Tag: Indian Coast Guard

  • ಮಂಗಳೂರು| ಭಾರತೀಯ ತಟ ರಕ್ಷಣಾ ಪಡೆಯಿಂದ 31 ಮೀನುಗಾರರ ರಕ್ಷಣೆ

    ಮಂಗಳೂರು| ಭಾರತೀಯ ತಟ ರಕ್ಷಣಾ ಪಡೆಯಿಂದ 31 ಮೀನುಗಾರರ ರಕ್ಷಣೆ

    ಮಂಗಳೂರು: ಆಳ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಗೋವಾದ ಮೀನುಗಾರಿಕಾ ಬೋಟ್‌ನಲ್ಲಿದ್ದ 31 ಮೀನುಗಾರರನ್ನು ಭಾರತೀಯ ತಟ ರಕ್ಷಣಾ ಪಡೆ ರಕ್ಷಿಸಿದೆ.

    ಅ.24 ರಂದು ಸಂಪರ್ಕಕ್ಕೆ ಸಿಗದೆ IFB ಸಂತ ಆಂಟನಿ ಹೆಸರಿನ ಬೋಟ್ ಕಾಣೆಯಾಗಿತ್ತು. ತುರ್ತು ಮಾಹಿತಿ ಪಡೆದು ಕೋಸ್ಟ್ ಗಾರ್ಡ್‌ನ ICGS ಕಸ್ತೂರ ಬಾ ಗಾಂಧಿ ಹಡಗು ಕಾರ್ಯಾಚರಣೆ ನಡೆಸಿತ್ತು. ಇದನ್ನೂ ಓದಿ: Anekal | ಕಂದಕಕ್ಕೆ ಉರುಳಿದ ಕಂಟೈನರ್ ಲಾರಿ – ಇಬ್ಬರು ದುರ್ಮರಣ, ನಾಲ್ವರು ಗಂಭೀರ

    ಆಳ ಸಮುದ್ರದಲ್ಲಿ ಸ್ಟೇರಿಂಗ್ ಹಾಗೂ ಗೇರ್‌ನ ವೈಫಲ್ಯದಿಂದಾಗಿ ಮೀನುಗಾರಿಕಾ ಬೋಟ್ ಅಪಾಯಕ್ಕೆ ಸಿಲುಕಿತ್ತು. ಆಳ ಸಮುದ್ರದಲ್ಲಿ ತೂಫಾನ್ ನಡುವೆ ಸಿಲುಕಿ ಮೀನುಗಾರಿಕಾ ಬೋಟ್‌ನಲ್ಲಿದ್ದ 31 ಮೀನುಗಾರರು ಅಪಾಯದಲ್ಲಿದ್ದರು.

    ಸಮುದ್ರ ತಟದಿಂದ 100 ನಾಟಿಕಲ್ ಮೈಲ್ಸ್ ದೂರುದಲ್ಲಿ ಬೋಟ್ ಅಪಾಯಕ್ಕೆ ಸಿಲುಕಿತ್ತು. ಆಳ‌ ಸಮುದ್ರದಲ್ಲಿ ಅಪಾಯದಲ್ಲಿದ್ದ ಬೋಟನ್ನು ಕೋಸ್ಟ್ ಗಾರ್ಡ್‌ನ ಡೋನಿಯರ್ ಗಸ್ತು ವಿಮಾನ ಪತ್ತೆ ಮಾಡಿತ್ತು. ಮೀನುಗಾರಿಕಾ ಬೋಟ್ ಬಗ್ಗೆ ಕಡಲಲ್ಲಿ ಗಸ್ತು ತಿರುಗುತ್ತಿದ್ದ ICGS ಕಸ್ತೂರ ಬಾ ಗಾಂಧಿ ಹಡಗಿಗೆ ಮಾಹಿತಿ ರವಾನಿಸಿತು. ಇದನ್ನೂ ಓದಿ: ಗ್ಯಾರಂಟಿ ಭಾಗ್ಯ ಕೊಟ್ಟ ಸರ್ಕಾರದಿಂದ ಕತ್ತಲೆ ಭಾಗ್ಯ – ಸ್ಥಳೀಯರ ಆಕ್ರೋಶ

    ಪ್ರತಿಕೂಲ ಹವಾಮಾನ ನಡುವೆ ಕಾರ್ಯಾಚರಣೆ ನಡೆಸಿದ ಭಾರತೀಯ ತಟ ರಕ್ಷಣಾ ಪಡೆಯ ಯೋಧರು, ಅಪಾಯದಲ್ಲಿ ಮೀನುಗಾರರನ್ನು ರಕ್ಷಿಸಿದರು. ಹಾನಿಗೊಂಡಿದ್ದ ಮೀನುಗಾರಿಕಾ ಬೋಟನ್ನು ಹೊನ್ನಾವರ ಮೀನುಗಾರಿಕಾ ಬಂದರಿಗೆ ಎಳೆತಂದು ನಿಲ್ಲಿಸಿದರು.

  • ಕೇರಳ | ಸರಕು ಸಾಗಣೆ ಹಡಗಿನಲ್ಲಿದ್ದ ತೈಲ ಕಂಟೇನರ್‌ಗಳು ಸಮುದ್ರಪಾಲು – ಹೆಚ್ಚಿದ ಆತಂಕ

    ಕೇರಳ | ಸರಕು ಸಾಗಣೆ ಹಡಗಿನಲ್ಲಿದ್ದ ತೈಲ ಕಂಟೇನರ್‌ಗಳು ಸಮುದ್ರಪಾಲು – ಹೆಚ್ಚಿದ ಆತಂಕ

    ತಿರುನಂತಪುರಂ: ಕೊಚ್ಚಿಗೆ ಬರುತ್ತಿದ್ದ ಸರಕು ಸಾಗಣೆ ಹಡಗಿನಲ್ಲಿದ್ದ ತೈಲ ತುಂಬಿದ ಕಂಟೇನರ್‌ಗಳು (Oil Containers) ಸಮುದ್ರ ಪಾಲಾಗಿವೆ. ಸುಮಾರು 10 ಕಂಟೇನರ್‌ಗಳು ಸಮುದ್ರ ಪಾಲಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

    ಆದ್ದರಿಂದ ಕಂಟೇನರ್‌ಗಳು ದಡಕ್ಕೆ ಬಂದ್ರೆ ಅವುಗಳ ಬಳಿ ತೆರಳದಂತೆ ಕೇರಳ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಪ್ರಾಧಿಕಾರವು (KSDMA) ಸಾರ್ವಜನಿಕರಿಗೆ ಎಚ್ಚರಿಸಿದೆ. ಈಗಾಗಲೇ ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಇದನ್ನೂ ಓದಿ: ಮೇ 26ರಿಂದ 2 ದಿನ ಮೋದಿ ಗುಜರಾತ್ ಪ್ರವಾಸ – 53,414 ಕೋಟಿ ರೂ. ವೆಚ್ಚದ ಯೋಜನೆಗಳ ಉದ್ಘಾಟನೆ

    ಕೊಚ್ಚಿ ಕರಾವಳಿಯಿಂದ ನೈರುತ್ಯಕ್ಕೆ 38 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಅರಬ್ಬಿ ಸಮುದ್ರದಲ್ಲಿ (Arabian Sea) ಅಪಘಾತ ಸಂಭವಿಸಿದೆ. ಲೈಬೀರಿಯಾ ಧ್ವಜ ಹೊತ್ತಿದ್ದ ಹಡಗು ವಿಝಿಂಜಂನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದಾಗ ಒಂದು ಭಾಗಕ್ಕೆ ವಾಲಿದ್ದರಿಂದ ಸುಮಾರು 10 ಕಂಟೇನರ್‌ಗಳು ಸಮುದ್ರಕ್ಕೆ ಬಿದ್ದಿವೆ ಎಂದು ವರದಿಗಳು ತಿಳಿಸಿವೆ.

    ಹಡಗಿನಲ್ಲಿದ್ದ ಎಲ್ಲ 24 ಸಿಬ್ಬಂದಿಯನ್ನ ಕರಾವಳಿ ಕಾವಲು ಪಡೆ ಮತ್ತು ನೌಕಾಪಡೆ ರಕ್ಷಿಸಿದೆ. ಕಂಟೇನರ್‌ಗಳಲ್ಲಿ ಮರೀನ್ ಗ್ಯಾಸ್ ಆಯಿಲ್ (ಹಡಗು, ನೌಕೆಗಳಲ್ಲಿ ಬಳಸುವ ಇಂಧನ) ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಇದನ್ನೂ ಓದಿ: 25,000 ರೂ.ಗೆ ಜೀತಕ್ಕಿರಿಸಿದ್ದ ಮಗ ಸಾವು – ರಹಸ್ಯವಾಗಿ ಸಮಾಧಿಯಲ್ಲಿ ಹೂತಿಟ್ಟಿದ್ದ ಮಾಲೀಕ ಅರೆಸ್ಟ್‌

    ‘ಅಪಾಯಕಾರಿ ವಸ್ತು’ ಹೊಂದಿರುವ ಕಂಟೇನರ್‌ಗಳು ಸಮುದ್ರಕ್ಕೆ ಬಿದ್ದಿದ್ದು, ಅವು ದಡಕ್ಕೆ ಸೇರಬಹುದು ಎಂದು ಕರಾವಳಿ ಕಾವಲು ಪಡೆ ಎಚ್ಚರಿಸಿದೆ. ಒಂದು ವೇಳೆ ದಡದಲ್ಲಿ ತೇಲುತ್ತಿರುವ ವಸ್ತುಗಳು ಕಂಡುಬಂದ್ರೆ, ಜನ ಅವುಗಳ ಹತ್ತಿರಕ್ಕೆ ಹೋಗದೇ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಕಾವಲು ಪಡೆ ಸೂಚನೆ ನೀಡಿದೆ. ಇದನ್ನೂ ಓದಿ: ವಿಧಾನಸೌಧ ಗೈಡೆಡ್ ಟೂರ್‌ಗೆ ಭಾನುವಾರ ಚಾಲನೆ – ಜೂ.1ರಿಂದ ಸಾರ್ವಜನಿಕರಿಗೆ ಪ್ರವೇಶ, ಶುಲ್ಕ ಪ್ರಕಟ

  • ಅಂಡಮಾನ್‌ | ಬೋಟ್‌ನಲ್ಲಿ ಸಾಗಿಸ್ತಿದ್ದ 5 ಟನ್‌ ಮಾದಕ ವಸ್ತು ವಶಪಡಿಸಿಕೊಂಡ ಕೋಸ್ಟ್ ಗಾರ್ಡ್‌

    ಅಂಡಮಾನ್‌ | ಬೋಟ್‌ನಲ್ಲಿ ಸಾಗಿಸ್ತಿದ್ದ 5 ಟನ್‌ ಮಾದಕ ವಸ್ತು ವಶಪಡಿಸಿಕೊಂಡ ಕೋಸ್ಟ್ ಗಾರ್ಡ್‌

    ಪೋರ್ಟ್ ಬ್ಲೇರ್: ಅಂಡಮಾನ್‌ನಲ್ಲಿ (Andaman) ಮೀನುಗಾರಿಕಾ ದೋಣಿಯಿಂದ ಸುಮಾರು 5 ಟನ್‌ ಮಾದಕ ವಸ್ತುವನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ವಶಪಡಿಸಿಕೊಂಡಿದೆ. ಇದುವರೆಗೆ ಕೋಸ್ಟ್ ಗಾರ್ಡ್‌ (Indian Coast Guard) ವಶಪಡಿಸಿಕೊಂಡ ಮಾದಕ ವಸ್ತುವಿನಲ್ಲೇ ಅತಿ ಹೆಚ್ಚಿನ ಪ್ರಮಾಣದ್ದಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ತಿಂಗಳ ಆರಂಭದಲ್ಲಿ ಗುಜರಾತ್‌ನ ಕರಾವಳಿಯಲ್ಲಿ ಅಧಿಕಾರಿಗಳು ಸುಮಾರು 700 ಕಿಲೋಗ್ರಾಂಗಳಷ್ಟು ಮೆಥಾಂಫೆಟಮೈನ್ ಎಂಬ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದರು. ಈ ವೇಳೆ 8 ಇರಾನ್ ಪ್ರಜೆಗಳನ್ನು ಬಂಧಿಸಿದ್ದರು.

    ಮಾದಕ ವಸ್ತುಗಳ ಕಳ್ಳಸಾಗಾಣಿಕೆ ತಡೆಗೆ ಭಾರತ ‘ಸಾಗರ್ ಮಂಥನ್ – 4’ ಎಂಬ ಗುಪ್ತಚರ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಇದರ ಭಾಗವಾಗಿ ನೌಕಾಪಡೆಯು ಭಾರತದ ವ್ಯಾಪ್ತಿಯ ಸಮುದ್ರ ಪ್ರದೇಶದಲ್ಲಿ ಸಂಚರಿಸುವ ಹಡಗುಗಳು ಮತ್ತು ದೋಣಿಗಳ ಮೇಲೆ ನಿಗಾ ಇಡುತ್ತದೆ.

  • ಗುಜರಾತ್ | ಕರಾವಳಿ ಕಾವಲು ಪಡೆಯಿಂದ ಪಾಕ್ ವಶದಲ್ಲಿದ್ದ 7 ಭಾರತೀಯ ಮೀನುಗಾರರ ರಕ್ಷಣೆ

    ಗುಜರಾತ್ | ಕರಾವಳಿ ಕಾವಲು ಪಡೆಯಿಂದ ಪಾಕ್ ವಶದಲ್ಲಿದ್ದ 7 ಭಾರತೀಯ ಮೀನುಗಾರರ ರಕ್ಷಣೆ

    ಗಾಂಧಿನಗರ: ಭಾರತ – ಪಾಕಿಸ್ತಾನ ಸಮುದ್ರ ಗಡಿಯ ಮಧ್ಯೆ ಪಾಕಿಸ್ತಾನ (Pakistan) ಕರಾವಳಿ ಭದ್ರತಾ ಏಜೆನ್ಸಿ ವಶದಲ್ಲಿದ್ದ ಏಳು ಭಾರತೀಯ ಮೀನುಗಾರರನ್ನು ಗುಜರಾತ್ (Gujarat) ಕರಾವಳಿ ಕಾವಲು ಪಡೆ ರಕ್ಷಿಸಿದೆ.

    ಭಾರತೀಯ ಮೀನುಗಾರರ ದೋಣಿಯೊಂದು ಮೀನುಗಾರಿಕೆ ರಹಿತ ಪ್ರದೇಶದಲ್ಲಿ ಇರುವುದನ್ನು ಕಂಡ ಕರಾವಳಿ ಕಾವಲು ಪಡೆ ಏನೋ ಸಮಸ್ಯೆಯಾಗಿರುವಾಗಿ ತಿಳಿಸಿದ್ದಾರೆ. ಬಳಿಕ ಅವರನ್ನು ರಕ್ಷಿಸಿದ್ದಾರೆ. ಮೀನುಗಾರರನ್ನು ಉಭಯ ದೇಶಗಳ ನಡುವಿನ ಸಮುದದ್ರ ಗಡಿಯ ಬಳಿ ಅವರ ಹಡಗಿನಲ್ಲಿ ಇರಿಸಲಾಗಿತ್ತು ಎಂದು ಭಾರತೀಯ ಕರಾವಳಿ ಕಾವಲು ಪಡೆ (IGC) ತಿಳಿಸಿದೆ.ಇದನ್ನೂ ಓದಿ: VRS ತೆಗೆದೊಕೊಳ್ಳಿ ಅಥವಾ ವರ್ಗಾವಣೆಯಾಗಿ – ಹಿಂದೂಯೇತರ ಸಿಬ್ಬಂದಿ ಬೇಡ: ತಿರುಪತಿ ಬೋರ್ಡ್‌

    ಸೋಮವಾರ ಮಧ್ಯಾಹ್ನ 3:30ರ ಸುಮಾರಿಗೆ ಮೀನುಗಾರಿಕೆ ರಹಿತ ಪ್ರದೇಶದಲ್ಲಿ ಭಾರತೀಯ ಮೀನುಗಾರರ ದೋಣಿ ಕಂಡಿದ್ದು, ಬಳಿಕ ಇನ್ನೊಂದು ದೋಣಿ `ಕಾಲ್ ಭೈರವ್’ ಅನ್ನು ಪಾಕಿಸ್ತಾನ ಕಡಲ ಭದ್ರತಾ ಸಂಸ್ಥೆ ತಡೆಹಿಡಿದಿದೆ. ಜೊತೆಗೆ ಆ ಹಡಗಿನಲ್ಲಿ 7 ಮೀನುಗಾರರು ಇರುವುದಾಗಿ ತಿಳಿದುಬಂದಿದೆ.

    ಕೂಡಲೇ ಕಾವಲು ಪಡೆ ಕಾರ್ಯ ಆರಂಭಿಸಿ, ಭಾರತ – ಪಾಕಿಸ್ತಾನ ಸಮುದ್ರ ಗಡಿ ಬಳಿ ತಲುಪಿದ್ದು, ಮೀನುಗಾರರನ್ನು ರಕ್ಷಿಸಿದ್ದಾರೆ.

    ಏಳು ಮೀನುಗಾರರನ್ನು ಪಾಕಿಸ್ತಾನದ ಹಡಗಿನಿಂದ ಸುರಕ್ಷಿತವಾಗಿ ಹೊರತೆಗೆದಿದ್ದು, ಆರೋಗ್ಯವಾಗಿದ್ದಾರೆ. ಈ ಘಟನೆ ಭಾರತೀಯ ದೋಣಿ ಕಾಲ್ ಭೈರವ್ ಹಾನಿಗೊಳಗಾಗಿದ್ದು, ಮುಳುಗಿದೆ ಎಂದು ತಿಳಿಸಿದೆ.ಇದನ್ನೂ ಓದಿ: 75 ವರ್ಷದ ವೃದ್ಧೆ ಮೇಲೆ ಭಿಕ್ಷಾಟನೆ ಮಾಡುತ್ತಿದ್ದ ಯುವಕನಿಂದ ಅತ್ಯಾಚಾರ

  • ಗುಜರಾತ್ | ಸಮುದ್ರದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ – ಮೂವರು ಸಿಬ್ಬಂದಿ ನಾಪತ್ತೆ

    ಗುಜರಾತ್ | ಸಮುದ್ರದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ – ಮೂವರು ಸಿಬ್ಬಂದಿ ನಾಪತ್ತೆ

    ಗಾಂಧಿನಗರ: ಭಾರತೀಯ ಕೋಸ್ಟ್ ಗಾರ್ಡ್ (Indian Coast Guard) ಹೆಲಿಕಾಪ್ಟರ್ ಗುಜರಾತ್ (Gujarat) ಸಮುದ್ರದಲ್ಲಿ ತುರ್ತು ಭೂಸ್ಪರ್ಶ (Emergency Landing) ಮಾಡಿದ್ದು, ಅದರಲ್ಲಿದ್ದ ಇಬ್ಬರು ಪೈಲಟ್‍ಗಳು ಸೇರಿ ಮೂವರು ನಾಪತ್ತೆಯಾಗಿದ್ದಾರೆ.

    ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೋಸ್ಟ್ ಗಾರ್ಡ್‍ನ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮುಲಕ ನಾಪತ್ತೆಯಾದ ಸಿಬ್ಬಂದಿಯನ್ನು ಹುಡುಕಾಟ ನಡೆಸಲಾಗುತ್ತಿದೆ. ಇದನ್ನೂ ಓದಿ: ಜಮ್ಮು ಸೇನಾ ಶಿಬಿರದಲ್ಲಿ ಯೋಧನ ನಿಗೂಢ ಸಾವು: ಉಗ್ರರ ದಾಳಿಯಾಗಿರುವ ಶಂಕೆ

    ಹೆಲಿಕಾಪ್ಟರ್‍ನ ಅವಶೇಷಗಳು ಪತ್ತೆಯಾಗಿದ್ದು, ಸಿಬ್ಬಂದಿಯ ಬಗ್ಗೆ ಯಾವುದೇ ಸುಳಿವು ಇನ್ನೂ ಸಿಕ್ಕಿಲ್ಲ. ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು – ಅಧಿಕೃತವಾಗಿ ಒಪ್ಪಿಕೊಂಡ ಸರ್ಕಾರ

  • ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನ

    ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನ

    ಚೆನ್ನೈ: ಭಾರತೀಯ ಕೋಸ್ಟ್ ಗಾರ್ಡ್ (ICG) ಮಹಾನಿರ್ದೇಶಕ ರಾಕೇಶ್ ಪಾಲ್ (Rakesh Pal) ಅವರು ಹೃದಯಾಘಾತದಿಂದ ಭಾನುವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಕೇಶ್‌ ಪಾಲ್‌ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ರಾಕೇಶ್‌ ಪಾಲ್ ಶನಿವಾರ ಚೆನ್ನೈಗೆ ಬಂದಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದರು. ತಕ್ಷಣ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ (Rajiv Gandhi General Hospital) ದಾಖಲಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸಾಲುಸಾಲು ರಜೆ ಮುಗಿಸಿ ಬೆಂಗಳೂರಿನತ್ತ ಜನ – ಕಿಲೋ ಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್

    ಇನ್ನು ರಾಕೇಶ್‌ ಪಾಲ್‌ ಅವರ ಅಕಾಲಿಕ ಮರಣಕ್ಕೆ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಂಬನಿ ಮಿಡಿದಿದ್ದಾರೆ. ಅವರು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ‘ರಾಕೇಶ್ ಪಾಲ್ ಅಕಾಲಿಕ ನಿಧನದಿಂದ ತೀವ್ರ ದುಃಖವಾಗಿದೆ. ಸಮರ್ಥ ಮತ್ತು ಬದ್ಧ ಅಧಿಕಾರಿಯಾಗಿದ್ದು, ಅವರ ನಾಯಕತ್ವದಲ್ಲಿ ICG ಭಾರತದ ಕಡಲ ಭದ್ರತೆಯನ್ನು ಬಲಪಡಿಸುವಲ್ಲಿ ದೊಡ್ಡ ದಾಪುಗಾಲುಗಳನ್ನು ಇಡುತ್ತಿತ್ತು. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಬಳಿಕ ಅಂತಿಮ ದರ್ಶನವನ್ನೂ ಪಡೆದಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣ ಟಿಕೆಟ್ ಜೆಡಿಎಸ್‌ಗೆ ಪಡೆಯುವಂತೆ ಕಾರ್ಯಕರ್ತರಿಂದ ಒತ್ತಡ – ಹೆಚ್‌ಡಿಕೆ ರಿಯಾಕ್ಷನ್‌ ಏನು?

    1989ರಲ್ಲಿ ಭಾರತೀಯ ಕೋಸ್ಟ್‌ ಗಾರ್ಡ್‌ ಸೇರಿದ್ದ ಪಾಲ್‌, ಜುಲೈ 2023ರಲ್ಲಿ ಭಾರತೀಯ ಕೋಸ್ಟ್‌ ಗಾರ್ಡ್‌ನ ಮಹಾ ನಿರ್ದೇಶಕರಾಗಿ ನೇಮಕಗೊಂಡರು. ಕಳೆದ ತಿಂಗಳಷ್ಟೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ತಮ್ಮ ವಿಶೇಷ ಸೇವೆ ವಿಶಿಷ್ಟ ಸೇವಾ ಮೆಡಲ್‌ ಪಡೆದಿದ್ದರು. ಕೋಸ್ಟ್ ಗಾರ್ಡ್‌ನ ಮೊದಲ ಗನ್ನರ್ ಎಂಬ ಮನ್ನಣೆ ಹೊಂದಿದ್ದ ಪಾಲ್‌, 2013 ರಲ್ಲಿ ತತ್ರಾಕ್ಷಕ್ ಪದಕ (ಟಿಎಂ) ಮತ್ತು 2018 ರಲ್ಲಿ ಅವರ ವಿಶಿಷ್ಟ ಸೇವೆಗಾಗಿ ಅಧ್ಯಕ್ಷ ತತ್ರಾಕ್ಷಕ್ ಪದಕ (ಪಿಟಿಎಂ) ಸಹ ಪಡೆದಿದ್ದಾರೆ. ಇದನ್ನೂ ಓದಿ: Bengaluru | ಹಣಕ್ಕಾಗಿ ತಾಯಿ-ಮಗನ ಕಿಡ್ನ್ಯಾಪ್‌ ಮಾಡಿ ಲೈಂಗಿಕ ಕಿರುಕುಳ – ರೌಡಿ ಶೀಟರ್ಸ್‌ ಗ್ಯಾಂಗ್ ಅರೆಸ್ಟ್

  • ಭಾರತಕ್ಕೆ 600 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಪಾಕ್ ಬೋಟ್ ವಶಕ್ಕೆ

    ಭಾರತಕ್ಕೆ 600 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಪಾಕ್ ಬೋಟ್ ವಶಕ್ಕೆ

    ನವದೆಹಲಿ: ಬರೋಬ್ಬರಿ 600 ಕೋಟಿ ರೂ. ಮೌಲ್ಯದ 86 ಕೆಜಿ ಮಾದಕ ದ್ರವ್ಯಗಳನ್ನು ಹೊಂದಿದ್ದ ಶಂಕಿತ ಪಾಕಿಸ್ತಾನಿ ಬೋಟ್‌ (Pakistani Boat), ಭಾರತೀಯ ಕೋಸ್ಟ್ ಗಾರ್ಡ್ (Indian Coast Guard) ಕೈಗೆ ಸಿಕ್ಕಿಬಿದ್ದಿದೆ.

    ಗುಪ್ತಚರ ಮಾಹಿತಿಯ ಮೇರೆಗೆ, ಕೋಸ್ಟ್ ಗಾರ್ಡ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕಾರ್ಯಾಚರಣೆ ನಡೆಸಿ, ಮಾದಕವಸ್ತು ಕಳ್ಳಸಾಗಣೆ ತಡೆಹಿಡಿದಿದೆ. ಇದನ್ನೂ ಓದಿ: ಆಪ್‌ ಮೈತ್ರಿಗೆ ವಿರೋಧ – ದೆಹಲಿಯ ಕಾಂಗ್ರೆಸ್‌ ಅಧ್ಯಕ್ಷ ರಾಜೀನಾಮೆ

    ಡ್ರಗ್ಸ್ ಜೊತೆಗೆ ಪಾಕಿಸ್ತಾನಿ ಹಡಗಿನ 14 ಸಿಬ್ಬಂದಿಯನ್ನು ಸಹ ಬಂಧಿಸಲಾಗಿದೆ. ರಾತ್ರಿ ಸಮಯದಲ್ಲಿ, ಭಾರತೀಯ ಕೋಸ್ಟ್ ಗಾರ್ಡ್ ಸಮುದ್ರದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಾಚರಣೆ ನಡೆಸಿತು. ಪಾಕಿಸ್ತಾನದ ಬೋಟ್‌ನಿಂದ 14 ಸಿಬ್ಬಂದಿಯೊಂದಿಗೆ 600 ಕೋಟಿ ಮೌಲ್ಯದ ಸುಮಾರು 86 ಕೆಜಿ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಕಾರ್ಯಾಚರಣೆ ವೇಳೆ ಹಡಗುಗಳು ಮತ್ತು ವಿಮಾನಗಳನ್ನು ನಿಯೋಜಿಸಲಾಗಿತ್ತು. ಕಾರ್ಯಾಚರಣೆಯ ಪ್ರಮುಖ ಹಡಗುಗಳಲ್ಲಿ ಒಂದಾದ ಕೋಸ್ಟ್‌ ಗಾರ್ಡ್‌ ಹಡಗು ರಾಜರತನ್‌ ಕೂಡ ಇತ್ತು. ಇದರಲ್ಲಿ ಎನ್‌ಸಿಬಿ ಮತ್ತು ಎಟಿಎಸ್‌ ಅಧಿಕಾರಿಗಳು ಇದ್ದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ಮುಸ್ಲಿಮರ ಮತ ಬೇಕು, ಅಭ್ಯರ್ಥಿ ಬೇಡ – ಪ್ರಚಾರದಿಂದ ದೂರ ಸರಿದ ನಸೀಮ್‌ ಖಾನ್‌

    ಶಂಕಿತ ಬೋಟ್‌ನ್ನು ತಡೆದು ಪರಿಶೀಲನೆ ನಡೆಸಿದಾಗ ಅದರಲ್ಲಿ ಮಾದಕವಸ್ತು ಇರುವುದು ದೃಢಪಟ್ಟಿದೆ. ವಶಪಡಿಸಿಕೊಂಡ ಪಾಕಿಸ್ತಾನಿ ಬೋಟನ್ನು ಅದರ ಸಿಬ್ಬಂದಿಯೊಂದಿಗೆ ಹೆಚ್ಚಿನ ತನಿಖೆಗಾಗಿ ಪೋರಬಂದರ್‌ಗೆ ತರಲಾಗುತ್ತಿದೆ.

  • 34 ಧ್ರುವ್‌ ಹೆಲಿಕಾಪ್ಟರ್‌ಗಳ ಖರೀದಿಗೆ ಸಂಪುಟ ಅಸ್ತು – ಭಾರತೀಯ ಸೇನೆಗೆ ಮತ್ತಷ್ಟು ಬಲ

    34 ಧ್ರುವ್‌ ಹೆಲಿಕಾಪ್ಟರ್‌ಗಳ ಖರೀದಿಗೆ ಸಂಪುಟ ಅಸ್ತು – ಭಾರತೀಯ ಸೇನೆಗೆ ಮತ್ತಷ್ಟು ಬಲ

    ನವದೆಹಲಿ: ಇತ್ತೀಚೆಗೆ ಭಾರತೀಯ ಸೇನೆಗೆ ಎಂಹೆಚ್ 60ಆರ್ ಸೀಹಾಕ್ (MH 60R Seahawk) ಹೆಲಿಕಾಪ್ಟರ್‌ ಸೇರ್ಪಡೆಗೊಂಡಿದ್ದು, ಕೊಚ್ಚಿಯ ನೌಕಾ ನೆಲೆಯಲ್ಲಿ ನಿಯೋಜಿಸಲು ಸಿದ್ಧತೆ ನಡೆದಿದೆ. ಈ ಬೆನ್ನಲ್ಲೇ ಮತ್ತೊಂದು ಮಹತ್ವದ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದ್ದು, ಭಾರತೀಯ ಸೇನೆಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ.

    ಭಾರತೀಯ ಸೇನೆ ಮತ್ತು ಭಾರತೀಯ ಕೋಸ್ಟ್ ಗಾರ್ಡ್‌ಗಾಗಿ 34 ಹೊಸ ಸುಧಾರಿತ ಲಘು ಹೆಲಿಕಾಪ್ಟರ್ (ALH) ಧ್ರುವ್ ಹೆಲಿಕಾಪ್ಟರ್‌ಗಳನ್ನು (ALH Dhruv Helicopters) ಖರೀದಿಸುವ ಪ್ರಸ್ತಾವನೆಗೆ ಕ್ಯಾಬಿನೆಟ್‌ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ ಪದಾತಿ ದಳದ ಯುದ್ಧ ವಾಹನಗಳನ್ನು (ಟ್ಯಾಂಕರ್‌ ವಾಹನ) ಮೇಲ್ದರ್ಜೆಗೇರಿಸುವ ಯೋಜನೆಗಳಿಗೂ ಸರ್ಕಾರ ಅನುಮತಿ ನೀಡಿದೆ.

    34 ಹೆಲಿಕಾಪ್ಟರ್‌ಗಳ ಪೈಕಿ ಭಾರತೀಯ ಸೇನೆಯು (Indian Army) 25 ಹೆಲಿಕಾಪ್ಟರ್‌ಗಳನ್ನು ಪಡೆಯಲಿದ್ದು, 9 ಹೆಲಿಕಾಪ್ಟರ್‌ಗಳನ್ನು ಭಾರತೀಯ ಕೋಸ್ಟ್ ಗಾರ್ಡ್‌ಗೆ ನೀಡಲಾಗುತ್ತದೆ. ಈ ಹೆಲಿಕಾಪ್ಟರ್‌ಗಳನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ ಸಂಸ್ಥೆ (HAL) ಸ್ಥಳೀಯವಾಗಿ ಉತ್ಪಾದಿಸಲಿದೆ ಎಂದು ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನೌಕಾಪಡೆಗೆ ಎಂಹೆಚ್ 60ಆರ್ ಸೀಹಾಕ್ ಹೆಲಿಕಾಪ್ಟರ್ ನಿಯೋಜನೆಗೆ ಸಿದ್ಧತೆ – ಭಾರತಕ್ಕೆ ಭೀಮ ಬಲ

    ಭಾರತೀಯ ಕೋಸ್ಟ್‌ಗಾರ್ಡ್‌ನಲ್ಲಿರುವ (Indian Coast Guard) ಸುಧಾರಿತ ಲಘು ಹೆಲಿಕಾಪ್ಟರ್‌ಗಳು ಹಳೆಯದ್ದಾದ ಕಾರಣ ಅವುಗಳನ್ನು ಬದಲಾಯಿಸಲು ಇಲಾಖೆ ಮುಂದಾಗಿದೆ. ಅಲ್ಲದೇ ಬಹುನಿಯೋಜಿತ ಕಾರ್ಯಗಳಿಗೆ ಭಾರತೀಯ ಸೇನೆಗೆ ಹೆಲಿಕಾಪ್ಟರ್‌ಗಳ ಅಗತ್ಯವಿದೆ. ಆದ್ದರಿಂದ ಸರ್ಕಾರ 34 ಹೆಲಿಕಾಪ್ಟರ್‌ಗಳ ಖರೀದಿಗೆ ಒಪ್ಪಿಗೆ ಸೂಚಿಸಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನರೇಂದ್ರ ಮೋದಿ ಮುಂದಿನ 10 ವರ್ಷಗಳ ಕಾಲ ಪ್ರಧಾನಿಯಾಗಿ ಆಡಳಿತ ಮಾಡ್ತಾರೆ: ಅಮಿತ್‌ ಶಾ

    ಈ ಯೋಜನೆಗೆ ಸುಮಾರು 8,000 ಕೋಟಿ ರೂ. ವೆಚ್ಚ ತಗುಲಲಿದೆ. ಸ್ಥಳಿಯವಾಗಿಯೇ ಹೆಲಿಕಾಪ್ಟರ್‌ಗಳನ್ನು ನಿರ್ಮಿಸುವುದರಿಂದ ಸ್ವದೇಶಿ ಉತ್ಪನ್ನಗಳಿಗೆ ಉತ್ತೇಜನವೂ ಸಿಗಲಿದೆ. ಸುಧಾರಿತ ಲಘು ಹೆಲಿಕಾಪ್ಟರ್ (ಧ್ರುವ್) 5.5 ಟನ್‌ಗಳಷ್ಟು ತೂಕ ಹೊಂದಿದೆ. ಸ್ಥಳೀಯವಾಗಿ ಈಗಿನ ಸೇನಾ ಕಾರ್ಯಾಚರಣೆಗಳಿಗೆ ಬಳಸಿಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಸಮುದ್ರದ ಮಧ್ಯದಲ್ಲಿ ಚೀನಾ ಪ್ರಜೆ ರಕ್ಷಿಸಿದ ಭಾರತೀಯ ಕೋಸ್ಟ್‌ ಗಾರ್ಡ್‌ – ಧನ್ಯವಾದ ತಿಳಿಸಿದ ಚೀನಾ

    ಸಮುದ್ರದ ಮಧ್ಯದಲ್ಲಿ ಚೀನಾ ಪ್ರಜೆ ರಕ್ಷಿಸಿದ ಭಾರತೀಯ ಕೋಸ್ಟ್‌ ಗಾರ್ಡ್‌ – ಧನ್ಯವಾದ ತಿಳಿಸಿದ ಚೀನಾ

    ನವದೆಹಲಿ: ಮುಂಬೈನ ಅರೇಬಿಯನ್‌ ಸಮುದ್ರದಲ್ಲಿ ಚೀನಾ ಪ್ರಜೆಯನ್ನು (Chines Citizen) ಭಾರತೀಯ ಕೋಸ್ಟ್‌ ಗಾರ್ಡ್‌ (Indian Coast Guard) ಸಿಬ್ಬಂದಿ ರಕ್ಷಿಸಿದ್ದಾರೆ. ಭಾರತೀಯ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಕಾರ್ಯಕ್ಕೆ ಚೀನಾ ಧನ್ಯವಾದ ತಿಳಿಸಿದೆ.

    ಮುಂಬೈನ ಮಾರಿಟೈಮ್ ಪಾರುಗಾಣಿಕಾ ಸಮನ್ವಯ ಕೇಂದ್ರಕ್ಕೆ ಸದಸ್ಯ ಯಿನ್ ವೈಗ್ಯಾಂಗ್ ಅವರಿಗೆ ಹೃದಯಾಘಾತವಾಗಿದೆ ಮತ್ತು ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ ಎಂದು ಮಾಹಿತಿ ಲಭಿಸಿತ್ತು. ಚೀನಾದಿಂದ ಯುಎಇಗೆ ತೆರಳುತ್ತಿದ್ದ ಹಡಗಿನೊಂದಿಗೆ ತ್ವರಿತವಾಗಿ ಸಂವಹನ ನಡೆಸಲಾಯಿತು. ಇದನ್ನೂ ಓದಿ: ಸಿಮ್‌ ಕಾರ್ಡ್‌ ಡೀಲರ್‌ಗಳ ಪೊಲೀಸ್‌ ಪರಿಶೀಲನೆ ಕಡ್ಡಾಯ

    ತ್ವರಿತ ಸ್ಥಳಾಂತರಿಸುವಿಕೆ ಮತ್ತು ವೈದ್ಯಕೀಯ ನಿರ್ವಹಣೆಗಾಗಿ ಕ್ರಮಕೈಗೊಳ್ಳಲಾಯಿತು. ನಂತರ ತುರ್ತು ಚಿಕಿತ್ಸೆಯನ್ನು ನೀಡಲಾಯಿತು. ರೋಗಿಯನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಹಡಗಿನ ಏಜೆಂಟ್‌ಗೆ ಸ್ಥಳಾಂತರಿಸಲಾಯಿತು.

    ತುರ್ತು ವೈದ್ಯಕೀಯ ನೆರವಿನ ಅಗತ್ಯವಿದ್ದ ಚೀನಾದ ಪ್ರಜೆಯನ್ನು ರಕ್ಷಿಸಿದ ಭಾರತೀಯ ಕೋಸ್ಟ್‌ ಗಾರ್ಡ್‌ ಕಾರ್ಯಕ್ಕೆ ಚೀನಾ ರಾಯಭಾರ ಕಚೇರಿ ಮೆಚ್ಚುಗೆ ವ್ಯಕ್ತಪಡಿಸಿದೆ. ಇದನ್ನೂ ಓದಿ: ಮುಸ್ಲಿಮರು ಮೊದಲು ಹಿಂದುಗಳಾಗಿದ್ದರು, ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು: ಗುಲಾಂ ನಬಿ ಆಜಾದ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೀರಿನ ಆಳದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ಭಾರತೀಯ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ

    ನೀರಿನ ಆಳದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ಭಾರತೀಯ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ

    ಚೆನ್ನೈ: ದೇಶವು 77ನೇ ಸ್ವಾತಂತ್ರ್ಯ ದಿನಾಚರಣೆಯ (Independence Day 2023) ಸಡಗರದಲ್ಲಿದೆ. ಭಾರತೀಯ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ನೀರಿನೊಳಗೆ ರಾಷ್ಟ್ರಧ್ವಜಾರೋಹಣ ಮಾಡಿ ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ.

    ತಮಿಳುನಾಡಿನ ರಾಮೇಶ್ವರಂನಲ್ಲಿ ವಿಶೇಷ ಗೌರವ ಸಲ್ಲಿಸಲಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ (Indian Coast Guard), ನೀರಿನ ಒಳಗೆ ರಾಷ್ಟ್ರಧ್ವಜವನ್ನು ಹಾರಿಸುವ ದೃಶ್ಯದ ವೀಡಿಯೋವನ್ನು ಹಂಚಿಕೊಂಡಿದೆ. ಇದಕ್ಕೆ ಹಲವರು ಅಚ್ಚರಿ ವ್ಯಕ್ತಪಡಿಸಿದ್ದರೆ, ಮತ್ತೊಂದಷ್ಟು ಮಂದಿ ಪ್ರತಿಯಾಗಿ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ನಾವು ತೆಗೆದುಕೊಳ್ಳುವ ನಿರ್ಧಾರ ಮುಂದಿನ 1,000 ವರ್ಷ ಭಾರತಕ್ಕೆ ದಿಕ್ಕು ತೋರಲಿದೆ: ಮೋದಿ

    ಈ ವೀಡಿಯೋ ಪೋಸ್ಟ್ ಮಾಡಿದ ಕೇವಲ ಒಂದು ಗಂಟೆಯಲ್ಲಿ ಸುಮಾರು 37,000 ವೀಕ್ಷಿಸಿದ್ದಾರೆ. 2,700 ಕ್ಕೂ ಹೆಚ್ಚು ಲೈಕ್‌ಗಳು ಬಂದಿದ್ದರು. ಅನೇಕರು ವೀಡಿಯೋಗೆ ಬಗೆಬಗೆಯ ಕಾಮೆಂಟ್‌ ಕೂಡ ಮಾಡಿದ್ದಾರೆ.

    ‘ಇದು ನಮಗೆ ಹೆಮ್ಮೆಯ ಕ್ಷಣ’.. ‘ಜೈ ಹಿಂದ್’..‌ ‘ನಮ್ಮ ಸೇನೆ ಮತ್ತು ರಾಷ್ಟ್ರದ ಬಗೆಗೆ ಹೆಮ್ಮೆ ಇದೆ’.. ‘ಭಾರತ್‌ ಮತಾ ಕಿ ಜೈ’ ಹೀಗೆ ಹಲವಾರು ಕಾಮೆಂಟ್‌ಗಳು ಬಂದಿವೆ.

    ದೆಹಲಿಯ ಕೆಂಪು ಕೋಟೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಧ್ವಜಾರೋಹಣ ನೆರವೇರಿಸಿದರು. ದೇಶದ ಸಮಸ್ತ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿ, ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಮುಂದಿನ ವರ್ಷ ಸಿಗೋಣ; ಸ್ವಾತಂತ್ರ‍್ಯ ದಿನದ ಭಾಷಣದಲ್ಲಿ ಲೋಕಸಭೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]