Tag: indian army

  • ರಾಜಸ್ಥಾನದಲ್ಲಿ ಅಮೆರಿಕ, ಭಾರತ ಸೇನೆಯಿಂದ ಜಂಟಿ ಸಮರಾಭ್ಯಾಸ

    ರಾಜಸ್ಥಾನದಲ್ಲಿ ಅಮೆರಿಕ, ಭಾರತ ಸೇನೆಯಿಂದ ಜಂಟಿ ಸಮರಾಭ್ಯಾಸ

    – ಉಭಯ ದೇಶಗಳ 1,200 ಸೈನಿಕರು ಭಾಗಿ

    ಜೈಪುರ್: ಭಾರತ ಮತ್ತು ಅಮೆರಿಕ ಸೇನೆಯ ಜಂಟಿ ಮಿಲಿಟರಿ ಸಮರಾಭ್ಯಾಸ 2024 ರ 20ನೇ ಆವೃತ್ತಿ ರಾಜಸ್ಥಾನದ ಬಿಕಾನೇರ್‌ನ ಮಹಾಜನ್ ಫೀಲ್ಡ್‌ನಲ್ಲಿ ಪ್ರಾರಂಭವಾಗಿದೆ. ಈ ಸಮರಾಭ್ಯಾಸ ಸೆಪ್ಟೆಂಬರ್ 22 ರವರೆಗೆ ಮುಂದುವರಿಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭಾರತ ಮತ್ತು ಅಮೆರಿಕದ ಒಟ್ಟು 1,200 ಸೈನಿಕರು ಈ ಅಭ್ಯಾಸದಲ್ಲಿ ಭಾಗವಹಿಸುತ್ತಿದ್ದಾರೆ. ಸೋಮವಾರ ಬೆಳಗ್ಗೆ 10:30ರ ಸುಮಾರಿಗೆ ಪಥಸಂಚಲನದೊಂದಿಗೆ ಸೇನಾ ಸಮರಾಭ್ಯಾಸ ಆರಂಭಗೊಂಡಿತು. ಈ ಆವೃತ್ತಿಯು ಸೈನ್ಯದ ಶಕ್ತಿಯನ್ನು ಸೂಚಿಸುತ್ತದೆ.

    600 ಸಿಬ್ಬಂದಿಯನ್ನು ಒಳಗೊಂಡಿರುವ ಭಾರತೀಯ ಸೇನಾ ತುಕಡಿಯನ್ನು ರಜಪೂತ್ ರೆಜಿಮೆಂಟ್‍ನ ಬೆಟಾಲಿಯನ್ ಮತ್ತು ಇತರ ಶಸ್ತ್ರಾಸ್ತ್ರ ಪಡೆಗಳ ಸಿಬ್ಬಂದಿ ಭಾಗವಹಿಸಲಿದ್ದಾರೆ.

    ವಿಶ್ವಸಂಸ್ಥೆಯ ಆದೇಶದ ಅಡಿಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಎರಡೂ ಕಡೆಯ ಜಂಟಿ ಮಿಲಿಟರಿ ಸಾಮಥ್ರ್ಯವನ್ನು ಹೆಚ್ಚಿಸುವುದು ಈ ಅಭ್ಯಾಸದ ಗುರಿಯಾಗಿದೆ. ಎರಡೂ ಕಡೆಯವರು ಜಂಟಿ ಕಾರ್ಯಾಚರಣೆಗಳನ್ನು ನಡೆಸಲು ತಂತ್ರಗಳನ್ನು ಪರಸ್ಪರ ಹಂಚಿಕೊಳ್ಳಲಿದ್ದಾರೆ. ಇದರಿಂದಾಗಿ ಎರಡು ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ವೃದ್ಧಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • 25 ವರ್ಷಗಳ ಬಳಿಕ ಮೊದಲ ಬಾರಿಗೆ ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರದ ಬಗ್ಗೆ ಪಾಕ್‌ ತಪ್ಪೊಪ್ಪಿಗೆ!

    25 ವರ್ಷಗಳ ಬಳಿಕ ಮೊದಲ ಬಾರಿಗೆ ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರದ ಬಗ್ಗೆ ಪಾಕ್‌ ತಪ್ಪೊಪ್ಪಿಗೆ!

    – ಪಾಕ್‌ ಸೇನಾ ಮುಖ್ಯಸ್ಥ ಹೇಳಿದ್ದೇನು?
    – ಕಾಂಗ್ರೆಸ್‌ ವಿರುದ್ಧ ಬಿಜೆಪಿ ಟೀಕೆ

    ಇಸ್ಲಾಮಾಬಾದ್‌: ಕಾರ್ಗಿಲ್ ಯುದ್ಧ (1999 Kargil War) ನಡೆದ 25 ವರ್ಷದ ನಂತರ ಭಾರತದೊಂದಿಗೆ ಮಾರಣಾಂತಿಕ ಸಂಘರ್ಷದಲ್ಲಿ ಪಾಕಿಸ್ತಾನ (Pakistan) ತನ್ನ ಪಾತ್ರದ ಬಗ್ಗೆ ಒಪ್ಪಿಕೊಂಡಿದೆ. ಈ ಕುರಿತು ಖುದ್ದು ಅಲ್ಲಿನ ಸೇನಾಧಿಕಾರಿಯೇ ಬಹಿರಂಗ ಹೇಳಿಕೆ ನೀಡಿದ್ದಾರೆ.

    ರಾವಲ್ಪಿಂಡಿಯಲ್ಲಿರುವ ಪಾಕಿಸ್ತಾನದ ಸೇನೆಯ (Pakistan Army) ಪ್ರಧಾನ ಕಚೇರಿಯಲ್ಲಿ ನಡೆದ ʻರಕ್ಷಣಾ ದಿನʼ ಕಾರ್ಯಕ್ರಮದ ಭಾಷಣದಲ್ಲಿ ಸೇನಾ ಮುಖ್ಯಸ್ಥ ಜನರಲ್ ಆಸೀಮ್ ಮುನೀರ್, ಕಾರ್ಗಿಲ್‌ ಯುದ್ಧದಲ್ಲಿ ಪಾಕ್‌ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಭಾರತ-ಪಾಕ್ ಮಧ್ಯೆ ನಡೆದ 1948, 1965, 1971ರ ಯುದ್ಧ, ಕಾರ್ಗಿಲ್ ಯುದ್ಧ, ಸಿಯಾಚಿನ್ ಘರ್ಷಣೆಯಲ್ಲಿ ಸಾವಿರಾರು ಯೋಧರು ಪ್ರಾಣತ್ಯಾಗ ಮಾಡಬೇಕಾಗಿ ಬಂತು ಎಂದು ಹೇಳಿದ್ದಾರೆ.

    ಈ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಪಾಕ್ ಸೈನ್ಯ ತಮ್ಮ ಪಾತ್ರವನ್ನು ಒಪ್ಪಿಕೊಂಡಂತೆ ಆಗಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: ರಷ್ಯಾ ವಿರುದ್ಧ ಉಕ್ರೇನ್‌ ಪ್ರತೀಕಾರದ ದಾಳಿ – ಬೆಂಕಿ ಉಂಡೆ ಉಗುಳುವ ʻಡ್ರ್ಯಾಗನ್‌ ಡ್ರೋನ್‌ʼ ಅಸ್ತ್ರ ಪ್ರಯೋಗ

    ಪಾಕ್‌ ಆರ್ಮಿ ಚೀಫ್‌ ಹೇಳಿದ್ದೇನು?
    1948, 1965, 1971ರ ಯುದ್ಧಗಳು ಹಾಗೂ ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾರ್ಗಿಲ್ ಯುದ್ಧ, ಸಿಯಾಚಿನ್ ಘರ್ಷಣೆಯಲ್ಲಿ ಸಾವಿರಾರು ಜನರು ಪ್ರಾಣತ್ಯಾಗ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ರಾಜಕೀಯ ಪ್ರೇರಿತ: ಭಾರತದ ವಿರುದ್ಧವೇ ಪ್ರಶ್ನೆ ಎತ್ತಿದ ಯೂನಸ್

    ಮೇ ಮತ್ತು ಜುಲೈ 1999ರ ನಡುವೆ ನಡೆದ ಕಾರ್ಗಿಲ್ ಯುದ್ಧದಲ್ಲಿ, ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಪಾಕಿಸ್ತಾನಿ ಪಡೆಗಳು ನುಸುಳಿದವು. ಆಗ ಭಾರತೀಯ ಸೇನೆ ʻಆಪರೇಷನ್ ವಿಜಯ್ʼ ಅಡಿಯಲ್ಲಿ ಅವರನ್ನು ಹಿಮ್ಮೆಟ್ಟಿಸಿತ್ತು. ಹಿಂದೆ, ಇಸ್ಲಾಮಾಬಾದ್ ನುಸುಳುಕೋರರನ್ನು ʻಕಾಶ್ಮೀರಿ ಸ್ವಾತಂತ್ರ್ಯ ಹೋರಾಟಗಾರರುʼ ಅಥವಾ ʻಮುಜಾಹಿದೀನ್‌ಗಳುʼ ಉಲ್ಲೇಖಿಸುತ್ತಾ ನೇರವಾಗಿ ಸೇನಾ ಪಾಲ್ಗೊಳ್ಳುವಿಕೆಯನ್ನು ನಿರಾಕರಿಸಿದರು.

    ಸೇನಾ ಮುಖ್ಯಸ್ಥ ಮುನೀರ್‌ ಅವರ ಈ ಹೇಳಿಕೆಯು ಸೋಷಿಯಲ್‌ ಮೀಡಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಭಾರತ್‌ ಸ್ಪೆಕ್ಟ್ರಮ್‌ ಎಂಬ ಎಕ್ಸ್‌ ಖಾತೆಯಲ್ಲಿ ಅಂದು ಖಾರ್ಗಿಲ್‌ ಯುದ್ಧದಲ್ಲಿ ಮಡಿದ ಅಧಿಕಾರಿಗಳ ಮೃತದೇಹಗಳನ್ನು ಸ್ವೀಕರಿಸಲು ಪಾಕಿಸ್ತಾನದ ಸೇನೆಯು ನಿರಾಕರಿಸಿದ ವರದಿಗಳನ್ನು ಹಂಚಿಕೊಳ್ಳಲಾಗಿದೆ. ಇದನ್ನೂ ಓದಿ: ಕೀನ್ಯಾ ಶಾಲೆಯಲ್ಲಿ ಅಗ್ನಿ ಅವಘಡ – 17 ಮಕ್ಕಳು ದಾರುಣ ಸಾವು

    ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌!
    ಆಸೀಮ್ ಮುನೀರ್ ಕಾರ್ಗಿಲ್‌ ಯುದ್ಧದ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಪ್ರತಿಕ್ರಿಯೆ ನೀಡಿದ್ದಾರೆ. ಭಯೋತ್ಪಾದನೆ ಮತ್ತು ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ಪಾತ್ರವು ಬಹಿರಂಗವಾಗಿದೆ. ಈಗ ಪಾಕಿಸ್ತಾನವೇ ಅದನ್ನು ಒಪ್ಪಿಕೊಂಡಿದೆ. ಆದರೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಾದ ನ್ಯಾಷನಲ್ ಕಾನ್ಫರೆನ್ಸ್ ಇನ್ನೂ ಪಾಕಿಸ್ತಾನದೊಂದಿಗೆ ಮಾತುಕತೆಗೆ ಪ್ರತಿಪಾದಿಸುತ್ತಿವೆ. ಅವರು ಅಫ್ಜಲ್ ಗುರುವನ್ನು ಗಲ್ಲಿಗೇರಿಸಿರುವುದನ್ನು ಪ್ರಶ್ನಿಸುತ್ತಾರೆ, ಮೋದಿಯನ್ನು ವಿರೋಧಿಸುವ ನೆಪದಲ್ಲಿ, ನಿಜವಾಗಿಯು ಭಾರತವನ್ನು ಭಾರತ್ ವಿರೋಧ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

  • ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್ – 9 ನಕ್ಸಲರನ್ನು ಬೇಟೆಯಾಡಿದ ಭದ್ರತಾ ಪಡೆ

    ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್ – 9 ನಕ್ಸಲರನ್ನು ಬೇಟೆಯಾಡಿದ ಭದ್ರತಾ ಪಡೆ

    ರಾಯ್‍ಪುರ್: ಛತ್ತೀಸ್‍ಗಢದ (Chhattisgarh) ದಾಂತೇವಾಡದಲ್ಲಿ ಭದ್ರತಾ ಪಡೆಗಳು (Indian Army) ನಡೆಸಿದ ಎನ್‍ಕೌಂಟರ್‌ನಲ್ಲಿ (Encounter) ಕನಿಷ್ಠ ಒಂಬತ್ತು ನಕ್ಸಲರು ಹತ್ಯೆಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿ ನಕ್ಸಲರು ಇರುವ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಬೆಳಗ್ಗೆ 10:30ರ ವೇಳೆಗೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ವೇಳೆ 9 ನಕ್ಸಲರ ಶವವನ್ನು ಸ್ಥಳದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸ್ಥಳದಲ್ಲಿ ಸೆಲ್ಫ್ ಲೋಡಿಂಗ್ ರೈಫಲ್ 303 ಮತ್ತು 12 ಬೋರ್ ಗನ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಈ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಯುತ್ತಿದೆ. ಎನ್‍ಕೌಂಟರ್‌ನಲ್ಲಿ ಇದುವರೆಗೆ ಯಾವುದೇ ಭದ್ರತಾ ಸಿಬ್ಬಂದಿ ಗಾಯಗೊಂಡಿಲ್ಲ.

    ಕಳೆದ ವಾರ ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯಲ್ಲಿ ಪೊಲೀಸ್ ಮಾಹಿತಿದಾರರು ಎಂಬ ಶಂಕೆಯ ಮೇಲೆ ಪ್ರತ್ಯೇಕ ಘಟನೆಗಳಲ್ಲಿ ಮೂವರು ಗ್ರಾಮಸ್ಥರನ್ನು ನಕ್ಸಲೀಯರು ಕೊಂದಿದ್ದರು.

    ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‍ಗಢಕ್ಕೆ ಭೇಟಿ ನೀಡಿದ್ದರು. ಅಲ್ಲಿ ನಕ್ಸಲ್ ವಿರೋಧಿ ಕಾರ್ಯತಂತ್ರಗಳ ಕುರಿತು ಏಳು ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರೊಂದಿಗೆ ಚರ್ಚಿಸಿದ್ದರು.

  • ಜಮ್ಮು ಸೇನಾ ನೆಲೆಯ ಮೇಲೆ ಉಗ್ರರ ದಾಳಿ – ಯೋಧನಿಗೆ ಗಾಯ

    ಜಮ್ಮು ಸೇನಾ ನೆಲೆಯ ಮೇಲೆ ಉಗ್ರರ ದಾಳಿ – ಯೋಧನಿಗೆ ಗಾಯ

    – ಉಗ್ರರಿಗಾಗಿ ತೀವ್ರ ಶೋಧ ಕಾರ್ಯ ಆರಂಭಿಸಿದ ಸೇನೆ
    – ಚುನಾವಣೆ ಹಿನ್ನೆಲೆ ಕಣಿವೆ ರಾಜ್ಯದಲ್ಲಿ ಭಾರೀ ಭದ್ರತೆ

    ಶ್ರೀನಗರ: ಜಮ್ಮುವಿನ (Jammu and Kashmir) ಸುಂಜ್ವಾನ್ ಸೇನಾ ನೆಲೆಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಯೋಧ ಗಾಯಗೊಂಡಿದ್ದಾರೆ. ಉಗ್ರರು ಸೇನಾ ನೆಲೆಯ ಸಮೀಪದಿಂದಲೇ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಬೆಳಗ್ಗೆ 10:50ರ ಸುಮಾರಿಗೆ ದಾಳಿ ಈ ನಡೆದಿದೆ. ಸೇನಾ ನೆಲೆಯ ಸಮೀಪದಲ್ಲಿ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಸೇನೆಯ (Indian Army) ಮೂಲಗಳು ತಿಳಿಸಿವೆ.

    ಸೆ.18 ರಂದು ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಹಂತದ ವಿಧಾನಸಭೆ ಚುನಾವಣೆ (Assembly elections) ನಡೆಯಲಿದೆ. ವಿಧಾನಸಭಾ ಚುನಾವಣೆಯು ಸೆ.18, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ನಡೆಯಲಿದೆ. ಅಕ್ಟೋಬರ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಚುನಾವಣೆಗೂ ಮುನ್ನ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಉದ್ವಿಗ್ನತೆ ಉಲ್ಬಣಗೊಂಡಿದೆ.

    ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಸುತ್ತಿವೆ. ಚುನಾವಣಾ ಕರ್ತವ್ಯಗಳಿಗಾಗಿ ಸುಮಾರು 300 ಅರೆಸೇನಾ ಪಡೆಗಳ ತುಕುಡಿಗಳನ್ನು ನಿಯೋಜಿಸಲಾಗಿದೆ.

    ಆ.31 ರಂದು ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಜಿಲ್ಲೆಯ ಗುರೇಜ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ್ದವು. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‍ಒಸಿ) ಎರಡು ಪ್ರತ್ಯೇಕ ಎನ್‍ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದರು.

  • ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಮೂವರು ಭಯೋತ್ಪಾದಕರ ಹತ್ಯೆ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಮೂವರು ಭಯೋತ್ಪಾದಕರ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಕುಪ್ವಾರಾ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್‌ಕೌಂಟರ್ (Encounter) ನಡೆಸಿದ ಭಾರತೀಯ ಭದ್ರತಾ ಪಡೆಗಳು (Indian Army) 3 ಭಯೋತ್ಪಾದಕರನ್ನು ಹತ್ಯೆ ಮಾಡಿದೆ.

    ಆ.28ರ ಮಧ್ಯರಾತ್ರಿ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್‌ಕೌಂಟರ್ ನಡೆಸಿದ ಭದ್ರತಾ ಪಡೆಗಳು, ಕುಶಾಲ್ ಪೊಸ್ಟ್ನ ಕರ್ನಾಹನಲ್ಲಿ (ತಂಗಧಾರ್) ಇಬ್ಬರು ಮತ್ತು ಗುಲಾಬ್ ಪೊಸ್ಟ್‌ನ ಕುಮಕಾರಿನ (ಮಿಚಿಲ್ ಸೆಕ್ಟರ್) ಪಕ್ಕದಲ್ಲಿ ಒಬ್ಬ ಭಯೋತ್ಪಾಕನನ್ನು ಹತ್ಯೆ ಮಾಡಿದೆ. ಭಾರೀ ಮಳೆಯಿಂದಾಗಿ ಭದ್ರತಾ ಪಡೆಗೆ ಭಯೋತ್ಪಾದಕರ ಮೃತದೇಹಗಳನ್ನು ವಶಪಡಿಸಲು ಆಗಲಿಲ್ಲ ಎಂದು ವರದಿಯಾಗಿದೆ.

    ಭಾರತೀಯ ಸೈನ್ಯವು ದೇಶದಲ್ಲಿ ಒಳನುಸುಳಕೋರರ ವಿರುದ್ಧ ಆಪರೇಷನ್ ಕೈಗೊಂಡಿತ್ತು. ಇದೇ ವೇಳೆ ಗುಪ್ತಚರ ಇಲಾಖೆಯ ಖಚಿತ ಮಾಹಿತಿ ಮೆರೆಗೆ ಎನ್‌ಕೌಂಟರ್ ನಡೆಸಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

  • ಅರುಣಾಚಲ ಪ್ರದೇಶದಲ್ಲಿ ಪ್ರಪಾತಕ್ಕೆ ಬಿದ್ದ ಟ್ರಕ್ – ಮೂವರು ಯೋಧರು ಹುತಾತ್ಮ

    ಅರುಣಾಚಲ ಪ್ರದೇಶದಲ್ಲಿ ಪ್ರಪಾತಕ್ಕೆ ಬಿದ್ದ ಟ್ರಕ್ – ಮೂವರು ಯೋಧರು ಹುತಾತ್ಮ

    ಇಟಾನಗರ: ಟ್ರಕ್ (Truck) ಸ್ಕಿಡ್ ಆಗಿ ಪ್ರಪಾತಕ್ಕೆ ಬಿದ್ದ ಪರಿಣಾಮ ಮೂವರು ಭಾರತೀಯ ಯೋಧರು (Indian Soldiers) ಹುತಾತ್ಮರಾಗಿದ್ದು, ಅನೇಕರು ಗಾಯಗೊಂಡ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ.

    ಸೈನಿಕರನ್ನು ಸಾಗಿಸುತ್ತಿದ್ದ ಟ್ರಕ್ ಲೆಪರಾಡ ಜಿಲ್ಲೆಯ ಬಸರಾಗೆ ತೆರಳುತ್ತಿದ್ದ ವೇಳೆ ಸ್ಕಿಡ್ ಆಗಿ ಪ್ರಪಾತಕ್ಕೆ ಉರುಳಿದೆ. ಇದರಿಂದ ಮೂವರು ಯೋಧರು ಹುತಾತ್ಮರಾಗಿದ್ದು ಅನೇಕರಿಗೆ ಗಾಯಗಳಾಗಿವೆ. ಅರುಣಾಚಲ ಪ್ರದೇಶದ (Arunachal Pradesh) ಅಪ್ಪರ್ ಸುಭನ್ಸಿರಿ ಎಂಬಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.  ಇದನ್ನೂ ಓದಿ: 2028ರ ವೇಳೆಗೆ 80  ಕೋಟಿ ಪ್ರವಾಸಿಗರನ್ನು ಆಕರ್ಷಿಸುವ ಗುರಿ – ಉತ್ತರ ಪ್ರದೇಶದಲ್ಲಿ ತಯಾರಿ ಹೇಗಿದೆ?

    ಸೇನಾ ಮೂಲಗಳ ಪ್ರಕಾರ, ಹುತಾತ್ಮರಾದ ಮೂವರು ಯೋಧರನ್ನು ಹವಲ್ದಾರ್ ನಖಾತ್ ಸಿಂಗ್, ನಾಯಕ್ ಮುಖೇಶ್ ಕುಮಾರ್, ಗ್ರೆನೇಡಿಯರ್ ಆಶಿಶ್ ಕುಮಾರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಭಾರತದ ರೈಲು, ಪೆಟ್ರೋಲ್ ಪೈಪ್‌ಲೈನ್‌ಗಳ ಮೇಲೆ ದಾಳಿ ಮಾಡಿ -ರಾಮೇಶ್ವರಂ ಕೆಫೆ ಸ್ಫೋಟ ಸಂಚುಕೋರನಿಂದ ಕರೆ

    ಘಟನೆ ಸಂಭವಿಸಿದ ಕೂಡಲೇ ಸ್ಥಳೀಯರು ಸೇರಿ ಗಾಯಗೊಂಡ ಸೈನಿಕರನ್ನು ಮೇಲೆತ್ತಲು ಸಹಾಯ ಮಾಡಿದ್ದಾರೆ. ಇದನ್ನೂ ಓದಿ:  ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್ – ಮಹಿಳೆ ಸಾವು

    ಘಟನೆಯ ಕುರಿತು ಸೇನೆಯ ಪೂರ್ವ ಕಮಾಂಡ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಈಸ್ಟೆನ್ ಕಮಾಂಡ್ ಆರ್ಮಿ ಕೇಡರ್ ಮತ್ತು ಎಲ್ಲಾ ಶ್ರೇಣಿಯ ಲೆಫ್ಟಿನೆಂಟಲ್ ಜನರಲ್ ಆರ್ ಸಿ ತಿವಾರಿ, ಬ್ರೇವ್‌ಹಾರ್ಟ್ಸ ಹವ್ ನಖತ್ ಸಿಂಗ್, ಎನ್‌ಕೆ ಮುಖೇಶ್ ಕುಮಾರ್, ಮತ್ತು ಜಿಡಿಆರ್ ಆಶಿಶ್‌ರವರ ಈ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೊಯ್ನಾ ಜಲಾಶಯ ಸಂಪೂರ್ಣ ಭರ್ತಿ – ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ

    ಅರುಣಾಚಲ ಪ್ರದೇಶದ ಸಿಎಂ ಪ್ರೇಮ ಖಂಡು (CM Prema Khundu) ಕೂಡ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ವ್ಯಕ್ತಪಡಿಸಿದ್ದು, ಹುತಾತ್ಮ ಯೋಧರನ್ನು ಗೌರವಪೂರ್ವಕವಾಗಿ ಸ್ಮರಿಸಲಾಗುವುದು, ಈ ದುಖಃವನ್ನು ಭರಿಸುವ ಶಕ್ತಿ ಹುತಾತ್ಮ ಯೋಧರ ಕುಟುಂಬಸ್ಥರಿಗೆ ಸಿಗಲಿ ಎಂದು ನಾನು ಬುದ್ಧನಲ್ಲಿ ಪ್ರಾರ್ಥನೆ ಮಾಡುತ್ತೆನೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ದರ್ಶನ್‌ ವಿಶೇಷ ಆತಿಥ್ಯಕ್ಕೆ ಪ್ರಭಾವಿ ಸಚಿವರ ಆದೇಶ?

  • ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತ – ಬೆಳಗಾವಿಯಲ್ಲಿ ಯೋಧ ಸಾವು

    ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತ – ಬೆಳಗಾವಿಯಲ್ಲಿ ಯೋಧ ಸಾವು

    ಬೆಳಗಾವಿ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತವಾಗಿ ಯೋಧ ಸಾವಿಗೀಡಾಗಿರುವ ಘಟನೆ ನಗರದ ಎಂಎಲ್‌ಐಆರ್‌ಸಿ ಕ್ಯಾಂಪ್‌ನಲ್ಲಿ ನಡೆದಿದೆ.

    ಸುನೀಲ್ ಸಲಾಂ (37) ಮೃತ ಯೋಧ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಿರ್ದೋಷಿಯಾಗಿ ಮತ್ತೆ ಸಿಎಂ ಆಗಲಿ: ಸುರೇಶ್ ಬಾಬು

    ಯೋಧ ಮರಾಠ ಲಘು ಪದಾತಿದಳಲ್ಲಿ ಹವಾಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಹೃದಯಾಘಾತ ಸಂಭವಿಸಿದೆ. ಹೃದಯಾಘಾತದಿಂದ ಯೋಧ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಇದನ್ನೂ ಓದಿ: ಯುಎಸ್ ಕಾರು ಅಪಘಾತ; ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಸಾವು

    ಯೋಧ ಮೃತಪಡುವ ಅಂತಿಮ ಕ್ಷಣಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಾರಾಷ್ಟ್ರದ ಚಂದಗಡ ತಾಲೂಕಿನ ಘುಳೇವಾಡಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

  • ಜಮ್ಮು-ಕಾಶ್ಮೀರ: ಭಯೋತ್ಪಾದಕರ ವಿರುದ್ಧದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನಾ ಕ್ಯಾಪ್ಟನ್‌ ಹುತಾತ್ಮ

    ಜಮ್ಮು-ಕಾಶ್ಮೀರ: ಭಯೋತ್ಪಾದಕರ ವಿರುದ್ಧದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನಾ ಕ್ಯಾಪ್ಟನ್‌ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ನಡೆದ ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆಯ ಕ್ಯಾಪ್ಟನ್ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದೋಡಾ ಜಿಲ್ಲೆಯ ಆಪ್ ಅಸ್ಸಾರ್‌ನಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ 48 ರಾಷ್ಟ್ರೀಯ ರೈಫಲ್ಸ್‌ನ ಭಾರತೀಯ ಸೇನೆಯ ಕ್ಯಾಪ್ಟನ್ ಹುತಾತ್ಮರಾಗಿದ್ದಾರೆ.

    ಅಸ್ಸಾರ್ ಪ್ರದೇಶದಲ್ಲಿ ಮಂಗಳವಾರ ಆರಂಭವಾದ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ. ನಂತರ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶೋಧ ಕಾರ್ಯಾಚರಣೆ ಭಾಗವಾಗಿದ್ದಾರೆ. ಭಾರಿ ಗುಂಡಿನ ಚಕಮಕಿಯ ನಡುವೆ ಭಯೋತ್ಪಾದಕರಿಗಾಗಿ ಶೋಧ ಮುಂದುವರಿದಿದೆ. ಶೋಧ ತಂಡವನ್ನು ಮುನ್ನಡೆಸುತ್ತಿರುವ ಒಬ್ಬ ಅಧಿಕಾರಿ ಗಾಯಗೊಂಡಿದ್ದಾರೆ.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ಸಂಬಂಧಿತ ಘಟನೆಗಳ ಕುರಿತು ಇಂದು ಬೆಳಗ್ಗೆ ಮಹತ್ವದ ಸಭೆ ನಡೆಸಿದ್ದರು. ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮನೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ-ಲೆಫ್ಟಿನೆಂಟ್ ಜನರಲ್ ಪ್ರತೀಕ್ ಶರ್ಮಾ ಮತ್ತು ಭದ್ರತಾ ಸಂಬಂಧಿತ ಏಜೆನ್ಸಿಗಳ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

  • ಮ್ಯಾನ್ ಪೋರ್ಟಬಲ್ ಆಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯ ಯಶಸ್ವಿ ಪ್ರಯೋಗ ನಡೆಸಿದ ಡಿಆರ್‌ಡಿಒ

    ಮ್ಯಾನ್ ಪೋರ್ಟಬಲ್ ಆಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯ ಯಶಸ್ವಿ ಪ್ರಯೋಗ ನಡೆಸಿದ ಡಿಆರ್‌ಡಿಒ

    – 2034-35ರ ವೇಳೆಗೆ ಸೇನೆ ಸೇರಲಿದೆ ಎಎಂಸಿಎ ಫೈಟರ್ ಜೆಟ್

    ನವದೆಹಲಿ: ಡಿಆರ್‌ಡಿಒ (DRDO) ತಯಾರಿಸಿದ `ಮ್ಯಾನ್-ಪೋರ್ಟಬಲ್ ಆಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯನ್ನು (ಎಂಪಿಎಟಿಜಿಎಂ) (Portable Anti Tank Missile System) ಯಶಸ್ವಿಯಾಗಿ ಪರೀಕ್ಷಿಸಿದೆ. ಇತ್ತೀಚೆಗೆ ರಾಜಸ್ಥಾನದ ಜೈಸಲ್ಮೇರ್‌ನಲ್ಲಿರುವ ಫೀಲ್ಡ್ ಫೈರಿಂಗ್ ರೇಂಜ್‍ನಲ್ಲಿ ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ರಾಜಸ್ಥಾನದ ಪೋಖ್ರಾನ್ ಫೀಲ್ಡ್ ಫೈರಿಂಗ್ ರೇಂಜ್‍ನಲ್ಲಿ ಸಿಡಿತಲೆ ಹಾರಾಟದ ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಆಂಟಿ ಟ್ಯಾಂಕ್ ಗೈಡೆಡ್ ಮಿಸೈಲ್ ಅಥವಾ ಎಟಿಜಿಎಂ ವ್ಯವಸ್ಥೆಯು ಹಗಲು ರಾತ್ರಿ ಎರಡು ಸಮಯದಲ್ಲೂ ಕಾರ್ಯನಿರ್ವಹಿಸಲು ಸೂಕ್ತವಾಗಿದೆ. ಪ್ರಬಲ ದಾಳಿಯ ಸಾಮರ್ಥ್ಯ ಹೊಂದಿದೆ. ಅಲ್ಲದೇ ಈ ಕ್ಷಿಪಣಿ ಲಾಂಚರ್, ಟಾರ್ಗೆಟ್ ಅಕ್ವಿಸಿಷನ್ ಸಿಸ್ಟಮ್ ಮತ್ತು ಅಗ್ನಿ ನಿಯಂತ್ರಣ ಘಟಕವನ್ನು ಒಳಗೊಂಡಿದೆ. ಇದು 14.50 ಕೆಜಿ ತೂಕವಿದ್ದು, 4 ಕಿಮೀ ದೂರದಲ್ಲಿರುವ ಗುರಿಯನ್ನು ಛಿದ್ರಗೊಳಿಸುವ ಸಾಮರ್ಥ್ಯ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ವ್ಯವಸ್ಥೆಯ ಯಶಸ್ವಿ ಪ್ರಯೋಗಕ್ಕಾಗಿ ಡಿಆರ್‌ಡಿಒ ಮತ್ತು ಭಾರತೀಯ ಸೇನೆಯನ್ನು ಅಭಿನಂದಿಸಿದ್ದಾರೆ. ಸುಧಾರಿತ ತಂತ್ರಜ್ಞಾನ ಆಧಾರಿತ ರಕ್ಷಣಾ ವ್ಯವಸ್ಥೆ ಅಭಿವೃದ್ಧಿಯಲ್ಲಿ ಸ್ವಾವಲಂಬನೆ ಸಾಧಿಸಲು ಇದು ಒಂದು ಪ್ರಮುಖ ಹೆಜ್ಜೆ ಎಂದು ಅವರು ಬಣ್ಣಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಆರ್‌ಡಿಒ ಅಧ್ಯಕ್ಷ ಸಮೀರ್ ವಿ ಕಾಮತ್, ತಮಿಳುನಾಡಿನ ಸೂಲೂರಿನಲ್ಲಿ ನಡೆಯುತ್ತಿರುವ ತರಂಗ್ ಶಕ್ತಿ ಕಸರತ್ತಿನಲ್ಲಿ ಹಲವಾರು ಮೇಡ್ ಇನ್ ಇಂಡಿಯಾ ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸಿದೆ. ಭಾರತೀಯ ವಾಯುಪಡೆಯ ತರಂಗ್ ಶಕ್ತಿ ಕಸರತ್ತಿನಲ್ಲಿ ದೇಶೀಯ ಶಸ್ತ್ರಾಸ್ತ್ರಗಳನ್ನ ಪ್ರದರ್ಶಿಸಲು ಇದು ಒಂದು ಅವಕಾಶವಾಗಿದೆ ಎಂದು ಹೇಳಿದ್ದಾರೆ.

    ಡಿಆರ್‌ಡಿಒ ಅಭಿವೃದ್ಧಿಪಡಿಸಿದ ಎಎಂಸಿಎ ಫೈಟರ್ ಜೆಟ್ ಬಗ್ಗೆ ಮಾತನಾಡಿ, ಇದು ರಹಸ್ಯ ವಿಮಾನವಾಗಿದೆ. ಎಎಂಸಿಎ 5.5 ಪೀಳಿಗೆಯ ಯುದ್ಧವಿಮಾನವಾಗಿದೆ. ಇದರ ವಿನ್ಯಾಸವು ಪೂರ್ಣಗೊಂಡಿದೆ ಮತ್ತು ನಮ್ಮ ಅಭಿವೃದ್ಧಿ ಪ್ರಯೋಗಗಳನ್ನು ಪೂರ್ಣಗೊಳಿಸಲು ತಯಾರಿ ನಡೆಸಿದ್ದೇವೆ. 2034ರ -2035ರ ವೇಳೆಗೆ ಸೇನೆಯಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಅವರು ಹೇಳಿದ್ದಾರೆ.

  • ಪ್ರೀತಿಯ ಭಾರತೀಯ ಸೇನೆ..; ವಯನಾಡಲ್ಲಿ ರಕ್ಷಣೆಗೆ ನಿಂತ ಸೈನಿಕರಿಗೆ ಪುಟ್ಟ ಬಾಲಕ ಸೆಲ್ಯೂಟ್‌

    ಪ್ರೀತಿಯ ಭಾರತೀಯ ಸೇನೆ..; ವಯನಾಡಲ್ಲಿ ರಕ್ಷಣೆಗೆ ನಿಂತ ಸೈನಿಕರಿಗೆ ಪುಟ್ಟ ಬಾಲಕ ಸೆಲ್ಯೂಟ್‌

    – ನಾನೂ ಭಾರತೀಯ ಸೇನೆ ಸೇರ್ತೀನಿ: ಯೋಧರಿಗೆ 3ನೇ ತರಗತಿ ಬಾಲಕನ ಹೃದಯಸ್ಪರ್ಶಿ ಪತ್ರ

    ತಿರುವನಂತರಪುರಂ: ಭೂಕುಸಿತ ಪೀಡಿತ ಕೇರಳದ (Kerala) ವಯನಾಡ್‌ನಲ್ಲಿ (Wayanad) ಸೈನಿಕರ ರಕ್ಷಣಾ ಕಾರ್ಯಾಚರಣೆ ಮೆಚ್ಚಿ ಪುಟ್ಟ ಬಾಲಕನೊಬ್ಬ ಭಾರತೀಯ ಸೇನೆಗೆ ಹೃದಯಸ್ಪರ್ಶಿ ಪತ್ರ ಬರೆದಿದ್ದಾನೆ.

    3ನೇ ತರಗತಿ ವಿದ್ಯಾರ್ಥಿ ಮಾಸ್ಟರ್‌ ರಾಯನ್‌, ಭಾರತೀಯ ಸೇನೆಗೆ (Indian Army) ಪತ್ರ ಬರೆದ ಹುಡುಗ. ಸೈನಿಕರ ರಕ್ಷಣಾ ಕಾರ್ಯಾಚರಣೆಯಿಂದ ಪ್ರೇರೇಪಿತನಾದ ಬಾಲಕ, ಮುಂದೊಂದು ದಿನ ತಾನೂ ಸೇನೆಗೆ ಸೇರಲು ಆಕಾಂಕ್ಷಿಯಾಗಿದ್ದೇನೆಂದು ಆಶಯ ವ್ಯಕ್ತಪಡಿಸಿದ್ದಾನೆ. ಇದನ್ನೂ ಓದಿ: ವಯನಾಡಿನಲ್ಲಿ ಸಾವಿನ ಸುರಿ`ಮಳೆ’ – ಗುರುತು ಸಿಗದಷ್ಟು ಛಿದ್ರಗೊಂಡಿರುವ ದೇಹಗಳು; ಶವಗಳ ಶೋಧಕ್ಕೆ ಶ್ವಾನಪಡೆ!

    ಆತ್ಮೀಯ ಭಾರತೀಯ ಸೇನೆ, ನನ್ನ ಪ್ರೀತಿಯ ವಯನಾಡ್ ಭಾರಿ ಭೂಕುಸಿತದಿಂದ ಅಪ್ಪಳಿಸಿತು. ವಿನಾಶವನ್ನು ಸೃಷ್ಟಿಸಿತು. ಶಿಲಾಖಂಡರಾಶಿಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ನೀವು ರಕ್ಷಿಸುತ್ತಿರುವುದನ್ನು ನೋಡಿ ನನಗೆ ಹೆಮ್ಮೆ ಮತ್ತು ಸಂತೋಷವಾಯಿತು ಎಂದು ಮಲಯಾಳಂ ಭಾಷೆಯಲ್ಲಿ ಭಾರತೀಯ ಸೇನೆಗೆ ಬಾಲಕ ಪತ್ರ ಬರೆದು ಕೃತಜ್ಞತೆ ಸಲ್ಲಿಸಿದ್ದಾನೆ.

    ಸಂತ್ರಸ್ತರ ಹಸಿವು ನೀಗಿಸುವ ಮತ್ತು ಸೇತುವೆಯನ್ನು ನಿರ್ಮಿಸುವ ವೀಡಿಯೊವನ್ನು ನಾನು ನೋಡಿದೆ. ಆ ದೃಶ್ಯವು ನನ್ನ ಎದೆಯಾಳಕ್ಕೆ ಇಳಿಯಿತು. ನಾನು ಮುಂದೊಂದು ದಿನ ಭಾರತೀಯ ಸೇನೆಗೆ ಸೇರಲು ಮತ್ತು ನನ್ನ ರಾಷ್ಟ್ರವನ್ನು ರಕ್ಷಿಸಲು ಆಶಿಸುತ್ತೇನೆ ಎಂದು ಬಾಲಕ ಪತ್ರದಲ್ಲಿ ಉಲ್ಲೇಖಿಸಿದ್ದಾನೆ. ಇದನ್ನೂ ಓದಿ: Wayanad LandSlides | ಕರ್ನಾಟಕದಿಂದ 100 ಮನೆ ನಿರ್ಮಾಣ: ಸಿದ್ದರಾಮಯ್ಯಗೆ ಕೃತಜ್ಞತೆ ಸಲ್ಲಿಸಿದ ರಾಹುಲ್‌

    ಬಾಲಕನ ಕೃತಜ್ಞತೆಗೆ ಪ್ರತಿಕ್ರಿಯಿಸಿರುವ ಭಾರತೀಯ ಸೇನೆ ಧನ್ಯವಾದ ತಿಳಿಸಿದೆ. ‘ಯುವ ಯೋಧನಿಗೆ’ ಧನ್ಯವಾದ ಎಂದಿದೆ. ನಿಮ್ಮ ಮನದಾಳದ ಮಾತುಗಳು ನಮ್ಮನ್ನು ಆಳವಾಗಿ ಮುಟ್ಟಿವೆ. ಸಂಕಷ್ಟದ ಸಮಯದಲ್ಲಿ, ನಾವು ಭರವಸೆಯ ದಾರಿದೀಪವಾಗಲು ಗುರಿ ಹೊಂದಿದ್ದೇವೆ. ನಿಮ್ಮ ಪತ್ರವು ಈ ಧ್ಯೇಯವನ್ನು ಪುನರುಚ್ಚರಿಸಿದೆ. ನಿಮ್ಮಂತಹ ವೀರರು ನಮ್ಮ ಕೈಲಾದದ್ದನ್ನು ನೀಡಲು ನಮಗೆ ಸ್ಫೂರ್ತಿ ನೀಡುತ್ತಾರೆ. ನೀವು ಸಮವಸ್ತ್ರವನ್ನು ಧರಿಸಿ ನಮ್ಮೊಂದಿಗೆ ನಿಲ್ಲುವ ದಿನಕ್ಕಾಗಿ ನಾವು ಕುತೂಹಲದಿಂದ ಕಾಯುತ್ತಿದ್ದೇವೆ. ಒಟ್ಟಾಗಿ, ನಾವು ನಮ್ಮ ದೇಶದ ಬಗ್ಗೆ ಹೆಮ್ಮೆಪಡುತ್ತೇವೆ. ಯುವ ಯೋಧರೇ, ನಿಮ್ಮ ಧೈರ್ಯ ಮತ್ತು ಸ್ಫೂರ್ತಿಗಾಗಿ ಧನ್ಯವಾದಗಳು ಎಂದು ಬಾಲಕನ ಪತ್ರಕ್ಕೆ ಭಾರತೀಯ ಸೇನೆ ಪ್ರತಿಕ್ರಿಯಿಸಿದೆ.

    ಮಂಗಳವಾರ ಮುಂಜಾನೆ ದೇವರ ನಾಡು ಕೇರಳದ ವಯನಾಡಿನಲ್ಲಿ ಸಂಭವಿಸಿದ ಅವಳಿ ಭೂಕುಸಿತಕ್ಕೆ 200ಕ್ಕೂ ಹೆಚ್ಚು ಜನರು ಬಲಿಯಾದರು. ಸಾವಿನ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು, ಭಾರತೀಯ ಸೇನೆಯು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ರಕ್ಷಣಾ ಸಿಬ್ಬಂದಿಯಲ್ಲಿ 500 ಕ್ಕೂ ಹೆಚ್ಚು ಸೈನಿಕರನ್ನು ಹೊಂದಿರುವ ಸೇನಾ ತಂಡಗಳು ಭೂಕುಸಿತದಿಂದ ಹಾನಿಗೊಳಗಾದ ಭಾಗಗಳಲ್ಲಿ ರಕ್ಷಣಾ ಕಾರ್ಯ ಕೈಗೊಂಡಿವೆ. ಇದನ್ನೂ ಓದಿ: Wayanad Landslides | ಪ್ರತಿ ವರ್ಷ ಮೆಪ್ಪಾಡಿಯಲ್ಲಿ ತಲೆ ಎತ್ತುತ್ತಿವೆ 380 ಹೊಸ ಕಟ್ಟಡಗಳು