Tag: Indian community

  • ಸಂಬಂಧವನ್ನು ಮರುಸ್ಥಾಪಿಸುತ್ತೇವೆ – NRIಗಳಿಗೆ ಕೆನಡಾ ವಿರೋಧ ಪಕ್ಷ ಭರವಸೆ

    ಸಂಬಂಧವನ್ನು ಮರುಸ್ಥಾಪಿಸುತ್ತೇವೆ – NRIಗಳಿಗೆ ಕೆನಡಾ ವಿರೋಧ ಪಕ್ಷ ಭರವಸೆ

    ಒಟ್ಟಾವಾ: ನಾನು ಕೆನಡಾದ (Canada) ಮುಂದಿನ ಪ್ರಧಾನಿಯಾದ್ರೆ, ಭಾರತದ ಜೊತೆಗಿನ ವೃತ್ತಿಪರ ಸಂಬಂಧವನ್ನು (Professional Relationship) ಸ್ಥಾಪಿಸುವುದಾಗಿ ಕೆನಡಾದ ವಿರೋಧ ಪಕ್ಷದ ನಾಯಕ ಪಿಯರೆ ಪೊಯ್ಲಿವ್ರೆ (Pierre Poilievre) ಅವರು ಕೆನಡಾದಲ್ಲಿರುವ ಭಾರತೀಯ ಸಮುದಾಯಕ್ಕೆ ಭರವಸೆ ನೀಡಿದ್ದಾರೆ.

    ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಹತ್ಯೆ ವಿಚಾರದಲ್ಲಿ ಉಭಯ ದೇಶಗಳ ನಡುವೆ ರಾಜತಾಂತಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಳ್ಳುತ್ತಿದೆ. ಭಾರತದಿಂದ ತನ್ನ 41 ರಾಜತಾಂತ್ರಿಕರನ್ನು ಹಿಂದಕ್ಕೆ ಕರೆಸಿಕೊಂಡಿರುವ ಕೆನಡಾ, ಅದರ ಬೆನ್ನಲ್ಲೇ ಭಾರತಕ್ಕೆ ಪ್ರಯಾಣಿಸುವ ತನ್ನ ಪ್ರಜೆಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಭಾರತದಲ್ಲಿನ ತನ್ನ ಬಹುತೇಕ ಎಂಬೆಸ್ಸಿ ಹಾಗೂ ಕಾನ್ಸುಲೇಟ್‌ಗಳನ್ನು ಮುಚ್ಚಿರುವ ಕೆನಡಾ, ಅಧಿಕ ಮಟ್ಟದಲ್ಲಿ ಜಾಗರೂಕತೆ ವಹಿಸುವಂತೆ ತನ್ನ ನಾಗರಿಕರಿಗೆ ಸಲಹೆ ಕೊಟ್ಟಿದೆ.

    ಈ ಹಿನ್ನೆಲೆಯಲ್ಲಿ ಕನ್ಸರ್ವೇಟಿವ್ ಪಕ್ಷದ ನಾಯಕ ಪೊಯ್ಲಿವ್ರೆ, ಕೆನಡಾದಲ್ಲಿ ನೆಲೆಸಿರುವ ಭಾರತೀಯ ರಾಜತಾಂತ್ರಿಕರಿಗೆ ತೋರುತ್ತಿರುವ ಆಕ್ರಮಣಶೀಲತೆಯ ನಡೆಯನ್ನ ಖಂಡಿಸಿದ್ದಾರೆ. ಇದನ್ನೂ ಓದಿ: ನಿಜ್ಜರ್‌ನಿಂದ ಕೆನಡಾದಲ್ಲಿ ಶಸ್ತ್ರಾಸ್ತ್ರ ತರಬೇತಿ, ಭಾರತದಲ್ಲಿ ದಾಳಿಗೆ ಧನ ಸಹಾಯ: ಗುಪ್ತಚರ ದಾಖಲೆ

    ಈ ಕುರಿತು ರೇಡಿಯೋ ಸಂದರ್ಶನವೊಂದರಲ್ಲಿ ಮಾತನಾಡಿದ ಪೊಯ್ಲಿವ್ರೆ, ಕೆನಡಾದ ಮುಂದಿನ ಪ್ರಧಾನಿಯಾದ್ರೆ, ಭಾರತದ ಜೊತೆಗಿನ ವೃತ್ತಿಪರ ಹಾಗೂ ರಾಜತಾಂತ್ರಿಕ ಸಂಬಂಧವನ್ನು ಮರುಸ್ಥಾಪಿಸುತ್ತೇನೆ. ನಮಗೆ ಭಾರತ ಸರ್ಕಾರದ ಜೊತೆಗಿನ ವೃತ್ತಿಪರ ಸಂಬಂಧದ ಅಗತ್ಯವಿದೆ. ಏಕೆಂದರೆ ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶ ಭಾರತವಾಗಿದೆ. ಇದು ನಮ್ಮ ಅಭಿಪ್ರಾಯ-ಭಿನ್ನಾಭಿಪ್ರಾಯಗಳನ್ನ ಹೊಂದಲು ಸಹಕಾರಿಯಾಗಿದೆ. ಆದ್ರೆ ನಾವು ವೃತ್ತಿಪರ ಸಂಬಂಧವನ್ನು ಹೊಂದಿರಲೇಬೇಕು. ನಾನು ಪ್ರಧಾನಿಯಾದ್ರೆ ಖಂಡಿತವಾಗಿಯೂ ಅದನ್ನು ಪುನರ್‌ಸ್ಥಾಪಿಸುತ್ತೇನೆ ಎಂದು ಹೇಳಿದ್ದಾರೆ.

    ಇನ್ನೂ ಭಾರತದಿಂದ ಕೆನಡಾದ 41 ರಾಜತಾಂತ್ರಿಕರನ್ನು ಹಿಂದಕ್ಕೆ ಕರೆಸಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿ, ಪ್ರಶಾನಿ ಜಸ್ಟಿನ್ ಟ್ರುಡೊ ಕೆನಡಿಯರೇ ಪರಸ್ಪರ ವಿರುದ್ಧ ತಿರುಗಿಬೀಳುವಂತೆ ಮಾಡುತ್ತಿದ್ದಾರೆ. ಅಸಮರ್ಥರಾಗಿದ್ದು, ವಿದೇಶದಲ್ಲಿಯೂ ನಮ್ಮ ಸಂಬಂಧಗಳ ಬಗ್ಗೆ ಭಿನ್ನಾಭಿಪ್ರಾಯ ಉಂಟಾಗುವಂತೆ ಮಾಡಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಭಾರತವನ್ನ ಪ್ರಚೋದಿಸುವುದಿಲ್ಲ; ತಣ್ಣಗಾದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ

    ಜೊತೆಗೆ ನಿನ್ನೆಯಷ್ಟೇ ಒಟ್ಟಾವಾ, ಟೊರೆಂಟೊ ಮತ್ತು ವ್ಯಾಂಕೋವರ್‌ನಲ್ಲಿ, ಭಾರತದ ಚಾರಿಟಿಗಳಿಗೆ ವಿರುದ್ಧವಾಗಿ ನಡೆಸಿದ ಖಲಿಸ್ತಾನ್‌ ರ‍್ಯಾಲಿಯನ್ನ ಖಂಡಿಸಿದ್ದಾರೆ. ಬ್ರಿಟಿಷ್ ಕೊಲಂಬಿಯಾದ ಅಬಾಟ್ಸ್‌ ಫೋರ್ಡ್ ಪಟ್ಟಣದಲ್ಲಿರುವ ವೈಷ್ಣೋದೇವಿ ಹಿಂದೂ ದೇವಾಲಯದ ವೇಲೆ ಹಿಂದೂ ಹಾಗೂ ಭಾರತ ವಿರೋಧಿ ಪೋಸ್ಟರ್‌ಗಳಿಂದ ಅಪವಿತ್ರಗೊಳಿಸಿರುವುದಕ್ಕೂ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅ. 10ರೊಳಗೆ 40 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಿ- ಕೆನಡಾಗೆ ಭಾರತ ಗಡುವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸಿ ಭಾರತ ವಿಶ್ವಕ್ಕೇ ತನ್ನ ಸಾಮರ್ಥ್ಯ ತೋರಿಸಿದೆ- ಮೋದಿ

    ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸಿ ಭಾರತ ವಿಶ್ವಕ್ಕೇ ತನ್ನ ಸಾಮರ್ಥ್ಯ ತೋರಿಸಿದೆ- ಮೋದಿ

    – ಗ್ರೀಸ್‌ನಲ್ಲಿ ಚಂದ್ರಯಾನ ಗುಣಗಾನ, ಮೋದಿಗೆ ಗ್ರೀಸ್‌ ಅತ್ತುನ್ನತ ನಾಗರಿಕ ಗೌರವ

    ಅಥೆನ್ಸ್:‌ ಭಾರತ ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಇಡೀ ವಿಶ್ವಕ್ಕೇ ತನ್ನ ಸಾಮರ್ಥ್ಯವನ್ನ ತೋರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಚಂದ್ರಯಾನ ಗುಣಗಾನ ಮಾಡಿದ್ದಾರೆ.

    ಸುಮಾರು 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಗ್ರೀಸ್‌ (Greece) ದೇಶಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದು, ಪ್ರಧಾನಿ ಮೋದಿ ಅವರನ್ನ ಗ್ರೀಸ್‌ ರಾಷ್ಟ್ರಪತಿ ಹಾಗೂ ಪ್ರಧಾನಿ ಬರಮಾಡಿಕೊಂಡರು. ಭಾರತೀಯ ಸಮುದಾಯ ಸಾಂಪ್ರದಾಯಿಕವಾಗಿ ಮೋದಿ ಅವರನ್ನು ಸ್ವಾಗತಿಸಲಾಯಿತು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗ್ರೀಸ್‌ ನಾಗರಿಕ ಗೌರವ ‘ದಿ ಗ್ರ್ಯಾಂಡ್‌ ಕ್ರಾಸ್‌ ಆಫ್‌ ದಿ ಆರ್ಡರ್‌ ಆಫ್‌ ಹಾನರ್‌’ ನೀಡಿ ಗೌರವಿಸಲಾಯಿತು. ಅಧ್ಯಕ್ಷೆ ಕ್ಯಾಥರೀನಾ ಸಕೆಲ್ಲರೊಪೌಲೊ ಅವರು ಮೋದಿಗೆ ಅವರಿಗೆ ಗ್ರೀಸ್‌ ನಾಗರಿಕ ಗೌರವ ನೀಡಿ ಸನ್ಮಾನಿಸಿದರು.

    ನಂತರ ಗ್ರೀಸ್‌ನ ರಾಜಧಾನಿ ಅಥೆನ್ಸ್‌ನಲ್ಲಿ (Athens) ಭಾರತೀಯ ಸಮುದಾಯದವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಭಾರತದ ಚಂದ್ರಯಾನ ಸಾಧನೆಯನ್ನ ಹಾಡಿ ಹೊಗಳಿದರು. ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಇಡೀ ಜಗತ್ತಿಗೆ ಭಾರತ ತನ್ನ ಸಾಮರ್ಥ್ಯ ತೋರಿಸಿದೆ ಎಂದು ಶ್ಲಾಘಿಸಿದರು.

    ಈ ತಿಂಗಳು ಶಿವನನ್ನು ಪೂಜಿಸುವ ಪರ್ವಕಾಲ, ಶ್ರಾವಣ ಮಾಸದಲ್ಲಿ ದೇಶವು ಹೊಸ ಸಾಧನೆ ಮಾಡಿದೆ. ಚಂದ್ರನ ಕತ್ತಲಿನ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ. ತಿರಂಗವನ್ನು ಚಂದ್ರನ ಮೇಲೆ ಹಾರಿಸುವ ಮೂಲಕ ಜಗತ್ತಿಗೆ ನಮ್ಮ ಸಾಮರ್ಥ್ಯ ತೋರಿಸಿದ್ದೇವೆ. ಜಗತ್ತಿನ ಮೂಲೆಮೂಲೆಗಳಿಂದ ಅಭಿನಂದನೆಯ ಸಂದೇಶಗಳು ಹರಿದು ಬರುತ್ತಿವೆ. ಸಾಧನೆಯು ಇಷ್ಟು ದೊಡ್ಡದಾಗಿರುವಾಗ ಸಂಭ್ರಮವೂ ಸಹ ಮುಂದುವರಿಯುತ್ತದೆ. ಚಂದ್ರಯಾನ-3ರ ಯಶಸ್ಸಿಗೆ ನಾನು ಮತ್ತೊಮ್ಮೆ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮ ಮುಖದ ಭಾವನೆಗಳೇ ಹೇಳುತ್ತಿವೆ, ನೀವು ಜಗತ್ತಿನ ಯಾವುದೇ ಜಾಗದಲ್ಲಿದ್ದರೂ ಹೃದಯದಲ್ಲಿ ಭಾರತವು ಮಿಡಿಯುತ್ತಿರುತ್ತದೆ ಎಂದು ಹೊಗಳಿದರು.

    ಮುಂದುವರಿದು, ವಿಶ್ವದ ದೊಡ್ಡ ಕಂಪನಿಗಳು ಭಾರತದಲ್ಲಿ ಹೂಡಿಕೆ ಮಾಡಲು ಮುಂಚೂಣಿಯಲ್ಲಿವೆ. ಭಾರತದ ಜಗತ್ತಿನ 5ನೇ ಅತಿ ದೊಡ್ಡ ಆರ್ಥಿಕ ಶಕ್ತಿಯನ್ನು ಹೊಂದಿರುವ ದೇಶವಾಗಿದ್ದು, ತಜ್ಞರ ಪ್ರಕಾರ ದೇಶವು 3ನೇ ಸ್ಥಾನಕ್ಕೆ ಏರಲಿದೆ. ಆರ್ಥಿಕತೆ ಬೆಳೆಯುತ್ತಿದ್ದಂತೆ ದೇಶವು ಬಡತನದಿಂದ ವೇಗವಾಗಿ ಹೊರಬರುತ್ತದೆ. ಭಾರತದಲ್ಲಿ 5 ವರ್ಷಗಳಲ್ಲಿ 13.5 ಕೋಟಿ ಭಾರತೀಯರು ಬಡತನ ಮಟ್ಟದಿಂದ ಹೊರಬಂದಿದ್ದಾರೆ ಎಂದು ಹೇಳಿದರಲ್ಲದೇ, ಭಾರತ ತಾಂತ್ರಿಕವಾಗಿಯೂ ಬೆಳೆಯುತ್ತಿದ್ದ ಸುಮಾರು 700 ಜಿಲ್ಲೆಗಳಲ್ಲಿ ಈಗಾಗಲೇ 5 ಜಿ ತಂತ್ರಜ್ಞಾನವನ್ನು ಹೊಂದಿದೆ ಎಂದು ಬೀಗಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 18ರ ಯುವತಿ ಆರ್ಯ ವಾಲ್ವೇಕರ್‌ಗೆ ಮಿಸ್ ಇಂಡಿಯಾ USA-2022 ಕಿರೀಟ; ಈಕೆ ಯಾರು ಗೊತ್ತಾ?

    18ರ ಯುವತಿ ಆರ್ಯ ವಾಲ್ವೇಕರ್‌ಗೆ ಮಿಸ್ ಇಂಡಿಯಾ USA-2022 ಕಿರೀಟ; ಈಕೆ ಯಾರು ಗೊತ್ತಾ?

    ವಾಷಿಂಗ್ಟನ್: ಅಮೆರಿಕದ ನ್ಯೂಜೆರ್ಸಿಯಲ್ಲಿ ನಡೆದ 40ನೇ ವಾರ್ಷಿಕೋತ್ಸವ ಸ್ಪರ್ಧೆಯಲ್ಲಿ ವರ್ಜೀನಿಯಾದ 18ರ ಯುವತಿ (ಭಾರತೀಯ ಅಮೆರಿಕನ್) ಆರ್ಯ ವಾಲ್ವೇಕರ್ `ಮಿಸ್ ಇಂಡಿಯಾ USA-2022′ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

    ಯುಎಸ್‌ನ 30 ರಾಜ್ಯಗಳಿಂದ 74 ಸ್ಪರ್ಧಿಗಳು ಮಿಸ್ ಇಂಡಿಯಾ ಯುಎಸ್‌ಎ, ಮಿಸೆಸ್ ಇಂಡಿಯಾ ಯುಎಸ್‌ಎ ಹಾಗೂ ಮಿಸ್ ಟೀನ್ ಇಂಡಿಯಾ ಯುಎಸ್‌ಎ ವಿಭಾಗಗಳಲ್ಲಿ ಭಾಗವಹಿಸಿದ್ದರು. ವಾಷಿಂಗ್ಟನ್‌ನ ಅಕ್ಷಿ ಜೈನ್ ಮಿಸೆಸ್ ಇಂಡಿಯಾ ಯುಎಸ್‌ಎ, ನ್ಯೂಯಾರ್ಕ್ನ ತನ್ವಿ ಗ್ರೂವರ್ ಮಿಸ್ ಟೀನ್ ನ್ಯೂಯಾರ್ಕ್ ಕಿರೀಟ ಧರಿಸಿದರೆ ಭಾರತೀಯ ಅಮೆರಿಕನ್ನರಾದ ವಾಲ್ಟೇಕರ್ ಮಿಸ್ ಇಂಡಿಯಾ ಕಿರೀಟ ಧರಿಸಿದ್ದಾರೆ. ಇದನ್ನೂ ಓದಿ: 9 ವರ್ಷಗಳ ಹಿಂದೆ ಕಿಡ್ನ್ಯಾಪ್‌ ಆಗಿದ್ದ ಬಾಲಕಿ ಪೋಸ್ಟರ್ ಸಹಾಯದಿಂದ ಹೆತ್ತವರ ಮಡಿಲಿಗೆ

    ಈ ವೇಳೆ ತನ್ನ ಖುಷಿಯನ್ನು ಹಂಚಿಕೊಂಡಿರುವ ವಾಲ್ಟೇಕರ್, `ನನ್ನನ್ನು ಬೆಳ್ಳಿ ತೆರೆಯಲ್ಲಿ ನೋಡುವುದು, ಚಲನಚಿತ್ರ ಹಾಗೂ ಟಿವಿಯಲ್ಲಿ ಕೆಲಸ ಮಾಡುವುದು ನನ್ನ ಕನಸಾಗಿತ್ತು’ ಎಂದು ಅವರು ಹೇಳಿಕೊಂಡಿದ್ದಾರೆ. ಈ ಕುರಿತ ಫೋಟೋಗಳನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

    ಪ್ರಪಂಚದಾದ್ಯಂತ ಇರುವ ಭಾರತೀಯ ಸಮುದಾಯಕ್ಕೆ, ಅವರು ನೀಡಿದ ಸಹಕಾರಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: CWG 2022: ಟ್ರಿಪಲ್ ಜಂಪ್‍ನಲ್ಲಿ ಡಬಲ್ ಧಮಾಕ – ಎಲ್ದೋಸ್ ಪೌಲ್‍ಗೆ ಚಿನ್ನ, ಅಬ್ದುಲ್ಲಾ ಅಬೂಬಕರ್‌ಗೆ ಕಂಚು

    ಯಾರಿದು ವಾಲ್ಟೇಕರ್?
    ವರ್ಜೀನಿಯಾದ ಬ್ರಿಯಾರ್ ವುಡ್ಸ್ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿನಿ ಆರ್ಯ ವಾಲ್ವೇಕರ್ 18 ವರ್ಷದ ಯುವತಿ. ಈಕೆ ವಿವಿಧ ಜಾಗೃತಿ ಅಭಿಯಾನಗಳನ್ನ ಮಾಡಿದ್ದು, ಟಿಇಡಿಎಕ್ಸ್ ಕಾರ್ಯಕ್ರಮಗಳಲ್ಲಿ ಆರೋಗ್ಯಕರ ಮರುಚಿಂತನೆಯ ಉಪನ್ಯಾಸ ನೀಡಿದ್ದಾರೆ. ಯುಫೋರಿಯಾ ಡ್ಯಾನ್ಸ್ ಸ್ಟುಡಿಯೋದ ಸಂಸ್ಥಾಪಕರಾಗಿರುವ ವಾಲ್ವೇಕರ್, ಸ್ಥಳೀಯ ಮಕ್ಕಳಿಗೆ ಕಡಿಮೆ ಶುಲ್ಕದಲ್ಲೇ ನೃತ್ಯ ಹೇಳಿಕೊಡುತ್ತಿದ್ದಾರೆ.

    18 ವರ್ಷದ ವಾಲ್ವೇಕರ್ ಶಾಲೆ ಮತ್ತು ಸಮುದಾಯ ರಂಗಭೂಮಿ ಚಟುವಟಿಕೆಗಳಲ್ಲೂ ಭಾಗವಹಿಸಿದ್ದಾರೆ. ಮಕ್ಕಳ ನಾಟಕಗಳಿಗೆ ನಿರ್ದೇಶಕರಾಗಿ ಸ್ವಯಂ ಸೇವಕರಾಗಿ ಕೆಲಸ ಮಾಡಿದ್ದಾರೆ. ಅಡುಗೆ ಮಾಡುವುದು, ಚರ್ಚೆ ಮಾಡುವುದು ಇವರ ಹವ್ಯಾಸವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]