Tag: indian army

  • ಆಪರೇಷನ್‌ ಸಿಂಧೂರ ಬಳಿಕ ಭಾರತೀಯ ಸೇನೆಗೆ ಬೂಸ್ಟ್‌ – ರಕ್ಷಣಾ ಇಲಾಖೆಗೆ 50,000 ಕೋಟಿ ಹೆಚ್ಚುವರಿ ಬಜೆಟ್

    ಆಪರೇಷನ್‌ ಸಿಂಧೂರ ಬಳಿಕ ಭಾರತೀಯ ಸೇನೆಗೆ ಬೂಸ್ಟ್‌ – ರಕ್ಷಣಾ ಇಲಾಖೆಗೆ 50,000 ಕೋಟಿ ಹೆಚ್ಚುವರಿ ಬಜೆಟ್

    – ಹೊಸ ಶಸ್ತ್ರಾಸ್ತ್ರ ಮದ್ದುಗುಂಡು, ತಂತ್ರಜ್ಞಾನ ಸಂಶೋಧನೆಗೆ ಹಂಚಿಕೆ

    ನವದೆಹಲಿ: ‘ಆಪರೇಷನ್‌ ಸಿಂಧೂರ’ (Operation Sindoor) ಸಕ್ಸಸ್‌ ಹಿನ್ನೆಲೆ ಭಾರತ ರಕ್ಷಣಾ (India’s Defence) ವಲಯಕ್ಕೆ ಮತ್ತಷ್ಟು ಬೂಸ್ಟ್‌ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ದೇಶದ ರಕ್ಷಣಾ ಬಜೆಟ್‌ 50,000 ಕೋಟಿ ರೂ.ಗೆ ಹೆಚ್ಚಳವಾಗಬಹುದು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

    ಪೂರಕ ಬಜೆಟ್ ಮೂಲಕ ಒದಗಿಸಲಾಗುವ ಈ ಹೆಚ್ಚಳವು ಒಟ್ಟಾರೆ ರಕ್ಷಣಾ ಹಂಚಿಕೆಯನ್ನು 7 ಲಕ್ಷ ಕೋಟಿ ರೂ.ಗಿಂತ ಹೆಚ್ಚಾಗುವಂತೆ ಮಾಡಲಿದೆ ಎಂದು ವಿಶ್ಲೇಷಿಸಲಾಗಿದೆ. ಇದನ್ನೂ ಓದಿ: ಇತಿಹಾಸದಲ್ಲೇ ಮೊದಲು – ತಾಲಿಬಾನ್‌ ವಿದೇಶಾಂಗ ಸಚಿವರ ಜೊತೆ ಜೈಶಂಕರ್‌ ಮಾತುಕತೆ

    ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2025/26 ರ ಬಜೆಟ್‌ನಲ್ಲಿ ಸಶಸ್ತ್ರ ಪಡೆಗಳಿಗೆ ದಾಖಲೆಯ 6.81 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು. ಈ ವರ್ಷದ ಹಂಚಿಕೆಯು 2024/25 ರಲ್ಲಿನ 6.22 ಲಕ್ಷ ಕೋಟಿ ರೂ.ನಿಂದ ಶೇಕಡಾ 9.2 ರಷ್ಟು ಗಮನಾರ್ಹ ಹೆಚ್ಚಳವಾಗಿದೆ.

    ಹೆಚ್ಚಿದ ಬಜೆಟ್ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ ಪಡೆಯಲಾಗುವುದು. ಅನುದಾನವನ್ನು ಸಂಶೋಧನೆ, ಅಭಿವೃದ್ಧಿ ಮತ್ತು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಅಗತ್ಯ ಉಪಕರಣಗಳ ಖರೀದಿಗೆ ಬಳಸುವ ಸಾಧ್ಯತೆಯಿದೆ ಎನ್ನಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಭಾರತದ ಬ್ರಹ್ಮೋಸ್ ದಾಳಿಯಾಗಿದೆ: ಪಾಕ್ ನಿವೃತ್ತ ಏರ್ ಮಾರ್ಷಲ್ ಮಸೂದ್ ಅಕ್ತರ್

    2014 ರಿಂದ ನರೇಂದ್ರ ಮೋದಿ ಆಡಳಿತದ ಕೇಂದ್ರಬಿಂದು ರಕ್ಷಣೆಯಾಗಿದೆ. ಬಿಜೆಪಿ ಸರ್ಕಾರದ ಮೊದಲ ವರ್ಷವಾದ 2014/15 ರಲ್ಲಿ ರಕ್ಷಣಾ ಸಚಿವಾಲಯಕ್ಕೆ 2.29 ಲಕ್ಷ ಕೋಟಿ ರೂ.ಗಳನ್ನು ನೀಡಲಾಗಿತ್ತು. ಪ್ರಸ್ತುತ ಹಂಚಿಕೆಯು ಎಲ್ಲಾ ಸಚಿವಾಲಯಗಳಿಗಿಂತ ಅತ್ಯಧಿಕವಾಗಿದ್ದು, ಒಟ್ಟು ಬಜೆಟ್‌ನ ಶೇ. 13 ರಷ್ಟಿದೆ.

    ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ, ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತ ನಡೆಸಿದ ಮಿಲಿಟರಿ ಕಾರ್ಯಾಚರಣೆ, ಆಪರೇಷನ್ ಸಿಂಧೂರ, ಪಾಕ್ ಜೊತೆಗಿನ ಉದ್ವಿಗ್ನತೆ ಮೊದಲಾದ ಬೆಳವಣಿಗೆಗಳ ಮಧ್ಯೆ ಭಾರತದ ರಕ್ಷಣಾ ಸನ್ನದ್ಧತೆ ಮತ್ತು ಬಜೆಟ್ ಹಂಚಿಕೆ ಹೆಚ್ಚಾಗಿದೆ. ಇದನ್ನೂ ಓದಿ: ಕೊನೆಗೂ ಭಾರತದ ಮುಂದೆ ಮಂಡಿಯೂರಿದ ಪಾಕ್‌ – ಶಾಂತಿ ಮಾತುಕತೆಗೆ ಪಾಕ್‌ ಪ್ರಧಾನಿ ಆಹ್ವಾನ

    ಇಸ್ರೇಲ್‌ನ ಪ್ರಸಿದ್ಧ ‘ಐರನ್ ಡೋಮ್’ಗೆ ಹೋಲಿಸಬಹುದಾದ ಮುಂದುವರಿದ ವಾಯು ರಕ್ಷಣಾ ವ್ಯವಸ್ಥೆಗಳೊಂದಿಗೆ ಭಾರತೀಯ ಸೇನೆಯ ಪ್ರಬಲ ಸಿನರ್ಜಿ – ಯುದ್ಧತಂತ್ರದ ಚಾತುರ್ಯವನ್ನು ಆಪರೇಷನ್ ಸಿಂಧೂರ ಹೈಲೈಟ್ ಮಾಡಿದೆ. ಆಕಾಶ್ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಸೇರಿದಂತೆ ಆ ಜಾಲದಲ್ಲಿನ ಸ್ವದೇಶಿ ಉಪಕರಣಗಳ ಮೇಲೆಯೂ ಕೇಂದ್ರೀಕರಿಸಿದೆ.

  • ಬೂಟಾಟಿಕೆಗೆ 4 ಫ್ಲೈಟ್ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ; `ಆಪರೇಷನ್‌ ಸಿಂಧೂರ’ ಕುರಿತು ಕಾಂಗ್ರೆಸ್‌ ಶಾಸಕ ಲೇವಡಿ

    ಬೂಟಾಟಿಕೆಗೆ 4 ಫ್ಲೈಟ್ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ; `ಆಪರೇಷನ್‌ ಸಿಂಧೂರ’ ಕುರಿತು ಕಾಂಗ್ರೆಸ್‌ ಶಾಸಕ ಲೇವಡಿ

    – ಪ್ಲ್ಯಾನ್‌ ಮಾಡಿ ಉಗ್ರರನ್ನ ದೇಶದೊಳಗೆ ಬಿಟ್ಟುಕೊಂಡ್ರಾ? – ಕೊತ್ತೂರು ಮಂಜುನಾಥ್‌ ಪ್ರಶ್ನೆ
    – 100 ಉಗ್ರರನ್ನ ಹೊಡೆದಿದ್ದಾರೆ ಅನ್ನೋದು ಎಲ್ಲೂ ಕನ್‌ಫರ್ಮ್‌ ಆಗಿಲ್ಲ ಅಂತ ಟೀಕೆ

    ಕೋಲಾರ: ಕೇಂದ್ರ ಸರ್ಕಾರ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ ಎಂದು ʻಆಪರೇಷನ್‌ ಸಿಂಧೂರʼ (Operation Sindoor) ಕುರಿತು ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್‌ (Kothur Manjunath) ಲೇವಡಿ ಮಾಡಿದ್ದಾರೆ.

    ಕೋಲಾರದಲ್ಲಿ (Kolara) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 26 ಜನ ಮಹಿಳೆಯರ ಅರಿಶಿನ ಕುಂಕುಮಕ್ಕೆ ಬೆಲೆ ಇಷ್ಟೆನಾ? ಆ ಹೆಣ್ಣು ಮಕ್ಕಳಿಗೆ ಸಿಕ್ಕ ಪರಿಹಾರ ಇದೇನಾ? ಅಂತ ಬೇಸರ ವ್ಯಕ್ತಪಡಿಸಿದ್ರು. ಸಾಮಾನ್ಯ ಪ್ರಜೆಗಳ ಮೇಲೆ ಯುದ್ಧ ಮಾಡೋದಕ್ಕೆ ನಮ್ಮ ವಿರೋಧ. ಆದ್ರೆ ನಮ್ಮ ದೇಶದೊಳಗೆ ಬಂದು ಪತ್ನಿಯರ ಎದುರೇ ಗಂಡಂದಿರನ್ನ ಹೊಡೆದ್ರೆ ಹೇಗೆ ಸಹಿಸೋದು? ಆ ಹೆಣ್ಣು ಮಕ್ಕಳು ಗಟ್ಟಿಯಾಗಿರೋದಕ್ಕೆ ಪರವಾಗಿಲ್ಲ. ಇಲ್ಲಾ ಅಂದ್ರೆ ಹಾರ್ಟ್ ಅಟ್ಯಾಕ್ ಆಗಿ ಸಾಯಬೇಕಿತ್ತು. ಅಂತಹದಕ್ಕೆ ಪರಿಹಾರ ಇದಲ್ಲ, ಬೇರಿಂದ ಕೊಂಬೆ ತನಕ ಎಲ್ಲವನ್ನ ಹೊಡಿಯಬೇಕು. ಭಾರತಕ್ಕೆ ಒಳ್ಳೆಯ ಅವಕಾಶ ಇತ್ತು. ಆದ್ರೆ ಏನೂ ಮಾಡಿಲ್ಲ ಅನ್ನೋದು ಬೇಸರ ತಂದಿದೆ ಅಂತ ಬೇಸರ ಹೊರಹಾಕಿದ್ದಾರೆ.

    ʻಆಪರೇಷನ್‌ ಸಿಂಧೂರʼ ಹೆಸರಲ್ಲಿ ಅಷ್ಟು ಜನ ಇಷ್ಟು ಜನ ಉಗ್ರರು ಹೊಡೆದಿದ್ದೇವೆ ಅಂತಾರೆ. ಆದ್ರೆ ಇಲ್ಲಿಯವರೆಗೂ ಎಲ್ಲೂ ಕನ್‌ಫರ್ಮ್‌ ಆಗಿಲ್ಲ. ಮಾಧ್ಯಮಗಳಲ್ಲಿ ಬಂದಿದ್ದು ಬಿಟ್ರೆ ಬೇರೆಲ್ಲೂ ನೋಡಲಿಲ್ಲ ಅಂತ ಹೇಳಿದ್ದಾರೆ. ಇದನ್ನೂ ಓದಿ: ಇತಿಹಾಸದಲ್ಲೇ ಮೊದಲು – ತಾಲಿಬಾನ್‌ ವಿದೇಶಾಂಗ ಸಚಿವರ ಜೊತೆ ಜೈಶಂಕರ್‌ ಮಾತುಕತೆ

    ನಮ್ಮ ದೇಶಕ್ಕೆ ಬಂದು ನಮ್ಮನ್ನ ಹೊಡೆದು ತಪ್ಪಿಸಿಕೊಂಡು ಹೋಗ್ತಾರೆ ಅಂದ್ರೆ ನಮ್ಮ ಭದ್ರತಾ ವೈಪಲ್ಯ, ಗಡಿಯಲ್ಲಿ ಸೇನೆ ಏನ್ ಮಾಡ್ತಾ ಇತ್ತು? ಇವರೆ ಏನಾದ್ರು ಪ್ಲಾನ್ ಮಾಡಿದ್ರಾ? ಅವರನ್ನು (ಉಗ್ರರು) ಇವರೇ ಪ್ಲಾನ್ ಬಿಟ್ಟುಕೊಂಡ್ರ ಯಾವುದು ನಿಜ ಯಾವುದು ಸುಳ್ಳು ನಮಗೆ ಗೊತ್ತಿಲ್ಲ. ಆದ್ರೆ ಭಾರತ ಕೊಟ್ಟ ಪ್ರತ್ಯುತ್ತರ ಸಮಧಾನಕರವಾದ ಕ್ರಮ ಅಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಭಾರತದ ಬ್ರಹ್ಮೋಸ್ ದಾಳಿಯಾಗಿದೆ: ಪಾಕ್ ನಿವೃತ್ತ ಏರ್ ಮಾರ್ಷಲ್ ಮಸೂದ್ ಅಕ್ತರ್

    ಉಗ್ರವಾದವನ್ನ ಬೇರು ಸಮೇತ ಕಿತ್ತೋಗೆಯಲು ಒಳ್ಳೆಯ ಚಾನ್ಸ್ ಇತ್ತು. ಆದ್ರೆ ನಮ್ಮ ನಿರೀಕ್ಷೆ ಹುಸಿಯಾಗಿದೆ. ನಮ್ಮ ನಿರೀಕ್ಷೆ ಇತ್ತು ಸಿಂಧೂರ ಕಳೆದುಕೊಂಡ ಹಣ್ಣು ಮಕ್ಕಳ ಕೈಗೆ ಗನ್‌ ಕೊಟ್ಟು ಶಿಕ್ಷೆ ಕೊಡಿಸಬೇಕಿತ್ತು. ಆದ್ರೆ ಕದನ ವಿರಾಮ ಎಂದು ಹೇಳುವ ನೀವು ಇಸ್ರೇಲ್ ನೋಡಿ ಕಲಿಯಬೇಕಿದೆ, ಇಸ್ರೇಲ್ ಯಾರ ಮಾತು ಕೇಳಿಲ್ಲ, ರಷ್ಯಾ-ಉಕ್ರೇನ್ ಹೇಗೆ ಒಡೆಯಿತು ಸರ್ವ ನಾಶ ಮಾಡಿ ಬಿಟ್ರು, ಆದ್ರೆ ನಮ್ಮ ಹೆಣ್ಣು ಮಕ್ಕಳಿಗೆ ಬೆಲೆ ಇಲ್ವಾ? ಆ ಉಗ್ರರನ್ನ ಹಿಡಿದುಕೊಂಡು ಬಂದು ನಮ್ಮ ಹೆಣ್ಣು ಮಕ್ಕಳ ಕೈಗೆ ಕೊಡಬೇಕಿತ್ತು ಎಂದಿದ್ದಾರೆ.

  • ತ್ರಾಲ್ ಸೇನಾ ಕಾರ್ಯಾಚರಣೆ – ಎನ್‌ಕೌಂಟರ್‌ಗೂ ಮುನ್ನ ಮನೆಗೆ ವಿಡಿಯೋ ಕಾಲ್, ಶರಣಾಗುವಂತೆ ಬೇಡಿಕೊಂಡಿದ್ದ ತಾಯಿ

    ತ್ರಾಲ್ ಸೇನಾ ಕಾರ್ಯಾಚರಣೆ – ಎನ್‌ಕೌಂಟರ್‌ಗೂ ಮುನ್ನ ಮನೆಗೆ ವಿಡಿಯೋ ಕಾಲ್, ಶರಣಾಗುವಂತೆ ಬೇಡಿಕೊಂಡಿದ್ದ ತಾಯಿ

    ಶ್ರೀನಗರ: ಜಮ್ಮು ಕಾಶ್ಮೀರದ (Jammu And Kashmir) ತ್ರಾಲ್ (Tral) ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ. ಈ ಪೈಕಿ ಓರ್ವ ಉಗ್ರ ಸಾಯುವ ಮುನ್ನ ತನ್ನ ಕುಟುಂಬಸ್ಥರಿಗೆ ವಿಡಿಯೋ ಕಾಲ್ ಮಾಡಿದ್ದು, ಆತನ ತಾಯಿ ಶರಣಾಗುವಂತೆ ಬೇಡಿಕೊಂಡಿದ್ದಾರೆ.

    ಪುಲ್ವಾಮಾ ಜಿಲ್ಲೆಯ ಉಪನಗರವಾದ ಅವಂತಿಪೋರಾದ ನಾಡರ್ ಮತ್ತು ತ್ರಾಲ್ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಮೂವರು ಜೈಶ್ ಉಗ್ರರನ್ನು ಹೊಡೆದುರುಳಿಸಿದೆ. ಈ ಎನ್‌ಕೌಂಟರ್ ಮುನ್ನ ಜೈಶ್ ಎ ಮೊಹಮ್ಮದ್ ಉಗ್ರ ಅಮೀರ್ ನಜೀರ್ (Amir Nazir Wani) ತನ್ನ ಕುಟುಂಬಸ್ಥರಿಗೆ ವಿಡಿಯೋ ಕಾಲ್ ಮಾಡಿದ್ದು, ಈ ವೇಳೆ ಆತನ ತಾಯಿ ನೀನು ಶರಣಾಗು, ನಿನ್ನ ಜೀವ ಉಳಿಸಿಕೋ ಎಂದು ಬೇಡಿಕೊಂಡಿದ್ದಾರೆ.ಇದನ್ನೂ ಓದಿ: ಮೋದಿಗೆ ಟಕ್ಕರ್‌ ಕೊಡಲು ಹೋಗಿ ನಗೆಪಾಟಲು – ಧ್ವಂಸಗೊಂಡ ಏರ್‌ಫೀಲ್ಡ್‌ ಮುಚ್ಚಿಕೊಳ್ಳಲು ಮೈದಾನದಲ್ಲಿ ಪಾಕ್‌ ಪ್ರಧಾನಿ ಸಂವಾದ

    ವೈರಲ್ ಆಗಿರುವ ವಿಡಿಯೋದಲ್ಲಿ, ಉಗ್ರ ಅಮೀರ್ ನಜೀರ್ ಎಕೆ-47 ಗನ್ ಹಿಡಿದುಕೊಂಡು ಮನೆಯೊಂದರಲ್ಲಿ ಅಡಗಿ ಕುಳಿತಿದ್ದ. ಈ ವೇಳೆ ಮನೆಗೆ ವಿಡಿಯೋ ಕಾಲ್ ಮಾಡಿದ್ದಾನೆ. ತಾಯಿ ಹಾಗೂ ಸಹೋದರಿ ಜೊತೆ ಮಾತನಾಡಿದ್ದು, ಸಹೋದರನ ಬಗ್ಗೆ ವಿಚಾರಿಸಿದ್ದಾನೆ. ಈ ವೇಳೆ ತಾಯಿ ನೀನು ಶರಣಾಗಿ, ನಿನ್ನ ಜೀವ ಉಳಿಸಿಕೋ ಎಂದು ಬೇಡಿಕೊಂಡಿದ್ದಾರೆ. ಜೊತೆಗೆ ಆತನ ಕುಟುಂಬಸ್ಥರು ಕೂಡ ಮನವಿ ಮಾಡಿಕೊಂಡಿದ್ದಾರೆ. ಆದರೆ ಅಮೀರ್, ಸೇನೆ ಮುಂದೆ ಬರಲಿ ನಾನು ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾನೆ.

    ಕಳೆದ ಮೂರು ದಿನಗಳಲ್ಲಿ ನಡೆದ 2ನೇ ಎನ್‌ಕೌಂಟರ್ ಇದಾಗಿದೆ. ಹತರಾದ ಮೂವರನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಿವಾಸಿಗಳಾದ ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಜೊತೆಗೆ ಮೂವರು ಜೈಶ್ ಎ ಮೊಹಮ್ಮದ್ ಸಂಘಟನೆಗೆ ಸೇರಿದವರು ಎಂದು ಮೂಲಗಳು ತಿಳಿಸಿವೆ.

    ಈ ವಿಡಿಯೋ ಅಲ್ಲದೇ ಉಗ್ರರು ಕಟ್ಟಡದಲ್ಲಿ ಅವಿತಿದ್ದ ಕೊನೆ ಕ್ಷಣದ ವಿಡಿಯೋ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಇದನ್ನೂ ಓದಿ: ಸೋನು ನಿಗಮ್‍ಗೆ ಬಿಗ್ ರಿಲೀಫ್ – ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್

  • ಪುಲ್ವಾಮಾದಲ್ಲಿ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿ – ಮೂವರು ಜೈಶ್‌ ಉಗ್ರರು ಮಟಾಶ್‌

    ಪುಲ್ವಾಮಾದಲ್ಲಿ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿ – ಮೂವರು ಜೈಶ್‌ ಉಗ್ರರು ಮಟಾಶ್‌

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ಪಾಮಾದಲ್ಲಿ (Pulwama) ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಜೈಶ್‌ ಉಗ್ರರನ್ನು (JEM Terrorists) ಹತ್ಯೆ ಮಾಡಿರುವುದಾಗಿ ಹಿರಿಯ ಸೇನಾಧಿಕಾರಿಗಳು ತಿಳಿಸಿದ್ದಾರೆ.

    ಪುಲ್ವಾಮಾ ಜಿಲ್ಲೆಯ ಉಪನಗರವಾದ ಅವಂತಿಪೋರಾದ (Awantipora) ನಾಡರ್‌ ಮತ್ತು ಟ್ರಾಲ್‌ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಉಗ್ರರನ್ನು ಹೊಡೆದುರುಳಿಸಿದೆ. ಕಳೆದ ಮೂರು ದಿನಗಳಲ್ಲಿ ನಡೆದ 2ನೇ ಎನ್‌ಕೌಂಟರ್‌ ಇದಾಗಿದೆ. ಹತ್ಯೆಗೀಡಾದ ಮೂವರು ಜೈಶ್‌ ಎ ಮೊಹಮ್ಮದ್‌ ಸಂಘಟನೆಗೆ ಸೇರಿದವರು ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್‌ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

    ಇದಕ್ಕೂ ಮುನ್ನ ಮಂಗಳವಾರ (ಮೇ 13) ಶೋಪಿಯಾನ್ (Shopian) ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ಉನ್ನತ ಭಯೋತ್ಪಾದಕ ಕಮಾಂಡರ್ ಶಾಹಿದ್ ಕುಟ್ಟಯ್, ಹರಿಸ್ ನಜೀರ್, ಅದ್ನಾನ್ ಶಫಿ ಎಂಬ ಮೂವರು ಉಗ್ರರನ್ನ ಹತ್ಯೆಗೈಯಲಾಗಿತ್ತು. ಇದನ್ನೂ ಓದಿ: ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

    ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು. ಭಯೋತ್ಪಾದಕರು ಪ್ರತಿದಾಳಿ ನಡೆಸಿದ್ದರು. ಇದು ಪರಸ್ಪರರ ನಡುವೆ ಗುಂಡಿನ ಚಕಮಕಿಗೆ ಕಾರಣವಾಗಿತ್ತು. ಇದನ್ನೂ ಓದಿ: ಉಗ್ರರ ವಿರುದ್ಧ ಸಿಡಿದೆದ್ದ ಭಾರತ – ‘ಆಪರೇಷನ್‌ ಸಿಂಧೂರ’ಗೆ ಜೈ ಎಂದ ಬ್ರಿಟಿಷ್‌ ಸಂಸದ

    ಇಂದು ಮತ್ತೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಜೈಶ್‌ ಉಗ್ರರನ್ನ ಹತ್ಯೆಗೈಯಲಾಗಿದೆ. ಇದನ್ನೂ ಓದಿ: ಮೇಲುಕೋಟೆ | ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ – ಭೀಕರ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

  • ನಮಗೆ ಯಾರಾದ್ರು ತೊಂದರೆ ಕೊಟ್ಟರೆ, ಸುಮ್ಮನೆ ಬಿಡಲ್ಲ: ಪಾಕ್‌ ವಿರುದ್ಧ ಗುಡುಗಿದ ಯೋಗಿ ಆದಿತ್ಯನಾಥ್‌

    ನಮಗೆ ಯಾರಾದ್ರು ತೊಂದರೆ ಕೊಟ್ಟರೆ, ಸುಮ್ಮನೆ ಬಿಡಲ್ಲ: ಪಾಕ್‌ ವಿರುದ್ಧ ಗುಡುಗಿದ ಯೋಗಿ ಆದಿತ್ಯನಾಥ್‌

    ಲಕ್ನೋ: ನಮಗೆ ಯಾರಾದ್ರು ತೊಂದರೆ ಕೊಟ್ಟರೆ, ನಾವು ಸುಮ್ಮನೆ ಬಿಡಲ್ಲ ಎಂದು ಪಾಕಿಸ್ತಾನಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಎಚ್ಚರಿಕೆ ನೀಡಿದ್ದಾರೆ.

    ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯವನ್ನು ಶ್ಲಾಘಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಲಕ್ನೋದಲ್ಲಿ ‘ಭಾರತ್ ಶೌರ್ಯ ತಿರಂಗ ಯಾತ್ರೆ’ಯನ್ನು ಪ್ರಾರಂಭಿಸಿದ್ದಾರೆ. ಇದನ್ನೂ ಓದಿ: ಭಾರತದ ದಾಳಿಗೆ ವಿಲವಿಲ – ಪಾಕ್‌ನಲ್ಲಿ ಮದರಸಾಗಳ ಮೇಲೆ ನಾಗರಿಕರಿಂದಲೇ ಕಲ್ಲು ತೂರಾಟ

    ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿ, ಅವರಿಗೆ ಕಠಿಣ ಸಂದೇಶ ರವಾನಿಸಿದ್ದಾರೆ.

    ನಮ್ಮ ಸೈನಿಕರು ‘ನಾವು ಯಾರಿಗೂ ತೊಂದರೆ ನೀಡುವುದಿಲ್ಲ. ಆದರೆ ಯಾರಾದರೂ ನಮಗೆ ತೊಂದರೆ ನೀಡಿದರೆ ನಾವು ಅವರನ್ನು ಬಿಡುವುದಿಲ್ಲ’ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತೀಯ ಸೈನಿಕರ ಶೌರ್ಯ, ತ್ಯಾಗ ಹಾಡಿಹೊಗಳಿದ ರಷ್ಯಾ ಮಹಿಳೆ

    ಅಮಾನವೀಯ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಯೋಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಇಡೀ ಜಗತ್ತು ಈಗ ಭಾರತೀಯ ಸೈನಿಕರ ಶೌರ್ಯವನ್ನು ಗುರುತಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ಆಪರೇಷನ್ ಸಿಂಧೂರಗಾಗಿ ನಾವು ಪ್ರಧಾನಿಗೆ ಧನ್ಯವಾದ ಹೇಳುತ್ತೇವೆ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರ ಅನಾಗರಿಕ ಕೃತ್ಯವನ್ನು ಇಡೀ ದೇಶ ಮತ್ತು ಜಗತ್ತು ಖಂಡಿಸಿತ್ತು. ಭಯೋತ್ಪಾದನೆಯನ್ನು ಪೋಷಿಸುವ ಪಾಕಿಸ್ತಾನ ಈ ಇಡೀ ಘಟನೆಯಲ್ಲಿ ಮೌನವಾಗಿತ್ತು. ಪಾಕಿಸ್ತಾನ ತನ್ನ ಕ್ರಮದಿಂದ ಪಾಠ ಕಲಿಯದ ನಂತರ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ಪ್ರಾರಂಭಿಸಿತು. ಮೊದಲ ದಿನ 100 ಕ್ಕೂ ಹೆಚ್ಚು ಭಯೋತ್ಪಾದಕರು ಹತ್ಯೆಯಾದರು. ಈ ಭಯೋತ್ಪಾದಕರಿಗೆ ಅವರ ದುಷ್ಕೃತ್ಯಗಳಿಗೆ ಶಿಕ್ಷೆ ವಿಧಿಸಿದ ರೀತಿಯನ್ನು ಇಡೀ ಜಗತ್ತು ನೋಡಿದೆ. ಭಾರತೀಯ ಸೈನಿಕರ ಶೌರ್ಯವನ್ನು ಒಪ್ಪಿಕೊಂಡಿದೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಮರಾಠಿಯಲ್ಲಿ ಮಾತಾಡು, ಇಲ್ಲದಿದ್ರೆ ಹಣ ಕೊಡಲ್ಲ; ಪಿಜ್ಜಾ ಡೆಲಿವರಿ ಬಾಯ್‌ಗೆ ದಂಪತಿ ಧಮ್ಕಿ

    ಬಿಜೆಪಿ ಇಡೀ ದೇಶದಲ್ಲಿ ತಿರಂಗ ಯಾತ್ರೆಯನ್ನು ಆಯೋಜಿಸುತ್ತಿದೆ. ಈ ತಿರಂಗ ಭಾರತದ ಗೌರವ, ಪ್ರತಿಷ್ಠೆ ಮತ್ತು ಹೆಮ್ಮೆಯ ಸಂಕೇತವಾಗಿದೆ. ಈ ತಿರಂಗ ಭಾರತದ ಶೌರ್ಯ ಮತ್ತು ಧೈರ್ಯದ ಸಂಕೇತವಾಗಿದೆ. ಈ ತಿರಂಗ ಮತ್ತು ನಮ್ಮ ಸೈನಿಕರಿಗೆ ನಮ್ಮ ಗೌರವವನ್ನು ತೋರಿಸಲು, ಪ್ರಧಾನಿ ಮೋದಿಜಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ವೇದಿಕೆಯಾಗಲಿದೆ ಎಂದು ಮಾತನಾಡಿದ್ದಾರೆ.

  • ಭಾರತೀಯ ಸೈನಿಕರ ಶೌರ್ಯ, ತ್ಯಾಗ ಹಾಡಿಹೊಗಳಿದ ರಷ್ಯಾ ಮಹಿಳೆ

    ಭಾರತೀಯ ಸೈನಿಕರ ಶೌರ್ಯ, ತ್ಯಾಗ ಹಾಡಿಹೊಗಳಿದ ರಷ್ಯಾ ಮಹಿಳೆ

    ನವದೆಹಲಿ: ಭಾರತ-ಪಾಕ್‌ ಉದ್ವಿಗ್ನತೆ ನಡುವೆ ರಷ್ಯಾದ ಮಹಿಳೆಯೊಬ್ಬರು ಭಾರತೀಯ ಸೇನೆಯನ್ನು ಹೊಗಳಿ, ಭಾರತವನ್ನು ತನ್ನ ಮನೆ ಎಂದು ಬಣ್ಣಿಸಿರುವ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿದೆ. ರಷ್ಯಾ ಮಹಿಳೆ ಮಾತಿಗೆ ಭಾರತೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಗುರುಗ್ರಾಮ್‌ನಲ್ಲಿ ವಾಸಿಸುವ ರಷ್ಯಾದ ಪ್ರಜೆ ಪೋಲಿನಾ ಅಗರ್ವಾಲ್, ದೇಶವನ್ನು ಸುರಕ್ಷಿತವಾಗಿರಿಸಿದ್ದಕ್ಕಾಗಿ ಭಾರತೀಯ ಸೇನೆಗೆ ಧನ್ಯವಾದ ಎಂದು ಹೃತ್ಪೂರ್ವಕ ಸಂದೇಶವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಭಾರತದ ದಾಳಿಗೆ ವಿಲವಿಲ – ಪಾಕ್‌ನಲ್ಲಿ ಮದರಸಾಗಳ ಮೇಲೆ ನಾಗರಿಕರಿಂದಲೇ ಕಲ್ಲು ತೂರಾಟ

     

    View this post on Instagram

     

    A post shared by Polina Agrawal (@pol.explorer)

    ಭಾರತೀಯ ಸೈನಿಕರ ಧೈರ್ಯ ಮತ್ತು ರಾಷ್ಟ್ರವನ್ನು ರಕ್ಷಿಸಲು ಅಚಲ ಸಮರ್ಪಣೆಯನ್ನು ಅವರು ಶ್ಲಾಘಿಸಿದ್ದಾರೆ. ‘ನಮ್ಮನ್ನು ರಕ್ಷಿಸುವ ಮತ್ತು ಯಾವುದೇ ಭೀತಿಯಿಲ್ಲದೇ ನೆಮ್ಮದಿಯಿಂದ ನಿದ್ರೆ ಮಾಡಲು ಸಹಾಯ ಮಾಡುವ ಎಲ್ಲಾ ಭಾರತೀಯ ಸೈನಿಕರಿಗೆ ಕೃತಜ್ಞತೆಗಳು ಎಂದು ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

    ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಆದಾಗ ನನ್ನ ಅಜ್ಜಿ ಆತಂಕಕ್ಕೆ ಒಳಗಾಗಿದ್ದರು. ನನ್ನನ್ನು ಮನೆಗೆ (ರಷ್ಯಾ) ಹಿಂತಿರುಗುವಂತೆ ಒತ್ತಾಯಿಸಿದ್ದರು. ನಾನು ಭಾರತದ ಗುರುಗ್ರಮ್‌ನಲ್ಲಿದ್ದೇನೆ. ಭಯವಿಲ್ಲ ಎಂದು ಅಜ್ಜಿಗೆ ಸ್ಪಷ್ಟಪಡಿಸಿದ್ದೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮರಾಠಿಯಲ್ಲಿ ಮಾತಾಡು, ಇಲ್ಲದಿದ್ರೆ ಹಣ ಕೊಡಲ್ಲ; ಪಿಜ್ಜಾ ಡೆಲಿವರಿ ಬಾಯ್‌ಗೆ ದಂಪತಿ ಧಮ್ಕಿ

    ಭಾರತೀಯ ಸೇನೆ ಮತ್ತು ಅವರ ಬಲವಾದ ರಕ್ಷಣಾ ವ್ಯವಸ್ಥೆಗಳನ್ನು ಪೋಲಿನಾ ಹಾಡಿಹೊಗಳಿದ್ದಾರೆ. ‘ಭಾರತೀಯ ಸೇನೆಯು ಸುಧಾರಿತ ಶಸ್ತ್ರಾಸ್ತ್ರಗಳು ಮತ್ತು ವಾಯು ರಕ್ಷಣಾ ವ್ಯವಸ್ಥೆಗಳನ್ನು ಹೊಂದಿದೆ. ರಷ್ಯಾ ಸ್ವತಃ ಅವುಗಳನ್ನು ಒದಗಿಸಿದೆ. ಇದು ಎಲ್ಲಾ ಡ್ರೋನ್‌ಗಳು, ಜೆಟ್‌ಗಳು ಎದುರಾಳಿಯ ಯಾವುದೇ ಬೆದರಿಕೆಗಳನ್ನು ವಿರೋಧಿಸಲು ತುಂಬಾ ಬಲಿಷ್ಠವಾಗಿದೆ ಎಂದು ಬಣ್ಣಿಸಿದ್ದಾರೆ.

    ಭಾರತೀಯ ಸೈನಿಕರು ಸಮರ್ಪಣೆ ಮನೋಭಾವದವರು, ವಿಶಾಲ ಹೃದಯಿಗಳು. ದೇಶದ ಜನತೆ ನೆಮ್ಮದಿಯಿಂದ ನಿದ್ರೆ ಮಾಡಲು ಅವರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿದ್ದಾರೆ. ನಾನು ಅವರಿಗೆ ಕೃತಜ್ಞಳಾಗಿದ್ದೇನೆ ಎಂದು ಯೋಧರ ತ್ಯಾಗವನ್ನು ಸ್ಮರಿಸಿದ್ದಾರೆ. ಇದನ್ನೂ ಓದಿ: ಪಾಕ್‌ ನ್ಯೂಕ್‌ ವೆಪನ್‌ ಫೆಸಿಲಿಟಿ ಮೇಲೆ ದಾಳಿಯಾಗಿದೆ, ಭಾರತಕ್ಕೆ ಜಯ ಸಿಕ್ಕಿದೆ: ಟಾಮ್‌ ಕೂಪರ್‌

  • ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ – ಸೈನಿಕರನ್ನು ಭೇಟಿಯಾದ ಮೋದಿ

    ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ – ಸೈನಿಕರನ್ನು ಭೇಟಿಯಾದ ಮೋದಿ

    – ಯೋಧರ ಗುಣಗಾನ ಮಾಡಿದ ಪಿಎಂ; ಸೈನಿಕರೊಟ್ಟಿಗೆ ಫೋಟೊಗೆ ಪೋಸ್‌

    ಛತ್ತೀಸಗಢ: ಭಾರತ ಮತ್ತು ಪಾಕಿಸ್ತಾನ ನಡುವೆ (India Pakistan War) ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ (PM Modi) ಮಂಗಳವಾರ ಪಂಜಾಬ್‌ನ ಅದಮ್‌ಪುರ ವಾಯುನೆಲೆಗೆ (Adampur Air Base) ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ.

    ಭಾರತದ ‘ಆಪರೇಷನ್ ಸಿಂಧೂರ’ ನಂತರ, ಮೇ 9 ಮತ್ತು 10 ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಂಪುರವೂ ಸೇರಿತ್ತು. ಇದನ್ನೂ ಓದಿ: ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಮೂವರು ಉಗ್ರರು ಮಟಾಶ್‌

    ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ. ನಿಮ್ಮ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಅವರು ಸೈನಿಕರ ಗುಣಗಾನ ಮಾಡಿದರು.

    ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಮೇ 7 ರಂದು ಪ್ರಾರಂಭಿಸಲಾದ ಯಶಸ್ವಿ ‘ಆಪರೇಷನ್ ಸಿಂಧೂರ’ ನಂತರ ದೇಶದ ಬಲಿಷ್ಠ ಸಶಸ್ತ್ರ ಪಡೆಗಳಿಗೆ ನಮನ ಸಲ್ಲಿಸಿದ ಒಂದು ದಿನದ ನಂತರ ಪ್ರಧಾನಿಯವರು ವಾಯುಪಡೆ ನಿಲ್ದಾಣಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿಯ 3 ಉಗ್ರರ ಫೋಟೋ ರಿಲೀಸ್ – ಸುಳಿವು ಕೊಟ್ಟವರಿಗೆ 20 ಲಕ್ಷ ಬಹುಮಾನ

    ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಆಪರೇಷನ್ ಸಿಂಧೂರ ಉದ್ದೇಶಗಳನ್ನು ಸಾಧಿಸುವಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಅಚಲ ಧೈರ್ಯವನ್ನು ಪ್ರದರ್ಶಿಸಿದವು ಎಂದು ಬಣ್ಣಿಸಿದ್ದರು.

  • INS ವಿಕ್ರಾಂತ್ ಎಲ್ಲಿದೆ ಹೇಳಿ – ಪಿಎಂ ಕಚೇರಿ ಅಧಿಕಾರಿಯಂತೆ ಕರೆ ಮಾಡಿದ್ದವ ಅರೆಸ್ಟ್‌

    INS ವಿಕ್ರಾಂತ್ ಎಲ್ಲಿದೆ ಹೇಳಿ – ಪಿಎಂ ಕಚೇರಿ ಅಧಿಕಾರಿಯಂತೆ ಕರೆ ಮಾಡಿದ್ದವ ಅರೆಸ್ಟ್‌

    ತಿರುವನಂತಪುರಂ: ಪ್ರಧಾನಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ನೌಕಾಪಡೆಯ INS ವಿಕ್ರಾಂತ್ (INS Vikrant) ಹಡಗಿನ ಬಗ್ಗೆ ಮಾಹಿತಿ ಕೇಳಿದ್ದ ಕೆರಳದ ವ್ಯಕ್ತಿಯನ್ನು ಪೊಲೀಸರು ಕೊಚ್ಚಿಯಲ್ಲಿ ಬಂಧಿಸಿದ್ದಾರೆ.‌

    ಬಂಧಿತನನ್ನು ಕೇರಳದ (Kerala) ಕೋಝಿಕೋಡ್ ಎಲ್ತೂರ್ ನಿವಾಸಿ ಮುಜೀಬ್ ರೆಹಮಾಮ್ ಎಂದು ಗುರುತಿಸಲಾಗಿದೆ. ಆತ ತಾನು ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಕೊಚ್ಚಿ ನೌಕಾ ಪ್ರಧಾನ ಕಚೇರಿಗೆ ಕರೆ ಮಾಡಿ, INS ವಿಕ್ರಾಂತ್ ಬಗ್ಗೆ ಮಾಹಿತಿ ಕೇಳಿದ್ದ. ಅಲ್ಲದೇ ವಿಕ್ರಾಂತ್ ಇರುವ ನಿಖರವಾದ ಸ್ಥಳವನ್ನು ತಿಳಿಸುವಂತೆ ಹೇಳಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದ ವಿರುದ್ಧ ಸೀಕ್ರೆಟ್‌ ಟ್ರೈನಿಂಗ್‌ – ಪಾಕ್‌ ವಾಯುನೆಲೆಗಳನ್ನು ಟಾರ್ಗೆಟ್‌ ಮಾಡಿ ಇಂಡಿಯನ್‌ ಆರ್ಮಿ ಹೊಡೆದಿದ್ದೇಕೆ?

    ಆತನ ಮಾತುಗಳಿಂದ ಅನುಮಾನಗೊಂಡ ನೌಕಪಡೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿಯ ಬೆನ್ನಲ್ಲೇ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬಂಧಿತನನ್ನು ನೌಕಾಪಡೆ ಅಧಿಕಾರಿಗಳು ಹಾಗೂ ಐಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

    ಮುಜೀಬ್ ರೆಹಮಾಮ್ ಬಂಧನವಾಗುತ್ತಿದ್ದಂತೆ ಆತ ಖಿನ್ನತೆಯಿಂದ ಬಳತ್ತಿದ್ದಾನೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿಯ 3 ಉಗ್ರರ ಫೋಟೋ ರಿಲೀಸ್ – ಸುಳಿವು ಕೊಟ್ಟವರಿಗೆ 20 ಲಕ್ಷ ಬಹುಮಾನ

  • ಇನ್ನು ಪಾಕ್ ಕೆಮ್ಮಿದ್ರೂ ಭಾರತೀಯ ಸೇನೆ ಬಾರ್ಡರ್‌ಗೆ ನುಗ್ಗುತ್ತೆ: ಪ್ರಹ್ಲಾದ್ ಜೋಶಿ

    ಇನ್ನು ಪಾಕ್ ಕೆಮ್ಮಿದ್ರೂ ಭಾರತೀಯ ಸೇನೆ ಬಾರ್ಡರ್‌ಗೆ ನುಗ್ಗುತ್ತೆ: ಪ್ರಹ್ಲಾದ್ ಜೋಶಿ

    – ಭಾರತಕ್ಕೆ ಬೇಕಾಗಿದ್ದ ಉಗ್ರರನ್ನು ಹೊಡೆದಿದ್ದೇವೆ

    ಹುಬ್ಬಳ್ಳಿ: ಇನ್ನು ಮುಂದೆ ಪಾಕಿಸ್ತಾನ ಕೆಮ್ಮಿದ್ರೆ ಸಾಕು, ಭಾರತೀಯ ಸೇನೆ(Indian Army) ಪಾಕ್ ಬಾರ್ಡರಿಗೆ ನುಗ್ಗುತ್ತದೆ ಎಂದು ದೊಡ್ಡ ಸಂದೇಶವನ್ನು ಜಗತ್ತಿಗೆ ಭಾರತ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Prahlad Joshi) ಹೇಳಿದರು.

    ಹುಬ್ಬಳ್ಳಿಯಲ್ಲಿ(Hubballi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವದ ನಾಲ್ಕನೇ ಅತಿ ದೊಡ್ಡ ಮಿಲಿಟರಿ ಹೊಂದಿರುವುದು ಭಾರತ ವಿಶ್ವಸಂಸ್ಥೆಯ ನಿಯಮಗಳನ್ನು ಧಿಕ್ಕರಿಸಿ ಪಾಕಿಸ್ತಾನಕ್ಕೆ ನುಗ್ಗಿ ಹೊಡೆದಿದ್ದೇವೆ. ಬಹಳಷ್ಟು ಸಂಖ್ಯೆ ಹೇಳಲ್ಲ. ಆದ್ರೆ ಭಾರತಕ್ಕೆ ಬೇಕಾದ ಉಗ್ರರಲ್ಲಿ ಒಂದಿಬ್ಬರನ್ನು ಬಿಟ್ರೆ ಎಲ್ಲಾ ಉಗ್ರರನ್ನು ಹೊಡೆದಿದ್ದೇವೆ ಎಂದರು. ಇದನ್ನೂ ಓದಿ: ರಾಜ್ಯದಲ್ಲೇ ಪ್ರಥಮ ಬಾರಿಗೆ ಮಾಕ್ ಡ್ರಿಲ್‌ನಲ್ಲಿ ಸ್ವದೇಶಿ ನಿರ್ಮಿತ ಫೈರ್ ಬೋಟ್ ಬಳಕೆ

    ಭಾರತ ಅಭಿವೃದ್ಧಿಯನ್ನು ಹೊಂದುತ್ತಿದೆ. ಆದರೆ ಇದು ಕೆಲವರಿಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಮೀಸಲಾತಿ, ಸಂವಿಧಾನದ ಬದಲಾವಣೆ ಮಾಡುತ್ತದೆ ಎಂದು ದೇಶದೊಳಗೆ ಆಂತರಿಕ ಸಮಸ್ಯೆ ಹುಟ್ಟುಹಾಕುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ತಮಾಷೆಗೂ ಯಾರ ಮನಸ್ಸನ್ನೂ ನೋಯಿಸದ ಹುಡುಗ ರಾಕೇಶ್: ಅನುಶ್ರೀ

    ಸದ್ಯಕ್ಕೆ ಕದನ ವಿರಾಮ ಆಗಿದೆ. ಈಗಾಗಲೇ ನಾವು ಭಯೋತ್ಪಾದನೆಯ ವಿರುದ್ಧ ಯುದ್ಧ(War on Terror) ಎಂದು ಪರಿಗಣಿಸಿದ್ದೇವೆ. ಉಗ್ರರು ಶುದ್ಧರಾಗಿಲ್ಲ. ಮೂರ್ನಾಲ್ಕು ದಿನಗಳ ಆಪರೇಷನ್‌ನಲ್ಲಿ ಉಗ್ರರ ಅಡಗುತಾಣ, ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ. ಅಮೆರಿಕ ಮಧ್ಯಸ್ಥಿಕೆ ಕುರಿತು ಈಗಾಗಲೇ ಹೇಳಿಕೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ದೇಶ ಒಂದಾಗಿರಬೇಕು ಎಂದು ವಿಪಕ್ಷಗಳಿಗೆ ಮನವಿ ಮಾಡುತ್ತೇನೆ. ಎಲ್ಲಿ ಏನಾಗಿದೆ ಎನ್ನುವುದನ್ನು ತಿಳಿದು ಶಿವಸೇನಾ ಮುಖಂಡರು ಮಾತನಾಡಬೇಕು. ಭಾರತ ಮತ್ತು ಪಾಕಿಸ್ತಾನದ(Pakistan) ಡಿಜಿಎಂ ಮಾತುಕತೆ ಮೇಲೆ ಈ ಪ್ರಕ್ರಿಯೆಯಾಗಿದೆ. ಬಹಳ ಸ್ಪಷ್ಟವಾಗಿ ಕೆಲವು ಶರತ್ತುಗಳ ಮೇಲೆ ಈ ಪ್ರಕ್ರಿಯೆಯಾಗಿದೆ ಎಂದರು. ಇದನ್ನೂ ಓದಿ: ನಿಮ್ಮ ನ್ಯೂಕ್ಲಿಯರ್‌ ಬ್ಲ್ಯಾಕ್‌ಮೇಲ್‌ಗೆ ನಾವು ಬೆದರಲ್ಲ: ಪಾಕ್‌ಗೆ ಮೋದಿ ಎಚ್ಚರಿಕೆ

    ಇನ್ನೂ ಆಹಾರ ಸಂಸ್ಕರಣೆ ಬೆಲೆ ಏರಿಕೆ ಮಾಡುವ ವ್ಯಾಪಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದು, ನಮ್ಮ ದೇಶದಲ್ಲಿ ಅಕ್ಕಿ ಗೋಧಿ ಸೇರಿದಂತೆ ದವಸ ಧಾನ್ಯಗಳು ಒಂದೂವರೆ ವರ್ಷಕ್ಕೆ ಆಗುವಷ್ಟು ಇದೆ. ಸಂಗ್ರಹಣೆ ಹಾಗೂ ಸಾಗಾಟ ಮಾಡುವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ನಮ್ಮ ಇಲಾಖೆಯಿಂದ ಅಧಿಸೂಚನೆ ಸಹ ನೀಡಲಾಗಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಬಹಳ ದೊಡ್ಡ ಪ್ರಮಾಣದಲ್ಲಿ ನಮ್ಮ ಬಳಿ ಆಹಾರ ಸಂಗ್ರಹಣೆ ಇದೆ ಎಂದು ಹೇಳಿದರು.

  • ಪಾಕ್‌ನ ಮಿರಾಜ್‌ ವಿಮಾನವನ್ನು ಹೊಡೆದ ಹಾಕಿದ ಭಾರತ

    ಪಾಕ್‌ನ ಮಿರಾಜ್‌ ವಿಮಾನವನ್ನು ಹೊಡೆದ ಹಾಕಿದ ಭಾರತ

    ನವದೆಹಲಿ: ಆಪರೇಷನ್ ಸಿಂಧೂರ (Operation Siindoor) ಕಾರ್ಯಾಚರಣೆ ಸಮಯದಲ್ಲಿ ಭಾರತ ಪಾಕಿಸ್ತಾನದ ಮಿರಾಜ್ (Mirage Jet) ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕೃತವಾಗಿ ತಿಳಿಸಿದೆ. ಭಾರತೀಯ ಸೇನೆ ಇಂದು ಹಂಚಿಕೊಂಡ ವೀಡಿಯೊದಲ್ಲಿ ಪಾಕಿಸ್ತಾನಿ ಮಿರಾಜ್‌ನ ಅವಶೇಷಗಳನ್ನು ನೋಡಬಹುದು.

    ಇಂದು ಮಧ್ಯಾಹ್ನ ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಹಿರಿಯ ಕಮಾಂಡರ್‌ಗಳು ಏಪ್ರಿಲ್ 22 ರಂದು ಜಮ್ಮು ಮತ್ತು ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಮೇ 7 ರಂದು ಪ್ರಾರಂಭಿಸಲಾದ ಆಪರೇಷನ್ ಸಿಂಧೂರ್‌ನ ಸಮಗ್ರ ವಿವರವನ್ನು ನೀಡಿದರು. ಇದನ್ನೂ ಓದಿ: ಪಾಕ್‍ಗೆ ನಾವು ಹೇಗಾದ್ರೂ ಪ್ರತಿಕ್ರಿಯಿಸುತ್ತೇವೆ, ಇದನ್ನು ಟ್ರಂಪ್ ಅರ್ಥ ಮಾಡಿಕೊಳ್ಳಲಿ: ಮೋದಿ

    ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ವೈಸ್ ಮಾರ್ಷಲ್ ಎಕೆ ಭಾರ್ತಿ ಮತ್ತು ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕ ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು.

    ಕೆಲ ದಿನಗಳಿಂದ ಭಾರತ ಪಾಕ್‌ನ ಯುದ್ಧ ವಿಮಾನವನ್ನು ಹೊಡೆದು ಹಾಕಿದೆ ಎಂಬ ವರದಿ ಬರುತ್ತಿತ್ತು. ಆದರೆ ಅಧಿಕೃತವಾಗಿ ಭಾರತ ತಿಳಿಸಿರಲಿಲ್ಲ. ಆದರೆ ಇಂದು ಅಧಿಕೃತವಾಗಿ ಮಿರಾಜ್‌ ವಿಮಾನವನ್ನು ಆಕಾಶದಲ್ಲೇ ಹೊಡೆದು ಹಾಕಿದ್ದೇವೆ ಎಂದು ತಿಳಿಸಿದರು.

    ಆಪರೇಷನ್ ಸಿಂಧೂರ್ ಸುಮಾರು 25 ನಿಮಿಷಗಳ ಕಾಲ ನಡೆಯಿತು ಮತ್ತು ಮೇ 7 ರ ಮುಂಜಾನೆ ನಡೆಸಲಾಯಿತು. ಇದು ಒಂಬತ್ತು ದೃಢೀಕೃತ ಭಯೋತ್ಪಾದಕ ತಾಣಗಳ ಮೇಲೆ ದಾಳಿ ನಡೆಸಿತು, ಅದರಲ್ಲಿ ನಾಲ್ಕು ಪಾಕಿಸ್ತಾನದ ಮುಖ್ಯ ಭೂಭಾಗದಲ್ಲಿ ಮತ್ತು ಐದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸೇರಿವೆ.