Tag: indian army

  • ಕರ್ನಾಟಕಕ್ಕೆ ಯೋಧರನ್ನು ಹೊತ್ತುಕೊಂಡು ಬರುತ್ತಿದ್ದ ರೈಲು ಸ್ಫೋಟಕ್ಕೆ ಸಂಚು, ಸಿಬ್ಬಂದಿ ವಶ

    ಕರ್ನಾಟಕಕ್ಕೆ ಯೋಧರನ್ನು ಹೊತ್ತುಕೊಂಡು ಬರುತ್ತಿದ್ದ ರೈಲು ಸ್ಫೋಟಕ್ಕೆ ಸಂಚು, ಸಿಬ್ಬಂದಿ ವಶ

    ಭೋಪಾಲ್: ಜಮ್ಮು ಮತ್ತು ಕಾಶ್ಮೀರದಿಂದ (Jammu And Kashmir) ಕರ್ನಾಟಕಕ್ಕೆ (Karnataka) ಯೋಧರನ್ನು ಕರೆದೊಯ್ಯುತ್ತಿದ್ದ ರೈಲನ್ನು ಸ್ಫೋಟಿಸಲು ಯತ್ನಿಸಲಾಗಿತ್ತು. ಇದೀಗ ಡಿಟೋನೇಟರ್‌ಗಳು ಕದ್ದಿದ್ದಕ್ಕಾಗಿ ಓರ್ವ ರೈಲ್ವೆ ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ.

    ರೈಲ್ವೆ ಸಿಬ್ಬಂದಿ ಶಬೀರ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

    ಮಧ್ಯಪ್ರದೇಶದ (Madhyapradesh) ಬುರ್ಹಾನ್‌ಪುರ (Burhanpur) ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿತ್ತು. ಡಿಟೋನೇಟರ್‌ಗಳು ಕದ್ದಿದ್ದಕ್ಕಾಗಿ ಓರ್ವ ರೈಲ್ವೆ ಸಿಬ್ಬಂದಿಯನ್ನು ರೈಲ್ವೆ ರಕ್ಷಣಾ ಪಡೆ (Railway Protection Force) ವಶಕ್ಕೆ ಪಡೆದುಕೊಂಡಿದ್ದಾರೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ರಾತ್ರಿ ಭಾರೀ ಮಳೆ

    ಮಧ್ಯಪ್ರದೇಶದ ರೈಲ್ವೆ ಹಳಿಯಲ್ಲಿ ಕನಿಷ್ಠ 10 ಡಿಟೋನೇಟರ್‌ಗಳು ಹಾಗೂ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದ್ದವು. ವಶಕ್ಕೆ ಪಡೆದ ಶಬೀರ್ ವಿರುದ್ಧ ರೈಲಿನ ಡಿಟೋನೇಟರ್‌ಗಳು ಹಾಗೂ ಗ್ಯಾಸ್ ಸಿಲಿಂಡರ್ ಕದ್ದಿದ್ದಕ್ಕಾಗಿ ಕೇಸ್ ದಾಖಲಿಸಲಾಗಿದೆ.

    ಏನಿದು ಘಟನೆ?
    ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿತ್ತು. ಸೇನೆಯ ವಿಶೇಷ ರೈಲು ಜಮ್ಮು-ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು ನಿಲ್ದಾಣದ ಬಳಿ ಸ್ಫೋಟಕ್ಕೆ ಯತ್ನ ನಡೆದಿತ್ತು.

    ಮಧ್ಯಪ್ರದೇಶದ ರೈಲ್ವೆ ಹಳಿಯಲ್ಲಿ ಕನಿಷ್ಠ 10 ಡಿಟೋನೇಟರ್‌ಗಳು ಹಾಗೂ ಗ್ಯಾಸ್ ಸಿಲಿಂಡರ್ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದರು.

    ರೈಲು ಡಿಟೋನೇಟರ್‌ಗಳ ಮೇಲೆ ಹಾದು ಹೋಗುತ್ತಿದ್ದಂತೆ ಸ್ಫೋಟದಿಂದ ಲೋಕೋ ಪೈಲಟ್ ರೈಲನ್ನು ತಕ್ಷಣವೇ ನಿಲ್ಲಿಸಿದ್ದರು. ನಂತರ ಠಾಣಾಧಿಕಾರಿಗೆ ಮಾಹಿತಿ ನೀಡಿದರು. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ. ಭಯೋತ್ಪಾದನಾ ನಿಗ್ರಹ ದಳ (ATS), ರಾಷ್ಟ್ರೀಯ ತನಿಖಾ ಸಂಸ್ಥೆ (NIA), ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಬದ್ಲಾಪುರ ಶಾಲೆಯಲ್ಲಿ ದೌರ್ಜನ್ಯ – ಕಾಮುಕನನ್ನು ಗುಂಡಿಕ್ಕಿ ಹತ್ಯೆಗೈದ ಪೊಲೀಸರು

  • ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ವಿಶೇಷ ರೈಲನ್ನು ಸ್ಫೋಟಿಸಲು ಯತ್ನ

    ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ವಿಶೇಷ ರೈಲನ್ನು ಸ್ಫೋಟಿಸಲು ಯತ್ನ

    ಭೋಪಾಲ್: ಮಧ್ಯಪ್ರದೇಶದ (Madhya Pradesh) ಬುರ್ಹಾನ್‍ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿದೆ. ಸೇನೆಯ (Indian Army) ವಿಶೇಷ ರೈಲು ಜಮ್ಮು-ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು ನಿಲ್ದಾಣದ ಬಳಿ ಸ್ಫೋಟಕ್ಕೆ ಯತ್ನ ನಡೆದಿದೆ.

    ಮಧ್ಯಪ್ರದೇಶದ ರೈಲ್ವೆ ಹಳಿಯಲ್ಲಿ ಕನಿಷ್ಠ 10 ಡಿಟೋನೇಟರ್‌ಗಳು ಹಾಗೂ ಗ್ಯಾಸ್ ಸಿಲಿಂಡರ್ ಪತ್ತೆಯಾಗಿವೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

    ರೈಲು ಡಿಟೋನೇಟರ್‍ಗಳ ಮೇಲೆ ಹಾದು ಹೋಗುತ್ತಿದ್ದಂತೆ ಸ್ಫೋಟದಿಂದ ಲೋಕೋ ಪೈಲಟ್ ರೈಲನ್ನು ತಕ್ಷಣವೇ ನಿಲ್ಲಿಸಿದ್ದಾರೆ. ನಂತರ ಠಾಣಾಧಿಕಾರಿಗೆ ಮಾಹಿತಿ ನೀಡಿದರು. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ.

    ಭಯೋತ್ಪಾದನಾ ನಿಗ್ರಹ ದಳ (ATS), ರಾಷ್ಟ್ರೀಯ ತನಿಖಾ ಸಂಸ್ಥೆ (NIA), ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

    ಇನ್ನೂ, ಉತ್ತರ ಪ್ರದೇಶದ ಕಾನ್ಪುರದ ಪ್ರೇಂಪುರ್ ರೈಲು ನಿಲ್ದಾಣದ ಬಳಿ ಹಳಿಗಳ ಮೇಲೆ ಭಾನುವಾರ ಖಾಲಿ ಗ್ಯಾಸ್ ಸಿಲಿಂಡರ್‌ಗಳು ಪತ್ತೆಯಾಗಿವೆ. ಗೂಡ್ಸ್ ರೈಲು ಲೋಕೋ ಪೈಲಟ್ ರೈಲು ನಿಲ್ಲಿಸಲು ತುರ್ತು ಬ್ರೇಕ್ ಹಾಕಿ ನಿಲ್ಲಿಸಿದ್ದಾರೆ.

    ರೈಲು ಕಾನ್ಪುರದಿಂದ ಪ್ರಯಾಗ್‍ರಾಜ್‍ಗೆ ತೆರಳುತ್ತಿದ್ದಾಗ ಬೆಳಗ್ಗೆ 8:10ಕ್ಕೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಎರಡನೇ ಪ್ರಕರಣ ಇದಾಗಿದೆ. ಸೆಪ್ಟೆಂಬರ್ 8 ರಂದು, ಪ್ರಯಾಗರಾಜ್‍ನಿಂದ ಭಿವಾನಿ ಕಡೆಗೆ ಹೋಗುತ್ತಿದ್ದ ಕಾಳಿಂದಿ ಎಕ್ಸ್‍ಪ್ರೆಸ್‍ನ್ನು ಹಳಿಗಳ ಮೇಲೆ ಎಲ್‍ಪಿಜಿ ಸಿಲಿಂಡರ್ ಇರಿಸುವ ಮೂಲಕ ಹಳಿತಪ್ಪಿಸಲು ಪ್ರಯತ್ನಿಸಲಾಗಿತ್ತು. ಇದನ್ನೂ ಓದಿ: ಈ ಬಾರಿ ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕೆಂಬ ಆಸೆ: ಚಲುವರಾಯಸ್ವಾಮಿ

  • ಅಮರ್ ಪ್ರೀತ್ ಸಿಂಗ್ ವಾಯುಸೇನಾ ಮುಖ್ಯಸ್ಥರಾಗಿ ನೇಮಕ

    ಅಮರ್ ಪ್ರೀತ್ ಸಿಂಗ್ ವಾಯುಸೇನಾ ಮುಖ್ಯಸ್ಥರಾಗಿ ನೇಮಕ

    ನವದೆಹಲಿ: ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್‌ (Air Marshal Amar Preet Singh) ಅವರು ಸೆಪ್ಟೆಂಬರ್ 30 ರಂದು ವಾಯುಪಡೆಯ (India Air Force) ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

    5,000 ಗಂಟೆಗಳ ಯುದ್ಧ ವಿಮಾನ ಹಾರಾಟದ ಅನುಭವ ಹೊಂದಿರುವ ಅಮರ್ ಪ್ರೀತ್ ಸಿಂಗ್ ಪ್ರಸ್ತುತ ವಾಯುಪಡೆಯ ವೈಸ್ ಚೀಫ್ ಆಫ್ ದಿ ಏರ್ ಸ್ಟಾಫ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಏರ್ ಚೀಫ್ ಮಾರ್ಷಲ್ ವಿ.ಆರ್ ಚೌಧರಿ ನಿವೃತ್ತರಾದ ನಂತರ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ ಪ್ರಾಣಪ್ರತಿಷ್ಠಾಪನೆ ದಿನ ಬಂದಿತ್ತು 300 ಕೆಜಿ ತಿರುಪತಿ ಲಡ್ಡು

    ಇತ್ತೀಚೆಗೆ ಐಎಎಫ್ ಆಯೋಜಿಸಿದ್ದ ಬಹುರಾಷ್ಟ್ರೀಯ ಯುದ್ಧ ವಿಮಾನಗಳ ಕಸರತ್ತು `ತರಂಗ್ ಶಕ್ತಿ’ ಆಯೋಜಿಸುವಲ್ಲಿ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು.

    ಅಕ್ಟೋಬರ್ 27, 1964 ರಂದು ಜನಿಸಿದ ಏರ್ ಮಾರ್ಷಲ್ ಸಿಂಗ್ ಅವರು ಡಿಸೆಂಬರ್ 1984 ರಲ್ಲಿ ಭಾರತೀಯ ವಾಯುಪಡೆಯ ಫೈಟರ್ ಪೈಲಟ್ ಸ್ಟ್ರೀಮ್‍ಗೆ ನಿಯೋಜಿಸಲ್ಪಟ್ಟರು. ಸುಮಾರು 40 ವರ್ಷಗಳ ಕಾಲ ಅವರ ಸುದೀರ್ಘ ಮತ್ತು ವಿಶಿಷ್ಟ ಸೇವೆಯಲ್ಲಿ, ವಿವಿಧ ಕಮಾಂಡ್, ಮತ್ತು ವಿದೇಶಿ ನೇಮಕಾತಿಯಲ್ಲೂ ಸೇವೆ ಸಲ್ಲಿಸಿದ್ದಾರೆ.

    ಸಿಂಗ್ ಅವರು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ, ಡಿಫೆನ್ಸ್ ಸರ್ವಿಸಸ್ ಸ್ಟಾಫ್ ಕಾಲೇಜ್ ಮತ್ತು ನ್ಯಾಷನಲ್ ಡಿಫೆನ್ಸ್ ಕಾಲೇಜ್‍ನ ಹಳೆಯ ವಿದ್ಯಾರ್ಥಿಯಾಗಿದ್ದಾರೆ.

    ಪರೀಕ್ಷಾ ಪೈಲಟ್ ಆಗಿ, ಮಾಸ್ಕೋದಲ್ಲಿ ಮಿಗ್-29 ಅಪ್‍ಗ್ರೇಡ್ ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್ ತಂಡವನ್ನು ಮುನ್ನಡೆಸಿದ್ದರು. ಅಲ್ಲದೇ ರಾಷ್ಟ್ರೀಯ ವಿಮಾನ ಪರೀಕ್ಷಾ ಕೇಂದ್ರದಲ್ಲಿ ಯೋಜನಾ ನಿರ್ದೇಶಕರಾಗಿದ್ದರು (ವಿಮಾನ ಪರೀಕ್ಷೆ) ಮತ್ತು ಲಘು ಯುದ್ಧ ವಿಮಾನ ತೇಜಸ್‍ನ ಹಾರಾಟ ಪರೀಕ್ಷೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

    ಏರ್ ಮಾರ್ಷಲ್ ಪರಮ ವಿಶಿಷ್ಟ ಸೇವಾ ಪದಕ ಮತ್ತು ಅತಿ ವಿಶಿಷ್ಟ ಸೇವಾ ಪದಕವನ್ನು ಪಡೆದಿದ್ದಾರೆ. ಇದನ್ನೂ ಓದಿ: ದೆಹಲಿಯ ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಪ್ರಮಾಣವಚನ ಸ್ವೀಕಾರ

  • ರಷ್ಯಾ-ಉಕ್ರೇನ್‌ ಯುದ್ಧದಿಂದ ಕಲಿತ ಪಾಠ.. ಚೀನಾಗೆ ಟಕ್ಕರ್‌ ಕೊಡಲು ‘ಮೌಂಟೆನ್‌ ಟ್ಯಾಂಕ್’ ಅಭಿವೃದ್ಧಿ‌ – ಇಂಡಿಯನ್‌ ಆರ್ಮಿಗೆ ಆನೆ ಬಲ

    ರಷ್ಯಾ-ಉಕ್ರೇನ್‌ ಯುದ್ಧದಿಂದ ಕಲಿತ ಪಾಠ.. ಚೀನಾಗೆ ಟಕ್ಕರ್‌ ಕೊಡಲು ‘ಮೌಂಟೆನ್‌ ಟ್ಯಾಂಕ್’ ಅಭಿವೃದ್ಧಿ‌ – ಇಂಡಿಯನ್‌ ಆರ್ಮಿಗೆ ಆನೆ ಬಲ

    ಭಾರತಕ್ಕೆ (India) ಗಡಿ ಭಾಗಗಳಲ್ಲಿ ಸಾಂಪ್ರದಾಯಿಕ ಎದುರಾಳಿಗಳ ಕಾಟ ಹೆಚ್ಚಾಗಿದೆ. ಗಡಿಯಲ್ಲಿ ಭದ್ರತೆ ಹೆಚ್ಚಿಸಿಕೊಳ್ಳಲು ಸುಧಾರಿತ ಯುದ್ಧೋಪಕರಣಗಳನ್ನು ದೇಶ ಅಭಿವೃದ್ಧಿಪಡಿಸುತ್ತಿದೆ. ತನ್ನ ಸೇನಾ ಸಾಮರ್ಥ್ಯದ ಮೂಲಕ ಮಗ್ಗುಲು ಮುಳ್ಳಾಗಿರುವವರನ್ನು ಹಿಮ್ಮೆಟ್ಟಿಸಲು ಅವಿರತ ಶ್ರಮಿಸುತ್ತಿದೆ. ರಷ್ಯಾ-ಉಕ್ರೇನ್ (Russia-Ukraine War) ಯುದ್ಧದಿಂದ ಭಾರತ ಸಾಕಷ್ಟು ಪಾಠ ಕಲಿತಿದೆ. ನಮ್ಮ ನೆರೆ-ಹೊರೆಯವರೇ ಹೇಗೆ ನಮಗೆ ಅಪಾಯ ಎಂಬುದಕ್ಕೆ ಈ ಎರಡು ರಾಷ್ಟ್ರಗಳ ನಡುವಿನ ಯುದ್ಧವೇ ಸ್ಪಷ್ಟ ನಿದರ್ಶನ. ಇದರಿಂದ ಎಚ್ಚೆತ್ತುಕೊಂಡಿರುವ ಭಾರತ ಗಡಿ ಭಾಗಗಳಲ್ಲಿ ಹೈಅಲರ್ಟ್ ಆಗಿದೆ. ಪೂರ್ವ ಲಡಾಖ್‌ನಲ್ಲಿ ಚೀನಾ ಸೈನಿಕರ ಉಪಟಳವನ್ನು ನಿಯಂತ್ರಿಸಲು ಭಾರತ ‘ಮೌಂಟೆನ್ ಟ್ಯಾಂಕ್’ ಅಭಿವೃದ್ಧಿಪಡಿಸಿದೆ. ಈಗ ಸೇನೆಗೆ ಆನೆ ಬಲ ಬಂದಂತಾಗಿದೆ.

    ಏನಿದು ಮೌಂಟೆನ್ ಟ್ಯಾಂಕ್? ಇದರ ವಿಶೇಷತೆಗಳೇನು? ಇದು ಸ್ವದೇಶಿ ನಿರ್ಮಿತವೇ? ಶತ್ರುಗಳನ್ನು ಬಗ್ಗುಬಡಿಯಲು ಎಷ್ಟು ಸಮರ್ಥವಾಗಿದೆ? ಪೂರ್ವ ಲಡಾಖ್‌ನಲ್ಲಿ ನಿಯೋಜನೆ ಏಕೆ ಎಂಬಿತ್ಯಾದಿ ಪ್ರಶ್ನೆಗಳಿಗೆ ಇಲ್ಲಿದೆ ವಿವರ. ಇದನ್ನೂ ಓದಿ: ಸಿಖ್ಖರ ವಿರುದ್ಧ ಹೇಳಿಕೆಗೆ ತೀವ್ರ ಆಕ್ಷೇಪ – ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌

    ಭಾರತ-ಚೀನಾ ‘ಲಡಾಖ್’ ಬಿಕ್ಕಟ್ಟು ಏನು?
    ಯುದ್ಧ ಟ್ಯಾಂಕರ್ ಬಗ್ಗೆ ತಿಳಿಯುವ ಮುನ್ನ ನಾವು ಭಾರತ-ಚೀನಾ (India-China) ಗಡಿ ಬಿಕ್ಕಟ್ಟಿನ ಹಿನ್ನೆಲೆ ತಿಳಿಯಬೇಕಿದೆ. ಸ್ವಾತಂತ್ರ್ಯಾನಂತರ ಭಾರತದ ಸುತ್ತಲ ಗಡಿಯು ಬಗೆಹರಿಯದ ಸಮಸ್ಯೆಯಾಗಿದೆ. ಅದರಲ್ಲೂ ಲಡಾಖ್‌ನಲ್ಲಿ ಚೀನಾ ಆಗಾಗ್ಗೆ ಕ್ಯಾತೆ ತೆಗೆಯುತ್ತಿರುತ್ತದೆ. ಲಡಾಖ್ ಪೂರ್ಣ ಪ್ರಮಾಣದಲ್ಲಿ ಭಾರತಕ್ಕೆ ಸೇರಿಲ್ಲ. ಸ್ವಾತಂತ್ರ್ಯ ಬಂದ ನಂತರ ರೂಪಿಸಲಾದ ಗಡಿಗಳನ್ನು ಚೀನಾ ಒಪ್ಪಿಕೊಂಡಿಲ್ಲ. ಈಗಲೂ ಪೂರ್ವ ಲಡಾಖ್‌ನ 60,000 ಚದರ ಕಿ.ಮೀ.ಗಿಂತಲೂ ತನ್ನದೆಂದು ಡ್ರ್ಯಾಗನ್ ರಾಷ್ಟ್ರ ಹೇಳುತ್ತಿದೆ. 1962ರ ಯುದ್ಧದ ನಂತರ ಎರಡೂ ದೇಶಗಳ ಸೈನಿಕರು ಕದನ ವಿರಾಮ ರೇಖೆ ಘೋಷಿಸಿಕೊಂಡರು. ಅದೇ ‘ವಾಸ್ತವ ನಿಯಂತ್ರಣ ರೇಖೆ’. 2020ರಲ್ಲಿ ಈ ರೇಖೆಯನ್ನು ಬದಲಿಸಲು ಚೀನಾ ಮುಂದಾಯಿತು. ಪರಿಣಾಮವಾಗಿ ಗಲ್ವಾನ್, ಪ್ಯಾಂಗಾಂಗ್ ಸರೋವರದ ಬಳಿಕ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷವೂ ನಡೆಯಿತು. ಚೀನಾ ಈಗಲೂ ಹಂತಹಂತವಾಗಿ ಲಡಾಖ್ ಅನ್ನು ಮುತ್ತುತ್ತಿದೆ. ಹೀಗಾಗಿ ಗಡಿ ಭಾಗದಲ್ಲಿ ಭಾರತ ಸೇನಾ ಭದ್ರತೆ ಹೆಚ್ಚಿಸಲು ಕ್ರಮವಹಿಸಿದೆ.

    26 ಗಸ್ತು ಠಾಣೆಗಳನ್ನು ಕಳೆದುಕೊಂಡಿದೆ ಭಾರತ
    ಲಡಾಖ್‌ನಲ್ಲಿ ಇರುವ ವಾಸ್ತವ ಗಡಿ ರೇಖೆ (ಎಲ್‌ಎಸಿ) ಉದ್ದಕ್ಕೂ 65 ಗಸ್ತು ಠಾಣೆಗಳನ್ನು ಭಾರತ ಹೊಂದಿತ್ತು. ಅವುಗಳ ಪೈಕಿ ಈಗ 26 ಗಸ್ತು ಠಾಣೆಗಳನ್ನು ಭಾರತ ಕಳೆದುಕೊಂಡಿದೆ. ಈ ಭಾಗಗಳಲ್ಲಿ ಸೇನೆಯು ಗಸ್ತು ತಿರುಗದೇ ಇರುವುದು ಮತ್ತು ಜನರೂ ಅತ್ತ ಸುಳಿಯದಂತೆ ನಿರ್ಬಂಧ ಹೇರಿರುವ ಕಾರಣ, ಆ ಗಸ್ತು ಠಾಣೆಗಳಿಗೆ ಮತ್ತೆ ಹೋಗಲು ಚೀನಾ ಸೇನೆ ಬಿಡುತ್ತಿಲ್ಲ. ಇದರಿಂದ ಭಾರತ 26 ಗಸ್ತು ಠಾಣೆಗಳನ್ನು ಕಳೆದುಕೊಳ್ಳುವಂತಾಗಿದೆ. ಇದನ್ನೂ ಓದಿ: Manipur | ಸಚಿವರ ಆಪ್ತ ಸಹಾಯಕನೇ ಕಿಡ್ನ್ಯಾಪ್‌ – ದುಷ್ಕರ್ಮಿಗಳ ಗುಂಪಿಗೆ ತೀವ್ರ ಶೋಧ

    ಭಾರತೀಯ ಸೇನೆಗೆ ‘ಜೋರಾವರ್’ ಬಲ!
    ಗಡಿಗಳಲ್ಲಿ ಶತ್ರುಗಳನ್ನು ಎದುರಿಸಲು ಭಾರತ ‘ಮೌಂಟೆನ್ ಟ್ಯಾಂಕ್’ (Mountain Tank) ಅಭಿವೃದ್ಧಿಪಡಿಸಿದೆ. ಪರ್ವತಗಳಂತಹ ಕಡಿದಾದ ಭಾಗಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಲು ಲಾರ್ಸೆನ್ ಮತ್ತು ಟೂಬ್ರೊ ಸಹಯೋಗದಲ್ಲಿ ಡಿಆರ್‌ಡಿಒ ಇದನ್ನು ಅಭಿವೃದ್ಧಿಪಡಿಸಿದೆ. ಪರ್ವತ ಪ್ರದೇಶಗಳಂತಹ ಭಾಗಗಳಲ್ಲಿ ಯುದ್ಧಕ್ಕಾಗಿ ಸ್ಥಳೀಯವಾಗಿ ವಿನ್ಯಾಸಗೊಳಿಸಿದ ಭಾರತದ ಮೊದಲ ಟ್ಯಾಂಕರ್ ಇದು. ಇದರ ಹೆಸರು ‘ಜೊರಾವರ್’. ಲಡಾಖ್‌ನ ಪರ್ವತ ಪ್ರದೇಶ ಭಾಗಗಳಲ್ಲಿ ಚೀನಾದೊಂದಿಗೆ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಬಿಕ್ಕಟ್ಟನ್ನು ನಿರ್ವಹಿಸಲು ಇದನ್ನು ರೂಪಿಸಲಾಗಿದೆ. ಎತ್ತರದ ಪ್ರದೇಶಗಳಲ್ಲಿ ‘ಮೌಂಟೆನ್ ಟ್ಯಾಂಕ್’ ನಿಯೋಜನೆಗೆ ಸಿದ್ಧವಾಗಿದೆ.

    ‘ಜೊರಾವರ್’ ವಿಶೇಷತೆಗಳೇನು?
    * ತೂಕ: ಟ್ಯಾಂಕ್ 25 ಟನ್ ತೂಗುತ್ತದೆ. ಇದು ಹಗುರವಾದ ಮತ್ತು ಪರ್ವತ ಭೂಪ್ರದೇಶದಲ್ಲಿ ಬಳಸಲು ಸೂಕ್ತವಾಗಿದೆ.
    * ಚಲನಶೀಲತೆ: ಹೆಲಿಕಾಪ್ಟರ್‌ಗಳನ್ನು ಒಳಗೊಂಡಂತೆ ಇದನ್ನು ವಾಯುಯಾನದ ಮೂಲಕವೂ ಸಾಗಿಸಬಹುದು. ಇದು ತಲುಪಲು ಕಷ್ಟವಾದ ಪ್ರದೇಶಗಳಲ್ಲಿ ತ್ವರಿತವಾಗಿ ನಿಯೋಜಿಸಲು ಅನುವು ಮಾಡಿಕೊಡುತ್ತದೆ.
    * ವೇಗ: ನೆಲದಲ್ಲಿ ಗಂಟೆಗೆ ಸುಮಾರು 60 ಕಿ.ಮೀ. ವೇಗದಲ್ಲಿ ಚಲಿಸುವ ಸಾಮರ್ಥ್ಯವನ್ನು ಹೊಂದಿದೆ.
    * ಶಸ್ತ್ರಾಸ್ತ್ರ: ‘ಜೊರಾವರ್’ (Zorawar) 105 ಮಿಲಿಮೀಟರ್ ಗನ್, ಮೆಷಿನ್ ಗನ್ ಮತ್ತು ಟ್ಯಾಂಕ್ ವಿರೋಧಿ ಮಾರ್ಗಸೂಚಿ ಕ್ಷಿಪಣಿಗಳ ವ್ಯವಸ್ಥೆಯನ್ನು ಹೊಂದಿದೆ.

    ಅಭಿವೃದ್ಧಿಗೆ ಬೇಕಾಯ್ತು 3 ವರ್ಷ
    ಜೊರಾವರ್ ಅಭಿವೃದ್ಧಿಗೆ ಸುಮಾರು ಮೂರು ವರ್ಷಗಳು ಬೇಕಾಯಿತು. ಪಂಜಾಬಿ ಭಾಷೆಯಲ್ಲಿ ಜೊರಾವರ್ ಎಂದರೆ ‘ಧೈರ್ಯಶಾಲಿ’. ಜಮ್ಮುವಿನ ಡೋಗ್ರಾ ರಾಜವಂಶದ ರಾಜಾ ಗುಲಾಬ್ ಸಿಂಗ್ ಸಂಸ್ಥಾನದಲ್ಲಿ ಸೇವೆ ಸಲ್ಲಿಸಿದ ಮತ್ತು ಲಡಾಖ್‌ನ್ನು ವಶಪಡಿಸಿಕೊಳ್ಳುವ ಮೂಲಕ ಡೋಗ್ರಾ ಪ್ರದೇಶವನ್ನು ವಿಸ್ತರಿಸಲು ಸಹಾಯ ಮಾಡಿದ್ದ ಮಿಲಿಟರಿ ನಾಯಕ ಜನರಲ್ ಜೊರಾವರ್ ಸಿಂಗ್ ಕಹ್ಲುರಿಯಾ ಅವರ ಹೆಸರನ್ನೇ ‘ಮೌಂಟೆನ್ ಟ್ಯಾಂಕ್’ಗೆ ಇಡಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಟ್ಯಾಂಕ್ ಸಂಪೂರ್ಣವಾಗಿ ಭಾರತೀಯ ಸೇನೆಗೆ ಸೇರ್ಪಡೆಗೊಳ್ಳುವ ನಿರೀಕ್ಷೆಯಿದೆ. ಇದನ್ನೂ ಓದಿ: ಜಾರ್ಖಂಡ್‍ನಿಂದ ನೀರು ಜಾಸ್ತಿ ಬಿಟ್ಟಿದ್ದಕ್ಕೆ ಬಂಗಾಳದಲ್ಲಿ ಪ್ರವಾಹ: ಮಮತಾ ಆಕ್ರೋಶ

    ಜೊರಾವರ್ ಯುದ್ಧ ಟ್ಯಾಂಕ್‌ನ ಪ್ರಾಥಮಿಕ ಪ್ರಯೋಗಗಳು ಯಶಸ್ವಿಯಾಗಿವೆ. ರಕ್ಷಣಾ ತಂತ್ರಜ್ಞಾನಗಳಲ್ಲಿ ಸ್ವಾವಲಂಬನೆಯನ್ನು ಸಾಧಿಸುವಲ್ಲಿ ಭಾರತಕ್ಕೆ ಒಂದು ದೊಡ್ಡ ಹೆಜ್ಜೆಯಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದೊಂದು ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಟ್ಯಾಂಕ್ ಮರುಭೂಮಿಯ ಭೂಪ್ರದೇಶದಲ್ಲಿ ನಡೆಸಿದ ಪ್ರಯೋಗಗಳಲ್ಲಿ ಟ್ಯಾಂಕ್ ಅಸಾಧಾರಣ ಕಾರ್ಯಕ್ಷಮತೆ ಪ್ರದರ್ಶಿಸಿತು. ಪರ್ವತಮಯ ಮತ್ತು ಕಠಿಣ ಹವಾಮಾನ ಪರಿಸ್ಥಿತಿಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಲಿದೆ.

    ಪರ್ವತ ಪ್ರದೇಶಗಳಲ್ಲಿ 350 ಯುದ್ಧ ಟ್ಯಾಂಕ್ ನಿಯೋಜಿಸಲು ಪ್ಲ್ಯಾನ್
    ಭಾರತೀಯ ಸೇನೆಯು ಸುಮಾರು 350 ಜೊರಾವರ್ ಟ್ಯಾಂಕ್‌ಗಳನ್ನು ವಿಶೇಷವಾಗಿ ಪರ್ವತ ಪ್ರದೇಶಗಳಲ್ಲಿ ನಿಯೋಜಿಸಲು ಯೋಜಿಸಿದೆ. ಭಾರವಾದ ‘ಅರ್ಜುನ್ ಯುದ್ಧ ಟ್ಯಾಂಕ್’ಗಳಿಗೆ ಹೋಲಿಸಿದರೆ, ಜೊರಾವರ್ ಹೆಚ್ಚು ಹಗುರವಾಗಿರುತ್ತದೆ. ಗುಡ್ಡಗಾಡು ಪ್ರದೇಶಗಳಿಗೆ ಇದು ಹೆಚ್ಚು ಸೂಕ್ತವಾಗಿವೆ. ವಿಶೇಷವಾಗಿ ಲಡಾಖ್‌ನಂತಹ ಎತ್ತರದ ಪ್ರದೇಶಗಳಲ್ಲಿ ಸೇನೆಯು ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬಹುದು. ಅರ್ಜುನ್ ಯುದ್ಧ ಟ್ಯಾಂಕ್ 58.5 ಟನ್ ತೂಕವಿದೆ. ಚೀನಾದೊಂದಿಗಿನ ಸಂಘರ್ಷದ ಸಂದರ್ಭದಲ್ಲಿ ಗುಡ್ಡಗಾಡು ಮತ್ತು ಎತ್ತರದ ಪ್ರದೇಶಗಳಲ್ಲಿ ಇದನ್ನು ಸಮರ್ಥವಾಗಿ ಬಳಸುವುದು ಕಷ್ಟ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಹಗುರವಾದ ಟ್ಯಾಂಕ್‌ನ ಅಗತ್ಯತೆ ಇದೆ ಎನಿಸಿತು.

    ಕಾಲಕ್ಕೆ ತಕ್ಕಂತೆ ನವೀಕರಿಸುವ ವೈಶಿಷ್ಟ್ಯ
    ಜೊರಾವರ್ ಮಾಡ್ಯುಲರ್ ವಿನ್ಯಾಸವನ್ನು ಹೊಂದಿದೆ. ಅಂದರೆ ಕಾಲಾನಂತರದಲ್ಲಿ ಹೊಸ ತಂತ್ರಜ್ಞಾನ ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಅದನ್ನು ನವೀಕರಿಸಬಹುದು. ಯುದ್ಧದ ಅಗತ್ಯತೆಗಳು ಮತ್ತು ತಂತ್ರಜ್ಞಾನವು ವಿಕಸನಗೊಂಡಂತೆ ಟ್ಯಾಂಕ್ ಪ್ರಸ್ತುತವಾಗಿ ಉಳಿಯುತ್ತದೆ. ಎತ್ತರದ ಕೋನಗಳಲ್ಲಿ ಗುಂಡು ಹಾರಿಸುವ ಸಾಮರ್ಥ್ಯವನ್ನೂ ಹೊಂದಿದೆ. ಯುದ್ಧ ಟ್ಯಾಂಕ್ ಸೀಮಿತ ಫಿರಂಗಿ ಪಾತ್ರವನ್ನು ನಿರ್ವಹಿಸಬಲ್ಲದು. ಇದು ಭಾರತೀಯ ಸಶಸ್ತ್ರ ಪಡೆಗಳಿಗೆ ಅಮೂಲ್ಯವಾದ ಆಸ್ತಿಯಾಗಿದೆ. ಇದನ್ನೂ ಓದಿ: ದಿಢೀರ್ ಬಾಯ್ತೆರೆದ ರಸ್ತೆ – ಮುಳುಗಿತು ನೀರಿನ ಟ್ಯಾಂಕರ್

  • Jammu & Kashmir | 40 ಅಡಿ ಆಳದ ಕಂದಕಕ್ಕೆ ಉರುಳಿದ ಸೇನೆಯ ಬಸ್‌ – ಮೂವರು ಯೋಧರು ದುರ್ಮರಣ

    Jammu & Kashmir | 40 ಅಡಿ ಆಳದ ಕಂದಕಕ್ಕೆ ಉರುಳಿದ ಸೇನೆಯ ಬಸ್‌ – ಮೂವರು ಯೋಧರು ದುರ್ಮರಣ

    ಶ್ರೀನಗರ: ಕಾಶ್ಮೀರದ (Kashmir) ಬುದ್ಗಾಮ್ ಜಿಲ್ಲೆಯ ವಾಟರ್‌ಹೇಲ್ ಪ್ರದೇಶದಲ್ಲಿ ಬಿಎಸ್‌ಎಫ್ ಯೋಧರನ್ನು (BSF jawans) ಹೊತ್ತೊಯ್ಯುತ್ತಿದ್ದ ಬಸ್ 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಮೂವರು ಯೋಧರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಪಘಾತದಲ್ಲಿ (Accident) 28 ಯೋಧರು ಗಾಯಗೊಂಡಿದ್ದಾರೆ. ಅಲ್ಲದೇ ಓರ್ವ ಯೋಧನ ಸ್ಥಿತಿ ಗಂಭೀರವಾಗಿದೆ. ಅಪಘಾತ ನಡೆದ ಸ್ಥಳಕ್ಕೆ ರಕ್ಷಣಾ ತಂಡಗಳು ಆಗಮಿಸಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ನಡೆಯುತ್ತಿದೆ. ಸ್ಥಳೀಯರೂ ರಕ್ಷಣಾ ತಂಡಗಳ ಜೊತೆಗೆ ಸಹಾಯಕ್ಕೆ ಮುಂದಾಗಿದ್ದಾರೆ.

    ಬಸ್‌ನಲ್ಲಿ 36 ಬಿಎಸ್‌ಎಫ್ ಯೋಧರು ಪ್ರಯಾಣಿಸುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಜಮ್ಮು ಕಾಶ್ಮೀರದಲ್ಲಿ ಎನ್‍ಕೌಂಟರ್ – ಐವರು ಉಗ್ರರು ಬಲಿ

    ಜಮ್ಮು ಕಾಶ್ಮೀರದಲ್ಲಿ ಎನ್‍ಕೌಂಟರ್ – ಐವರು ಉಗ್ರರು ಬಲಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಾರಾಮುಲ್ಲಾ ಜಿಲ್ಲೆಯಲ್ಲಿ ಬೆಳಗ್ಗೆ ಭದ್ರತಾ ಪಡೆಗಳು (Indian Army) ನಡೆಸಿದ ಎನ್‍ಕೌಂಟರ್‌ನಲ್ಲಿ (Encounter) ಮೂವರು ಭಯೋತ್ಪಾದಕರು ಹತರಾಗಿದ್ದಾರೆ

    ಭಯೋತ್ಪಾದಕರ ಇರುವಿಕೆ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಶುಕ್ರವಾರ ತಡರಾತ್ರಿ ಆರಂಭಿಸಿದ್ದರು. ಬಳಿಕ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ತಾಪರ್ ಕ್ರೀರಿಯಲ್ಲಿ ಗುಂಡಿನ ಚಕಮಕಿ ಆರಂಭಗೊಂಡಿತು.

    ಪ್ರತ್ಯೇಕ ಎನ್‍ಕೌಂಟರ್‌ನಲ್ಲಿ ಸೇನೆಯ ರೈಸಿಂಗ್ ಸ್ಟಾರ್ ಕಾರ್ಪ್ಸ್‌ನ ಘಟಕದ ಪಡೆಗಳು ಶುಕ್ರವಾರ ಕಥುವಾದಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದವು, ಈ ಮೂಲಕ ಒಟ್ಟು ಐವರು ಉಗ್ರರು ಹತರಾಗಿದ್ದಾರೆ.

    ಕಾರ್ಯಾಚರಣೆ ಬಳಿಕ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೇನೆ ವಶಕ್ಕೆ ಪಡದಿದೆ.

    ಗುಂಡಿನ ಚಕಮಕಿಯಲ್ಲಿ ನಾಲ್ವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದರು. ಅವರಲ್ಲಿ ಇಬ್ಬರು ಜೆಸಿಒ ನೈಬ್ ಸುಬೇದಾರ್ ವಿಪನ್ ಕುಮಾರ್ ಮತ್ತು ಸಿಪಾಯಿ ಅರವಿಂದ್ ಸಿಂಗ್ ಹುತಾತ್ಮರಾಗಿದ್ದಾರೆ.

  • ಹಾಸನ| ಅನಾರೋಗ್ಯದಿಂದ ಸಿಆರ್‌ಪಿಎಫ್‌ ಯೋಧ ಸಾವು – ವೈದ್ಯರ ನಿರ್ಲಕ್ಷ್ಯಕ್ಕೆ ಬಲಿ ಎಂದ ಕುಟುಂಬ

    ಹಾಸನ| ಅನಾರೋಗ್ಯದಿಂದ ಸಿಆರ್‌ಪಿಎಫ್‌ ಯೋಧ ಸಾವು – ವೈದ್ಯರ ನಿರ್ಲಕ್ಷ್ಯಕ್ಕೆ ಬಲಿ ಎಂದ ಕುಟುಂಬ

    ಹಾಸನ: ಅನಾರೋಗ್ಯದಿಂದ ಸಿಆರ್‌ಪಿಎಫ್‌ ಯೋಧ (CRPF Soldier) ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಹೊಳೆನರಸೀಪುರ (Holenarasipur) ಪಟ್ಟಣದಲ್ಲಿ ನಡೆದಿದೆ.

    ರವಿಶಂಕರ್.ಎಂ.ಆರ್‌. (39) ಮೃತ ಯೋಧ. ವೈದ್ಯರ ನಿರ್ಲಕ್ಷ್ಯದಿಂದಲೇ ಯೋಧ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಜಮ್ಮುವಿನಲ್ಲಿ ಕರ್ತವ್ಯದಲ್ಲಿದ್ದ ಯೋಧ ರವಿಶಂಕರ್ ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿಯಿತ್ತು. ಅರಸೀಕೆರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದ ಯೋಧನ ವರದಿ ಸಂಗ್ರಹ ಒಂದು ವಾರದ ಹಿಂದೆ ಹೊಳೆನರಸೀಪುರಕ್ಕೆ ರವಿಶಂಕರ್ ಬಂದಿದ್ದರು. ಇದನ್ನೂ ಓದಿ: ಅಸಭ್ಯ ವರ್ತನೆ, ಟಿವಿಗಾಗಿ ಕಿರಿಕಿರಿ – ದರ್ಶನ್‌ಗೆ ಜೈಲರ್ ವಾರ್ನಿಂಗ್

    ಇಂದು ಕರ್ತವ್ಯಕ್ಕೆ ತೆರಳಬೇಕಿದ್ದ ರವಿಶಂಕರ್‌ ಅವರಿಗೆ ಶುಕ್ರವಾರ ಜ್ವರ, ಸುಸ್ತು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಹೊಳೆನರಸೀಪುರ ತಾಲ್ಲೂಕು ಆಸ್ಪತ್ರೆಗೆ (Hospital) ತೆರಳಿದ್ದು ವೈದ್ಯರು ಸರಿಯಾಗಿ ತಪಾಸಣೆ ಮಾಡದೇ ಕೇವಲ ಮಾತ್ರೆ ನೀಡಿ ಕಳುಹಿಸಿದ್ದರು.

    ಮನೆಗೆ ತೆರಳುತ್ತಿದ್ದಂತೆ ಯೋಧ ರವಿಶಂಕರ್.ಎಂ.ಆರ್. ಸಾವನ್ನಪ್ಪಿದ್ದಾರೆ. ಸರಿಯಾದ ಚಿಕಿತ್ಸೆ ನೀಡದೇ ವೈದ್ಯರು ನಿರ್ಲಕ್ಷ್ಯ ತೋರಿದ್ದು, ರವಿಶಂಕರ್ ಸಾವಿಗೆ ವೈದ್ಯನೇ ನೇರ ಕಾರಣ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ.

    ತಾಲ್ಲೂಕು ಆಸ್ಪತ್ರೆಯ ಶವಾಗಾರದಲ್ಲಿ ಮೃತ ಯೋಧನ ಶವವನ್ನು ಇರಿಸಲಾಗಿದೆ. ರವಿಶಂಕರ್ ಮೂಲತಃ ಸಾಲಿಗ್ರಾಮ ತಾಲ್ಲೂಕಿನ, ಮೂಡಲಬಿಡು ಗ್ರಾಮದವರಾಗಿದ್ದು ಪತ್ನಿ ನಂದಿನಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಇದನ್ನೂ ಓದಿ: ಜನಸಂಖ್ಯೆ ಇಳಿಕೆ, ಆರ್ಥಿಕ ಸಂಕಷ್ಟ – ಚೀನಾದಲ್ಲಿ ನಿವೃತ್ತಿ ವಯಸ್ಸು ಏರಿಕೆ

    ಆಸ್ಪತ್ರೆ ಬಳಿ ರವಿಶಂಕರ್ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • Madhya Pradesh | ಸೇನಾ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಸ್ನೇಹಿತೆಯ ಗ್ಯಾಂಗ್ ರೇಪ್

    ಭೋಪಾಲ್: ಇಬ್ಬರು ಟ್ರೈನಿ ಸೇನಾ ಅಧಿಕಾರಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಗನ್ ಹಿಡಿದು ಬೆದರಿಸಿ ಸ್ನೇಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ (Madhya Pradesh) ಇಂದೋರ್‌ನಲ್ಲಿ (Indore) ಮಂಗಳವಾರ ತಡರಾತ್ರಿ ನಡೆದಿದೆ.

    ಇಂದೋರ್ ಬಳಿಯ ಮೊವ್ ಆರ್ಮಿ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿರುವ ಇಬ್ಬರು ಅಧಿಕಾರಿಗಳು ಛೋಟಿ ಜಾಮ್‍ನ ಫೈರಿಂಗ್ ರೇಂಜ್ ಬಳಿಯ ಸ್ಥಳಕ್ಕೆ ಇಬ್ಬರು ಸ್ನೇಹಿತೆಯರ ಜೊತೆ ತೆರಳಿದ್ದರು. ಈ ವೇಳೆ ಎಂಟು ಜನ ದುಷ್ಕರ್ಮಿಗಳು ಪಿಸ್ತೂಲ್, ಚಾಕು ಮತ್ತು ಕೋಲುಗಳನ್ನು ಹಿಡಿದು ಅಧಿಕಾರಿಗಳನ್ನು ಸುತ್ತುವರೆದಿದ್ದಾರೆ. ಬಳಿಕ ದಾಳಿಕೋರರು ಒಬ್ಬ ಅಧಿಕಾರಿ ಮತ್ತು ಮಹಿಳೆಯನ್ನು ಒತ್ತೆಯಾಳಾಗಿ ಇಟ್ಟುಕೊಂಡು 10 ಲಕ್ಷ ರೂ. ಹಣ ತರಲು ಇನ್ನೊಬ್ಬ ಅಧಿಕಾರಿ ಮತ್ತು ಮತ್ತೋರ್ವ ಮಹಿಳೆಯನ್ನು ಕಳುಹಿಸಿದ್ದಾರೆ. ಇದನ್ನೂ ಓದಿ: ನಮ್ಮ ಮಕ್ಳನ್ನು ಬಿಟ್ಬಿಡಿ – ನಾಗಮಂಗಲ ಪೊಲೀಸ್ ಠಾಣೆಯ ಮುಂದೆ ಮಹಿಳೆಯರ ಹೈಡ್ರಾಮಾ

    ತರಬೇತಿ ಶಾಲೆಗೆ ಹಿಂತಿರುಗಿದ ಅಧಿಕಾರಿ ತನ್ನ ಕಮಾಂಡಿಂಗ್ ಅಧಿಕಾರಿಗೆ ಈ ವಿಚಾರ ತಿಳಿಸಿದ್ದಾರೆ. ಬಳಿಕ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ (Police) ಅಧಿಕಾರಿಗಳು ಮತ್ತು ಸೇನಾ ಸಿಬ್ಬಂದಿ ಸ್ಥಳಕ್ಕೆ ಧಾವಿಸುತ್ತಿದ್ದಂತೆ ವಾಹನಗಳನ್ನು ನೋಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

    ಹಲ್ಲೆಗೊಳಗಾದ ಅಧಿಕಾರಿ ಹಾಗೂ ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ದಾಳಿಕೋರರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಅದರಲ್ಲಿ ಒಬ್ಬ ಕ್ರಿಮಿನಲ್ ಹಿನ್ನೆಲೆ ಹೊಂದಿರುವುದು ಪತ್ತೆಯಾಗಿದೆ.

    ಪ್ರಕರಣ ಸಂಬಂಧ ಲೂಟಿ, ಡಕಾಯಿತಿ, ಅತ್ಯಾಚಾರ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ (ಬಿಎನ್‍ಎಸ್) ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ – ನಾಗಮಂಗಲ ಗಲಭೆಗೆ ಪ್ರಹ್ಲಾದ್ ಜೋಶಿ ಆಕ್ರೋಶ

  • ಜಮ್ಮು & ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ – ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದ ಉಗ್ರರು

    ಜಮ್ಮು & ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ – ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದ ಉಗ್ರರು

    ಶ್ರೀನಗರ: ಸೇನೆಯ ವಿಶೇಷ ಪಡೆಗಳು, ಜಮ್ಮು ಮತ್ತು ಕಾಶ್ಮೀರ (Jammu & Kashmir) ಪೊಲೀಸರು ಬುಧವಾರ ಕಥುವಾ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

    ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಇಬ್ಬರು ಉಗ್ರರ ಮೃತದೇಹಗಳು ಪತ್ತೆಯಾಗಿವೆ ಎಂದು ಸೇನಾ ಮೂಲಗಳು ತಿಳಿಸಿವೆ. ಉಗ್ರರು ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದರು. ಇದನ್ನೂ ಓದಿ: ರಾಹುಲ್‌ ಹೇಳಿಕೆ ಉಲ್ಲೇಖಿಸಿ ಪ್ರತ್ಯೇಕ ಖಲಿಸ್ತಾನ ರಾಷ್ಟ್ರ ಬೇಡಿಕೆ ಮುಂದಿಟ್ಟ ಉಗ್ರ ಪನ್ನುನ್

    ಜಮ್ಮು ಮತ್ತು ಕಾಶ್ಮೀರದಲ್ಲಿ ಸೆ.18 ರಿಂದ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಇಂದು ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧ ಗಾಯಗೊಂಡಿದ್ದಾರೆ.

    ಸೇನಾಪಡೆಗಳು ಕಟ್ಟೆಚ್ಚರದಲ್ಲಿವೆ ಎಂದು ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಕಾಯುವ ಬಿಎಸ್‌ಎಫ್‌ ತಿಳಿಸಿದೆ. ಈ ಗಡಿಯು ಸರಿಸುಮಾರು 3,323 ಕಿಮೀ ವ್ಯಾಪಿಸಿದೆ. ಉದ್ವಿಗ್ನತೆ ಮತ್ತು ಭದ್ರತಾ ಸವಾಲುಗಳನ್ನು ಹೊಂದಿರುವ ವಿವಿಧ ವಲಯಗಳನ್ನು ಈ ಗಡಿ ಭಾಗ ಹೊಂದಿದೆ. ಇದನ್ನೂ ಓದಿ: ತಮಿಳುನಾಡಿನ ಮೀನುಗಾರಿಕಾ ಬೋಟ್‍ಗೆ ಲಂಕಾ ನೌಕಾಪಡೆಯ ಹಡಗು ಡಿಕ್ಕಿ – ನಾಲ್ವರಿಗೆ ಗಾಯ

  • 1.44 ಲಕ್ಷ ಕೋಟಿ ಮೌಲ್ಯದ ಯುದ್ಧ ಸಾಮಾಗ್ರಿಗಳ ಖರೀದಿಗೆ ಕೇಂದ್ರದ ಒಪ್ಪಿಗೆ -ಸೇನೆಗೆ ನೂತನವಾಗಿ ಏನೆಲ್ಲ ಸೇರಲಿದೆ?

    1.44 ಲಕ್ಷ ಕೋಟಿ ಮೌಲ್ಯದ ಯುದ್ಧ ಸಾಮಾಗ್ರಿಗಳ ಖರೀದಿಗೆ ಕೇಂದ್ರದ ಒಪ್ಪಿಗೆ -ಸೇನೆಗೆ ನೂತನವಾಗಿ ಏನೆಲ್ಲ ಸೇರಲಿದೆ?

    ರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ದೇಶದ ಭದ್ರತಾ ವ್ಯವಸ್ಥೆಗೆ ವಿಶೇಷ ಒತ್ತನ್ನು ನೀಡಲಾಗುತ್ತಿದೆ. ಚೀನಾ ಹಾಗೂ ಪಾಕಿಸ್ತಾನದ ಉಪಟಳವನ್ನು ನಿಯಂತ್ರಿಸಲು, ಉಗ್ರರನ್ನು ಸಮರ್ಥವಾಗಿ ಎದುರಿಸಲು ಭಾರತ ಸದೃಢವಾಗಿದೆ. ಇದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. 

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ), ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಹೆಚ್ಚಿಸುವ ಉದ್ದೇಶದಿಂದ 1.45 ಲಕ್ಷ ಕೋಟಿ ರೂ. ಮೌಲ್ಯದ 10 ನಿರ್ಣಾಯಕ ಪ್ರಸ್ತಾವನೆಗಳನ್ನು ಅನುಮೋದಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

    1,44,716 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಡಿಎಸಿ ಒಪ್ಪಿಗೆ ನೀಡಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಒಟ್ಟು ವೆಚ್ಚದಲ್ಲಿ, 99%  ಭಾರತೀಯ ಕಂಪನಿಗಳಿಂದ ಮತ್ತು ಸ್ಥಳೀಯವಾಗಿ ವಿನ್ಯಾಸಗೊಳಿಸಿದ ಸಾಮಾಗ್ರಿಗಳನ್ನು ಖರೀದಿಗೆ ಸಮ್ಮತಿಸಲಾಗಿದೆ. ಇಷ್ಟೇ ಅಲ್ಲದೇ ನೌಕಾಪಡೆಯ ಸಾಮರ್ಥ್ಯವನ್ನು ಹೆಚ್ಚಿಸಲು 75,000 ಕೋಟಿ ರೂ. ವೆಚ್ಚದಲ್ಲಿ ಇನ್ನೂ ಏಳು ಪ್ರಾಜೆಕ್ಟ್-17 ಬಿ ಸ್ಟೆಲ್ತ್ ಫ್ರಿಗೇಟ್‌ಗಳ ನಿರ್ಮಾಣಕ್ಕೂ ಡಿಎಸಿ ಅನುಮತಿ ನೀಡಿದೆ. 

    ಈ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಾಮರ್ಥ್ಯ ಹೊಂದಿರುವ ಭಾರತದ ಐದು ಪ್ರಮುಖ ಕಂಪನಿಗಳನ್ನು ಗುರುತಿಸಲಾಗಿದೆ. ಅವುಗಳೆಂದರೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL), ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ (MDL), ಮತ್ತು ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ & ಇಂಜಿನಿಯರ್ಸ್ ಲಿಮಿಟೆಡ್ (GRSE) ಕಂಪನಿಗಳಿಂದ ಯುದ್ಧ ಸಾಮಾಗ್ರಿಗಳನ್ನು ಖರೀದಿಸಲು ತೀರ್ಮಾನಿಸಲಾಗಿದೆ.

    FRCV ಯುದ್ಧ ಟ್ಯಾಂಕರ್

    ಭಾರತೀಯ ಸೇನೆಯ ಟ್ಯಾಂಕ್ ಫ್ಲೀಟ್ ಆಧುನೀಕರಣಕ್ಕಾಗಿ, ಭವಿಷ್ಯದ ಸಿದ್ಧ ಯುದ್ಧ ವಾಹನಗಳ (ಎಫ್‌ಆರ್‌ಸಿವಿ) ಖರೀದಿಗೆ ಒಪ್ಪಿಗೆ ಸಿಕ್ಕಿದೆ. FRCV ಗಳು ಉತ್ತಮ ಚಲನಶೀಲತೆ, ಎಲ್ಲಾ ಭೂಪ್ರದೇಶ ಸಾಮರ್ಥ್ಯ, ಬಹು-ಪದರದ ರಕ್ಷಣೆಗಳು, ನಿಖರತೆ ಮತ್ತು ನೈಜ-ಸಮಯದಲ್ಲಿ ದಾಳಿ ನಡೆಸಲು, ಮುಂದಿನ ಪೀಳಿಗೆಯ ಯುದ್ಧ ಟ್ಯಾಂಕರ್‌ ಇದಾಗಿರಲಿದೆ. ಇದರ ಮುಖ್ಯ ಉದ್ದೇಶ ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಹಗಲು ಮತ್ತು ರಾತ್ರಿಯ ಸಮಯದಲ್ಲೂ ರಕ್ಷಣೆ ಒದಗಿಸಲಿದೆ. 

    ಈ ಟ್ಯಾಂಕರ್‌ನಲ್ಲಿ ಕಮಾಂಡರ್ ಕ್ಯಾಬಿನ್‌ನ್ನು ಒಂದೇ ಹೈ ಮೊಬಿಲಿಟಿ ವೆಹಿಕಲ್ ಮೇಲೆ ಜೋಡಿಸಲಾಗಿದ್ದು, ಈ ವ್ಯವಸ್ಥೆಯು ಎರಡು ಗನ್‌ಗಳನ್ನು ಏಕಕಾಲದಲ್ಲಿ ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಮೂಲಕ ಪಾರುಗಾಣಿಕಾ ಮತ್ತು ವಿಪತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸಲು ICG ಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

    ಭಾರತೀಯ ಸೇನೆಯು 1,700 ಕ್ಕೂ ಹೆಚ್ಚು ಫ್ಯೂಚರ್ ರೆಡಿ ಕಾಂಬ್ಯಾಟ್ ವೆಹಿಕಲ್‌ಗಳನ್ನು (ಎಫ್‌ಆರ್‌ಸಿವಿ) ಹಂತಹಂತವಾಗಿ ಖರೀದಿಸಲು ಸಜ್ಜಾಗಿದೆ.

    ಏರ್ ಡಿಫೆನ್ಸ್ ಫೈರ್ ಕಂಟ್ರೋಲ್ ರಾಡಾರ್‌

    ಇದು ವೈಮಾನಿಕ ಗುರಿಯನ್ನು ಪತ್ತೆಹಚ್ಚುತ್ತದೆ ಮತ್ತು ಟ್ರ್ಯಾಕ್ ಮಾಡುತ್ತದೆ. ಈ ಮೂಲಕ ಇದು ಶತೃಗಳ ದಾಳಿಗೆ ಸೂಕ್ತ ಪ್ರತ್ತ್ಯುತ್ತರ ನೀಡಲು ಸಹಕಾರಿಯಾಗಲಿದೆ. ಈ ಉಪಕರಣವನ್ನು ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ವಿನ್ಯಾಸಗೊಳಿಸಿದೆ ಮತ್ತು ಅಭಿವೃದ್ಧಿಪಡಿಸಿದೆ. 

    ಡಾರ್ನಿಯರ್-228 ವಿಮಾನ

    ಭಾರತೀಯ ಕೋಸ್ಟ್ ಗಾರ್ಡ್ (ICG) ಸಾಮರ್ಥ್ಯಗಳನ್ನು ಹೆಚ್ಚಿಸಲು ಡಾರ್ನಿಯರ್-228 ವಿಮಾನಗಳ ಖರೀದಿಗೆ ಸಮ್ಮತಿಸಲಾಗಿದೆ. ಕೆಟ್ಟ ಹವಾಮಾನ ಪರಿಸ್ಥಿತಿಗಳಲ್ಲಿ ಹೆಚ್ಚಿನ ಕಾರ್ಯಾಚರಣೆಯ ವೈಶಿಷ್ಟ್ಯಗಳನ್ನು ಹೊಂದಿರುವ ಸುಧಾರಿತ ತಂತ್ರಜ್ಞಾನ ಸಾಮರ್ಥ್ಯವನ್ನು ಹೊಂದಿದೆ. ಹುಡುಕಾಟ ಮತ್ತು ಪಾರುಗಾಣಿಕಾ ಮತ್ತು ವಿಪತ್ತು ಪರಿಹಾರ ಕಾರ್ಯಾಚರಣೆಗೆ ಇದು ಅನುಕೂಲವಾಗಲಿದೆ. 

    ಡಾರ್ನಿಯರ್ 228 ಸಾಮಾನ್ಯವಾಗಿ ಶಾರ್ಟ್ ಟೇಕ್‌ಆಫ್ ಮತ್ತು ಲ್ಯಾಂಡಿಂಗ್ ಸಾಮರ್ಥ್ಯದ ವಿಮಾನವಾಗಿದೆ. ಇದು ಒರಟಾದ ರನ್‌ ವೇನಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಅತ್ಯಾಧಿನಿಕ ಹಡಗುಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ.

    ಕಾರ್ಯಾಚರಣೆಗಳ ಸಮಯದಲ್ಲಿ ಸ್ಥಳದಲ್ಲೇ ದುರಸ್ತಿ ಮಾಡಲು ಅನುಕೂಲವಾಗುವಂತೆ ಯುದ್ ಧವಾಹನಗಳಿಗೆ ಟ್ರ್ಯಾಕ್ಡ್‌ ವ್ಯವಸ್ಥೆಗೆ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ. ಈ ಉಪಕರಣವನ್ನು ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದೆ ಮತ್ತು ಯಾಂತ್ರಿಕೃತ ಪದಾತಿಸೈನ್ಯದ ಬೆಟಾಲಿಯನ್ ಮತ್ತು ಆರ್ಮರ್ಡ್ ರೆಜಿಮೆಂಟ್ ಎರಡಕ್ಕೂ ಇದರ ಬಳಕೆಗೆ ಒಪ್ಪಿಗೆ ಸಿಕ್ಕಿದೆ.