Tag: Indian Astronaut

  • ಪ್ರಧಾನಿ ಮೋದಿ ಭೇಟಿಯಾದ ಶುಭಾಂಶು ಶುಕ್ಲಾ

    ಪ್ರಧಾನಿ ಮೋದಿ ಭೇಟಿಯಾದ ಶುಭಾಂಶು ಶುಕ್ಲಾ

    ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣಿಸಿ ಮರಳಿದ್ದ ಭಾರತೀಯ ವಾಯುಪಡೆಯ ಪೈಲಟ್, ಗಗನಯಾತ್ರಿ ಶುಭಾಂಶು ಶುಕ್ಲಾ ಇವತ್ತು ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ.ಇದನ್ನೂ ಓದಿ: Haveri | ಮಾದಕ ವಸ್ತು ಮಾರಾಟ – ನಾಲ್ವರು ಅರೆಸ್ಟ್

    ಪ್ರಧಾನಿ ನಿವಾಸದಲ್ಲಿ ಮೋದಿಯವರು ಶುಭಾಂಶು ಶುಕ್ಲಾರನ್ನು ಆಲಿಂಗಿಸಿ ಬರಮಾಡಿಕೊಂಡರು. ಈ ವೇಳೆ ಶುಕ್ಲಾ ಮೋದಿಯವರಿಗೆ ತಾವು ಬಾಹ್ಯಾಕಾಶಕ್ಕೆ ಕೊಂಡೊಯ್ದಿದ್ದ ತ್ರಿವರ್ಣ ಧ್ವಜವನ್ನು ಉಡುಗೊರೆಯಾಗಿ ನೀಡಿದರು. ಜೊತೆಗೆ ತಮ್ಮ ಬಾಹ್ಯಾಕಾಶ ಯಾನದ ಬಗ್ಗೆ ಅನುಭವ ಹಂಚಿಕೊಂಡಿದ್ದಾರೆ. ಮೋದಿ, ಶುಕ್ಲಾ ಅವರ ಸಾಧನೆಗಳನ್ನು ಮಾತ್ರವಲ್ಲದೇ, ಭೂಮಿಯಾಚೆಗೆ ಕನಸು ಕಾಣಲು ಯುವಪೀಳಿಗೆಯನ್ನು ಪ್ರೇರೇಪಿಸಿದ್ದಕ್ಕಾಗಿ ಶ್ಲಾಘಿಸಿದರು.

    ಇನ್ನೂ ಸೋಮವಾರ ಸಂಸತ್ತಿನಲ್ಲಿ ಶುಭಾಂಶು ಶುಕ್ಲಾ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಲೋಕಸಭೆಯಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಶುಕ್ಲಾ ಸಾಧನೆಯನ್ನು ಬಣ್ಣಿಸಿ, 2040ರಲ್ಲಿ ಭಾರತದ ಗಗನಯಾನಿ ಚಂದ್ರನ ಮೇಲೆ ಇಳಿಯಲಿದ್ದಾರೆ ಎಂದು ಹೇಳಿದರು. ಇತ್ತ ಎಕ್ಸ್ನಲ್ಲಿ ಶಶಿ ತರೂರ್ ಅವರು ಶುಕ್ಲಾ ಸಾಧನೆಯನ್ನು ಕೊಂಡಾಡಿದ್ದಾರೆ.ಇದನ್ನೂ ಓದಿ: ಟ್ರಂಪ್ ಜೊತೆ ಅಲಾಸ್ಕ ಸಭೆ ಬಳಿಕ ಮೋದಿಗೆ ಫೋನ್ ಮಾಡಿದ ಪುಟಿನ್

  • ಬಾಹ್ಯಾಕಾಶದಲ್ಲಿ 18 ದಿನ – ಭೂಮಿಯಲ್ಲಿ ಮತ್ತೆ ನಡೆಯುವುದನ್ನ ಕಲಿಯುತ್ತಿದ್ದಾರೆ ಶುಭಾಂಶು ಶುಕ್ಲಾ

    ಬಾಹ್ಯಾಕಾಶದಲ್ಲಿ 18 ದಿನ – ಭೂಮಿಯಲ್ಲಿ ಮತ್ತೆ ನಡೆಯುವುದನ್ನ ಕಲಿಯುತ್ತಿದ್ದಾರೆ ಶುಭಾಂಶು ಶುಕ್ಲಾ

    ನವದೆಹಲಿ: ಬಾಹ್ಯಾಕಾಶದಲ್ಲಿ 18 ದಿನ ಕಳೆದು ವಾಪಸ್‌ ಆದ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ (Shubhanshu Shukla) ಭೂಮಿಗೆ ಹೊಂದಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ.

    ಕಳೆದ ವಾರ ಯಶಸ್ವಿ ಬಾಹ್ಯಾಕಾಶ ಯಾನದಿಂದ ಹಿಂದಿರುಗಿದ ಭಾರತೀಯ ಗಗನಯಾತ್ರಿ ಶುಕ್ಲಾ, ಭೂಮಿಯ ಮೇಲೆ ನಡೆಯಲು ಕಲಿಯುತ್ತಿದ್ದಾರೆ. ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿ ಜೂನ್ 25 ರಂದು ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಹಾರಾಟ ನಡೆಸಿದ ನಾಲ್ವರು ಗಗನಯಾತ್ರಿಗಳು ಶುಕ್ಲಾ ಕೂಡ ಒಬ್ಬರು. ಐಎಸ್‌ಎಸ್‌ನಲ್ಲಿ ಸುಮಾರು 18 ದಿನಗಳನ್ನು ಕಳೆದ ನಂತರ ಅವರು ಜುಲೈ 15 ರಂದು ಸುರಕ್ಷಿತವಾಗಿ ಭೂಮಿಗೆ ಮರಳಿದರು. ಇದನ್ನೂ ಓದಿ: ಬಾಹ್ಯಾಕಾಶದಿಂದ ಮರಳಿದ ಶುಭಾಂಶು ಶುಕ್ಲಾ – ಮಗನನ್ನು ಕಂಡು ಪೋಷಕರು ಭಾವುಕ

     

    View this post on Instagram

     

    A post shared by Shubhanshu Shukla (@gagan.shux)

    ಶುಕ್ಲಾ ಅವರು ಮತ್ತೆ ನಡೆಯಲು ಪ್ರಯತ್ನಿಸುತ್ತಿರುವ ಮತ್ತು ಗುರುತ್ವಾಕರ್ಷಣೆಗೆ ಒಗ್ಗಿಕೊಳ್ಳುತ್ತಿರುವ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಪುಟ್ಟ ಮಕ್ಕಳು ಆಗ ತಾನೆ ನಡೆಯುವುದನ್ನು ಕಲಿಯುತ್ತಿರುವಂತೆ ಇರುವ ದೃಶ್ಯ ವೀಡಿಯೋದಲ್ಲಿದೆ. ಶುಕ್ಲಾ ಅವರು ನಡೆಯಲು ಇಬ್ಬರು ಸಹಾಯ ಮಾಡುತ್ತಿದ್ದಾರೆ.

    ಬೇಗ ಚೇತರಿಸಿಕೊಳ್ಳಿ ಎಂದು ನನಗೆ ಅನೇಕರು ಸಂದೇಶ ಕಳುಹಿಸುತ್ತಿದ್ದಾರೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ ನಿಮಗೆಲ್ಲರಿಗೂ ಧನ್ಯವಾದ. ಗುರುತ್ವಾಕರ್ಷಣೆ ಇಲ್ಲದ ವಾತಾವರಣಕ್ಕೆ ನನ್ನ ದೇಹ ಒಗ್ಗಿಕೊಂಡಿತ್ತು. ಈಗ ಗುರುತ್ವಾಕರ್ಷಣೆಗೆ ಮರಳಿದಾಗ, ಇಲ್ಲಿಗೆ ಮತ್ತೆ ಹೊಂದಿಕೊಳ್ಳಬೇಕು. ನನ್ನ ದೇಹ ಬಹುಬೇಗ ಭೂಮಿ ವಾತಾವರಣಕ್ಕೆ ಹೊಂದಿಕೊಳ್ಳುತ್ತಿರುವುದನ್ನು ಕಂಡು ನನಗೆ ಅಚ್ಚರಿಯಾಯಿತು ಎಂದು ಶುಕ್ಲಾ ತಿಳಿಸಿದ್ದಾರೆ.

    ಶುಕ್ಲಾ ಮತ್ತು ಇತರ ಮೂವರು ಗಗನಯಾತ್ರಿಗಳು ವೈದ್ಯಕೀಯ ಮತ್ತು ಮರು-ಹೊಂದಾಣಿಕೆ ಕಾರ್ಯವಿಧಾನಗಳನ್ನು ಪೂರ್ಣಗೊಳಿಸಲು ಜುಲೈ 23 ರವರೆಗೆ ಕ್ವಾರಂಟೈನ್‌ನಲ್ಲಿ ಇರಲಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರನ್ನು ಉಲ್ಲೇಖಿಸಿ ಅಧಿಕೃತ ಹೇಳಿಕೆ ತಿಳಿಸಿದೆ. ಇದನ್ನೂ ಓದಿ: ಭೂಮಿಗೆ ವಾಪಸ್‌ ಆದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿ ಸ್ವಾಗತ

    ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಶುಕ್ಲಾ ಅವರ ಮೂರು ವಾರಗಳ ವಾಸ್ತವ್ಯವು ಭಾರತವು ತನ್ನದೇ ಆದ ಗಗನಯಾನ ಯೋಜನೆಗೆ ತಯಾರಿ ನಡೆಸುತ್ತಿರುವಾಗ ಬಾಹ್ಯಾಕಾಶ ಕಾರ್ಯಾಚರಣೆಗಳನ್ನು ನಿರ್ವಹಿಸಲು ಕೊಡುಗೆ ನೀಡಿದೆ ಎಂದು ಜಿತೇಂದ್ರ ಸಿಂಗ್‌ ತಿಳಿಸಿದ್ದಾರೆ.

  • ಜೈ ಹಿಂದ್‌.. ಜೈ ಭಾರತ್..‌: ಬಾಹ್ಯಾಕಾಶದಿಂದಲೇ ಶುಭಾಂಶು ಶುಕ್ಲಾ ಮೊದಲ ಸಂದೇಶ

    ಜೈ ಹಿಂದ್‌.. ಜೈ ಭಾರತ್..‌: ಬಾಹ್ಯಾಕಾಶದಿಂದಲೇ ಶುಭಾಂಶು ಶುಕ್ಲಾ ಮೊದಲ ಸಂದೇಶ

    – ನನ್ನ ಭುಜದಲ್ಲಿ ತ್ರಿವರ್ಣ ಧ್ವಜವಿದೆ.. ಭಾರತವೇ ನನ್ನ ಜೊತೆಗಿದೆ ಎಂದ ಶುಕ್ಲಾ

    ನವದೆಹಲಿ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಆಕ್ಸಿಯಮ್ -4 ಮಿಷನ್‌ಗಾಗಿ (Axiom-4 Mission) ಐತಿಹಾಸಿಕ ಬಾಹ್ಯಾಕಾಶ ಯಾತ್ರೆ ಕೈಗೊಂಡ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla), ಭಾರತದ ಜನತೆ ಜೊತೆ ತಮ್ಮ ಮೊದಲ ಸಂದೇಶ ಹಂಚಿಕೊಂಡಿದ್ದಾರೆ.

    ಸ್ಪೇಸ್‌ಎಕ್ಸ್‌ನ ‘ಫಾಲ್ಕನ್‌-9’ ರಾಕೆಟ್‌ ಬಾಹ್ಯಾಕಾಶಕ್ಕೆ ಹಾರುತ್ತಿದ್ದಂತೆ, ಮಿಷನ್‌ನ ಪೈಲಟ್ ಆಗಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭಾರತವನ್ನುದ್ದೇಶಿಸಿ ‘ನಮಸ್ಕಾರ’ ಎಂಬ ಪದದೊಂದಿಗೆ ಮಾತು ಆರಂಭಿಸಿದರು. ಇದನ್ನೂ ಓದಿ: NASA Axiom-4 Mission; ಆಕ್ಸಿಯಂ-4 ಉಡಾವಣೆ ಯಶಸ್ವಿ – ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಪ್ರಯಾಣ

     

    View this post on Instagram

     

    A post shared by PUBLiC TV (@publictv)

    ‘ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ.. 41 ವರ್ಷಗಳ ನಂತರ ನಾವು ಬಾಹ್ಯಾಕಾಶವನ್ನು ತಲುಪಿದ್ದೇವೆ. ಇದು ಒಂದು ಉತ್ತಮ ಸವಾರಿಯಾಗಿತ್ತು. ಎಂದು ಶುಭಾಂಶು ಶುಕ್ಲಾ ಭಾರತಕ್ಕಾಗಿ ತಮ್ಮ ಆರಂಭಿಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ರಾಕೆಟ್‌ ಸೆಕೆಂಡಿಗೆ 4.5 ಕಿ.ಮೀ ವೇಗದಲ್ಲಿ ಭೂಮಿಯ ಸುತ್ತಲೂ ಹಾರುತ್ತಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಭುಜದಲ್ಲಿ ಭಾರತೀಯ ತ್ರಿವರ್ಣ ಧ್ವಜವಿದೆ. ಧ್ವಜವು ಬಾಹ್ಯಾಕಾಶ ಹಾರಾಟದಲ್ಲಿ ಭಾರತವೇ ನನ್ನ ಜೊತೆಗಿದೆ ಎಂಬುದನ್ನು ನೆನಪಿಸುತ್ತದೆ. ಇದು ಐಎಸ್‌ಎಸ್‌ಗೆ ನನ್ನ ಪ್ರಯಾಣದ ಆರಂಭ ಮಾತ್ರವಲ್ಲ, ಭಾರತದ ಮಾನವ ಬಾಹ್ಯಾಕಾಶ ಹಾರಾಟದ ಆರಂಭವೂ ಆಗಿದೆ. ನೀವು ಪ್ರತಿಯೊಬ್ಬರೂ ಈ ಪ್ರಯಾಣದ ಭಾಗವಾಗಬೇಕೆಂದು ನಾನು ಬಯಸುತ್ತೇನೆ. ಭಾರತದ ಮಾನವ ಬಾಹ್ಯಾಕಾಶ ಕಾರ್ಯಕ್ರಮವನ್ನು ಒಟ್ಟಿಗೆ ಪ್ರಾರಂಭಿಸೋಣ ಎಂದು ಎಂದಿದ್ದಾರೆ.

    ಶುಭಾಂಶು ಶುಕ್ಲಾ ತನ್ನ ಸಂದೇಶದ ಕೊನೆಗೆ ಜೈ ಹಿಂದ್‌.. ಜೈ ಭಾರತ್‌.. ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂದು ಮಧ್ಯಾಹ್ನ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ

  • ಆರನೇ ಬಾರಿಗೆ ಆಕ್ಸಿಯಮ್ ಮಿಷನ್ 4 ಮುಂದೂಡಿಕೆ- ಶುಭಾಂಶು ಅಂತರಿಕ್ಷ ಯಾನ ಮತ್ತೆ ವಿಳಂಬ

    ಆರನೇ ಬಾರಿಗೆ ಆಕ್ಸಿಯಮ್ ಮಿಷನ್ 4 ಮುಂದೂಡಿಕೆ- ಶುಭಾಂಶು ಅಂತರಿಕ್ಷ ಯಾನ ಮತ್ತೆ ವಿಳಂಬ

    ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಮತ್ತು ಇತರ ಮೂವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕರೆದೊಯ್ಯುವ ಆಕ್ಸಿಯಮ್ -4 ಮಿಷನ್‌ನ (Axiom 4 Mission) ಉಡಾವಣೆಯನ್ನು ಆರನೇ ಬಾರಿಗೆ ಮುಂದೂಡಲಾಗಿದೆ.

    ಈ ಹಿಂದೆ ಜೂನ್ 22 ರ ಭಾನುವಾರದಂದು ಉಡಾವಣೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಈ ನಿರ್ಧಾರದಿಂದ ಹಿಂದೆ ಸರಿಯಲು ನಾಸಾ (NASA) ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ಹೊಸ ಉಡಾವಣಾ ದಿನಾಂಕವನ್ನು ನಿರ್ಧರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮತ್ತೆ ವಿಳಂಬ – ಜ್ವೆಜ್ಡಾ ಸೇವಾ ಮಾಡ್ಯೂಲ್‌ ದುರಸ್ತಿ ಬಳಿಕ ಮಿಷನ್ ಶುರು

    ಪ್ರಯೋಗಾಲಯದ ಜ್ವೆಜ್ಡಾ ಸೇವಾ ಮಾಡ್ಯೂಲ್‌ನ ಹಿಂಭಾಗದಲ್ಲಿ ಇತ್ತೀಚಿನ ದುರಸ್ತಿ ಕಾರ್ಯದ ನಂತರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಾರ್ಯಾಚರಣೆಯನ್ನು ಮೌಲ್ಯಮಾಪನ ಮಾಡುವುದನ್ನು ಮುಂದುವರಿಸಲು ಹೆಚ್ಚುವರಿ ಸಮಯ ಬೇಕಾಗುತ್ತದೆ ಎಂದು ಬಾಹ್ಯಾಕಾಶ ಸಂಸ್ಥೆ ಹೇಳಿದೆ.

    ಜೂನ್ 22 ರ ಉಡಾವಣೆಯನ್ನು ಮುಂದೂಡುವ ಮೊದಲು, ಆಕ್ಸಿಯಮ್ ಸ್ಪೇಸ್ ಮಿಷನ್ ಅನ್ನು ಜೂನ್ 19 ರಂದು ಪ್ರಾರಂಭಿಸಬೇಕಿತ್ತು. ಇದಕ್ಕೂ ಮೊದಲು, ಜೂನ್ 11 ರಂದು ಫ್ಲೋರಿಡಾದ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಇದನ್ನೂ ಓದಿ: ತಾಂತ್ರಿಕ ದೋಷ – ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ

    ಸ್ಪೇಸ್‌ಎಕ್ಸ್‌ನ ಫಾಲ್ಕನ್-9 ರಾಕೆಟ್‌ನಲ್ಲಿ ಇಂಧನ ಸೋರಿಕೆ ಮತ್ತು ನಂತರ ಐಎಸ್‌ಎಸ್‌ನ ರಷ್ಯಾದ ವಿಭಾಗದಲ್ಲಿ ಸೋರಿಕೆಯಿಂದಾಗಿ ಅದನ್ನು ಮುಂದೂಡಬೇಕಾಯಿತು. ಇದಕ್ಕೂ ಮೊದಲು, ಈ 14 ದಿನಗಳ ಕಾರ್ಯಾಚರಣೆಯನ್ನು ಜೂನ್ 8 ಮತ್ತು 10 ರಂದು ಮುಂದೂಡಲಾಗಿತ್ತು. ಈ ಕಾರ್ಯಾಚರಣೆಯನ್ನು ಮೊದಲು ಮೇ 29 ರಂದು ಪ್ರಾರಂಭಿಸಬೇಕಿತ್ತು.

    ಆಕ್ಸಿಯಮ್ ಮಿಷನ್ 4 ಎಂದರೇನು?
    ಈ ಮಿಷನ್ ಭಾರತಕ್ಕೆ ಹಾಗೂ ಪೋಲೆಂಡ್ ಮತ್ತು ಹಂಗೇರಿಗೆ ಐತಿಹಾಸಿಕವಾಗಲಿದೆ. ಈ ಎರಡೂ ದೇಶಗಳು 40 ವರ್ಷಗಳಲ್ಲಿ ಮೊದಲ ಬಾರಿಗೆ ಮಾನವ ಬಾಹ್ಯಾಕಾಶ ಹಾರಾಟದಲ್ಲಿ ಭಾಗವಹಿಸಲಿವೆ. ಭಾರತ, ಪೋಲೆಂಡ್ ಮತ್ತು ಹಂಗೇರಿ ಜಂಟಿ ಕಾರ್ಯಾಚರಣೆಯಡಿಯಲ್ಲಿ ISSಗೆ ಒಟ್ಟಿಗೆ ಹೋಗುತ್ತಿರುವುದು ಇದೇ ಮೊದಲು. ಈ ಮಿಷನ್ ಅನ್ನು ಫಾಲ್ಕನ್ 9 ರಾಕೆಟ್‌ನಲ್ಲಿ ಸ್ಪೇಸ್‌ಎಕ್ಸ್ ಡ್ರ್ಯಾಗನ್ ಕ್ಯಾಪ್ಸುಲ್‌ನಲ್ಲಿ ಉಡಾವಣೆ ಮಾಡಲಾಗುವುದು. ಆಕ್ಸಿಯಮ್-4 ಸಿಬ್ಬಂದಿಯ ಉಡಾವಣೆಯು ಫ್ಲೋರಿಡಾದ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಲ್ಲಿರುವ ಲಾಂಚ್ ಕಾಂಪ್ಲೆಕ್ಸ್ 39A ನಿಂದ ನಡೆಯಲಿದೆ. ಇದನ್ನೂ ಓದಿ: ನಾಳೆ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ

  • ಮೇ ತಿಂಗಳಲ್ಲಿ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಲಿದ್ದಾರೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ

    ಮೇ ತಿಂಗಳಲ್ಲಿ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಲಿದ್ದಾರೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ

    – ಬಾಹ್ಯಾಕಾಶ ಪ್ರಯಾಣದಲ್ಲಿ ಮತ್ತೊಂದು ಮೈಲುಗಲ್ಲಿಗೆ ಸಜ್ಜಾದ ಭಾರತ

    ನವದೆಹಲಿ: ಬಾಹ್ಯಾಕಾಶ ಪ್ರಯಾಣದಲ್ಲಿ ಒಂದು ದೊಡ್ಡ ಮೈಲಿಗಲ್ಲು ಸಾಧಿಸಲು ಭಾರತ ಸಜ್ಜಾಗಿದೆ. ಗಗನಯಾತ್ರಿ ಅಥವಾ ನಿಯೋಜಿತ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಮುಂದಿನ ತಿಂಗಳು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (International Space Station) ಹಾರಲಿದ್ದಾರೆ ಎಂದು ಕೇಂದ್ರ ಹೇಳಿದೆ.

    ಭಾರತೀಯ ಗಗನಯಾತ್ರಿಯನ್ನು ಹೊತ್ತು ಸಾಗಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ಯಾನ ಮಿಷನ್‌ ಮುಂದಿನ ತಿಂಗಳು ನಿಗದಿಯಾಗಿದೆ. ಭಾರತ ತನ್ನ ಬಾಹ್ಯಾಕಾಶ ಪ್ರಯಾಣದಲ್ಲಿ ಒಂದು ನಿರ್ಣಾಯಕ ಅಧ್ಯಾಯವನ್ನು ಬರೆಯಲು ಸಜ್ಜಾಗಿದೆ. ಇಸ್ರೋ ಹೊಸ ಮೈಲುಗಲ್ಲು ದಾಖಲಿಸುತ್ತಿರುವಾಗ ಭಾರತೀಯ ಗಗನಯಾತ್ರಿಯೊಬ್ಬರು ಐತಿಹಾಸಿಕ ಬಾಹ್ಯಾಕಾಶ ಯಾನಕ್ಕೆ ಸಜ್ಜಾಗಿದ್ದಾರೆ. ಗಗನಯಾನ ಸಿದ್ಧತೆ, ಐಎಸ್ಎಸ್ ಮಿಷನ್ ಮತ್ತು ಉಡಾವಣೆಗಳೊಂದಿಗೆ ಭಾರತದ ಬಾಹ್ಯಾಕಾಶ ಕನಸುಗಳು ಎತ್ತರಕ್ಕೆ ಏರುತ್ತಿವೆ ಎಂದು ಕೇಂದ್ರ ಬಾಹ್ಯಾಕಾಶ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಇನ್ನು ಮುಂದೆ ಪಿಯುಸಿಯಲ್ಲಿ ಕಲೆ, ವಾಣಿಜ್ಯ ಓದಿದವರೂ ಪೈಲಟ್‌ ಆಗಬಹುದು!

    ಕಳೆದ ಎಂಟು ತಿಂಗಳಿಂದ ನಾಸಾ ಮತ್ತು ಖಾಸಗಿ ಬಾಹ್ಯಾಕಾಶ ಕಂಪನಿ ಆಕ್ಸಿಯಮ್ ಸ್ಪೇಸ್‌ನಲ್ಲಿ ತರಬೇತಿ ಪಡೆಯುತ್ತಿರುವ ಗ್ರೂಪ್ ಕ್ಯಾಪ್ಟನ್ ಶುಕ್ಲಾ, ಭಾರತ 60 ಮಿಲಿಯನ್‌ ಡಾಲರ್‌ಗಿಂತಲೂ ಹೆಚ್ಚು ಹಣವನ್ನು ಪಾವತಿಸಿರುವ ಖಾಸಗಿ ವಾಣಿಜ್ಯ ಕಾರ್ಯಾಚರಣೆಯಲ್ಲಿ ISSಗೆ ಹಾರುತ್ತಿದ್ದಾರೆ. ಈ ಕಾರ್ಯಾಚರಣೆಯನ್ನು ಸ್ಪೇಸ್‌ಎಕ್ಸ್ ಫಾಲ್ಕನ್ 9 ರಾಕೆಟ್‌ನಲ್ಲಿ ಉಡಾವಣೆ ಮಾಡಲಾಗುವುದು. ನಾಲ್ವರು ಸಿಬ್ಬಂದಿಯನ್ನು ಸ್ಪೇಸ್‌ಎಕ್ಸ್ ಕ್ರೂ ಡ್ರ್ಯಾಗನ್ ಕ್ಯಾಪ್ಸುಲ್‌ನಲ್ಲಿ ಕೂರಿಸಲಾಗುವುದು. ಇದು ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿದೆ.

    ಗ್ರೂಪ್ ಕ್ಯಾಪ್ಟನ್ ಶುಕ್ಲಾ 40 ವರ್ಷ ವಯಸ್ಸಿನವರಾಗಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಗಗನಯಾತ್ರಿಗಳಲ್ಲಿ ಅತ್ಯಂತ ಕಿರಿಯರನ್ನು ಈ ಕಾರ್ಯಾಚರಣೆಗೆ ಆಯ್ಕೆ ಮಾಡಿದೆ. ಇದನ್ನೂ ಓದಿ: ಮೇ 1 ರಿಂದ ಜಿಪಿಎಸ್ ಆಧಾರಿತ ಟೋಲ್ ಇಲ್ಲ – ಹೆದ್ದಾರಿ ಸಚಿವಾಲಯ ಸ್ಪಷ್ಟನೆ

    ಆಕ್ಸಿಯಮ್-4 ಮಿಷನ್‌ನ ಕಮಾಂಡರ್ ಆಗಿ ನಾಸಾದ ಮಾಜಿ ಗಗನಯಾತ್ರಿ ಪೆಗ್ಗಿ ವಿಟ್ಸನ್ ಕಾರ್ಯನಿರ್ವಹಿಸಲಿದ್ದಾರೆ. ಅವರು ಈಗ ಆಕ್ಸಿಯಮ್ ಸ್ಪೇಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇತರ ಇಬ್ಬರು ಸಿಬ್ಬಂದಿ ಸದಸ್ಯರು ಪೋಲೆಂಡ್‌ನ ಸ್ಲಾವೋಸ್ಜ್ ಉಜ್ನಾನ್ಸ್ಕಿ (ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆಯ ಗಗನಯಾತ್ರಿ ಮತ್ತು ಮಿಷನ್ ತಜ್ಞರಾಗಿದ್ದಾರೆ), ಹಂಗೇರಿಯ ಟಿಬೋರ್ ಕಾಪು ಕೂಡ ಅದೇ ಪಾತ್ರವನ್ನು ವಹಿಸುತ್ತಾರೆ. ಗ್ರೂಪ್ ಕ್ಯಾಪ್ಟನ್ ಶುಕ್ಲಾ ಈ ಮಿಷನ್‌ನ ಪೈಲಟ್ ಆಗಿರುತ್ತಾರೆ.