಚಿಕೊಂಡ ಭಾರತ-ಚೀನಾ ಸೈನಿಕರು

    ಭಾರತವು ತನ್ನ ಗಡಿಯ ಇಂಚಿನಲ್ಲೂ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಅದಕ್ಕಾಗಿಯೇ ನಮ್ಮ ನೀತಿಗಳು ನಮ್ಮ ಸಶಸ್ತ್ರ ಪಡೆಗಳ ಸಂಕಲ್ಪದೊಂದಿಗೆ ಹೊಂದಿಕೊಂಡಿವೆ ಎಂದಿದ್ದಾರೆ.

    ನಾವು ನಮ್ಮ ಸೈನಿಕರ ದೃಢತೆಯನ್ನು ನಂಬುತ್ತೇವೆಯೇ ಹೊರತು, ನಮ್ಮ ಶತ್ರುಗಳ ಮಾತನ್ನಲ್ಲ. ನಿಮ್ಮಿಂದ (ಸೈನಿಕರಿಂದ) ತಮ್ಮ ದೇಶ ಸುರಕ್ಷಿತವಾಗಿದೆ ಎಂದು ಭಾರತದ ಜನರು ಭಾವಿಸುತ್ತಾರೆ ಎಂದು ಸೈನಿಕರನ್ನು ಪ್ರಧಾನಿ ಹೊಗಳಿದ್ದಾರೆ. ಇದನ್ನೂ ಓದಿ: ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿ: ಮೋದಿ

    ಜಗತ್ತು ನಿಮ್ಮನ್ನು ನೋಡಿದಾಗ ಭಾರತದ ಶಕ್ತಿಯೇ ಕಾಣುತ್ತದೆ. ಆದರೆ ಶತ್ರುಗಳು ನಿಮ್ಮನ್ನು ನೋಡಿದಾಗ, ಅವರು ತಮ್ಮ ಕೆಟ್ಟ ಯೋಜನೆಗಳ ಅಂತ್ಯವನ್ನು ನೋಡುತ್ತಾರೆ ಎಂದು ಯೋಧರನ್ನು ಮೋದಿ ಹುರಿದುಂಬಿಸಿದ್ದಾರೆ.

  • ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಅಗಲಿದ ಫ್ಯಾಂಟಮ್‌ – ಸೇನೆಯಿಂದ ಕಣ್ಣೀರ ವಿದಾಯ

    ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಅಗಲಿದ ಫ್ಯಾಂಟಮ್‌ – ಸೇನೆಯಿಂದ ಕಣ್ಣೀರ ವಿದಾಯ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಅಖ್ನೂರ್‌ನ ಸುಂದರ್‌ಬನಿ ಸೆಕ್ಟರ್‌ನಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಸೇನೆಯ ಹೆಮ್ಮೆಯ ಶ್ವಾನ (Army Dog) ಫ್ಯಾಂಟಮ್ (Phantom) ಪ್ರಾಣ ಕಳೆದುಕೊಂಡಿದೆ.

    ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಡೆದ ಗುಂಡಿನ ದಾಳಿಯಲ್ಲಿ ಫ್ಯಾಂಟಮ್‌ (4) ಮೃತಪಟ್ಟಿದೆ. ಫ್ಯಾಂಟಮ್ ಬೆಲ್ಜಿಯನ್ ಮಾಲಿನೋಯಿಸ್ ತಳಿಯ ಶ್ವಾನವಾಗಿದ್ದು, 2020ರ ಮೇ 25 ರಂದು ಜನಿಸಿತ್ತು. ಅದು K9 ಘಟಕದ ಆಕ್ರಮಣಕಾರಿ ಶ್ವಾನವಾಗಿತ್ತು. ಇದು ಉಗ್ರರ ವಿರುದ್ಧದ ಕಾರ್ಯಾಚರಣೆಗಳಲ್ಲಿ ಭಾಗವಹಿಸುವ ತರಬೇತಿ ಪಡೆದ ಶ್ವಾನ ದಳದ ವಿಶೇಷ ಘಟಕವಾಗಿದೆ. ಫ್ಯಾಂಟಮ್‌ನ ಧೈರ್ಯ, ನಿಷ್ಠೆ ಮತ್ತು ಸಮರ್ಪಣೆಯನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಸೇನೆ ಹೇಳಿದೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸೇನೆ, ನಮ್ಮ ಶ್ವಾನ ಫ್ಯಾಂಟಮ್‌ನ ತ್ಯಾಗಕ್ಕೆ ನಮನ ಸಲ್ಲಿಸುತ್ತೇವೆ. ನಮ್ಮ ಸೈನಿಕರು ಸಿಕ್ಕಿಬಿದ್ದ ಭಯೋತ್ಪಾದಕರ ಬಳಿಗೆ ತೆರಳುತ್ತಿದ್ದಾಗ ಫ್ಯಾಂಟಮ್ ಶತ್ರುಗಳ ದಾಳಿಗೆ ಒಳಗಾಯಿತು. ಅವನ ಧೈರ್ಯ, ನಿಷ್ಠೆ ಮತ್ತು ಸಮರ್ಪಣೆ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದೆ.

    ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನ ಅಸನ್, ಸುಂದರಬಂಡಿ ಸೆಕ್ಟರ್‌ನಲ್ಲಿ ಭಯೋತ್ಪಾದಕರು ಸೇನಾ ವಾಹನವನ್ನು ಗುರಿಯಾಗಿಸಿ ದಾಳಿ ನಡೆಸಿದ್ದರು. ದಾಳಿ ನಡೆಸಿದ್ದ ಉಗ್ರರ ಪತ್ತೆಗೆ ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಸೇನೆಯ ಗುಂಡಿಗೆ ಬಲಿಯಾಗಿದ್ದಾರೆ.

    ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನ ಜೀವ ಉಳಿಸಲು ಹೋಗಿ ಆರು ವರ್ಷದ ಸೇನೆಯ ಶ್ವಾನ ಕೆಂಟ್ ಸಾವನ್ನಪ್ಪಿತ್ತು. ಅದಕ್ಕೂ ಮೊದಲು ಕೆಂಟ್‌ 9 ಕಾರ್ಯಾಚರಣೆಗಳ ಭಾಗವಾಗಿತ್ತು.

  • ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದ ಮೂವರು ಉಗ್ರರನ್ನು ಬೇಟೆಯಾಡಿದ ಸೇನೆ

    ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದ ಮೂವರು ಉಗ್ರರನ್ನು ಬೇಟೆಯಾಡಿದ ಸೇನೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಅಖ್ನೂರ್‌ನಲ್ಲಿ ಭಯೋತ್ಪಾದಕರು ಸೇನಾ ವಾಹನದ (Army Vehicle) ಮೇಲೆ ಗುಂಡು ಹಾರಿಸಿದ ಬಳಿಕ ನಡೆದ ನೇನೆಯ (Indian Army) ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.

    ಕಾರ್ಯಾಚರಣೆ ನಡೆದ ಪ್ರದೇಶದಲ್ಲಿ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಅಲ್ಲದೇ ಎನ್‌ಕೌಂಟರ್ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.

    ಬಟಾಲ್ ಪ್ರದೇಶದಲ್ಲಿ ಬೆಳಗ್ಗೆ 6-7 ಗಂಟೆ ಸುಮಾರಿಗೆ ಮೂವರು ಭಯೋತ್ಪಾದಕರು ಸೇನಾ ವಾಹನದ ಮೇಲೆ ಹಲವು ಸುತ್ತು ಗುಂಡು ಹಾರಿಸಿದ್ದರು. ಬಳಿಕ ಭದ್ರತಾ ಪಡೆಗಳು ತಕ್ಷಣವೇ ಈ ಪ್ರದೇಶವನ್ನು ಸುತ್ತುವರಿದು ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದವು.

    ಜಮ್ಮು ಮತ್ತು ಕಾಶ್ಮೀರದಲ್ಲಿ ದೀಪಾವಳಿ ಹಬ್ಬದ ಸಲುವಾಗಿ ಭದ್ರತಾ ಕ್ರಮಗಳನ್ನು ಸೇನೆ ಜಾರಿಗೆ ತಂದಿದೆ. ಅದರ ನಡುವೆಯೇ ಈ ದಾಳಿ ನಡೆದಿದೆ. ಇತ್ತೀಚೆಗೆ ಗಂದರ್‌ಬಾಲ್ ಮತ್ತು ಬಾರಾಮುಲ್ಲಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಜಮ್ಮು, ಕಥುವಾ, ಸಾಂಬಾ, ಪೂಂಚ್ ಮತ್ತು ರಜೌರಿ ಸೇರಿದಂತೆ ಜಮ್ಮುವಿನ ಗಡಿ ಜಿಲ್ಲೆಗಳಿಗೆ ಈ ಹಿಂದೆ ಹೈ ಅಲರ್ಟ್ ಘೋಷಿಸಲಾಗಿತ್ತು.

    ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಕಣಿವೆಯಲ್ಲಿ ನಡೆದ ಗುಂಡಿನ ಚಕಮಕಿಗಳಲ್ಲಿ ಇಬ್ಬರು ಸೈನಿಕರು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿತ್ತು.

  • ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಗುಂಡಿನ ದಾಳಿ – ಉಗ್ರರಿಗಾಗಿ ತೀವ್ರ ಶೋಧ

    ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಗುಂಡಿನ ದಾಳಿ – ಉಗ್ರರಿಗಾಗಿ ತೀವ್ರ ಶೋಧ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಅಖ್ನೂರ್‌ನಲ್ಲಿ ಸೇನಾ ವಾಹನವನ್ನು (Army Vehicle) ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

    ಇಂದು (ಸೋಮವಾರ) ಮುಂಜಾನೆ 6 ಗಂಟೆಗೆ ಭಯೋತ್ಪಾದಕರು ಸೇನಾ ವಾಹನದ ಮೇಲೆ 3-4 ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿದ ನಂತರ ಭಯೋತ್ಪಾದಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಭದ್ರತಾ ಪಡೆಗಳು (Indian Army) ಇದೀಗ ಶೋಧ ಕಾರ್ಯಾಚರಣೆ ನಡೆಸುತ್ತಿವೆ.

    ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

  • ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ – ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮ

    ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ – ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮ

    – ಭಯೋತ್ಪಾದರ ದಾಳಿಗೆ ಇಬ್ಬರು ವಲಸೆ ಕಾರ್ಮಿಕರು ಬಲಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಬಾರಾಮುಲ್ಲಾದಲ್ಲಿ ಗುರುವಾರ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ದಾಳಿಯಲ್ಲಿ ಇಬ್ಬರು ಹಮಾಲರು ಕೂಡ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದು, ಬಾರಾಮುಲ್ಲಾದ ಬುತಪತ್ರಿಯ ಸಾಮಾನ್ಯ ಪ್ರದೇಶದಲ್ಲಿ ಸೈನಿಕರು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಖಚಿತಪಡಿಸಿದೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ನೂತನ ಸಿಜೆಐ ಆಗಿ ಸಂಜೀವ್‌ ಖನ್ನಾ ನೇಮಕ – ನ.11ರಂದು ಪ್ರಮಾಣ ವಚನ

    ಇಂದು ಸಂಜೆ ಬೂತಪತ್ರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರು ಮೊದಲು ದಾಳಿ ನಡೆಸಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಮಿಕನೊಬ್ಬನ ಮೇಲೆ ಗುಂಡು ಹಾರಿಸಲಾಗಿತ್ತು. ಇದಾದ ಕೆಲವೇ ಗಂಟೆಗಳ ನಂತರ ಈ ದಾಳಿ ನಡೆದಿದೆ. ಗಾಯಗೊಂಡ ವ್ಯಕ್ತಿಯು ಉತ್ತರ ಪ್ರದೇಶದ ನಿವಾಸಿ ಪ್ರೀತಮ್ ಸಿಂಗ್ ಎಂದು ಗುರುತಿಸಲಾಗಿದೆ.

    ಸೇನಾ ವಾಹನದ ಮೇಲೆ ಇಂದು ನಡೆದ ದಾಳಿಯು ಕೇಂದ್ರಾಡಳಿತ ಪ್ರದೇಶದಲ್ಲಿ ಕಳೆದ 72 ಗಂಟೆಗಳಲ್ಲಿ ನಡೆದ ಎರಡನೇ ದಾಳಿಯಾಗಿದೆ. ಮೂರು ದಿನಗಳ ಹಿಂದೆ ಇಬ್ಬರು ಭಯೋತ್ಪಾದಕರು ಸುರಂಗವನ್ನು ನಿರ್ಮಿಸುವ ಕಾರ್ಮಿಕರ ವಸತಿ ಶಿಬಿರದ ಮೇಲೆ ದಾಳಿ ಮಾಡಿದ್ದರು. ದಾಳಿಯಲ್ಲಿ ಆರು ಮಂದಿ ಕಾರ್ಮಿಕರು ಮತ್ತು ಒಬ್ಬ ವೈದ್ಯ ಹತ್ಯೆಯಾಗಿದ್ದರು. ಹತ್ಯೆಯಾದವರು ಕಾಶ್ಮೀರದ ನಾಯೀದ್ಗಾಮ್‌ನ ಬದ್ಗಾಮ್‌ನ ಡಾ.ಶಹನವಾಜ್ ಮತ್ತು ಪಂಜಾಬ್‌ನ ಗುರುದಾಸ್‌ಪುರದ ಗುರ್ಮೀತ್ ಸಿಂಗ್ ಹಾಗೂ ಬಿಹಾರದ ಮೊಹಮ್ಮದ್ ಹನೀಫ್, ಫಹೀಮ್ ನಾಸಿರ್ ಮತ್ತು ಕಲೀಂ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಬಿಹಾರ, ಆಂಧ್ರಕ್ಕೆ ಬಂಪರ್‌ ಗಿಫ್ಟ್‌ – 6,798 ಕೋಟಿ ಮೊತ್ತದ 2 ರೈಲ್ವೇ ಯೋಜನೆಗಳಿಗೆ ಕೇಂದ್ರ ಕ್ಯಾಬಿನೆಟ್ ಅಸ್ತು

  • ಸೈನ್ಯಕ್ಕೆ ಪ್ರಬಲ ಅಸ್ತ್ರ – ಅಮೆರಿಕದ MQ-9B ಪ್ರಿಡೆಟರ್ ಡ್ರೋನ್ ಒಪ್ಪಂದಕ್ಕೆ ಸಹಿ ಹಾಕಿದ ಭಾರತ

    ಸೈನ್ಯಕ್ಕೆ ಪ್ರಬಲ ಅಸ್ತ್ರ – ಅಮೆರಿಕದ MQ-9B ಪ್ರಿಡೆಟರ್ ಡ್ರೋನ್ ಒಪ್ಪಂದಕ್ಕೆ ಸಹಿ ಹಾಕಿದ ಭಾರತ

    ನವದೆಹಲಿ: ಭಾರತ (India) ಸರ್ಕಾರ, ಅಮೆರಿಕದ MQ-9B ಪ್ರಿಡೆಟರ್ ಡ್ರೋನ್‌ಗಳನ್ನು (MQ-9B Predator Drones) ಖರೀದಿಸಲು 3,200 ಕೋಟಿ ರೂ.ಗಳ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ.

    ಈ ದ್ರೋನ್‌ಗಳನ್ನು General Atomics Aeronautical Systems ಸಂಸ್ಥೆ ತಯಾರಿಸುತ್ತಿದೆ. ಪ್ರಸ್ತುತ ಭಾರತ ಖರೀದಿ ಮಾಡುತ್ತಿರುವ ಒಟ್ಟು 31 ಡ್ರೋನ್ ಗಳ ಪೈಕಿ 15 ಡ್ರೋನ್ ಗಳನ್ನು ಭಾರತೀಯ ನೌಕಾಪಡೆಗೆ ನೀಡಲಾಗುತ್ತದೆ. ಉಳಿದ 16 ಡ್ರೋನ್‌ಗಳ ಪೈಕಿ ಭಾರತೀಯ ಸೇನೆಗೆ (Indian Army) ಮತ್ತು ವಾಯುಪಡೆಗೆ ತಲಾ 8 ಡ್ರೋನ್‌ಗಳನ್ನು ನೀಡಲಾಗುತ್ತದೆ.

    MQ-9B Predator Droneಗಳು ಅತ್ಯಂತ ವಿಧ್ವಂಸಕಾರಿ ಡ್ರೋನ್ ಗಳಾಗಿದ್ದು, ಈ ಡ್ರೋನ್ ಗಳನ್ನು ಶತ್ರುಕಣ್ಣಿಗೆ ಕಾಣದ ಹಾಗೆ ಅತ್ಯಂತ ಎತ್ತರದಲ್ಲಿ ಹಾರಾಡುವ ಸಾಮರ್ಥ್ಯ ಹೊಂದಿವೆ. ಈ ಡ್ರೋನ್ 40,000 ಅಡಿ ಎತ್ತರದಲ್ಲಿ ಒಮ್ಮೆಗೆ 40 ಗಂಟೆಗಳ ಕಾಲ ಹಾರಾಟ ನಡೆಸಬಲ್ಲದು. ಇದು ಸುಮಾರು 2,155 ಕೆಜಿಯಷ್ಟು ಬಾಹ್ಯ ಪೇಲೋಡ್ ಹೊತ್ತೊಯ್ಯುವ ಸಾಮರ್ಥ್ಯವನ್ನು ಹೊಂದಿದೆ.

    MQ-9B ಸ್ಟ್ರೈಕ್ ಕ್ಷಿಪಣಿಗಳೊಂದಿಗೆ ಶಸ್ತ್ರಸಜ್ಜಿತವಾಗಿದೆ. ಇದು ಹೆಚ್ಚಿನ ನಿಖರತೆಯೊಂದಿಗೆ ಗುರಿಗಳನ್ನು ಹೊಡೆಯಲು ಸಹಕಾರಿಯಾಗಿದೆ. ಇದು ಸ್ವಯಂಚಾಲಿತ ಟೇಕ್-ಆಫ್‌ ಮತ್ತು ಲ್ಯಾಂಡಿಂಗ್‌ ಸಾಮರ್ಥ್ಯವನ್ನು ಹೊಂದಿವೆ. ನಾಗರಿಕ ವಾಯುಪ್ರದೇಶಕ್ಕೆ ಸುರಕ್ಷಿತವಾಗಿ ಈ ಡ್ರೋನ್‌ಗಳನ್ನು ನಿಯೋಜಿಸಬಹುದಾಗಿದೆ. ಭೂಮಿ ಮತ್ತು ಕಡಲ ಕಣ್ಗಾವಲು, ಜಲಾಂತರ್ಗಾಮಿ, ಯುದ್ಧ ಮತ್ತು ವಿಶೇಷ ಸೇನಾ ಕಾರ್ಯಾಚರಣೆಗಳಿಗೆ ಈ ಡ್ರೋನ್‌ಗಳು ಸೂಕ್ತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಗಡಿ ನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರ ಎನ್‌ಕೌಂಟರ್

    ಗಡಿ ನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರ ಎನ್‌ಕೌಂಟರ್

    ಶ್ರೀನಗರ: ಅಕ್ರಮವಾಗಿ ಭಾರತದ ಗಡಿ ನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು (Terrorists) ಭದ್ರತಾ ಪಡೆಗಳು ಎನ್‌ಕೌಂಟರ್ ಮಾಡಿವೆ.

    ಕಾಶ್ಮೀರದ (Jammu Kashmir) ಕುಪ್ವಾರ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಉಗ್ರರನ್ನು ಹಿಮ್ಮೆಟ್ಟಿಸುವ ವೇಳೆ ಗುಂಡಿನ ಕಾಳಗ ಏರ್ಪಟ್ಟಿದ್ದು ಈ ವೇಳೆ ಉಗ್ರರನ್ನು ಹತ್ಯೆ ಮಾಡಿದೆ ಎಂದು ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಹೇಳಿದೆ. ಇದನ್ನೂ ಓದಿ: ದೆಹಲಿಗೆ ಡ್ರಗ್ ರಾಕೆಟ್‌ ಹಿಂದೆ ದುಬೈ, ಲಂಡನ್ ನಂಟು – ದುಬೈನಲ್ಲಿರುವ ಭಾರತೀಯನಿಂದಲೇ ಡ್ರಗ್ ಮಾಫಿಯಾ

    ಕುಪ್ವಾರದ ಗುಗಲ್‌ಧಾರ್‌ನಲ್ಲಿ ಸೈನಿಕರು ಅನುಮಾನಾಸ್ಪದ ಚಟುವಟಿಕೆ ಪತ್ತೆಯಾದ ಬಳಿಕ ಈಗ ಗುಂಡಿನ ಕಾಳಗ ನಡೆದಿದೆ ಎಂದು ಭದ್ರತಾ ಪಡೆಗಳು ಈ ಹಿಂದೆ ತಿಳಿಸಿದ್ದವು. ಅಕ್ಟೋಬರ್ 4 ರಂದು, ಒಳನುಸುಳುವಿಕೆ ಯತ್ನದ ಬಗ್ಗೆ ಗುಪ್ತಚರ ಮಾಹಿತಿ ನೀಡಿತ್ತು‌. ಮಾಹಿತಿ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜೆಕೆ ಪೋಲಿಸ್ ಜಂಟಿ ಕಾರ್ಯಾಚರಣೆಯನ್ನು ಕುಪ್ವಾರದ ಗುಗಲ್ಧರ್‌ನಲ್ಲಿ ಆರಂಭಿಸಿತ್ತು.

    ಶೋಧ ಕಾರ್ಯದಲ್ಲಿ ಪಡೆಗಳು ಅನುಮಾನಾಸ್ಪದ ಚಟುವಟಿಕೆಯನ್ನು ಗುರುತಿಸಿದರು. ಈ ವೇಳೆ ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ ಆರಂಭವಾಯಿತು. ಭದ್ರತಾ ಪಡೆಗಳು ಈಗಾಗಲೇ ಇಬ್ಬರನ್ನು ಸೆದೆಬಡಿದಿದ್ದು, ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಚಿನಾರ್ ಕಾರ್ಪ್ಸ್ ಹೇಳಿದೆ. ಇದನ್ನೂ ಓದಿ: ಮುಂದಿನ ವಾರ ಬೆಂಗಳೂರಿಗೆ ಬರಲಿದ್ದಾರೆ ಭಾರತ ವಿರೋಧಿ ಮಾಲ್ಡೀವ್ಸ್‌ ಅಧ್ಯಕ್ಷ

  • ಜಮ್ಮು-ಕಾಶ್ಮೀರ: ಕಥುವಾ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನ ಹತ್ಯೆ – ಉಗ್ರರಿಗಾಗಿ ಮುಂದುವರಿದ ಶೋಧ

    ಜಮ್ಮು-ಕಾಶ್ಮೀರ: ಕಥುವಾ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನ ಹತ್ಯೆ – ಉಗ್ರರಿಗಾಗಿ ಮುಂದುವರಿದ ಶೋಧ

    ಶ್ರೀನಗರ: ಕಥುವಾದ ಮಂಡ್ಲಿಯಲ್ಲಿ (Kathua-Mandli) ಸೇನಾ ಕಾರ್ಯಾಚರಣೆ ಮುಂದುವರಿದಿದೆ. 2ನೇ ದಿನದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಉಗ್ರರನೊಬ್ಬನ್ನ ಗುಂಡಿಕ್ಕಿ ಕೊಂಡಿದೆ. ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರಿದಿದೆ.

    ಸೆ.28ರಂದು ಕಥುವಾದ ಮಂಡ್ಲಿಯಲ್ಲಿ ಭಯೋತ್ಪಾದಕರು (Terrorist) ಇರುವಿಕೆಯ ಮಾಹಿತಿ ದೊರೆತ ಆಧಾರದ ಮೇಲೆ ಭದ್ರತಾ ಪಡೆಗಳ ಶೋಧಕಾರ್ಯ ಪ್ರಾರಂಭವಾಯಿತು. ಕಥುವಾದಲ್ಲಿ ನಡೆಯುತ್ತಿರುವ ಶೋಧ ಕಾರ್ಯದಲ್ಲಿ ಭಾನುವಾರ ಭದ್ರತಾ ಪಡೆಯು ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದ್ದಾರೆ.ಇದನ್ನೂ ಓದಿ: ಡೆಲಿವರಿ ಬಳಿಕ ಮಗನ ಜೊತೆಗಿನ ಫೋಟೋ ಹಂಚಿಕೊಂಡ ಪ್ರಣೀತಾ ಸುಭಾಷ್

    ಈ ಕುರಿತು ಅಧಿಕಾರಿಗಳು ಮಾತನಾಡಿ, ಭಾನುವಾರ ಮಧ್ಯಾಹ್ನ ಬಿಲ್ಲವರ ತಹಸಿಲ್‌ನ ಕಾಗ್-ಮಂಡ್ಲಿಯಲ್ಲಿ ನಡೆದ ಎನ್‌ಕೌಂಟರ್‌ನ ಸ್ಥಳದಿಂದ ಭಯೋತ್ಪಾದಕನ ಮೃದೇಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಮಾತನಾಡಿ, ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಮೂರ್ನಾಲ್ಕು ವಿದೇಶಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶನಿವಾರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಎನ್‌ಕಂಟರ್ ಹಾಗೂ ಶೋಧಕಾರ್ಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮೃತಪಟ್ಟಿದ್ದಾರೆ. ಜೊತೆಗೆ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

    ಈ ಪ್ರದೇಶಕ್ಕೆ ಈಗಾಗಲೇ ಬಿಗಿ ಭದ್ರತೆಯನ್ನು ನೀಡಲಾಗಿದ್ದು, ಇಲ್ಲಿ ಅಡಗಿಕೊಂಡಿರುವ ಮೂರ್ನಾಲ್ಕು ವಿದೇಶಿ ಭಯೋತ್ಪಾದಕರನ್ನು ಸೆರೆಹಿಡಿಯಲು ಈ ಕಾರ್ಯಾಚರಣೆ ನಡೆಯುತ್ತಿದೆ ಎಂದರು.ಇದನ್ನೂ ಓದಿ: ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು: ಪ್ರೊ.ಕೆ.ಎಸ್.ಭಗವಾನ್

    ಅ.1ರಂದು ನಡೆಯಲಿರುವ ಮೂರನೇ ಹಂತದ ಮತದಾನಕ್ಕೆ ಮೊದಲು ಭಯೋತ್ಪಾದಕರನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಭಯೋತ್ಪಾದಕ ಸಂಬಂಧಿತ ಘಟನೆಗಳು ಮತ್ತು ಹಿಂಸಾಚಾರ ಮುಕ್ತವಾಗಿ ಮೂರನೇ ಹಂತದ ಮತದಾನ ನಡೆಯಬೇಕು ಎಂದು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.

    ಕಥುವಾ ಗುರಿಯಾಗಿದ್ದೇಕೆ?
    1990ರ ದಶಕದಲ್ಲಿ ಕಥುವಾ (Kathua) ಭಯೋತ್ಪಾದಕರ ದೊಡ್ಡ ನೆಲೆಯಾಗಿ ಗುರುತಿಸಿಕೊಂಡಿತ್ತು. ಇಡೀ ಜಮ್ಮು ಮತ್ತು ಕಾಶ್ಮೀರದಾದ್ಯಂತ (Jammu and Kashmir) ದಾಳಿ ನಡೆಸಲು ಇಲ್ಲಿಯೇ ಉಗ್ರರು ಪ್ಲ್ಯಾನ್‌ ರೂಪಿಸುತ್ತಿದ್ದರು. ಸೇನೆ ವಿರುದ್ಧ ಯುದ್ಧಗಳ ತಯಾರಿಯೂ ಇಲ್ಲಿಯೇ ನಡೆಸುತ್ತಿದ್ದರು. ಕಥುವಾ ಉಧಂಪುರ, ಸಾಂಬಾ ಮತ್ತು ದೋಡಾ ಜಿಲ್ಲೆಗಳ ಪಕ್ಕದಲ್ಲಿದ್ದ ಕಾರಣ ಭದ್ರತಾ ಪಡೆಗಳು ಉಗ್ರರ ಹೆಡೆಮುರಿ ಕಟ್ಟಲು ಇಲ್ಲಿಯೇ ಬೀಡುಬಿಟ್ಟಿರುತ್ತಿದ್ದವು ಎಂದು ಅಲ್ಲಿನ ಪ್ರಾಥಮಿಕ ಮೂಲಗಳು ತಿಳಿಸಿವೆ.

    ಈಗ ಮತ್ತೆ ಕಥುವಾ ಉಗ್ರರ ನೆಲೆಯಾಗುತ್ತಿದೆಯೇ ಎಂಬ ಸಂಶಯ ಹುಟ್ಟಿಕೊಂಡಿದೆ. ಏಕೆಂದರೆ ಇಲ್ಲಿನ ಭೌಗೋಳಿಕತೆ ವಿಶೇಷವಾಗಿದೆ. ಒಂದು ಬದಿಯಲ್ಲಿ ಪಾಕಿಸ್ತಾನ ಗಡಿ ಇದ್ದರೆ, ಮತ್ತೊಂದು ಬದಿಯಲ್ಲಿ ಹಿಮಾಚಲ ಪ್ರದೇಶ ಇದೆ. ಮುಖ್ಯವಾಗಿ ಅರಣ್ಯ ಪ್ರದೇಶ ದಟ್ಟವಾಗಿರುವುದರಿಂದ ಉಗ್ರರು ತಪ್ಪಿಸಿಕೊಳ್ಳಲು ಅನುಕೂಲಕರ ವಾತಾವರಣ ಇದೆ ಎನ್ನಲಾಗಿದೆ. ಇದೇ ಕಾರಣಕ್ಕೆ ಉಗ್ರರು ಈ ಭಾಗದ ನೆಲೆಯನ್ನು ಗುರಿಯಾಗಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.