Tag: indian army

  • ಕ್ಷಿಪ್ರಗತಿಯ ಸೇತುವೆ ನಿರ್ಮಾಣ ಕಾರ್ಯಾಚರಣೆಯಲ್ಲಿ ಮಹಿಳಾ ಸೇನಾಧಿಕಾರಿಯ ಸಾಹಸಗಾಥೆ!

    ಕ್ಷಿಪ್ರಗತಿಯ ಸೇತುವೆ ನಿರ್ಮಾಣ ಕಾರ್ಯಾಚರಣೆಯಲ್ಲಿ ಮಹಿಳಾ ಸೇನಾಧಿಕಾರಿಯ ಸಾಹಸಗಾಥೆ!

    ಕೇರಳ: ವಯನಾಡ್‌ನಲ್ಲಿ (Wayanad Landslide) ಸರಣಿ ಭೂಕುಸಿತಕ್ಕೆ ಅಪಾರ ಪ್ರಮಾಣದ ಜೀವ ಹಾನಿಯಾಗಿದೆ. ಮುಂಡಕ್ಕೈನಲ್ಲಿ ರಕ್ಷಣಾಕಾರ್ಯ ಮುಂದುವರೆದಿದ್ದು, ಮುಂಡಕ್ಕೈ ಮತ್ತು ಚೂರಲ್ಮಾಲಕ್ಕೆ ಭಾರತೀಯ ಸೇನೆಯಿಂದ ತಾತ್ಕಾಲಿಕ ಸೇತುವೆಯನ್ನ ನಿರ್ಮಾಣ ಮಾಡಲಾಗಿದೆ.

    ಕ್ಷಿಪ್ರಗತಿಯ ಸೇತುವೆ ನಿರ್ಮಾಣ ಕಾರ್ಯಾಚರಣೆಯಲ್ಲಿ ಮಹಿಳಾ ಸೇನಾಧಿಕಾರಿಯ ಸಾಹಸಗಾಥೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. 20 ಘಂಟೆಯಲ್ಲಿ 190 ಅಡಿ ಬೈಲಿ ಸೇತುವೆಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಿಳಾ ಸೇನಾಧಿಕಾರಿ ಮೇಜರ್ ಸೀತಾ ಅಶೋಕ್ ಶೆಲ್ಕೆ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಸೈನಿಕರಿಗೆ ಸೆಲ್ಯೂಟ್‌: ಕೇವಲ 16 ಗಂಟೆಯಲ್ಲಿ 24 ಟನ್‌ ಸಾಮರ್ಥ್ಯದ 190 ಅಡಿ ಉದ್ದದ ಸೇತುವೆ ರೆಡಿ!

    ಭಾರತೀಯ ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್, ಬೆಂಗಳೂರಿನಿಂದ ಈ ಸೇತುವೆ ನಿರ್ಮಾಣವಾಗಿತ್ತು. ಭಾರತೀಯ ಸೇನೆ ಕರ್ನಾಟಕ-ಕೇರಳ ಉಪ ವಿಭಾಗದ 200ಕ್ಕೂ ಹೆಚ್ಚು ಸೈನಿಕರು ಸೇತುವೆ ನಿರ್ಮಾಣ ಕಾಮಗಾರಿಯಲ್ಲಿ ಭಾಗಿಯಾಗಿದ್ದರು. ಸೀತಾ ಅಶೋಕ್ ಶೆಲ್ಕೆ, ಬ್ರಿಡ್ಜ್ ಆಪರೇಷನ್‌ನ ನೇತೃತ್ವ ವಹಿಸಿಕೊಂಡಿದ್ದರು.

    ಬುದುವಾರ ರಾತ್ರಿ 9:30 ಕ್ಕೆ ಆರಂಭವಾಗಿ ಗುರುವಾರ ಸಂಜೆ 5:30ಕ್ಕೆ ಬ್ರಿಡ್ಜ್ ಕಾಮಗಾರಿ ಮುಗಿದಿತ್ತು. ಕೆಲವೇ ಗಂಟೆಗಳಲ್ಲಿ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಿ, ಮುಂಡಕ್ಕೈ ಚೂರಾಲ್ಮಾಲ ಗ್ರಾಮಸ್ಥರನ್ನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಯ್ತು. ಇನ್ನೂ ದೆಹಲಿ, ಬೆಂಗಳೂರಿನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ 17 ಟ್ರಕ್‌ಗಳ ಮೂಲಕ ವಯನಾಡ್‌ಗೆ ಸೇತುವೆ ನಿರ್ಮಾಣಕ್ಕೆ ಸಾಮಗ್ರಿಗಳನ್ನ ತರಲಾಗಿತ್ತು. ಇದನ್ನೂ ಓದಿ: Wayanad Landslide | ಸರ್ಕಾರದ ಅನುಮತಿ ಇಲ್ಲದೇ ಅಭಿಪ್ರಾಯ ಹೇಳುವಂತಿಲ್ಲ: ವಿಜ್ಞಾನಿಗಳಿಗೆ ಕೇರಳ ಸರ್ಕಾರ ನಿರ್ಬಂಧ

  • ಕರ್ತವ್ಯದಲ್ಲಿದ್ದಾಗ ಭಾರೀ ಹಿಮಪಾತ – ಬೀದರ್ ಯೋಧ ಹುತಾತ್ಮ

    ಕರ್ತವ್ಯದಲ್ಲಿದ್ದಾಗ ಭಾರೀ ಹಿಮಪಾತ – ಬೀದರ್ ಯೋಧ ಹುತಾತ್ಮ

    ಬೀದರ್: ಭಾರೀ ಹಿಮಪಾತ (Avalanche) ಸಂಭವಿಸಿ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತದಿಂದ ಬೀದರ್‌ನ (Bidar) ಯೋಧರೊಬ್ಬರು ಸಿಕ್ಕಿಂನಲ್ಲಿ (Sikkim) ಹುತಾತ್ಮರಾಗಿದ್ದಾರೆ.

    20 ವರ್ಷಗಳಿಂದ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನ ಕೊರಿಯಾಳ ಗ್ರಾಮದ ಯೋಧ (Soldier) ಅನಿಲ್ ಕುಮಾರ್ ಉಮಾಕಾಂತರಾವ್ ನವಾಡೆ (40) ಕರ್ತವ್ಯದಲ್ಲಿರುವಾಗಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್‌ನಿಂದ 1.30 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ

    2004 ರಲ್ಲಿ ಭಾರತೀಯ ಸೇನೆ (Indian Army) ಸೇರಿದ್ದ ಅನಿಲ್‌ ಕುಮಾರ್ ಜಮ್ಮು ಕಾಶ್ಮೀರ, ರಾಜಸ್ಥಾನ, ನಾಗಲಾಂಡ್, ಶಿಮ್ಲಾ, ಮಣಿಪುರ ಹಾಗೂ ಸಿಕ್ಕಿಂ ಸೇರಿದಂತೆ ಹಲವು ರಾಜ್ಯದ ಗಡಿಯಲ್ಲಿ ಕರ್ತವ್ಯ ಸಲ್ಲಿಸಿದ್ದಾರೆ. ಸಿಕ್ಕಿಂ ರಾಜ್ಯದಲ್ಲಿ ಹವಾಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಪಾರ್ಥಿವ ಶರೀರ ಭಾನುವಾರ ಸಂಜೆ ಸ್ವಗ್ರಾಮಕ್ಕೆ ಬರುವ ಸಾಧ್ಯತೆಯಿದೆ.

  • ಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ – ಓರ್ವ ಯೋಧ ಹುತಾತ್ಮ

    ಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ – ಓರ್ವ ಯೋಧ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

    ಗಡಿ ನಿಯಂತ್ರಣ ರೇಖೆಯ ಬಳಿ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ವಿರುದ್ಧ ಕಾರ್ಯಾಚರಣೆ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.

    ಕೆಲವು ದಿನಗಳ ಹಿಂದೆ ಕುಪ್ವಾರದ ಕೋವುಟ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ನೀಡಲಾಗಿತ್ತು. ಸೇನೆಯು ಜಮ್ಮು-ಕಾಶ್ಮೀರದ ಪೊಲೀಸರೊಂದಿಗೆ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು.

    ಭಾರತೀಯ ಸೇನೆಯ ಕಾರ್ಯಾಚರಣೆ ವೇಳೆ ಉಗ್ರರು ಸಹ ಗುಂಡಿನ ಚಕಮಕಿ ನಡೆಸಿದರು. ಈ ವೇಳೆ ಸೈನಿಕ ಹುತಾತ್ಮರಾಗಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನೆಯು ತಿಳಿಸಿದೆ.

    ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಲ್ಯಾನ್ಸ್‌ ನಾಯಕ್‌ ಸುಭಾಷ್‌ ಕುಮಾರ್‌ ನಂತರ ಕೊನೆಯುಸಿರೆಳೆದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಸೇನೆಗೆ ಹಸ್ತಾಂತರಿಸಲಾಗಿದೆ.

  • ಸಿಯಾಚಿನ್ ಯುದ್ಧಭೂಮಿಗೆ ಮೊದಲ ಮಹಿಳಾ ಯೋಧೆಯಾಗಿ ಮೈಸೂರಿನ ಸುಪ್ರಿತಾ ಆಯ್ಕೆ

    ಸಿಯಾಚಿನ್ ಯುದ್ಧಭೂಮಿಗೆ ಮೊದಲ ಮಹಿಳಾ ಯೋಧೆಯಾಗಿ ಮೈಸೂರಿನ ಸುಪ್ರಿತಾ ಆಯ್ಕೆ

    ಮೈಸೂರು: ಸಿಯಾಚಿನ್ (Siachen) ಯುದ್ಧಭೂಮಿಗೆ ಮೊದಲ ಮಹಿಳಾ ಯೋಧೆಯಾಗಿ ಮೈಸೂರಿನ (Mysuru) ಸುಪ್ರಿತಾ (Supreetha) ಆಯ್ಕೆಯಾಗಿದ್ದಾರೆ.

    ಮೈಸೂರಿನ ಸರ್ದಾರ್ ವಲ್ಲಭಾಯಿನಗರದ ನಿವಾಸಿ ಸುಪ್ರಿತಾ ಅವರು ಭಾರತೀಯ ಸೇನಾ ಪಡೆಯ ಕ್ಯಾಪ್ಟನ್. ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿದ್ದಾರೆ. ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿರುವ ಮೊದಲ ಮಹಿಳಾ ಯೋಧೆ ಎಂಬ ಖ್ಯಾತಿ ಗಳಿಸಿದ್ದಾರೆ. ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಸೈನಿಕರಿಗೆ ಅಪಮಾನ ಮಾಡಿದ್ದಾರೆ: ಹೆಚ್‌ಡಿಕೆ

    ತಲಕಾಡು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್‌ಐ ತಿರುಮಲ್ಲೇಶ್, ನಿರ್ಮಲಾ ದಂಪತಿ ಪುತ್ರಿ ಸುಪ್ರಿತಾ. ಮೈಸೂರಿನ ಜೆಎಸ್‌ಎಸ್ ಕಾಲೇಜಿನಲ್ಲಿ ಎಲ್‌ಎಲ್‌ಬಿ ಪದವಿ ಹಾಗೂ ಎನ್‌ಸಿಸಿ ಸರ್ಟಿಫಿಕೇಟ್ ಪಡೆದುಕೊಂಡಿದ್ದಾರೆ.

  • ಸೇನೆ ಪರ ಗೂಡಾಚಾರಿಕೆ ಆರೋಪ; ವ್ಯಕ್ತಿಯ ಕಣ್ಣಿಗೆ ಬಟ್ಟೆ ಕಟ್ಟಿ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    ಸೇನೆ ಪರ ಗೂಡಾಚಾರಿಕೆ ಆರೋಪ; ವ್ಯಕ್ತಿಯ ಕಣ್ಣಿಗೆ ಬಟ್ಟೆ ಕಟ್ಟಿ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    ಇಂಫಾಲ: ವ್ಯಕ್ತಿಯೊಬ್ಬನ ಕಣ್ಣಿಗೆ ಬಟ್ಟೆ ಕಟ್ಟಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಮಣಿಪುರದ (Manipur) ಇಂಫಾಲ (Imphal) ಜಿಲ್ಲೆಯಲ್ಲಿ ನಡೆದಿದೆ. ಲ್ಯಾಮ್ಲೈನ್‍ನ್ ಪೊಲೀಸ್ ಠಾಣಾ ವ್ಯಾಪ್ತಿಯ ಟೆಕ್ಚಾಮ್ ಎಂಬಲ್ಲಿ ಈ ಘಟನೆ ನಡೆದಿದೆ.

    ಹತ್ಯೆಗೀಡಾದ ವ್ಯಕ್ತಿಯನ್ನು ಆರ್.ಕೆ ಪೃಥ್ವಿ ಸಿಂಗ್ ಎಂದು ಗುರುತಿಸಲಾಗಿದೆ. ಹತ್ಯೆಯ ವೇಳೆ ವ್ಯಕ್ತಿಯ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು. ಅವನ ಕೈಗಳನ್ನು ಬೆನ್ನಿನ ಹಿಂದೆ ಕಟ್ಟಲಾಗಿತ್ತು. ಬಳಿಕ ಪಾಯಿಂಟ್ ಬ್ಲಾಂಕ್ ರೇಂಜ್‍ನಿಂದ ಗುಂಡು ಹಾರಿಸಿ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶಿಥಿಲಾವಸ್ಥೆಯಲ್ಲಿ ರಾಯಚೂರು ಬಿಇಒ ಕಚೇರಿ – ಜೀವಭಯದಲ್ಲೇ ಸಿಬ್ಬಂದಿ ಕೆಲಸ

    ಸಿಂಗ್ ಭದ್ರತಾ ಪಡೆಗಳ (Indian Army) ಪರವಾಗಿ ಗೂಢಚಾರಿಕೆ ಮಾಡುತ್ತಿದ್ದಾನೆ ಎಂದು ನಿಷೇಧಿತ ಸಂಘಟನೆ ಕೆಸಿಪಿ ಈ ಹತ್ಯೆ ಮಾಡಿದೆ. ಕೊಲೆಯ ಹೊಣೆಗಾರಿಕೆಯನ್ನು ಸಂಘಟನೆ ವಹಿಸಿಕೊಂಡಿದೆ. ಸಿಂಗ್ ಮಾಜಿ ಬಂಡುಕೋರನಾಗಿದ್ದು, ಸೇನೆಗೆ ಶರಣಾಗಿದ್ದ. ಬಳಿಕ ಆತ ಸೇನೆಗಾಗಿ ಗೂಢಚಾರಿಕೆ ಕೆಲಸ ಮಾಡುತ್ತಿದ್ದ ಎಂದು ಕೆಸಿಪಿ ಸಂಘಟನೆ ಹೇಳಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಈ ಪ್ರಕರಣದ ಬೆನ್ನಲ್ಲೇ ಓರ್ವ ಬಂಡುಕೋರನನ್ನು ಬಂಧಿಸಲಾಗಿದೆ. ಬಂಧಿತನನ್ನು ನಿಂಗ್ತೌಜಮ್ ಆಶಾಕುಮಾರ್ ಮೀಟೆಯಿ (33) ಎಂದು ಗುರುತಿಸಲಾಗಿದೆ. ಆತ ಸುಲಿಗೆಯಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಮಸ್ಯೆ ಕೇಳಲು ಬಂದ ಸಚಿವ ಬೋಸರಾಜುಗೆ ಸಂತ್ರಸ್ತರಿಂದ ತರಾಟೆ

  • ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್‌ಕೌಂಟರ್‌ – ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮ

    ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್‌ಕೌಂಟರ್‌ – ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu Kashmir) ದೋಡಾ ಜಿಲ್ಲೆಯಲ್ಲಿ ಉಗ್ರರ ಜೊತೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ (Encounter) ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಭಾರತೀಯ ಸೇನಾ (Indian Army) ಯೋಧರು ಹುತಾತ್ಮರಾಗಿದ್ದಾರೆ.

    ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ದೋಡಾದ (Doda) ದೇಸಾದ ಅರಣ್ಯ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಾತ್ರಿ 9 ಗಂಟೆಯಿಂದ ಉಗ್ರರ ಜೊತೆ ಗುಂಡಿನ ಕಾಳಗ ಆರಂಭವಾಗಿದೆ. ಉಗ್ರರು ಬೆಟ್ಟದ ತುದಿಯಲ್ಲಿ ಅವಿತುಕೊಂಡು ದಾಳಿ ಮಾಡುತ್ತಿರುವ ಕಾರಣ ಕಾರ್ಯಾಚರಣೆ ಕಷ್ಟವಾಗುತ್ತಿದೆ.

    ಕಳೆದ ವಾರ ಕಥುವಾದಲ್ಲಿ ಐವರು ಯೋಧರು ಹುತಾತ್ಮರಾದ ನಂತರ ಜಮ್ಮು ಪ್ರದೇಶದಲ್ಲಿ ನಡೆದ ಎರಡನೇ ಪ್ರಮುಖ ಎನ್‌ಕೌಂಟರ್ ಇದಾಗಿದೆ. ಈ ದಾಳಿಯಲ್ಲಿ ಐವರು ಸೈನಿಕರು ಗಾಯಗೊಂಡಿದ್ದರು, ಕನಿಷ್ಠ 12 ಸೈನಿಕರನ್ನು ಹೊತ್ತ ಎರಡು ಟ್ರಕ್‌ಗಳ ಮೇಲೆ ಉಗ್ರರು ದಾಳಿ ನಡೆಸಿದ್ದರು. ಇದನ್ನೂ ಓದಿ: ಹೆಬ್ಬಾಳೆ ಸೇತುವೆ ಮುಳುಗಡೆ , ಕಳಸ-ಹೊರನಾಡು ಸಂರ್ಪಕ ಕಡಿತ

    ಭಯೋತ್ಪಾದಕರು 500 ಮೀಟರ್ ದೂರದಿಂದ ಟ್ರಕ್‌ಗಳನ್ನು ಗುರಿಯಾಗಿಸಿ ಗ್ರೆನೇಡ್‌ ಎಸೆದಿದ್ದರು. ಉಗ್ರರು ಅಸಾಲ್ಟ್‌ ರೈಫಲ್‌ ಬಳಸಿ ದಾಳಿ ನಡೆಸಿದ್ದರು. ಜಮ್ಮು ಪ್ರದೇಶ ಭಯೋತ್ಪಾದನೆಯಿಂದ ಮುಕ್ತವಾಗಿತ್ತು. ಲೋಕಸಭಾ ಚುನಾವಣಾ ಸಮಯದಲ್ಲಿ ಜಮ್ಮು ಭಾಗದಲ್ಲಿ ಭಾರೀ ಪ್ರಮಾಣದ ಮತದಾನ ನಡೆದಿತ್ತು. ಳೆದ 32 ತಿಂಗಳುಗಳಲ್ಲಿ ಜಮ್ಮು ಪ್ರದೇಶದಲ್ಲಿ ಉಗ್ರರ ಜೊತೆಗಿನ ಕಾಳಗದಲ್ಲಿ 48 ಯೋಧರು ಹುತಾತ್ಮರಾಗಿದ್ದಾರೆ.

     

  • ಕಥುವಾದಲ್ಲಿ ಸೇನೆ ಮೇಲೆ ದಾಳಿ – ಗ್ರಾಮಸ್ಥರಿಗೆ ಬೆದರಿಸಿ ಅಡುಗೆ ಮಾಡುವಂತೆ ಒತ್ತಾಯಿಸಿದ್ದ ಉಗ್ರರು

    ಕಥುವಾದಲ್ಲಿ ಸೇನೆ ಮೇಲೆ ದಾಳಿ – ಗ್ರಾಮಸ್ಥರಿಗೆ ಬೆದರಿಸಿ ಅಡುಗೆ ಮಾಡುವಂತೆ ಒತ್ತಾಯಿಸಿದ್ದ ಉಗ್ರರು

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಥುವಾದಲ್ಲಿ ಸೇನಾ ಬೆಂಗಾವಲು ಪಡೆ ಮೇಲೆ ದಾಳಿ ಮಾಡುವ ಮೊದಲು ಉಗ್ರರು (Terrorists) ಗ್ರಾಮಸ್ಥರಿಗೆ ಬಂದೂಕು ತೋರಿಸಿ ಅಡುಗೆ ಮಾಡುವಂತೆ ಒತ್ತಾಯಿಸಿದ್ದರು ಎಂದು ವರದಿಯಾಗಿದೆ.

    ದಾಳಿಯ ಸಮಯದಲ್ಲಿ ಉಗ್ರರು ಬಾಡಿ ಕ್ಯಾಮೆರಾ (Body Camera) ಧರಿಸಿದ್ದರು. ಅಷ್ಟೇ ಅಲ್ಲದೇ ಸೇನೆಯ ಶಸ್ತ್ರಾಸ್ತ್ರ ಕಸಿದುಕೊಳ್ಳಲು ಮುಂದಾಗಿದ್ದರು.

    ಕಥುವಾ ಜಿಲ್ಲೆಯ ಬದ್ನೋಟಾ ಗ್ರಾಮದ ಬಳಿಯ ಕಡಿದಾದ ಮಚೇಡಿ-ಕಿಂಡ್ಲಿ-ಮಲ್ಹಾರ್ ಪರ್ವತದ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದ ಸೈನಿಕರ ಮೇಲೆ ಹೊಂಚು ಹಾಕಿ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಹಿರಿಯ ಅಧಿಕಾರಿ ಸೇರಿ ಐವರು ಹುತಾತ್ಮರಾಗಿದ್ದರು. ಇದನ್ನೂ ಓದಿ: ಅಕ್ರಮ ಆಸ್ತಿಗಳಿಕೆ ಆರೋಪ – ಹಾರೋಹಳ್ಳಿ ತಹಶೀಲ್ದಾರ್ ಮನೆ ಮೇಲೆ ಲೋಕಾ ದಾಳಿ

    ಭಯೋತ್ಪಾದಕರು ಕಡಿದಾದ ರಸ್ತೆಯನ್ನು ಹೊಂದಿರುವ ಪ್ರದೇಶಗಳಲ್ಲಿ ಹೊಂಚು ಹಾಕಿ ದಾಳಿ ನಡೆಸುತ್ತಿದ್ದಾರೆ. ಇದರಿಂದಾಗಿ ಕೂಡಲೇ ಈ ಜಾಗಗಳಿಗೆ ಸೈನಿಕರನ್ನು ಕಳುಹಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ.

    ಈ ಕೃತ್ಯ ಸಂಬಂಧ 20ಕ್ಕೂ ಹೆಚ್ಚು ಶಂಕಿತರನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ,

    ಕಥುವಾ ದಾಳಿಯನ್ನು ಪಾಕಿಸ್ತಾನಿ ಭಯೋತ್ಪಾದಕರು ನಡೆಸಿದ್ದು, ಅವರು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಾರೆ. ಭಯೋತ್ಪಾದಕರು ಸ್ಥಳೀಯ ಬೆಂಬಲಿಗರ ಸಹಾಯದಿಂದ ಈ ಪ್ರದೇಶದಲ್ಲಿ ಹೊಂಚು ಹಾಕಿ ದಾಳಿ ಮಾಡಿದ್ದಾರೆ. ಉಗ್ರರು M4 ಕಾರ್ಬೈನ್ ರೈಫಲ್‌ಗಳು ಮತ್ತು ಸ್ಫೋಟಕ ಸಾಧನಗಳು ಸೇರಿದಂತೆ ಸುಧಾರಿತ ಶಸ್ತ್ರಾಸ್ತ್ರಗಳನ್ನು ಬಳಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ರಕ್ಷಣಾ ಸಚಿವಾಲಯವು ಸೈನಿಕರ ಬಲಿದಾನವನ್ನು ವ್ಯರ್ಥ ಮಾಡಲು ಬಿಡುವುದಿಲ್ಲ. ಇದಕ್ಕೆ ಪ್ರತೀಕಾರ ತೀರಿಸಲಾಗುವುದು ಎಂದು ಹೇಳಿದೆ.

     

  • ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌ಗೆ ನಾಲ್ವರು ಉಗ್ರರು ಬಲಿ – ಇಬ್ಬರು ಯೋಧರು ಹುತಾತ್ಮ

    ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌ಗೆ ನಾಲ್ವರು ಉಗ್ರರು ಬಲಿ – ಇಬ್ಬರು ಯೋಧರು ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆಯು (Indian Army) ಹೊಡೆದುರುಳಿಸಿದೆ.

    ಜಿಲ್ಲೆಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಿತು. ಈ ಸಂದರ್ಭದಲ್ಲಿ ಒಂದರ ಹಿಂದೆ ಒಂದು ಎಂಬಂತೆ ಎನ್‌ಕೌಂಟರ್‌ಗಳು ನಡೆದವು. ಇದನ್ನೂ ಓದಿ: ಕಾಶ್ಮೀರದಲ್ಲಿ ಭಯೋತ್ಪಾದಕರು-ಭದ್ರತಾಪಡೆಗಳ ನಡುವೆ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ

    ಮೊಡೆರ್ಗಾಮ್ ಗ್ರಾಮದಲ್ಲಿ ಕನಿಷ್ಠ ಇಬ್ಬರು ಭಯೋತ್ಪಾದಕರು (Terrorists) ಇದ್ದಾರೆ ಎಂಬ ಮಾಹಿತಿ ಆಧರಿಸಿ ಮನೆಯ ಮೇಲೆ ಸಿಆರ್‌ಪಿಎಫ್, ಸೇನೆ ಮತ್ತು ಸ್ಥಳೀಯ ಪೊಲೀಸರ ಜಂಟಿ ಪಡೆಗಳು ದಾಳಿ ನಡೆಸಿತು. ದಾಳಿಯ ಸಮಯದಲ್ಲಿ ಭಯೋತ್ಪಾದಕರ ಗುಂಡಿನ ದಾಳಿ ಪರಿಣಾಮವಾಗಿ ಯೋಧರೊಬ್ಬರು ಹುತಾತ್ಮರಾದರು.

    ಕುಲ್ಗಾಮ್‌ನ ಫ್ರಿಸಾಲ್ ಪ್ರದೇಶದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಬಲಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಓರ್ವ ಸೇನಾ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಇದನ್ನೂ ಓದಿ: SEBEX 2: ಭಾರತದಿಂದ ಪರಮಾಣು ರಹಿತ ಬಾಂಬ್‌ ಅಭಿವೃದ್ಧಿ – ಶತ್ರು ರಾಷ್ಟ್ರಗಳಲ್ಲಿ ಹೆಚ್ಚಿದ ನಡುಕ!

    ಉದ್ದೇಶಿತ ಸ್ಥಳದಿಂದ ಭಾರಿ ಗುಂಡಿನ ದಾಳಿಯ ನಡುವೆ ಭಯೋತ್ಪಾದಕರ ಮೃತದೇಹಗಳನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ. ಎನ್‌ಕೌಂಟರ್ ಸ್ಥಳದಲ್ಲಿ ಇನ್ನೂ ಇಬ್ಬರು ಉಗ್ರರು ಇದ್ದಾರೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

  • ಚೀನಾ ಗಡಿ ಭಾಗದಲ್ಲಿ ನದಿ ದಾಟುವಾಗ ಟ್ಯಾಂಕ್‌ ಅಪಘಾತ – ಐವರು ಭಾರತೀಯ ಯೋಧರು ಹುತಾತ್ಮ

    ಚೀನಾ ಗಡಿ ಭಾಗದಲ್ಲಿ ನದಿ ದಾಟುವಾಗ ಟ್ಯಾಂಕ್‌ ಅಪಘಾತ – ಐವರು ಭಾರತೀಯ ಯೋಧರು ಹುತಾತ್ಮ

    – ನದಿ ನೀರಿನ ಮಟ್ಟ ಏರಿಕೆಯಾಗಿ ಟ್ಯಾಂಕ್‌ ಸಮೇತ ಕೊಚ್ಚಿಹೋದ ಸೈನಿಕರು

    ನವದೆಹಲಿ: ಲೇಹ್‌ನ ದೌಲತ್‌ ಬೇಗ್‌ ಓಲ್ಡಿ ಪ್ರದೇಶದ ಎಲ್‌ಎಸಿ (LAC) ಬಳಿ ನದಿ ದಾಟುವ ಅಭ್ಯಾಸದ ವೇಳೆ ಟ್ಯಾಂಕ್‌ ಅಪಘಾತದಲ್ಲಿ ಭಾರತೀಯ ಸೇನೆಯ (Indian Soldiers) ಐವರು ಯೋಧರು ಹುತಾತ್ಮರಾಗಿದ್ದಾರೆ.

    ಶನಿವಾರ ಮುಂಜಾನೆ 1 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಹುತಾತ್ಮರಾದ ಐವರಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಅಥವಾ ಜೆಸಿಒ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇನಲ್ಲಿ ರಾಂಗ್‌ ರೂಟ್‌ನಲ್ಲಿ ಬಂದ ಕಾರಿನಿಂದ ಭೀಕರ ಅಪಘಾತ – 6 ಮಂದಿ ಸ್ಥಳದಲ್ಲೇ ಸಾವು

    ಸೈನಿಕರು ತರಬೇತಿ ಕಾರ್ಯಾಚರಣೆಯಲ್ಲಿದ್ದರು. ಲೇಹ್‌ನಿಂದ 148 ಕಿಲೋಮೀಟರ್ ದೂರದಲ್ಲಿರುವ ಮಂದಿರ್ ಮೋರ್‌ ಬಳಿ ಬೋಧಿ ನದಿಯನ್ನು ತಮ್ಮ T-72 ಟ್ಯಾಂಕ್‌ ಮೂಲಕ ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಲು ಪ್ರಾರಂಭಿಸಿತು. ತಕ್ಷಣವೇ ಟ್ಯಾಂಕ್‌ನೊಂದಿಗೆ ಸೈನಿಕರು ಉಬ್ಬುವ ನದಿಯಲ್ಲಿ ಮುಳುಗಿ ಹೋದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂತಾಪ ಸೂಚಿಸಿದ್ದಾರೆ. ‘ಲಡಾಖ್‌ನಲ್ಲಿ ಸಂಭವಿಸಿದ ದುರದೃಷ್ಟಕರ ಅಪಘಾತದಲ್ಲಿ ನಮ್ಮ ಐವರು ವೀರ ಭಾರತೀಯ ಸೇನೆಯ ಯೋಧರು ಪ್ರಾಣ ಕಳೆದುಕೊಂಡಿದ್ದಕ್ಕಾಗಿ ತೀವ್ರ ದುಃಖವಾಗಿದೆ. ನಾವು ಎಂದಿಗೂ ಆದರ್ಶಪ್ರಾಯವನ್ನು ಮರೆಯುವುದಿಲ್ಲ. ದೇಶಕ್ಕೆ ನಮ್ಮ ಧೀರ ಸೈನಿಕರ ಸೇವೆ ಅಪಾರ. ದುಃಖದ ಸಮಯದಲ್ಲಿ ಅವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಎಕ್ಸ್‌ನಲ್ಲಿ ಸಚಿವರು ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: UGC-NET 2024: ಹೊಸ ದಿನಾಂಕ ಪ್ರಕಟಿಸಿದ ಎನ್‌ಟಿಎ

  • ಮೂರೇ ದಿನಗಳ ಒಳಗೆ ಸಿಕ್ಕಿಂನಲ್ಲಿ 70 ಅಡಿ ಸೇತುವೆ ನಿರ್ಮಿಸಿದ ಸೇನೆ!

    ಮೂರೇ ದಿನಗಳ ಒಳಗೆ ಸಿಕ್ಕಿಂನಲ್ಲಿ 70 ಅಡಿ ಸೇತುವೆ ನಿರ್ಮಿಸಿದ ಸೇನೆ!

    ಗ್ಯಾಂಗ್ಟಾಕ್: ಸಿಕ್ಕಿಂನಲ್ಲಿ (Sikkim) ಇತ್ತೀಚಿನ ಪ್ರವಾಹದಿಂದ ಕಡಿತಗೊಂಡ ಗ್ಯಾಂಗ್ಟಾಕ್‍ನ ಡಿಕ್ಚು-ಸಂಕ್ಲಾಂಗ್ ನಡುವೆ 70 ಅಡಿ ಉದ್ದದ ಸೇತುವೆಯನ್ನು (Bailey Bridge) ಭಾರತೀಯ ಸೇನೆ (Indian Army) 72 ಗಂಟೆಗಳ ಒಳಗೆ ನಿರ್ಮಿಸಿದೆ.

    ಪ್ರವಾಹದಿಂದಾಗಿ ಕಡಿತಗೊಂಡಿದ್ದ ಸಂಪರ್ಕವನ್ನು ಪುನಃಸ್ಥಾಪಿಸಲು ತ್ರಿಶಕ್ತಿ ಕಾರ್ಪ್ಸ್‌ನ ಸೇನಾ ಇಂಜಿನಿಯರ್‌ಗಳು ಜೂ.23 ರಂದು ಸೇತುವೆ ನಿರ್ಮಾಣದ ಕಾರ್ಯವನ್ನು ಆರಂಭಿಸಿದ್ದರು. ಈ ಕಾರ್ಯ ಕೇವಲ 72 ಗಂಟೆಗಳಲ್ಲಿ ಸೇನೆ ಪೂರ್ಣಗೊಳಿಸಿದೆ. ಸೇನೆಯಿಂದ ನಿರ್ಮಾಣವಾದ ಈ ಸೇತುವೆಯ ಮೇಲೆ ಸವಾಲಿನ ಹವಾಮಾನ ಪರಿಸ್ಥಿತಿಗಳಲ್ಲಿಯೂ ದಿಕ್ಚುದಿಂದ ಸಂಕ್ಲಾಂಗ್ ಹಾಗೂ ಚುಂಗ್‍ತಾಂಗ್‍ಗೆ ವಾಹನ ಸಂಚಾರಕ್ಕೆ ಅನುಕೂಲವಾಗಿದೆ. ಈ ಮೂಲಕ ತರ್ತು ಸಂದರ್ಭ ಹಾಗೂ ವೈದ್ಯಕೀಯ ಸಹಾಯವನ್ನು ಒದಗಿಸಲು ಸಹಕಾರಿಯಾಗಿದೆ. ಇದನ್ನೂ ಓದಿ: ನಾಳೆ ದಕ್ಷಿಣ ಕನ್ನಡದ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ – ಎಲ್ಲೆಲ್ಲಿ ಏನಾಗಿದೆ?

    ಸೇತುವೆ ನಿರ್ಮಾಣಗೊಂಡ ಸ್ಥಳಕ್ಕೆ ರಾಜ್ಯ ಅರಣ್ಯ ಸಚಿವ ಮತ್ತು ವಿಪತ್ತು ನಿರ್ವಹಣೆಯ ರಾಜ್ಯ ಕಾರ್ಯದರ್ಶಿ ಪಿಂಟ್ಸೊ ನಾಮ್ಗ್ಯಾಲ್ ಲೆಪ್ಚಾ ಭೇಟಿ ನೀಡಿ, ಸೇತುವೆಯ ಪರಿಶೀಲನೆ ನಡೆಸಿದ್ದಾರೆ. ಬಳಿಕ ತ್ವರಿತ ಗತಿಯಲ್ಲಿ ಸೇತುವೆ ಪೂರ್ಣಗೊಳಿಸುವಲ್ಲಿ ಯಶಸ್ವಿಯಾದ ಸೇನೆಯ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

    ಜೂ.11 ರಿಂದ ಸುರಿದ ನಿರಂತರ ಮಳೆಯು ಉತ್ತರ ಸಿಕ್ಕಿಂನಲ್ಲಿ ತೀವ್ರ ಹಾನಿ ಉಂಟುಮಾಡಿದೆ. ಹಲವೆಡೆ ಸೇತುವೆ ಕುಸಿತ, ಭೂಕುಸಿತ ಸಂಭವಿಸಿ ಸಂಪರ್ಕ ಕಡಿತಗೊಂಡಿವೆ. ಇದನ್ನೂ ಓದಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಕೇಸ್ – ಆರೋಪಿ ಅರುಣ್ ಚೌಗಲೆ ಜಾಮೀನು ಅರ್ಜಿ ವಜಾ