Tag: indian army

  • ಮಣಿಪುರ ಹಿಂಸಾಚಾರದ ವೇಳೆ ಕರ್ತವ್ಯ ನಿರ್ವಹಿಸಿದ್ದ ಹಾಸನ ಜಿಲ್ಲೆಯ ಯೋಧ ಅನಾರೋಗ್ಯದಿಂದ ನಿಧನ

    ಮಣಿಪುರ ಹಿಂಸಾಚಾರದ ವೇಳೆ ಕರ್ತವ್ಯ ನಿರ್ವಹಿಸಿದ್ದ ಹಾಸನ ಜಿಲ್ಲೆಯ ಯೋಧ ಅನಾರೋಗ್ಯದಿಂದ ನಿಧನ

    ಹಾಸನ: ಕಳೆದ 31 ವರ್ಷಗಳಿಂದ ಸಿಆರ್‌ಪಿಎಫ್ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲೆಯ ಯೋಧರೊಬ್ಬರು ಅನಾರೋಗ್ಯದಿಂದ ಸಾವನ್ನಪಿರುವ ಘಟನೆ ಮಣಿಪುರದಲ್ಲಿ (Manipur) ನಡೆದಿದೆ.

    ಜಿಲ್ಲೆಯ ಕೆ.ಆರ್.ಪುರಂನ ಪದ್ಮರಾಜು (52) ಮೃತ ಯೋಧರು. ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಶುಕ್ರವಾರ ಮಣಿಪುರದಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಬೆಳಗ್ಗೆ 11ರಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಮೃತ ಯೋಧ ಪದ್ಮರಾಜು ಕಳೆದ 31 ವರ್ಷಗಳಿಂದ ಸಿಆರ್‌ಪಿಎಫ್‌ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಣಿಪುರದಲ್ಲಿ ನಡೆದ ಹಿಂಸಾಚಾರದ ವೇಳೆಯೂ ಅವರು ಕರ್ತವ್ಯ ನಿರ್ವಹಿಸಿದ್ದರು ಎಂದು ತಿಳಿದುಬಂದಿದೆ.

    ಕೆ.ಆರ್.ಪುರಂನ ಅವರ ನಿವಾಸಕ್ಕೆ ಪಾರ್ಥಿವ ಶರೀರ ತರಲಾಗಿದ್ದು, ನೂರಾರು ಮಂದಿ ಮೃತ ಯೋಧನ ಅಂತಿಮ ದರ್ಶನಕ್ಕೆ ಬರುತ್ತಿದ್ದಾರೆ. ಇಂದು (ಶನಿವಾರ) ಮಧ್ಯಾಹ್ನ ಹಾಸನ‌ (Hassan) ನಗರ ಹೊರವಲಯದ ಬಿಟ್ಟಗೋಡನಹಳ್ಳಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

    ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದು, ಕುಟುಂಬದಲ್ಲಿ ನೀರವ ಮೌನ ಆವರಿಸಿದೆ. ಇದನ್ನೂ ಓದಿ: ಠಾಣೆಯಲ್ಲಿ ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡ್ತಿದ್ದಾಗ ಮಹಿಳೆಗೆ ಗುಂಡೇಟು – ಸ್ಥಿತಿ ಗಂಭೀರ

  • ಜಮ್ಮು ಕಾಶ್ಮೀರದಲ್ಲಿ ಪೊಲೀಸರ ದಾಳಿ – ಉಗ್ರರಿಗೆ ನೆರವು ನೀಡುತ್ತಿದ್ದ ಇಬ್ಬರು ಅರೆಸ್ಟ್

    ಜಮ್ಮು ಕಾಶ್ಮೀರದಲ್ಲಿ ಪೊಲೀಸರ ದಾಳಿ – ಉಗ್ರರಿಗೆ ನೆರವು ನೀಡುತ್ತಿದ್ದ ಇಬ್ಬರು ಅರೆಸ್ಟ್

    ಶ್ರೀನಗರ: ಭಯೋತ್ಪಾದನ ಕೃತ್ಯಗಳನ್ನು ನಡೆಸಲು ಉಗ್ರರೊಂದಿಗೆ ಕೈ ಜೋಡಿಸಿದ್ದ ಇಬ್ಬರು ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರದ (Jammu And Kashmir) ರಜೌರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಮೊಹಮ್ಮದ್ ಫಾರೂಕ್ ಮತ್ತು ಮೊಹಮ್ಮದ್ ನಜೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಬುಧಾಲ್ ಪ್ರದೇಶದ ಬೆಹ್ರೋಟ್ ಗ್ರಾಮದಲ್ಲಿ ಶೋಧ ಕಾರ್ಯ ನಡೆಸಿದಾಗ ಸಂದರ್ಭದಲ್ಲಿ ಆರೋಪಿಗಳ ಬಳಿ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳು ಪತ್ತೆಯಾಗಿವೆ. ಆರೋಪಿಗಳು ಉಗ್ರರಿಗೆ ಮಾಹಿತಿ ನೀಡುವುದು ಸೇರಿದಂತೆ ಅನೇಕ ರೀತಿಯ ನೆರವು ನೀಡಿರುವ ಶಂಕೆ ಇದೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ಗುಡ್‍ನ್ಯೂಸ್

    ಬಂಧಿತರಿಂದ ಒಂದು ಪಿಸ್ತೂಲ್, ಎರಡು ಮ್ಯಾಗ್‍ಜಿನ್, 30 ಸಜೀವ ಗುಂಡುಗಳು, ಎರಡು ಹ್ಯಾಂಡ್ ಗ್ರೆನೇಡ್ ಮತ್ತು ವೈರ್ ಕಟ್ಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇತ್ತೀಚೆಗೆ ಕಾಶ್ಮೀರದಲ್ಲಿ ಸೇನೆ (Indian Army) ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು. ಇದಾದ ಬಳಿಕ ಸೇನೆ ಉಗ್ರರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಸ್ಥಳೀಯವಾಗಿ ಉಗ್ರರಿಗೆ ನೆರವು ನೀಡುವವರ ಮಾಹಿತಿ ಕಲೆ ಹಾಕಿ ಅಗತ್ಯ ಕ್ರಮಕ್ಕೆ ಮುಂದಾಗಿದೆ. ಇದನ್ನೂ ಓದಿ: ಟಿಪ್ಪರ್, ಕಾರಿನ ನಡುವೆ ಭೀಕರ ಅಪಘಾತ ಬಾಲಕಿ ಸೇರಿ ಇಬ್ಬರ ಸಜೀವ ದಹನ

  • ಪ್ರಾಂಜಲ್ ಕುಟುಂಬಕ್ಕೆ ಕೂಡಲೇ ಪರಿಹಾರ ಬಿಡುಗಡೆಗೆ ಸಂಸದ ತೇಜಸ್ವಿ ಸೂರ್ಯ ಆಗ್ರಹ

    ಪ್ರಾಂಜಲ್ ಕುಟುಂಬಕ್ಕೆ ಕೂಡಲೇ ಪರಿಹಾರ ಬಿಡುಗಡೆಗೆ ಸಂಸದ ತೇಜಸ್ವಿ ಸೂರ್ಯ ಆಗ್ರಹ

    ನವದೆಹಲಿ: ಕಾಶ್ಮೀರದ (Kashmir) ರಜೌರಿಯಲ್ಲಿ ಭಯೋತ್ಪಾದಕರ (Terrorists) ವಿರುದ್ಧ ಕಾರ್ಯಚರಣೆಯಲ್ಲಿ ಹುತಾತ್ಮರಾದ ಬೆಂಗಳೂರು (Bengaluru) ಮೂಲದ ಕ್ಯಾಪ್ಟನ್ ಪ್ರಾಂಜಲ್ (Captain Pranjal) ಅವರ ಕುಟುಂಬಕ್ಕೆ ಇನ್ನೂ ಪರಿಹಾರ (Compensation) ಹಣ ನೀಡಿಲ್ಲ. ಸಿಎಂ ಕೂಡಲೇ ಈ ಬಗ್ಗೆ ಗಮನ ಹರಿಸಿ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಆಗ್ರಹಿಸಿದ್ದಾರೆ.

    ಈ ಬಗ್ಗೆ ನವದೆಹಲಿಯಲ್ಲಿ (New Delhi) ಮಾತನಾಡಿದ ಅವರು, ಕಳೆದ 2 ವಾರದ ಹಿಂದೆ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮರಾಗಿದ್ದರು. ಅವರ ಪಾರ್ಥಿವ ಶರೀರ ಬೆಂಗಳೂರಿಗೆ ತರುವಾಗ ರಾಜ್ಯಪಾಲರು, ಸಿಎಂ ಸೇರಿ ಎಲ್ಲರೂ ಹೆಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ತೆರಳಿದ್ದೆವು. ಅಂದು ಮುಖ್ಯಮಂತ್ರಿಗಳಿಗೆ ನಾನು ಮತ್ತು ವಿಜಯೇಂದ್ರ ಅವರು 50 ಲಕ್ಷ ರೂ. ಪರಿಹಾರ ನೀಡಲು ಮನವಿ ಮಾಡಿದ್ದೆವು. ಅದರಂತೆ ಸಿಎಂ ಪರಿಹಾರ ಘೋಷಣೆ ಮಾಡಿದ್ದರು ಎಂದರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವು – ಜೋತಿರಾದಿತ್ಯ ಸಿಂಧಿಯಾ ಬಣಕ್ಕೆ ಖುಷಿ ಕೊಡದ ಫಲಿತಾಂಶ

    ಯಾರೇ ಸೈನಿಕರು ಹುತಾತ್ಮರಾದರೂ 50 ಲಕ್ಷ ರೂ. ಪರಿಹಾರ ಕೊಡಬಹುದು ಎಂದು ನಿಯಮ ಇದೆ. ಮುಖ್ಯಮಂತ್ರಿಗಳು ಸಹ ಅವತ್ತು ಪರಿಹಾರ ಘೋಷಣೆ ಮಾಡಿದ್ದರು. ಎರಡು ದಿನದ ಹಿಂದೆ ನಾನು ಪ್ರಾಂಜಲ್ ತಂದೆಗೆ ಫೋನ್ ಮಾಡಿ ಪರಿಹಾರದ ಮಾಹಿತಿ ಪಡೆದೆ. ಅವರ ತಂದೆ ಇವತ್ತಿನವರೆಗೂ ಸಹ ನನಗೆ ಯಾವುದೇ ಫೋನ್ ಬಂದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹಾವು ಏಣಿಯಾಟ – ಅತಿದೊಡ್ಡ, ಅತಿಸಣ್ಣ ನಿರ್ಣಾಯಕ ಗೆಲುವುಗಳಿವು

    ಪರಿಹಾರ ಹಣ ಬಿಡುಗಡೆಗೆ ನಾನು ಸಿಎಂ, ಡಿಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದೇನೆ. ಸಿಎಂಗೆ ಮಾಧ್ಯಮದವರು ಈ ಬಗ್ಗೆ ಪ್ರಶ್ನೆ ಕೇಳಿದರೆ ಪ್ರಾಂಜಲ್ ಅಂದರೆ ಯಾರು? ನಾವೆಲ್ಲಿ ಪರಿಹಾರ ಕೊಡುತ್ತೇವೆ ಎಂದು ಹೇಳಿದ್ದೆವು ಎಂದು ಬೇಜವಾಬ್ದಾರಿಯುತವಾಗಿ ಮಾತನಾಡಿದ್ದಾರೆ. ಓರ್ವ ಯೋಧನ ಬಗ್ಗೆ ಮುಖ್ಯಮಂತ್ರಿಗಳು ಹೀಗೆ ಮಾತನಾಡಿದ್ದು ನೋಡಿ ಬಹಳ ಬೇಸರ ಆಯಿತು ಎಂದರು. ಇದನ್ನೂ ಓದಿ: ಬಿಜೆಪಿಗೆ ಭರ್ಜರಿ ಜಯ, ಹೂಡಿಕೆದಾರರ ಸಂಪತ್ತು ಒಂದೇ ದಿನ 6 ಲಕ್ಷ ಕೋಟಿ ಹೆಚ್ಚಳ – ದಾಖಲೆ ಬರೆದ ಸೆನ್ಸೆಕ್ಸ್‌

    ಪ್ರಾಂಜಲ್ ಮೃತದೇಹ ಬೆಂಗಳೂರಿಗೆ ಬಂದಾಗ ಮುಖ್ಯಮಂತ್ರಿಗಳ ಕಣ್ಣಲ್ಲೂ ಸಹ ನೀರಿತ್ತು. ಅವರು ಸಹ ಭಾವುಕರಾಗಿದ್ದರು. ಆದರೆ ಈಗಾಗಲೇ 15 ದಿನ ಆಯಿತು. ಇನ್ನೂ ಪರಿಹಾರ ಬಂದಿಲ್ಲ. ಆದಷ್ಟು ಬೇಗ ಪರಿಹಾರ ಹಣ ಬಿಡುಗಡೆ ಮಾಡಬೇಕಾಗಿರುವುದು ಸಿಎಂ ಜವಾಬ್ದಾರಿ. ಮುಖ್ಯಮಂತ್ರಿಗಳು ಎಲ್ಲರ ಬಳಿ ಕ್ಷಮೆ ಕೇಳಬೇಕು ಹಾಗೂ ಈ ಕೂಡಲೇ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: Mizoram Election Results: ʻಕೈʼ ಹಿಡಿಯದ ಮಿಜೋರಾಂ – ZPMಗೆ ಗೆಲುವು, 2 ಕ್ಷೇತ್ರಗಳಲ್ಲಿ ಅರಳಿದ ಕಮಲ

  • ತಂದೆ ಪ್ರತಿಷ್ಠಿತ ಕಂಪನಿ ಎಂಡಿ.. ದೊಡ್ಡ ಕುಟುಂಬದವರಾದ್ರೂ ಸೇನೆ ಸೇರಿದ್ರು ಪ್ರಾಂಜಲ್: ತರಬೇತುದಾರರ ಮನದಾಳ

    ತಂದೆ ಪ್ರತಿಷ್ಠಿತ ಕಂಪನಿ ಎಂಡಿ.. ದೊಡ್ಡ ಕುಟುಂಬದವರಾದ್ರೂ ಸೇನೆ ಸೇರಿದ್ರು ಪ್ರಾಂಜಲ್: ತರಬೇತುದಾರರ ಮನದಾಳ

    ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿ (Jammu Kashmir) ಉಗ್ರರ ಗುಂಡಿನ ದಾಳಿಗೆ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ (Captain Pranjal) ದೊಡ್ಡ ಕುಟುಂಬದಿಂದ ಬಂದು ಸೈನ್ಯ ಸೇರಿದ್ದರು ಎಂದು ಪ್ರಾಂಜಲ್ ಅವರ ತರಬೇತುದಾರ ಹಾಗೂ ಮಾರ್ಗದರ್ಶಕರಾದ ನಾಯಕ್ ಭಾಸ್ಕರ್ ರೈ (Nayak Bhaskar Rai) ತಿಳಿಸಿದ್ದಾರೆ.

    ಮೃತ ಪ್ರಾಂಜಲ್ ಅಂತಿಮ ದರ್ಶನದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಾಂಜಲ್ ಅವರಿಗೆ ಹುಟ್ಟುವಾಗಲೇ ಸೈನಿಕರ ರಕ್ತ ಇತ್ತೇನೋ. ಅಂತಹ ದೇಶಭಕ್ತಿ ಹಾಗೂ ಸೈನ್ಯಕ್ಕೆ ಸೇರುವ ಒಂದು ಅಚಲ ನಿರ್ಧಾರವನ್ನು ಅವರು ಇಟ್ಟುಕೊಂಡಿದ್ದರು. ಪ್ರಾಂಜಲ್ ತಮ್ಮ ಪಿಯುಸಿ ಶಿಕ್ಷಣ ಮುಗಿಸಿದ ಬಳಿಕ ನನಗೆ ಅವರ ಸಂಪರ್ಕವಾಯಿತು. ಅದರ ಬಳಿಕ ಅವರು ಎಸ್‌ಎಸ್‌ಬಿಗೆ ತಯಾರಿ ನಡೆಸಿ, ಅದರಲ್ಲಿ ಪಾಸಾಗುತ್ತಾರೆ. ಈ ಸಂದರ್ಭದಲ್ಲಿ ಸಾಕಷ್ಟು ಮಾಹಿತಿಗಳನ್ನು ಪಡೆದುಕೊಂಡು ಪರೀಕ್ಷಾ ತಯಾರಿಯನ್ನು ನಡೆಸುತ್ತಿದ್ದರು. ದೈಹಿಕ ಪರೀಕ್ಷೆ ಹಾಗೂ ಸುಧಾರಣೆಗೆ ನನ್ನ ಬಳಿ ಬರುತ್ತಿದ್ದರು. ಆ ಬಗ್ಗೆ ನಾನು ಅನೇಕ ಟಿಪ್ಸ್‌ಗಳನ್ನು ಕೊಡುತ್ತಿದ್ದೆ ಎಂದು ನೆನಪಿಸಿಕೊಂಡರು. ಇದನ್ನೂ ಓದಿ: 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮತ್ತೆ ಸ್ಥಗಿತ

    ಪ್ರಾಂಜಲ್ ಒಬ್ಬ ಒಳ್ಳೆಯ ಕ್ರೀಡಾಪಟು ಆಗಿದ್ದರಿಂದ ಒಳ್ಳೆ ಮೈಕಟ್ಟು ಹೊಂದಿದ್ದರು. ಸೇನೆಗೆ ಸೇರುವಂತಹ ಎಲ್ಲಾ ಅರ್ಹತೆಗಳು ಅವರಲ್ಲಿತ್ತು. ಅವರಂತಹ ದೊಡ್ಡ ಕುಟುಂಬದಿಂದ ಬಂದವರು ಸೇನೆಗೆ ಸೇರುವುದು ಬಹಳ ಕಡಿಮೆ. ಯಾಕೆಂದರೆ ಅವರ ತಂದೆ ಒಂದು ಪ್ರತಿಷ್ಠಿತ ಕಂಪನಿಯ ಎಂಡಿಯಾಗಿದ್ದರು. ಅವರ ಮಕ್ಕಳಿಗೆ ವಿದೇಶದಲ್ಲಿ ಶಿಕ್ಷಣ ಕೊಡಿಸಬಹುದಾಗಿತ್ತು. ಅದೇ ರೀತಿ ಬೇರೆ ಬೇರೆ ಕೆಲಸಗಳಿಗೂ ಹೋಗಬಹುದಿತ್ತು. ಆದರೂ ಅವರು ತಮ್ಮ ಮಗನನ್ನು ಸೇನೆಗೆ ಕಳುಹಿಸಿದರು. ಪ್ರಾಂಜಲ್ ಅವರು ಕೂಡ ಅದನ್ನೇ ಒಪ್ಪಿಕೊಂಡು ದೇಶಕ್ಕೋಸ್ಕರ ಸೇವೆ ಮಾಡಿದ್ದು, ಇಂದು ವೀರಮರಣವನ್ನಪ್ಪಿದ್ದಾರೆ ಎಂದು ಸಂತಾಪ ಸೂಚಿಸಿದರು. ಇದನ್ನೂ ಓದಿ: ಸಿದ್ದಗಂಗಾ ಶ್ರೀಗಳ ಮುಂದೆ ಚುನಾವಣಾ ಸೋಲಿನ ನೋವು ತೋಡಿಕೊಂಡ ವಿ.ಸೋಮಣ್ಣ

    ಪ್ರಾಂಜಲ್ ಕಮಿಷನ್ಡ್ ಆಗಿ ವಾಪಸ್ ಬಂದು ನನ್ನನ್ನು ಭೇಟಿಯಾದ ಸಂದರ್ಭದಲ್ಲಿ ನಾನು ಅವರಿಗೆ ಒಂದು ಮಾತು ಹೇಳಿದ್ದೆ. ನಿಮ್ಮ ತಂದೆ ಇಷ್ಟು ದೊಡ್ಡ ಕಂಪನಿಯಲ್ಲಿ ಎಂಡಿ ಆಗಿದ್ದಾರೆ. ನೀವೊಬ್ಬ ಜನರಲ್ ಆಗುತ್ತೀರಿ ಎಂದು ಹೇಳಿದ್ದೆ. ದೇವರ ಇಚ್ಛೆ ಇಂದು ಈ ಸ್ಥಿತಿಯಲ್ಲಿ ನಾವು ಅವರನ್ನು ಕಾಣಬೇಕಾಗಿದೆ. ಅವರ ಕಲಿಕೆಯ ವಿಷಯಕ್ಕೆ ಸಂಬಂಧಪಟ್ಟಂತೆ ಹೇಳುವಂತಹ ಜ್ಞಾನ ನನ್ನಲ್ಲಿ ಇರಲಿಲ್ಲ. ಈ ಬಗ್ಗೆ ಅವರೇ ಪೂರಕ ಮಾಹಿತಿಗಳನ್ನು ಪಡೆದುಕೊಂಡು ತಯಾರಿ ನಡೆಸಿದ್ದರು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: Kambala: ಇಂದಿನಿಂದ 2 ದಿನ ಬೆಂಗ್ಳೂರಿನಲ್ಲಿ ಕಂಬಳದ ರಂಗು – ಸಾರ್ವಜನಿಕರಿಗೆ ಪ್ರವೇಶ ಉಚಿತ

  • ವೀರ ಮರಣ ಹೊಂದಿದ ಪ್ರಾಂಜಲ್‌ಗೆ ಕಣ್ಣೀರ ನಮನ – ಪುಣ್ಯಪುರುಷ ಎಂದು ಆರ್.ಅಶೋಕ್ ಭಾವುಕ

    ವೀರ ಮರಣ ಹೊಂದಿದ ಪ್ರಾಂಜಲ್‌ಗೆ ಕಣ್ಣೀರ ನಮನ – ಪುಣ್ಯಪುರುಷ ಎಂದು ಆರ್.ಅಶೋಕ್ ಭಾವುಕ

    ಬೆಂಗಳೂರು: ಜಮ್ಮು-ಕಾಶ್ಮೀರ (Jammu And Kashmir) ರಜೌರಿಯಲ್ಲಿ ಉಗ್ರರರ ವಿರುದ್ಧ ನಡೆದ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರ ಅಂತಿಮ ದರ್ಶನ ಮುಕ್ತಾಯಗೊಂಡಿದ್ದು, ಅಂತ್ಯಕ್ರಿಯೆಗಾಗಿ ಮೆರವಣಿಗೆ ಸಾಗಿದೆ. ಕೂಡ್ಲುಗೇಟ್‌ನ ಸೋಮಸುಂದರ್ ಪಾಳ್ಯ ರಸ್ತೆಯ ವಿದ್ಯುತ್ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರಾದಾಯದಂತೆ ಅಂತಿಮ ಸಂಸ್ಕಾರ ನಡೆಯಲಿದ್ದು, ಪ್ರಾಂಜಲ್‌ ಅವರ ಪಾರ್ಥೀವ ಶರೀರವನ್ನು ಹೊತ್ತ ವಾಹನ ಮೆರವಣಿಗೆಯಲ್ಲಿ ಸಾಗಿದೆ.

    ಬೆಳಗ್ಗೆ 7 ಗಂಟೆಯಿಂದ 9:30ರ ವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬಳಿಕ 9:45 ರಿಂದ 10:15ರ ವರೆಗೆ ಗಣ್ಯರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ದರ್ಶನ ಪಡೆದ ಪ್ರಾಂಜಲ್ ಸ್ನೇಹಿತರು, ಕುಟುಂಬಸ್ಥರು ಹಾಗೂ ರಾಜಕೀಯ ನಾಯಕರು ಪ್ರಾಂಜಲ್ ಬಗೆಗಿನ ಭಾವುಕ ನುಡಿಗಳನ್ನು `ಪಬ್ಲಿಕ್ ಟಿವಿ’ಯೊಂದಿಗೆ ಹಂಚಿಕೊಂಡಿದ್ದಾರೆ.

    ದೇಶಕ್ಕಾಗಿ ಹೋರಾಡಿದ ಪುಣ್ಯಪುರುಷ:
    ಕ್ಯಾಪ್ಟನ್ ಪ್ರಾಂಜಲ್ ನಮ್ಮೆಲ್ಲರನ್ನು ಅಗಲಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸೇನೆಯಲ್ಲಿ ಧೈರ್ಯ ಶೌರ್ಯದಿಂದ ಹೋರಾಡಿ ವೀರ ಮರಣವನ್ನಪ್ಪಿದ್ದಾರೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಪುಣ್ಯಪುರುಷ ಪ್ರಾಂಜಲ್. ಈ ರೀತಿ ಕರ್ನಾಟಕದ ಮಣ್ಣಿನ ಗುಣ ಅನೇಕ ಜನರಿಗೆ ಇದೆ. ಪ್ರಾಂಜಲ್ ಅವರ ದೇಶ ಸೇವೆ ಇತರರಿಗೆ ಮಾದರಿಯಾಗಲಿದೆ. ಅವರು ಅಗಲಿದ್ದರೂ ನಮ್ಮೆಲ್ಲರ ಹೃದಯದಲ್ಲಿ ನೆಲೆಸಿದ್ದಾರೆ ಎಂದು ವಿಧಾನಸಭಾ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

    ಯೋಧನಿಲ್ಲದೇ ಬದುಕು ಸಾಧ್ಯವಿಲ್ಲ:
    ಒಬ್ಬ ಯೋಧ ಇಲ್ಲದಿದ್ದರೆ ನಾವು ಬುದುಕೋಕೆ ಸಾಧ್ಯವಿಲ್ಲ. ಪ್ರಾಂಜಲ್ ಅವರನ್ನು ಕಳೆದುಕೊಂಡ ದುಃಖದಲ್ಲಿ ನಾವಿದ್ದೇವೆ. ಅವರಿಗೆ ಅಂತಿಮ ನಮನ ಸಲ್ಲಿದ್ದೇವೆ. ಅವರ ಕುಟುಂಬಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂಸದ ಡಿ.ಕೆ ಸುರೇಶ್ ತಿಳಿಸಿದ್ದಾರೆ.

    ಪತ್ನಿ ಜೊತೆ ಮನೆಗೆ ಬಂದಿದ್ರು:
    ಪ್ರಾಂಜಲ್‌ನ ತುಂಬಾ ಮಿಸ್ ಮಾಡ್ಕೊಂಡಿದ್ದೇವೆ. ಜೂನ್‌ನಲ್ಲಿ ಮನೆಗೆ ಪತ್ನಿ ಜೊತೆ ಬಂದಿದ್ದ. ಪ್ರಾಂಜಲ್ ನನ್ನ ಮಗಳ ಕ್ಲಾಸ್‌ಮೇಟ್ ಆಗಿದ್ರು. ನಮ್ಮ ಕುಟುಂಬದ ಜೊತೆ ತುಂಬಾ ಅನ್ಯೋನ್ಯವಾಗಿದ್ದರು ಎಂದು ಪ್ರಾಂಜಲ್ ಅವರ ಹೈಸ್ಕೂಲ್ ಟೀಚರ್ ಸುಮಾದೇವಿ ಭಾವುಕವಾಗಿ ಮಾತನಾಡಿದ್ದಾರೆ.

  • ಹುತಾತ್ಮ ಯೋಧ ಪ್ರಾಂಜಲ್ ಪಾರ್ಥಿವ ಶರೀರ ಬೆಂಗಳೂರಿಗೆ ಆಗಮನ

    ಹುತಾತ್ಮ ಯೋಧ ಪ್ರಾಂಜಲ್ ಪಾರ್ಥಿವ ಶರೀರ ಬೆಂಗಳೂರಿಗೆ ಆಗಮನ

    ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾದ ಜಿಗಣಿಯ ಕ್ಯಾಪ್ಟನ್ ಪ್ರಾಂಜಲ್ (Captain Pranjal) ಮೃತದೇಹ ಬೆಂಗಳೂರಿಗೆ (Bengaluru) ಆಗಮಿಸಿದೆ.

    ಹೆಚ್‍ಎಎಲ್‍ನಲ್ಲಿ (HAL) ಮೃತ ಯೋಧನ ಪಾರ್ಥಿವ ಶರೀರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್, ಸಚಿವ ಕೆ.ಜೆ ಜಾರ್ಜ್, ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಮುಂತಾದ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಹುತಾತ್ಮ ಯೋಧನ ತಾಯಿಯ ರೋಧನೆ ನಡುವೆ ರಾಜಕಾರಣಿಗಳ ಫೋಟೋಶೂಟ್- ನೆಟ್ಟಿಗರಿಂದ ಕ್ಲಾಸ್

    ಬುಧವಾರ ಹಾಗೂ ಗುರುವಾರದ ನಡುವೆ ರಜೌರಿಯಲ್ಲಿ ಉಗ್ರರು ಹಾಗೂ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಯೋಧರು ಸಾವಿಗೀಡಾಗಿದ್ದರು. ಇದರಲ್ಲಿ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಕೂಡ ಸೇರಿದ್ದಾರೆ. ಅವರ ಪಾರ್ಥಿವ ಶರೀರವನ್ನು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಸಮೀಪದ ನಂದನವನ ಬಡಾವಣೆಯ ನಿವಾಸಕ್ಕೆ ತರಲಾಗುತ್ತಿದೆ. ಜಮ್ಮು ಕಾಶ್ಮೀರದಿಂದ 11.30 ಕ್ಕೆ ವಿಶೇಷ ಸೇನೆಯ ವಿಮಾನದ ಮೂಲಕ ಪಾರ್ಥಿವ ಶರೀರವನ್ನು ಜಮ್ಮು ಕಾಶ್ಮೀರದಿಂದ ದೆಹಲಿಗೆ ತರಲಾಗಿತ್ತು. ಬಳಿಕ ದೆಹಲಿಯಿಂದ ಬೆಂಗಳೂರಿನ ಎಚ್‍ಎಎಲ್‍ಗೆ ತರಲಾಯಿತು.

    ಎಚ್‍ಎಎಲ್ ನಿಂದ ರಸ್ತೆ ಮಾರ್ಗವಾಗಿ ಅಂಬುಲೆನ್ಸ್ ಮೂಲಕ ಜಿಗಣಿಗೆ ಪಾರ್ಥಿವ ಶರೀರವನ್ನು ಸಾಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನಂದನವನ ಬಡಾವಣೆಯ ನಿವಾಸದಲ್ಲಿ ರಾತ್ರಿ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರಕ್ಕೆ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ-ವಿಧಾನ ನಡೆಸಲು ಈಗಾಗಲೇ ಕುಟುಂಬಸ್ಥರು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಕಾರ್ಯದಲ್ಲಿ ಕೇವಲ ಕುಟುಂಬಸ್ಥರಿಗೆ ಮಾತ್ರ ಅವಕಾಶ ಇದೆ.

    ಶನಿವಾರ ಬೆಳಗ್ಗೆ ಪಾರ್ಥಿವ ಶರೀರಕ್ಕೆ ಮಿಲಿಟರಿ ಪಡೆಯಿಂದ ಸರ್ಕಾರಿ ಗೌರವ ಸಲ್ಲಿಸಲಾಗುತ್ತದೆ. 7 ರಿಂದ 10 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನು ಕಲ್ಪಿಸಲು ಜಿಗಣಿ ಪೊಲೀಸರು ಹಾಗೂ ಈಗಾಗಲೇ ಸ್ಥಳದಲ್ಲಿ ಬೀಡುಬಿಟ್ಟಿರುವ ಮಿಲಿಟರಿ ಪಡೆಯ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಅಂತಿಮ ದರ್ಶನದ ಬಳಿಕ ಸೋಮ ಸುಂದರ ಪಾಳ್ಯದ ಕೂಡ್ಲು ಗೇಟ್ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆಯಾಗಿದೆ.

    ಅಂತಿಮ ನಮನದ ಬಳಿಕ ಸಿದ್ದರಾಮಯ್ಯ ಮಾತನಾಡಿ, ಸಾರ್ವಜನಿಕರ ರಕ್ಷಣೆಗಾಗಿ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮರಾಗಿದ್ದಾರೆ. ಅವರ ಈ ಅಗಲುವಿಕೆ ದುಃಖ ತಂದಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನಿಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಸರ್ಕಾರದಿಂದ 50.ಲಕ್ಷ ರೂ. ಪರಿಹಾರ ಕೊಡುತ್ತೇವೆ ಎಂದಿದ್ದಾರೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾತನಾಡಿ, ಹುತಾತ್ಮ ಯೋಧನ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ, ಹುತಾತ್ಮ ಯೋಧನಿಗೆ ಗೌರವಾರ್ಥವಾಗಿ ಶನಿವಾರ ರಾಜ್ಯ ಸರ್ಕಾರದ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯನ್ನು ಕೈಬಿಟ್ಟಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ತಾಯಿ-ಮಗು ಸಜೀವ ದಹನಕ್ಕೆ ದೃಶ್ಯಸಾಕ್ಷ್ಯದ ಬೆನ್ನಲ್ಲೇ ಹೆಲ್ಪ್‌ಲೈನ್

  • ಹುತಾತ್ಮ ಯೋಧನ ತಾಯಿಯ ರೋಧನೆ ನಡುವೆ ರಾಜಕಾರಣಿಗಳ ಫೋಟೋಶೂಟ್- ನೆಟ್ಟಿಗರಿಂದ ಕ್ಲಾಸ್

    ಹುತಾತ್ಮ ಯೋಧನ ತಾಯಿಯ ರೋಧನೆ ನಡುವೆ ರಾಜಕಾರಣಿಗಳ ಫೋಟೋಶೂಟ್- ನೆಟ್ಟಿಗರಿಂದ ಕ್ಲಾಸ್

    ಲಕ್ನೋ: ಹುತಾತ್ಮ ಯೋಧನ ತಾಯಿಯ ರೋಧನೆ ನಡುವೆ ಉತ್ತರ ಪ್ರದೇಶದ (Uttar Pradesh) ಇಬ್ಬರು ರಾಜಕಾರಣಿಗಳು ಫೋಟೋಗಾಗಿ ಪೋಸ್ ಕೊಟ್ಟಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

    ಉತ್ತರ ಪ್ರದೇಶ ಕ್ಯಾಬಿನೆಟ್ ಸಚಿವ ಯೋಗೇಂದ್ರ ಉಪಾಧ್ಯಾಯ ಮತ್ತು ಬಿಜೆಪಿ (BJP) ಶಾಸಕ ಜಿಎಸ್ ಧರ್ಮೇಶ್ ಅವರು ಹುತಾತ್ಮರಾದ ಕ್ಯಾಪ್ಟನ್ ಶುಭಂ ಗುಪ್ತಾ ಅವರ ತಾಯಿಗೆ ಚೆಕ್ ಹಸ್ತಾಂತರಿಸುವಾಗ ಫೋಟೋಗೆ ಪೋಸ್ ನೀಡಿದ್ದಾರೆ. ಈ ವೇಳೆ ಗುಪ್ತಾ ಅವರ ತಾಯಿ ಇದನ್ನು ಪ್ರದರ್ಶನಕ್ಕೆ ಇಡಬೇಡಿ ಎಂದು ರೋಧಿಸಿದ್ದಾರೆ. ಸಚಿವ ಹಾಗೂ ಶಾಸಕರ ನಡೆಗೆ ಕಾಂಗ್ರೆಸ್, ಎಎಪಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಜನರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ತಾಯಿ-ಮಗು ಸಜೀವ ದಹನಕ್ಕೆ ದೃಶ್ಯಸಾಕ್ಷ್ಯದ ಬೆನ್ನಲ್ಲೇ ಹೆಲ್ಪ್‌ಲೈನ್

    ಜಮ್ಮು ಮತ್ತು ಕಾಶ್ಮೀರ (Jammu and Kashmir) ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡುವಾಗ ಐವರು ಯೋಧರು ಹುತಾತ್ಮರಾಗಿದ್ದರು. ಅದರಲ್ಲಿ ಉತ್ತರ ಪ್ರದೇಶದ ಕ್ಯಾಪ್ಟನ್ ಶುಭಂ ಗುಪ್ತಾ ಅವರು ಸಹ ಸೇರಿದ್ದಾರೆ. ಹುತಾತ್ಮರಾದ ಗುಪ್ತಾ ಅವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದು, 50 ಲಕ್ಷ ರೂ. ಪರಿಹಾರ ಹಾಗೂ ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗವನ್ನು ಘೋಷಿಸಿದ್ದರು. ಪರಿಹಾರದ ಚೆಕ್‍ನ್ನು ಸಚಿವರು ವಿತರಿಸುವಾಗ ಫೋಟೋಗೆ ಪೋಸ್ ಕೊಟ್ಟಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

    ಈ ವೀಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ (Congress) `ರಣಹದ್ದುಗಳು’ ಎಂದು ಟೀಕಿಸಿದೆ. ಉಗ್ರರೊಂದಿಗೆ ಹೋರಾಡುವಾಗ, ಕ್ಯಾಪ್ಟನ್ ಎಂವಿ ಪ್ರಾಂಜಲ್, ಹವಾಲ್ದಾರ್ ಅಬ್ದುಲ್ ಮಜೀದ್, ಲ್ಯಾನ್ಸ್ ನಾಯಕ್ ಸಂಜಯ್ ಬಿಶ್ತ್ ಮತ್ತು ಪ್ಯಾರಾಟ್ರೂಪರ್ ಸಚಿನ್ ಲಾರ್ ಹುತಾತ್ಮರಾಗಿದ್ದರು. ಐಇಡಿ ತಜ್ಞ ಮತ್ತು ತರಬೇತಿ ಪಡೆದ ಸ್ನೈಪರ್ ಆಗಿದ್ದ ಹಿರಿಯ ಕಮಾಂಡರ್ ಸೇರಿದಂತೆ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ಸಹ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: ಚೀನಾದಲ್ಲಿ ಮತ್ತೊಂದು ಡೆಡ್ಲಿ ವೈರಸ್- ಭಾರತದಲ್ಲಿ ಹೈಅಲರ್ಟ್

  • ಕಾಶ್ಮೀರದಲ್ಲಿ ಉಗ್ರರು, ಸೇನೆಯ ನಡುವೆ ಗುಂಡಿನ ಚಕಮಕಿ – ಮೂವರು ಸೇನಾ ಸಿಬ್ಬಂದಿ ಹುತಾತ್ಮ

    ಕಾಶ್ಮೀರದಲ್ಲಿ ಉಗ್ರರು, ಸೇನೆಯ ನಡುವೆ ಗುಂಡಿನ ಚಕಮಕಿ – ಮೂವರು ಸೇನಾ ಸಿಬ್ಬಂದಿ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಕಲಕೋಟ್ ಅರಣ್ಯದಲ್ಲಿ ಉಗ್ರರು (Terrorists) ಹಾಗೂ ಸೇನೆಯ (Indian Army) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಅಧಿಕಾರಿಗಳು ಮತ್ತು ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.

    ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಗುಪ್ತಚರ ಮಾಹಿತಿ ಬಳಿಕ ಸೇನೆಯ ವಿಶೇಷ ಪಡೆಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಭಯೋತ್ಪಾದಕರು ಹಾಗೂ ಸೇನೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಆಸ್ಟ್ರೇಲಿಯಾಗೆ ಬಂದಿಳಿದ ಚಾಂಪಿಯನ್ ಪ್ಯಾಟ್ ಕಮ್ಮಿನ್ಸ್- ಸ್ವಾಗತಿಸಲು ಜನವೇ ಇಲ್ಲ

    ಪಿರ್ ಪಂಜಾಲ್ ಅರಣ್ಯದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಸರಣಿ ಎನ್‍ಕೌಂಟರ್‌ಗಳು ನಡೆದಿದೆ. ಇಲ್ಲಿನ ದಟ್ಟ ಅರಣ್ಯದ ಲಾಭ ಪಡೆದುಕೊಂಡು ಭಯೋತ್ಪಾದಕರು ಅಡಗು ತಾಣಗಳನ್ನು ಮಾಡಿಕೊಂಡಿದ್ದಾರೆ. ಅಲ್ಲದೇ ಪರ್ವತಗಳಲ್ಲಿಯೂ ಭಯೋತ್ಪಾದಕರು ಆಶ್ರಯ ಪಡೆದುಕೊಂಡಿದ್ದಾರೆ. ಈ ಪ್ರದೇಶ ಭದ್ರತಾ ಪಡೆಗಳಿಗೆ ಸವಾಲಾಗಿದೆ.

    ಕಳೆದ ವಾರ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಓರ್ವ ಭಯೋತ್ಪಾದಕನನ್ನು ಹತ್ಯೆಗೈದಿದ್ದವು. ಇದನ್ನೂ ಓದಿ: 2025 ರೊಳಗೆ ರಕ್ತಹೀನತೆ ಮುಕ್ತ ಆರೋಗ್ಯ ಕರ್ನಾಟಕ ರೂಪಿಸುವ ಗುರಿ: ದಿನೇಶ್ ಗುಂಡೂರಾವ್

  • ಪಾಕ್ ಸೇನೆಯಿಂದ ಪುಂಡಾಟ – ಓರ್ವ ಬಿಎಸ್‍ಎಫ್ ಯೋಧ ಹುತಾತ್ಮ

    ಪಾಕ್ ಸೇನೆಯಿಂದ ಪುಂಡಾಟ – ಓರ್ವ ಬಿಎಸ್‍ಎಫ್ ಯೋಧ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಾಮಗಢ ಸೆಕ್ಟರ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ (Pakistan) ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ಬಿಎಸ್‍ಎಫ್ ಸಿಬ್ಬಂದಿಯೊಬ್ಬರು (BSF jawan) ಸಾವನ್ನಪ್ಪಿದ್ದಾರೆ. ಈ ವೇಳೆ ಭಾರತೀಯ ಸೇನೆ (Indian Army) ಸಹ ತಕ್ಕ ಪ್ರತ್ಯುತ್ತರ ನೀಡಿದ್ದು, ಶತ್ರು ಸೇನೆಯನ್ನು ಹಿಮ್ಮೆಟ್ಟಿಸಿದೆ.

    ಪಾಕ್ ಸೇನೆ ನಡೆಸಿದ ದಾಳಿಯಿಂದ ಬಿಎಸ್‍ಎಫ್ (Border Security Force) ಸಿಬ್ಬಂದಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ತೀವ್ರ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಪಾಕ್ ದಾಳಿಯಿಂದ ರಾಮಗಢ ಪ್ರದೇಶದ ಸುತ್ತಮುತ್ತ ಗ್ರಾಮಸ್ಥರು ಭಯಗೊಂಡು ಬಂಕರ್‍ಗಳಲ್ಲಿ ಆಶ್ರಯ ಪಡೆದಿದ್ದಾರೆ. ಇದನ್ನೂ ಓದಿ: ಜಮ್ಮುವಿನಲ್ಲಿ ಉಗ್ರನ ಬೇಟೆಯಾಡಿದ ಭಾರತೀಯ ಸೇನೆ

    ಪಾಕಿಸ್ತಾನ ಹಾಗೂ ಭಾರತ 2021 ರ ಫೆ.25 ರಂದು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಜಮ್ಮು ಗಡಿಯಲ್ಲಿ 24 ದಿನಗಳಲ್ಲಿ ನಡೆದ ಮೂರನೇ ಕದನ ವಿರಾಮ ಉಲ್ಲಂಘನೆ ಇದಾಗಿದೆ. ಅಲ್ಲದೇ ಈ ಮೂಲಕ ಒಟ್ಟಾರೆ ಆರನೇ ಉಲ್ಲಂಘನೆ ಇದಾಗಿದೆ.

    ಅಕ್ಟೋಬರ್ 28 ರಂದು ಪಾಕಿಸ್ತಾನ ರೇಂಜರ್‍ಗಳು ಸುಮಾರು ಏಳು ಗಂಟೆಗಳ ಕಾಲ ಗುಂಡು ಹಾಗೂ ಶೆಲ್ ದಾಳಿ ನಡೆಸಿತ್ತು. ಈ ವೇಳೆ ಇಬ್ಬರು ಬಿಎಸ್‍ಎಫ್ ಯೋಧರು ಮತ್ತು ಓರ್ವ ಮಹಿಳೆ ಗಾಯಗೊಂಡಿದ್ದರು. ಅಕ್ಟೋಬರ್ 17 ರಂದು ಅರ್ನಿಯಾ ಸೆಕ್ಟರ್‍ನಲ್ಲಿ ಪಾಕಿಸ್ತಾನದ ರೇಂಜರ್‍ಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಬಿಎಸ್‍ಎಫ್ ಸಿಬ್ಬಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ಚೆಕ್‍ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ – ಅಧಿಕಾರಿ ಅರೆಸ್ಟ್

  • ಜಮ್ಮುವಿನಲ್ಲಿ ಉಗ್ರನ ಬೇಟೆಯಾಡಿದ ಭಾರತೀಯ ಸೇನೆ

    ಜಮ್ಮುವಿನಲ್ಲಿ ಉಗ್ರನ ಬೇಟೆಯಾಡಿದ ಭಾರತೀಯ ಸೇನೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಶೋಪಿಯಾನ್‍ನ ಕಥೋಹಾಲನ್‍ನಲ್ಲಿ ಭಾರತೀಯ ಸೇನೆ ಹಾಗೂ ಪೊಲೀಸರು (Police) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್‍ನ (TRF) ಉಗ್ರನನ್ನು ಹೊಡೆದುರುಳಿಸಿವೆ.

    ಹತ್ಯೆಗೀಡಾದ ಭಯೋತ್ಪಾದಕನನ್ನು ಮೈಸರ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ. ಎನ್‍ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಹೆಚ್ಚಿನ ಉಗ್ರರು ಅಡಗಿರುವ ಶಂಕೆ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿವೆ. ಇದನ್ನೂ ಓದಿ: ಐಸಿಸ್ ಸೇರಲು ಯುವಕರಿಗೆ ಪ್ರಚೋದನೆ – ಇಬ್ಬರು ಉಗ್ರರ ಅರೆಸ್ಟ್

    ಅಲ್ಲದೇ ಈ ಪ್ರದೇಶದಲ್ಲಿ ಇತ್ತೀಚೆಗೆ ಉಗ್ರರು ನಡೆಸಿದ್ದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದರು. ಇದಾದ ಬಳಿಕ ಉಗ್ರರ ವಿರುದ್ಧ ಸೇನೆ ಕಠಿಣ ಕ್ರಮಕ್ಕೆ ಮುಂದಾಗಿತ್ತು. ಅಲ್ಲದೇ ಭಯೋತ್ಪಾದಕರ ದಾಳಿಗಳ ಬಗ್ಗೆ ಖಚಿತ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಇದನ್ನೂ ಓದಿ: Diwali: ದೀಪಾವಳಿಗೆ ಅಯೋಧ್ಯೆಯಲ್ಲಿ ಬೆಳಗಲಿವೆ 24 ಲಕ್ಷ ದೀಪಗಳು – ವಿಶ್ವ ದಾಖಲೆಗೆ ವೇದಿಕೆ ಸಜ್ಜು